1. “ಈಗಲಾದರೋ ಯೋಬನೇ, ನನ್ನ ಸಂದೇಶಕ್ಕೆ ಕಿವಿಗೊಡು. [QBR2] ನನ್ನ ಮಾತುಗಳಿಗೆ ಗಮನ ಕೊಡು. [QBR]
2. ಈಗ ನಾನು ನನ್ನ ಬಾಯಿ ತೆರೆಯುವೆನು; ನಾನು ಮಾತಾಡಲು ಸಿದ್ಧನಾಗಿದ್ದೇನೆ. [QBR]
3. ನನ್ನ ಹೃದಯವು ಯಥಾರ್ಥವಾಗಿದೆ; ಆದ್ದರಿಂದ ನಾನು ಯಥಾರ್ಥವಾದ ಮಾತುಗಳನ್ನು ಹೇಳುವೆನು, [QBR2] ನನಗೆ ತಿಳಿದಿರುವ ಸಂಗತಿಗಳ ಬಗ್ಗೆ ಸತ್ಯವನ್ನು ಹೇಳುವೆನು. [QBR]
4. ದೇವರಾತ್ಮನು ನನ್ನನ್ನು ನಿರ್ಮಿಸಿದನು. [QBR2] ಸರ್ವಶಕ್ತನಾದ ದೇವರ ಉಸಿರು ನನಗೆ ಜೀವವನ್ನು ಕೊಟ್ಟಿತು. [QBR]
5. ಯೋಬನೇ, ಕಿವಿಗೊಡು! ನಿನಗೆ ಸಾಧ್ಯವೆನಿಸಿದರೆ ನನಗೆ ಉತ್ತರಕೊಡು. [QBR2] ನಿನ್ನ ವಾದವನ್ನು ಸಿದ್ಧಪಡಿಸಿಕೊ; ನನ್ನೆದುರಿನಲ್ಲಿ ನಿನ್ನ ಪರವಾಗಿ ಪ್ರತಿವಾದಿಸು! [QBR]
6. ನೀನು ಮತ್ತು ನಾನು ದೇವರ ಎದುರಿನಲ್ಲಿ ಒಂದೇ ರೀತಿಯಲ್ಲಿದ್ದೇವೆ. [QBR2] ದೇವರು ನಮ್ಮಿಬ್ಬರನ್ನು ಮಣ್ಣಿನಿಂದ ನಿರ್ಮಿಸಿದನು. [QBR]
7. ಯೋಬನೇ, ನನಗೆ ಭಯಪಡಬೇಡ. [QBR2] ನಾನು ನಿನ್ನನ್ನು ಸೋಲಿಸುವುದಿಲ್ಲ.
8. “ಆದರೆ ಯೋಬನೇ, [QBR2] ನೀನು ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: [QBR]
9. ‘ಯೋಬನಾದ ನಾನು ಪರಿಶುದ್ಧನು; ನಾನು ನಿರಪರಾಧಿ; [QBR2] ನಾನು ಯಾವ ತಪ್ಪನ್ನೂ ಮಾಡಲಿಲ್ಲ; ನಾನು ದೋಷಿಯಲ್ಲ! [QBR]
10. ನಾನು ತಪ್ಪು ಮಾಡಿಲ್ಲದಿದ್ದರೂ ದೇವರು ನನಗೆ ವಿರೋಧವಾಗಿದ್ದಾನೆ. [QBR2] ದೇವರು ನನ್ನನ್ನು ತನ್ನ ವೈರಿಯೆಂದು ಪರಿಗಣಿಸಿದ್ದಾನೆ; [QBR]
11. ದೇವರು ನನ್ನ ಕಾಲುಗಳನ್ನು ಸರಪಣಿಯಿಂದ ಕಟ್ಟಿದ್ದಾನೆ; [QBR2] ನಾನು ಮಾಡುವ ಪ್ರತಿಯೊಂದನ್ನೂ ದೇವರು ಗಮನಿಸುತ್ತಿದ್ದಾನೆ.’
12. “ಆದರೆ ಯೋಬನೇ, ಈ ವಿಷಯದಲ್ಲಿ ನೀನು ತಪ್ಪಿತಸ್ಥನಾಗಿರುವೆ. ನಾನು ಅದನ್ನು ನಿರೂಪಿಸುವೆ. [QBR2] ದೇವರು ಮನುಷ್ಯನಿಗಿಂತ ದೊಡ್ಡವನು. [QBR]
13. ಯೋಬನೇ, ನೀನು ದೇವರೊಂದಿಗೆ ವಾದಿಸುವುದೇಕೆ? [QBR2] ದೇವರು ನಿನಗೆ ಪ್ರತಿಯೊಂದನ್ನೂ ವಿವರಿಸಬೇಕೆಂದು ಭಾವಿಸಿಕೊಂಡಿರುವೆಯೋ? [QBR]
14. ಒಂದುವೇಳೆ ದೇವರು ತನ್ನ ಕಾರ್ಯದ ಕುರಿತಾಗಿ ವಿವರಿಸಬಹುದು. [QBR2] ಒಂದುವೇಳೆ ನಮಗೆ ಅರ್ಥವಾಗದ ರೀತಿಯಲ್ಲಿ ಆತನು ಮಾತಾಡಬಹುದು. [QBR]
15. ಜನರು ಗಾಢನಿದ್ರೆಯಲ್ಲಿರುವಾಗ [QBR2] ದೇವರು ಕನಸಿನ ಮೂಲಕವಾಗಲಿ ದರ್ಶನದ ಮೂಲಕವಾಗಲಿ ಮಾತಾಡಬಹುದು. [QBR]
16. ಆತನು ಅವರ ಕಿವಿಗಳಲ್ಲಿ ಮಾತಾಡಬಹುದು. [QBR2] ಆಗ ಅವರು ದೇವರ ಎಚ್ಚರಿಕೆಗಳಿಂದ ಬಹು ಭಯಗೊಳ್ಳುವರು. [QBR]
17. ಜನರು ತಪ್ಪು ಮಾಡಬಾರದೆಂದೂ ಅಹಂಕಾರಿಗಳಾಗಿರಬಾರದೆಂದೂ [QBR2] ದೇವರು ಅವರಿಗೆ ಎಚ್ಚರಿಕೆ ಕೊಡುತ್ತಾನೆ. [QBR]
18. ಮರಣದ ಸ್ಥಳಕ್ಕೆ ಹೋಗುತ್ತಿರುವ ಜನರನ್ನು ರಕ್ಷಿಸುವುದಕ್ಕಾಗಿ ದೇವರು ಎಚ್ಚರಿಕೆ ಕೊಡುತ್ತಾನೆ. [QBR2] ನಾಶವಾಗುತ್ತಿರುವವನನ್ನು ರಕ್ಷಿಸುವುದಕ್ಕಾಗಿ ದೇವರು ಎಚ್ಚರಿಸುತ್ತಾನೆ.
19. “ಇದಲ್ಲದೆ ಒಬ್ಬನು ದೇವರ ಶಿಕ್ಷೆಯಿಂದ ಹಾಸಿಗೆಹಿಡಿದು ಸಂಕಟಪಡುತ್ತಿರುವಾಗ ದೇವರ ಸ್ವರಕ್ಕೆ ಕಿವಿಗೊಟ್ಟರೂ ಕೊಡಬಹುದು. [QBR2] ದೇವರು ಅವನನ್ನು ಎಲುಬುಗಳೆಲ್ಲಾ ಬಾಧಿಸುವಂಥ ನೋವಿನಿಂದ ಎಚ್ಚರಿಸುತ್ತಾನೆ. [QBR]
20. ಅವನಿಗೆ ಊಟಮಾಡಲೂ ಸಾಧ್ಯವಿಲ್ಲ. [QBR2] ಅವನು ಅತ್ಯಧಿಕವಾದ ನೋವಿನಿಂದ ಬಳಲುತ್ತಿರುವುದರಿಂದ ಮೃಷ್ಠಾನ್ನಕ್ಕೂ ಅಸಹ್ಯಪಡುವನು. [QBR]
21. ಅವನು ಆಸ್ತಿಪಂಜರದಂತೆ ಕ್ಷೀಣವಾಗುವನು. [QBR2] ಕಾಣದಿದ್ದ ಅವನ ಎಲುಬುಗಳು ಚರ್ಮಕ್ಕೆ ಅಂಟಿಕೊಂಡು ಅವು ಹೊರತೋರುತ್ತವೆ. [QBR]
22. ಅವನಿಗೆ ಸಾವು ಸಮೀಪವಾಗಿದೆ; [QBR2] ಅವನ ಜೀವವು ಪಾತಾಳಕ್ಕೆ ಹತ್ತಿರವಾಗಿದೆ. [QBR]
23. ಒಂದುವೇಳೆ ದೇವರ ದೂತರಲ್ಲೊಬ್ಬನು ಮಧ್ಯಸ್ಥಗಾರನಾಗಿ ಬಂದು [QBR2] ಅವನ ನೀತಿಕಾರ್ಯಗಳನ್ನು ದೃಢಪಡಿಸಿ ಅವನ ಮೇಲೆ ಪ್ರೀತಿಯುಳ್ಳವನಾಗಿ, [QBR]
24. ‘ಇವನನ್ನು ಪಾತಾಳದಿಂದ ರಕ್ಷಿಸು! [QBR2] ಇವನಿಗೋಸ್ಕರ ಪ್ರಾಯಶ್ಚಿತ್ತದ ಮಾರ್ಗವೊಂದನ್ನು ಕಂಡುಕೊಂಡಿದ್ದೇನೆ’ ಎಂದು ಹೇಳಿದರೆ [QBR]
25. ಅವನ ದೇಹವು ಬಾಲ್ಯದಂತೆ ಕೋಮಲವಾಗುವುದು; [QBR2] ಯೌವನಪ್ರಾಯದಂತೆ ದೃಢಕಾಯವಾಗುವುದು. [QBR]
26. ಆಗ ಅವನು ದೇವರಿಗೆ ಪ್ರಾರ್ಥಿಸಲು ಆತನು ಅವನ ಪ್ರಾರ್ಥನೆಗೆ ಉತ್ತರಕೊಡುವನು. [QBR2] ಅವನು ಆನಂದ ಧ್ವನಿಗೈದು ದೇವರನ್ನು ಆರಾಧಿಸುವನು; [QBR2] ಆತನ ಮುಂದೆ ನೀತಿವಂತನಾಗಿ ಜೀವಿಸುವನು. [QBR]
27. ಬಳಿಕ ಅವನು ಜನರ ಮುಂದೆ ನಿಂತುಕೊಂಡು, ‘ನಾನು ಪಾಪಮಾಡಿದೆನು; [QBR2] ಒಳ್ಳೆಯದನ್ನು ಕೆಟ್ಟದ್ದನ್ನಾಗಿ ಮಾಡಿದೆನು. [QBR2] ಆದರೆ ದೇವರು ಅದಕ್ಕೆ ತಕ್ಕಂತೆ ನನ್ನನ್ನು ದಂಡಿಸಲಿಲ್ಲ! [QBR]
28. ದೇವರು ನನ್ನ ಆತ್ಮವನ್ನು ಪಾತಾಳಕ್ಕೆ ಹೋಗದಂತೆ ರಕ್ಷಿಸಿದನು. [QBR2] ಆದ್ದರಿಂದ ನಾನು ಜೀವನದಲ್ಲಿ ಮತ್ತೆ ಸುಖಪಡುವಂತಾಯಿತು’ ಎಂದು ಅರಿಕೆಮಾಡಿಕೊಳ್ಳುವನು.
29. (29-30) “ಅವನನ್ನು ಎಚ್ಚರಿಸಿ ಅವನ ಆತ್ಮವನ್ನು ಪಾತಾಳದಿಂದ ರಕ್ಷಿಸಬೇಕೆಂದೂ ಜೀವನದ ಸುಖವನ್ನು ಅವನು ಮತ್ತೆ ಅನುಭವಿಸಲೆಂದೂ [QBR2] ದೇವರು ಈ ಕಾರ್ಯಗಳನ್ನು ಪದೇಪದೇ ಮಾಡುವನು.
30.
31. “ಯೋಬನೇ, ನನ್ನ ಮಾತುಗಳಿಗೆ ಗಮನಕೊಟ್ಟು ಕೇಳು, ಮೌನವಾಗಿರು. [QBR2] ನಾನು ಮಾತಾಡುವೆನು. [QBR]
32. ಯೋಬನೇ, ನೀನು ಏನಾದರೂ ಹೇಳಬೇಕೆಂದಿದ್ದರೆ, ಅದನ್ನು ನಾನು ಕೇಳುವಂತಾಗಲಿ. [QBR2] ಮುನ್ನಡೆದು ಮಾತಾಡು, [QBR2] ಯಾಕೆಂದರೆ ನಿನ್ನನ್ನು ನೀತಿವಂತನೆಂದು ಸ್ಥಾಪಿಸಲು ನನಗೆ ಸಂತೋಷ. [QBR]
33. ಯೋಬನೇ, ಹೇಳುವುದಕ್ಕೆ ನಿನ್ನಲ್ಲಿ ಏನೂ ಇಲ್ಲದಿದ್ದರೆ ನನಗೆ ಕಿವಿಗೊಟ್ಟು ಮೌನವಾಗಿರು. [QBR2] ನಾನು ನಿನಗೆ ಜ್ಞಾನವನ್ನು ಬೋಧಿಸುವೆನು.” [PE]