7. ಆತನು ಆಜ್ಞಾಪಿಸಿದರೆ, ಆತನ ಆಜ್ಞೆಯಂತೆಯೇ ಸೂರ್ಯೋದಯವಾಗದು. ನಕ್ಷತ್ರಗಳು ಪ್ರಕಾಶಿಸದಂತೆ ಆತನು ಅವುಗಳನ್ನು ಮುಚ್ಚಿಟ್ಟು ಮುದ್ರೆ ಹಾಕಬಲ್ಲನು.
|
12. ದೇವರೇ ತೆಗೆದುಕೊಳ್ಳುವುದಾದರೆ, ಆತನನ್ನು ತಡೆಯಬಲ್ಲವರು ಯಾರು? ‘ನೀನು ಏನು ಮಾಡುತ್ತಿರುವೆ’ ಎಂದು ಆತನನ್ನು ಕೇಳುವವರು ಯಾರು?
|
15. ಯೋಬನಾದ ನಾನು ನಿರಪರಾಧಿಯಾಗಿದ್ದರೂ ಆತನಿಗೆ ಉತ್ತರವನ್ನು ಕೊಡಲಾರೆ. ನನಗೆ ಕರುಣೆ ತೋರುವಂತೆ ನ್ಯಾಯಾಧಿಪತಿಯಾದ ದೇವರನ್ನು ಬೇಡಿಕೊಳ್ಳುವೆನು.
|
16. ನಾನು ಆತನಿಗೆ ಮೊರೆಯಿಟ್ಟಿದ್ದರೂ, ಆತನು ನನಗೆ ಉತ್ತರ ಕೊಟ್ಟಿದ್ದರೂ ಈಗ ಆತನು ನನಗೆ ಕಿವಿಗೊಡುತ್ತಾನೆ ಎಂಬುದರಲ್ಲಿ ನನಗೆ ನಂಬಿಕೆಯಿಲ್ಲ.
|
19. ಆತನನ್ನು ಸೋಲಿಸೋಣವೆಂದರೆ ಆತನೇ ಬಲಿಷ್ಠನಾಗಿದ್ದಾನೆ; ನ್ಯಾಯಾಲಯಕ್ಕೆ ಹೋಗೋಣ ಎಂದರೆ ಆತನನ್ನು ನ್ಯಾಯಾಲಯಕ್ಕೆ ಬರಮಾಡುವವನು ಯಾರು?
|
20. ನಾನು ನಿರಪರಾಧಿಯಾಗಿದ್ದರೂ ನನ್ನ ಬಾಯಿ ನನ್ನನ್ನು ಖಂಡಿಸುವುದು; ನಾನು ನಿರ್ದೋಷಿಯಾಗಿದ್ದರೂ ನನ್ನ ಬಾಯಿ ನನ್ನನ್ನು ದೋಷಿಯೆಂದು ಹೇಳುವುದು.
|
22. ಜೀವಿತದಲ್ಲಿ ಎಲ್ಲರೂ ಒಂದೇ. ಆದ್ದರಿಂದ ಆತನು ಅಪರಾಧಿಗಳನ್ನೂ ನಿರಪರಾಧಿಗಳನ್ನೂ ನಾಶ ಮಾಡುತ್ತಾನೆ” ಎಂಬುದು ನನ್ನ ಆಲೋಚನೆ.
|
24. ದುಷ್ಟನು ಭೂಮಿಯನ್ನು ಆಕ್ರಮಿಸಿಕೊಂಡಾಗ, ದೇವರು ಅದನ್ನು ನ್ಯಾಯಾಧಿಪತಿಗಳಿಗೆ ಮರೆಮಾಡುವನೇ? ಇದು ಸತ್ಯವಾಗಿದ್ದರೆ, ಇದನ್ನು ದೇವರಲ್ಲದೆ ಯಾರು ಮಾಡಿದರು?
|
26. ಜಂಬುಗಿಡದಿಂದ ಮಾಡಿದ ದೋಣಿಗಳಂತೆಯೂ ಹದ್ದು ತನ್ನ ಬೇಟೆಯ ಮೇಲೆ ಎರಗಲು ಹಾರಿ ಹೋಗುವಂತೆಯೂ ನನ್ನ ದಿನಗಳು ವೇಗವಾಗಿ ಹೋಗುತ್ತಿವೆ.
|
32. “ದೇವರು ನನ್ನಂಥ ಮನುಷ್ಯನಲ್ಲ. ನಾನು ಆತನಿಗೆ ಉತ್ತರಿಸಲಾರೆ. ನಾವು ನ್ಯಾಯಾಲಯದಲ್ಲಿ ಒಬ್ಬರನ್ನೊಬ್ಬರು ಸಂಧಿಸಲಾರೆವು.
|
33. ನಮ್ಮಿಬ್ಬರಿಗೆ ಮಧ್ಯಸ್ತಗಾರನಿದ್ದರೆ, ನಮ್ಮಿಬ್ಬರ ಮೇಲೆ ಅಧಿಕಾರವುಳ್ಳವನಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. (ಆದರೆ ಅಂಥವರು ಯಾರೂ ಇಲ್ಲ.)
|
34. ದೇವರ ದಂಡವನ್ನು ತೆಗೆದುಹಾಕುವ ಮಧ್ಯಸ್ತಗಾರನಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ಆಗ ಆತನು ನನ್ನನ್ನು ಹೆದರಿಸುತ್ತಿರಲಿಲ್ಲ.
|