1. ಎಲೀಹು ಮಾತನ್ನು ಮುಂದುವರಿಸಿ ಹೀಗೆಂದನು:
2. “ಯೋಬನೇ, ಇನ್ನು ಸ್ವಲ್ಪಹೊತ್ತು ನನ್ನೊಂದಿಗೆ ತಾಳ್ಮೆಯಿಂದಿರು. [QBR2] ದೇವರ ಪರವಾಗಿ ಹೇಳಬೇಕಾಗಿರುವ ಇನ್ನೂ ಕೆಲವು ಮಾತುಗಳಿವೆ. [QBR]
3. ನಾನು ಜ್ಞಾನವನ್ನು ಬಹುದೂರದಿಂದ ಪಡೆದುಕೊಂಡಿದ್ದೇನೆ. [QBR2] ನನ್ನ ಸೃಷ್ಟಿಕರ್ತನಾದ ದೇವರು ನ್ಯಾಯವಂತನೆಂದು ನಿರೂಪಿಸುವೆ. [QBR]
4. ಯೋಬನೇ, ನಾನು ಹೇಳುವ ಪ್ರತಿಯೊಂದು ಮಾತೂ ಸತ್ಯ. [QBR2] ನಿನ್ನ ಬಳಿಯಲ್ಲಿ ಜ್ಞಾನಪೂರ್ಣನೊಬ್ಬನು ಇದ್ದಾನೆ.
5. “ದೇವರು ಮಹಾ ಶಕ್ತಿಶಾಲಿಯಾಗಿದ್ದರೂ ಜನರನ್ನು ತಿರಸ್ಕರಿಸುವುದಿಲ್ಲ. [QBR2] ದೇವರು ಮಹಾ ಬಲಶಾಲಿಯೂ ಹೌದು, ಮಹಾ ಜ್ಞಾನಿಯೂ ಹೌದು! [QBR]
6. ದೇವರು ದುಷ್ಟರನ್ನು ಜೀವಿಸಲು ಅವಕಾಶ ಕೊಡುವುದಿಲ್ಲ. [QBR2] ಆತನು ಬಡಜನರಿಗೆ ಯಾವಾಗಲೂ ನ್ಯಾಯದೊರಕಿಸುವನು. [QBR]
7. ನೀತಿವಂತರನ್ನು ದೇವರು ಪರಿಪಾಲಿಸುವನು; [QBR2] ಆತನು ಒಳ್ಳೆಯವರನ್ನು ಅಧಿಪತಿಗಳನ್ನಾಗಿ ನೇಮಿಸುವನು; [QBR2] ಅವರಿಗೆ ಸದಾಕಾಲ ಗೌರವ ದೊರೆಯುವಂತೆ ಮಾಡುವನು. [QBR]
8. ಅವರು ಒಂದುವೇಳೆ ದಂಡನೆಗೆ ಒಳಗಾಗಿ ಸರಪಣಿಗಳಿಂದ ಬಂಧಿಸಲ್ಪಟ್ಟು [QBR2] ಸಂಕಟಪಡುತ್ತಿದ್ದರೆ, [QBR]
9. ಆತನು ಅವರ ದುಷ್ಕೃತ್ಯವನ್ನೂ ಪಾಪವನ್ನೂ ಗರ್ವವನ್ನೂ [QBR2] ಅವರಿಗೆ ತಿಳಿಯಪಡಿಸುವನು. [QBR]
10. ಇದಲ್ಲದೆ ತನ್ನ ಎಚ್ಚರಿಕೆಯ ಮಾತಿಗೆ ಕಿವಿಗೊಡುವಂತೆ ಬಲವಂತ ಮಾಡುವನು; [QBR2] ಪಾಪಮಾಡಕೂಡದೆಂದು ಆಜ್ಞಾಪಿಸುವನು. [QBR]
11. ಅವರು ದೇವರಿಗೆ ಕಿವಿಗೊಟ್ಟು ಆತನಿಗೆ ವಿಧೇಯರಾದರೆ, [QBR2] ಆತನು ಅವರನ್ನು ಅಭಿವೃದ್ಧಿಪಡಿಸುವನು; ಆಗ ಅವರ ಜೀವನವು ಸುಖಕರವಾಗುವುದು. [QBR]
12. ಆದರೆ ಅವರು ದೇವರಿಗೆ ವಿಧೇಯರಾಗದಿದ್ದರೆ ನಾಶವಾಗುವರು; [QBR2] ಮೂಢರಂತೆ ಸಾಯುವರು.
13. “ದೇವರ ಬಗ್ಗೆ ಲಕ್ಷಿಸದವರು ಯಾವಾಗಲೂ ಕೋಪದಿಂದಿರುವರು. [QBR2] ದೇವರು ಅವರನ್ನು ದಂಡಿಸಿದರೂ ಅವರು ದೇವರಿಗೆ ಮೊರೆಯಿಡುವುದಿಲ್ಲ. [QBR]
14. ಅವರು ಯೌವನ ಪ್ರಾಯದಲ್ಲೇ [QBR2] ಪುರುಷಗಾಮಿಗಳಂತೆ ಸಾಯುವರು. [QBR]
15. ಆದರೆ ದೇವರು ದೀನರನ್ನು ವಿಪತ್ತುಗಳಿಂದ ಬಿಡಿಸುವನು. [QBR2] ಆ ವಿಪತ್ತುಗಳಿಂದ ದೇವರು ಜನರನ್ನು ಎಚ್ಚರಗೊಳಿಸಿ ತನಗೆ ಕಿವಿಗೊಡುವಂತೆ ಮಾಡುವನು.
16. “ಯೋಬನೇ, ದೇವರು ನಿನ್ನನ್ನು ಕೇಡಿನಿಂದ ತಪ್ಪಿಸಿ [QBR2] ಸುರಕ್ಷಿತವೂ ಅಭಿವೃದ್ಧಿಕರವೂ ಆಗಿರುವ ಸ್ಥಳಕ್ಕೆ ಕರೆದುಕೊಂಡು ಬಂದು [QBR2] ನಿನಗೆ ಊಟವನ್ನು ಯಥೇಚ್ಛವಾಗಿ ಬಡಿಸಲು ಇಷ್ಟಪಡುತ್ತಾನೆ. [QBR]
17. ಯೋಬನೇ, ಈಗಲಾದರೋ ನೀನು ದೋಷಿಯೆಂದು ನಿರ್ಣಯಿಸಲ್ಪಟ್ಟಿರುವೆ; ದುಷ್ಟನಂತೆ ದಂಡಿಸಲ್ಪಟ್ಟಿರುವೆ. [QBR]
18. ಯೋಬನೇ, ಕೋಪವು ನಿನ್ನನ್ನು ಮೋಸಗೊಳಿಸದಿರಲಿ; [QBR2] ಹಣವು ನಿನ್ನ ಮನಸ್ಸನ್ನು ಮಾರ್ಪಡಿಸದಿರಲಿ, ನಿನ್ನನ್ನು ನಾಶನಕ್ಕೆ ನಡೆಸದಿರಲಿ. [QBR]
19. ನಿನ್ನ ಎಲ್ಲಾ ಹಣವು ಈಗ ನಿನಗೆ ಸಹಾಯ ಮಾಡಲಾರದು; [QBR2] ನಿನ್ನಲ್ಲಿರುವ ಶಕ್ತಿಸಾಮರ್ಥವು ಸಹ ನಿನಗೆ ಸಹಾಯ ಮಾಡಲಾರದು. [QBR]
20. ಜನಾಂಗಗಳು ಇದ್ದಕ್ಕಿದ್ದಂತೆ [QBR2] ಕಾಣೆಯಾಗುವ ರಾತ್ರಿಗಾಗಿ ಬಯಸಬೇಡ. [QBR]
21. ಯೋಬನೇ, ನೀನು ಬಹಳ ಸಂಕಟಪಟ್ಟಿರುವೆ. ಆದ್ದರಿಂದ ಕೆಡುಕನ್ನು [QBR2] ಆರಿಸಿಕೊಳ್ಳಬೇಡ; ತಪ್ಪು ಮಾಡದಂತೆ ಎಚ್ಚರಿಕೆಯಾಗಿರು.
22. “ಇಗೋ, ದೇವರು ತನ್ನ ಶಕ್ತಿಯಿಂದ ಮಹಾಕಾರ್ಯವನ್ನು ಮಾಡುವನು! [QBR2] ಆತನು ಎಲ್ಲರಿಗೂ ಅತ್ಯಂತ ದೊಡ್ಡ ಉಪದೇಶಕನಾಗಿದ್ದಾನೆ. [QBR]
23. ದೇವರಿಗೆ ಕೆಲಸವನ್ನು ನೇಮಿಸಲು ಯಾರಿಗೆ ಸಾಧ್ಯ? [QBR2] ಆತನಿಗೆ, ‘ನೀನು ತಪ್ಪನ್ನು ಮಾಡಿರುವೆ’ ಎಂದು ಹೇಳಲು ಯಾರಿಗೆ ಸಾಧ್ಯ? [QBR]
24. ದೇವರನ್ನು ಆತನ ಕಾರ್ಯಗಳಿಗಾಗಿ ಕೊಂಡಾಡಲು ಮರೆಯಬೇಡ. [QBR2] ಜನರು ಆತನನ್ನು ಕುರಿತು ಅನೇಕ ಸುತ್ತಿಗೀತೆಗಳನ್ನು ಬರೆದಿದ್ದಾರೆ. [QBR]
25. ಪ್ರತಿಯೊಬ್ಬನೂ ದೇವರ ಕಾರ್ಯವನ್ನು ನೋಡಬಲ್ಲನು. [QBR2] ದೂರದೇಶಗಳ ಜನರು ಸಹ ಆತನು ಕಾರ್ಯವನ್ನು ನೋಡಬಲ್ಲರು. [QBR]
26. ಹೌದು, ದೇವರೇ ಮಹೋನ್ನತನು. ಆತನ ಮಹತ್ವವನ್ನು ನಾವು ಅರ್ಥಮಾಡಿಕೊಳ್ಳಲಾರೆವು. [QBR2] ಆತನು ಎಂದಿನಿಂದ ಜೀವಿಸಿರುವನೋ ನಮಗೆ ತಿಳಿಯದು.
27. “ದೇವರು ಭೂಮಿಯ ನೀರನ್ನು ಹಬೆಯ ರೂಪದಲ್ಲಿ ಮೇಲಕ್ಕೆ ಕೊಂಡೊಯ್ದು [QBR2] ಅದನ್ನು ಮಂಜನ್ನಾಗಿಯೂ ಮಳೆಯನ್ನಾಗಿಯೂ ಪರಿವರ್ತಿಸುತ್ತಾನೆ. [QBR]
28. ಆದ್ದರಿಂದ ಮೋಡಗಳು ನೀರನ್ನು ಸುರಿಯಮಾಡುತ್ತವೆ; [QBR2] ಅನೇಕರ ಮೇಲೆ ಮಳೆಯು ಸುರಿಯುತ್ತದೆ. [QBR]
29. ದೇವರು ಮೋಡಗಳನ್ನು ಹರಡುವ ಬಗೆಯನ್ನಾಗಲಿ [QBR2] ಆಕಾಶದಲ್ಲಿ ಗುಡುಗು ಗರ್ಜಿಸುವ ಬಗೆಯನ್ನಾಗಲಿ ಯಾವನೂ ಅರ್ಥಮಾಡಿಕೊಳ್ಳಲಾರನು. [QBR]
30. ಇಗೋ, ದೇವರು ತನ್ನ ಪ್ರಕಾಶವನ್ನು ಆಕಾಶದಲ್ಲೆಲ್ಲಾ ಹರಡಿ [QBR2] ಸಮುದ್ರದ ಆಳವಾದ ಭಾಗಗಳನ್ನು ಬೆಳಕಿನಿಂದ ತುಂಬಿಸಿದ್ದಾನೆ. [QBR]
31. ಜನಾಂಗಗಳನ್ನು ಹತೋಟಿಯಲ್ಲಿಡುವುದಕ್ಕಾಗಿಯೂ [QBR2] ಬೇಕಾದಷ್ಟು ಆಹಾರವನ್ನು ಕೊಡುವುದಕ್ಕಾಗಿಯೂ ದೇವರು ಅವುಗಳನ್ನು ಉಪಯೋಗಿಸುವನು. [QBR]
32. ದೇವರು ತನ್ನ ಕೈಗಳಲ್ಲಿ ಸಿಡಿಲನ್ನು ಹಿಡಿದುಕೊಂಡು ಅದಕ್ಕೆ ಆಜ್ಞಾಪಿಸಲು [QBR2] ಅದು ಆತನ ಚಿತ್ತಕ್ಕನುಸಾರವಾಗಿ ಹೊಡೆಯುವುದು. [QBR]
33. ಬಿರುಗಾಳಿಯು ಬರುತ್ತಿದೆಯೆಂದು ಗುಡುಗು ಎಚ್ಚರಿಕೆ ನೀಡುತ್ತದೆ; [QBR2] ಬಿರುಗಾಳಿ ಬರುತ್ತಿರುವುದು ದನಕರುಗಳಿಗೂ ಸಹ ಗೊತ್ತಾಗುವುದು. [PE]