1. {ಎಲೀಫಜನ ಉತ್ತರ} [PS] ಬಳಿಕ ತೇಮಾನ್ ಪಟ್ಟಣದ ಎಲೀಫಜನು ಉತ್ತರಕೊಟ್ಟನು:
2. “ಯಾವನೂ ದೇವರಿಗೆ ಸಹಾಯಮಾಡಲಾರನು. [QBR2] ಮಹಾ ಜ್ಞಾನಿಯು ಸಹ ದೇವರಿಗೆ ಉಪಯುಕ್ತನಾಗಲಾರನು. [QBR]
3. ನಿನ್ನ ನಡತೆಯು ಒಳ್ಳೆಯದಾಗಿದ್ದರೆ, ಅದರಿಂದ ದೇವರಿಗೆ ಸಹಾಯವಾಗುವುದೇ? ಇಲ್ಲ. [QBR2] ನೀನು ನೀತಿವಂತನಾಗಿದ್ದರೆ ಸರ್ವಶಕ್ತನಾದ ದೇವರಿಗೆ ಅದರಿಂದೇನಾದರೂ ಲಾಭವಾಗುವುದೇ? [QBR]
4. ನಿನ್ನ ಆರಾಧನೆಯ ದೆಸೆಯಿಂದ [QBR2] ದೇವರು ನಿನ್ನ ಮೇಲೆ ಆರೋಪ ಹೊರಿಸಿ ದಂಡಿಸುವನೇ? ಇಲ್ಲ! [QBR]
5. ನಿನ್ನ ಪಾಪವು ಅತಿಯಾಯಿತು! [QBR2] ಯೋಬನೇ, ನೀನು ಪಾಪಮಾಡುವುದನ್ನು ನಿಲ್ಲಿಸಲೇ ಇಲ್ಲ. [QBR]
6. ಯೋಬನೇ, ನೀನು ನಿಷ್ಕಾರಣವಾಗಿ ನಿನ್ನ ಸಹೋದರರ ವಸ್ತುಗಳನ್ನು ಒತ್ತೆಯಿಟ್ಟುಕೊಂಡು ಸಾಲ ಕೊಟ್ಟಿರಬಹುದು. [QBR2] ಜನರ ಬಟ್ಟೆಗಳನ್ನು ತೆಗೆದುಕೊಂಡು ಅವರನ್ನು ಬೆತ್ತಲೆ ಮಾಡಿರಬಹುದು. [QBR]
7. ಆಯಾಸಗೊಂಡವರಿಗೆ ನೀರು ಕೊಡದೆ [QBR2] ಹಸಿದವರಿಗೆ ಊಟ ಕೊಡದೆಹೋಗಿರಬಹುದು. [QBR]
8. ಯೋಬನೇ, ಬಲಿಷ್ಠನಾಗಿದ್ದ ನಿನ್ನಲ್ಲಿ ಬೇಸಾಯಕ್ಕೆ ಬಹಳ ಭೂಮಿಯಿದೆ. [QBR2] ಅಲ್ಲದೆ ಜನರು ಸಹ ನಿನ್ನನ್ನು ಗೌರವಿಸುತ್ತಿದ್ದರು. [QBR]
9. ಆದರೆ ವಿಧವೆಯರಿಗೆ ದಾನಮಾಡದೆ ಅವರನ್ನು ನೀನು ಕಳುಹಿಸಿಬಿಟ್ಟಿರಬಹುದು. [QBR2] ಒಂದುವೇಳೆ ನೀನು ಅನಾಥರಿಗೆ ಮೋಸಮಾಡಿರಬಹುದು. [QBR]
10. ಆದಕಾರಣ ನಿನ್ನ ಸುತ್ತಲೆಲ್ಲಾ ಉರುಲುಗಳಿವೆ; [QBR2] ಫಕ್ಕನೆ ಬರುವ ವಿಪತ್ತು ನಿನ್ನನ್ನು ಭಯಗೊಳಿಸುವುದು. [QBR]
11. ಆದಕಾರಣ ನಿನಗೆ ಏನೂ ಕಾಣಲಾಗದಷ್ಟು ಕತ್ತಲಾಗಿದೆ, [QBR2] ಪ್ರವಾಹದ ನೀರು ನಿನ್ನನ್ನು ಆವರಿಸಿಕೊಂಡಿದೆ.
12. “ದೇವರು ಅತ್ಯುನ್ನತವಾದ ಪರಲೋಕದಲ್ಲಿ ವಾಸಿಸುತ್ತಾನೆ. [QBR2] ಆತನು ಅತ್ಯಂತ ಎತ್ತರದಲ್ಲಿರುವ ನಕ್ಷತ್ರಗಳನ್ನು ಬಗ್ಗಿ ನೋಡುವನು. [QBR2] ನಕ್ಷತ್ರಗಳು ಎಷ್ಟು ಎತ್ತರದಲ್ಲಿವೆ ಎಂಬುದನ್ನು ನೀನು ನೋಡಬಲ್ಲೆ. [QBR]
13. ನೀನಾದರೋ, ‘ದೇವರಿಗೆ ಗೊತ್ತಿರುವುದೇನು? [QBR2] ಕಾರ್ಮೋಡಗಳ ಆಚೆಯಿಂದ ನಮಗೆ ನ್ಯಾಯತೀರಿಸಬಲ್ಲನೇ? [QBR]
14. ದಟ್ಟವಾದ ಮೋಡಗಳು ಆತನನ್ನು ಮುಚ್ಚಿಕೊಂಡಿವೆ. [QBR2] ಆಕಾಶದ ಮೇಲ್ಗಡೆಯಲ್ಲಿ ನಡೆದಾಡುವ ಆತನು ನಮ್ಮನ್ನು ಕಾಣಲಾರನು’ ಎಂದು ಹೇಳುತ್ತಿರುವೆ.
15. “ಯೋಬನೇ, ದುಷ್ಟರು ನಡೆಯುವ ಹಳೆದಾರಿಯ ಮೇಲೆ [QBR2] ನೀನು ನಡೆಯುತ್ತಲೇ ಇರುವಿಯೋ? [QBR]
16. ಆ ದುಷ್ಟರಿಗೆ ಅಕಾಲಮರಣವು ಬಂದಿತು. [QBR2] ಪ್ರವಾಹದಲ್ಲಿನ ಕಟ್ಟಡದಂತೆ ಅವರು ಕೊಚ್ಚಿಕೊಂಡು ಹೋದರು. [QBR]
17. ಅವರು ದೇವರಿಗೆ, ‘ನಮ್ಮಿಂದ ತೊಲಗಿಹೋಗು; [QBR2] ಸರ್ವಶಕ್ತನಾದ ದೇವರು ನಮಗೇನೂ ಮಾಡಲಾರನು!’ ಎಂದು ಹೇಳಿದ್ದರು. [QBR]
18. ಆದರೆ ದೇವರು ಅವರ ಮನೆಗಳನ್ನು ಐಶ್ವರ್ಯದಿಂದ ತುಂಬಿಸಿದನು. [QBR2] ಅಬ್ಬಾ! ದುಷ್ಟರ ಆಲೋಚನೆಯನ್ನು ನಾನು ಅನುಸರಿಸಲಾರೆ. [QBR]
19. ದುಷ್ಟರ ನಾಶನವನ್ನು ಕಂಡು ನೀತಿವಂತರು ಸಂತೋಷಪಡುವರು. [QBR2] ನಿರಪರಾಧಿಗಳು ದುಷ್ಟರನ್ನು ಕಂಡು ನಗುತ್ತಾ, [QBR]
20. ‘ನಮ್ಮ ಶತ್ರುಗಳು ನಾಶವಾದರು! [QBR2] ಬೆಂಕಿಯು ಅವರ ಐಶ್ವರ್ಯವನ್ನು ಸುಟ್ಟುಹಾಕಿತು!’ ಎಂದು ಹೇಳುವರು.
21. “ಯೋಬನೇ, ಈಗಲಾದರೊ ನಿನ್ನನ್ನು ದೇವರಿಗೆ ಒಪ್ಪಿಸಿಕೊಟ್ಟು ಆತನೊಂದಿಗೆ ಸಮಾಧಾನ ಮಾಡಿಕೊ, [QBR2] ಆಗ ನೀನು ಆಶೀರ್ವಾದವನ್ನು ಹೊಂದಿಕೊಂಡು ಅಭಿವೃದ್ಧಿಯಾಗುವೆ. [QBR]
22. ಆತನ ಉಪದೇಶವನ್ನು ಸ್ವೀಕರಿಸಿಕೊ. [QBR2] ಆತನ ವಾಕ್ಯಗಳನ್ನು ನಿನ್ನ ಹೃದಯದಲ್ಲಿಟ್ಟುಕೊ. [QBR]
23. ಯೋಬನೇ, ನೀನು ಸರ್ವಶಕ್ತನಾದ ದೇವರಿಗೆ ಅಭಿಮುಖನಾಗಿ [QBR2] ನಿನ್ನ ಮನೆಯಲ್ಲಿರುವ ಪಾಪವನ್ನು ನಿರ್ಮೂಲಮಾಡಿದರೆ ಉದ್ಧಾರವಾಗುವೆ. [QBR]
24. ನೀನು ಚಿನ್ನವನ್ನು ಧೂಳೆಂದು ಪರಿಗಣಿಸಬೇಕು. [QBR2] ನೀನು ಓಫೀರ್ ದೇಶದ ಚಿನ್ನವನ್ನು ನದಿಗಳ ದಂಡೆಯ ಮೇಲಿರುವ ಕಲ್ಲುಗಳಂತೆ ಪರಿಗಣಿಸಬೇಕು. [QBR]
25. ಆಗ ಸರ್ವಶಕ್ತನಾದ ದೇವರು ನಿನ್ನ ಪಾಲಿಗೆ [QBR2] ಬಂಗಾರವಾಗಿಯೂ ಬೆಳ್ಳಿಯ ರಾಶಿಗಳಾಗಿಯೂ ಇರುವನು. [QBR]
26. ನೀನು ಸರ್ವಶಕ್ತನಾದ ದೇವರಲ್ಲಿ ಆನಂದಿಸುವೆ. [QBR2] ದೇವರ ಕಡೆಗೆ ಕಣ್ಣೆತ್ತಿ ನೋಡುವೆ. [QBR]
27. ನೀನು ಪ್ರಾರ್ಥಿಸುವೆ, ಆತನು ನಿನಗೆ ಕಿವಿಗೊಡುವನು; [QBR2] ಆತನಿಗೆ ನಿನ್ನ ಹರಕೆಗಳನ್ನು ಸಲ್ಲಿಸುವೆ. [QBR]
28. ನಿನ್ನ ಕಾರ್ಯಗಳೆಲ್ಲಾ ಜಯಪ್ರಧವಾಗುವುದು; [QBR2] ನಿನ್ನ ಭವಿಷ್ಯತ್ತು ಪ್ರಕಾಶಮಾನವಾಗುವುದು; [QBR]
29. ದೇವರು ಅಹಂಕಾರಿಗಳನ್ನು ನಾಚಿಕೆಗೀಡುಮಾಡುವನು, [QBR2] ದೀನರಿಗಾದರೋ ಸಹಾಯಮಾಡುವನು. [QBR]
30. ನಿರಪರಾಧಿಗಳನ್ನು ರಕ್ಷಿಸುವನು. [QBR2] ನೀನು ಪರಿಶುದ್ಧನಾಗಿರುವುದರಿಂದ ನಿನ್ನ ಪ್ರಾರ್ಥನೆಗೆ ಉತ್ತರವಾಗಿ ಆತನು ಅವರನ್ನು ಕ್ಷಮಿಸುವನು.” [PE]