ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಯೋಬನು
1. ಎಲೀಹು ಮಾತನ್ನು ಮುಂದುವರಿಸಿ,
2. “ಯೋಬನೇ, ‘ನಾನು ದೇವರಿಗಿಂತ ನೀತಿವಂತನೆಂದು’ [QBR2] ನೀನು ಹೇಳುವುದು ನ್ಯಾಯವಲ್ಲ. [QBR]
3. ಅಲ್ಲದೆ ನೀನು ದೇವರಿಗೆ, [QBR2] ‘ಮನುಷ್ಯನು ಪಾಪ ಮಾಡದೆ ದೇವರನ್ನು ಮೆಚ್ಚಿಸುವುದರಿಂದ ಅವನಿಗೆ ಪ್ರಯೋಜನವೇನು? [QBR2] ನಾನು ಪಾಪಮಾಡದಿದ್ದರೆ ನನಗೇನು ಒಳಿತಾಗುವುದು’ ಎಂದು ಕೇಳು.
4. “ಯೋಬನೇ, ನಾನು ನಿನಗೂ ನಿನ್ನೊಂದಿಗಿರುವ ಸ್ನೇಹಿತರಿಗೂ ಉತ್ತರಕೊಡುವೆ. [QBR]
5. ಕಣ್ಣೆತ್ತಿ ಆಕಾಶವನ್ನು ನೋಡು. [QBR2] ಮೋಡಗಳನ್ನು ದೃಷ್ಟಿಸು, ಅವು ನಿನಗಿಂತ ಎಷ್ಟೋ ಎತ್ತರವಾಗಿವೆ. [QBR]
6. ಯೋಬನೇ, ನೀನು ಪಾಪಮಾಡಿದರೆ, ಅದರಿಂದ ದೇವರಿಗೇನೂ ಕೇಡಾಗುವುದಿಲ್ಲ. [QBR2] ನೀನು ಅನೇಕ ಪಾಪಗಳನ್ನು ಮಾಡಿದ್ದರೂ ಅದರಿಂದ ದೇವರಿಗೇನೂ ಆಗುವುದಿಲ್ಲ. [QBR]
7. ಯೋಬನೇ, ನೀನು ಒಳ್ಳೆಯವನಾಗಿದ್ದರೆ, ಅದರಿಂದ ದೇವರಿಗೇನೂ ಸಹಾಯವಾಗುವುದಿಲ್ಲ. [QBR2] ದೇವರಿಗೆ ನಿನ್ನಿಂದೇನೂ ಲಾಭವಾಗುವುದಿಲ್ಲ. [QBR]
8. ಯೋಬನೇ, ನಿನ್ನ ದುಷ್ಟತನದಿಂದ ನಿನ್ನಂಥವನಿಗೇ ಕೇಡಾಗುವುದು; [QBR2] ನಿನ್ನ ಒಳ್ಳೆಯ ಕಾರ್ಯಗಳಿಂದ ನಿನ್ನಂಥವನಿಗೇ ಒಳ್ಳೆಯದಾಗುವುದು.
9. “ಹಿಂಸೆಗೂ ಅನ್ಯಾಯಕ್ಕೂ ಒಳಗಾಗಿರುವವರು [QBR2] ತಮ್ಮನ್ನು ಬಲಿಷ್ಠರಿಂದ ಬಿಡಿಸಬಲ್ಲ ಯಾರಿಗಾದರೂ ಮೊರೆಯಿಡುವರು. [QBR]
10. ಆದರೆ ಆ ಕೆಟ್ಟ ಜನರು ಸಹಾಯಕ್ಕಾಗಿ ದೇವರನ್ನು ಕೇಳಿಕೊಳ್ಳುವುದಿಲ್ಲ. [QBR2] ಅವರು, ‘ನನ್ನನ್ನು ಸೃಷ್ಟಿಸಿದ ದೇವರೆಲ್ಲಿ?’ ಎಂದು ಕೇಳುವುದಿಲ್ಲ. [QBR2] ‘ಕುಗ್ಗಿಹೋದವರಿಗೆ ಸಹಾಯಮಾಡುವ ದೇವರೆಲ್ಲಿ?’ ಎಂದು ಕೇಳುವುದಿಲ್ಲ. [QBR]
11. ‘ನಮ್ಮನ್ನು ಪಕ್ಷಿಗಳಿಗಿಂತಲೂ ಪ್ರಾಣಿಗಳಿಗಿಂತಲೂ [QBR2] ಜ್ಞಾನಿಗಳನ್ನಾಗಿ ಮಾಡುವ ದೇವರೆಲ್ಲಿ?’ ಎಂದು ಅವರು ಕೇಳುವುದಿಲ್ಲ.
12. “ಅಲ್ಲದೆ ಆ ಕೆಟ್ಟವರು ದೇವರನ್ನು ಸಹಾಯಕ್ಕಾಗಿ ಕೇಳಿಕೊಂಡರೂ ಆತನು ಅವರಿಗೆ ಉತ್ತರಿಸುವುದಿಲ್ಲ. [QBR2] ಯಾಕೆಂದರೆ ಅವರು ದುಷ್ಟರೂ ದುರಾಭಿಮಾನಿಗಳೂ ಆಗಿದ್ದಾರೆ. [QBR]
13. ಹೌದು, ದೇವರು ಅವರ ಬೆಲೆಯಿಲ್ಲದ ಬೇಡಿಕೆಯನ್ನು ಕೇಳುವುದಿಲ್ಲ; [QBR2] ಸರ್ವಶಕ್ತನಾದ ದೇವರು ಅವರಿಗೆ ಗಮನ ಕೊಡುವುದಿಲ್ಲ. [QBR]
14. ಯೋಬನೇ, ನೀನು, ‘ದೇವರನ್ನು ಕಾಣಲಾರೆನು’ ಎಂದು ಹೇಳುವಾಗ [QBR2] ಆತನು ನಿನಗೆ ಕಿವಿಗೊಡುವುದಿಲ್ಲ. [QBR] ನಿನ್ನ ವ್ಯಾಜ್ಯವು ಆತನ ಮುಂದೆ ಇರುವುದರಿಂದ [QBR2] ನೀನು ಆತನಿಗಾಗಿ ಕಾದುಕೊಂಡಿರಬೇಕು.
15. “ದೇವರು ಕೆಟ್ಟಜನರನ್ನು ದಂಡಿಸುವುದಿಲ್ಲ; [QBR2] ಪಾಪವನ್ನು ಗಮನಿಸುವುದಿಲ್ಲ ಎಂಬುದು ಯೋಬನ ಆಲೋಚನೆ. [QBR]
16. ಆದ್ದರಿಂದ ಯೋಬನು ತನ್ನ ನಿಷ್ಪ್ರಯೋಜಕ ಮಾತನ್ನು ಮುಂದುವರಿಸುತ್ತಿದ್ದಾನೆ; [QBR2] ದುರಾಭಿಮಾನದಿಂದ ವರ್ತಿಸುತ್ತಿದ್ದಾನೆ; ತಿಳುವಳಿಕೆಯಿಲ್ಲದೆ ಮಾತಾಡುತ್ತಿದ್ದಾನೆ.” [PE]

ಟಿಪ್ಪಣಿಗಳು

No Verse Added

ಒಟ್ಟು 42 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 35 / 42
ಯೋಬನು 35:16
1 ಎಲೀಹು ಮಾತನ್ನು ಮುಂದುವರಿಸಿ, 2 “ಯೋಬನೇ, ‘ನಾನು ದೇವರಿಗಿಂತ ನೀತಿವಂತನೆಂದು’ ನೀನು ಹೇಳುವುದು ನ್ಯಾಯವಲ್ಲ. 3 ಅಲ್ಲದೆ ನೀನು ದೇವರಿಗೆ, ‘ಮನುಷ್ಯನು ಪಾಪ ಮಾಡದೆ ದೇವರನ್ನು ಮೆಚ್ಚಿಸುವುದರಿಂದ ಅವನಿಗೆ ಪ್ರಯೋಜನವೇನು? ನಾನು ಪಾಪಮಾಡದಿದ್ದರೆ ನನಗೇನು ಒಳಿತಾಗುವುದು’ ಎಂದು ಕೇಳು. 4 “ಯೋಬನೇ, ನಾನು ನಿನಗೂ ನಿನ್ನೊಂದಿಗಿರುವ ಸ್ನೇಹಿತರಿಗೂ ಉತ್ತರಕೊಡುವೆ. 5 ಕಣ್ಣೆತ್ತಿ ಆಕಾಶವನ್ನು ನೋಡು. ಮೋಡಗಳನ್ನು ದೃಷ್ಟಿಸು, ಅವು ನಿನಗಿಂತ ಎಷ್ಟೋ ಎತ್ತರವಾಗಿವೆ. 6 ಯೋಬನೇ, ನೀನು ಪಾಪಮಾಡಿದರೆ, ಅದರಿಂದ ದೇವರಿಗೇನೂ ಕೇಡಾಗುವುದಿಲ್ಲ. ನೀನು ಅನೇಕ ಪಾಪಗಳನ್ನು ಮಾಡಿದ್ದರೂ ಅದರಿಂದ ದೇವರಿಗೇನೂ ಆಗುವುದಿಲ್ಲ. 7 ಯೋಬನೇ, ನೀನು ಒಳ್ಳೆಯವನಾಗಿದ್ದರೆ, ಅದರಿಂದ ದೇವರಿಗೇನೂ ಸಹಾಯವಾಗುವುದಿಲ್ಲ. ದೇವರಿಗೆ ನಿನ್ನಿಂದೇನೂ ಲಾಭವಾಗುವುದಿಲ್ಲ. 8 ಯೋಬನೇ, ನಿನ್ನ ದುಷ್ಟತನದಿಂದ ನಿನ್ನಂಥವನಿಗೇ ಕೇಡಾಗುವುದು; ನಿನ್ನ ಒಳ್ಳೆಯ ಕಾರ್ಯಗಳಿಂದ ನಿನ್ನಂಥವನಿಗೇ ಒಳ್ಳೆಯದಾಗುವುದು. 9 “ಹಿಂಸೆಗೂ ಅನ್ಯಾಯಕ್ಕೂ ಒಳಗಾಗಿರುವವರು ತಮ್ಮನ್ನು ಬಲಿಷ್ಠರಿಂದ ಬಿಡಿಸಬಲ್ಲ ಯಾರಿಗಾದರೂ ಮೊರೆಯಿಡುವರು. 10 ಆದರೆ ಆ ಕೆಟ್ಟ ಜನರು ಸಹಾಯಕ್ಕಾಗಿ ದೇವರನ್ನು ಕೇಳಿಕೊಳ್ಳುವುದಿಲ್ಲ. ಅವರು, ‘ನನ್ನನ್ನು ಸೃಷ್ಟಿಸಿದ ದೇವರೆಲ್ಲಿ?’ ಎಂದು ಕೇಳುವುದಿಲ್ಲ. ‘ಕುಗ್ಗಿಹೋದವರಿಗೆ ಸಹಾಯಮಾಡುವ ದೇವರೆಲ್ಲಿ?’ ಎಂದು ಕೇಳುವುದಿಲ್ಲ. 11 ‘ನಮ್ಮನ್ನು ಪಕ್ಷಿಗಳಿಗಿಂತಲೂ ಪ್ರಾಣಿಗಳಿಗಿಂತಲೂ ಜ್ಞಾನಿಗಳನ್ನಾಗಿ ಮಾಡುವ ದೇವರೆಲ್ಲಿ?’ ಎಂದು ಅವರು ಕೇಳುವುದಿಲ್ಲ. 12 “ಅಲ್ಲದೆ ಆ ಕೆಟ್ಟವರು ದೇವರನ್ನು ಸಹಾಯಕ್ಕಾಗಿ ಕೇಳಿಕೊಂಡರೂ ಆತನು ಅವರಿಗೆ ಉತ್ತರಿಸುವುದಿಲ್ಲ. ಯಾಕೆಂದರೆ ಅವರು ದುಷ್ಟರೂ ದುರಾಭಿಮಾನಿಗಳೂ ಆಗಿದ್ದಾರೆ. 13 ಹೌದು, ದೇವರು ಅವರ ಬೆಲೆಯಿಲ್ಲದ ಬೇಡಿಕೆಯನ್ನು ಕೇಳುವುದಿಲ್ಲ; ಸರ್ವಶಕ್ತನಾದ ದೇವರು ಅವರಿಗೆ ಗಮನ ಕೊಡುವುದಿಲ್ಲ. 14 ಯೋಬನೇ, ನೀನು, ‘ದೇವರನ್ನು ಕಾಣಲಾರೆನು’ ಎಂದು ಹೇಳುವಾಗ ಆತನು ನಿನಗೆ ಕಿವಿಗೊಡುವುದಿಲ್ಲ. ನಿನ್ನ ವ್ಯಾಜ್ಯವು ಆತನ ಮುಂದೆ ಇರುವುದರಿಂದ ನೀನು ಆತನಿಗಾಗಿ ಕಾದುಕೊಂಡಿರಬೇಕು. 15 “ದೇವರು ಕೆಟ್ಟಜನರನ್ನು ದಂಡಿಸುವುದಿಲ್ಲ; ಪಾಪವನ್ನು ಗಮನಿಸುವುದಿಲ್ಲ ಎಂಬುದು ಯೋಬನ ಆಲೋಚನೆ. 16 ಆದ್ದರಿಂದ ಯೋಬನು ತನ್ನ ನಿಷ್ಪ್ರಯೋಜಕ ಮಾತನ್ನು ಮುಂದುವರಿಸುತ್ತಿದ್ದಾನೆ; ದುರಾಭಿಮಾನದಿಂದ ವರ್ತಿಸುತ್ತಿದ್ದಾನೆ; ತಿಳುವಳಿಕೆಯಿಲ್ಲದೆ ಮಾತಾಡುತ್ತಿದ್ದಾನೆ.”
ಒಟ್ಟು 42 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 35 / 42
Common Bible Languages
West Indian Languages
×

Alert

×

kannada Letters Keypad References