ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಯೋಬನು
1. “ಯೋಬನೇ, ನೀನು ಲಿವ್ಯಾತಾನನನ್ನು [*ಲಿವ್ಯಾತಾನ್ ಇದು ಹೀಬ್ರೂ ಹೆಸರು, ಇದು ಯಾವ ಪ್ರಾಣಿ ಎಂಬುದು ಸರಿಯಾಗಿ ಗೊತ್ತಿಲ್ಲ. ಇದು ಮೊಸಳೆಯಾಗಿದ್ದಿರಬಹುದು ಅಥವಾ ಮಹಾಸಮುದ್ರ ಪ್ರಾಣಿಯಾಗಿದ್ದಿರಬಹುದು.] ಗಾಳದಿಂದ ಹಿಡಿಯಬಲ್ಲೆಯಾ? [QBR2] ನೀನು ಅದರ ನಾಲಿಗೆಯನ್ನು ಅದುಮಿ ಹಗ್ಗದಿಂದ ಕಟ್ಟಬಲ್ಲೆಯಾ? [QBR]
2. ಅದರ ಮೂಗಿನ ಮೂಲಕ ಹಗ್ಗವನ್ನಾಗಲಿ [QBR2] ದವಡೆಗಳ ಮೂಲಕ ಕೊಂಡಿಯನ್ನಾಗಲಿ ಹಾಕಬಲ್ಲೆಯಾ? [QBR]
3. ತನ್ನನ್ನು ಸ್ವತಂತ್ರವಾಗಿ ಬಿಟ್ಟುಕೊಡಬೇಕೆಂದು ಅದು ನಿನ್ನನ್ನು ಬೇಡಿಕೊಳ್ಳುವುದೇ? [QBR2] ಅದು ನಯವಾದ ಪದಗಳಿಂದ ನಿನ್ನೊಂದಿಗೆ ಮಾತಾಡುತ್ತದೆಯೋ? [QBR]
4. ಅದು ನಿನ್ನೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುವುದೇ? [QBR2] ಸದಾಕಾಲ ನಿನ್ನ ಸೇವೆಮಾಡುವುದಾಗಿ ವಾಗ್ದಾನ ಮಾಡುವುದೇ? [QBR]
5. ನೀನು ಪಕ್ಷಿಯೊಂದಿಗೆ ಆಟವಾಡುವಂತೆ ಅದರ ಜೊತೆಯಲ್ಲಿ ಆಟವಾಡುವಿಯಾ? [QBR2] ನಿನ್ನ ದಾಸಿಯರು ಅದರೊಂದಿಗೆ ಆಟವಾಡಲೆಂದು ಹಗ್ಗದಿಂದ ಅದನ್ನು ಕಟ್ಟಿಹಾಕುವಿಯಾ? [QBR]
6. ಯೋಬನೇ, ಬೆಸ್ತರು ಅದನ್ನು ನಿನ್ನಿಂದ ಕೊಂಡುಕೊಳ್ಳಲು ಪ್ರಯತ್ನಿಸುವರೇ? [QBR2] ಅವರು ಅದನ್ನು ವರ್ತಕರಿಗೆ ಮಾರುವುದಕ್ಕಾಗಿ ತುಂಡುತುಂಡಾಗಿ ಕತ್ತರಿಸುವರೇ? [QBR]
7. ನೀನು ಭರ್ಜಿಗಳನ್ನು ಎಸೆದು ಅದರ ಚರ್ಮಕ್ಕೂ ತಲೆಗೂ ನಾಟಿಸಬಲ್ಲೆಯಾ?
8. “ಯೋಬನೇ, ನೀನು ಅದರ ಮೇಲೆ ನಿನ್ನ ಕೈಯಿಟ್ಟು ನೋಡು. [QBR2] ಆ ಪ್ರಯಾಸದ ಹೋರಾಟವನ್ನು ನೆನಸಿಕೊಂಡರೆ ಅದನ್ನು ನೀನು ಮುಟ್ಟುವುದೇ ಇಲ್ಲ. [QBR]
9. ನೀನು ಅದನ್ನು ಸೋಲಿಸಬಹುದೆಂದು ಯೋಚಿಸಿಕೊಂಡಿದ್ದರೆ, [QBR2] ಇನ್ನಾದರೂ ಅದನ್ನು ಮರೆತುಬಿಡು! [QBR2] ಅದನ್ನು ನೋಡಿದರೇ ನಿನಗೆ ಭಯವಾಗುತ್ತದೆ! [QBR]
10. ಅದನ್ನು ಕೋಪಗೊಳಿಸುವಷ್ಟು ಧೈರ್ಯ ಯಾರಿಗೂ ಇಲ್ಲ. “ಹೀಗಿರುವಲ್ಲಿ ನನಗೆ ವಿರುದ್ಧವಾಗಿ ನಿಂತುಕೊಳ್ಳುವಷ್ಟು ಶಕ್ತಿ ಯಾರಿಗಿದೆ? [QBR]
11. ನಾನು ಯಾರಿಗೂ ಯಾವ ಸಾಲವನ್ನೂ ತೀರಿಸಬೇಕಿಲ್ಲ. [QBR2] ಆಕಾಶಮಂಡಲದ ಕೆಳಗಿರುವ ಸಮಸ್ತವೂ ನನ್ನದೇ.
12. “ಯೋಬನೇ, ಲಿವ್ಯಾತಾನನ ಅಂಗಗಳನ್ನೂ ಶಕ್ತಿಯನ್ನೂ [QBR2] ಸೊಗಸಾದ ಆಕಾರವನ್ನೂ ನಿನಗೆ ವರ್ಣಿಸುವೆನು. [QBR]
13. ಯಾವನೂ ಅದರ ಚರ್ಮವನ್ನು ಸುಲಿಯಲಾರನು. [QBR2] ಯಾವನೂ ಅದರ ದವಡೆಗಳಿಗೆ ಚುಚ್ಚಲಾರನು. [QBR]
14. ಬಲವಂತದಿಂದ ಅದರ ದವಡೆಗಳನ್ನು ತೆರೆಸಲು ಯಾರಿಗೂ ಸಾಧ್ಯವಿಲ್ಲ. [QBR2] ಅದರ ದವಡೆಹಲ್ಲುಗಳು ಜನರನ್ನು ಭಯಗೊಳಿಸುತ್ತವೆ. [QBR]
15. ಅದರ ಹಿಂಬದಿಯಲ್ಲಿ ಗುರಾಣಿಗಳ ಸಾಲುಗಳು [QBR2] ಒಂದಕ್ಕೊಂದು ಬಿಗಿಯಲ್ಪಟ್ಟು ಮುದ್ರಿತವಾಗಿವೆ. [QBR]
16. ಗಾಳಿಯೂ ಹಾದುಹೋಗದಂತೆ [QBR2] ಆ ಗುರಾಣಿಗಳು ಜೋಡಿಸಲ್ಪಟ್ಟಿವೆ. [QBR]
17. ಗುರಾಣಿಗಳು ಒಂದಕ್ಕೊಂದು ಅಂಟಿಕೊಂಡು [QBR2] ಬಿಡಿಸಲು ಅಸಾಧ್ಯವಾಗಿದೆ. [QBR]
18. ಅದರ ಸೀನಿನ ತುಂತುರುಗಳು ಥಳಥಳಿಸುತ್ತವೆ. [QBR2] ಅದರ ಕಣ್ಣುಗಳು ಮುಂಜಾನೆಯ ಬೆಳಕಿನಂತಿವೆ. [QBR]
19. ಅದರ ಬಾಯೊಳಗಿಂದ ಉರಿಯುವ ಕೊಳ್ಳಿಗಳು ಹೊರಬರುತ್ತವೆ. [QBR2] ಬೆಂಕಿಯ ಜ್ವಾಲೆಗಳು ಹಾರುತ್ತವೆ. [QBR]
20. ಕಾಯ್ದಮಡಕೆಯ ಕೆಳಗೆ ಉರಿಯುತ್ತಿರುವ ಆಪು ಹುಲ್ಲಿನಿಂದ ಬರುವ ಹೊಗೆಯಂತೆ [QBR2] ಅದರ ಮೂಗಿನಿಂದ ಹೊಗೆಯು ಹಾಯುವುದು. [QBR]
21. ಅದರ ಉಸಿರು ಇದ್ದಲನ್ನು ಹೊತ್ತಿಸುವುದು; [QBR2] ಜ್ವಾಲೆಗಳು ಅದರ ಬಾಯೊಳಗಿಂದ ಹಾರುವವು. [QBR]
22. ಅದರ ಕುತ್ತಿಗೆ ಬಹು ಶಕ್ತಿಯುತವಾಗಿದೆ; [QBR2] ಜನರು ಭಯಗೊಂಡು ಅದರ ಬಳಿಯಿಂದ ಓಡಿಹೋಗುವರು. [QBR]
23. ಅದರ ಚರ್ಮದಲ್ಲಿ ಯಾವ ಬಲಹೀನತೆಯೂ ಇಲ್ಲ. [QBR2] ಅದು ಕಬ್ಬಿಣದಂತೆ ಗಟ್ಟಿಯಾಗಿದೆ. [QBR]
24. ಅದರ ಹೃದಯ ಬಂಡೆಯಂತಿದೆ, ಅದಕ್ಕೆ ಭಯವೇ ಇಲ್ಲ. [QBR2] ಬೀಸುವ ಕೆಳಗಲ್ಲಿನಂತೆ ಅದು ಗಟ್ಟಿಯಾಗಿದೆ. [QBR]
25. ಅದು ಎದ್ದಾಗ ಬಲಿಷ್ಠರು ಭಯಪಡುವರು. [QBR2] ಅದು ತನ್ನ ಬಾಲವನ್ನು ತೂಗಿದರೆ ಅವರು ಓಡಿಹೋಗುವರು. [QBR]
26. ಅದಕ್ಕೆ ಬಡಿಯುವ ಖಡ್ಗ, ಭರ್ಜಿ ಈಟಿಗಳು ಹಿಂದಕ್ಕೆ ಪುಟಹಾರುತ್ತವೆ. [QBR2] ಯಾವ ಆಯುಧಗಳೂ ಅದನ್ನು ನೋಯಿಸಲಾರವು! [QBR]
27. ಅದು ಕಬ್ಬಿಣವನ್ನು ಒಣಹುಲ್ಲಿನಂತೆಯೂ [QBR2] ತಾಮ್ರವನ್ನು ಲೊಡ್ಡುಮರದಂತೆಯೂ ಮುರಿದುಹಾಕುವುದು. [QBR]
28. ಬಾಣಗಳೂ ಅದನ್ನು ಓಡಿಸಲಾರವು, [QBR2] ಕವಣಿಕಲ್ಲುಗಳೂ ಅದಕ್ಕೆ ಒಣಹುಲ್ಲಿನಂತಿವೆ. [QBR]
29. ಅದು ತನಗೆ ಬಡಿದ ಮರದ ದೊಣ್ಣೆಯನ್ನು ಹುಲ್ಲುಕಡ್ಡಿಯೆಂದು ಭಾವಿಸಿಕೊಳ್ಳುವುದು. [QBR2] ಮನುಷ್ಯರು ಬಿರುಸಾಗಿ ಎಸೆಯುವ ಭರ್ಜಿಗಳನ್ನು ಕಂಡು ನಗುತ್ತದೆ. [QBR]
30. ಅದರ ಕೆಳಭಾಗವು ಮಡಕೆಯ ಹರಿತವಾದ ಚೂರುಗಳಂತಿವೆ. [QBR2] ಅದು ನಡೆಯುವಾಗ ಒಕ್ಕಣೆಯ ಸುತ್ತಿಗೆಯಂತೆ ಮಣ್ಣಿನಲ್ಲಿ ಕುಳಿಗಳನ್ನು ಮಾಡುತ್ತದೆ. [QBR]
31. ಮಡಕೆಯಲ್ಲಿ ಕುದಿಯುತ್ತಿರುವ ನೀರಿನಂತೆಯೂ [QBR2] ಮಡಕೆಯಲ್ಲಿ ಕುದಿಯುತ್ತಿರುವ ಎಣ್ಣೆಯಂತೆಯೂ ಅದು ನೀರನ್ನು ಕುದಿಸುವುದು. [QBR]
32. ಅದು ಈಜುವಾಗ ಅದರ ಹಿಂದೆ ಒಂದು ದಾರಿಯೇ ನಿರ್ಮಿತವಾಗುವುದು. [QBR2] ಅದು ನೀರನ್ನು ಕಲಕಿ ತನ್ನ ಹಿಂದೆ ಬಿಳಿ ನೊರೆಯನ್ನು ಉಂಟುಮಾಡುವುದು. [QBR]
33. ಭೂಮಿಯ ಮೇಲಿರುವ ಯಾವ ಪ್ರಾಣಿಯೂ ಅದರಂತಿಲ್ಲ. [QBR2] ಈ ಪ್ರಾಣಿಯೊಂದೇ ಯಾವುದಕ್ಕೂ ಭಯಪಡದು. [QBR]
34. ಅತ್ಯಂತ ಗರ್ವಿಷ್ಠ ಪ್ರಾಣಿಗಳನ್ನೂ ಅದು ಕಡೆಗಣಿಸುವುದು. [QBR2] ಅದು ಕ್ರೂರಪ್ರಾಣಿಗಳಿಗೆಲ್ಲಾ ರಾಜನಾಗಿದೆ.” [PE]
ಒಟ್ಟು 42 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 41 / 42
1 “ಯೋಬನೇ, ನೀನು ಲಿವ್ಯಾತಾನನನ್ನು *ಲಿವ್ಯಾತಾನ್ ಇದು ಹೀಬ್ರೂ ಹೆಸರು, ಇದು ಯಾವ ಪ್ರಾಣಿ ಎಂಬುದು ಸರಿಯಾಗಿ ಗೊತ್ತಿಲ್ಲ. ಇದು ಮೊಸಳೆಯಾಗಿದ್ದಿರಬಹುದು ಅಥವಾ ಮಹಾಸಮುದ್ರ ಪ್ರಾಣಿಯಾಗಿದ್ದಿರಬಹುದು. ಗಾಳದಿಂದ ಹಿಡಿಯಬಲ್ಲೆಯಾ? ನೀನು ಅದರ ನಾಲಿಗೆಯನ್ನು ಅದುಮಿ ಹಗ್ಗದಿಂದ ಕಟ್ಟಬಲ್ಲೆಯಾ?
2 ಅದರ ಮೂಗಿನ ಮೂಲಕ ಹಗ್ಗವನ್ನಾಗಲಿ ದವಡೆಗಳ ಮೂಲಕ ಕೊಂಡಿಯನ್ನಾಗಲಿ ಹಾಕಬಲ್ಲೆಯಾ?
3 ತನ್ನನ್ನು ಸ್ವತಂತ್ರವಾಗಿ ಬಿಟ್ಟುಕೊಡಬೇಕೆಂದು ಅದು ನಿನ್ನನ್ನು ಬೇಡಿಕೊಳ್ಳುವುದೇ? ಅದು ನಯವಾದ ಪದಗಳಿಂದ ನಿನ್ನೊಂದಿಗೆ ಮಾತಾಡುತ್ತದೆಯೋ?
4 ಅದು ನಿನ್ನೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುವುದೇ? ಸದಾಕಾಲ ನಿನ್ನ ಸೇವೆಮಾಡುವುದಾಗಿ ವಾಗ್ದಾನ ಮಾಡುವುದೇ?
5 ನೀನು ಪಕ್ಷಿಯೊಂದಿಗೆ ಆಟವಾಡುವಂತೆ ಅದರ ಜೊತೆಯಲ್ಲಿ ಆಟವಾಡುವಿಯಾ? ನಿನ್ನ ದಾಸಿಯರು ಅದರೊಂದಿಗೆ ಆಟವಾಡಲೆಂದು ಹಗ್ಗದಿಂದ ಅದನ್ನು ಕಟ್ಟಿಹಾಕುವಿಯಾ?
6 ಯೋಬನೇ, ಬೆಸ್ತರು ಅದನ್ನು ನಿನ್ನಿಂದ ಕೊಂಡುಕೊಳ್ಳಲು ಪ್ರಯತ್ನಿಸುವರೇ? ಅವರು ಅದನ್ನು ವರ್ತಕರಿಗೆ ಮಾರುವುದಕ್ಕಾಗಿ ತುಂಡುತುಂಡಾಗಿ ಕತ್ತರಿಸುವರೇ?
7 ನೀನು ಭರ್ಜಿಗಳನ್ನು ಎಸೆದು ಅದರ ಚರ್ಮಕ್ಕೂ ತಲೆಗೂ ನಾಟಿಸಬಲ್ಲೆಯಾ? 8 “ಯೋಬನೇ, ನೀನು ಅದರ ಮೇಲೆ ನಿನ್ನ ಕೈಯಿಟ್ಟು ನೋಡು. ಆ ಪ್ರಯಾಸದ ಹೋರಾಟವನ್ನು ನೆನಸಿಕೊಂಡರೆ ಅದನ್ನು ನೀನು ಮುಟ್ಟುವುದೇ ಇಲ್ಲ.
9 ನೀನು ಅದನ್ನು ಸೋಲಿಸಬಹುದೆಂದು ಯೋಚಿಸಿಕೊಂಡಿದ್ದರೆ, ಇನ್ನಾದರೂ ಅದನ್ನು ಮರೆತುಬಿಡು! ಅದನ್ನು ನೋಡಿದರೇ ನಿನಗೆ ಭಯವಾಗುತ್ತದೆ!
10 ಅದನ್ನು ಕೋಪಗೊಳಿಸುವಷ್ಟು ಧೈರ್ಯ ಯಾರಿಗೂ ಇಲ್ಲ. “ಹೀಗಿರುವಲ್ಲಿ ನನಗೆ ವಿರುದ್ಧವಾಗಿ ನಿಂತುಕೊಳ್ಳುವಷ್ಟು ಶಕ್ತಿ ಯಾರಿಗಿದೆ?
11 ನಾನು ಯಾರಿಗೂ ಯಾವ ಸಾಲವನ್ನೂ ತೀರಿಸಬೇಕಿಲ್ಲ. ಆಕಾಶಮಂಡಲದ ಕೆಳಗಿರುವ ಸಮಸ್ತವೂ ನನ್ನದೇ. 12 “ಯೋಬನೇ, ಲಿವ್ಯಾತಾನನ ಅಂಗಗಳನ್ನೂ ಶಕ್ತಿಯನ್ನೂ ಸೊಗಸಾದ ಆಕಾರವನ್ನೂ ನಿನಗೆ ವರ್ಣಿಸುವೆನು.
13 ಯಾವನೂ ಅದರ ಚರ್ಮವನ್ನು ಸುಲಿಯಲಾರನು. ಯಾವನೂ ಅದರ ದವಡೆಗಳಿಗೆ ಚುಚ್ಚಲಾರನು.
14 ಬಲವಂತದಿಂದ ಅದರ ದವಡೆಗಳನ್ನು ತೆರೆಸಲು ಯಾರಿಗೂ ಸಾಧ್ಯವಿಲ್ಲ. ಅದರ ದವಡೆಹಲ್ಲುಗಳು ಜನರನ್ನು ಭಯಗೊಳಿಸುತ್ತವೆ.
15 ಅದರ ಹಿಂಬದಿಯಲ್ಲಿ ಗುರಾಣಿಗಳ ಸಾಲುಗಳು ಒಂದಕ್ಕೊಂದು ಬಿಗಿಯಲ್ಪಟ್ಟು ಮುದ್ರಿತವಾಗಿವೆ.
16 ಗಾಳಿಯೂ ಹಾದುಹೋಗದಂತೆ ಆ ಗುರಾಣಿಗಳು ಜೋಡಿಸಲ್ಪಟ್ಟಿವೆ.
17 ಗುರಾಣಿಗಳು ಒಂದಕ್ಕೊಂದು ಅಂಟಿಕೊಂಡು ಬಿಡಿಸಲು ಅಸಾಧ್ಯವಾಗಿದೆ.
18 ಅದರ ಸೀನಿನ ತುಂತುರುಗಳು ಥಳಥಳಿಸುತ್ತವೆ. ಅದರ ಕಣ್ಣುಗಳು ಮುಂಜಾನೆಯ ಬೆಳಕಿನಂತಿವೆ.
19 ಅದರ ಬಾಯೊಳಗಿಂದ ಉರಿಯುವ ಕೊಳ್ಳಿಗಳು ಹೊರಬರುತ್ತವೆ. ಬೆಂಕಿಯ ಜ್ವಾಲೆಗಳು ಹಾರುತ್ತವೆ.
20 ಕಾಯ್ದಮಡಕೆಯ ಕೆಳಗೆ ಉರಿಯುತ್ತಿರುವ ಆಪು ಹುಲ್ಲಿನಿಂದ ಬರುವ ಹೊಗೆಯಂತೆ ಅದರ ಮೂಗಿನಿಂದ ಹೊಗೆಯು ಹಾಯುವುದು.
21 ಅದರ ಉಸಿರು ಇದ್ದಲನ್ನು ಹೊತ್ತಿಸುವುದು; ಜ್ವಾಲೆಗಳು ಅದರ ಬಾಯೊಳಗಿಂದ ಹಾರುವವು.
22 ಅದರ ಕುತ್ತಿಗೆ ಬಹು ಶಕ್ತಿಯುತವಾಗಿದೆ; ಜನರು ಭಯಗೊಂಡು ಅದರ ಬಳಿಯಿಂದ ಓಡಿಹೋಗುವರು.
23 ಅದರ ಚರ್ಮದಲ್ಲಿ ಯಾವ ಬಲಹೀನತೆಯೂ ಇಲ್ಲ. ಅದು ಕಬ್ಬಿಣದಂತೆ ಗಟ್ಟಿಯಾಗಿದೆ.
24 ಅದರ ಹೃದಯ ಬಂಡೆಯಂತಿದೆ, ಅದಕ್ಕೆ ಭಯವೇ ಇಲ್ಲ. ಬೀಸುವ ಕೆಳಗಲ್ಲಿನಂತೆ ಅದು ಗಟ್ಟಿಯಾಗಿದೆ.
25 ಅದು ಎದ್ದಾಗ ಬಲಿಷ್ಠರು ಭಯಪಡುವರು. ಅದು ತನ್ನ ಬಾಲವನ್ನು ತೂಗಿದರೆ ಅವರು ಓಡಿಹೋಗುವರು.
26 ಅದಕ್ಕೆ ಬಡಿಯುವ ಖಡ್ಗ, ಭರ್ಜಿ ಈಟಿಗಳು ಹಿಂದಕ್ಕೆ ಪುಟಹಾರುತ್ತವೆ. ಯಾವ ಆಯುಧಗಳೂ ಅದನ್ನು ನೋಯಿಸಲಾರವು!
27 ಅದು ಕಬ್ಬಿಣವನ್ನು ಒಣಹುಲ್ಲಿನಂತೆಯೂ ತಾಮ್ರವನ್ನು ಲೊಡ್ಡುಮರದಂತೆಯೂ ಮುರಿದುಹಾಕುವುದು.
28 ಬಾಣಗಳೂ ಅದನ್ನು ಓಡಿಸಲಾರವು, ಕವಣಿಕಲ್ಲುಗಳೂ ಅದಕ್ಕೆ ಒಣಹುಲ್ಲಿನಂತಿವೆ.
29 ಅದು ತನಗೆ ಬಡಿದ ಮರದ ದೊಣ್ಣೆಯನ್ನು ಹುಲ್ಲುಕಡ್ಡಿಯೆಂದು ಭಾವಿಸಿಕೊಳ್ಳುವುದು. ಮನುಷ್ಯರು ಬಿರುಸಾಗಿ ಎಸೆಯುವ ಭರ್ಜಿಗಳನ್ನು ಕಂಡು ನಗುತ್ತದೆ.
30 ಅದರ ಕೆಳಭಾಗವು ಮಡಕೆಯ ಹರಿತವಾದ ಚೂರುಗಳಂತಿವೆ. ಅದು ನಡೆಯುವಾಗ ಒಕ್ಕಣೆಯ ಸುತ್ತಿಗೆಯಂತೆ ಮಣ್ಣಿನಲ್ಲಿ ಕುಳಿಗಳನ್ನು ಮಾಡುತ್ತದೆ.
31 ಮಡಕೆಯಲ್ಲಿ ಕುದಿಯುತ್ತಿರುವ ನೀರಿನಂತೆಯೂ ಮಡಕೆಯಲ್ಲಿ ಕುದಿಯುತ್ತಿರುವ ಎಣ್ಣೆಯಂತೆಯೂ ಅದು ನೀರನ್ನು ಕುದಿಸುವುದು.
32 ಅದು ಈಜುವಾಗ ಅದರ ಹಿಂದೆ ಒಂದು ದಾರಿಯೇ ನಿರ್ಮಿತವಾಗುವುದು. ಅದು ನೀರನ್ನು ಕಲಕಿ ತನ್ನ ಹಿಂದೆ ಬಿಳಿ ನೊರೆಯನ್ನು ಉಂಟುಮಾಡುವುದು.
33 ಭೂಮಿಯ ಮೇಲಿರುವ ಯಾವ ಪ್ರಾಣಿಯೂ ಅದರಂತಿಲ್ಲ. ಈ ಪ್ರಾಣಿಯೊಂದೇ ಯಾವುದಕ್ಕೂ ಭಯಪಡದು.
34 ಅತ್ಯಂತ ಗರ್ವಿಷ್ಠ ಪ್ರಾಣಿಗಳನ್ನೂ ಅದು ಕಡೆಗಣಿಸುವುದು. ಅದು ಕ್ರೂರಪ್ರಾಣಿಗಳಿಗೆಲ್ಲಾ ರಾಜನಾಗಿದೆ.”
ಒಟ್ಟು 42 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 41 / 42
×

Alert

×

Kannada Letters Keypad References