ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಯೋಬನು
1. {ಯೋಬನಿಗೆ ಎರಡನೆ ಪರೀಕ್ಷೆ} [PS] ಮತ್ತೊಂದು ದಿನ ಯೆಹೋವನನ್ನು ಭೇಟಿಯಾಗಲು ದೇವದೂತರು ಬಂದರು. ಸೈತಾನನು ಸಹ ಯೆಹೋವನನ್ನು ಭೇಟಿಯಾಗಲು ಅವರೊಂದಿಗೆ ಬಂದನು.
2. ಯೆಹೋವನು ಸೈತಾನನಿಗೆ, “ನೀನು ಎಲ್ಲಿಂದ ಬರುತ್ತಿರುವೆ?” ಎಂದು ಕೇಳಿದನು. [PE][PS] ಸೈತಾನನು ಯೆಹೋವನಿಗೆ, “ನಾನು ಭೂಮಿಯ ಮೇಲೆಲ್ಲಾ ಅಲೆದಾಡುತ್ತಾ ಬಂದೆನು” ಎಂದು ಉತ್ತರಕೊಟ್ಟನು. [PE][PS]
3. ಅದಕ್ಕೆ ಯೆಹೋವನು, “ನನ್ನ ಸೇವಕನಾದ ಯೋಬನನ್ನು ಗಮನಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ. ನಿಷ್ಕಾರಣವಾಗಿ ಅವನನ್ನು ನಾಶಪಡಿಸುವಂತೆ ನೀನು ನನ್ನನ್ನು ಒತ್ತಾಯಪಡಿಸಿದೆ. ಆದರೆ ಅವನು ನನಗೆ ಇನ್ನೂ ನಂಬಿಗಸ್ತನಾಗಿದ್ದಾನೆ” ಎಂದು ಹೇಳಿದನು. [PE][PS]
4. ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ! [*ಚರ್ಮಕ್ಕೆ ಚರ್ಮ ಇದರರ್ಥವೇನಂದರೆ, ಮನುಷ್ಯನು ನೋವಿನಿಂದ ತಪ್ಪಿಸಿಕೊಳ್ಳಲು ತನಗೆ ಸಾಧ್ಯವಾದದ್ದನ್ನೆಲ್ಲಾ ಮಾಡುತ್ತಾನೆ.] ಎಂಬಂತೆ ಮನುಷ್ಯನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ತನ್ನ ಸರ್ವಸ್ವವನ್ನೂ ಕೊಡುವನು.
5. ಆದರೆ ನೀನು ಕೈಚಾಚಿ ಅವನ ಮಾಂಸವನ್ನೂ ಮೂಳೆಗಳನ್ನೂ ಹೊಡೆ. ಅವನು ನಿನ್ನ ಮುಖದೆದುರಿಗೆ ನಿನ್ನನ್ನು ಖಂಡಿತವಾಗಿ ದೂಷಿಸುವನು” ಎಂದು ಉತ್ತರಕೊಟ್ಟನು. [PE][PS]
6. ಅದಕ್ಕೆ ಯೆಹೋವನು ಸೈತಾನನಿಗೆ, “ಸರಿ, ಯೋಬನನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ; ಆದರೆ ಅವನ ಪ್ರಾಣವನ್ನು ಮಾತ್ರ ತೆಗೆಯಬೇಡ” ಎಂದು ಅಪ್ಪಣೆಕೊಟ್ಟನು. [PE][PS]
7. ಆಗ, ಸೈತಾನನು ಯೆಹೋವನ ಬಳಿಯಿಂದ ಹೊರಟುಹೋಗಿ ಯೋಬನಿಗೆ ಬಾಧಿಸುವ ಕುರುಗಳನ್ನು ಹುಟ್ಟಿಸಿದನು. ಯೋಬನ ದೇಹದ ಮೇಲೆಲ್ಲಾ ಅಂದರೆ ಅವನ ಪಾದದಿಂದಿಡಿದು ತಲೆಯ ಮೇಲ್ಭಾಗದವರೆಗೂ ಬಾಧಿಸುವ ಕುರುಗಳು ತುಂಬಿಕೊಂಡವು.
8. ಯೋಬನು ಬೂದಿಯಲ್ಲಿ ಕುಳಿತುಕೊಂಡು ತನ್ನ ಕುರುಗಳನ್ನು ಮಡಕೆಯ ಚೂರಿನಿಂದ ಕೆರೆದುಕೊಳ್ಳುತ್ತಿದ್ದನು.
9. ಯೋಬನ ಹೆಂಡತಿಯು ಅವನಿಗೆ, “ನೀನು ಇನ್ನೂ ದೇವರಿಗೆ ನಂಬಿಗಸ್ತನಾಗಿರುವೆಯೋ? ದೇವರನ್ನು ದೂಷಿಸಿ ಸಾಯಿ” ಎಂದು ಹೇಳಿದಳು. [PE][PS]
10. ಯೋಬನು ತನ್ನ ಹೆಂಡತಿಗೆ, “ನೀನು ಮೂರ್ಖಳಂತೆ ಮಾತಾಡುತ್ತಿರುವೆ! ದೇವರು ಒಳ್ಳೆಯವುಗಳನ್ನು ಕೊಡುವಾಗ ನಾವು ಅವುಗಳನ್ನು ಸ್ವೀಕರಿಸಿಕೊಳ್ಳುತ್ತೇವೆ. ಆತನು ಕೆಟ್ಟದ್ದನ್ನು ಕೊಡುವಾಗ ನಾವು ಸ್ವೀಕರಿಸಿಕೊಳ್ಳಬಾರದೋ?” ಎಂದು ಉತ್ತರಕೊಟ್ಟನು. ಈ ಸಂಕಟದಲ್ಲಿಯೂ ಯೋಬನು ಪಾಪ ಮಾಡಲಿಲ್ಲ ಹಾಗೂ ದೇವರ ವಿರುದ್ಧ ಯಾವ ಮಾತನ್ನು ಆಡಲಿಲ್ಲ. [PS]
11. {ಯೋಬನ ಮೂವರು ಸ್ನೇಹಿತರು} [PS] ಯೋಬನ ಮೂವರು ಗೆಳೆಯರು ಯಾರೆಂದರೆ: ತೇಮಾನಿನ ಎಲೀಫಜನು, ಶೂಹದ ಬಿಲ್ದದನು ಮತ್ತು ನಾಮಾಥದ ಚೋಫರನು. ಯೋಬನಿಗೆ ಸಂಭವಿಸಿದ ಆಪತ್ತುಗಳ ಬಗ್ಗೆ ಈ ಮೂವರು ಗೆಳೆಯರು ಕೇಳಿದಾಗ ತಮ್ಮ ಮನೆಯಿಂದ ಹೊರಟು ಒಟ್ಟಾಗಿ ಭೇಟಿಯಾದರು. ಯೋಬನ ಬಳಿಗೆ ಹೋಗಿ ಅನುತಾಪ ಸೂಚಿಸಿ ಸಂತೈಸಲು ಒಪ್ಪಿಕೊಂಡರು.
12. ಆದರೆ ಆ ಮೂವರು ಸ್ನೇಹಿತರು ಬಹು ದೂರದಿಂದ ಯೋಬನನ್ನು ಕಂಡಾಗ ಅವನ ಗುರುತೇ ಹಿಡಿಯಲಾರದೆ ಗಟ್ಟಿಯಾಗಿ ಅಳತೊಡಗಿದರು; ತಮ್ಮ ಮೇಲಂಗಿಗಳನ್ನು ಹರಿದುಕೊಂಡು ಮಣ್ಣನ್ನು ಮೇಲಕ್ಕೆ ತೂರಿ ತಮ್ಮ ತಲೆಗಳ ಮೇಲೆ ಸುರಿಸಿಕೊಂಡರು.
13. ಬಳಿಕ ಆ ಮೂವರು ಸ್ನೇಹಿತರು ಏಳುದಿನ ಹಗಲಿರುಳು ಯೋಬನೊಂದಿಗೆ ನೆಲದ ಮೇಲೆ ಕುಳಿತುಕೊಂಡಿದ್ದರು. ಯೋಬನು ವಿಪರೀತ ನೋವಿನಲ್ಲಿದ್ದ ಕಾರಣ ಅವರು ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ. [PE]
ಒಟ್ಟು 42 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 2 / 42
ಯೋಬನಿಗೆ ಎರಡನೆ ಪರೀಕ್ಷೆ 1 ಮತ್ತೊಂದು ದಿನ ಯೆಹೋವನನ್ನು ಭೇಟಿಯಾಗಲು ದೇವದೂತರು ಬಂದರು. ಸೈತಾನನು ಸಹ ಯೆಹೋವನನ್ನು ಭೇಟಿಯಾಗಲು ಅವರೊಂದಿಗೆ ಬಂದನು. 2 ಯೆಹೋವನು ಸೈತಾನನಿಗೆ, “ನೀನು ಎಲ್ಲಿಂದ ಬರುತ್ತಿರುವೆ?” ಎಂದು ಕೇಳಿದನು. ಸೈತಾನನು ಯೆಹೋವನಿಗೆ, “ನಾನು ಭೂಮಿಯ ಮೇಲೆಲ್ಲಾ ಅಲೆದಾಡುತ್ತಾ ಬಂದೆನು” ಎಂದು ಉತ್ತರಕೊಟ್ಟನು. 3 ಅದಕ್ಕೆ ಯೆಹೋವನು, “ನನ್ನ ಸೇವಕನಾದ ಯೋಬನನ್ನು ಗಮನಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ. ನಿಷ್ಕಾರಣವಾಗಿ ಅವನನ್ನು ನಾಶಪಡಿಸುವಂತೆ ನೀನು ನನ್ನನ್ನು ಒತ್ತಾಯಪಡಿಸಿದೆ. ಆದರೆ ಅವನು ನನಗೆ ಇನ್ನೂ ನಂಬಿಗಸ್ತನಾಗಿದ್ದಾನೆ” ಎಂದು ಹೇಳಿದನು. 4 ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ! *ಚರ್ಮಕ್ಕೆ ಚರ್ಮ ಇದರರ್ಥವೇನಂದರೆ, ಮನುಷ್ಯನು ನೋವಿನಿಂದ ತಪ್ಪಿಸಿಕೊಳ್ಳಲು ತನಗೆ ಸಾಧ್ಯವಾದದ್ದನ್ನೆಲ್ಲಾ ಮಾಡುತ್ತಾನೆ. ಎಂಬಂತೆ ಮನುಷ್ಯನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ತನ್ನ ಸರ್ವಸ್ವವನ್ನೂ ಕೊಡುವನು. 5 ಆದರೆ ನೀನು ಕೈಚಾಚಿ ಅವನ ಮಾಂಸವನ್ನೂ ಮೂಳೆಗಳನ್ನೂ ಹೊಡೆ. ಅವನು ನಿನ್ನ ಮುಖದೆದುರಿಗೆ ನಿನ್ನನ್ನು ಖಂಡಿತವಾಗಿ ದೂಷಿಸುವನು” ಎಂದು ಉತ್ತರಕೊಟ್ಟನು. 6 ಅದಕ್ಕೆ ಯೆಹೋವನು ಸೈತಾನನಿಗೆ, “ಸರಿ, ಯೋಬನನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ; ಆದರೆ ಅವನ ಪ್ರಾಣವನ್ನು ಮಾತ್ರ ತೆಗೆಯಬೇಡ” ಎಂದು ಅಪ್ಪಣೆಕೊಟ್ಟನು. 7 ಆಗ, ಸೈತಾನನು ಯೆಹೋವನ ಬಳಿಯಿಂದ ಹೊರಟುಹೋಗಿ ಯೋಬನಿಗೆ ಬಾಧಿಸುವ ಕುರುಗಳನ್ನು ಹುಟ್ಟಿಸಿದನು. ಯೋಬನ ದೇಹದ ಮೇಲೆಲ್ಲಾ ಅಂದರೆ ಅವನ ಪಾದದಿಂದಿಡಿದು ತಲೆಯ ಮೇಲ್ಭಾಗದವರೆಗೂ ಬಾಧಿಸುವ ಕುರುಗಳು ತುಂಬಿಕೊಂಡವು. 8 ಯೋಬನು ಬೂದಿಯಲ್ಲಿ ಕುಳಿತುಕೊಂಡು ತನ್ನ ಕುರುಗಳನ್ನು ಮಡಕೆಯ ಚೂರಿನಿಂದ ಕೆರೆದುಕೊಳ್ಳುತ್ತಿದ್ದನು. 9 ಯೋಬನ ಹೆಂಡತಿಯು ಅವನಿಗೆ, “ನೀನು ಇನ್ನೂ ದೇವರಿಗೆ ನಂಬಿಗಸ್ತನಾಗಿರುವೆಯೋ? ದೇವರನ್ನು ದೂಷಿಸಿ ಸಾಯಿ” ಎಂದು ಹೇಳಿದಳು. 10 ಯೋಬನು ತನ್ನ ಹೆಂಡತಿಗೆ, “ನೀನು ಮೂರ್ಖಳಂತೆ ಮಾತಾಡುತ್ತಿರುವೆ! ದೇವರು ಒಳ್ಳೆಯವುಗಳನ್ನು ಕೊಡುವಾಗ ನಾವು ಅವುಗಳನ್ನು ಸ್ವೀಕರಿಸಿಕೊಳ್ಳುತ್ತೇವೆ. ಆತನು ಕೆಟ್ಟದ್ದನ್ನು ಕೊಡುವಾಗ ನಾವು ಸ್ವೀಕರಿಸಿಕೊಳ್ಳಬಾರದೋ?” ಎಂದು ಉತ್ತರಕೊಟ್ಟನು. ಈ ಸಂಕಟದಲ್ಲಿಯೂ ಯೋಬನು ಪಾಪ ಮಾಡಲಿಲ್ಲ ಹಾಗೂ ದೇವರ ವಿರುದ್ಧ ಯಾವ ಮಾತನ್ನು ಆಡಲಿಲ್ಲ. ಯೋಬನ ಮೂವರು ಸ್ನೇಹಿತರು 11 ಯೋಬನ ಮೂವರು ಗೆಳೆಯರು ಯಾರೆಂದರೆ: ತೇಮಾನಿನ ಎಲೀಫಜನು, ಶೂಹದ ಬಿಲ್ದದನು ಮತ್ತು ನಾಮಾಥದ ಚೋಫರನು. ಯೋಬನಿಗೆ ಸಂಭವಿಸಿದ ಆಪತ್ತುಗಳ ಬಗ್ಗೆ ಈ ಮೂವರು ಗೆಳೆಯರು ಕೇಳಿದಾಗ ತಮ್ಮ ಮನೆಯಿಂದ ಹೊರಟು ಒಟ್ಟಾಗಿ ಭೇಟಿಯಾದರು. ಯೋಬನ ಬಳಿಗೆ ಹೋಗಿ ಅನುತಾಪ ಸೂಚಿಸಿ ಸಂತೈಸಲು ಒಪ್ಪಿಕೊಂಡರು. 12 ಆದರೆ ಆ ಮೂವರು ಸ್ನೇಹಿತರು ಬಹು ದೂರದಿಂದ ಯೋಬನನ್ನು ಕಂಡಾಗ ಅವನ ಗುರುತೇ ಹಿಡಿಯಲಾರದೆ ಗಟ್ಟಿಯಾಗಿ ಅಳತೊಡಗಿದರು; ತಮ್ಮ ಮೇಲಂಗಿಗಳನ್ನು ಹರಿದುಕೊಂಡು ಮಣ್ಣನ್ನು ಮೇಲಕ್ಕೆ ತೂರಿ ತಮ್ಮ ತಲೆಗಳ ಮೇಲೆ ಸುರಿಸಿಕೊಂಡರು. 13 ಬಳಿಕ ಆ ಮೂವರು ಸ್ನೇಹಿತರು ಏಳುದಿನ ಹಗಲಿರುಳು ಯೋಬನೊಂದಿಗೆ ನೆಲದ ಮೇಲೆ ಕುಳಿತುಕೊಂಡಿದ್ದರು. ಯೋಬನು ವಿಪರೀತ ನೋವಿನಲ್ಲಿದ್ದ ಕಾರಣ ಅವರು ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ.
ಒಟ್ಟು 42 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 2 / 42
×

Alert

×

Kannada Letters Keypad References