1. ಯೆಹೋವನು ಹೀಗೆನ್ನುತ್ತಾನೆ: “ಆಗ ಜನರು ಯೆಹೂದದ ರಾಜರ ಮತ್ತು ಪ್ರಮುಖ ಅಧಿಪತಿಗಳ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು. ಅವರು ಯಾಜಕರ ಮತ್ತು ಪ್ರವಾದಿಗಳ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು. ಅವರು ಜೆರುಸಲೇಮಿನ ಎಲ್ಲಾ ಜನರ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು.
|
2. ಜೆರುಸಲೇಮಿನ ಜನರು ಸೂರ್ಯನನ್ನು, ಚಂದ್ರನನ್ನು, ನಕ್ಷತ್ರಗಣಗಳನ್ನು ಪ್ರೀತಿಸಿ, ಅನುಸರಿಸಿ, ವಿಚಾರಿಸಿ, ಪೂಜಿಸಿದ್ದರಿಂದ ಅವರ ಎಲುಬುಗಳನ್ನು ಅವುಗಳ ಕೆಳಗೆ ಭೂಮಿಯ ಮೇಲೆ ಹರಡುವರು. ಯಾರೊಬ್ಬರೂ ಆ ಎಲುಬುಗಳನ್ನು ಪುನಃ ಒಂದೆಡೆ ಸೇರಿಸಿ ಹೂಳುವುದಿಲ್ಲ. ಆ ಎಲುಬುಗಳು ಭೂಮಿಯ ಮೇಲೆ ಎಸೆದ ಸಗಣಿಯಂತಾಗುವವು. PEPS
|
3. “ಯೆಹೂದದ ಜನರು ತಮ್ಮ ಮನೆಗಳನ್ನು ಮತ್ತು ಪ್ರದೇಶವನ್ನು ಬಿಡುವಂತೆ ಮಾಡುತ್ತೇನೆ. ಆ ಜನರನ್ನು ಪರದೇಶಕ್ಕೆ ಒಯ್ಯಲಾಗುವುದು. ಯುದ್ಧದಲ್ಲಿ ಮರಣ ಹೊಂದದೆ ಅಳಿದುಳಿದ ಕೆಲವು ಮಂದಿ ಯೆಹೂದಿಯರು ತಾವು ಸತ್ತುಹೋಗಿದ್ದರೆ ಚೆನ್ನಾಗಿತ್ತು ಎಂದುಕೊಳ್ಳುವರು.” ಇದು ಯೆಹೋವನ ನುಡಿ. PS
|
4. {ಪಾಪ ಮತ್ತು ಶಿಕ್ಷೆ} PS “ಯೆರೆಮೀಯನೇ, ಯೆಹೂದದ ಜನರಿಗೆ ಹೀಗೆ ಹೇಳು: ‘ಯೆಹೋವನು ಈ ಮಾತನ್ನು ಹೇಳುತ್ತಾನೆ. “ ‘ಒಬ್ಬ ಮನುಷ್ಯನು ಕೆಳಗೆ ಬಿದ್ದರೆ
ಪುನಃ ಅವನು ಮೇಲಕ್ಕೆ ಏಳುತ್ತಾನೆ; ಒಬ್ಬ ಮನುಷ್ಯನು ತಪ್ಪುದಾರಿ ಹಿಡಿದರೆ ಅವನು ಹಿಂತಿರುಗಿ ಬರುತ್ತಾನೆಂಬುದು ನಿಮಗೆ ಗೊತ್ತು. |
5. ಯೆಹೂದದ ಜನರು ತಪ್ಪುದಾರಿಯನ್ನು ಹಿಡಿದಿದ್ದಾರೆ.
ಆದರೆ ಜೆರುಸಲೇಮಿನ ಜನರು ಆ ತಪ್ಪು ದಾರಿಯ ಮೇಲೆ ನಡೆಯುವದನ್ನು ಏಕೆ ಮುಂದುವರಿಸಿದ್ದಾರೆ? ತಮ್ಮ ಸುಳ್ಳುಗಳನ್ನೇ ಅವರು ನಂಬಿದ್ದಾರೆ, ಅವರು ಹಿಂತಿರುಗಿ ಬರಲು ಸಿದ್ಧರಿಲ್ಲ. |
6. ನಾನು ಎಚ್ಚರವಹಿಸಿ ಅವರು ಹೇಳುವದನ್ನು ಕೇಳಿದ್ದೇನೆ.
ಆದರೆ ಅವರು ಸರಿಯಾದುದನ್ನು ಹೇಳುವದಿಲ್ಲ. ತಾವು ಮಾಡಿದ ಪಾಪಕ್ಕಾಗಿ ಅವರು ಪಶ್ಚಾತ್ತಾಪಪಡುವದಿಲ್ಲ. ಅವರು ಮಾಡಿದ ದುಷ್ಕೃತ್ಯದ ಬಗ್ಗೆ ಅವರು ಯೋಚಿಸುವದಿಲ್ಲ. ಜನರು ವಿಚಾರ ಮಾಡದೆ ಕೆಲಸಮಾಡುತ್ತಾರೆ. ಅವರು ಯುದ್ಧದಲ್ಲಿ ಓಡುವ ಕುದುರೆಯಂತಿದ್ದಾರೆ. |
7. ಆಕಾಶದಲ್ಲಿ ಹಾರಾಡುವ ಬಕಪಕ್ಷಿಗಳಿಗೂ ಸಹ
ಆಯಾ ಕೆಲಸ ಮಾಡುವ ಸರಿಯಾದ ಸಮಯ ಗೊತ್ತಿದೆ. ಬೆಳವಕ್ಕಿಯೂ ಬಾನಕ್ಕಿಯೂ ಕೊಕ್ಕರೆಯೂ ಹೊಸ ಮನೆಗೆ ಹೋಗಬೇಕಾದ ಕಾಲವನ್ನು ಬಲ್ಲವು. ಆದರೆ ನನ್ನ ಜನರಿಗೆ ತಮ್ಮ ಯೆಹೋವನು ಅವರಿಂದ ಏನನ್ನು ಬಯಸುತ್ತಾನೆ ಎಂಬುದು ಗೊತ್ತಿಲ್ಲ. |
8. “ ‘ “ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿ ಇದೆ. ಆದ್ದರಿಂದ ನಾವು ಜ್ಞಾನಿಗಳು” ಎಂದು ನೀವು ಹೇಳುವಿರಿ.
ಆದರೆ ಅದು ನಿಜವಲ್ಲ. ಏಕೆಂದರೆ ಲಿಪಿಗಾರರು ತಮ್ಮ ಲೇಖನಿಯಿಂದ ಸುಳ್ಳು ಬರೆದಿದ್ದಾರೆ. |
9. ಆ “ಜ್ಞಾನಿಗಳು” ಯೆಹೋವನ ಉಪದೇಶವನ್ನು ಕೇಳಲು ಒಪ್ಪಲಿಲ್ಲ.
ಆದ್ದರಿಂದ ಅವರು ನಿಜವಾದ ಜ್ಞಾನಿಗಳಲ್ಲವೇ ಅಲ್ಲ. ಆ “ಜ್ಞಾನಿಗಳು” ಸಿಕ್ಕಿಹಾಕಿಕೊಂಡಿದ್ದಾರೆ. ಅವರು ಗಾಬರಿಪಟ್ಟಿದ್ದಾರೆ ಮತ್ತು ನಾಚಿಕೆಪಟ್ಟಿದ್ದಾರೆ. ಅವರ ಜ್ಞಾನವು ಅಪ್ರಯೋಜಕವಾಗಿದೆ. |
10. ಆದ್ದರಿಂದ ನಾನು ಅವರ ಹೆಂಡಂದಿರನ್ನು ಬೇರೆಯವರಿಗೆ ಕೊಡುತ್ತೇನೆ.
ನಾನು ಅವರ ಹೊಲಗಳನ್ನು ಬೇರೆಯವರಿಗೆ ಕೊಡುತ್ತೇನೆ. ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಸಾಮಾನ್ಯರನ್ನು ಮೊದಲುಗೊಂಡು ಅತ್ಯಂತ ಮುಖ್ಯರಾದವರೆಲ್ಲರೂ ಹೀಗೇ ಇದ್ದಾರೆ. ಪ್ರವಾದಿಗಳಿಂದ ಹಿಡಿದು ಯಾಜಕರವರೆಗೆ ಎಲ್ಲರೂ ಸುಳ್ಳು ಹೇಳುತ್ತಾರೆ. |
11. ಪ್ರವಾದಿಗಳು ಮತ್ತು ಯಾಜಕರು ನಮ್ಮ ಜನರ ಆಳವಾದ ಗಾಯಗಳನ್ನು
ಕೇವಲ ಅಲ್ಪಗಾಯಗಳಂತೆ ಪರಿಗಣಿಸಿ ಚಿಕಿತ್ಸೆ ಕೊಡುತ್ತಿದ್ದಾರೆ. “ಎಲ್ಲಾ ಚೆನ್ನಾಗಿದೆ, ಎಲ್ಲಾ ಚೆನ್ನಾಗಿದೆ” ಎಂದು ಅವರು ಹೇಳುತ್ತಾರೆ. ಆದರೆ ಎಲ್ಲಾ ಚೆನ್ನಾಗಿಲ್ಲ. |
12. ಅವರು ತಮ್ಮ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು.
ಆದರೆ ಅವರು ಸ್ವಲ್ಪವೂ ನಾಚಿಕೆಪಡುವುದಿಲ್ಲ. ಅವರಿಗೆ ನಾಚಿಕೆ ಎಂಬುದೇ ತಿಳಿದಿಲ್ಲ. ಆದ್ದರಿಂದ ಉಳಿದೆಲ್ಲರಂತೆ ಅವರಿಗೂ ಶಿಕ್ಷೆ ವಿಧಿಸಲಾಗುವುದು. ನಾನು ಅವರನ್ನು ಶಿಕ್ಷಿಸುವಾಗ ಅವರು ಮುಗ್ಗರಿಸಿ ಬೀಳುವರು.’ ” ಯೆಹೋವನ ನುಡಿಗಳಿವು. |
13. “ನಾನು ಅವರ ಹಣ್ಣುಗಳನ್ನೂ ಬೆಳೆಗಳನ್ನೂ ಕಿತ್ತುಕೊಂಡು
ಅವರಿಗೆ ಸುಗ್ಗಿಯಾಗದಂತೆ ಮಾಡುತ್ತೇನೆ.” ಇದು ಯೆಹೋವನ ನುಡಿ. ದ್ರಾಕ್ಷಿಬಳ್ಳಿಯಲ್ಲಿ ದ್ರಾಕ್ಷಿಗಳಿರುವದಿಲ್ಲ. ಅಂಜೂರದ ಮರದಲ್ಲಿ ಒಂದಾದರೂ ಅಂಜೂರದ ಹಣ್ಣು ಇರುವದಿಲ್ಲ. ಎಲೆಗಳು ಸಹ ಒಣಗಿ ಉದುರುವವು. ನಾನು ಅವರಿಗೆ ಕೊಟ್ಟ ವಸ್ತುಗಳನ್ನು ಕಿತ್ತುಕೊಳ್ಳುವೆನು. |
14. “ನಾವು ಇಲ್ಲಿ ಸುಮ್ಮನೆ ಕುಳಿತುಕೊಂಡಿರುವುದೇಕೆ?
ಬನ್ನಿ, ನಾವು ಭದ್ರವಾದ ಪಟ್ಟಣಗಳಿಗೆ ಓಡಿಹೋಗೋಣ. ನಮ್ಮ ದೇವರಾದ ಯೆಹೋವನು ನಮ್ಮನ್ನು ಸಾಯುವಂತೆ ಮಾಡಿದರೆ ಅಲ್ಲಿಯೇ ಸತ್ತುಹೋಗೋಣ. ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ. ಆದ್ದರಿಂದ ಆತನು ನಮಗೆ ಕುಡಿಯಲು ವಿಷಮಿಶ್ರಿತ ನೀರನ್ನು ಕೊಟ್ಟಿದ್ದಾನೆ. |
15. ನಾವು ಶಾಂತಿಯನ್ನು ನಿರೀಕ್ಷಿಸಿದ್ದೆವು.
ಆದರೆ ಒಳ್ಳೆಯದೇನೂ ಆಗಲಿಲ್ಲ. ಅವನು ನಮ್ಮನ್ನು ಗುಣಪಡಿಸುವ ಸಮಯಕ್ಕಾಗಿ ಕಾದುಕೊಂಡಿದ್ದೆವು. ಆದರೆ ಕೇವಲ ವಿನಾಶ ಮಾತ್ರ ಬಂದಿತು. |
16. ದಾನ್ಕುಲದವರ ಪ್ರದೇಶದಿಂದ
ನಾವು ಶತ್ರುಗಳ ಕುದುರೆಗಳ ಕೆನೆತವನ್ನು ಕೇಳುತ್ತಿದ್ದೇವೆ. ಅವುಗಳ ಪಾದಗಳ ಬಡಿತದಿಂದ ಭೂಮಿ ನಡುಗುತ್ತಿದೆ. ಅವರು ನಮ್ಮ ಪ್ರದೇಶವನ್ನು ಮತ್ತು ಅಲ್ಲಿದ್ದ ಎಲ್ಲವನ್ನು ಹಾಳುಮಾಡಲು ಬಂದಿದ್ದಾರೆ. ಅವರು ನಗರವನ್ನು ಮತ್ತು ಅಲ್ಲಿದ್ದ ಎಲ್ಲಾ ಜನರನ್ನು ಹಾಳುಮಾಡಲು ಬಂದಿದ್ದಾರೆ. |
17. “ಯೆಹೂದದ ಜನರೇ, ನಿಮ್ಮನ್ನು ಕಚ್ಚುವದಕ್ಕಾಗಿ ವಿಷಪೂರಿತ ಹಾವುಗಳನ್ನು ಕಳಿಸುತ್ತಿದ್ದೇನೆ.
ಆ ಹಾವುಗಳನ್ನು ತಡೆಯಲಾಗದು. ಅವುಗಳು ನಿಮ್ಮನ್ನು ಕಚ್ಚುವವು.” ಇದು ಯೆಹೋವನ ನುಡಿ. |
19. ನನ್ನ ಜನರ ಮೊರೆಯನ್ನು ಆಲಿಸು.
ದೇಶದ ಎಲ್ಲೆಡೆಯಲ್ಲಿಯೂ ಅವರು ಸಹಾಯಕ್ಕಾಗಿ ಕೂಗುತ್ತಿದ್ದಾರೆ. “ಈಗಲೂ ಯೆಹೋವನು ಚೀಯೋನಿನಲ್ಲಿದ್ದಾನೆಯೇ? ಚೀಯೋನಿನ ರಾಜನು ಈಗಲೂ ಅಲ್ಲಿದ್ದಾನೆಯೇ?” ಎಂದು ಅವರು ಕೇಳುತ್ತಾರೆ. ದೇವರು ಹೀಗೆನ್ನುತ್ತಾನೆ: “ಯೆಹೂದದ ಜನರು ತಮ್ಮ ವಿಗ್ರಹಗಳನ್ನು ಪೂಜಿಸಿ ನನ್ನ ಕೋಪವನ್ನು ಏಕೆ ಕೆರಳಿಸುತ್ತಾರೆ? ಅವರು ನಿಷ್ಪ್ರಯೋಜಕವಾದ ಅನ್ಯದೇವರ ವಿಗ್ರಹಗಳನ್ನು ಪೂಜಿಸಿದರು.” |
21. ನನ್ನ ಜನರು ಗಾಯಗೊಂಡಿದ್ದಾರೆ. ಆದ್ದರಿಂದ ನಾನೂ ಗಾಯಗೊಂಡಿದ್ದೇನೆ.
ಈಗ ಗಾಯಗೊಂಡ ಜನರ ಬಗ್ಗೆ ಯೋಚಿಸುತ್ತ ನಾನು ದುಃಖದಿಂದ ಮೌನವಾಗಿದ್ದೇನೆ. |
22. ಗಿಲ್ಯಾದಿನಲ್ಲಿ ಖಂಡಿತವಾಗಿಯೂ ಔಷಧವಿದೆ.
ಖಂಡಿತವಾಗಿಯೂ ಅಲ್ಲಿ ಒಬ್ಬ ವೈದ್ಯನಿದ್ದಾನೆ. ಆದರೆ ನನ್ನ ಜನರ ಗಾಯಗಳು ಗುಣವಾಗಲಿಲ್ಲವೇಕೆ? PE |