1. ಎಲೀಹು ತನ್ನ ಮಾತನ್ನು ಮುಂದುವರಿಸಿದನು:
2. “ಜ್ಞಾನಿಗಳೇ, ನನ್ನ ಮಾತುಗಳನ್ನು ಕೇಳಿರಿ. [QBR2] ಜಾಣರೇ, ನನಗೆ ಗಮನಕೊಡಿರಿ. [QBR]
3. ಕಿವಿಯು ಮಾತುಗಳನ್ನು ವಿವೇಚಿಸುತ್ತದೆ; [QBR2] ನಾಲಿಗೆಯು ಆಹಾರವನ್ನು ರುಚಿನೋಡುತ್ತದೆ. [QBR]
4. ಅಂತೆಯೇ ನಾವು ಈ ವಾದಗಳನ್ನು ಪರೀಕ್ಷಿಸಿ [QBR2] ನ್ಯಾಯವಾದದ್ದನ್ನೇ ಆರಿಸಿಕೊಳ್ಳೋಣ. [QBR]
5. ಯೋಬನು ಹೇಳುವುದೇನೆಂದರೆ, ‘ನಾನು ನಿರಪರಾಧಿ. [QBR2] ದೇವರು ನನಗೆ ನ್ಯಾಯದೊರಕಿಸುತ್ತಿಲ್ಲ. [QBR]
6. ನಾನು ನೀತಿವಂತನಾಗಿದ್ದರೂ ಅಪರಾಧಿಯೆನಿಸಿಕೊಂಡಿದ್ದೇನೆ. [QBR2] ನಾನು ನಿರ್ದೋಷಿಯಾಗಿದ್ದರೂ ಆತನ ಬಾಣದ ಪೆಟ್ಟು ವಿಪರೀತವಾಗಿದೆ.’
7. “ಯೋಬನಿಗೆ ಸಮಾನನು ಯಾರು? [QBR2] ಅವನು ನೀರು ಕುಡಿದಂತೆ ದೇವರನ್ನು ದೂಷಿಸುತ್ತಾನೆ. [QBR]
8. ಯೋಬನು ದುಷ್ಟರೊಂದಿಗೆ ಸ್ನೇಹದಿಂದಿರುವನು; [QBR2] ಕೆಟ್ಟವರ ಸಂಗಡ ನಡೆದಾಡುವನು. [QBR]
9. ಯಾಕೆಂದರೆ, ‘ದೇವರಿಗೆ ವಿಧೇಯನಾಗಿರುವವನಿಗೆ [QBR2] ಅದರಿಂದ ಯಾವ ಪ್ರಯೋಜನವೂ ಇಲ್ಲ’ ಎಂದು ಅವನೇ ಹೇಳಿದ್ದಾನೆ.
10. “ಆದ್ದರಿಂದ ಬುದ್ಧಿವಂತರೇ, ನನ್ನ ಮಾತುಗಳಿಗೆ ಕಿವಿಗೊಡಿ. [QBR2] ದೇವರು ಕೆಟ್ಟದ್ದನ್ನು ಎಂದಿಗೂ ಮಾಡುವುದಿಲ್ಲ. [QBR2] ಸರ್ವಶಕ್ತನಾದ ದೇವರು ಎಂದಿಗೂ ತಪ್ಪು ಮಾಡುವುದಿಲ್ಲ. [QBR]
11. ಆತನು ಮನುಷ್ಯನಿಗೆ ಅವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು. [QBR2] ಪ್ರತಿಯೊಬ್ಬನು ತನ್ನ ನಡತೆಗೆ ತಕ್ಕಂತೆ ದೇವರಿಂದ ಹೊಂದಿಕೊಳ್ಳುವನು. [QBR]
12. ಹೌದು, ನಿಜ, ದೇವರು ಕೆಟ್ಟದ್ದನ್ನು ಮಾಡುವುದಿಲ್ಲ; [QBR2] ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕು ಮಾಡುವುದಿಲ್ಲ. [QBR]
13. ಭೂಲೋಕಕ್ಕೆ ದೇವರನ್ನು ಅಧಿಪತಿಯನ್ನಾಗಿ ಯಾರು ಆರಿಸಿಕೊಂಡರು? [QBR2] ಇಡೀ ಪ್ರಪಂಚದ ಮೇಲಿನ ಜವಾಬ್ದಾರಿಯನ್ನು ದೇವರಿಗೆ ಯಾರು ಕೊಟ್ಟರು? [QBR]
14. ಆತನು ಸ್ವಾರ್ಥದಲ್ಲಿ ಮನಸ್ಸಿಟ್ಟು, [QBR2] ತನ್ನ ಆತ್ಮವನ್ನೂ ಜೀವದ ಉಸಿರನ್ನೂ ಜನರಿಂದ ತೆಗೆದುಕೊಳ್ಳುವುದಾದರೆ, [QBR]
15. ಆಗ ಭೂಮಿಯ ಮೇಲಿರುವ ಎಲ್ಲಾ ಜನರು [QBR2] ಸತ್ತುಹೋಗಿ ಧೂಳಾಗುವರು.
16. “ನೀನು ವಿವೇಕಿಯಾಗಿದ್ದರೆ, [QBR2] ನನ್ನ ಮಾತುಗಳಿಗೆ ಕಿವಿಗೊಡು. [QBR]
17. ನ್ಯಾಯವನ್ನು ದ್ವೇಷಿಸುವವನು ಅಧಿಪತಿಯಾಗುವನೇ? [QBR2] ಯೋಬನೇ, ಬಲಿಷ್ಠನೂ ಒಳ್ಳೆಯವನೂ ಆಗಿರುವ ದೇವರನ್ನು [QBR2] ದೋಷಿಯೆಂಬುದಾಗಿ ತೀರ್ಪುನೀಡಲು ನಿನಗೆ ಸಾಧ್ಯವೇ? [QBR]
18. ‘ನೀವು ಅಯೋಗ್ಯರು!’ ಎಂದು ರಾಜರುಗಳಿಗೆ ಹೇಳುವವನು ದೇವರೊಬ್ಬನೇ. [QBR2] ‘ನೀವು ಕೆಡುಕರು!’ ಎಂದು ನಾಯಕರುಗಳಿಗೆ ಹೇಳುವವನು ದೇವರೇ. [QBR]
19. ದೇವರಲ್ಲಿ ಸಾಮಾನ್ಯರು ಮತ್ತು ಪ್ರಮುಖರು ಎಂದಾಗಲಿ [QBR2] ಬಡವರು ಮತ್ತು ಶ್ರೀಮಂತರು ಎಂದಾಗಲಿ ಭೇದಭಾವವಿಲ್ಲ. [QBR2] ಯಾಕೆಂದರೆ ಎಲ್ಲರನ್ನೂ ಸೃಷ್ಟಿಮಾಡಿದವನು ದೇವರೇ. [QBR]
20. ಒಬ್ಬನು ಕ್ಷಣಮಾತ್ರದೊಳಗೆ ಮಧ್ಯರಾತ್ರಿಯಲ್ಲಿ ಸಾಯಬಹುದು. [QBR2] ಜನರು ಕಾಯಿಲೆಯಿಂದ ಸಾಯಬಹುದು. [QBR2] ದುಷ್ಟರು ಸಹ ಯಾವುದೇ ಕಾರಣವಿಲ್ಲದೆ ಸಾಯಬಹುದು.
21. “ಮನುಷ್ಯರ ಕಾರ್ಯಗಳನ್ನು ದೇವರು ಗಮನಿಸುತ್ತಾನೆ. [QBR2] ಅವನ ಪ್ರತಿಯೊಂದು ಹೆಜ್ಜೆ ಆತನಿಗೆ ಗೊತ್ತಿದೆ. [QBR]
22. ದುಷ್ಟನನ್ನು ದೇವರಿಂದ ಮರೆಮಾಡಬಲ್ಲ ಕತ್ತಲೆಯ ಸ್ಥಳವಾಗಲಿ [QBR2] ಕಾರ್ಗತ್ತಲೆಯ ಸ್ಥಳವಾಗಲಿ ಇಲ್ಲವೇ ಇಲ್ಲ. [QBR]
23. ದೇವರು ಮನುಷ್ಯರನ್ನು ಪರೀಕ್ಷಿಸಲು ಸಮಯವನ್ನು ಗೊತ್ತು ಪಡಿಸಬೇಕಿಲ್ಲ; [QBR2] ನ್ಯಾಯತೀರ್ಪು ನೀಡಲು ಅವರನ್ನು ತನ್ನ ಮುಂದೆ ಕರೆಸಬೇಕಿಲ್ಲ. [QBR]
24. ಬಲಿಷ್ಠರು ತಪ್ಪು ಮಾಡಿದಾಗ [QBR2] ದೇವರು ಅವರನ್ನು ವಿಚಾರಿಸದೆ ನಾಶಮಾಡಿ [QBR] ಅವರ ಸ್ಥಳದಲ್ಲಿ ಬೇರೆಯವರನ್ನು ನೆಲೆಗೊಳಿಸುವನು. [QBR]
25. ಹೀಗೆ ಆತನು ಅವರ ಕಾರ್ಯಗಳನ್ನು ಲಕ್ಷಿಸಿ, [QBR2] ರಾತ್ರಿಯಲ್ಲಿ ಅವರನ್ನು ಸೋಲಿಸಿ ನಾಶಮಾಡುವನು. [QBR]
26. ದೇವರು ದುಷ್ಟರನ್ನು [QBR2] ಅವರ ದುಷ್ಕೃತ್ಯಗಳ ನಿಮಿತ್ತ ಬಹಿರಂಗವಾಗಿ ದಂಡಿಸುವನು. [QBR]
27. ಯಾಕೆಂದರೆ ದುಷ್ಟರು ದೇವರಿಗೆ ವಿಧೇಯರಾಗಲಿಲ್ಲ; [QBR2] ಆತನ ಮಾರ್ಗಗಳನ್ನು ಲಕ್ಷಿಸಲಿಲ್ಲ. [QBR]
28. ಹೀಗೆ ಬಡವರ ಗೋಳಾಟವು ದೇವರಿಗೆ ಮುಟ್ಟುವಂತೆ ದುಷ್ಟರು ಮಾಡಿದರು. [QBR2] ಆತನು ದಿಕ್ಕಿಲ್ಲದವರ ಕೂಗನ್ನು ಕೇಳಿದನು. [QBR]
29. ಆದರೆ ದೇವರು ಬಡಜನರಿಗೆ ಸಹಾಯಮಾಡದಿರಲು ನಿರ್ಧರಿಸಿದರೆ, [QBR2] ಆತನನ್ನು ದೋಷಿಯೆಂದು ತೀರ್ಪುಮಾಡುವವನು ಯಾರು? [QBR] ದೇವರು ತನ್ನ ಮುಖವನ್ನು ಅವರಿಗೆ ಮರೆಮಾಡಿಕೊಂಡರೆ ಆತನನ್ನು ನೋಡಬಲ್ಲವರು ಯಾರು? [QBR2] ಮನುಷ್ಯರನ್ನೂ ಜನಾಂಗಗಳನ್ನೂ ಆಳುವವನು ದೇವರೇ. [QBR]
30. ದೈವಹೀನನಾದ ರಾಜನು ಜನರನ್ನು ನಾಶನಕ್ಕೆ ನಡೆಸುವುದಾದರೆ [QBR2] ದೇವರು ಅವನನ್ನು ಪದಚ್ಯುತಿಗೊಳಿಸುವನು.
31. “ಮನುಷ್ಯನು ದೇವರಿಗೆ, ‘ನಾನು ದೋಷಿ, [QBR2] ನಾನು ಇನ್ನೆಂದಿಗೂ ಪಾಪ ಮಾಡುವುದಿಲ್ಲ. [QBR]
32. ದೇವರೇ, ನೀನು ನನಗೆ ಅಗೋಚರವಾಗಿದ್ದರೂ ನೀತಿಮಾರ್ಗವನ್ನು ಬೋಧಿಸು, [QBR2] ನಾನು ತಪ್ಪು ಮಾಡಿದ್ದರೆ ಅದನ್ನು ಮತ್ತೆ ಮಾಡುವುದಿಲ್ಲ’ ಎಂದು ಹೇಳಬಹುದು. [QBR]
33. ಯೋಬನೇ, ನೀನು ಮಾರ್ಪಾಟಾಗದೆ [QBR2] ದೇವರಿಂದ ಪ್ರತಿಫಲವನ್ನು ಅಪೇಕ್ಷಿಸುವುದೇಕೆ? [QBR] ಯೋಬನೇ, ಇದು ನಿನ್ನ ನಿರ್ಧಾರ, ನನ್ನದಲ್ಲ. [QBR2] ನಿನ್ನ ಆಲೋಚನೆಯನ್ನು ನನಗೆ ತಿಳಿಸು. [QBR]
34. ಜ್ಞಾನಿಗಳೂ ಬುದ್ಧಿವಂತರೂ [QBR2] ನನ್ನ ಮಾತುಗಳಿಗೆ ಕಿವಿಗೊಟ್ಟು, [QBR]
35. ‘ಯೋಬನು ತಿಳುವಳಿಕೆಯಿಲ್ಲದೆ ಮಾತಾಡುತ್ತಾನೆ. [QBR2] ಅವನ ಮಾತುಗಳಿಗೆ ಅರ್ಥವೇ ಇಲ್ಲ!’ [QBR]
36. ಯೋಬನಿಗೆ ಪರಿಶೋಧನೆ ನಿರಂತರವಾಗಿದ್ದರೆ ಒಳ್ಳೆಯದು. [QBR2] ಯಾಕೆಂದರೆ ಅವನು ದುಷ್ಟನಂತೆ ಉತ್ತರಿಸುತ್ತಿದ್ದಾನೆ. [QBR]
37. ಅವನು ತನ್ನ ಪಾಪಕ್ಕೆ ಇನ್ನೂ ಕೂಡಿಸಿಕೊಳ್ಳುತ್ತಿದ್ದಾನೆ; [QBR2] ನಮ್ಮ ಮಧ್ಯದಲ್ಲಿ ತನ್ನ ದುಷ್ಟತನವನ್ನು ಅಧಿಕಮಾಡಿಕೊಳ್ಳುತ್ತಿದ್ದಾನೆ; ದೇವದ್ರೋಹವನ್ನು ಹೆಚ್ಚಿಸಿಕೊಳ್ಳುತ್ತಿದ್ದಾನೆ” ಎಂದು ನನಗೆ ಹೇಳುವರು. [PE]