ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಯೋಬನು
1. {ಬಿಲ್ದದನಿಗೆ ಯೋಬನ ಉತ್ತರ} [PS] ಬಳಿಕ ಶೂಹ ದೇಶದ ಬಿಲ್ದದನು ಹೀಗೆ ಉತ್ತರಕೊಟ್ಟನು:
2. “ಈ ಮಾತುಗಳನ್ನೆಲ್ಲಾ ಯಾವಾಗ ನಿಲ್ಲಿಸುವೆ? [QBR2] ಪ್ರಜ್ಞೆವುಳ್ಳವನಾಗು, ಆಗ ನಾವು ಮಾತಾಡಲು ಸಾಧ್ಯ. [QBR]
3. ನಮ್ಮನ್ನು ದಡ್ಡ ಪ್ರಾಣಿಗಳಂತೆ [QBR2] ಯೋಚಿಸಿಕೊಂಡಿರುವುದೇಕೆ? [QBR]
4. ಯೋಬನೇ, ನಿನ್ನ ಕೋಪದಿಂದ ನಿನ್ನನ್ನೇ ಗಾಯಮಾಡಿಕೊಳ್ಳುತ್ತಿರುವೆ. [QBR2] ಕೇವಲ ನಿನಗೋಸ್ಕರ ಜನರು ಲೋಕವನ್ನು ಬಿಟ್ಟುಹೋಗಬೇಕೇ? [QBR2] ಕೇವಲ ನಿನ್ನನ್ನು ತೃಪ್ತಿಪಡಿಸುವುದಕ್ಕಾಗಿ ದೇವರು ಬೆಟ್ಟಗಳನ್ನು ಜರುಗಿಸುತ್ತಾನೆಂದು ಭಾವಿಸಿಕೊಂಡಿರುವಿಯಾ?
5. “ಹೌದು, ದುಷ್ಟನ ದೀಪವು ಆರಿಹೋಗುವುದು; [QBR2] ಅವನ ಬೆಂಕಿಯು ಉರಿಯುವುದಿಲ್ಲ. [QBR]
6. ಅವನ ಗುಡಾರದಲ್ಲಿರುವ ಬೆಳಕು ಕತ್ತಲಾಗುವುದು; [QBR2] ಅವನ ಪಕ್ಕದಲ್ಲಿರುವ ದೀಪವು ಆರಿಹೋಗುವುದು. [QBR]
7. ಅವನ ಹೆಜ್ಜೆಗಳಲ್ಲಿ ಬಲವಿರುವುದಿಲ್ಲ; [QBR2] ಅವನ ದುಷ್ಟ ಯೋಜನೆಗಳೇ ಅವನನ್ನು ಬೀಳಿಸುತ್ತವೆ. [QBR]
8. ಅವನ ಸ್ವಂತ ಕಾಲುಗಳೇ ಅವನನ್ನು ಬಲೆಗೆ ನಡೆಸುತ್ತದೆ. [QBR2] ಅವನು ಬಲೆಯೊಳಗೆ ನಡೆದುಹೋಗಿ ಸಿಕ್ಕಿಕೊಳ್ಳುವನು. [QBR]
9. ಬೋನು ಅವನ ಹಿಮ್ಮಡಿಯನ್ನು ಹಿಡಿದುಕೊಳ್ಳುವುದು. [QBR2] ಉರುಲು ಅವನನ್ನು ಗಟ್ಟಿಯಾಗಿ ಹಿಡಿದುಕೊಳ್ಳುವುದು. [QBR]
10. ಅವನಿಗಾಗಿ ಹಗ್ಗವು ನೆಲದ ಮೇಲೆ ಅಡಗಿಕೊಂಡಿರುತ್ತದೆ. [QBR2] ಅವನ ದಾರಿಯಲ್ಲಿ ಉರುಲು ಕಾದುಕೊಂಡಿರುತ್ತದೆ. [QBR]
11. ಎಲ್ಲಾ ಕಡೆಗಳಿಂದಲೂ ಅಪಾಯವು ಅವನನ್ನು ಭಯಪಡಿಸುತ್ತದೆ. [QBR2] ಅವನಿಡುವ ಪ್ರತಿಯೊಂದು ಹೆಜ್ಜೆಯನ್ನೂ ಭಯವು ಹಿಂಬಾಲಿಸುತ್ತದೆ. [QBR]
12. ವಿಪತ್ತುಗಳು ಅವನಿಗಾಗಿ ಹಸಿವೆಯಿಂದ ಕಾದುಕೊಂಡಿವೆ. [QBR2] ಅವನು ಬೀಳುವಾಗ ನಾಶನವು ಅವನಿಗಾಗಿ ಸಿದ್ಧವಾಗಿರುತ್ತದೆ. [QBR]
13. ಭಯಂಕರವಾದ ಕಾಯಿಲೆಯು ಅವನ ಚರ್ಮದ ಭಾಗಗಳನ್ನು ತಿಂದುಬಿಡುತ್ತದೆ. [QBR2] ಅದು ಅವನ ತೋಳುಗಳನ್ನೂ ಕಾಲುಗಳನ್ನೂ ಕೊಳೆಸಿಬಿಡುತ್ತದೆ. [QBR]
14. ದುಷ್ಟನನ್ನು ಅವನ ಸುರಕ್ಷಿತವಾದ ಮನೆಯಿಂದ ಹೊರಗೆ ಹಾಕಲಾಗುವುದು. [QBR2] ಅವನು ಮರಣವೆಂಬ ಅಪಾಯಗಳ ರಾಜನ ಕಡೆಗೆ ಮುನ್ನಡೆಯುತ್ತಾ ಹೋಗುವನು. [QBR]
15. ಅವನ ಮನೆಯಲ್ಲಿ ಅವನದೇನೂ ಉಳಿದಿರುವುದಿಲ್ಲ. [QBR2] ಉರಿಯುವ ಗಂಧಕವು ಅವನ ಆಸ್ತಿಯಲ್ಲೆಲ್ಲಾ ಹರಡಿಕೊಂಡಿರುತ್ತದೆ. [QBR]
16. ಅವನ ಬೇರುಗಳು ಕೆಳಗೆ ಒಣಗಿಹೋಗುತ್ತವೆ. [QBR2] ಅವನ ಕೊಂಬೆಗಳು ಮೇಲೆ ಸತ್ತುಹೋಗುತ್ತವೆ. [QBR]
17. ಭೂಮಿಯ ಮೇಲಿರುವ ಜನರು ಅವನನ್ನು ಜ್ಞಾಪಿಸಿಕೊಳ್ಳುವುದಿಲ್ಲ; [QBR2] ಇನ್ನು ಮೇಲೆ ಅವನನ್ನು ಯಾರೂ ಜ್ಞಾಪಿಸಿಕೊಳ್ಳುವುದಿಲ್ಲ. [QBR]
18. ಜನರು ಅವನನ್ನು ಬೆಳಕಿನಿಂದ ತಳ್ಳಿಬಿಡುವರು; ಅವನನ್ನು ಕತ್ತಲೆಯೊಳಗೆ ನೂಕಿಬಿಡುವರು. [QBR2] ಅವರು ಅವನನ್ನು ಲೋಕದಿಂದಲೇ ಅಟ್ಟಿಬಿಡುವರು. [QBR]
19. ಅವನಿಗೆ ಸ್ವಜನರ ಮಧ್ಯದಲ್ಲಿ ಮಕ್ಕಳಾಗಲಿ ಸಂತತಿಯವರಾಗಲಿ ಇರುವುದಿಲ್ಲ. [QBR2] ಅವನ ಮನೆಯಲ್ಲಿ ಯಾರೂ ಉಳಿದಿರುವುದಿಲ್ಲ. [QBR]
20. ಪಶ್ಚಿಮದಲ್ಲಿ ವಾಸವಾಗಿರುವ ಜನರು ದುಷ್ಟನಿಗೆ ಸಂಭವಿಸಿದ್ದನ್ನು ಕೇಳಿ ಬೆರಗಾಗುವರು; [QBR2] ಪೂರ್ವದಲ್ಲಿ ವಾಸವಾಗಿರುವ ಜನರು ಭೀತಿಯಿಂದ ನಡುಗುವರು. [QBR]
21. ಇದು ಸತ್ಯ, ದುಷ್ಟನ ಮನೆಗೆ ಇದೇ ಸಂಭವಿಸುವುದು. [QBR2] ದೇವರ ಬಗ್ಗೆ ಗಮನಕೊಡದ ವ್ಯಕ್ತಿಗೆ ಇದೇ ಸಂಭವಿಸುವುದು.” [PE]
ಒಟ್ಟು 42 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 18 / 42
ಬಿಲ್ದದನಿಗೆ ಯೋಬನ ಉತ್ತರ 1 ಬಳಿಕ ಶೂಹ ದೇಶದ ಬಿಲ್ದದನು ಹೀಗೆ ಉತ್ತರಕೊಟ್ಟನು: 2 “ಈ ಮಾತುಗಳನ್ನೆಲ್ಲಾ ಯಾವಾಗ ನಿಲ್ಲಿಸುವೆ? ಪ್ರಜ್ಞೆವುಳ್ಳವನಾಗು, ಆಗ ನಾವು ಮಾತಾಡಲು ಸಾಧ್ಯ.
3 ನಮ್ಮನ್ನು ದಡ್ಡ ಪ್ರಾಣಿಗಳಂತೆ ಯೋಚಿಸಿಕೊಂಡಿರುವುದೇಕೆ?
4 ಯೋಬನೇ, ನಿನ್ನ ಕೋಪದಿಂದ ನಿನ್ನನ್ನೇ ಗಾಯಮಾಡಿಕೊಳ್ಳುತ್ತಿರುವೆ. ಕೇವಲ ನಿನಗೋಸ್ಕರ ಜನರು ಲೋಕವನ್ನು ಬಿಟ್ಟುಹೋಗಬೇಕೇ? ಕೇವಲ ನಿನ್ನನ್ನು ತೃಪ್ತಿಪಡಿಸುವುದಕ್ಕಾಗಿ ದೇವರು ಬೆಟ್ಟಗಳನ್ನು ಜರುಗಿಸುತ್ತಾನೆಂದು ಭಾವಿಸಿಕೊಂಡಿರುವಿಯಾ? 5 “ಹೌದು, ದುಷ್ಟನ ದೀಪವು ಆರಿಹೋಗುವುದು; ಅವನ ಬೆಂಕಿಯು ಉರಿಯುವುದಿಲ್ಲ.
6 ಅವನ ಗುಡಾರದಲ್ಲಿರುವ ಬೆಳಕು ಕತ್ತಲಾಗುವುದು; ಅವನ ಪಕ್ಕದಲ್ಲಿರುವ ದೀಪವು ಆರಿಹೋಗುವುದು.
7 ಅವನ ಹೆಜ್ಜೆಗಳಲ್ಲಿ ಬಲವಿರುವುದಿಲ್ಲ; ಅವನ ದುಷ್ಟ ಯೋಜನೆಗಳೇ ಅವನನ್ನು ಬೀಳಿಸುತ್ತವೆ.
8 ಅವನ ಸ್ವಂತ ಕಾಲುಗಳೇ ಅವನನ್ನು ಬಲೆಗೆ ನಡೆಸುತ್ತದೆ. ಅವನು ಬಲೆಯೊಳಗೆ ನಡೆದುಹೋಗಿ ಸಿಕ್ಕಿಕೊಳ್ಳುವನು.
9 ಬೋನು ಅವನ ಹಿಮ್ಮಡಿಯನ್ನು ಹಿಡಿದುಕೊಳ್ಳುವುದು. ಉರುಲು ಅವನನ್ನು ಗಟ್ಟಿಯಾಗಿ ಹಿಡಿದುಕೊಳ್ಳುವುದು.
10 ಅವನಿಗಾಗಿ ಹಗ್ಗವು ನೆಲದ ಮೇಲೆ ಅಡಗಿಕೊಂಡಿರುತ್ತದೆ. ಅವನ ದಾರಿಯಲ್ಲಿ ಉರುಲು ಕಾದುಕೊಂಡಿರುತ್ತದೆ.
11 ಎಲ್ಲಾ ಕಡೆಗಳಿಂದಲೂ ಅಪಾಯವು ಅವನನ್ನು ಭಯಪಡಿಸುತ್ತದೆ. ಅವನಿಡುವ ಪ್ರತಿಯೊಂದು ಹೆಜ್ಜೆಯನ್ನೂ ಭಯವು ಹಿಂಬಾಲಿಸುತ್ತದೆ.
12 ವಿಪತ್ತುಗಳು ಅವನಿಗಾಗಿ ಹಸಿವೆಯಿಂದ ಕಾದುಕೊಂಡಿವೆ. ಅವನು ಬೀಳುವಾಗ ನಾಶನವು ಅವನಿಗಾಗಿ ಸಿದ್ಧವಾಗಿರುತ್ತದೆ.
13 ಭಯಂಕರವಾದ ಕಾಯಿಲೆಯು ಅವನ ಚರ್ಮದ ಭಾಗಗಳನ್ನು ತಿಂದುಬಿಡುತ್ತದೆ. ಅದು ಅವನ ತೋಳುಗಳನ್ನೂ ಕಾಲುಗಳನ್ನೂ ಕೊಳೆಸಿಬಿಡುತ್ತದೆ.
14 ದುಷ್ಟನನ್ನು ಅವನ ಸುರಕ್ಷಿತವಾದ ಮನೆಯಿಂದ ಹೊರಗೆ ಹಾಕಲಾಗುವುದು. ಅವನು ಮರಣವೆಂಬ ಅಪಾಯಗಳ ರಾಜನ ಕಡೆಗೆ ಮುನ್ನಡೆಯುತ್ತಾ ಹೋಗುವನು.
15 ಅವನ ಮನೆಯಲ್ಲಿ ಅವನದೇನೂ ಉಳಿದಿರುವುದಿಲ್ಲ. ಉರಿಯುವ ಗಂಧಕವು ಅವನ ಆಸ್ತಿಯಲ್ಲೆಲ್ಲಾ ಹರಡಿಕೊಂಡಿರುತ್ತದೆ.
16 ಅವನ ಬೇರುಗಳು ಕೆಳಗೆ ಒಣಗಿಹೋಗುತ್ತವೆ. ಅವನ ಕೊಂಬೆಗಳು ಮೇಲೆ ಸತ್ತುಹೋಗುತ್ತವೆ.
17 ಭೂಮಿಯ ಮೇಲಿರುವ ಜನರು ಅವನನ್ನು ಜ್ಞಾಪಿಸಿಕೊಳ್ಳುವುದಿಲ್ಲ; ಇನ್ನು ಮೇಲೆ ಅವನನ್ನು ಯಾರೂ ಜ್ಞಾಪಿಸಿಕೊಳ್ಳುವುದಿಲ್ಲ.
18 ಜನರು ಅವನನ್ನು ಬೆಳಕಿನಿಂದ ತಳ್ಳಿಬಿಡುವರು; ಅವನನ್ನು ಕತ್ತಲೆಯೊಳಗೆ ನೂಕಿಬಿಡುವರು. ಅವರು ಅವನನ್ನು ಲೋಕದಿಂದಲೇ ಅಟ್ಟಿಬಿಡುವರು.
19 ಅವನಿಗೆ ಸ್ವಜನರ ಮಧ್ಯದಲ್ಲಿ ಮಕ್ಕಳಾಗಲಿ ಸಂತತಿಯವರಾಗಲಿ ಇರುವುದಿಲ್ಲ. ಅವನ ಮನೆಯಲ್ಲಿ ಯಾರೂ ಉಳಿದಿರುವುದಿಲ್ಲ.
20 ಪಶ್ಚಿಮದಲ್ಲಿ ವಾಸವಾಗಿರುವ ಜನರು ದುಷ್ಟನಿಗೆ ಸಂಭವಿಸಿದ್ದನ್ನು ಕೇಳಿ ಬೆರಗಾಗುವರು; ಪೂರ್ವದಲ್ಲಿ ವಾಸವಾಗಿರುವ ಜನರು ಭೀತಿಯಿಂದ ನಡುಗುವರು.
21 ಇದು ಸತ್ಯ, ದುಷ್ಟನ ಮನೆಗೆ ಇದೇ ಸಂಭವಿಸುವುದು. ದೇವರ ಬಗ್ಗೆ ಗಮನಕೊಡದ ವ್ಯಕ್ತಿಗೆ ಇದೇ ಸಂಭವಿಸುವುದು.”
ಒಟ್ಟು 42 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 18 / 42
×

Alert

×

Kannada Letters Keypad References