1. {ಬರಲಿಕ್ಕಿರುವ ಯೆಹೋವನ ದಿನ} [PS] ಚೀಯೋನಿನಲ್ಲಿ ತುತ್ತೂರಿಯನ್ನೂದಿರಿ. [QBR2] ನನ್ನ ಪವಿತ್ರ ಪರ್ವತದಲ್ಲಿ ಧ್ವನಿಯೆತ್ತಿ ಎಚ್ಚರಿಕೆ ನೀಡಿರಿ. [QBR] ದೇಶದಲ್ಲಿ ವಾಸಿಸುವ ಎಲ್ಲಾ ಜನರು ಭಯದಿಂದ ನಡುಗಲಿ. [QBR2] ಯೆಹೋವನ ಮಹಾದಿನವು ಬರಲಿದೆ; [QBR2] ಯೆಹೋವನ ಮಹಾದಿನವು ಹತ್ತಿರವೇ ಇದೆ. [QBR]
2. ಆ ದಿನವು ಕರಾಳ ದಿನ. [QBR2] ಮೋಡದಿಂದ ತುಂಬಿದ ದಿನವಾಗಿದೆ. [QBR] ಅಂದು ಸೂರ್ಯೋದಯದ ಸಮಯದಲ್ಲಿ ಪರ್ವತದಲ್ಲಿ ಹರಡಿದ ಸೈನ್ಯವನ್ನು ನೀವು ನೋಡುವಿರಿ. [QBR2] ಅದು ಬಲಿಷ್ಠವಾದ ಮಹಾಸೈನ್ಯ. [QBR] ಅಂಥ ಸೈನ್ಯವು ಹಿಂದೆಂದೂ ಇರಲಿಲ್ಲ. [QBR2] ಇನ್ನು ಮುಂದೆಯೂ ಇರುವುದಿಲ್ಲ. [QBR]
3. ಆ ಸೈನ್ಯವು ಸುಡುವ ಬೆಂಕಿಯಂತೆ ದೇಶವನ್ನು ನಾಶಮಾಡುವದು. [QBR2] ಏದೆನ್ ತೋಟದಂತೆ ಕಂಗೊಳಿಸುತ್ತಿದ್ದ ದೇಶವು [QBR] ಸೈನ್ಯವು ಬಂದ ಮೇಲೆ ಬೆಂಗಾಡಿನಂತಿರುವದು. [QBR2] ಅವರಿಂದ ಯಾರೂ ತಪ್ಪಿಸಿಕೊಳ್ಳಲಾರರು. [QBR]
4. ಅವರು ಕುದುರೆಯಂತೆ ಕಾಣುವರು, [QBR2] ಯುದ್ಧದ ಕುದುರೆಯಂತೆ ಓಡುವರು. [QBR]
5. ಕಿವಿಗೊಟ್ಟು ಕೇಳಿರಿ. [QBR] ಪರ್ವತಗಳ ಮೇಲೆ ಓಡುವ ರಥಗಳ [QBR2] ಶಬ್ದದಂತೆ ಅವರ ಶಬ್ದವು ಕೇಳುತ್ತದೆ. [QBR] ಬೆಂಕಿಯ ಜ್ವಾಲೆಗಳು ಹೊಟ್ಟನ್ನು ಸುಡುವಂತೆ [QBR2] ಅವರ ಶಬ್ದವು ಕೇಳುತ್ತದೆ. [QBR] ಬಲಿಷ್ಠರಾದ ಅವರು ಯುದ್ಧಕ್ಕೆ ಸಿದ್ಧರಾಗಿದ್ದಾರೆ. [QBR]
6. ಈ ಸೈನ್ಯವನ್ನು ನೋಡುವ ಜನರು ಹೆದರಿ ನಡುಗುವರು; [QBR2] ಅವರ ಮುಖಗಳು ಕಂಗೆಡುವದು.
7. ಆ ಸೈನಿಕರು ವೇಗವಾಗಿ ಓಡುವರು; [QBR2] ಗೋಡೆ ಹತ್ತುವರು, [QBR] ನೇರವಾಗಿ ಮುಂದೆ ಹೋಗುವರು. [QBR2] ದಾರಿಯಿಂದ ಅತ್ತಿತ್ತ ಹೋಗರು; [QBR]
8. ಒಬ್ಬರಮೇಲೊಬ್ಬರು ಬೀಳದೆ ಪ್ರತಿಯೊಬ್ಬ ಸೈನಿಕನು [QBR2] ತನ್ನ ದಾರಿಯಲ್ಲಿಯೇ ಮುಂದುವರಿಯುವನು. [QBR] ಒಬ್ಬ ಸೈನಿಕನಿಗೆ ಗಾಯವಾಗಿ ಬಿದ್ದರೂ [QBR2] ಉಳಿದವರು ನಿಲ್ಲದೆ ಮುಂದಕ್ಕೆ ನುಗ್ಗುತ್ತಾ ಇರುವರು. [QBR]
9. ಅವರು ಪಟ್ಟಣದ ಕಡೆಗೆ [QBR2] ಓಡಿ ತ್ವರೆಯಾಗಿ ಗೋಡೆ ಹತ್ತುವರು. [QBR] ಮನೆಯೊಳಗೆ ನುಗ್ಗುವರು; [QBR2] ಕಳ್ಳರಂತೆ ಕಿಟಕಿಯಿಂದ ನುಸುಳುವರು. [QBR]
10. ಅವರ ಮುಂದೆ ಭೂಮಿಯೂ ಆಕಾಶವೂ ನಡುಗುವುದು; [QBR2] ಸೂರ್ಯಚಂದ್ರರು ಕಪ್ಪಾಗಿಹೋಗುವರು; ನಕ್ಷತ್ರಗಳು ಹೊಳಪನ್ನು ಕಳೆದುಕೊಳ್ಳುವುದು. [QBR]
11. ಯೆಹೋವನು ತನ್ನ ಸೈನ್ಯವನ್ನು ಮಹಾಧ್ವನಿಯಿಂದ ಕರೆಯುತ್ತಾನೆ. [QBR2] ಆತನ ಶಿಬಿರವು ದೊಡ್ಡದಾಗಿದೆ. [QBR] ಆ ಸೈನ್ಯವು ಆತನ ಆಜ್ಞೆಯನ್ನು ಪಾಲಿಸುತ್ತದೆ; [QBR2] ಆ ಸೈನ್ಯವು ಮಹಾ ಬಲಿಷ್ಠವಾಗಿದೆ. [QBR] ಯೆಹೋವನ ಮಹಾದಿನವು ಮಹಾ ಭಯಂಕರವಾದ ದಿನವಾಗಿದೆ. [QBR2] ಅದನ್ನು ಸಹಿಸಲು ಯಾರಿಗೂ ಸಾಧ್ಯವಿಲ್ಲ.
12. {ಜನರು ಬದಲಾಗಬೇಕೆಂದು ಯೆಹೋವನು ಹೇಳುತ್ತಾನೆ} [PS] ಇದು ಯೆಹೋವನ ಸಂದೇಶ: [QBR2] “ನಿಮ್ಮ ಪೂರ್ಣಹೃದಯದಿಂದ ನನ್ನ ಬಳಿಗೆ ಬನ್ನಿರಿ, [QBR] ನೀವು ದುಷ್ಟತ್ವವನ್ನು ನಡಿಸಿರುವದರಿಂದ ದುಃಖಿಸಿರಿ, [QBR2] ಅಳಿರಿ, ಉಪವಾಸ ಮಾಡಿರಿ. [QBR]
13. ನಿಮ್ಮ ಬಟ್ಟೆಗಳನ್ನಲ್ಲ, [QBR2] ಹೃದಯವನ್ನು ಹರಿಯಿರಿ.” [QBR] ನಿಮ್ಮ ದೇವರಾದ ಯೆಹೋವನ ಬಳಿಗೆ ಬನ್ನಿರಿ. [QBR2] ಆತನು ದಯಾಪರನೂ ಕನಿಕರವುಳ್ಳವನೂ ಆಗಿದ್ದಾನೆ. [QBR] ಆತನು ಬೇಗನೆ ಕೋಪಿಸುವುದಿಲ್ಲ. [QBR2] ಆತನಲ್ಲಿ ಆಳವಾದ ಪ್ರೀತಿ ಇದೆ. [QBR] ಆತನು ಯೋಚಿಸಿದ ಶಿಕ್ಷೆಯನ್ನು ಒಂದುವೇಳೆ ನಿಮಗೆ ಕೊಡದೆ [QBR2] ತನ್ನ ಮನಸ್ಸನ್ನು ಬದಲಾಯಿಸಬಹುದು. [QBR]
14. ಒಂದುವೇಳೆ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿದರೂ ಬದಲಾಯಿಸಬಹುದು. [QBR2] ಒಂದುವೇಳೆ ಆತನು ನಿಮಗಾಗಿ ಆಶೀರ್ವಾದವನ್ನು ಬಿಟ್ಟುಹೋಗಬಹುದು. [QBR] ಆಗ ನೀವು ದೇವರಾದ ಯೆಹೋವನಿಗೆ ಧಾನ್ಯ [QBR2] ಮತ್ತು ಪಾನಸಮರ್ಪಣೆ ಮಾಡುವಿರಿ.
15. {ಯೆಹೋವನಿಗೆ ಪ್ರಾರ್ಥಿಸಿರಿ} [PS] ಚೀಯೋನಿನಲ್ಲಿ ತುತ್ತೂರಿ ಊದಿರಿ. [QBR2] ವಿಶೇಷ ಕೂಟಕ್ಕಾಗಿ ಜನರನ್ನು ಕೂಡಿಸಿರಿ. [QBR2] ಉಪವಾಸದ ದಿನ ಗೊತ್ತುಮಾಡಿರಿ. [QBR]
16. ವಿಶೇಷ ಕೂಟಕ್ಕಾಗಿ [QBR2] ಜನರನ್ನು ಒಟ್ಟಾಗಿ ಕೂಡಿಸಿರಿ. [QBR] ಪ್ರಾಯಸ್ಥರನ್ನು ಕೂಡಿಸಿರಿ. [QBR2] ಮಕ್ಕಳನ್ನೂ ಕೂಡಿಸಿರಿ. ಮೊಲೆಹಾಲು ಕುಡಿಯುವ ಶಿಶುಗಳನ್ನೂ ಒಟ್ಟಾಗಿ ಸೇರಿಸಿರಿ. [QBR] ವಧುವರರು ತಮ್ಮ [QBR2] ಶೋಭನದ ಕೋಣೆಯಿಂದ ಹೊರಬರಲಿ. [QBR]
17. ಯೆಹೋವನ ಸೇವಕರಾದ ಯಾಜಕರು [QBR2] ಮಂಟಪಕ್ಕೂ ವೇದಿಕೆಗೂ ಮಧ್ಯದಲ್ಲಿ ಗೋಳಾಡಲಿ. [QBR] ಆ ಜನರೆಲ್ಲಾ ಹೀಗೆ ಹೇಳಬೇಕು, “ಯೆಹೋವನೇ, ನಿನ್ನ ಜನರ ಮೇಲೆ ಕರುಣೆ ಇಡು, [QBR2] ನಿನ್ನ ಜನರನ್ನು ನಾಚಿಕೆಗೆ ತುತ್ತಾಗುವಂತೆ ಮಾಡಬೇಡ. [QBR2] ನಿನ್ನ ಜನರ ವಿಷಯವಾಗಿ ಅನ್ಯಜನರು ಗೇಲಿ ಮಾಡದಿರಲಿ. [QBR] ಇತರ ದೇಶದ ಜನರು ನಮಗೆ ಹಾಸ್ಯ ಮಾಡುತ್ತಾ, [QBR2] ‘ಅವರ ದೇವರು ಎಲ್ಲಿ?’ ಎಂದು ಹೇಳದ ಹಾಗೆ ಮಾಡು.”
18. {ಯೆಹೋವನು ದೇಶವನ್ನು ಸುಸ್ಥಿತಿಗೆ ತರುವನು} [PS] ಆಗ ಯೆಹೋವನು ತನ್ನ ದೇಶದ ಬಗ್ಗೆ ಆಸಕ್ತಿ ತೋರಿಸಿದನು. [QBR2] ತನ್ನ ಜನರ ಬಗ್ಗೆ ದುಃಖಿಸಿದನು. [QBR]
19. ಯೆಹೋವನು ತನ್ನ ಜನರೊಂದಿಗೆ ಮಾತನಾಡಿ ಹೀಗೆ ಹೇಳಿದನು: [QBR] “ನಾನು ನಿಮಗೆ ಧಾನ್ಯ, ದ್ರಾಕ್ಷಾರಸ, ಎಣ್ಣೆಯನ್ನು ಕಳುಹಿಸುವೆನು. [QBR2] ನಿಮಗೆ ಬೇಕಾದಷ್ಟು ಇರುವದು. [QBR2] ಅನ್ಯ ಜನಾಂಗದವರೆದುರು ನಿಮ್ಮನ್ನು ಇನ್ನು ಮುಂದೆ ನಾಚಿಕೆಗೆ ಗುರಿಪಡಿಸುವುದಿಲ್ಲ. [QBR]
20. ಉತ್ತರದಿಂದ ಬಂದ ದಂಡನ್ನು ನಿಮ್ಮ ದೇಶದಿಂದ ಹೊರಡಿಸುವೆನು. [QBR2] ಅವರನ್ನು ಒಣ ಬೆಂಗಾಡಿಗೆ ಕಳುಹಿಸುವೆನು. [QBR] ಅವರಲ್ಲಿ ಕೆಲವರು ಪೂರ್ವದ ಸಮುದ್ರಕ್ಕೆ ಹೋಗುವರು, [QBR2] ಕೆಲವರು ಪಶ್ಚಿಮದ ಸಮುದ್ರಕ್ಕೆ ಹೋಗುವರು. [QBR] ಅವರು ಭಯಂಕರ ಕೃತ್ಯಗಳನ್ನು ಮಾಡಿದುದರಿಂದ [QBR2] ಸತ್ತು ಕೊಳೆಯುವ ಸ್ಥಿತಿಗೆ ಬರಮಾಡುವೆನು. [QBR] ಆಗ ಭಯಂಕರ ಹೊಲಸು ವಾಸನೆ ಇರುವದು.”
21. {ದೇಶವು ಹೊಸತಾಗಿ ಮಾಡಲ್ಪಡುವದು} [PS] ದೇಶವೇ, ಭಯಪಡದಿರು. [QBR2] ಯೆಹೋವನು ಮಹತ್ಕಾರ್ಯವನ್ನು ಮಾಡಲಿರುವದರಿಂದ [QBR2] ಸಂತೋಷದಿಂದ ಆನಂದಿಸು. [QBR]
22. ಅಡವಿಯಲ್ಲಿರುವ ಪ್ರಾಣಿಗಳೇ, ಭಯಪಡಬೇಡಿ. [QBR2] ಮರುಭೂಮಿಯು ಹುಲ್ಲುಗಾವಲಾಗುವದು. [QBR] ಮರಗಳು ಹಣ್ಣುಗಳನ್ನು ಬಿಡುವವು. [QBR2] ಅಂಜೂರದ ಮರಗಳೂ ದ್ರಾಕ್ಷಿಬಳ್ಳಿಗಳೂ ಬಹಳ ಹಣ್ಣುಗಳನ್ನು ಬಿಡುವವು.
23. ಆದ್ದರಿಂದ ಚೀಯೋನಿನ ಜನರೇ, ಸಂತೋಷಪಡಿರಿ. [QBR2] ನಿಮ್ಮ ದೇವರಾದ ಯೆಹೋವನಲ್ಲಿ ಸಂತೋಷಿಸಿರಿ. [QBR] ಆತನು ನಿಮಗೆ ಮಳೆ ಸುರಿಸುವನು. [QBR2] ಹಿಂದಿನಂತೆ ನಿಮಗೆ ಮುಂಗಾರು, ಹಿಂಗಾರು ಮಳೆಗಳನ್ನು ಸುರಿಸುವನು. [QBR]
24. ಕಣಜಗಳು ಗೋದಿಯಿಂದ ತುಂಬಿರುವವು. [QBR2] ಪಿಪಾಯಿಗಳು ಎಣ್ಣೆಯಿಂದಲೂ ದ್ರಾಕ್ಷಾರಸದಿಂದಲೂ ತುಂಬಿತುಳುಕುವವು. [QBR]
25. “ಯೆಹೋವನಾದ ನಾನು ನಿಮಗೆ ವಿರುದ್ಧವಾಗಿ ನನ್ನ ಸೈನ್ಯವನ್ನು ಕಳುಹಿಸಿದೆನು. [QBR2] ಮಿಡತೆಗಳ ಗುಂಪು, ದೊಡ್ಡ ಮಿಡತೆ, [QBR2] ನಾಶಮಾಡುವ ಮಿಡತೆ, ಹಾರುವ ಮಿಡತೆ, ಚೂರಿ ಮಿಡತೆಗಳು ಬಂದು ನಿಮಗಿದ್ದದ್ದನ್ನೆಲ್ಲಾ ತಿಂದುಬಿಟ್ಟವು. [QBR] ಆದರೆ ಯೆಹೋವನಾದ ನಾನು ನಿಮ್ಮ ಸಂಕಟಕಾಲಕ್ಕೆ ಬದಲಾಗಿ [QBR2] ಸುಭಿಕ್ಷ ಕಾಲವನ್ನು ದಯಪಾಲಿಸುವೆನು. [QBR]
26. ಆಗ ನಿಮಗೆ ತಿನ್ನಲು ಏನೂ ಕಡಿಮೆ ಇರುವುದಿಲ್ಲ. [QBR2] ನೀವು ಸಂತೃಪ್ತರಾಗುವಿರಿ. [QBR] ನಿಮ್ಮ ದೇವರಾದ ಯೆಹೋವನ ನಾಮವನ್ನು ಕೊಂಡಾಡುವಿರಿ. [QBR2] ಆತನು ನಿಮಗೆ ಆಶ್ಚರ್ಯವಾದ ಕಾರ್ಯವನ್ನು ಮಾಡಿದ್ದಾನೆ. [QBR] ನನ್ನ ಜನರು ಇನ್ನು ಮುಂದೆ ಎಂದೂ ನಾಚಿಕೆಗೆ ಗುರಿಯಾಗರು. [QBR]
27. ಇಸ್ರೇಲರೊಂದಿಗೆ ನಾನು ಇದ್ದೇನೆ ಎಂದು ನೀವು ತಿಳಿಯುವಿರಿ. [QBR2] ನಿಮ್ಮ ದೇವರಾದ ಯೆಹೋವನು ನಾನೇ ಎಂದು ನೀವು ತಿಳಿಯುವಿರಿ. [QBR2] ನನ್ನ ಹೊರತು ಬೇರೆ ದೇವರುಗಳಿಲ್ಲ. [QBR] ನನ್ನ ಜನರು ಇನ್ನು ಮುಂದೆ ನಾಚಿಕೆಗೆ ಗುರಿಯಾಗುವುದಿಲ್ಲ.”
28. {ದೇವರು ಎಲ್ಲಾ ಜನರ ಮೇಲೆ ತನ್ನ ಆತ್ಮವನ್ನು ಸುರಿಸುವನು} [PS] “ಆ ಬಳಿಕ ನಾನು [QBR2] ನನ್ನ ಆತ್ಮವನ್ನು ಎಲ್ಲಾ ತರದ ಜನರ ಮೇಲೆ ಸುರಿಸುವೆನು. [QBR] ನಿಮ್ಮ ಗಂಡುಹೆಣ್ಣು ಮಕ್ಕಳು ಪ್ರವಾದಿಸುವರು. [QBR2] ನಿಮ್ಮ ವೃದ್ಧರು ಕನಸು ಕಾಣುವರು. [QBR2] ನಿಮ್ಮ ಯುವಕರಿಗೆ ದರ್ಶನಗಳಾಗುವವು. [QBR]
29. ಆ ಸಮಯದಲ್ಲಿ ಸೇವಕಸೇವಕಿಯರ ಮೇಲೆಯೂ [QBR2] ನನ್ನ ಆತ್ಮವನ್ನು ಸುರಿಸುವೆನು. [QBR]
30. ಭೂಮ್ಯಾಕಾಶಗಳಲ್ಲಿ ವಿಚಿತ್ರ ಸಂಗತಿಗಳನ್ನು ನಾನು ತೋರಿಸುವೆನು. [QBR2] ಅಲ್ಲಿ ರಕ್ತ, ಬೆಂಕಿ ಮತ್ತು ದಟ್ಟವಾದ ಹೊಗೆಯು ಇರುವುದು. [QBR]
31. ಸೂರ್ಯನು ಕತ್ತಲಾಗುವನು, [QBR2] ಚಂದ್ರನು ರಕ್ತದಂತಾಗುವನು. [QBR2] ಆಗ ಯೆಹೋವನ ಭಯಂಕರ ದಿನವು ಬರುವುದು. [QBR]
32. ಆಗ ಯೆಹೋವನ ಹೆಸರನ್ನು ಹೇಳಿಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು. [QBR2] ಚೀಯೋನ್ ಪರ್ವತದಲ್ಲಿಯೂ ಜೆರುಸಲೇಮಿನಲ್ಲಿಯೂ ರಕ್ಷಿಸಲ್ಪಟ್ಟ ಜನರಿರುವರು. [QBR2] ಯೆಹೋವನು ಹೇಳಿದ ಪ್ರಕಾರವೇ ಇದು ಆಗುವುದು. [QBR] ಉಳಿದ ಜನರಲ್ಲಿ ಯೆಹೋವನು ಕರೆದಿರುವ [QBR2] ಜನರು ಸೇರಿಕೊಂಡಿರುವರು. [PE]