1. ಈಗಲಾದರೋ, ನನಗಿಂತ ಚಿಕ್ಕವರೂ ನನ್ನನ್ನು ಗೇಲಿಮಾಡುತ್ತಾರೆ. ಅವರ ತಂದೆಗಳನ್ನು ನನ್ನ ಕುರಿಕಾಯುವ ನಾಯಿಗಳಿಗೂ ಯೋಗ್ಯರಲ್ಲವೆಂದು ತಳ್ಳಿ ಬಿಟ್ಟಿದ್ದೆನು.
|
2. ಆ ಯೌವನಸ್ಥರ ತಂದೆಗಳಿಗೆ ನನ್ನಲ್ಲಿ ಕೆಲಸ ಮಾಡುವಷ್ಟು ಬಲವಿರಲಿಲ್ಲ. ಅವರು ಮುದುಕರಾಗಿದ್ದರು; ತ್ರಾಣವಿಲ್ಲದವರಾಗಿದ್ದರು.
|
5. ಅವರನ್ನು ಬೇರೆಯವರು ಬಲವಂತದಿಂದ ಹೊರಗಟ್ಟುತ್ತಿದ್ದರು. ಕಳ್ಳರನ್ನೋ ಎಂಬಂತೆ ಜನರು ಅವರನ್ನು ಕಂಡು ಕೂಗಿಕೊಳ್ಳುತ್ತಿದ್ದರು.
|
10. ಆ ಯೌವನಸ್ಥರು ನನ್ನನ್ನು ಕಂಡು ಅಸಹ್ಯ ಪಡುತ್ತಾರೆ; ನನ್ನಿಂದ ದೂರನಿಲ್ಲುತ್ತಾರೆ. ನನ್ನ ಮುಖದ ಮೇಲೆ ಉಗುಳುವುದಕ್ಕೂ ಅವರು ಹಿಂದೆಗೆಯರು!
|
11. ದೇವರು ನನ್ನ ಬಿಲ್ಲಿನ ತಂತಿಯನ್ನು ಕಿತ್ತು ನನ್ನನ್ನು ಬಲಹೀನಗೊಳಿಸಿದ್ದಾನೆ. ಆ ಯೌವನಸ್ಥರು ಕಡಿವಾಣವಿಲ್ಲದವರಾಗಿ ಕೋಪದಿಂದ ನನಗೆ ವಿರೋಧವಾಗಿ ಎದ್ದಿದ್ದಾರೆ.
|
13. ನಾನು ತಪ್ಪಿಸಿಕೊಂಡು ಹೋಗುವ ದಾರಿಯನ್ನು ಆ ಯೌವನಸ್ಥರು ಕಾಯುತ್ತಿದ್ದಾರೆ. ನನ್ನನ್ನು ನಾಶಮಾಡುವುದರಲ್ಲಿ ಅವರು ಯಶಸ್ವಿಯಾಗುವರು. ಅವರಿಗೆ ವಿರುದ್ಧವಾಗಿ ನನಗೆ ಸಹಾಯಮಾಡಲು ಯಾರೂ ಇಲ್ಲ.
|
15. ನಾನು ಭಯದಿಂದ ನಡುಗುತ್ತಿರುವೆ. ಗಾಳಿಯು ವಸ್ತುಗಳನ್ನು ಕೊಚ್ಚಿಕೊಂಡು ಹೋಗುವಂತೆ ಆ ಯೌವನಸ್ಥರು ನನ್ನ ಮಾನವನ್ನು ಅಟ್ಟಿಬಿಡುವರು. ನನ್ನ ಸುರಕ್ಷತೆಯು ಮೋಡದಂತೆ ಕಾಣದೆ ಹೋಗುವುದು.
|
20. “ದೇವರೇ, ನಾನು ಸಹಾಯಕ್ಕಾಗಿ ನಿನಗೆ ಮೊರೆಯಿಡುವೆನು, ಆದರೆ ನೀನು ಉತ್ತರಿಸುವುದಿಲ್ಲ. ನಾನು ಎದ್ದುನಿಂತು ಪ್ರಾರ್ಥಿಸಿದರೂ ನೀನು ನನಗೆ ಗಮನಕೊಡುವುದಿಲ್ಲ.
|
22. ದೇವರೆ, ನನ್ನನ್ನು ಎತ್ತಿಕೊಂಡು ಹೋಗಲು ನೀನು ಬಿರುಗಾಳಿಗೆ ಅವಕಾಶಕೊಟ್ಟೆ; ನೀನು ನನ್ನನ್ನು ಎತ್ತಿ ಬಿರುಗಾಳಿಗೆ ಎಸೆದುಬಿಟ್ಟೆ.
|
25. ದೇವರೇ, ಕಷ್ಟದಲ್ಲಿರುವವರಿಗಾಗಿ ನಾನು ಅತ್ತದ್ದು ನಿನಗೆ ಗೊತ್ತಿದೆ. ಬಡವರಿಗೋಸ್ಕರ ನನ್ನ ಹೃದಯವು ಬಹು ದುಃಖಗೊಂಡದ್ದು ನಿನಗೆ ತಿಳಿದಿದೆ.
|
26. ಆದರೆ ನಾನು ಒಳ್ಳೆಯವುಗಳನ್ನು ನಿರೀಕ್ಷಿಸುತ್ತಿದ್ದಾಗ ನನಗೆ ಕೇಡುಗಳೇ ಆದವು. ನಾನು ಬೆಳಕಿಗಾಗಿ ಎದುರು ನೋಡುತ್ತಿದ್ದಾಗ ನನಗೆ ಕತ್ತಲಾಯಿತು.
|
28. ನಾನು ದುಃಖಿತನೂ ಕುಂದಿಹೋದವನೂ ಆಗಿರುವೆ; ನನಗೆ ಉಪಶಮನವೇ ಇಲ್ಲ. ನಾನು ಸಭೆಯಲ್ಲಿ ನಿಂತುಕೊಂಡು ಸಹಾಯಕ್ಕಾಗಿ ಕೂಗುತ್ತಿರುವೆ.
|
31. ಶೋಕಗೀತೆಗಳನ್ನು ನುಡಿಸಲು ನನ್ನ ಹಾರ್ಪ್ ವಾದ್ಯವನ್ನು ಶೃತಿಮಾಡಲಾಗಿದೆ. ನನ್ನ ಕೊಳಲು ಅಳುವವರಿಗೆ ತಕ್ಕಂತೆ ನುಡಿಯುತ್ತದೆ.
|