2. “ಯೋಬನೇ, ನೀನು ನಿಜವಾಗಿಯೂ ಜ್ಞಾನಿಯಾಗಿದ್ದರೆ, ಬರಿದಾದ ನಿನ್ನ ವೈಯಕ್ತಿಕ ಮಾತುಗಳಿಂದ ಉತ್ತರಿಸುವುದಿಲ್ಲ. ಜ್ಞಾನಿಯು ಬಿಸಿಗಾಳಿಯಂತೆ ಉತ್ತರಿಸುವನೇ?
|
4. ನೀನು ನಿನ್ನ ಮಾರ್ಗದಲ್ಲಿ ಹೋಗುವುದಾದರೆ, ದೇವರಲ್ಲಿ ಯಾರೂ ಭಯಭಕ್ತಿಯಿಡುವುದಿಲ್ಲ; ಆತನಿಗೆ ಯಾರೂ ಪ್ರಾರ್ಥಿಸುವುದಿಲ್ಲ.
|
6. ನೀನು ತಪ್ಪಿತಸ್ಥನೆಂದು ನಾನು ನಿರೂಪಿಸುವ ಅಗತ್ಯವಿಲ್ಲ. ಯಾಕಂದರೆ ನಿನ್ನ ಬಾಯ ಮಾತುಗಳೇ ನಿನ್ನನ್ನು ತಪ್ಪಿತಸ್ಥನೆಂದು ತೋರಿಸುತ್ತವೆ. ನಿನ್ನ ಸ್ವಂತ ತುಟಿಗಳೇ ನಿನಗೆ ವಿರುದ್ಧವಾಗಿ ಸಾಕ್ಷಿಕೊಡುತ್ತವೆ.
|
7. “ಯೋಬನೇ, ಎಲ್ಲರಿಗಿಂತ ಮೊದಲು ನೀನೇ ಹುಟ್ಟಿರುವುದಾಗಿ ಭಾವಿಸಿಕೊಂಡಿರುವಿಯಾ? ಬೆಟ್ಟಗಳಿಗಿಂತ ಮೊದಲೇ ನೀನು ಹುಟ್ಟಿದಿಯಾ?
|
14. “ಮನುಷ್ಯನು ಎಷ್ಟರವನು? ಅವನು ಪರಿಶುದ್ಧನಾಗಿರಲು ಸಾಧ್ಯವೇ? ಸ್ತ್ರೀಯಲ್ಲಿ ಹುಟ್ಟಿದವನು ನೀತಿವಂತನಾಗಿರಲು ಸಾಧ್ಯವೇ?
|
18. ಜ್ಞಾನಿಗಳು ನನಗೆ ತಿಳಿಸಿದ ಸಂಗತಿಗಳನ್ನು ನಾನು ನಿನಗೆ ಹೇಳುವೆನು. ಆ ಜ್ಞಾನಿಗಳಿಗೆ ಅವರ ಪೂರ್ವಿಕರೇ ಈ ಸಂಗತಿಗಳನ್ನು ತಿಳಿಸಿದ್ದಾರೆ. ಅವರು ಯಾವ ರಹಸ್ಯಗಳನ್ನೂ ನನಗೆ ಮರೆಮಾಡಲಿಲ್ಲ.
|
20. ದುಷ್ಟನು ತನ್ನ ಜೀವಮಾನವೆಲ್ಲಾ ಯಾತನೆಯನ್ನು ಅನುಭವಿಸುವನು. ಕ್ರೂರಿಯು ತನಗೆ ನೇಮಕಗೊಂಡಿರುವ ವರ್ಷಗಳಲ್ಲೆಲ್ಲಾ ಕಷ್ಟಪಡುವನು.
|
21. ಭೀಕರವಾದ ಶಬ್ದಗಳು ಅವನ ಕಿವಿಗಳಲ್ಲೇ ಇರುತ್ತವೆ. ತಾನು ಸುರಕ್ಷಿತನಾಗಿರುವುದಾಗಿ ಅವನು ಯೋಚಿಸುವಾಗಲೇ ವೈರಿಯು ಅವನ ಮೇಲೆ ಆಕ್ರಮಣಮಾಡುವನು.
|
22. ದುಷ್ಟನಿಗೆ ಕತ್ತಲೆಯಿಂದ ಪಾರಾಗುತ್ತೇನೆ ಎಂಬ ನಿರೀಕ್ಷೆಯೇ ಇಲ್ಲ. ಅವನನ್ನು ಕೊಲ್ಲಲು ಕತ್ತಿಯು ಎಲ್ಲೋ ಕಾದುಕೊಂಡಿದೆ.
|
23. ಅವನು ಅತ್ತಿತ್ತ ಅಲೆದಾಡುವನು; ಅವನ ದೇಹವು ರಣಹದ್ದುಗಳಿಗೆ ಆಹಾರವಾಗುವುದು. ಮರಣವು ತನಗೆ ಬಹು ಸಮೀಪವಾಗಿರುವುದು ಅವನಿಗೆ ಗೊತ್ತೇ ಇದೆ.
|
24. ಚಿಂತೆಸಂಕಟಗಳು ಅವನನ್ನು ಭಯಗೊಳಿಸುತ್ತವೆ. ಅವನನ್ನು ನಾಶಮಾಡಲು ಸಿದ್ಧನಾಗಿರುವ ರಾಜನಂತೆ ಅವು ಅವನ ಮೇಲೆ ಆಕ್ರಮಣಮಾಡುತ್ತವೆ.
|
25. ಯಾಕಂದರೆ ದುಷ್ಟನು ದೇವರಿಗೆ ವಿರುದ್ಧವಾಗಿ ತನ್ನ ಕೈಯನ್ನು ಝಳಪಿಸುತ್ತಾನೆ. ದುಷ್ಟನು ಸರ್ವಶಕ್ತನಾದ ದೇವರ ವಿರುದ್ಧವಾಗಿ ಮಹಾಶೂರನಂತೆ ಆಕ್ರಮಣ ಮಾಡುವನು.
|
29. ದುಷ್ಟನು ಬಹುಕಾಲದವರೆಗೆ ಐಶ್ವರ್ಯವಂತನಾಗಿರಲು ಸಾಧ್ಯವಿಲ್ಲ. ಅವನ ಐಶ್ವರ್ಯವು ಶಾಶ್ವತವಲ್ಲ; ಅವನ ಆಸ್ತಿಗಳು ದೇಶದಲ್ಲಿ ವೃದ್ಧಿಯಾಗುವುದಿಲ್ಲ.
|
30. ದುಷ್ಟನು ಕತ್ತಲೆಯೊಳಗಿಂದ ತಪ್ಪಿಸಿಕೊಳ್ಳುವುದಿಲ್ಲ. ಬೆಂಕಿಯಿಂದ ಸುಟ್ಟುಹೋದ ಕೊಂಬೆಗಳನ್ನು ಹೊಂದಿರುವ ಮರದಂತೆ ಅವನಿರುವನು. ದೇವರ ಉಸಿರು ದುಷ್ಟನನ್ನು ಬಡಿದುಕೊಂಡು ಹೋಗುವುದು.
|
31. ದುಷ್ಟನು ಅಯೋಗ್ಯವಾದವುಗಳ ಮೇಲೆ ನಂಬಿಕೆಯಿಟ್ಟು, ತನ್ನನ್ನು ತಾನೇ ಮೋಸಮಾಡಿಕೊಳ್ಳದಿರಲಿ. ಯಾಕಂದರೆ ಅದಕ್ಕೆ ಪ್ರತಿಫಲವಾಗಿ ಅವನಿಗೇನೂ ದೊರೆಯುವುದಿಲ್ಲ.
|
32. ದುಷ್ಟನು ತನ್ನ ಜೀವಿತ ಮುಗಿಯುವುದಕ್ಕಿಂತ ಮೊದಲೇ ಮುದುಕನಾಗುವನು; ಒಣಗಿಹೋಗಿ ಇನ್ನೆಂದಿಗೂ ಹಸುರಾಗದ ಬಳ್ಳಿಯಂತಾಗುವನು;
|
33. ಮಾಗುವುದಕ್ಕಿಂತ ಮೊದಲೇ ತನ್ನ ದ್ರಾಕ್ಷಿಯನ್ನು ಕಳೆದುಕೊಳ್ಳುವ ದ್ರಾಕ್ಷಿ ಬಳ್ಳಿಯಂತಿರುವನು; ಹೂವುಗಳು ಉದುರಿ ಹೋದ ಆಲಿವ್ ಮರದಂತಿರುವನು.
|