1. “ಯೋಬನೇ, ಬೆಟ್ಟದ ಮೇಕೆಗಳು ಯಾವಾಗ ಹುಟ್ಟುತ್ತವೆ ಎಂಬುದು ನಿನಗೆ ಗೊತ್ತಿದೆಯೋ? [QBR2] ತಾಯಿ ಜಿಂಕೆಯು ಮರಿ ಈಯುವಾಗ ನೀನು ಸಹಾಯ ಮಾಡಬಲ್ಲೆಯಾ? [QBR]
2. ಬೆಟ್ಟದ ಮೇಕೆಯೂ ಜಿಂಕೆಯೂ ತಮ್ಮ ಮರಿಗಳನ್ನು ಹೊಟ್ಟೆಯಲ್ಲಿ ಎಷ್ಟು ತಿಂಗಳವರೆಗೆ ಹೊತ್ತುಕೊಂಡಿರುತ್ತವೆ ಎಂಬುದು ನಿನಗೆ ಗೊತ್ತಿದೆಯೋ? [QBR2] ಅವುಗಳು ಹುಟ್ಟುವುದಕ್ಕೆ ಸರಿಯಾದ ಸಮಯ ಯಾವುದೆಂದು ನಿನಗೆ ಗೊತ್ತಿದೆಯೋ? [QBR]
3. ಅವು ಬಗ್ಗಿಕೊಂಡು ಮರಿಗಳನ್ನು ಈಯುತ್ತವೆ; [QBR2] ಬಳಿಕ ಅವುಗಳ ಪ್ರಸವವೇದನೆ ಕೊನೆಗೊಳ್ಳುತ್ತದೆ. [QBR]
4. ಬೆಟ್ಟದಮೇಕೆ ಮರಿಗಳೂ ಜಿಂಕೆಯ ಮರಿಗಳೂ ಬಯಲುಗಳಲ್ಲಿ ಪುಷ್ಟಿಯಾಗಿ ಬೆಳೆಯುತ್ತವೆ. [QBR2] ಬಳಿಕ ಅವು ತಮ್ಮ ತಾಯಂದಿರನ್ನು ಬಿಟ್ಟುಹೋಗುತ್ತವೆ; ಹಿಂತಿರುಗಿ ಬರುವುದೇ ಇಲ್ಲ.
5. “ಯೋಬನೇ, ಸ್ವತಂತ್ರವಾಗಿರುವಂತೆ ಕಾಡುಕತ್ತೆಗಳನ್ನು ಕಳುಹಿಸಿದವರು ಯಾರು? [QBR2] ಅವುಗಳ ಹಗ್ಗಗಳನ್ನು ಬಿಚ್ಚಿ, ಅವುಗಳನ್ನು ಬಿಟ್ಟುಬಿಟ್ಟವರು ಯಾರು? [QBR]
6. ಕಾಡುಕತ್ತೆಗೆ ಅಡವಿಯನ್ನು ಮನೆಯನ್ನಾಗಿ ಕೊಟ್ಟವನೇ ನಾನು. [QBR2] ಅವುಗಳಿಗೆ ಉಪ್ಪುಭೂಮಿಯನ್ನು ವಾಸಿಸುವ ಸ್ಥಳವನ್ನಾಗಿ ಕೊಟ್ಟವನೇ ನಾನು. [QBR]
7. ಕಾಡುಕತ್ತೆಯು ಗದ್ದಲವಿರುವ ಊರುಗಳ ಸಮೀಪಕ್ಕೂ ಹೋಗುವುದಿಲ್ಲ, [QBR2] ಯಾರೂ ಅವುಗಳನ್ನು ಪಳಗಿಸಿ ದುಡಿಸುವುದಿಲ್ಲ. [QBR]
8. ಕಾಡುಕತ್ತೆಗಳು ಬೆಟ್ಟಗಳಲ್ಲಿ ವಾಸಿಸುತ್ತವೆ. [QBR2] ಹಸಿರಾದ ಏನನ್ನಾದರೂ ತಿನ್ನುವುದಕ್ಕೆ ಅವು ಅಲ್ಲಿಯೇ ಹುಡುಕುತ್ತವೆ.
9. “ಯೋಬನೇ, ಕಾಡುಕೋಣಕ್ಕೆ ಮೂಗುದಾರವನ್ನು ಕಟ್ಟಿ ನಿನ್ನ ಹೊಲವನ್ನು ಉಳುವಂತೆ ಮಾಡಬಲ್ಲೆಯಾ? [QBR2] ತಗ್ಗುಭೂಮಿಯಲ್ಲಿ ಕುಂಟೆ ಹೊಡೆಯಬಲ್ಲೆಯಾ? [QBR]
10. ಕಾಡುಕೋಣವನ್ನು ಹಗ್ಗದಿಂದ ಕಟ್ಟಿ ಭೂಮಿಯನ್ನು ಉಳುಮೆ ಮಾಡಬಲ್ಲೆಯಾ? [QBR2] ಅದು ತಗ್ಗುಗಳಲ್ಲಿ ನಿನ್ನನ್ನು ಹಿಂಬಾಲಿಸಿ ಕುಂಟೆ ಎಳೆಯುವುದೋ? [QBR]
11. ನಿನ್ನ ಬೇಸಾಯಕ್ಕೆ ಕಾಡುಕೋಣದ ಶಕ್ತಿಯನ್ನು ಅವಲಂಭಿಸಿಕೊಳ್ಳಬಲ್ಲೆಯಾ? [QBR2] ಪ್ರಯಾಸದ ಕೆಲಸವನ್ನು ಅದು ಮಾಡಬೇಕೆಂದು ಅಪೇಕ್ಷಿಸುವೆಯಾ? [QBR]
12. ಅದು ನಿನ್ನ ಬೆಳೆಯನ್ನು ಕೂಡಿಸಿ, [QBR2] ನಿನ್ನ ಕಣಕ್ಕೆ ಹೊತ್ತುಕೊಂಡು ಬರುವುದೆಂದು ಭರವಸವಿಡುವಿಯಾ?
13. “ಉಷ್ಟ್ರಪಕ್ಷಿಯು ಸಂತೋಷದಿಂದ ತನ್ನ ರೆಕ್ಕೆಗಳನ್ನು ಬಡಿದಾಡುವುದು. [QBR2] ಆದರೆ ಅದರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳಿಗೆ ಸರಿಹೋಲುವುದಿಲ್ಲ. [QBR]
14. ಉಷ್ಟ್ರಪಕ್ಷಿಯು ನೆಲದ ಮೇಲೆ ಮೊಟ್ಟೆಗಳನ್ನು ಇಡುತ್ತದೆ; [QBR2] ಮೊಟ್ಟೆಗಳು ಮರಳಿನಲ್ಲಿ ಕಾವು ಪಡೆಯುತ್ತವೆ. [QBR]
15. ಆ ಮೊಟ್ಟೆಗಳನ್ನು ಮನುಷ್ಯರಾಗಲಿ ಪ್ರಾಣಿಗಳಾಗಲಿ ತುಳಿಯಬಹುದೆಂಬುದನ್ನು [QBR2] ಆ ಉಷ್ಟ್ರಪಕ್ಷಿಯು ಮರೆತುಬಿಡುತ್ತದೆ. [QBR]
16. ಉಷ್ಟ್ರಪಕ್ಷಿಯು ತನ್ನ ಮರಿಗಳನ್ನು ಕಡೆಗಣಿಸಿ [QBR2] ತನ್ನ ಮರಿಗಳಲ್ಲವೆಂಬಂತೆ ವರ್ತಿಸುತ್ತದೆ; [QBR2] ಮರಿಗಳು ಸತ್ತುಹೋದರೆ ತನ್ನ ಪ್ರಯಾಸವು ವ್ಯರ್ಥವಾಯಿತೆಂಬ ಚಿಂತೆಯೂ ಅದಕ್ಕಿಲ್ಲ. [QBR]
17. ಯಾಕೆಂದರೆ ನಾನು ಉಷ್ಟ್ರಪಕ್ಷಿಗೆ ಜ್ಞಾನವನ್ನು ಕೊಡಲಿಲ್ಲ. [QBR2] ಉಷ್ಟ್ರಪಕ್ಷಿಯು ಮೂಢಪಕ್ಷಿಯಾಗಿದೆ, ಅದನ್ನು ಈ ರೀತಿ ನಿರ್ಮಿಸಿದವನು ನಾನೇ. [QBR]
18. ಆದರೆ ಉಷ್ಟ್ರಪಕ್ಷಿಯು ಓಡಲು ಎದ್ದೇಳುವಾಗ, ಕುದುರೆಯನ್ನೂ ಅದರ ಸವಾರನನ್ನೂ ಕಂಡು ನಗುತ್ತದೆ. [QBR2] ಅದು ಕುದುರೆಗಿಂತಲೂ ವೇಗವಾಗಿ ಓಡಬಲ್ಲದು.
19. “ಯೋಬನೇ, ನೀನು ಕುದುರೆಗೆ ಶಕ್ತಿಯನ್ನು ಕೊಟ್ಟೆಯಾ? [QBR2] ಅದರ ಕೊರಳಿನ ಮೇಲಿನ ಕೇಸರವನ್ನು ಕೊಟ್ಟೆಯಾ? [QBR]
20. ಮಿಡತೆಯು ಕುಪ್ಪಳಿಸುವಂತೆ ನೀನು ಕುದುರೆಯನ್ನೂ ಕುಪ್ಪಳಿಸಬಲ್ಲೆಯಾ? [QBR2] ಅದರ ಗಟ್ಟಿಯಾದ ಕೆನೆತ ಜನರನ್ನು ಭಯಗೊಳಿಸುತ್ತದೆ. [QBR]
21. ಕುದುರೆಯು ತನಗಿರುವ ಬಾಹುಬಲದಲ್ಲಿ ಸಂತೋಷಪಡುತ್ತದೆ; [QBR2] ತನ್ನ ಪಾದದಿಂದ ನೆಲವನ್ನು ಕೆರೆಯುತ್ತದೆ, ಯುದ್ಧಕ್ಕೆ ವೇಗವಾಗಿ ಓಡುತ್ತಾ ಹೋಗುವುದು. [QBR]
22. ಕುದುರೆಯು ಭಯವನ್ನು ಕಂಡು ನಗುವುದು; ಅದಕ್ಕೆ ಭಯವಿಲ್ಲ! [QBR2] ಅದು ಯುದ್ಧದಿಂದ ಓಡಿಹೋಗುವುದಿಲ್ಲ. [QBR]
23. ಕುದುರೆಯ ಪಾರ್ಶ್ವದಲ್ಲಿ ಬತ್ತಳಿಕೆಯು ಅಲುಗಾಡುವುದು. [QBR2] ಕುದುರೆಸವಾರನು ಕೊಂಡೊಯ್ಯುತ್ತಿರುವ ಬರ್ಜಿ ಮತ್ತು ಆಯುಧಗಳು ಸೂರ್ಯನ ಬೆಳಕಿನಲ್ಲಿ ಹೊಳೆಯುತ್ತವೆ. [QBR]
24. ಕುದುರೆಯು ಬಹು ಉತ್ಸುಕತೆಯಿಂದಿರುತ್ತದೆ! [QBR2] ಅದು ನೆಲದ ಮೇಲೆ ವೇಗವಾಗಿ ಓಡುವುದು; ಅದು ತೂತೂರಿಯ ಧ್ವನಿಯನ್ನು ಕೇಳಿದರೂ ನಿಲ್ಲದು. [QBR]
25. ತುತ್ತೂರಿಯ ಧ್ವನಿಗೆ ಕುದುರೆಯು, “ಆಹಾ!” ಎಂದು ಹೇಳುತ್ತದೆ. [QBR2] ಅದು ದೂರದಿಂದಲೇ ಯುದ್ಧವನ್ನು ಮೂಸಿ ನೋಡಿ ತಿಳಿಯುವುದು. [QBR2] ಸೇನಾಧಿಪತಿಗಳು ಗಟ್ಟಿಯಾಗಿ ಅಪ್ಪಣೆಕೊಡುವುದನ್ನೂ ಯುದ್ಧದ ಎಲ್ಲಾ ಕೂಗಾಟವನ್ನೂ ಅದು ಕೇಳಿಸಿಕೊಳ್ಳುತ್ತದೆ.
26. “ಯೋಬನೇ, ತನ್ನ ರೆಕ್ಕೆಗಳನ್ನು ಚಾಚಿಕೊಂಡು ದಕ್ಷಿಣದ ಕಡೆಗೆ ಹಾರುವ ಗಿಡುಗಕ್ಕೆ ನೀನು ಹಾರುವುದನ್ನು ಕಲಿಸಿದೆಯೋ? [QBR]
27. ನೀನು ಹದ್ದಿಗೆ ಹಾರಿಹೋಗಿ ಎತ್ತರವಾದ ಬೆಟ್ಟಗಳ ಮೇಲೆ ಗೂಡನ್ನು ಕಟ್ಟಿಕೊಳ್ಳಲು ಆಜ್ಞಾಪಿಸುವೆಯಾ? [QBR]
28. ಹದ್ದು ಕಡಿದಾದ ಬಂಡೆಯ ಮೇಲೆ ವಾಸಿಸುವುದು. [QBR2] ಕಡಿದಾದ ಬಂಡೆಯು ಹದ್ದಿನ ದುರ್ಗವಾಗಿದೆ. [QBR]
29. ಹದ್ದು ಆಹಾರಕ್ಕಾಗಿ ತನ್ನ ದುರ್ಗದಿಂದ ನೋಡುತ್ತದೆ. [QBR2] ದೂರದಲ್ಲಿರುವ ಆಹಾರವನ್ನು ಅದು ನೋಡಬಲ್ಲದು. [QBR]
30. ಹದ್ದಿನ ಮರಿಗಳು ರಕ್ತವನ್ನು ಕುಡಿಯುತ್ತವೆ. [QBR2] ಅವು ಸತ್ತದೇಹಗಳ ಸುತ್ತಲೂ ಸೇರಿಕೊಳ್ಳುತ್ತವೆ.” [PE]