1. {ಯೋಬನಿಗೆ ದೇವರ ಉತ್ತರ} [PS] ಆಗ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು:
2. “ನನ್ನ ಉದ್ದೇಶಗಳನ್ನು ಮೂರ್ಖತನದ ಮಾತುಗಳಿಂದ ಗಲಿಬಿಲಿಗೊಳಿಸುತ್ತಿರುವ [QBR2] ಈ ಮನುಷ್ಯನು ಯಾರು? [QBR]
3. ಯೋಬನೇ, ನಡುಕಟ್ಟಿಕೊಂಡು ಬಲಿಷ್ಠನಾಗಿರು. [QBR2] ನಾನು ನಿನಗೆ ಕೇಳುವ ಪ್ರಶ್ನೆಗಳಿಗೆ ಉತ್ತರಿಸಲು ಸಿದ್ಧನಾಗು.
4. “ಯೋಬನೇ, ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿದ್ದೆ? [QBR2] ನೀನು ಬಹು ಜಾಣನಾಗಿದ್ದರೆ ನನಗೆ ಉತ್ತರಕೊಡು. [QBR]
5. ಯೋಬನೇ, ಭೂಮಿಯ ಅಳತೆಗಳನ್ನು ಯಾರು ನಿರ್ಧರಿಸಿದರು? [QBR2] ಭೂಮಿಯ ಅಳತೆಯನ್ನು ನೂಲುಗುಂಡಿನಿಂದ ಅಳೆದವರು ಯಾರು? [QBR]
6. ಭೂಮಿಯ ಆಧಾರಸ್ತಂಭಗಳು ಯಾವುದರ ಮೇಲೆ ನೆಲೆಗೊಂಡಿವೆ? [QBR2] ಭೂಮಿಯ ಅಸ್ತಿವಾರಕ್ಕೆ ಮೊದಲ ಕಲ್ಲನ್ನು ಹಾಕಿದವರು ಯಾರು? [QBR]
7. ಅದು ಸಂಭವಿಸಿದಾಗ, ಮುಂಜಾನೆಯ ನಕ್ಷತ್ರಗಳು ಒಟ್ಟಾಗಿ ಹಾಡಿದವು; [QBR2] ದೇವದೂತರುಗಳು ಆನಂದಘೋಷ ಮಾಡಿದರು!
8. “ಯೋಬನೇ, ಭೂಮಿಯ ಗರ್ಭದೊಳಗಿಂದ ನುಗ್ಗಿ ಬರುವ ಸಮುದ್ರದ ನೀರನ್ನು [QBR2] ನಿಲ್ಲಿಸುವುದಕ್ಕಾಗಿ ಬಾಗಿಲುಗಳನ್ನು ಮುಚ್ಚಿದವರು ಯಾರು? [QBR]
9. ಆ ಸಮಯದಲ್ಲಿ ನಾನು ಸಮುದ್ರವನ್ನು ಮೋಡಗಳಿಂದ ಮುಚ್ಚಿ [QBR2] ಕಾರ್ಗತ್ತಲನ್ನು ಬಟ್ಟೆಯಂತೆ ಸುತ್ತಿಟ್ಟೆನು. [QBR]
10. ನಾನು ಸಮುದ್ರಕ್ಕೆ ಮೇರೆಯನ್ನು ನಿಗದಿಪಡಿಸಿ [QBR2] ಕದ ಹಾಕಿದ ಬಾಗಿಲುಗಳ ಹಿಂಭಾಗದಲ್ಲಿಟ್ಟೆನು. [QBR]
11. ನಾನು ಸಮುದ್ರಕ್ಕೆ, ‘ನೀನು ಇಲ್ಲಿಯವರೆಗೆ ಬರಬಹುದು, ಆದರೆ ಇದಕ್ಕಿಂತ ಹೆಚ್ಚಿಗೆ ಬರಕೂಡದು. [QBR2] ನಿನ್ನ ಹೆಮ್ಮೆಯ ಅಲೆಗಳು ಇಲ್ಲೇ ನಿಲ್ಲಬೇಕು’ ಎಂದು ಅಪ್ಪಣೆಕೊಟ್ಟೆನು.
12. “ಯೋಬನೇ, ನಿನ್ನ ಜೀವಮಾನದಲ್ಲಿ ಎಂದಾದರೂ [QBR2] ಮುಂಜಾನೆಗಾಗಲಿ ಹಗಲಿಗಾಗಲಿ ಆರಂಭವಾಗೆಂದು ಆಜ್ಞಾಪಿಸಿರುವಿಯಾ? [QBR]
13. ಯೋಬನೇ, ದುಷ್ಟರನ್ನು ಅವರು ಅಡಗಿಕೊಂಡಿರುವ ಸ್ಥಳಗಳಲ್ಲಿ ಹಿಡಿದು [QBR2] ನಡುಗಿಸಬೇಕೆಂದು ನೀನು ಮುಂಜಾನೆಯ ಬೆಳಕಿಗೆ ಎಂದಾದರೂ ಆಜ್ಞಾಪಿಸಿರುವಿಯಾ? [QBR]
14. ಮುಂಜಾನೆಯ ಬೆಳಕು ಬೆಟ್ಟಗಳನ್ನೂ ಕಣಿವೆಗಳನ್ನೂ [QBR2] ಸ್ಪಷ್ಟವಾಗಿ ಕಾಣಮಾಡುತ್ತವೆ. [QBR] ಹಗಲುಬೆಳಕು ಭೂಮಿಗೆ ಬಂದಾಗ [QBR2] ಆ ಸ್ಥಳಗಳ ರೂಪಗಳು ಮೇಲಂಗಿಯ ನೆರಿಗೆಗಳಂತೆ ಎದ್ದುಕಾಣುತ್ತವೆ. [QBR] ಆ ಸ್ಥಳಗಳು ಮುದ್ರೆಯೊತ್ತಿದ [QBR2] ಜೇಡಿಮಣ್ಣಿನಂತೆ ರೂಪಗೊಳ್ಳುತ್ತವೆ. [QBR]
15. ದುಷ್ಟರು ಹಗಲುಬೆಳಕನ್ನು ಇಷ್ಟಪಡುವುದಿಲ್ಲ. [QBR2] ಅದು ಪ್ರಕಾಶಮಾನವಾಗಿ ಹೊಳೆಯುವಾಗ, ದುಷ್ಕೃತ್ಯಗಳನ್ನು ಮಾಡದಂತೆ ಅದು ಅವರನ್ನು ತಡೆಯುತ್ತದೆ.
16. “ಯೋಬನೇ, ಸಮುದ್ರವು ಆರಂಭವಾಗುವ ಅತ್ಯಂತ ಆಳವಾದ ಭಾಗಗಳಿಗೆ ನೀನು ಎಂದಾದರೂ ಹೋಗಿರುವಿಯಾ? [QBR2] ಸಾಗರದ ತಳದ ಮೇಲೆ ನೀನು ಎಂದಾದರೂ ನಡೆದಿರುವಿಯಾ? [QBR]
17. ಯೋಬನೇ, ಪಾತಾಳದ ದ್ವಾರಗಳನ್ನಾಗಲಿ [QBR2] ಘೋರಾಂಧಕಾರದ ಬಾಗಿಲುಗಳನ್ನಾಗಲಿ ನೀನು ಎಂದಾದರೂ ನೋಡಿರುವಿಯಾ? [QBR]
18. ಯೋಬನೇ, ಭೂಮಿಯ ವಿಶಾಲತೆಯನ್ನು ನೋಡಿರುವಿಯಾ? [QBR2] ನೀನು ನಿಜವಾಗಿಯೂ ಅರ್ಥಮಾಡಿಕೊಳ್ಳುವಿಯಾ? [QBR2] ನಿನಗೆ ಇದೆಲ್ಲಾ ತಿಳಿದಿದ್ದರೆ, ನನಗೆ ಹೇಳು.
19. “ಯೋಬನೇ, ಬೆಳಕು ಎಲ್ಲಿಂದ ಬರುತ್ತದೆ? [QBR2] ಕತ್ತಲೆಯು ಎಲ್ಲಿಂದ ಬರುತ್ತದೆ? [QBR]
20. ಯೋಬನೇ, ಬೆಳಕನ್ನೂ ಕತ್ತಲೆಯನ್ನೂ ಅವುಗಳ ಉಗಮಸ್ಥಳಕ್ಕೆ ತೆಗೆದುಕೊಂಡು ಹೋಗಬಲ್ಲೆಯಾ? [QBR2] ಅಲ್ಲಿಗೆ ಹೋಗುವ ಮಾರ್ಗ ನಿನಗೆ ಗೊತ್ತಿದೆಯೋ? [QBR]
21. ಯೋಬನೇ, ಇವು ನಿನಗೆ ತಿಳಿದಿವೆ, ಯಾಕೆಂದರೆ ನೀನು ಬಹು ವೃದ್ಧನೂ ಜ್ಞಾನಿಯೂ ಆಗಿರುವೆ. [QBR2] ನಾನು ಅವುಗಳನ್ನು ನಿರ್ಮಿಸಿದಾಗ ನೀನು ಅಲ್ಲಿ ವಾಸವಾಗಿರಲಿಲ್ಲವೇ?
22. “ಯೋಬನೇ, ನಾನು ಹಿಮವನ್ನೂ ಆಲಿಕಲ್ಲನ್ನೂ ಇಟ್ಟಿರುವ ಉಗ್ರಾಣಗಳೊಳಗೆ [QBR2] ನೀನು ಎಂದಾದರೂ ಹೋಗಿರುವಿಯಾ? [QBR]
23. ಇಕ್ಕಟ್ಟಿನ ಕಾಲಕ್ಕಾಗಿಯೂ ಯುದ್ಧಕದನಗಳ ಕಾಲಕ್ಕಾಗಿಯೂ [QBR2] ನಾನು ಅವುಗಳನ್ನು ಕೂಡಿಸಿಟ್ಟಿದ್ದೇನೆ. [QBR]
24. ಯೋಬನೇ, ಸೂರ್ಯನು ಹೊರಟ ಸ್ಥಳಕ್ಕೂ ಪೂರ್ವದಿಕ್ಕಿನ ಗಾಳಿಯು ಭೂಮಿಯ ಮೇಲೆಲ್ಲಾ ಬೀಸುವುದಕ್ಕಾಗಿ ಹೊರಟುಬರುವ ಸ್ಥಳಕ್ಕೂ [QBR2] ನೀನು ಎಂದಾದರೂ ಹೋಗಿರುವಿಯಾ? [QBR]
25. ಯೋಬನೇ, ದೊಡ್ಡ ಮಳೆಗಾಗಿ ಆಕಾಶದಲ್ಲಿ ಅಗೆದು ಸುರಂಗಮಾಡಿದವರು ಯಾರು? [QBR2] ಗುಡುಗು ಮಿಂಚಿನ ಮಳೆಗೆ ಹಾದಿಯನ್ನು ಮಾಡಿದವರು ಯಾರು? [QBR]
26. (26-27) ಯೋಬನೇ, ಯಾರೂ ವಾಸಿಸದಿರುವ ಸ್ಥಳದಲ್ಲಿ ನೀರು ಇರುವಂತೆಯೂ [QBR2] ಆ ನೀರು ಬರಿದಾದ ಸ್ಥಳವನ್ನು ತೃಪ್ತಿಪಡಿಸಿ ಬಹಳ ಹುಲ್ಲಿನಿಂದ ಅದನ್ನು ಹಸಿರುಗೊಳಿಸುವಂತೆಯೂ ಮಾಡಿದವರು ಯಾರು? [QBR]
27.
28. ಯೋಬನೇ, ಮಳೆಗೆ ತಂದೆಯಿರುವನೇ? [QBR2] ಇಬ್ಬನಿಯ ಹನಿಗಳನ್ನು ನಿರ್ಮಿಸಿದವರು ಯಾರು? [QBR]
29. ಯೋಬನೇ, ಮಂಜಿಗೆ ತಾಯಿ ಇರುವಳೇ? [QBR2] ಆಕಾಶದ ಇಬ್ಬನಿಯನ್ನು ಹೆತ್ತವರು ಯಾರು? [QBR]
30. ನೀರು ಕಲ್ಲಿನಂತೆ ಗಟ್ಟಿಯಾದಾಗ, [QBR2] ಸಾಗರಗಳ ಮೇಲ್ಭಾಗವು ಹೆಪ್ಪುಗಟ್ಟಿದಾಗ ಆಕಾಶದ ಹಿಮಕ್ಕೆ ಜನನ ಕೊಡುವವರು ಯಾರು?
31. “ಯೋಬನೇ, ಪ್ಲೆಯಡ್ಸ್ [*ಪ್ಲೆಯಡ್ಸ್ ಅಥವಾ ಕೃತ್ತಿಕೆ ಇದೊಂದು ಪ್ರಸಿದ್ಧವಾದ ನಕ್ಷತ್ರಪುಂಜ. ಇದನ್ನು ಆಗಾಗ “ಏಳು ಸಹೋದರಿಯರು” ಎಂದು ಕರೆಯುವ ವಾಡಿಕೆಯುಂಟು.] ಎಂಬ ನಕ್ಷತ್ರಗುಂಪನ್ನು ನೀನು ಕಟ್ಟಬಲ್ಲೆಯಾ? [QBR2] ನೀನು ಒರೈಯನ್ [†ಒರೈಯನ್ ಅಥವಾ ಮೃಗಶಿರ ಇದು ಸಹ ಪ್ರಸಿದ್ಧವಾದ ಒಂದು ನಕ್ಷತ್ರಪುಂಜ. ಇದನ್ನು ಸಾಮಾನ್ಯವಾಗಿ ಒಬ್ಬ ಬೇಟೆಗಾರ ಅಥವಾ ಬಲಶಾಲಿಯಾದ ಸೈನಿಕನಿಗೆ ಹೋಲಿಸಲ್ಪಡುತ್ತದೆ.] ನಕ್ಷತ್ರ ಗುಂಪಿನ ನಡುಪಟ್ಟಿಯನ್ನು ಬಿಚ್ಚಬಲ್ಲೆಯಾ? [QBR]
32. ಯೋಬನೇ, ನೀನು ಸಮಯಕ್ಕೆ ಸರಿಯಾಗಿ ನಕ್ಷತ್ರರಾಶಿಗಳನ್ನು ಬರಮಾಡಬಲ್ಲೆಯಾ? [QBR2] ನೀನು ಬೇರ್ [‡ಬೇರ್ ಅಥವಾ ಸಪ್ತರ್ಷಿ. ಇದು ಸಹ ನಕ್ಷತ್ರಪುಂಜಗಳಲ್ಲಿ ಒಂದು.] ನಕ್ಷತ್ರಗಳನ್ನು ಅದರ ಮರಿಗಳೊಂದಿಗೆ ನಡೆಸಬಲ್ಲೆಯಾ? [QBR]
33. ಯೋಬನೇ, ಆಕಾಶವನ್ನು ಆಳುವ ನಿಯಮಗಳು ನಿನಗೆ ಗೊತ್ತಿವೆಯೋ? [QBR2] ಅವುಗಳ ಆಳ್ವಿಕೆಯನ್ನು ನೀನು ಭೂಮಿಯ ಮೇಲೆ ಆರಂಭಿಸಬಲ್ಲೆಯಾ?
34. “ಯೋಬನೇ, ನೀನು ಮೋಡಗಳಿಗೆ ಮಹಾಧ್ವನಿಯಿಂದ ಆಜ್ಞಾಪಿಸಿ [QBR2] ಅವು ನಿನ್ನನ್ನು ದೊಡ್ಡ ಮಳೆಯಿಂದ ಆವರಿಸಿಕೊಳ್ಳುವಂತೆ ಮಾಡಬಲ್ಲೆಯಾ? [QBR]
35. ಯೋಬನೇ, ನೀನು ಸಿಡಿಲಿಗೆ ಆಜ್ಞಾಪಿಸಬಲ್ಲೆಯಾ? [QBR2] ಅದು ನಿನ್ನ ಬಳಿಗೆ ಬಂದು, ‘ಇಗೋ ಬಂದಿದ್ದೇನೆ; [QBR2] ತಮಗೇನಾಗಬೇಕು’ ಎನ್ನುವುದೇ?
36. “ಯೋಬನೇ, ಮನುಷ್ಯರನ್ನು ಜ್ಞಾನಿಗಳನ್ನಾಗಿ ಮಾಡುವವರು ಯಾರು? [QBR2] ಅವರ ಅಂತರಾಳದಲ್ಲಿ ಜ್ಞಾನವನ್ನು ಇಡುವವರು ಯಾರು? [QBR]
37. ಮೋಡಗಳನ್ನು ಲೆಕ್ಕಿಸಿ [QBR2] ಮಳೆ ಸುರಿಸಲು ಅವುಗಳನ್ನು ಮೊಗಚಿಹಾಕಿ [QBR]
38. ಧೂಳನ್ನು ಮಣ್ಣನ್ನಾಗಿಯೂ ಹೆಂಟೆಗಳು ಒಂದಕ್ಕೊಂದು ಅಂಟಿಕೊಳ್ಳುವಂತೆಯೂ [QBR2] ಮಾಡುವ ಜ್ಞಾನಿ ಯಾರು?
39. (39-40) “ಯೋಬನೇ, ಹೆಣ್ಣುಸಿಂಹಕ್ಕೆ ನೀನು ಆಹಾರವನ್ನು ಹುಡುಕುವೆಯಾ? [QBR2] ಗವಿಗಳಲ್ಲಿ ಮಲಗಿಕೊಂಡಿರುವ ಸಿಂಹಗಳಿಗೂ ಪೊದೆಯಲ್ಲಿ ಹೊಂಚುಹಾಕುತ್ತಿರುವ ಪ್ರಾಯದ ಸಿಂಹಗಳಿಗೂ ನೀನು ಉಣಿಸಬಲ್ಲೆಯಾ? [QBR]
40.
41. ಕಾಗೆಗಳು ಆಹಾರವಿಲ್ಲದೆ ಅಲೆದಾಡುತ್ತಿರುವ ಅವುಗಳ ಮರಿಗಳು ದೇವರಿಗೆ ಮೊರೆಯಿಡುವಾಗ [QBR2] ಅವುಗಳಿಗೆ ಆಹಾರವನ್ನು ಒದಗಿಸುವವರು ಯಾರು? [PE]