1. ನನ್ನ ತಲೆಯಲ್ಲೆಲ್ಲ ನೀರು ತುಂಬಿಕೊಂಡಿದ್ದು, [QBR2] ನನ್ನ ಕಣ್ಣುಗಳು ನೀರಿನ ಬುಗ್ಗೆಗಳಾಗಿದ್ದರೆ, [QBR2] ನಾಶಮಾಡಲ್ಪಟ್ಟ ನನ್ನ ಜನರಿಗಾಗಿ ಹಗಲಿರುಳು ಗೋಳಾಡುತ್ತಿದ್ದೆ.
2. ಮರಳುಗಾಡಿನಲ್ಲಿ ನನಗೊಂದು ಸ್ಥಳವಿದ್ದಿದ್ದರೆ, [QBR2] ಪ್ರಯಾಣಿಕರು ರಾತ್ರಿಯಲ್ಲಿ ತಂಗುವ ಮನೆ ಇದ್ದಿದ್ದರೆ, [QBR] ನಾನು ನನ್ನ ಜನರನ್ನು ಅಲ್ಲಿ ಬಿಟ್ಟು, [QBR2] ಅವರಿಂದ ದೂರ ಹೋಗಬಹುದಾಗಿತ್ತು. [QBR] ಏಕೆಂದರೆ ಅವರೆಲ್ಲರೂ ದೇವರಿಗೆ ದ್ರೋಹ ಮಾಡುತ್ತಿದ್ದಾರೆ, [QBR2] ಅವರೆಲ್ಲರೂ ಆತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.
3. “ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಉಪಯೋಗಿಸುತ್ತಿದ್ದಾರೆ. [QBR2] ಅವರ ಬಾಯಿಂದ ಬಾಣಗಳಂತೆ ಸುಳ್ಳುಗಳು ಬರುತ್ತಿವೆ. [QBR] ಈ ನಾಡಿನಲ್ಲಿ ಸತ್ಯವಲ್ಲ, ‘ಅಸತ್ಯ’ ಪ್ರಬಲವಾಗುತ್ತಿದೆ. [QBR] ಅವರು ಒಂದು ಪಾಪದಿಂದ ಮತ್ತೊಂದು ಪಾಪಕ್ಕೆ ಹೋಗುತ್ತಿದ್ದಾರೆ. [QBR2] ಅವರು ನನ್ನನ್ನು ಅರಿತಿಲ್ಲ.” [QBR] ಯೆಹೋವನು ಈ ಮಾತನ್ನು ಹೇಳಿದನು.
4. “ನಿಮ್ಮ ನೆರೆಮನೆಯವರ ಬಗ್ಗೆ ಎಚ್ಚರವಹಿಸಿರಿ; [QBR2] ನಿಮ್ಮ ಸ್ವಂತ ಸಹೋದರನನ್ನೂ ನಂಬಬೇಡಿ. [QBR] ಏಕೆಂದರೆ ಪ್ರತಿಯೊಬ್ಬ ಸಹೋದರನೂ ಮೋಸಗಾರನಾಗಿದ್ದಾನೆ. [QBR2] ಪ್ರತಿಯೊಬ್ಬ ನೆರೆಯವನೂ ನಿಮ್ಮ ಮರೆಯಲ್ಲಿ ನಿಮ್ಮನ್ನು ನಿಂದಿಸುತ್ತಾನೆ. [QBR]
5. ಪ್ರತಿಯೊಬ್ಬನೂ ತನ್ನ ನೆರೆಯವನಿಗೆ ಸುಳ್ಳು ಹೇಳುತ್ತಾನೆ. [QBR2] ಒಬ್ಬನೂ ಸತ್ಯವನ್ನು ನುಡಿಯುವದಿಲ್ಲ. [QBR] ಯೆಹೂದದ ಜನರು ತಮ್ಮ ನಾಲಿಗೆಗಳಿಗೆ [QBR2] ಸುಳ್ಳು ಹೇಳುವದನ್ನು ಕಲಿಸಿದ್ದಾರೆ. [QBR] ಅವರು ಹಿಂತಿರುಗಿ ಬರಲು [QBR2] ಆಯಾಸವಾಗುವಷ್ಟು ಪಾಪಗಳನ್ನು ಮಾಡಿದ್ದಾರೆ. [QBR]
6. ಒಂದು ದುಷ್ಕೃತ್ಯ ಮತ್ತೊಂದು ದುಷ್ಕೃತ್ಯವನ್ನು ಹಿಂಬಾಲಿಸಿ ಬಂದಿತು. [QBR2] ಒಂದು ಸುಳ್ಳು ಇನ್ನೊಂದು ಸುಳ್ಳನ್ನು ಹಿಂಬಾಲಿಸಿತು. [QBR2] ಜನರು ನನ್ನನ್ನು ಅರಿತುಕೊಳ್ಳಲಿಲ್ಲ.” [QBR] ಯೆಹೋವನು ಆ ಮಾತುಗಳನ್ನು ಹೇಳಿದನು.
7. ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: [QBR] “ಜನರು ಲೋಹವನ್ನು ಪುಟಕ್ಕಿಟ್ಟು ಪರೀಕ್ಷಿಸುವಂತೆ [QBR] ನಾನು ಯೆಹೂದದ ಜನರನ್ನು ಪರೀಕ್ಷಿಸುತ್ತೇನೆ. [QBR2] ನನಗೆ ಬೇರೆ ಮಾರ್ಗವೇ ಇಲ್ಲ. [QBR2] ನನ್ನ ಜನರು ಪಾಪವನ್ನು ಮಾಡಿದ್ದಾರೆ. [QBR]
8. ಯೆಹೂದದ ಜನರ ನಾಲಿಗೆಗಳು ಚೂಪಾದ ಬಾಣಗಳಂತಿವೆ. [QBR2] ಅವರ ಬಾಯಿಗಳು ಸುಳ್ಳಾಡುತ್ತವೆ. [QBR] ಪ್ರತಿಯೊಬ್ಬನು ತನ್ನ ನೆರೆಮನೆಯವನೊಂದಿಗೆ ನಯವಾಗಿ ಮಾತನಾಡುತ್ತಾನೆ. [QBR2] ರಹಸ್ಯವಾಗಿ ತನ್ನ ನೆರೆಮನೆಯವನನ್ನು ಆಕ್ರಮಣಮಾಡಲು ಯುಕ್ತಿ ಮಾಡುತ್ತಿರುತ್ತಾನೆ. [QBR]
9. ಹೀಗಿರಲು ನಾನು ಯೆಹೂದದ ಜನರನ್ನು ಶಿಕ್ಷಿಸಬಾರದೇ?” [QBR] ಇದು ದೇವರಿಂದ ಬಂದ ಮಾತು. [QBR] “ಅಂಥಾ ಜನರನ್ನು ನಾನು ಶಿಕ್ಷಿಸಬೇಕೆಂಬುದು ನಿನಗೆ ಗೊತ್ತು. [QBR2] ಅವರಿಗೆ ತಕ್ಕ ಶಿಕ್ಷೆಯನ್ನು ನಾನು ಕೊಡಬೇಕು.”
10. ನಾನು ಪರ್ವತಗಳಿಗಾಗಿ ಗಟ್ಟಿಯಾಗಿ ಅಳುವೆನು; [QBR2] ಬರಿದಾದ ಹೊಲಗಳಿಗಾಗಿ ಶೋಕಗೀತೆಯನ್ನು ಹಾಡುವೆನು. [QBR2] ಏಕೆಂದರೆ ಅಲ್ಲಿ ಸಜೀವ ವಸ್ತುಗಳಿಲ್ಲ. [QBR] ಯಾರೂ ಅಲ್ಲಿ ತಿರುಗಾಡುವದಿಲ್ಲ. [QBR2] ಆ ಸ್ಥಳಗಳಲ್ಲಿ ದನಗಳ ಸದ್ದು ಕೇಳಿಸುವದಿಲ್ಲ. [QBR] ಪಕ್ಷಿಗಳು ಹಾರಿಹೋಗಿವೆ; [QBR2] ಪ್ರಾಣಿಗಳು ಓಡಿಹೋಗಿವೆ.
11. “ನಾನು (ಯೆಹೋವನು) ಜೆರುಸಲೇಮ್ ನಗರವನ್ನು ಕಸದ ರಾಶಿಯನ್ನಾಗಿ ಮಾಡುವೆನು. [QBR2] ಅದು ನರಿಗಳ ನಿವಾಸವಾಗುವದು. [QBR] ನಾನು ಯೆಹೂದ ಪ್ರಾಂತದ ನಗರಗಳನ್ನು ನಾಶಮಾಡುವೆನು. [QBR2] ಅಲ್ಲಿ ಒಬ್ಬರೂ ವಾಸಮಾಡಲಾರರು.”
12. ಈ ಭೂಮಿಯನ್ನು ಏಕೆ ಹಾಳು ಮಾಡಲಾಯಿತು? [QBR2] ಇದನ್ನು ಯಾರೂ ಹೋಗದ ಬರಿದಾದ ಮರಳುಗಾಡನ್ನಾಗಿ ಏಕೆ ಮಾಡಲಾಯಿತು? [QBR] ಇದನ್ನರಿತ ಜ್ಞಾನಿಯೊಬ್ಬನಿದ್ದಾನೆಯೇ? [QBR2] ಯೆಹೋವನಿಂದ ತಿಳಿದುಕೊಂಡ ಜ್ಞಾನಿಯೊಬ್ಬನಿದ್ದಾನೆಯೇ? [QBR2] ಯೆಹೋವನ ಸಂದೇಶವನ್ನು ವಿವರಿಸಬಲ್ಲವನೊಬ್ಬನಿದ್ದಾನೆಯೇ?
13. ಯೆಹೋವನು ಈ ಪ್ರಶ್ನೆಗಳಿಗೆ ಉತ್ತರಕೊಟ್ಟನು: [QBR] “ಏಕೆಂದರೆ ಯೆಹೂದದ ಜನರು ನನ್ನ ಉಪದೇಶವನ್ನು ಅನುಸರಿಸಲಿಲ್ಲ. [QBR] ನಾನು ಅವರಿಗೆ ಧರ್ಮೋಪದೇಶವನ್ನು ಕೊಟ್ಟರೂ [QBR2] ಅವರು ನನ್ನ ಮಾತನ್ನು ಕೇಳಲು ಒಪ್ಪಲಿಲ್ಲ. [QBR2] ಅವರು ನನ್ನ ಧರ್ಮೋಪದೇಶಗಳನ್ನು ಅನುಸರಿಸಲಿಲ್ಲ. [QBR]
14. ಯೆಹೂದದ ಜನರು ತಮ್ಮದೇ ಆದ ರೀತಿಯಲ್ಲಿ ಜೀವಿಸಿದರು. [QBR2] ಅವರು ಹಟಮಾರಿಗಳಾಗಿದ್ದರು. [QBR] ಅವರು ಸುಳ್ಳುದೇವರಾದ ಬಾಳನನ್ನು ಅನುಸರಿಸಿದರು. [QBR2] ಅವರ ಪೂರ್ವಿಕರು ಸುಳ್ಳುದೇವರುಗಳ ಸೇವೆ ಮಾಡುವದನ್ನು ಅವರಿಗೆ ಕಲಿಸಿದರು.”
15. ಇಸ್ರೇಲಿನ ದೇವರಾದ ಸರ್ವಶಕ್ತನಾದ ಯೆಹೋವನ ಸಂದೇಶವಿದು: [QBR] “ಯೆಹೂದದ ಜನರು ಕಹಿಯಾದ ಆಹಾರವನ್ನು ತಿನ್ನುವಂತೆ ನಾನು ಬೇಗನೆ ಮಾಡುವೆನು; [QBR2] ಅವರು ವಿಷಮಿಶ್ರಿತ ನೀರನ್ನು ಕುಡಿಯುವಂತೆ ಮಾಡುವೆನು. [QBR]
16. ನಾನು ಯೆಹೂದದ ಜನರನ್ನು ಬೇರೆ ಜನಾಂಗಗಳಲ್ಲಿ ಚದರಿಸಿಬಿಡುತ್ತೇನೆ. [QBR] ಅವರು ಮತ್ತು ಅವರ ತಂದೆಗಳು ಎಂದೂ ಅರಿಯದ [QBR2] ಅಪರಿಚಿತ ದೇಶಗಳಲ್ಲಿ ಅವರು ವಾಸಿಸುವರು. [QBR] ನಾನು ಖಡ್ಗಧಾರಿಗಳಾದ ಜನರನ್ನು ಕಳುಹಿಸುತ್ತೇನೆ. [QBR2] ಅವರು ಯೆಹೂದದ ಜನರನ್ನು ನಿರ್ಮೂಲವಾಗುವವರೆಗೆ ಕೊಲ್ಲುವರು.”
17. ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: [QBR] “ಈಗ ಈ ವಿಷಯಗಳ ಬಗ್ಗೆ ವಿಚಾರ ಮಾಡಿರಿ, [QBR2] ಶವಸಂಸ್ಕಾರದ ಸಮಯದಲ್ಲಿ ಕೂಲಿ ಪಡೆದು ಅಳುವ ಹೆಂಗಸರನ್ನು ಕರೆಯಿಸಿರಿ. [QBR]
18. ‘ಆ ಹೆಂಗಸರು, ಬೇಗನೆ ಬಂದು ನಮಗಾಗಿ ಗೋಳಾಡಲಿ. [QBR] ಆಗ ನಮ್ಮ ಕಣ್ಣುಗಳು ಕಣ್ಣೀರಿನಿಂದ ತುಂಬುವವು; [QBR2] ನಮ್ಮ ಕಣ್ಣುಗಳಿಂದ ನೀರಿನ ಪ್ರವಾಹಗಳು ಹರಿಯುವವು’ ಎನ್ನುವರು.
19. “ಚೀಯೋನಿನಿಂದ ಮಹಾ ಗೋಳಾಟವು ಕೇಳಿಸುತ್ತಿದೆ: [QBR2] ‘ನಿಜವಾಗಿಯೂ ನಾವು ಹಾಳಾಗಿಹೋದೆವು. [QBR2] ನಿಜವಾಗಿಯೂ ನಾವು ನಾಚಿಕೆಪಡುವಂತಾಗಿದೆ. [QBR] ನಾವು ನಮ್ಮ ನಾಡನ್ನು ಬಿಡಬೇಕು, [QBR2] ಏಕೆಂದರೆ ನಮ್ಮ ಮನೆಗಳನ್ನು ನಾಶಪಡಿಸಲಾಗಿದೆ.’ ”
20. ಯೆಹೂದದ ಸ್ತ್ರೀಯರೇ, ಯೆಹೋವನ ಸಂದೇಶವನ್ನು ಕೇಳಿರಿ. [QBR2] ಯೆಹೋವನ ಬಾಯಿಂದ ಬರುವ ಮಾತುಗಳನ್ನು ಕೇಳಲು ನಿಮ್ಮ ಕಿವಿಗಳನ್ನು ತೆರೆಯಿರಿ. [QBR] ಯೆಹೋವನು ಹೇಳುತ್ತಾನೆ, “ಹೇಗೆ ದೊಡ್ಡ ಧ್ವನಿಯಲ್ಲಿ ಅಳಬೇಕೆಂಬುದನ್ನು ನಿಮ್ಮ ಹೆಣ್ಣುಮಕ್ಕಳಿಗೆ ಕಲಿಸಿಕೊಡಿ. [QBR2] ಪ್ರತಿಯೊಬ್ಬ ಸ್ತ್ರೀಯು ಈ ಶೋಕಗೀತೆಯನ್ನು ಹಾಡಲು ಕಲಿಯಬೇಕು. [QBR]
21. ಮೃತ್ಯುವು ಬಂದು ನಮ್ಮ ಕಿಟಕಿಗಳಿಂದ ಇಳಿದಿದೆ. [QBR2] ಮೃತ್ಯುವು ನಮ್ಮ ಅರಮನೆಗಳಲ್ಲಿ ಪ್ರವೇಶ ಮಾಡಿದೆ. [QBR] ಬೀದಿಯಲ್ಲಿ ಆಡುವ ನಮ್ಮ ಮಕ್ಕಳಿಗೆ ಮೃತ್ಯುವು ಹಿಡಿದುಕೊಂಡಿದೆ. [QBR2] ಸಾರ್ವಜನಿಕ ಸ್ಥಳಗಳಲ್ಲಿ ಸೇರುವ ನಮ್ಮ ಯುವಕರಿಗೆ ಮೃತ್ಯುವು ಹಿಡಿದುಕೊಂಡಿದೆ.”
22. ಯೆರೆಮೀಯನೇ, ಯೆಹೋವನು ಹೀಗೆ ಹೇಳುತ್ತಾನೆಂದು ಹೇಳು: [QBR] “ ‘ಹೊಲಗಳಲ್ಲಿ ಗೊಬ್ಬರ ಬಿದ್ದಂತೆ ಹೆಣಗಳು ಬೀಳುವವು. [QBR2] ಆ ಶವಗಳು ಹೊಲ ಕೊಯ್ಯುವವನ ಹಿಂದೆ [QBR2] ಯಾರೂ ಎತ್ತದೆ ಬಿದ್ದಿರುವ ಮೆದೆಗಳಂತೆ ಬಿದ್ದಿರುವವು.’ ”
23. ಯೆಹೋವನು ಹೇಳುತ್ತಾನೆ, [QBR] “ಜ್ಞಾನಿಗಳು ತಮ್ಮ ಜ್ಞಾನದ ಬಗ್ಗೆ [QBR2] ಜಂಬಕೊಚ್ಚಿಕೊಳ್ಳಬಾರದು. [QBR] ಬಲಶಾಲಿಗಳು ತಮ್ಮ ಬಲದ ಬಗ್ಗೆ [QBR2] ಬಡಾಯಿಕೊಚ್ಚಿಕೊಳ್ಳಬಾರದು. [QBR] ಶ್ರೀಮಂತರು ತಮ್ಮ ಸಂಪತ್ತಿನ ಬಗ್ಗೆ [QBR2] ಜಂಬಕೊಚ್ಚಿಕೊಳ್ಳಬಾರದು. [QBR]
24. ಯಾವನಾದರೂ ಜಂಬಕೊಚ್ಚಿಕೊಳ್ಳಬೇಕಾದರೆ, ಅವನು ನನ್ನನ್ನು ಅರಿತಿರುವುದಾಗಿಯೂ [QBR2] ನನ್ನನ್ನು ತಿಳಿದುಕೊಂಡಿರುವುದಾಗಿಯೂ ಜಂಬಪಡಲಿ. [QBR] ನಾನೇ ಯೆಹೋವನೆಂದು ತಿಳಿದುಕೊಂಡಿರುವುದಕ್ಕಾಗಿ ಅವನು ಜಂಬಪಡಲಿ. [QBR2] ನಾನು ದಯಾವಂತನೂ ನ್ಯಾಯವಂತನೂ ಆಗಿರುವೆ, [QBR2] ನಾನು ಭೂಲೋಕದಲ್ಲಿ ಒಳ್ಳೆಯದನ್ನು ಮಾಡುತ್ತೇನೆ ಎಂದು ತಿಳಿದುಕೊಂಡಿರುವವನು ಹೆಮ್ಮೆಪಡಲಿ. [QBR2] ಆಗ ನನಗೆ ಸಂತೋಷವಾಗುವುದು.” [QBR] ಇದು ಯೆಹೋವನ ನುಡಿ. [PS]
25. “ಕೇವಲ ದೈಹಿಕವಾಗಿ ಸುನ್ನತಿಯನ್ನು ಮಾಡಿಕೊಂಡ ಜನರನ್ನು ನಾನು ಶಿಕ್ಷಿಸುವ ಕಾಲ ಬರಲಿದೆ.
26. ನಾನು ಈಜಿಪ್ಟ್, ಯೆಹೂದ, ಎದೋಮ್, ಅಮ್ಮೋನ್, ಮೋವಾಬ್ ಜನಾಂಗಗಳ ಜನರ ಬಗ್ಗೆ ಮತ್ತು ಮರಳು ಪ್ರದೇಶದಲ್ಲಿ ವಾಸಮಾಡುತ್ತಿರುವ ಎಲ್ಲಾ ಜನಗಳ ಬಗ್ಗೆ ಮಾತನಾಡುತ್ತಿದ್ದೇನೆ. ಈ ಎಲ್ಲಾ ದೇಶಗಳ ಜನರಿಗೆ ದೈಹಿಕವಾಗಿ ಸುನ್ನತಿ ಆಗಿದ್ದಿಲ್ಲ. ಆದರೆ ಇಸ್ರೇಲ್ ವಂಶದವರು ಹೃದಯ ಸುನ್ನತಿಯಿಲ್ಲದವರು” ಎಂದು ಯೆಹೋವನು ಅನ್ನುತ್ತಾನೆ. [PE]