1. {ಶತ್ರುಗಳು ಜೆರುಸಲೇಮ್ ನಗರವನ್ನು ಮುತ್ತಿದರು} PS ಬೆನ್ಯಾಮೀನನ ಕುಲದವರೇ, ನಿಮ್ಮ ಪ್ರಾಣ ರಕ್ಷಣೆಗಾಗಿ ಓಡಿಹೋಗಿರಿ;
ಜೆರುಸಲೇಮ್ ನಗರದಿಂದ ಓಡಿಹೋಗಿರಿ. ತೆಕೋವ ನಗರದಲ್ಲಿ ಯುದ್ಧದ ತುತ್ತೂರಿಗಳನ್ನು ಊದಿರಿ; ಬೇತ್ಹಕ್ಕೆರೆಮಿನಲ್ಲಿ ಎಚ್ಚರಿಕೆಯ ಧ್ವಜಗಳನ್ನು ಹಾರಿಸಿರಿ. ಉತ್ತರದಿಕ್ಕಿನಿಂದ ವಿಪತ್ತು ಬರುತ್ತಿರುವುದರಿಂದ ಇವೆಲ್ಲವನ್ನು ಮಾಡಿರಿ. ಭಯಂಕರವಾದ ವಿನಾಶವು ನಿಮಗೆ ಬರುತ್ತಿದೆ. |
3. ಕುರುಬರು ಜೆರುಸಲೇಮಿಗೆ ಬರುತ್ತಾರೆ.
ಮತ್ತು ಕುರಿಮಂದೆಗಳನ್ನು ತರುತ್ತಾರೆ. ಅದರ ಸುತ್ತಲೂ ತಮ್ಮ ಗುಡಾರಗಳನ್ನು ಹಾಕಿಕೊಳ್ಳುತ್ತಾರೆ. ಪ್ರತಿಯೊಬ್ಬ ಕುರುಬನು ತನ್ನ ಕುರಿಹಿಂಡನ್ನು ನೋಡಿಕೊಳ್ಳುತ್ತಾನೆ. |
4. “ಜೆರುಸಲೇಮಿನ ಮೇಲೆ ಧಾಳಿ ಮಾಡುವದಕ್ಕೆ ಸಿದ್ಧರಾಗಿರಿ.
ಏಳಿರಿ, ನಾವು ನಗರವನ್ನು ಮಧ್ಯಾಹ್ನದಲ್ಲಿಯೇ ಮುತ್ತೋಣ. ಆದರೆ ಈಗಾಗಲೇ ಹೊತ್ತಾಗಿದೆ. ಸಾಯಂಕಾಲದ ನೆರಳುಗಳು ವಿಸ್ತಾರಗೊಳ್ಳುತ್ತಿವೆ. |
5. ಏಳಿರಿ, ನಾವು ರಾತ್ರಿಯಲ್ಲಿ ನಗರದ ಮೇಲೆ ಧಾಳಿ ಮಾಡೋಣ.
ನಾವು ಜೆರುಸಲೇಮಿನ ಭದ್ರವಾದ ರಕ್ಷಣಾಸ್ಥಳಗಳನ್ನು ನಾಶಮಾಡೋಣ.” |
6. ಸರ್ವಶಕ್ತನಾದ ಯೆಹೋವನು ಹೀಗೆ ಹೇಳಿದನು:
“ಜೆರುಸಲೇಮಿನ ಸುತ್ತಮುತ್ತಲಿನ ಮರಗಳನ್ನು ಕಡಿದುಹಾಕಿರಿ; ಜೆರುಸಲೇಮಿನ ಎದುರಿಗೆ ಒಂದು ದಿಬ್ಬ ನಿರ್ಮಿಸಿರಿ. ನಗರವನ್ನು ದಂಡಿಸಬೇಕು. ನಗರದ ಒಳಗಡೆ ದಬ್ಬಾಳಿಕೆಯ ಹೊರತು ಮತ್ತೇನಿಲ್ಲ. |
7. ಬಾವಿಯಲ್ಲಿ ಹೊಸ ನೀರು ಬರುವಂತೆ
ಜೆರುಸಲೇಮಿನಲ್ಲಿ ಹೊಸಹೊಸ ದುಷ್ಟತನ ಉಂಟಾಗುತ್ತದೆ. ಈ ಪಟ್ಟಣದಲ್ಲಿ ಬಲಾತ್ಕಾರ ಮತ್ತು ವಿನಾಶಗಳೇ ಕೇಳಿಬರುತ್ತವೆ. ನನಗೆ ಯಾವಾಗಲೂ ಜೆರುಸಲೇಮಿನ ರೋಗ ಮತ್ತು ಗಾಯಗಳು ಕಣ್ಣಿಗೆ ಬೀಳುತ್ತವೆ. |
8. ಜೆರುಸಲೇಮ್ ನಗರವೇ, ಈ ಎಚ್ಚರಿಕೆಯ ನುಡಿಗಳನ್ನು ಕೇಳು.
ನೀನು ಕೇಳದಿದ್ದರೆ ನಾನು ನಿನಗೆ ವಿಮುಖನಾಗುವೆ. ನಾನು ನಿನ್ನ ಪ್ರದೇಶವನ್ನು ಒಂದು ಮರಳುಗಾಡಾಗಿ ಮಾಡುತ್ತೇನೆ. ಅಲ್ಲಿ ಯಾರೂ ವಾಸಮಾಡಲು ಸಾಧ್ಯವಾಗದು.” |
9. ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ:
“ದೇಶದಲ್ಲಿ ಅಳಿದುಳಿದ ಇಸ್ರೇಲಿಯರನ್ನು ಒಟ್ಟಾಗಿ ಸೇರಿಸಿರಿ. ದ್ರಾಕ್ಷಿತೋಟದಲ್ಲಿ ಕೊನೆಯ ದ್ರಾಕ್ಷಿಯನ್ನು ಕೀಳುವಂತೆ ಅವರನ್ನು ಒಟ್ಟಾಗಿ ಸೇರಿಸಿ. ಕೊಯ್ಲುಗಾರನು ಪ್ರತಿಯೊಂದು ಬಳ್ಳಿಯನ್ನು ನೋಡಿ ದ್ರಾಕ್ಷಿಕೀಳುವಂತೆ ನೀವು ಸೂಕ್ಷ್ಮವಾಗಿ ಗಮನಿಸಿ ಅವರನ್ನು ಒಟ್ಟಾಗಿ ಸೇರಿಸಿರಿ.” |
10. ನಾನು ಯಾರೊಂದಿಗೆ ಮಾತನಾಡಲಿ?
ನಾನು ಯಾರಿಗೆ ಎಚ್ಚರಿಕೆಯ ನುಡಿಗಳನ್ನು ಹೇಳಲಿ? ನನ್ನ ಮಾತನ್ನು ಯಾರು ಕೇಳುತ್ತಾರೆ? ಇಸ್ರೇಲಿನ ಜನರು ತಮ್ಮ ಕಿವಿಗಳನ್ನು ಮುಚ್ಚಿಕೊಂಡಿದ್ದಾರೆ. ಅವರು ನನ್ನ ಎಚ್ಚರಿಕೆಯ ನುಡಿಗಳನ್ನು ಕೇಳಲಾರರು. ಜನರಿಗೆ ಯೆಹೋವನ ಉಪದೇಶ ರುಚಿಸುವದಿಲ್ಲ. ಅವರು ಯೆಹೋವನ ನುಡಿಗಳನ್ನು ಕೇಳಬಯಸುವದಿಲ್ಲ. |
11. ಯೆಹೋವನ ರೋಷವು ನನ್ನಲ್ಲಿ ತುಂಬಿತುಳುಕುತ್ತಿದೆ,
ತಡೆದುತಡೆದು ನನಗೆ ಸಾಕಾಗಿದೆ. “ಬೀದಿಯಲ್ಲಾಡುವ ಮಕ್ಕಳ ಮೇಲೆ ಅದನ್ನು ಹೊಯ್ದುಬಿಡಬೇಕು. ಒಂದೆಡೆ ಸೇರುವ ತರುಣರ ಮೇಲೆ ಅದನ್ನು ಹೊಯ್ದುಬಿಡಬೇಕು. ಗಂಡಹೆಂಡತಿಯರಿಬ್ಬರನ್ನು ಅಪಹರಿಸಲಾಗುವುದು. ಮುದುಕರನ್ನೂ ಮುಪ್ಪಿನ ಮುದುಕರನ್ನೂ ಅಪಹರಿಸಲಾಗುವುದು. |
12. ಅವರ ಮನೆಗಳನ್ನು ಬೇರೆಯವರಿಗೆ ಕೊಡಲಾಗುವುದು.
ಅವರ ಹೊಲಗಳನ್ನೂ ಅವರ ಹೆಂಡಂದಿರನ್ನೂ ಬೇರೆಯವರಿಗೆ ಕೊಡಲಾಗುವುದು. ನಾನು ನನ್ನ ಕೈ ಎತ್ತಿ ಯೆಹೂದದ ಜನರನ್ನು ದಂಡಿಸುವೆನು.” ಇದು ಯೆಹೋವನ ಸಂದೇಶ. |
13. “ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು.
ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಲಾಭಕ್ಕಾಗಿ ಆಸೆಪಡುತ್ತಾರೆ. ಪ್ರವಾದಿಗಳು ಮತ್ತು ಯಾಜಕರು ಸಹ ಮೋಸಗಾರರಾಗಿದ್ದಾರೆ. |
14. ಪ್ರವಾದಿಗಳು ಮತ್ತು ಯಾಜಕರು
ನನ್ನ ಜನರಿಗಾದ ದೊಡ್ಡ ಗಾಯಗಳಿಗೆ ಚಿಕ್ಕಗಾಯಗಳಿಗೋ ಎಂಬಂತೆ ಚಿಕಿತ್ಸೆ ಮಾಡುತ್ತಾರೆ. ವಾಸಿಯಾಗಿಲ್ಲದಿದ್ದರೂ ‘ವಾಸಿಯಾಗಿದೆ’ ಎನ್ನುತ್ತಾರೆ. |
15. ಪ್ರವಾದಿಗಳು ಮತ್ತು ಯಾಜಕರು ತಾವು ಮಾಡುವ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು.
ಆದರೆ ಅವರು ನಾಚಿಕೆಪಡುವದೇ ಇಲ್ಲ. ತಮ್ಮ ಪಾಪಕಾರ್ಯಗಳಿಗಾಗಿ ಸಂಕೋಚಪಡುವುದು ಸಹ ಅವರಿಗೆ ಗೊತ್ತಿಲ್ಲ. ಆದ್ದರಿಂದ ಬೇರೆಯವರಂತೆ ಅವರನ್ನೂ ಶಿಕ್ಷಿಸಲಾಗುವುದು. ನಾನು ಅವರನ್ನು ಶಿಕ್ಷಿಸಿದಾಗ ಅವರನ್ನು ನೆಲಕ್ಕೆ ಎಸೆಯಲಾಗುವದು” ಎಂದು ಯೆಹೋವನು ಅನ್ನುತ್ತಾನೆ. |
16. ಯೆಹೋವನು ಹೀಗೆ ಹೇಳುತ್ತಾನೆ:
“ಎರಡು ರಸ್ತೆಗಳು ಕೂಡುವಲ್ಲಿ ನಿಂತು ನೋಡಿರಿ. ‘ಒಳ್ಳೆಯ ರಸ್ತೆ ಎಲ್ಲಿದೆ?’ ಎಂದು ಕೇಳಿರಿ. ಆ ರಸ್ತೆಯನ್ನು ಹಿಡಿದು ನಡೆಯಿರಿ. ಹಾಗೆ ಮಾಡಿದರೆ ನಿಮಗೆ ವಿಶ್ರಾಂತಿ ಸಿಕ್ಕುವದು. ಆದರೆ ‘ನಾವು ಒಳ್ಳೆಯ ಹಾದಿಯ ಮೇಲೆ ನಡೆಯುವುದಿಲ್ಲ’ ಎಂದು ನೀವು ಹೇಳಿದ್ದೀರಿ. |
17. ನಾನು ನಿಮ್ಮನ್ನು ನೋಡಿಕೊಳ್ಳುವುದಕ್ಕೆ ಕಾವಲುಗಾರರನ್ನು ನೇಮಿಸಿದೆ.
ನಾನು ಅವರಿಗೆ ‘ಯುದ್ಧದ ತುತ್ತೂರಿಯ ನಾದವನ್ನು ಕೇಳಿರಿ’ ಎಂದು ಹೇಳಿದೆ. ಆದರೆ ಅವರು ‘ನಾವು ಕೇಳುವುದಿಲ್ಲ’ ಅಂದರು. |
19. ಭೂಲೋಕದ ಜನರೇ, ಕೇಳಿರಿ,
ಆ ಜನರು ಮಾಡಿದ ಎಲ್ಲಾ ಕುಯುಕ್ತಿಗಳಿಗಾಗಿ ನಾನು ಯೆಹೂದ ಜನರಿಗೆ ವಿನಾಶವನ್ನು ತರುವೆನು. ಅವರು ನನ್ನ ಸಂದೇಶಗಳಿಗೆ ಗಮನ ಕೊಡದೆ ಇದ್ದುದರಿಂದ, ಅವರು ನನ್ನ ಧರ್ಮಶಾಸ್ತ್ರವನ್ನು ಅಸಡ್ಡೆ ಮಾಡಿದ್ದರಿಂದ ಇದೆಲ್ಲ ನಡೆಯುವುದು.” |
20. ಯೆಹೋವನು ಹೇಳುವುದೇನೆಂದರೆ, “ನೀವು ನನ್ನ ಸಲುವಾಗಿ ಶೆಬ ದೇಶದಿಂದ ಧೂಪವನ್ನು ಏಕೆ ತರುವಿರಿ?
ನೀವು ದೂರದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವದರಿಂದ ಪ್ರಯೋಜನವೇನು? ನಿಮ್ಮ ಹೋಮಗಳಿಂದ ನನಗೆ ಸಂತೋಷವಾಗುವದಿಲ್ಲ. ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.” |
21. “ನಾನು ಯೆಹೂದದ ಜನರೆದುರಿಗೆ ಸಮಸ್ಯೆಗಳನ್ನು ಒಡ್ಡುವೆನು.
ಅವುಗಳು ಜನರು ಎಡವಿಬೀಳುವ ಕಲ್ಲುಗಳಂತಾಗುವವು. ತಂದೆಗಳೂ ಮಕ್ಕಳೂ ಅವುಗಳಿಂದ ಎಡವಿಬೀಳುವರು. ಸ್ನೇಹಿತರು ಮತ್ತು ನೆರೆಹೊರೆಯವರು ಅವುಗಳಿಂದ ನಾಶವಾಗುವರು” ಅಂದನು. |
22. ಯೆಹೋವನು ಹೇಳುವುದೇನೆಂದರೆ:
“ಉತ್ತರ ದಿಕ್ಕಿನಿಂದ ಒಂದು ಸೈನ್ಯವು ಬರಲಿದೆ. ಭೂಮಿಯ ಬಹುದೂರದ ಸ್ಥಳಗಳಿಂದ ಒಂದು ಮಹಾಜನಾಂಗವು ಬರಲಿದೆ. |
23. ಆ ಸೈನಿಕರು ಬಿಲ್ಲುಗಳನ್ನು ಮತ್ತು ಈಟಿಗಳನ್ನು ಹಿಡಿದುಕೊಂಡಿದ್ದಾರೆ.
ಅವರು ಕ್ರೂರಿಗಳಾಗಿದ್ದಾರೆ. ಅವರು ನಿಷ್ಕರುಣಿಗಳಾಗಿದ್ದಾರೆ. ಅವರು ಬಲಶಾಲಿಗಳಾಗಿದ್ದಾರೆ. ಅವರು ತಮ್ಮ ಕುದುರೆ ಹತ್ತಿ ಬರುವಾಗ ಸಮುದ್ರದ ಗರ್ಜನೆಯಂತೆ ಶಬ್ದ ಕೇಳಿಬರುತ್ತದೆ. ಚೀಯೋನ್ ಕುಮಾರಿಯೇ, ಆ ಸೈನ್ಯವು ಯುದ್ಧಕ್ಕಾಗಿ ಬರುತ್ತಿದೆ. ಆ ಸೈನ್ಯವು ನಿನ್ನ ಮೇಲೆ ಧಾಳಿಮಾಡಲು ಬರುತ್ತಿದೆ.” |
24. ಆ ಸೈನ್ಯದ ಬಗ್ಗೆ ಸಮಾಚಾರವನ್ನು ನಾವು ಕೇಳಿದ್ದೇವೆ.
ಭಯದಿಂದ ನಾವು ಅಸಹಾಯಕರಾಗಿದ್ದೇವೆ. ಕಷ್ಟಗಳಲ್ಲಿ ನಾವು ಸಿಕ್ಕಿಹಾಕಿಕೊಂಡಿದ್ದೇವೆ. ಸ್ತ್ರೀಯರ ಪ್ರಸವವೇದನೆಯಂತಿರುವ ಯಾತನೆಯಿಂದ ನಾವು ಬಳಲುತ್ತಿದ್ದೇವೆ. |
25. ಊರ ಹೊರಗೆ ಹೋಗಬೇಡಿರಿ.
ರಸ್ತೆಗಳ ಮೇಲೆ ಹೋಗಬೇಡಿರಿ. ಏಕೆಂದರೆ ಶತ್ರುವಿನ ಕೈಯಲ್ಲಿ ಖಡ್ಗವಿದೆ. ಎಲ್ಲಾ ಕಡೆಗೂ ಅಪಾಯವಿದೆ. |
26. ಅಯ್ಯೋ ನನ್ನ ಜನರೇ,
ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಹೊರಳಾಡಿರಿ. ಸತ್ತವರಿಗಾಗಿ ದೊಡ್ಡ ಧ್ವನಿಯಲ್ಲಿ ರೋದಿಸಿರಿ. ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಬೋರ ಪ್ರಲಾಪ ಮಾಡಿರಿ. ವಿನಾಶಕನು ತಕ್ಷಣ ನಮ್ಮ ಮೇಲೆರಗುವನು. |
27. “ಯೆರೆಮೀಯನೇ, ನಾನು ನಿನ್ನನ್ನು
ಒಬ್ಬ ಲೋಹ ಪರೀಕ್ಷಕನನ್ನಾಗಿ ನೇಮಿಸಿದ್ದೇನೆ. ನೀನು ನನ್ನ ಜನರನ್ನು ಪರೀಕ್ಷಿಸು. ಅವರ ವ್ಯವಹಾರವನ್ನು ಅವಲೋಕಿಸು. |
28. ಅವರೆಲ್ಲರು ನನಗೆ ವಿರುದ್ಧವಾಗಿ ದಂಗೆ ಎದ್ದಿದ್ದಾರೆ;
ಅವರು ಬಹಳ ಹಟಮಾರಿಗಳಾಗಿದ್ದಾರೆ. ಅವರು ಜನರ ಬಗ್ಗೆ ಅಪಪ್ರಚಾರ ಮಾಡುತ್ತಾ ತಿರುಗಾಡುತ್ತಾರೆ. ಅವರು ಬಣ್ಣಗುಂದಿದ, ತುಕ್ಕುಹಿಡಿದ ಕಂಚಿನಂತೆಯೂ ಕಬ್ಬಿಣದಂತೆಯೂ ಇದ್ದಾರೆ. |
29. ಅವರನ್ನು ತಿದ್ದುವದು ಬೆಳ್ಳಿಯನ್ನು ಪವಿತ್ರಗೊಳಿಸಲು ಪ್ರಯತ್ನ ಮಾಡಿದ ಅಕ್ಕಸಾಲಿಗನಂತಾಗುವುದು. ತಿದಿಗಳು †ತಿದಿ ಬೆಂಕಿಗೆ ಗಾಳಿ ಬೀಸುವಂತೆ ಮಾಡುವ ಉಪಕರಣ. ಭರದಿಂದ ಬೀಸಲು ಬೆಂಕಿಯು ಧಗಧಗಿಸಿತು.
ಆದರೆ ಆ ಬೆಂಕಿಯಿಂದ ಕೇವಲ ಸೀಸವು ಹೊರಬಂದಿತು. ಬೆಳ್ಳಿಯನ್ನು ಶುದ್ಧೀಕರಿಸಲು ಮಾಡಿದ ಪ್ರಯತ್ನ ಕೇವಲ ವ್ಯರ್ಥವಾಯಿತು. ಅದರಂತೆಯೇ ನನ್ನ ಜನರಿಂದ ದುಷ್ಟತನವನ್ನು ತೆಗೆಯಲಾಗಲಿಲ್ಲ. |