2. “ಸರ್ವಶಕ್ತನಾದ ದೇವರ ವಿರುದ್ಧ ವ್ಯಾಜ್ಯಹೂಡಿದವನು ಆತನನ್ನು ಸರಿಪಡಿಸಬಲ್ಲನೇ? ದೇವರ ಮೇಲೆ ಅಪವಾದ ಹೊರಿಸುವವನು ಆತನಿಗೆ ಉತ್ತರ ನೀಡಲಿ” ಎಂದನು.
|
5. ನಾನು ಒಂದು ಸಲ ಮಾತಾಡಿದ್ದೇನೆ; ಆದರೆ ಪ್ರತಿವಾದ ಮಾಡಲಾರೆನು. ನಾನು ಎರಡು ಸಲ ಮಾತಾಡಿದ್ದೇನೆ; ಆದರೆ ನಾನು ಹೆಚ್ಚಿಗೆ ಏನೂ ಹೇಳಲಾರೆನು” ಎಂದನು.
|
7. “ಯೋಬನೇ, ನಡುಕಟ್ಟಿಕೊಂಡು ಎದ್ದುನಿಂತುಕೋ? ನಾನು ನಿನಗೆ ಕೆಲವು ಪ್ರಶ್ನೆಗಳನ್ನು ಕೇಳುವೆನು; ನೀನು ನನಗೆ ಉತ್ತರಕೊಡು.
|
8. “ಯೋಬನೇ, ನನ್ನ ನೀತಿಯನ್ನು ಖಂಡಿಸುವಿಯಾ? ನಿನ್ನನ್ನು ನಿರಪರಾಧಿಯೆಂದು ನಿರೂಪಿಸಲು ನನ್ನನ್ನು ದೋಷಿಯೆಂದು ಪರಿಗಣಿಸುವೆಯಾ?
|
9. ನಿನ್ನ ತೋಳುಗಳು ನನ್ನ ತೋಳುಗಳಂತೆ ಬಲಿಷ್ಠವಾಗಿವೆಯೋ? ನಿನ್ನ ಸ್ವರವನ್ನು ನನ್ನ ಸ್ವರದಂತೆ ಗಟ್ಟಿಯಾಗಿ ಗುಡುಗುಟ್ಟಿಸಬಲ್ಲೆಯಾ?
|
14. ಯೋಬನೇ, ನೀನು ಇವುಗಳನ್ನೆಲ್ಲಾ ಮಾಡಶಕ್ತನಾಗಿದ್ದರೆ, ನಿನ್ನನ್ನು ರಕ್ಷಿಸಿಕೊಳ್ಳಬಲ್ಲೆ ಎಂದು ನಿನ್ನನ್ನು ನಾನೇ ಹೊಗಳುವೆನು.
|
15. “ಯೋಬನೇ, ಬೆಹೇಮೋತನ್ನು ನೋಡು. ಅದನ್ನು ನಿರ್ಮಿಸಿದವನು ನಾನೇ; ನಿನ್ನನ್ನು ನಿರ್ಮಿಸಿದವನೂ ನಾನೇ. ಅದು ಹಸುವಿನಂತೆ ಹುಲ್ಲನ್ನು ಮೇಯುತ್ತದೆ.
|
22. ತಾವರೆಗಿಡಗಳು ತಮ್ಮ ನೆರಳಿನಿಂದ ಅದನ್ನು ಮರೆಮಾಡುತ್ತವೆ; ನದಿಯ ಸಮೀಪದಲ್ಲಿ ಬೆಳೆಯುವ ನೀರವಂಜಿ ಮರಗಳ ಕೆಳಗೆ ಅದು ವಾಸಿಸುತ್ತದೆ.
|
24. ಅದರ ಕಣ್ಣುಗಳನ್ನು ಕುರುಡುಮಾಡಿ ಅದನ್ನು ಬಂಧಿಸುವುದಕ್ಕಾಗಲಿ ಕೊಂಡಿಗಳಿಂದ ಅದರ ಮೂಗಿಗೆ ಚುಚ್ಚುವುದಕ್ಕಾಗಲಿ ಯಾರಿಗೂ ಸಾಧ್ಯವಿಲ್ಲ.
|