1. “ಯುವತಿಯನ್ನು ಕಾಮದಾಶೆಯಿಂದ ನೋಡುವುದಿಲ್ಲವೆಂದು [QBR2] ನನ್ನ ಕಣ್ಣುಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇನೆ. [QBR]
2. ಸರ್ವಶಕ್ತನಾದ ದೇವರು ಜನರಿಗೆ ಏನು ಮಾಡುವನು? [QBR2] ದೇವರು ತನ್ನ ಉನ್ನತವಾದ ಪರಲೋಕದಿಂದ ಜನರಿಗೆ ಹೇಗೆ ಪ್ರತಿಫಲವನ್ನು ಕೊಡುವನು? [QBR]
3. ಆತನು ದುಷ್ಟರಿಗೆ ತೊಂದರೆಯನ್ನೂ ನಾಶನವನ್ನೂ [QBR2] ತಪ್ಪಿತಸ್ಥರಿಗೆ ವಿಪತ್ತನ್ನೂ ಕಳುಹಿಸುವನು. [QBR]
4. ನಾನು ಮಾಡುವ ಪ್ರತಿಯೊಂದು ದೇವರಿಗೆ ಗೊತ್ತು [QBR2] ಮತ್ತು ನಾನಿಡುವ ಪ್ರತಿಯೊಂದು ಹೆಜ್ಜೆಯನ್ನೂ ಆತನು ಗಮನಿಸುವನು.
5. “ನಾನು ಸುಳ್ಳು ಹೇಳಲಿಲ್ಲ; [QBR2] ಜನರಿಗೆ ಮೋಸಮಾಡಲು ಪ್ರಯತ್ನಿಸಲೂ ಇಲ್ಲ. [QBR]
6. ದೇವರು ನ್ಯಾಯವಾದ ಅಳತೆಮಾನಗಳಿಂದ ನನ್ನನ್ನು ತೂಗಿದರೆ, [QBR2] ನಾನು ನಿರಪರಾಧಿಯೆಂದು ಆತನಿಗೆ ಗೊತ್ತಾಗುವುದು. [QBR]
7. ನಾನು ನೀತಿಮಾರ್ಗವನ್ನು ಬಿಟ್ಟುಹೋಗಿದ್ದರೆ, [QBR2] ನನ್ನ ಕಣ್ಣುಗಳು ನನ್ನ ಹೃದಯವನ್ನು ಕೆಟ್ಟದ್ದಕ್ಕೆ ನಡೆಸಿದ್ದರೆ, [QBR2] ನನ್ನ ಕೈಗಳು ಪಾಪದಿಂದ ಕೊಳಕಾಗಿದ್ದರೆ, [QBR]
8. ನಾನು ಬಿತ್ತಿ ಬೆಳೆಸಿದ ಬೆಳೆಗಳನ್ನು ಬೇರೆಯವರು ತಿನ್ನಲಿ; [QBR2] ನಾನು ಬೆಳೆಸಿದ ಸಸಿಗಳು ಕೀಳಲ್ಪಡಲಿ.
9. “ಒಂದುವೇಳೆ ನಾನು ಪರಸ್ತ್ರೀಯಲ್ಲಿ ಮರುಳುಗೊಂಡಿದ್ದರೆ, [QBR2] ನನ್ನ ನೆರೆಯವನ ಹೆಂಡತಿಯೊಂದಿಗೆ ವ್ಯಭಿಚಾರ ಮಾಡಲು ಅವನ ಮನೆಯ ಬಾಗಿಲಲ್ಲಿ ಕಾದುಕೊಂಡಿದ್ದರೆ, [QBR]
10. ನನ್ನ ಹೆಂಡತಿಯು ಬೇರೊಬ್ಬನಿಗೆ ಸೇವಕಿಯಾಗಲಿ; [QBR2] ಬೇರೆಯವರು ಆಕೆಯೊಂದಿಗೆ ಮಲಗಿಕೊಳ್ಳಲಿ. [QBR]
11. ಯಾಕೆಂದರೆ ವ್ಯಭಿಚಾರ ಅವಮಾನಕರ. [QBR2] ಆ ಪಾಪಕ್ಕೆ ದಂಡನೆಯಾಗಲೇಬೇಕು. [QBR]
12. ವ್ಯಭಿಚಾರವು ಸುಟ್ಟು ನಾಶಮಾಡುವ ಬೆಂಕಿಯಂತಿದೆ. [QBR2] ನಾನು ಹೊಂದಿರುವ ಪ್ರತಿಯೊಂದನ್ನು ಅದು ನಾಶಮಾಡಿಬಿಡುತ್ತಿತ್ತು.
13. “ನನ್ನ ಸೇವಕಸೇವಕಿಯರು ನನಗೆ ವಿರೋಧವಾಗಿ ದೂರನ್ನು ಹೊಂದಿದ್ದಾಗ [QBR2] ನಾನು ಅವರಿಗೆ ನ್ಯಾಯವನ್ನು ದೊರಕಿಸಿಲ್ಲದಿದ್ದರೆ [QBR]
14. ದೇವರು ನನ್ನನ್ನು ಮುಖಾಮುಖಿಯಾಗಿ ಸಂಧಿಸುವಾಗ ನಾನೇನು ಮಾಡಲಿ? [QBR2] ನಾನು ಮಾಡಿದ್ದಕ್ಕೆ ವಿವರಣೆ ಕೊಡುವಂತೆ ದೇವರು ನನ್ನನ್ನು ಕರೆಯುವಾಗ ನಾನೇನು ಉತ್ತರ ಕೊಡಲಿ? [QBR]
15. ದೇವರು ನನ್ನನ್ನು ನನ್ನ ತಾಯಿಯ ಗರ್ಭದಲ್ಲಿ ನಿರ್ಮಿಸಿದನು. [QBR2] ದೇವರು ನನ್ನ ಸೇವಕಸೇವಕಿಯರನ್ನೂ ನಿರ್ಮಿಸಿದನು. [QBR2] ದೇವರು ನಮ್ಮೆಲ್ಲರನ್ನು ನಮ್ಮ ತಾಯಂದಿರ ಗರ್ಭಗಳಲ್ಲಿ ರೂಪಿಸಿದನು.
16. “ಬಡಜನರಿಗೆ ಸಹಾಯಮಾಡಲು ನಾನೆಂದೂ ನಿರಾಕರಿಸಲಿಲ್ಲ; [QBR2] ವಿಧವೆಯರಿಗೆ ಬೇಕಾದದ್ದನ್ನೆಲ್ಲ ನಾನು ಒದಗಿಸಿಕೊಟ್ಟೆನು. [QBR]
17. ನಾನು ಸ್ವಾರ್ಥದಿಂದ ನನ್ನ ಆಹಾರವನ್ನು ಎಂದೂ ಇಟ್ಟುಕೊಳ್ಳಲಿಲ್ಲ. [QBR2] ಅನಾಥರು ಹಸಿವೆಯಿಂದಿರಲು ನಾನೆಂದೂ ಅವಕಾಶ ಕೊಟ್ಟಿಲ್ಲ. [QBR]
18. ನಾನು ನನ್ನ ಜೀವಮಾನವೆಲ್ಲಾ, ಅನಾಥರಿಗೆ ತಂದೆಯಂತಿದ್ದೆನು; [QBR2] ವಿಧವೆಯರನ್ನು ಪರಿಪಾಲಿಸಿದೆನು. [QBR]
19. ಬಟ್ಟೆಯಿಲ್ಲದೆ ಸಂಕಟಪಡುತ್ತಿರುವವರನ್ನೂ [QBR2] ಮೇಲಂಗಿಯಿಲ್ಲದ ಬಡವರನ್ನೂ ನಾನು ಕಂಡಾಗಲೆಲ್ಲಾ [QBR]
20. ಅವರಿಗೆ ಬಟ್ಟೆಗಳನ್ನು ಕೊಟ್ಟೆನು. [QBR2] ನನ್ನ ಕುರಿಗಳ ಉಣ್ಣೆಯಿಂದ ಅವರ ಮೈಯನ್ನು ಬೆಚ್ಚಗೆ ಮಾಡಿದೆನು. [QBR2] ಅವರು ನನ್ನನ್ನು ಪೂರ್ಣಹೃದಯದಿಂದ ಆಶೀರ್ವದಿಸಿದರು. [QBR]
21. ನನಗೆ ನ್ಯಾಯಸ್ಥಾನದಲ್ಲಿ ಬೆಂಬಲವಿದ್ದರೂ [QBR2] ಅನಾಥರನ್ನು ಕಂಡು ನಾನೆಂದೂ ಅವರ ಮೇಲೆ ಕೈ ಮಾಡಲಿಲ್ಲ. [QBR]
22. ನಾನು ಹಾಗೆ ಮಾಡಿದ್ದರೆ, [QBR2] ನನ್ನ ತೋಳು ಕೀಲುತಪ್ಪಿ ಭುಜದಿಂದ ಮುರಿದುಬೀಳಲಿ. [QBR]
23. ನಾನು ಆ ಕೆಟ್ಟಕಾರ್ಯಗಳಲ್ಲಿ ಯಾವುದನ್ನೂ ಮಾಡಲಿಲ್ಲ. [QBR2] ಯಾಕೆಂದರೆ ನಾನು ದೇವರ ಶಿಕ್ಷೆಗೆ ಹೆದರಿಕೊಂಡಿದ್ದೆ. [QBR2] ಆತನ ವೈಭವದ ಎದುರಿನಲ್ಲಿ ನಿಂತುಕೊಳ್ಳಲು ನನಗಾಗಲಿಲ್ಲ.
24. “ನಾನು ನನ್ನ ಐಶ್ವರ್ಯಗಳಲ್ಲಿ ಎಂದೂ ಭರವಸವಿಡಲಿಲ್ಲ. [QBR2] ನಾನು ಬಂಗಾರಕ್ಕೆ ‘ನೀನೇ ನನ್ನ ನಿರೀಕ್ಷೆ’ ಎಂದು ಹೇಳಲೇ ಇಲ್ಲ. [QBR]
25. ನನ್ನ ಐಶ್ವರ್ಯದಿಂದಲೂ ನಾನು ಗರ್ವಿಷ್ಠನಾಗಲಿಲ್ಲ. [QBR2] ನಾನು ಗಳಿಸಿದ ಅಪಾರ ಹಣವೂ ನನ್ನನ್ನು ಉಲ್ಲಾಸಪಡಿಸಲಿಲ್ಲ. [QBR]
26. ಪ್ರಕಾಶಮಾನವಾದ ಸೂರ್ಯನನ್ನಾಗಲಿ [QBR2] ಸುಂದರವಾದ ಚಂದ್ರನನ್ನಾಗಲಿ ನಾನೆಂದೂ ಪೂಜಿಸಲಿಲ್ಲ. [QBR]
27. ನಾನು ಮರುಳುಗೊಂಡು [QBR2] ನನ್ನ ಕೈಗೆ ಮುದ್ದಿಡುವುದರ ಮೂಲಕ ಸೂರ್ಯಚಂದ್ರರನ್ನು ಪೂಜಿಸಲಿಲ್ಲ. [QBR]
28. ನಾನು ಅವುಗಳಲ್ಲಿ ಯಾವುದನ್ನೇ ಮಾಡಿದ್ದರೂ ನನಗೆ ಶಿಕ್ಷೆಯಾಗುತ್ತಿತ್ತು. [QBR2] ಯಾಕೆಂದರೆ ಆಗ ನಾನು ಸರ್ವಶಕ್ತನಾದ ದೇವರಿಗೆ ಅಪನಂಬಿಗಸ್ತನಾಗುತ್ತಿದ್ದೆನು.
29. “ನನ್ನ ವೈರಿಗಳು ನಾಶವಾದಾಗ [QBR2] ನಾನೆಂದೂ ಸಂತೋಷಪಡಲಿಲ್ಲ. [QBR] ನನ್ನ ವೈರಿಗಳಿಗೆ ಕೇಡಾದಾಗ [QBR2] ನಾನೆಂದೂ ನಗಲಿಲ್ಲ. [QBR]
30. ನನ್ನ ವೈರಿಗಳನ್ನು ಶಪಿಸಿ, ಅವರಿಗೆ ಸಾವನ್ನು ಕೋರಲು [QBR2] ನಾನೆಂದೂ ನನ್ನ ಬಾಯಿಗೆ ಅವಕಾಶ ಕೊಡಲಿಲ್ಲ. [QBR]
31. ನಾನು ಅಪರಿಚಿತರಿಗೆ ಯಾವಾಗಲೂ ಊಟ ಕೊಟ್ಟದ್ದು [QBR2] ನನ್ನ ಮನೆಯಲ್ಲಿರುವ ಎಲ್ಲರಿಗೂ ಗೊತ್ತಿದೆ. [QBR]
32. ನಾನು ಅಪರಿಚಿತರನ್ನು ನನ್ನ ಮನೆಗೆ ಯಾವಾಗಲೂ ಆಹ್ವಾನಿಸುತ್ತಿದ್ದೆನು. [QBR2] ಆದ್ದರಿಂದ ರಾತ್ರಿಯಲ್ಲಿ ಅವರು ಬೀದಿಗಳಲ್ಲಿ ಮಲಗಿಕೊಳ್ಳಬೇಕಾಗಿರಲಿಲ್ಲ. [QBR]
33. ಬೇರೆಯವರು ತಮ್ಮ ಪಾಪಗಳನ್ನು ಮರೆಮಾಡಲು ಪ್ರಯತ್ನಿಸಬಹುದು. [QBR2] ಆದರೆ ನಾನು ನನ್ನ ಯಾವ ಪಾಪವನ್ನೂ ಮರೆಮಾಡಲಿಲ್ಲ. [QBR]
34. ಜನರ ಮಾತಿಗೆ ನಾನೆಂದೂ ಭಯಗೊಂಡಿರಲಿಲ್ಲ; ಯಾವ ಕುಟುಂಬದ ಅಸಮ್ಮತಿಗೂ ನಾನೆಂದೂ ಹೆದರಿಕೊಂಡಿರಲಿಲ್ಲ; ಅಂಥ ಯಾವ ಭಯವೂ ನನ್ನನ್ನು ಮೌನಗೊಳಿಸಿ ಮನೆಯೊಳಗಿರಿಸಲಿಲ್ಲ. [QBR2] ಯಾಕೆಂದರೆ ನನ್ನ ಮೇಲೆ ಜನರಿಗಿರುವ ದ್ವೇಷಕ್ಕೆ ನಾನು ಹೆದರಿಕೊಂಡಿರಲಿಲ್ಲ.
35. “ಅಯ್ಯೋ, ನನಗೆ ಕಿವಿಗೊಡುವುದಕ್ಕೆ ಯಾರಾದರೊಬ್ಬರು ಇರಬೇಕಿತ್ತು! [QBR2] ನಾನು ಸತ್ಯವನ್ನೇ ಹೇಳಿದೆನೆಂಬುದಕ್ಕೆ ಇದೋ, ಇಲ್ಲಿದೆ ನನ್ನ ಸಹಿ! [QBR] ಸರ್ವಶಕ್ತನಾದ ದೇವರು ನನಗೆ ಉತ್ತರಕೊಡಲಿ. [QBR2] ನನ್ನ ಮೇಲೆ ಅಪವಾದ ಹೊರಿಸುವವನು, ಆಪಾದನೆಯ ಪತ್ರವನ್ನು ಕೊಡಲಿ! [QBR]
36. ಖಂಡಿತವಾಗಿಯೂ ನಾನು ಆ ಪತ್ರವನ್ನು ನನ್ನ ಹೆಗಲ ಮೇಲೆ ಇಟ್ಟುಕೊಳ್ಳುವೆನು. [QBR2] ಅದನ್ನು ಕಿರೀಟವನ್ನಾಗಿ ಧರಿಸಿಕೊಳ್ಳುವೆನು. [QBR]
37. ನಾನು ಮಾಡಿರುವ ಪ್ರತಿಯೊಂದನ್ನು ದೇವರಿಗೆ ವಿವರಿಸುವೆನು. [QBR2] ನಾನು ಅಧಿಪತಿಯಂತೆ ತಲೆಯೆತ್ತಿಕೊಂಡು ಆತನ ಸಮೀಪಕ್ಕೆ ಬರುವೆನು.
38. “ನನ್ನ ಹೊಲವನ್ನು ಬೇರೆಯವರಿಂದ ಕಿತ್ತುಕೊಳ್ಳಲಿಲ್ಲ; [QBR2] ಈ ವಿಷಯದಲ್ಲಿ ಯಾರೂ ನನ್ನ ಮೇಲೆ ಅಪವಾದ ಹೊರಿಸಲಾರರು. [QBR]
39. ನಾನು ರೈತರಿಗೆ ಬೆಳೆಯಲ್ಲಿ ಪಾಲು ಕೊಟ್ಟೆನು; [QBR2] ಯಾರೂ ಹಸಿವೆಯಿಂದ ಇರಲು ಬಿಡಲಿಲ್ಲ. [QBR]
40. ಇವುಗಳಲ್ಲಿ ನಾನು ಯಾವುದನ್ನಾದರೂ ಮಾಡಿದ್ದರೆ, [QBR2] ಗೋಧಿ ಮತ್ತು ಬಾರ್ಲಿಗಳ ಬದಲಾಗಿ ನನ್ನ ಹೊಲಗಳಲ್ಲಿ ಮುಳ್ಳುಗಳೂ ಕಳೆಗಳೂ ಬೆಳೆಯಲಿ.” [PS] ಹೀಗೆ ಯೋಬನ ಮಾತುಗಳು ಮುಗಿದವು. [PE]