2. “ನನ್ನ ಜೀವಿತವು ಕೆಲವು ತಿಂಗಳುಗಳ ಮುಂಚೆ ಇದ್ದಂತೆ ಈಗಲೂ ಇದ್ದಿದ್ದರೆ ಎಷ್ಟೋ ಒಳ್ಳೆಯದಿತ್ತು. ಆ ದಿನಗಳಲ್ಲಿ ದೇವರು ನನ್ನನ್ನು ಕಾಯುತ್ತಾ ಪರಿಪಾಲಿಸುತ್ತಿದ್ದನು.
|
4. ಆ ದಿನಗಳು ನನ್ನ ಜೀವಿತದ ಸುಗ್ಗಿಕಾಲವಾಗಿದ್ದವು; ಆ ದಿನಗಳಲ್ಲಿ ದೇವರ ಸ್ನೇಹವು ನನ್ನೊಂದಿಗೂ ನನ್ನ ಮನೆಯವರೊಂದಿಗೂ ಇತ್ತು.
|
6. ಆ ದಿನಗಳಲ್ಲಿ ನನ್ನ ಜೀವಿತವು ತುಂಬ ಚೆನ್ನಾಗಿತ್ತು. ನನ್ನ ಮಾರ್ಗಗಳು ಕೆನೆಯಿಂದ ತುಂಬಿರುವಂತೆಯೂ ಬಂಡೆಗಳು ನನಗಾಗಿ ಆಲೀವ್ ಎಣ್ಣೆಯ ನದಿಗಳನ್ನೇ ಹರಿಸುತ್ತಿರುವಂತೆಯೂ ನನ್ನ ಜೀವಿತವಿತ್ತು.
|
7. “ಆ ದಿನಗಳಲ್ಲಿ ನಾನು ನಗರದ ಹೆಬ್ಬಾಗಿಲಿನ ಬಳಿಗೆ ಹೋಗಿ, ಸಾರ್ವಜನಿಕ ಸಭಾಸ್ಥಳದಲ್ಲಿ ಪಟ್ಟಣದ ಹಿರಿಯರೊಂದಿಗೆ ಕುಳಿತುಕೊಳ್ಳುತ್ತಿದ್ದೆನು.
|
8. ಅಲ್ಲಿದ್ದ ಜನರೆಲ್ಲರೂ ನನ್ನನ್ನು ಗೌರವಿಸುತ್ತಿದ್ದರು. ಯೌವನಸ್ಥರು ನನ್ನನ್ನು ಕಂಡು ಹಿಂದಕ್ಕೆ ಸರಿದು ದಾರಿಮಾಡಿ ಕೊಡುತ್ತಿದ್ದರು; ವೃದ್ಧರು ಗೌರವದಿಂದ ಎದ್ದುನಿಂತುಕೊಳ್ಳುತ್ತಿದ್ದರು.
|
11. ನನ್ನ ಮಾತನ್ನು ಕೇಳಿದವರೆಲ್ಲರೂ ನನ್ನನ್ನು ಪ್ರಶಂಸಿಸುತ್ತಿದ್ದರು; ನಾನು ಮಾಡಿದ್ದನ್ನು ಕಂಡವರೆಲ್ಲರೂ ನನ್ನನ್ನು ಹೊಗಳುತ್ತಿದ್ದರು.
|
18. “ನನ್ನ ಬಗ್ಗೆ ಆಲೋಚಿಸುತ್ತಾ, ‘ನನ್ನ ದಿನಗಳು ಮರಳಿನ ಕಣಗಳಷ್ಟು ಅಸಂಖ್ಯಾತವಾಗಿವೆ; ನಾನು ನನ್ನ ಸ್ವಂತ ಮನೆಯಲ್ಲಿ ಮರಣಹೊಂದುವೆನು.
|
22. ನನ್ನ ಮಾತುಗಳು ಪರಿಪೂರ್ಣವಾಗಿದ್ದ ಕಾರಣ ಅದಕ್ಕೆ ಬೇರೇನೂ ಸೇರಿಸಲು ಅವರಿಗೆ ಸಾಧ್ಯವಿರಲಿಲ್ಲ. ನನ್ನ ಮಾತುಗಳು ಅವರ ಕಿವಿಗಳಿಗೆ ಕೋಮಲವಾಗಿದ್ದವು.
|
23. ಮಳೆಗಾಗಿಯೋ ಎಂಬಂತೆ ಅವರು ನನ್ನ ಮಾತುಗಳಿಗಾಗಿ ಎದುರು ನೋಡುತ್ತಿದ್ದರು. ವಸಂತ ಕಾಲದಲ್ಲಿ ಬೀಳುವ ಮಳೆಯ ನೀರನ್ನೋ ಎಂಬಂತೆ ಅವರು ನನ್ನ ಮಾತುಗಳನ್ನು ಕುಡಿಯುತ್ತಿದ್ದರು.
|
24. ನಾನು ಅವರನ್ನು ಕಂಡು ಮುಗುಳ್ನಗೆ ಬೀರಿದಾಗ ಅವರಿಗೆ ನಂಬುವುದಕ್ಕೇ ಆಗುತ್ತಿರಲಿಲ್ಲ. ನನ್ನ ಸಂತೋಷದ ಮುಖವು ಅವರನ್ನು ಪ್ರೋತ್ಸಾಹಗೊಳಿಸಿತು.
|
25. ನಾನು ನಾಯಕನಾಗಿದ್ದರೂ ಅವರೊಂದಿಗೇ ಇರುತ್ತಿದ್ದೆನು; ಪಾಳೆಯದಲ್ಲಿ ಸೈನ್ಯಗಳೊಂದಿಗಿರುವ ರಾಜನಂತೆ ನಾನು ದುಃಖಿತರನ್ನು ಆದರಿಸುತ್ತಿದ್ದೆನು.
|