1. ಪಸ್ಕಹಬ್ಬಕ್ಕೆ ಇನ್ನೂ ಆರು ದಿನಗಳಿದ್ದಾಗ ಯೇಸು ಬೆಥಾನಿಗೆ ಹೋದನು. ಲಾಜರನು ವಾಸವಾಗಿದ್ದ ಊರೇ ಬೆಥಾನಿ. (ಯೇಸು ಸತ್ತವರೊಳಗಿಂದ ಎಬ್ಬಿಸಿದ ಮನುಷ್ಯನೇ ಲಾಜರನು.)
|
2. ಅವರು ಯೇಸುವಿಗೆ ರಾತ್ರಿಭೋಜನವನ್ನು ಏರ್ಪಡಿಸಿದ್ದರು. ಮಾರ್ಥಳು ಊಟವನ್ನು ಬಡಿಸುತ್ತಿದ್ದಳು. ಯೇಸುವಿನೊಂದಿಗೆ ಊಟ ಮಾಡುತ್ತಿದ್ದವರಲ್ಲಿ ಲಾಜರನೂ ಒಬ್ಬನಾಗಿದ್ದನು.
|
3. ಆಗ ಮರಿಯಳು, ಬಹು ಬೆಲೆಬಾಳುವ ಸುಗಂಧತೈಲವನ್ನು ಅರ್ಧ ಲೀಟರಿನಷ್ಟು ತೆಗೆದುಕೊಂಡು ಬಂದು, ಯೇಸುವಿನ ಪಾದಗಳಿಗೆ ಹಚ್ಚಿದಳು. ಬಳಿಕ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರೆಸಿದಳು. ಆ ಪರಿಮಳದ್ರವ್ಯದ ಸುವಾಸನೆಯು ಇಡೀ ಮನೆಯನ್ನೇ ತುಂಬಿಕೊಂಡಿತು.
|
4. ಇಸ್ಕರಿಯೋತ ಯೂದನು ಅಲ್ಲಿದ್ದನು. ಅವನು ಯೇಸುವಿನ ಶಿಷ್ಯರಲ್ಲಿ ಒಬ್ಬನಾಗಿದ್ದನು. (ಮುಂದೆ, ಯೇಸುವಿಗೆ ದ್ರೋಹ ಮಾಡಿದವನು ಇವನೇ.) ಮರಿಯಳು ಮಾಡಿದ ಈ ಕಾರ್ಯವನ್ನು ಯೂದನು ಇಷ್ಟಪಡಲಿಲ್ಲ.
|
5. ಅವನು, “ಆ ಪರಿಮಳದ ದ್ರವ್ಯದ ಬೆಲೆ ಮುನ್ನೂರು ಬೆಳ್ಳಿನಾಣ್ಯಗಳು. ಅದನ್ನು ಮಾರಿ ಆ ಹಣವನ್ನು ಬಡವರಿಗೆ ಕೊಡಬೇಕಿತ್ತು” ಎಂದು ಟೀಕಿಸಿದನು.
|
6. ಆದರೆ ಯೂದನಿಗೆ ಬಡವರ ಬಗ್ಗೆ ನಿಜವಾಗಿಯೂ ಚಿಂತೆಯಿರಲಿಲ್ಲ. ಅವನು ಕಳ್ಳನಾಗಿದ್ದುದರಿಂದ ಹಾಗೆ ಹೇಳಿದನು. ಶಿಷ್ಯಸಮುದಾಯಕ್ಕೋಸ್ಕರವಿದ್ದ ಹಣದ ಪೆಟ್ಟಿಗೆಯು ಅವನ ವಶದಲ್ಲಿತ್ತು. ಅವನು ಆಗಾಗ್ಗೆ ಆ ಪೆಟ್ಟಿಗೆಯಿಂದ ಹಣವನ್ನು ಕದ್ದುಕೊಳ್ಳುತ್ತಿದ್ದನು.
|
7. ಯೇಸು ಅವನಿಗೆ, “ಆಕೆಯನ್ನು ತಡೆಯಬೇಡ. ನನ್ನನ್ನು ಶವಸಂಸ್ಕಾರಕ್ಕೆ ಸಿದ್ಧಪಡಿಸುವ ಈ ದಿನಕ್ಕೋಸ್ಕರ ಆಕೆ ಸುಗಂಧ ದ್ರವ್ಯವನ್ನು ಶೇಖರಿಸಿದ್ದು ಒಳ್ಳೆಯದೇ ಸರಿ.
|
9. ಯೇಸು ಬೆಥಾನಿಯಲ್ಲಿದ್ದಾನೆ ಎಂಬ ಸುದ್ದಿಯನ್ನು ಅನೇಕ ಯೆಹೂದ್ಯರು ಕೇಳಿ ಆತನನ್ನೂ ಲಾಜರನನ್ನೂ ನೋಡಬೇಕೆಂದು ಅಲ್ಲಿಗೆ ಹೋದರು. ಯೇಸುವಿನಿಂದ ಜೀವಂತವಾಗಿ ಎಬ್ಬಿಸಲ್ಪಟ್ಟವನೇ ಲಾಜರನು.
|
11. ಲಾಜರನ ನಿಮಿತ್ತ ಅನೇಕ ಯೆಹೂದ್ಯರು ತಮ್ಮ ನಾಯಕರನ್ನು ತೊರೆದು ಯೇಸುವಿನಲ್ಲಿ ನಂಬಿಕೆ ಇಡುತ್ತಿದ್ದರು. ಆದಕಾರಣವೇ ಯೆಹೂದ್ಯ ನಾಯಕರು ಲಾಜರನನ್ನು ಸಹ ಕೊಲ್ಲಬೇಕೆಂದಿದ್ದರು.
|
12. ಮರುದಿನ, ಯೇಸು ಜೆರುಸಲೇಮಿಗೆ ಬರುತ್ತಿದ್ದಾನೆ ಎಂಬ ಸುದ್ದಿ ಅಲ್ಲಿಯ ಜನರಿಗೆ ತಿಳಿಯಿತು. ಪಸ್ಕಹಬ್ಬಕ್ಕಾಗಿ ಬಂದಿದ್ದ ಅನೇಕರು ಅಲ್ಲಿದ್ದರು.
|
13. ಜನರು ಖರ್ಜೂರದ ಗರಿಗಳನ್ನು ತೆಗೆದುಕೊಂಡು ಯೇಸುವನ್ನು ಎದುರುಗೊಳ್ಳಲು ಹೋದರು. “ಆತನಿಗೆ ಸ್ತೋತ್ರವಾಗಲಿ! ಪ್ರಭುವಿನ ಹೆಸರಿನಲ್ಲಿ ಬರುವಾತನಿಗೆ ದೇವರಾಶೀರ್ವಾದವಾಗಲಿ! ಇಸ್ರೇಲ್ ರಾಜನಿಗೆ ದೇವರಾಶೀರ್ವಾದವಾಗಲಿ!” ಕೀರ್ತನೆ 118:25-26 ಎಂದು ಜನರು ಕೂಗಿದರು.
|
14. ಯೇಸು ಅಲ್ಲಿದ್ದ ಕತ್ತೆಯೊಂದನ್ನು ಕಂಡು, ಅದರ ಮೇಲೆ ಕುಳಿತುಕೊಂಡು ಹೊರಟನು. ಪವಿತ್ರ ಗ್ರಂಥ ಹೇಳುವಂತೆಯೇ ಇದು ನೆರವೇರಿತು:
|
15. ”ಸಿಯೋನ್ ನಗರವೇ, ಭಯಪಡಬೇಡ! ನೋಡು! ನಿನ್ನ ರಾಜನು ಬರುತ್ತಿದ್ದಾನೆ. ಆತನು ಪ್ರಾಯದ ಕತ್ತೆಯ ಮೇಲೆ ಕುಳಿತುಕೊಂಡು ಬರುತ್ತಿದ್ದಾನೆ.” ಜಕರ್ಯ 9:9
|
16. ಯೇಸುವಿನ ಶಿಷ್ಯರು ಆ ಸಮಯದಲ್ಲಿ ಇದನ್ನು ಅರ್ಥಮಾಡಿಕೊಳ್ಳಲಿಲ್ಲ. ಆದರೆ ಯೇಸು ಮಹಿಮಾಪದವಿಗೆ ಏರಿಹೋದ ನಂತರ, ಈ ಸಂಗತಿಗಳು ಆತನ ವಿಷಯವಾಗಿ ಬರೆಯಲ್ಪಟ್ಟಿವೆ ಎಂಬುದನ್ನು ಶಿಷ್ಯರು ಅರ್ಥಮಾಡಿಕೊಂಡರು; ಮತ್ತು ತಾವು ಆತನಿಗಾಗಿ ಮಾಡಿದ ಕಾರ್ಯಗಳನ್ನು ಜ್ಞಾಪಿಸಿಕೊಂಡರು.
|
17. ಯೇಸು ಲಾಜರನಿಗೆ ಸಮಾಧಿಯೊಳಗಿಂದ ಬರುವಂತೆ ಹೇಳಿ ಅವನನ್ನು ಜೀವಂತವಾಗಿ ಎಬ್ಬಿಸಿದಾಗ ಅನೇಕ ಜನರು ಯೇಸುವಿನ ಸಂಗಡ ಇದ್ದರು. ಯೇಸು ಮಾಡಿದ ಈ ಕಾರ್ಯದ ಬಗ್ಗೆ ಅವರು ಇತರರಿಗೆ ಹೇಳುತ್ತಿದ್ದರು.
|
19. ಆದ್ದರಿಂದ ಫರಿಸಾಯರು, “ನೋಡಿ! ನಮ್ಮ ಯೋಜನೆಯು ನಿಷ್ಪ್ರಯೋಜಕವಾಯಿತು. ಜನರು ಆತನನ್ನೇ ಹಿಂಬಾಲಿಸುತ್ತಿದ್ದಾರೆ!” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.
|
20. ಅಲ್ಲಿ ಗ್ರೀಕ್ ಜನರು ಸಹ ಇದ್ದರು. ಪಸ್ಕಹಬ್ಬದಲ್ಲಿ ಆರಾಧಿಸುವುದಕ್ಕಾಗಿ ಜೆರುಸಲೇಮಿಗೆ ಹೋಗಿದ್ದವರಲ್ಲಿ ಇವರೂ ಸೇರಿದ್ದರು.
|
21. ಈ ಗ್ರೀಕ್ ಜನರು ಫಿಲಿಪ್ಪನ ಬಳಿಗೆ ಹೋದರು. (ಫಿಲಿಪ್ಪನು ಗಲಿಲಾಯದ ಬೆತ್ಸಾಯಿ ಎಂಬ ಊರಿನವನಾಗಿದ್ದವನು.) ಅವರು, “ಸ್ವಾಮೀ, ನಾವು ಯೇಸುವನ್ನು ನೋಡಬೇಕು” ಎಂದು ಅವನನ್ನು ಕೇಳಿಕೊಂಡರು.
|
22. ಫಿಲಿಪ್ಪನು ಅಂದ್ರೆಯನ ಬಳಿಗೆ ಹೋಗಿ ಈ ವಿಷಯವನ್ನು ತಿಳಿಸಿದನು. ಬಳಿಕ ಅಂದ್ರೆಯನು ಮತ್ತು ಫಿಲಿಪ್ಪನು ಒಟ್ಟಾಗಿ ಯೇಸುವಿನ ಬಳಿಗೆ ಹೋಗಿ ಈ ವಿಷಯವನ್ನು ತಿಳಿಸಿದರು.
|
24. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಗೋಧಿಯ ಕಾಳು ಭೂಮಿಗೆ ಬಿದ್ದು ಸಾಯಲೇಬೇಕು. ಬಳಿಕ ಅದು ಬೆಳೆದು ಅನೇಕ ಕಾಳುಗಳನ್ನು ಫಲಿಸುವುದು. ಸಾಯದಿದ್ದರೆ, ಅದು ಯಾವಾಗಲೂ ಕೇವಲ ಒಂದೇ ಕಾಳಾಗಿರುವುದು.
|
25. ತನ್ನ ಸ್ವಂತ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಆದರೆ ಈ ಲೋಕದಲ್ಲಿ ತನ್ನ ಪ್ರಾಣವನ್ನು ದ್ವೇಷಿಸುವವನು ಅದನ್ನು ಉಳಿಸಿಕೊಳ್ಳುವನು. ಅವನು ನಿತ್ಯಜೀವವನ್ನು ಹೊಂದುವನು.
|
26. ನನ್ನ ಸೇವೆ ಮಾಡುವವನು ನನ್ನನ್ನು ಹಿಂಬಾಲಿಸಬೇಕು. ಆಗ ನಾನು ಇರುವಲ್ಲೆಲ್ಲಾ ನನ್ನ ಸೇವಕನು ಇರುವನು. ನನ್ನ ಸೇವೆಮಾಡುವ ಜನರನ್ನು ನನ್ನ ತಂದೆಯು ಸನ್ಮಾನಿಸುವನು” ಎಂದು ಹೇಳಿದನು.
|
27. ಯೇಸು ಮಾತನ್ನು ಮುಂದುವರಿಸಿ, “ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ತಂದೆಯೇ, ನನ್ನನ್ನು ಈ ಸಂಕಟ ಕಾಲದಿಂದ ರಕ್ಷಿಸು ಎನ್ನಬೇಕೇ?؆ ಇಲ್ಲ! ಸಂಕಟಪಡುವುದಕ್ಕೋಸ್ಕರವೇ ನಾನು ಬಂದಿದ್ದೇನೆ.
|
28. ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೊ!” ಎಂದು ಹೇಳಿದನು. ಆಗ ಪರಲೋಕದಿಂದ, “ನನ್ನ ಹೆಸರನ್ನು ಮಹಿಮೆಪಡಿಸಿಕೊಂಡಿದ್ದೇನೆ. ನಾನು ಮತ್ತೆ ಮಹಿಮೆಪಡಿಸಿಕೊಳ್ಳುವೆನು” ಎಂಬ ವಾಣಿ ಆಯಿತು.
|
29. ಅಲ್ಲಿ ನಿಂತಿದ್ದ ಜನರು ಈ ವಾಣಿಯನ್ನು ಕೇಳಿ “ಅದು ಗುಡುಗು” ಎಂದರು. ಆದರೆ ಇತರರು, “ದೇವದೂತನೊಬ್ಬನು ಯೇಸುವಿನೊಂದಿಗೆ ಮಾತಾಡಿದನು!” ಎಂದರು.
|
32. ನಾನು ಭೂಮಿಯಿಂದ ಮೇಲೆತ್ತಲ್ಪಡುವೆನು. ಆಗ ನಾನು ಎಲ್ಲಾ ಜನರನ್ನು ನನ್ನ ಬಳಿಗೆ ಸೆಳೆದುಕೊಳ್ಳುವೆನು” ಎಂದು ಹೇಳಿದನು.
|
34. ಜನರು, “ಕ್ರಿಸ್ತನು ಸದಾಕಾಲ ಜೀವಿಸುತ್ತಾನೆ ಎಂದು ನಮ್ಮ ಧರ್ಮಶಾಸ್ತ್ರವು ಹೇಳುತ್ತದೆ. ಹೀಗಿರಲಾಗಿ, ಮನುಷ್ಯಕುಮಾರನು ಮೇಲೆತ್ತಲ್ಪಡುವನು؆ ಎಂದು ನೀನು ಹೇಳುವುದೇಕೆ? ಈ ಮನುಷ್ಯಕುಮಾರನು ಯಾರು?” ಎಂದು ಕೇಳಿದರು.
|
35. ಅದಕ್ಕೆ ಯೇಸು, “ಇನ್ನು ಸ್ವಲ್ಪಕಾಲ ಮಾತ್ರ ಬೆಳಕು ನಿಮ್ಮೊಂದಿಗಿರುತ್ತದೆ. ಆದ್ದರಿಂದ ಬೆಳಕು ನಿಮ್ಮೊಂದಿಗೆ ಇರುವಾಗಲೇ ನಡೆಯಿರಿ. ಆಗ ಕತ್ತಲೆಯು (ಪಾಪ) ನಿಮ್ಮನ್ನು ಕವಿದುಕೊಳ್ಳುವುದಿಲ್ಲ. ಕತ್ತಲೆಯಲ್ಲಿ ನಡೆಯುವವನಿಗೆ ತಾನು ಎಲ್ಲಿಗೆ ಹೋಗುತ್ತಿದ್ದೇನೆಂಬುದು ತಿಳಿಯದು.
|
36. ಆದ್ದರಿಂದ ನೀವು ಬೆಳಕನ್ನು ಇನ್ನೂ ಹೊಂದಿರುವಾಗಲೇ ಅದರಲ್ಲಿ ನಂಬಿಕೆ ಇಡಿರಿ. ಆಗ ನೀವು ಬೆಳಕಿನವರಾಗುವಿರಿ” ಎಂದು ಹೇಳಿದನು. ಈ ಸಂಗತಿಗಳನ್ನು ಹೇಳಿದ ಮೇಲೆ ಯೇಸು ಅಲ್ಲಿಂದ ಹೊರಟು, ತನ್ನನ್ನು ಜನರು ಕಂಡುಕೊಳ್ಳಲಾಗದ ಸ್ಥಳಕ್ಕೆ ಹೋದನು.
|
38. ಇದರಿಂದಾಗಿ, ಪ್ರವಾದಿಯಾದ ಯೆಶಾಯನು ಹೇಳಿದ್ದ ಮಾತುಗಳು ನೆರವೇರಿದವು. ಅದೇನೆಂದರೆ: “ಪ್ರಭುವೇ, ನಾವು ಹೇಳಿದ ಸಂಗತಿಗಳನ್ನು ಯಾರು ನಂಬಿದರು? ಪ್ರಭುವಿನ ಬಾಹುಬಲವು ಯಾರಿಗೆ ಗೋಚರವಾಯಿತು?” ಯೆಶಾಯ 53:1
|
40. ”ತಮ್ಮ ಕಣ್ಣುಗಳಿಂದ ಕಾಣದಂತೆ ತಮ್ಮ ಮನಸ್ಸುಗಳಿಂದ ಅರ್ಥಮಾಡಿಕೊಳ್ಳದಂತೆ ಪರಿವರ್ತನೆಗೊಂಡು ಗುಣಹೊಂದದಂತೆ ಆತನು ಅವರನ್ನು ಕುರುಡರನ್ನಾಗಿ ಮಾಡಿದ್ದಾನೆ, ಅವರ ಮನಸ್ಸುಗಳನ್ನು ಕಲ್ಲಾಗಿಸಿದ್ದಾನೆ.” ಯೆಶಾಯ 6:10
|
42. ಆದರೆ ಅನೇಕ ಜನರು ಯೇಸುವಿನಲ್ಲಿ ನಂಬಿಕೆ ಇಟ್ಟರು. ಅನೇಕ ಯೆಹೂದ್ಯನಾಯಕರು ಸಹ ಯೇಸುವಿನಲ್ಲಿ ನಂಬಿಕೆಯಿಟ್ಟರು. ಆದರೆ ಅವರು ಫರಿಸಾಯರಿಗೆ ಹೆದರಿಕೊಂಡು ತಮ್ಮ ನಂಬಿಕೆಯನ್ನು ಬಹಿರಂಗಪಡಿಸಲಿಲ್ಲ. ತಮ್ಮನ್ನು ಫರಿಸಾಯರು ಸಭಾಮಂದಿರದಿಂದ ಬಹಿಷ್ಕರಿಸುತ್ತಾರೆ ಎಂಬ ಭಯ ಅವರಿಗಿತ್ತು.
|
44. ಬಳಿಕ ಯೇಸು ಗಟ್ಟಿಯಾಗಿ ಇಂತೆಂದನು: “ನನ್ನಲ್ಲಿ ನಂಬಿಕೆ ಇಡುವವನು ನನ್ನನ್ನು ಕಳುಹಿಸಿದಾತನಲ್ಲಿ (ದೇವರು) ನಿಜವಾಗಿಯೂ ನಂಬಿಕೆ ಇಡುವವನಾಗಿದ್ದಾನೆ.
|
47. ”ನಾನು ಈ ಲೋಕಕ್ಕೆ ಬಂದದ್ದು ಜನರಿಗೆ ತೀರ್ಪು ಮಾಡುವುದಕ್ಕಾಗಿಯಲ್ಲ. ಈ ಲೋಕದಲ್ಲಿರುವ ಜನರನ್ನು ರಕ್ಷಿಸುವುದಕ್ಕಾಗಿ ನಾನು ಬಂದೆನು. ಆದ್ದರಿಂದ ನನ್ನ ಮಾತುಗಳನ್ನು ಕೇಳಿಯೂ ನಂಬದಿರುವ ಜನರಿಗೆ ತೀರ್ಪು ಮಾಡುವವನು ನಾನಲ್ಲ.
|
48. ನನ್ನಲ್ಲಿ ನಂಬಿಕೆ ಇಡದಿರುವವನಿಗೆ ಮತ್ತು ನಾನು ಹೇಳುವುದನ್ನು ತಿರಸ್ಕರಿಸುವವನಿಗೆ ತೀರ್ಪುಮಾಡುವಂಥದ್ದು ನಾನು ಆಡಿದ ಮಾತುಗಳೇ. ಅಂತಿಮ ದಿನದಂದು ಅವೇ ಅವನಿಗೆ ತೀರ್ಪುಮಾಡುತ್ತವೆ.
|
49. ಏಕೆಂದರೆ, ನನ್ನ ಮಾತುಗಳು ನನ್ನಿಂದ ಬಂದವುಗಳಲ್ಲ. ನನ್ನನ್ನು ಕಳುಹಿಸಿದ ತಂದೆಯೇ ನಾನು ಏನು ಹೇಳಬೇಕು, ಏನು ಮಾತಾಡಬೇಕು ಎಂದು ನನಗೆ ಹೇಳಿಕೊಟ್ಟಿದ್ದಾನೆ.
|
50. ತಂದೆಯ ಆಜ್ಞೆಯು ನಿತ್ಯಜೀವಕ್ಕೆ ನಡೆಸುತ್ತದೆ ಎಂದು ನಾನು ಬಲ್ಲೆನು. ಆದ್ದರಿಂದ ತಂದೆಯು ನನಗೆ ಹೇಳಿಕೊಟ್ಟ ಸಂಗತಿಗಳನ್ನೇ ನಾನು ತಿಳಿಸುತ್ತೇನೆ.”
|