1. {ಯೋಬನಿಗೆ ಎಲೀಫಜನ ಉತ್ತರ} [PS] ಬಳಿಕ ತೇಮಾನಿನ ಎಲೀಫಜನು ಯೋಬನಿಗೆ ಉತ್ತರಿಸಿದನು:
2. “ಯೋಬನೇ, ನೀನು ನಿಜವಾಗಿಯೂ ಜ್ಞಾನಿಯಾಗಿದ್ದರೆ, [QBR2] ಬರಿದಾದ ನಿನ್ನ ವೈಯಕ್ತಿಕ ಮಾತುಗಳಿಂದ ಉತ್ತರಿಸುವುದಿಲ್ಲ. [QBR2] ಜ್ಞಾನಿಯು ಬಿಸಿಗಾಳಿಯಂತೆ ಉತ್ತರಿಸುವನೇ? [QBR]
3. ಜ್ಞಾನಿಯು ನಿಷ್ಪ್ರಯೋಜಕವಾದ ಮಾತುಗಳಿಂದ ವಾದಿಸುತ್ತಾನೆಂದು [QBR2] ಭಾವಿಸಿಕೊಂಡಿರುವೆಯಾ? [QBR]
4. ನೀನು ನಿನ್ನ ಮಾರ್ಗದಲ್ಲಿ ಹೋಗುವುದಾದರೆ, [QBR2] ದೇವರಲ್ಲಿ ಯಾರೂ ಭಯಭಕ್ತಿಯಿಡುವುದಿಲ್ಲ; ಆತನಿಗೆ ಯಾರೂ ಪ್ರಾರ್ಥಿಸುವುದಿಲ್ಲ. [QBR]
5. ನಿನ್ನ ಪಾಪವೇ ನಿನ್ನ ಮಾತುಗಳಿಗೆ ಪ್ರೇರಕವಾಗಿವೆ. [QBR2] ನೀನು ಮೋಸಕರವಾದ ಮಾತುಗಳನ್ನು ಬಳಸುತ್ತಿರುವೆ. [QBR]
6. ನೀನು ತಪ್ಪಿತಸ್ಥನೆಂದು ನಾನು ನಿರೂಪಿಸುವ ಅಗತ್ಯವಿಲ್ಲ. [QBR2] ಯಾಕೆಂದರೆ ನಿನ್ನ ಬಾಯ ಮಾತುಗಳೇ ನಿನ್ನನ್ನು ತಪ್ಪಿತಸ್ಥನೆಂದು ತೋರಿಸುತ್ತವೆ. [QBR2] ನಿನ್ನ ಸ್ವಂತ ತುಟಿಗಳೇ ನಿನ್ನ ವಿರುದ್ಧವಾಗಿ ಸಾಕ್ಷಿ ಕೊಡುತ್ತವೆ.
7. “ಯೋಬನೇ, ಎಲ್ಲರಿಗಿಂತ ಮೊದಲು ನೀನೇ ಹುಟ್ಟಿರುವುದಾಗಿ ಭಾವಿಸಿಕೊಂಡಿರುವಿಯಾ? [QBR2] ಬೆಟ್ಟಗಳಿಗಿಂತ ಮೊದಲೇ ನೀನು ಹುಟ್ಟಿದಿಯಾ? [QBR]
8. ದೇವರ ರಹಸ್ಯ ಯೋಜನೆಗಳನ್ನು ಆಲಿಸಿರುವೆಯಾ? [QBR2] ನೀನೊಬ್ಬನೇ ಜ್ಞಾನಿಯೆಂದು ಭಾವಿಸಿಕೊಂಡಿರುವಿಯಾ? [QBR]
9. ಯೋಬನೇ, ನಿನಗೆ ಗೊತ್ತಿರುವುದೆಲ್ಲಾ ನಮಗೂ ಗೊತ್ತಿದೆ. [QBR2] ನಿನಗೆ ಅರ್ಥವಾಗುವುದೆಲ್ಲಾ ನಮಗೂ ಅರ್ಥವಾಗುತ್ತದೆ. [QBR]
10. ನಿನ್ನ ತಂದೆಗಿಂತಲೂ ವಯಸ್ಸಾಗಿರುವ, [QBR2] ಕೂದಲು ಬೆಳ್ಳಗಾಗಿರುವ ವೃದ್ಧನು ನಮ್ಮಲ್ಲಿದ್ದಾನೆ. [QBR]
11. ದೇವರ ಆಧರಣೆಯ ಮಾತುಗಳೂ ನಮ್ಮ ನಯವಾದ ಮಾತುಗಳೂ [QBR2] ನಿನಗೆ ಸಾಲುವುದಿಲ್ಲವೇ? [QBR]
12. ಯೋಬನೇ, ನಿನ್ನ ಆಲೋಚನೆಗಳು ನಿನ್ನನ್ನು ಸೆಳೆದುಕೊಂಡು ಹೋಗುವುದೇಕೆ? [QBR2] ನಿನ್ನ ಕಣ್ಣುಗಳು ನಮ್ಮ ಮೇಲೆ ಕಿಡಿಕಿಡಿಯಾಗುವುದೇಕೆ? [QBR]
13. ನೀನು ದೇವರ ಮೇಲೆ ಕೋಪಗೊಂಡು [QBR2] ನಿನ್ನ ಬಾಯಿಂದ ಅಂತಹ ಮಾತುಗಳನ್ನು ಸುರಿಸುತ್ತಿರುವೆ!
14. “ಮನುಷ್ಯನು ಎಷ್ಟರವನು? [QBR2] ಅವನು ಪರಿಶುದ್ಧನಾಗಿರಲು ಸಾಧ್ಯವೇ? [QBR2] ಸ್ತ್ರೀಯಲ್ಲಿ ಹುಟ್ಟಿದವನು ನೀತಿವಂತನಾಗಿರಲು ಸಾಧ್ಯವೇ? [QBR]
15. ದೇವರು ತನ್ನ ದೂತರುಗಳನ್ನು [*ದೇವದೂತರು ಅಕ್ಷರಶಃ, “ಪರಿಶುದ್ಧರು.”] ಸಹ ನಂಬುವುದಿಲ್ಲ. [QBR2] ಆತನ ದೃಷ್ಟಿಯಲ್ಲಿ ಆಕಾಶಗಳು ಸಹ ಅಶುದ್ಧವಾಗಿವೆ. [QBR]
16. ಹೀಗಿರಲು ದುಷ್ಟತನವನ್ನು ನೀರಿನಂತೆ ಕುಡಿಯುತ್ತಾ [QBR2] ಅಸಹ್ಯನೂ ಕೆಟ್ಟವನೂ ಆಗಿರುವ ಮನುಷ್ಯನು [QBR2] ಎಷ್ಟೋ ಅಶುದ್ಧನಲ್ಲವೇ?
17. “ಯೋಬನೇ, ನನಗೆ ಕಿವಿಗೊಡು, ಆಗ ನಾನು ನಿನಗೆ ಅದನ್ನು ವಿವರಿಸುವೆನು. [QBR2] ನಾನು ನೋಡಿರುವುದನ್ನೇ ನಿನಗೆ ತಿಳಿಸುವೆನು. [QBR]
18. ಜ್ಞಾನಿಗಳು ನನಗೆ ತಿಳಿಸಿದ ಸಂಗತಿಗಳನ್ನು ನಾನು ನಿನಗೆ ಹೇಳುವೆನು. [QBR2] ಆ ಜ್ಞಾನಿಗಳಿಗೆ ಅವರ ಪೂರ್ವಿಕರೇ ಈ ಸಂಗತಿಗಳನ್ನು ತಿಳಿಸಿದ್ದಾರೆ. [QBR2] ಅವರು ಯಾವ ರಹಸ್ಯಗಳನ್ನೂ ನನಗೆ ಮರೆಮಾಡಲಿಲ್ಲ. [QBR]
19. ಅವರು ಮಾತ್ರ ತಮ್ಮ ದೇಶದಲ್ಲಿ ವಾಸಿಸಿದರು. [QBR2] ಅವರ ಮಧ್ಯದಲ್ಲಿ ಯಾವ ವಿದೇಶಿಯನೂ ಹಾದುಹೋಗುತ್ತಿರಲಿಲ್ಲ. [QBR]
20. ದುಷ್ಟನು ತನ್ನ ಜೀವಮಾನವೆಲ್ಲಾ ಯಾತನೆಯನ್ನು ಅನುಭವಿಸುವನು. [QBR2] ಕ್ರೂರಿಯು ತನಗೆ ನೇಮಕಗೊಂಡಿರುವ ವರ್ಷಗಳಲ್ಲೆಲ್ಲಾ ಕಷ್ಟಪಡುವನು. [QBR]
21. ಭೀಕರವಾದ ಶಬ್ದಗಳು ಅವನ ಕಿವಿಗಳಲ್ಲೇ ಇರುತ್ತವೆ. [QBR2] ತಾನು ಸುರಕ್ಷಿತನಾಗಿರುವುದಾಗಿ ಅವನು ಯೋಚಿಸುವಾಗಲೇ ವೈರಿಯು ಅವನ ಮೇಲೆ ಆಕ್ರಮಣ ಮಾಡುವನು. [QBR]
22. ದುಷ್ಟನಿಗೆ ಕತ್ತಲೆಯಿಂದ ಪಾರಾಗುತ್ತೇನೆ ಎಂಬ ನಿರೀಕ್ಷೆಯೇ ಇಲ್ಲ. [QBR2] ಅವನನ್ನು ಕೊಲ್ಲಲು ಕತ್ತಿಯು ಎಲ್ಲೋ ಕಾದುಕೊಂಡಿದೆ. [QBR]
23. ಅವನು ಅತ್ತಿತ್ತ ಅಲೆದಾಡುವನು; ಅವನ ದೇಹವು ರಣಹದ್ದುಗಳಿಗೆ ಆಹಾರವಾಗುವುದು. [QBR2] ಮರಣವು [†ಮರಣವು ಅಕ್ಷರಶಃ, “ಕತ್ತಲೆಯ ದಿನ.”] ತನಗೆ ಬಹು ಸಮೀಪವಾಗಿರುವುದು ಅವನಿಗೆ ಗೊತ್ತೇ ಇದೆ. [QBR]
24. ಚಿಂತೆಸಂಕಟಗಳು ಅವನನ್ನು ಭಯಗೊಳಿಸುತ್ತವೆ. [QBR2] ಅವನನ್ನು ನಾಶಮಾಡಲು ಸಿದ್ಧನಾಗಿರುವ ರಾಜನಂತೆ ಅವು ಅವನ ಮೇಲೆ ಆಕ್ರಮಣ ಮಾಡುತ್ತವೆ. [QBR]
25. ಯಾಕೆಂದರೆ ದುಷ್ಟನು ದೇವರಿಗೆ ವಿರುದ್ಧವಾಗಿ ತನ್ನ ಕೈಯನ್ನು ಝಳಪಿಸುತ್ತಾನೆ. [QBR2] ದುಷ್ಟನು ಸರ್ವಶಕ್ತನಾದ ದೇವರ ವಿರುದ್ಧವಾಗಿ ಮಹಾಶೂರನಂತೆ ಆಕ್ರಮಣ ಮಾಡುವನು. [QBR]
26. ಅವನು ಬಹು ಮೊಂಡನಾಗಿದ್ದಾನೆ. [QBR2] ದುಷ್ಟನು ಮಹಾಗುರಾಣಿಯನ್ನು ಹಿಡಿದು ದೇವರನ್ನು ಎದುರಿಸಲು ಪ್ರಯತ್ನಿಸುವನು. [QBR]
27. ದುಷ್ಟನ ಮುಖದಲ್ಲಿ ಕೊಬ್ಬೇರಿದೆ, ಅವನ ಸೊಂಟದಲ್ಲಿ ಬೊಜ್ಜು ಬೆಳೆದುಕೊಂಡಿದೆ. [QBR2]
28. ಪಾಳುಬಿದ್ದಿರುವ ಮನೆಗಳಲ್ಲಿ ದುಷ್ಟನು ವಾಸಿಸುವನು [QBR] ಹಾಳುದಿಬ್ಬಗಳಾಗಬೇಕೆಂಬುದೇ [QBR2] ಆ ಮನೆಗಳ ಗತಿಯಾಗಿದೆ. [QBR]
29. ದುಷ್ಟನು ಬಹುಕಾಲದವರೆಗೆ ಐಶ್ವರ್ಯವಂತನಾಗಿರಲು ಸಾಧ್ಯವಿಲ್ಲ. [QBR2] ಅವನ ಐಶ್ವರ್ಯವು ಶಾಶ್ವತವಲ್ಲ; [QBR2] ಅವನ ಆಸ್ತಿಗಳು ದೇಶದಲ್ಲಿ ವೃದ್ಧಿಯಾಗುವುದಿಲ್ಲ. [QBR]
30. ದುಷ್ಟನು ಕತ್ತಲೆಯೊಳಗಿಂದ ತಪ್ಪಿಸಿಕೊಳ್ಳುವುದಿಲ್ಲ. [QBR2] ಬೆಂಕಿಯಿಂದ ಸುಟ್ಟುಹೋದ ಕೊಂಬೆಗಳನ್ನು ಹೊಂದಿರುವ ಮರದಂತೆ ಅವನಿರುವನು. [QBR2] ದೇವರ ಉಸಿರು ದುಷ್ಟನನ್ನು ಬಡಿದುಕೊಂಡು ಹೋಗುವುದು. [QBR]
31. ದುಷ್ಟನು ಅಯೋಗ್ಯವಾದವುಗಳ ಮೇಲೆ ನಂಬಿಕೆಯಿಟ್ಟು, ತನ್ನನ್ನು ತಾನೇ ಮೋಸಮಾಡಿಕೊಳ್ಳದಿರಲಿ. [QBR2] ಯಾಕೆಂದರೆ ಅದಕ್ಕೆ ಪ್ರತಿಫಲವಾಗಿ ಅವನಿಗೇನೂ ದೊರೆಯುವುದಿಲ್ಲ. [QBR]
32. ದುಷ್ಟನು ತನ್ನ ಜೀವಿತ ಮುಗಿಯುವುದಕ್ಕಿಂತ ಮೊದಲೇ ಮುದುಕನಾಗುವನು; [QBR2] ಒಣಗಿಹೋಗಿ ಇನ್ನೆಂದಿಗೂ ಹಸುರಾಗದ ಬಳ್ಳಿಯಂತಾಗುವನು; [QBR]
33. ಮಾಗುವುದಕ್ಕಿಂತ ಮೊದಲೇ ತನ್ನ ದ್ರಾಕ್ಷಿಯನ್ನು ಕಳೆದುಕೊಳ್ಳುವ ದ್ರಾಕ್ಷಿಬಳ್ಳಿಯಂತಿರುವನು; [QBR2] ಹೂವುಗಳು ಉದುರಿಹೋದ ಆಲಿವ್ ಮರದಂತಿರುವನು. [QBR]
34. ಯಾಕೆಂದರೆ ದೇವರಿಲ್ಲದ ಜನರು ಫಲ ಕೊಡಲಾರರು. [QBR2] ಲಂಚಕೋರರ ಗುಡಾರಗಳು ಬೆಂಕಿಯಿಂದ ಸುಟ್ಟುಹೋಗುತ್ತವೆ. [QBR]
35. ಅವರು ಗರ್ಭಧರಿಸಿ ಕೆಡುಕನ್ನೇ ಹೆರುವರು. [QBR2] ಅವರ ಗರ್ಭದಲ್ಲಿರುವ ಮಗುವು ಮೋಸಕರವಾದದ್ದು.” [PE]