1. ಯೆಹೋವನು ಹೀಗೆನ್ನುತ್ತಾನೆ: [QBR] “ನಾನು ಭಯಂಕರವಾದ ಬಿರುಗಾಳಿ ಬೀಸುವಂತೆ ಮಾಡುವೆನು. [QBR2] ಅದು ಬಾಬಿಲೋನಿನ ಮೇಲೂ ಬಾಬಿಲೋನಿನ ಜನರ ಮೇಲೂ ಬೀಸುವಂತೆ ಮಾಡುವೆನು. [QBR]
2. ಬಾಬಿಲೋನನ್ನು ತೂರುವದಕ್ಕಾಗಿ ನಾನು ವಿದೇಶಿಯರನ್ನು ಕಳಿಸುವೆನು. [QBR2] ಅವರು ಬಾಬಿಲೋನನ್ನು ತೂರುವರು. [QBR] ಆ ಜನರು ಬಾಬಿಲೋನನ್ನು ಬರಿದುಗೊಳಿಸುವರು. [QBR2] ಸೈನಿಕರು ನಗರವನ್ನು ಮುತ್ತುವರು; ಅಪಾರ ವಿನಾಶ ಸಂಭವಿಸುವದು. [QBR]
3. ಬಾಬಿಲೋನಿನ ಸೈನಿಕರು ತಮ್ಮ ಬಿಲ್ಲುಬಾಣಗಳನ್ನು ಉಪಯೋಗಿಸಲಾರರು. [QBR2] ಅವರು ತಮ್ಮ ಕವಚಗಳನ್ನು ಧರಿಸಲಾರರು. [QBR] ಬಾಬಿಲೋನಿನ ಯೋಧರಿಗೆ ಮರುಕ ತೋರಿಸಬೇಡಿ. [QBR2] ಅದರ ಸೈನ್ಯವನ್ನು ಸಂಪೂರ್ಣವಾಗಿ ನಾಶಮಾಡಿರಿ. [QBR]
4. ಕಸ್ದೀಯರ ಪ್ರದೇಶದಲ್ಲಿಯೇ ಬಾಬಿಲೋನಿನ ಸೈನಿಕರನ್ನು ಕೊಲ್ಲಲಾಗುವುದು. [QBR2] ಬಾಬಿಲೋನಿನ ಬೀದಿಗಳಲ್ಲಿಯೇ ಅವರು ಗಾಯಗೊಳ್ಳುವರು.”
5. ಸರ್ವಶಕ್ತನಾದ ಯೆಹೋವನು ಇಸ್ರೇಲನ್ನು ಮತ್ತು ಯೆಹೂದವನ್ನು ವಿಧವೆಯಾಗಿ ಮಾಡಿಲ್ಲ. [QBR2] ಆತನು ಅವರ ಕೈಬಿಟ್ಟಿಲ್ಲ.ಅವರು ಇಸ್ರೇಲಿನ ಪರಿಶುದ್ಧನನ್ನು ತೊರೆದು ಅಪರಾಧ ಮಾಡಿದರು. [QBR] ಅವರು ಆತನನ್ನು ತ್ಯಜಿಸಿದರು. [QBR2] ಆದರೆ ಆತನು ಅವರನ್ನು ತ್ಯಜಿಸಲಿಲ್ಲ.
6. ಬಾಬಿಲೋನಿನಿಂದ ದೂರ ಓಡಿಹೋಗಿರಿ. [QBR2] ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವುದಕ್ಕಾಗಿ ಓಡಿಹೋಗಿರಿ. [QBR2] ಇಲ್ಲವಾದರೆ ಬಾಬಿಲೋನಿನ ಪಾಪದಿಂದ ನೀವೂ ಮರಣಕ್ಕೆ ಗುರಿಯಾಗುವಿರಿ. [QBR] ಅವರು ಮಾಡಿದ ದುಷ್ಕೃತ್ಯಗಳಿಗಾಗಿ ದೇವರು ಬಾಬಿಲೋನಿನ ಜನರನ್ನು ಶಿಕ್ಷಿಸುವ ಕಾಲವಿದು. [QBR2] ಅದು ತಕ್ಕ ಶಿಕ್ಷೆಯನ್ನು ಪಡೆಯುವುದು. [QBR]
7. ಬಾಬಿಲೋನ್ ಯೆಹೋವನ ಕೈಯಲ್ಲಿನ ಬಂಗಾರದ ಪಾತ್ರೆಯಂತಿತ್ತು. [QBR2] ಲೋಕವೆಲ್ಲವೂ ಮದ್ಯಪಾನ ಮಾಡುವಂತೆ ಬಾಬಿಲೋನ್ ಮಾಡಿತು. [QBR] ಜನಾಂಗಗಳು ಬಾಬಿಲೋನಿನ ದ್ರಾಕ್ಷಾರಸವನ್ನು [QBR2] ಕುಡಿದು ಹುಚ್ಚಾದವು. [QBR]
8. ಬಾಬಿಲೋನ್ ಬೀಳುವುದು; ಬೇಗನೆ ಮುರಿದುಹೋಗುವುದು. [QBR2] ಅದರ ಸಲುವಾಗಿ ಗೋಳಾಡಿರಿ. [QBR] ಅದರ ನೋವಿಗಾಗಿ ಔಷಧಿಯನ್ನು ತೆಗೆದುಕೊಂಡು ಬನ್ನಿ, [QBR2] ಒಂದುವೇಳೆ ಅದು ಗುಣಹೊಂದಬಹುದು.
9. ನಾವು ಬಾಬಿಲೋನನ್ನು ವಾಸಿಮಾಡುವ ಪ್ರಯತ್ನ ಮಾಡಿದೆವು. [QBR2] ಆದರೆ ಅದನ್ನು ವಾಸಿಮಾಡಲು ಆಗುವದಿಲ್ಲ. [QBR] ಆದ್ದರಿಂದ ಅದನ್ನು ಬಿಟ್ಟುಬಿಡೋಣ. [QBR2] ನಾವು ನಮ್ಮನಮ್ಮ ದೇಶಗಳಿಗೆ ಹೋಗೋಣ. [QBR] ಪರಲೋಕದ ದೇವರು ಬಾಬಿಲೋನಿಗೆ ವಿಧಿಸಬೇಕಾದ ಶಿಕ್ಷೆಯನ್ನು ನಿರ್ಧರಿಸುವನು. [QBR2] ಬಾಬಿಲೋನಿಗೆ ಏನಾಗಬೇಕೆಂಬುದನ್ನು ಆತನು ನಿರ್ಧರಿಸುವನು. [QBR]
10. ನಮ್ಮ ಬಗ್ಗೆಯೂ ಯೆಹೋವನು ನಿರ್ಧಾರ ಕೈಗೊಂಡಿದ್ದಾನೆ. [QBR2] ಬನ್ನಿ, ಅದರ ಬಗ್ಗೆ ನಾವು ಚೀಯೋನಿನಲ್ಲಿ ಹೇಳೋಣ. [QBR] ನಮ್ಮ ದೇವರಾದ ಯೆಹೋವನು ಮಾಡಿದ್ದನ್ನು ನಾವು ಹೇಳೋಣ.
11. ನಿಮ್ಮ ಬಾಣಗಳನ್ನು ಮಸೆಯಿರಿ. [QBR2] ನಿಮ್ಮ ಕವಚಗಳನ್ನು ಧರಿಸಿರಿ. [QBR] ಯೆಹೋವನು ಮೇದ್ಯರ ರಾಜರನ್ನು ಪ್ರಚೋದಿಸಿದ್ದಾನೆ. [QBR2] ಬಾಬಿಲೋನನ್ನು ನಾಶಪಡಿಸಬೇಕೆಂಬ ಉದ್ದೇಶದಿಂದ ಆತನು ಅವರನ್ನು ಪ್ರಚೋದಿಸಿದ್ದಾನೆ. [QBR2] ಯೆಹೋವನು ಬಾಬಿಲೋನಿನ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಾನೆ. [QBR] ಬಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿದ್ದ ಯೆಹೋವನ ಪವಿತ್ರ ಆಲಯವನ್ನು ನಾಶಮಾಡಿತು. [QBR2] ಆದ್ದರಿಂದ ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುವನು. [QBR]
12. ಬಾಬಿಲೋನಿನ ಕೋಟೆಗೋಡೆಯ ವಿರುದ್ಧ ಧ್ವಜವನ್ನು ಎತ್ತಿ ಹಾರಿಸಿರಿ. [QBR2] ಹೆಚ್ಚಿನ ಸಂಖ್ಯೆಯಲ್ಲಿ ಕಾವಲುಗಾರರನ್ನು ಕರೆದುತನ್ನಿರಿ. [QBR] ಯೋಧರನ್ನು ಅವರವರ ಸ್ಥಾನಗಳಲ್ಲಿ ನಿಲ್ಲಿಸಿರಿ. [QBR2] ಗುಪ್ತವಾಗಿ ಧಾಳಿ ಮಾಡುವುದಕ್ಕೆ ಸಿದ್ಧರಾಗಿರಿ. [QBR] ಯೆಹೋವನು ತನ್ನ ಯೋಜನೆಗಳಂತೆ ಕಾರ್ಯ ನೆರವೇರಿಸುವನು. [QBR2] ಯೆಹೋವನು ಬಾಬಿಲೋನಿನ ಜನರ ವಿರುದ್ಧ ಹೇಳಿರುವಂತೆಯೇ ಮಾಡುವನು. [QBR]
13. ಬಾಬಿಲೋನೇ, ನೀನು ಸಮೃದ್ಧವಾದ ನೀರಿನ ಹತ್ತಿರ ಇರುವೆ. [QBR2] ನೀನು ಸಂಪತ್ತಿನಿಂದ ಸಮೃದ್ಧವಾಗಿರುವೆ. [QBR] ಆದರೆ ಒಂದು ಜನಾಂಗವಾಗಿ ನೀನು ಬಹಳ ಕಾಲ ಮುಂದುವರೆಯಲಾರೆ. [QBR2] ನಿನ್ನ ವಿನಾಶ ಕಾಲ ಸಮೀಪಿಸಿದೆ. [QBR]
14. ಸರ್ವಶಕ್ತನಾದ ಯೆಹೋವನು ತನ್ನ ಮೇಲೆ ಆಣೆ ಇಟ್ಟುಕೊಂಡು ಹೀಗೆ ಹೇಳಿದ್ದಾನೆ: [QBR] “ಬಾಬಿಲೋನೇ, ನಾನು ಖಂಡಿತವಾಗಿ ನಿನ್ನನ್ನು ವೈರಿ ಸೈನಿಕರಿಂದ ತುಂಬಿಸಿಬಿಡುವೆನು. ಅವರು ಮಿಡತೆಗಳ ಸಮೂಹದಂತೆ ವ್ಯಾಪಿಸುವರು. [QBR2] ಆ ಸೈನಿಕರು ನಿನ್ನ ವಿರುದ್ಧ ಯುದ್ಧದಲ್ಲಿ ಜಯಗಳಿಸುವರು. [QBR2] ಅವರು ನಿನ್ನ ಮೇಲೆ ನಿಂತುಕೊಂಡು ಜಯಘೋಷ ಮಾಡುವರು.”
15. ಯೆಹೋವನು ತನ್ನ ಅಪಾರ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿದನು. [QBR2] ತನ್ನ ಜ್ಞಾನದಿಂದ ಈ ಲೋಕವನ್ನು ನಿರ್ಮಿಸಿದನು. [QBR2] ತನ್ನ ವಿವೇಕದಿಂದ ಆಕಾಶವನ್ನು ಹರಡಿದನು. [QBR]
16. ಆತನು ಗರ್ಜಿಸಿದಾಗ ಸಮುದ್ರದ ನೀರು ಭೋರ್ಗರೆಯುತ್ತದೆ. [QBR2] ಆತನು ಇಡೀ ಭೂಮಂಡಲದಿಂದ ಮೋಡಗಳು ಮೇಲೆ ಹೋಗುವಂತೆ ಮಾಡುತ್ತಾನೆ. [QBR] ಆತನು ಮಳೆಯ ಜೊತೆ ಮಿಂಚನ್ನು ಕಳುಹಿಸುತ್ತಾನೆ. [QBR2] ತನ್ನ ಭಂಡಾರದಿಂದ ಗಾಳಿಯನ್ನು ಹೊರಗೆ ಬಿಡುತ್ತಾನೆ. [QBR]
17. ಆದರೆ ಜನರು ಬುದ್ಧಿಹೀನರಾಗಿ [QBR2] ದೇವರ ಕಾರ್ಯವನ್ನು ತಿಳಿಯದವರಾಗಿದ್ದಾರೆ. [QBR] ಕುಶಲಕೆಲಸಗಾರರು ಸುಳ್ಳುದೇವರುಗಳ ಪ್ರತಿಮೆಗಳನ್ನು ಮಾಡುತ್ತಾರೆ. [QBR2] ಆ ಪ್ರತಿಮೆಗಳು ಕೇವಲ ಸುಳ್ಳುದೇವರುಗಳೇ. [QBR] ಆ ಕೆಲಸಗಾರರು ಎಷ್ಟು ಮೂರ್ಖರೆಂಬುದನ್ನು ಅವು ತೋರಿಸುತ್ತವೆ. [QBR2] ಆ ಪ್ರತಿಮೆಗಳು ಜೀವಂತವಾಗಿರುವದಿಲ್ಲ. [QBR]
18. ಆ ವಿಗ್ರಹಗಳು ನಿಷ್ಪ್ರಯೋಜಕವಾದವುಗಳೇ. [QBR2] ಆ ವಿಗ್ರಹಗಳನ್ನು ಮಾಡಿದವರು ಜನರೇ. ಅವುಗಳು ಕೇವಲ ಹಾಸ್ಯಾಸ್ಪದ ವಸ್ತುಗಳಲ್ಲದೆ ಮತ್ತೇನೂ ಅಲ್ಲ. [QBR] ಅವುಗಳ ಬಗ್ಗೆ ತೀರ್ಪುಕೊಡುವ ಕಾಲ ಬರುವದು; [QBR2] ಆ ವಿಗ್ರಹಗಳನ್ನು ನಾಶಮಾಡಲಾಗುವುದು. [QBR]
19. ಆದರೆ ಯಾಕೋಬ್ಯರ ಸಾಬಸ್ತ್ಯವಾದಾತನು ಆ ನಿಷ್ಪ್ರಯೋಜಕ ವಿಗ್ರಹಗಳಂತಲ್ಲ. [QBR2] ಜನರು ದೇವರನ್ನು ಸೃಷ್ಟಿಸಲಿಲ್ಲ. [QBR] ದೇವರು ತನ್ನ ಜನರನ್ನು ಸೃಷ್ಟಿಸಿದನು. [QBR2] ದೇವರು ಎಲ್ಲವನ್ನು ಸೃಷ್ಟಿಸಿದನು. [QBR] ಆತನ ಹೆಸರು ಸರ್ವಶಕ್ತನಾದ ಯೆಹೋವನು.
20. ಯೆಹೋವನು ಹೀಗೆನ್ನುತ್ತಾನೆ: “ಬಾಬಿಲೋನೇ, ನೀನು ನನ್ನ ಗದೆ. [QBR2] ಜನಾಂಗಗಳನ್ನು ಜಜ್ಜಿಹಾಕಲೂ [QBR2] ರಾಜ್ಯಗಳನ್ನು ಧ್ವಂಸ ಮಾಡಲೂ ನಾನು ನಿನ್ನನ್ನು ಬಳಸುತ್ತೇನೆ. [QBR]
21. ಕುದುರೆಗಳನ್ನೂ ಅದರ ಸವಾರರನ್ನೂ ಜಜ್ಜಿಹಾಕಲು ನಾನು ನಿನ್ನನ್ನು ಬಳಸುತ್ತೇನೆ. [QBR2] ರಥಗಳನ್ನೂ ಸಾರಥಿಗಳನ್ನೂ ಪುಡಿಪುಡಿ ಮಾಡಲು ನಾನು ನಿನ್ನನ್ನು ಬಳಸುತ್ತೇನೆ. [QBR]
22. ಗಂಡಸರನ್ನೂ ಹೆಂಗಸರನ್ನೂ ಸಂಹರಿಸುವದಕ್ಕಾಗಿ ನಾನು ನಿನ್ನನ್ನು ಬಳಸುತ್ತೇನೆ. [QBR2] ವೃದ್ಧರನ್ನೂ ತರುಣರನ್ನೂ ನಾಶಪಡಿಸಲು ನಾನು ನಿನ್ನನ್ನು ಬಳಸುತ್ತೇನೆ. [QBR2] ತರುಣರನ್ನೂ ತರುಣಿಯರನ್ನೂ ಧ್ವಂಸ ಮಾಡಲು ನಾನು ನಿನ್ನನ್ನು ಬಳಸುತ್ತೇನೆ. [QBR]
23. ಕುರುಬರನ್ನೂ ಕುರಿಹಿಂಡನ್ನೂ ನಾಶಮಾಡುವದಕ್ಕಾಗಿ ನಾನು ನಿನ್ನನ್ನು ಬಳಸುತ್ತೇನೆ. [QBR2] ರೈತರನ್ನೂ ಮತ್ತು ಹಸುಗಳನ್ನೂ ಸಂಹರಿಸುವದಕ್ಕಾಗಿ ನಾನು ನಿನ್ನನ್ನು ಬಳಸುತ್ತೇನೆ. [QBR2] ಅಧಿಪತಿಗಳನ್ನೂ ಪ್ರಮುಖ ಅಧಿಕಾರಿಗಳನ್ನೂ ನುಚ್ಚುನೂರು ಮಾಡುವದಕ್ಕಾಗಿ ನಾನು ನಿನ್ನನ್ನು ಬಳಸುತ್ತೇನೆ. [QBR]
24. ಆದರೆ ನಾನು ಬಾಬಿಲೋನಿಗೆ ಮುಯ್ಯಿತೀರಿಸುವೆನು. ನಾನು ಬಾಬಿಲೋನಿನ ಎಲ್ಲಾ ಜನರಿಗೆ ಮುಯ್ಯಿತೀರಿಸುವೆನು. ಅವರು ಚೀಯೋನಿಗೆ ಮಾಡಿದ ಎಲ್ಲಾ ದುಷ್ಕೃತ್ಯಗಳಿಗಾಗಿ ನಾನು ಮುಯ್ಯಿತೀರಿಸುವೆನು. [QBR2] ಯೆಹೂದವೇ, ನಿನ್ನ ಎದುರಿನಲ್ಲಿಯೇ ಅವರಿಗೆ ಮುಯ್ಯಿತೀರಿಸುವೆನು.” [QBR] ಇದು ಯೆಹೋವನ ನುಡಿ.
25. ಯೆಹೋವನು ಹೀಗೆನ್ನುತ್ತಾನೆ: [QBR] “ಬಾಬಿಲೋನೇ, ನೀನು ಇಡೀ ದೇಶವನ್ನು [QBR2] ನಾಶಪಡಿಸುವ ಜ್ವಾಲಾಮುಖಿಯಂತಿರುವೆ. [QBR] ಆದರೆ ನಾನು ನಿನಗೆ ವಿರುದ್ಧವಾಗಿ ತಿರುಗಿದ್ದೇನೆ. [QBR2] ನಾನು ನಿನ್ನನ್ನು ಸುಟ್ಟುಹೋದ ಪರ್ವತವನ್ನಾಗಿ ಮಾಡುವೆನು. [QBR]
26. ನಿಮ್ಮಿಂದ ಜನರಿಗೆ ಮೂಲೆಗಲ್ಲಾಗುವಷ್ಟು ದೊಡ್ಡ ಕಲ್ಲು ಸಹ ಸಿಗಲಾರದು. [QBR2] ಜನರು ತಮ್ಮ ಕಟ್ಟಡದ ಅಸ್ತಿವಾರಕ್ಕಾಗಿ ಒಂದು ಕಲ್ಲುಬಂಡೆಯನ್ನು ಬಾಬಿಲೋನಿನಿಂದ ತೆಗೆದುಕೊಂಡು ಹೋಗಲಾರರು. [QBR] ಏಕೆಂದರೆ ಶಾಶ್ವತವಾಗಿ ನಿಮ್ಮ ನಗರವು ಒಡೆದ ಕಲ್ಲುಗಳ ಗುಡ್ಡೆಯಾಗುವುದು.” [QBR2] ಯೆಹೋವನು ಹೀಗೆನ್ನುತ್ತಾನೆ:
27. “ಎಲ್ಲಾ ದೇಶಗಳಲ್ಲಿ ಯುದ್ಧದ ಧ್ವಜವನ್ನು ಹಾರಿಸಿರಿ. [QBR2] ಎಲ್ಲಾ ರಾಷ್ಟ್ರಗಳಲ್ಲಿ ತುತ್ತೂರಿಗಳನ್ನು ಊದಿರಿ. [QBR] ಬಾಬಿಲೋನಿನ ವಿರುದ್ಧ ಹೋರಾಡಲು ಎಲ್ಲಾ ಜನಾಂಗಗಳನ್ನು ಸಿದ್ಧಗೊಳಿಸಿರಿ. [QBR2] ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಜ್ಯಗಳನ್ನು ಬಾಬಿಲೋನಿನ ವಿರುದ್ಧ ಯುದ್ಧಮಾಡಲು ಕರೆಯಿರಿ. [QBR] ಸೈನ್ಯದ ಮುಂದಾಳಾಗಿರಲು ಒಬ್ಬ ಸೇನಾಧಿಪತಿಯನ್ನು ಆರಿಸಿರಿ. [QBR2] ಮಿಡತೆಯ ದಂಡಿನಂತೆ ಅಪಾರವಾಗಿರುವ ಅಶಬಬಲವನ್ನು ಕಳುಹಿಸಿರಿ. [QBR]
28. ಅದರ ವಿರುದ್ಧ ಯುದ್ಧಕ್ಕಾಗಿ ಜನಾಂಗಗಳನ್ನು ಸಿದ್ಧಮಾಡಿರಿ. [QBR2] ಮೇದ್ಯರ ರಾಜರನ್ನು ಸಿದ್ಧಮಾಡಿರಿ. [QBR] ಅವರ ಅಧಿಪತಿಗಳನ್ನು ಮತ್ತು ಎಲ್ಲಾ ಮುಖ್ಯ ಅಧಿಕಾರಿಗಳನ್ನು ಸಿದ್ಧಗೊಳಿಸಿರಿ. [QBR2] ಬಾಬಿಲೋನಿನ ವಿರುದ್ಧ ಯುದ್ಧಮಾಡಲು ಅವರು ಆಳುವ ಎಲ್ಲಾ ದೇಶಗಳನ್ನು ಸನ್ನದ್ಧಗೊಳಿಸಿರಿ. [QBR]
29. ನೋವಿನಿಂದಲೋ ಎಂಬಂತೆ ಭೂಮಿಯು ನಡುಗುತ್ತದೆ ಮತ್ತು ಹೊರಳಾಡುತ್ತದೆ. [QBR2] ಯೆಹೋವನು ತಾನು ಯೋಚಿಸಿದಂತೆ ಬಾಬಿಲೋನಿಗೆ ಮಾಡಿದಾಗ ಅದು ನಡುಗುತ್ತದೆ. [QBR] ಬಾಬಿಲೋನನ್ನು ಯಾರೂ ವಾಸಮಾಡದ ಮರುಭೂಮಿಯನ್ನಾಗಿ [QBR2] ಮಾಡಬೇಕೆಂಬುದು ಯೆಹೋವನ ಯೋಜನೆ. [QBR]
30. ಬಾಬಿಲೋನಿನ ಸೈನಿಕರು ಕಾದಾಡುವದನ್ನು ನಿಲ್ಲಿಸಿದ್ದಾರೆ. [QBR2] ಅವರು ತಮ್ಮ ಕೋಟೆಗಳಲ್ಲಿದ್ದಾರೆ. [QBR] ಅವರ ಬಲ ನಷ್ಟವಾಗಿದೆ. [QBR2] ಅವರು ಭಯಪಟ್ಟ ಹೆಂಗಸಿನಂತಾಗಿದ್ದಾರೆ. [QBR] ಬಾಬಿಲೋನಿನ ಮನೆಗಳು ಉರಿಯುತ್ತಿವೆ. [QBR2] ಅದರ ಬಾಗಿಲಿನ ಅಗುಳಿಗಳು ಮುರಿದುಹೋಗಿವೆ. [QBR]
31. ಒಬ್ಬ ಸಂದೇಶಕನ ನಂತರ ಇನ್ನೊಬ್ಬ ಸಂದೇಶಕನು ಬರುವನು. [QBR2] ಸಂದೇಶಕರ ಮೇಲೆ ಸಂದೇಶಕರು ಬಂದು, [QBR] ಇಡೀ ನಗರವನ್ನು ವಶಪಡಿಸಿಕೊಳ್ಳಲಾಗಿದೆ ಎಂದು [QBR2] ಅವರು ಬಾಬಿಲೋನಿನ ರಾಜನಿಗೆ ತಿಳಿಸುತ್ತಾರೆ. [QBR]
32. ಹಾಯ್ಗಡಗಳನ್ನು ವಶಪಡಿಸಿಕೊಂಡಿದ್ದಾರೆ; [QBR2] ಜವುಗು ನೆಲವು ಉರಿಯುತ್ತಿದೆ. [QBR2] ಬಾಬಿಲೋನಿನ ಎಲ್ಲಾ ಸೈನಿಕರು ಅಂಜಿಕೊಂಡಿದ್ದಾರೆ.”
33. ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುವನು: [QBR] “ಬಾಬಿಲೋನಿನ ನಗರವು ಒಂದು ಕಣದಂತೆ ಇದೆ. [QBR2] ಸುಗ್ಗಿಕಾಲದಲ್ಲಿ ಜನರು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸುವದಕ್ಕಾಗಿ ಅದನ್ನು ಬಡಿಯುತ್ತಾರೆ. [QBR2] ಬಾಬಿಲೋನಿನ ಸುಗ್ಗಿಕಾಲ (ವಿನಾಶ ಕಾಲ) ಹತ್ತಿರವಾಗುತ್ತಲಿದೆ.
34. “ಹಿಂದಿನ ಕಾಲದಲ್ಲಿ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮ್ಮನ್ನು ಹಾಳುಮಾಡಿದನು; [QBR2] ನಮ್ಮನ್ನು ಹಿಂಸಿಸಿದನು; [QBR] ನಮ್ಮ ಜನರನ್ನು ಸೆರೆ ಒಯ್ದನು. [QBR2] ಆಗ ನಾವು ಒಂದು ಬರಿದಾದ ಪಾತ್ರೆಯಂತಾದೆವು. [QBR] ಅವನು ನಮ್ಮ ಎಲ್ಲಾ ಉತ್ತಮ ವಸ್ತುಗಳನ್ನು ತೆಗೆದುಕೊಂಡು ಹೋದನು. [QBR2] ತನಗೆ ತೃಪ್ತಿಯಾಗುವವರೆಗೆ ಎಲ್ಲವನ್ನು ತಿಂದು ತೇಗಿದ ರಾಕ್ಷಸನಂತಿದ್ದನು. [QBR] ಅವನು ನಮ್ಮೆಲ್ಲ ಉತ್ಕೃಷ್ಟ ವಸ್ತುಗಳನ್ನು [QBR2] ಕಿತ್ತುಕೊಂಡು ನಮ್ಮನ್ನು ದೂರ ಎಸೆದನು. [QBR]
35. ನಮ್ಮನ್ನು ನೋಯಿಸಲು ಬಾಬಿಲೋನ್ ಭಯಂಕರ ಕೆಲಸವನ್ನು ಮಾಡಿತು. [QBR2] ಈಗ ಬಾಬಿಲೋನಿಗೂ ಅಂಥಾ ಸ್ಥಿತಿ ಬರಲೆಂದು ನನ್ನ ಆಶೆ.” ಚೀಯೋನ್ ನಿವಾಸಿಗಳು ಹೀಗೆಂದರು: [QBR] “ಬಾಬಿಲೋನಿನ ಜನರು ನಮ್ಮ ಜನರನ್ನು ಕೊಲ್ಲುವ ಪಾಪವನ್ನು ಮಾಡಿದ್ದಾರೆ. [QBR2] ಈಗ ಅವರು ಮಾಡಿದ ದುಷ್ಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಲಾಗುತ್ತಿದೆ” [QBR2] ಎಂದು ಜೆರುಸಲೇಮ್ ನಗರ ಹೇಳುವುದು. [QBR]
36. ಯೆಹೋವನು ಹೀಗೆನ್ನುವನು: [QBR] “ಯೆಹೂದವೇ, ನಾನು ನಿನ್ನನ್ನು ರಕ್ಷಿಸುವೆನು. [QBR2] ನಿಶ್ಚಿತವಾಗಿ ಬಾಬಿಲೋನಿಗೆ ಶಿಕ್ಷೆ ಆಗುವಂತೆ ನಾನು ನೋಡಿಕೊಳ್ಳುತ್ತೇನೆ. [QBR] ನಾನು ಬಾಬಿಲೋನಿನ ಸಮುದ್ರವನ್ನು ಒಣಗಿಸಿಬಿಡುವೆನು. [QBR2] ಅದರ ನೀರಿನ ಚಿಲುಮೆಗಳು ಬತ್ತುವಂತೆ ಮಾಡುತ್ತೇನೆ. [QBR]
37. ಬಾಬಿಲೋನು ನಾಶವಾದ ಕಟ್ಟಡಗಳ ಗುಡ್ಡೆಯಾಗುವುದು. [QBR2] ಬಾಬಿಲೋನು ಕಾಡುನಾಯಿಗಳ ನಿವಾಸವಾಗುವುದು. [QBR] ಜನರು ಕಲ್ಲುಬಂಡೆಗಳ ಗುಡ್ಡೆಯನ್ನು ನೋಡಿ ಆಶ್ಚರ್ಯಪಡುವರು. ಬಾಬಿಲೋನಿನ ಬಗ್ಗೆ ಜನರು ತಲೆಯಾಡಿಸುವರು. [QBR2] ಬಾಬಿಲೋನು ನಿರ್ಜನ ಪ್ರದೇಶವಾಗುವುದು.
38. “ಬಾಬಿಲೋನಿನ ಜನರು ಗರ್ಜಿಸುವ ಪ್ರಾಯದ ಸಿಂಹಗಳಂತಿದ್ದಾರೆ. [QBR2] ಅವರು ಮರಿಸಿಂಹಗಳಂತೆ ಗುರುಗುಟ್ಟುವರು. [QBR]
39. ಆ ಜನರು ಬಲಶಾಲಿಗಳಾದ ಸಿಂಹಗಳಂತೆ ವರ್ತಿಸುತ್ತಿದ್ದಾರೆ. [QBR2] ನಾನು ಅವರಿಗೊಂದು ಔತಣವನ್ನೇರ್ಪಡಿಸುವೆನು. [QBR2] ಅವರಿಗೆ ಮತ್ತೇರುವಂತೆ ಕುಡಿಸುವೆನು. [QBR] ಅವರು ನಗುನಗುತ್ತಾ ಸಂತೋಷದಿಂದ ಕಾಲ ಕಳೆಯುವರು. [QBR2] ಆಮೇಲೆ ಅವರು ಶಾಶ್ವತವಾಗಿ ಮಲಗುವರು. [QBR2] ಅವರು ಮತ್ತೆ ಏಳಲಾರರು.” ಇದು ಯೆಹೋವನ ನುಡಿ. [QBR]
40. “ನಾನು ಬಾಬಿಲೋನಿನ ಜನರನ್ನು ವಧೆಗಾಗಿ ತೆಗೆದುಕೊಂಡು ಹೋಗುವೆನು. [QBR2] ಬಾಬಿಲೋನಿನ ಗತಿ ವಧೆಗಾಗಿ ತಂದ [QBR2] ಕುರಿ, ಟಗರು ಮತ್ತು ಹೋತಗಳಂತೆ ಆಗುವುದು.
41. “ಶೇಷಕನು” [*ಶೇಷಕನು ಇದು ಬಾಬಿಲೋನಿಗೆ ಇದ್ದ ಗುಪ್ತ ಹೆಸರು.] ಶತ್ರುಗಳ ವಶವಾಗುವನು. [QBR2] ಲೋಕದಲ್ಲಿಯೇ ಅತ್ಯುತ್ತಮವಾದ ಮತ್ತು ಹೆಮ್ಮೆಪಡುವ ದೇಶವು ವೈರಿಗಳ ಕೈವಶವಾಗುವುದು. [QBR] ಬೇರೆ ಜನಾಂಗದ ಜನರು ಬಾಬಿಲೋನಿನ ಕಡೆಗೆ ನೋಡಿದಾಗ [QBR2] ಅಲ್ಲಿನ ಸ್ಥಿತಿಗತಿಗಳನ್ನು ಕಂಡು ಭಯಪಡುವರು. [QBR]
42. ಸಮುದ್ರವು ಬಾಬಿಲೋನಿನ ಮೇಲೆ ನುಗ್ಗುವುದು. [QBR2] ಅದರ ಆರ್ಭಟಿಸುವ ತೆರೆಗಳು ಅದನ್ನು ಮುಚ್ಚಿಬಿಡುವವು. [QBR]
43. ಬಾಬಿಲೋನಿನ ಪಟ್ಟಣಗಳು ಬರಿದಾದ ಊರುಗಳಾಗುವವು. [QBR2] ಬಾಬಿಲೋನು ಮರುಭೂಮಿಯಾಗುವುದು. [QBR] ಅದು ನಿರ್ಜನವಾದ ನೆಲವಾಗುವುದು. [QBR2] ಜನರು ಬಾಬಿಲೋನಿನ ಮೂಲಕ ಪ್ರಯಾಣ ಮಾಡಲಾಗದು. [QBR]
44. ನಾನು ಬಾಬಿಲೋನಿನ ಬೇಲ್ ದೇವರನ್ನು ದಂಡಿಸುವೆನು. [QBR2] ಅವನು ನುಂಗಿದ ಜನರನ್ನು ಅವನು ಕಕ್ಕುವಂತೆ ಮಾಡುವೆನು. [QBR] ಬೇರೆ ಜನಾಂಗಗಳು ಬಾಬಿಲೋನಿಗೆ ಬರಲಾರವು. [QBR2] ಬಾಬಿಲೋನಿನ ಸುತ್ತಲಿನ ಗೋಡೆಯು ಬೀಳುವುದು. [QBR]
45. ನನ್ನ ಜನರೇ, ಬಾಬಿಲೋನ್ ನಗರದಿಂದ ಹೊರಗೆ ಬನ್ನಿ. [QBR2] ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಲು ಓಡಿಹೋಗಿರಿ. [QBR2] ಯೆಹೋವನ ಭಯಂಕರ ಕೋಪದಿಂದ ತಪ್ಪಿಸಿಕೊಳ್ಳಲು ಓಡಿಹೋಗಿರಿ.
46. “ನನ್ನ ಜನರೇ, ದುಃಖಿಸಬೇಡಿ, [QBR2] ಸುದ್ದಿಗಳು ಹಬ್ಬುತ್ತವೆ. ಆದರೆ ಹೆದರಬೇಡಿ. [QBR] ಒಂದು ಸುದ್ದಿ ಈ ವರ್ಷ ಬರುವುದು. [QBR2] ಮುಂದಿನ ವರ್ಷ ಮತ್ತೊಂದು ಸುದ್ದಿ ಬರಬಹುದು. [QBR] ದೇಶದಲ್ಲಿ ಭಯಂಕರವಾದ ಯುದ್ಧದ ಬಗ್ಗೆ ಸುದ್ದಿಗಳು ಕೇಳಿಬರುವವು. [QBR2] ರಾಜರುಗಳು ಬೇರೆ ರಾಜರುಗಳೊಂದಿಗೆ ಯುದ್ಧ ಮಾಡುತ್ತಿರುವ ವದಂತಿಗಳು ಕೇಳಿಬರುವವು. [QBR]
47. ನಾನು ಬಾಬಿಲೋನಿನ ಸುಳ್ಳುದೇವತೆಗಳನ್ನು ದಂಡಿಸುವ ಸಮಯ ಖಂಡಿತವಾಗಿ ಬರುವುದು. [QBR2] ಬಾಬಿಲೋನಿನ ಇಡೀ ಪ್ರದೇಶವು ನಾಚಿಕೆಪಡುವುದು. [QBR] ನಗರದ ಬೀದಿಗಳಲ್ಲಿ [QBR2] ಅನೇಕಾನೇಕ ಶವಗಳು ಬಿದ್ದಿರುವವು. [QBR]
48. ಆಗ ಭೂಮ್ಯಾಕಾಶಗಳು ಮತ್ತು ಅವುಗಳಲ್ಲಿರುವ ಸಮಸ್ತ ವಸ್ತುಗಳು [QBR2] ಬಾಬಿಲೋನಿನ ಬಗ್ಗೆ ಹರ್ಷಧ್ವನಿ ಮಾಡುವವು. [QBR] ಏಕೆಂದರೆ ಸೈನ್ಯವು ಉತ್ತರದಿಂದ ಬಂದಿತು, [QBR2] ಬಾಬಿಲೋನಿನ ವಿರುದ್ಧ ಯುದ್ಧಮಾಡಿತು” [QBR] ಇದು ಯೆಹೋವನ ನುಡಿ.
49. “ಬಾಬಿಲೋನ್ ಇಸ್ರೇಲರನ್ನು ಕೊಂದಿತು. [QBR2] ಬಾಬಿಲೋನ್ ಭೂಮಂಡಲದ ಎಲ್ಲೆಡೆಯ ಜನರನ್ನು ಕೊಂದಿತು. [QBR2] ಅದಕ್ಕಾಗಿ ಬಾಬಿಲೋನ್ ಪತನವಾಗಲೇಬೇಕು. [QBR]
50. ನೀವು ಖಡ್ಗಗಳಿಂದ ತಪ್ಪಿಸಿಕೊಂಡಿರಿ. [QBR2] ನೀವು ಅವಸರ ಮಾಡಿ ಬಾಬಿಲೋನನ್ನು ಬಿಡಬೇಕು. [QBR2] ತಡೆಯಬೇಡಿ, [QBR] ನೀವು ಬಹಳ ದೂರಪ್ರದೇಶದಲ್ಲಿ ಇದ್ದೀರಿ. [QBR2] ಆದರೆ ನೀವು ಇರುವಲ್ಲಿಯೇ ಯೆಹೋವನನ್ನು ಸ್ಮರಿಸಿರಿ; ಜೆರುಸಲೇಮನ್ನೂ ಸ್ಮರಿಸಿಕೊಳ್ಳಿರಿ.
51. “ಯೆಹೂದದ ಜನರಾದ ನಾವು ನಾಚಿಕೆಪಟ್ಟೆವು. [QBR2] ಜನರು ನಮ್ಮನ್ನು ಅಪಮಾನಗೊಳಿಸಿದ್ದರಿಂದ ನಾವು ನಾಚಿಕೆಪಟ್ಟಿದ್ದೇವೆ. [QBR] ಏಕೆಂದರೆ ಯೆಹೋವನ ಆಲಯದ [QBR2] ಪವಿತ್ರ ಸ್ಥಳಗಳಲ್ಲಿ ಅಪರಿಚಿತರು ಪ್ರವೇಶಗೈದಿದ್ದಾರೆ.”
52. ಯೆಹೋವನು ಹೀಗೆನ್ನುವನು: “ಬಾಬಿಲೋನಿನ ವಿಗ್ರಹಗಳನ್ನು [QBR2] ನಾನು ದಂಡಿಸುವ ಕಾಲ ಬರುತ್ತಿದೆ. [QBR] ಆಗ ಆ ದೇಶದಲ್ಲೆಲ್ಲಾ ಗಾಯಗೊಂಡ ಜನರು [QBR2] ನೋವಿನಿಂದ ಗೋಳಾಡುವರು. [QBR]
53. ಬಾಬಿಲೋನ್ ನಗರವು ಗಗನ ಚುಂಬಿಯಾಗಿ ಬೆಳೆಯಬಹುದು. [QBR2] ಅದು ತನ್ನ ಕೋಟೆಗಳನ್ನು ಭದ್ರಪಡಿಸಿಕೊಳ್ಳಬಹುದು. [QBR] ಆದರೆ ಆ ನಗರದ ವಿರುದ್ಧ ಯುದ್ಧಮಾಡಲು ನಾನು ಜನರನ್ನು ಕಳುಹಿಸುತ್ತೇನೆ. [QBR2] ಆ ಜನರು ಅದನ್ನು ನಾಶಮಾಡುವರು.” [QBR] ಇದು ಯೆಹೋವನ ನುಡಿ.
54. “ಬಾಬಿಲೋನಿನಲ್ಲಿ ಜನರು ರೋಧಿಸುವದನ್ನು ನಾವು ಕೇಳುವೆವು. [QBR2] ಬಾಬಿಲೋನ್ ಪ್ರದೇಶದಲ್ಲಿ ವಸ್ತುಗಳನ್ನು ನಾಶಮಾಡುವ ಜನರ ಧ್ವನಿಯನ್ನು ನಾವು ಕೇಳುವೆವು. [QBR]
55. ಯೆಹೋವನು ಬಾಬಿಲೋನನ್ನು ಬಹುಬೇಗನೆ ನಾಶಮಾಡುವನು. [QBR2] ಆ ನಗರದ ದೊಡ್ಡ ಧ್ವನಿಗಳು ಶಾಂತವಾಗುವಂತೆ ಆತನು ಮಾಡುವನು. [QBR] ವೈರಿಗಳು ಸಾಗರದ ತರಂಗಮಾಲೆಗಳಂತೆ ಗರ್ಜಿಸುತ್ತಾ ಬರುವರು. [QBR2] ಸುತ್ತಮುತ್ತಲಿನ ಜನರೆಲ್ಲರು ಆ ಗರ್ಜನೆಯನ್ನು ಕೇಳುವರು. [QBR]
56. ಸೈನ್ಯವು ಬಂದು ಬಾಬಿಲೋನನ್ನು ನಾಶಮಾಡುವುದು. [QBR2] ಬಾಬಿಲೋನಿನ ಸೈನಿಕರನ್ನು ವಶಪಡಿಸಿಕೊಳ್ಳಲಾಗುವುದು. ಅವರ ಬಿಲ್ಲುಗಳನ್ನು ಮುರಿಯಲಾಗುವುದು. [QBR] ಏಕೆಂದರೆ ಯೆಹೋವನು ಜನರನ್ನು ಅವರು ಮಾಡುವ ದುಷ್ಕೃತ್ಯಗಳಿಗಾಗಿ ಶಿಕ್ಷಿಸುತ್ತಾನೆ. [QBR2] ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಸಂಪೂರ್ಣವಾಗಿ ಕೊಡುತ್ತಾನೆ. [QBR]
57. ಬಾಬಿಲೋನಿನ ಮುಖ್ಯ ಅಧಿಕಾರಿಗಳಿಗೂ [QBR2] ಪಂಡಿತರಿಗೂ ದ್ರಾಕ್ಷಾರಸ ಕುಡಿಯುವಂತೆ ಮಾಡುತ್ತೇನೆ. [QBR] ಅಲ್ಲಿಯ ಅಧಿಪತಿಗಳಿಗೂ ಅಧಿಕಾರಿಗಳಿಗೂ ಸೈನಿಕರಿಗೂ ದ್ರಾಕ್ಷಾರಸ ಕುಡಿಸುತ್ತೇನೆ. [QBR2] ಆಮೇಲೆ ಅವರು ಶಾಶ್ವತವಾಗಿ ಮಲಗಿಬಿಡುತ್ತಾರೆ. [QBR2] ಅವರು ಎಚ್ಚರಗೊಳ್ಳುವುದೇ ಇಲ್ಲ.” [QBR] ಸರ್ವಶಕ್ತನಾದ ಯೆಹೋವನೆಂಬ [QBR2] ನಾಮಧೇಯದ ರಾಜಾಧಿರಾಜನ ನುಡಿಯಿದು.
58. ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: [QBR] “ಬಾಬಿಲೋನಿನ ಅಗಲವಾದ ಮತ್ತು ಸುಭದ್ರವಾದ ಗೋಡೆಯನ್ನು ಬೀಳಿಸಲಾಗುವುದು. [QBR2] ಅದರ ಎತ್ತರವಾದ ಬಾಗಿಲುಗಳನ್ನು ಸುಟ್ಟುಹಾಕಲಾಗುವುದು. [QBR] ಬಾಬಿಲೋನಿನ ಜನರು ನಗರವನ್ನು ರಕ್ಷಿಸಲು ಬಹಳ ಕಷ್ಟಪಡುವರು. [QBR2] ಆದರೆ ಅದು ನಿಷ್ಪ್ರಯೋಜಕವಾಗುವುದು. [QBR] ನಗರವನ್ನು ರಕ್ಷಿಸುವ ಪ್ರಯತ್ನದಲ್ಲಿ ಅವರು ತುಂಬಾ ಶ್ರಮವಹಿಸುವರು. [QBR2] ಆದರೆ ಅವರು ಕೇವಲ ಅಗಿಐಗೆ ಆಹುತಿಯಾಗುವರು.” [PS]
59. {ಬಾಬಿಲೋನಿಗೆ ಯೆರೆಮೀಯನ ಸಂದೇಶ} [PS] ಯೆರೆಮೀಯನು ಸೆರಾಯ ಎಂಬ ಅಧಿಕಾರಿಯ ಕೈಗೆ ಕೊಟ್ಟ ಸಂದೇಶವಿದು. ಸೆರಾಯನು ಯೆಹೂದದ ನೇರೀಯನ ಮಗ. ನೇರೀಯನು ಮಹ್ಸೇಯನ ಮಗನು. ಸೆರಾಯನು ಯೆಹೂದದ ರಾಜನಾದ ಚಿದ್ಕೀಯನ ಜೊತೆಗೆ ಬಾಬಿಲೋನಿಗೆ ಹೋದನು. ಈ ಸಂಗತಿ ಯೆಹೂದದಲ್ಲಿ ಚಿದ್ಕೀಯನ ಆಳ್ವಿಕೆಯ ನಾಲ್ಕನೇ ವರ್ಷದಲ್ಲಿ ನಡೆದದ್ದು. ಆ ಸಮಯದಲ್ಲಿ ಯೆರೆಮೀಯನು ಸೆರಾಯನೆಂಬ ಅಧಿಕಾರಿಯ ಕೈಗೆ ಈ ಸಂದೇಶವನ್ನು ಕೊಟ್ಟನು.
60. ಬಾಬಿಲೋನಿಗೆ ಉಂಟಾಗುವ ಎಲ್ಲಾ ಕೇಡನ್ನು ಯೆರೆಮೀಯನು ಒಂದು ಸುರಳಿಯಲ್ಲಿ ಬರೆದಿದ್ದನು. ಅವನು ಬಾಬಿಲೋನಿನ ಬಗ್ಗೆ ಈ ವಿಷಯಗಳನ್ನೆಲ್ಲ ಬರೆದಿದ್ದನು. [PE][PS]
61. ಯೆರೆಮೀಯನು ಸೆರಾಯನಿಗೆ ಹೀಗೆ ಹೇಳಿದನು: “ಸೆರಾಯನೇ, ಬಾಬಿಲೋನಿಗೆ ಹೋಗು. ಎಲ್ಲರಿಗೂ ಕೇಳಿಸುವಂತೆ ಈ ಸಂದೇಶವನ್ನು ಖಂಡಿತವಾಗಿ ಓದು.
62. ಆಮೇಲೆ ಹೀಗೆ ಹೇಳು: ‘ಯೆಹೋವನೇ, ಬಾಬಿಲೋನ್ ನಗರವನ್ನು ನಾಶಮಾಡುವೆನೆಂದು ನೀನು ಹೇಳಿರುವೆ. ಪ್ರಾಣಿಗಳು ಅಥವಾ ಮನುಷ್ಯರು ಯಾರೂ ಇಲ್ಲಿ ವಾಸಮಾಡದಂತೆ, ಇದು ಎಂದೆಂದಿಗೂ ಹಾಳುಬಿದ್ದ ಸ್ಥಳವಾಗಿರುವಂತೆ ಇದನ್ನು ನಾಶಮಾಡುವದಾಗಿ ಹೇಳಿರುವೆ.’
63. ಈ ಸುರುಳಿಯನ್ನು ಓದಿಮುಗಿಸಿದ ಮೇಲೆ ಅದಕ್ಕೊಂದು ಕಲ್ಲನ್ನು ಕಟ್ಟಿ ಆ ಕಾಗದದ ಸುರುಳಿಯನ್ನು ಯೂಫ್ರೇಟೀಸ್ ನದಿಯಲ್ಲಿ ಎಸೆದುಬಿಡು.
64. ಆಮೇಲೆ ‘ಇದೇ ರೀತಿಯಲ್ಲಿ ಬಾಬಿಲೋನ್ ಕೂಡ ಮುಳುಗಿಹೋಗುವುದು. ಬಾಬಿಲೋನ್ ಎಂದಿಗೂ ಮೇಲಕ್ಕೆ ಏಳುವದಿಲ್ಲ. ಅಲ್ಲಿ ನಾನು ಬರಮಾಡುವ ಅನೇಕ ವಿಪತ್ತುಗಳಿಂದಾಗಿ ಬಾಬಿಲೋನ್ ಮುಳುಗಿಹೋಗುವುದು’ ” ಎಂದು ಹೇಳು. [PE][PS] ಯೆರೆಮೀಯನ ಸಂದೇಶ ಇಲ್ಲಿಗೆ ಮುಗಿಯುತ್ತದೆ. [PE]