2. ಜೆರುಸಲೇಮಿನಲ್ಲಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಯೆಹೂದ್ಯರ ಭಾಷೆಯಲ್ಲಿ ಅದಕ್ಕೆ ಬೆತ್ಸಥ؆ ಎಂದು ಕರೆಯುತ್ತಾರೆ. ಈ ಕೊಳವು ಕುರಿಬಾಗಿಲು؆ ಎಂಬ ಸ್ಥಳದ ಸಮೀಪದಲ್ಲಿದೆ.
|
3. ಕೊಳದ ಬಳಿಯಲ್ಲಿದ್ದ ಮಂಟಪಗಳಲ್ಲಿ ಅನೇಕ ರೋಗಿಗಳು ಬಿದ್ದುಕೊಂಡಿರುತ್ತಿದ್ದರು. ಅವರಲ್ಲಿ ಕೆಲವರು ಕುರಡರಾಗಿದ್ದರು, ಕೆಲವರು ಕುಂಟರಾಗಿದ್ದರು, ಮತ್ತೆ ಕೆಲವರು, ಪಾರ್ಶ್ವವಾಯು ರೋಗಿಗಳಾಗಿದ್ದರು.
|
6. ಯೇಸು ಅವನನ್ನು ನೋಡಿದನು. ಅವನು ಬಹುಕಾಲದಿಂದ ರೋಗಿಯಾಗಿರುವುದು ಆತನಿಗೆ ಗೊತ್ತಿತ್ತು. ಆದ್ದರಿಂದ ಆತನು ಅವನಿಗೆ, “ಗುಣಹೊಂದಲು ನಿನಗೆ ಅಪೇಕ್ಷೆ ಇದೆಯಾ?” ಎಂದು ಕೇಳಿದನು.
|
7. ಆ ರೋಗಿಯು, “ಅಯ್ಯಾ, ನೀರು ಉಕ್ಕುವಾಗ ಕೊಳದೊಳಗೆ ಇಳಿದುಹೋಗಲು ನನಗೆ ಯಾರೂ ಸಹಾಯ ಮಾಡುವುದಿಲ್ಲ. ನಾನು ಎಲ್ಲರಿಗಿಂತ ಮೊದಲೇ ನೀರಿಗೆ ಇಳಿಯಲು ಪ್ರಯತ್ನಿಸುವೆ. ಆದರೆ ಪ್ರತಿಸಲವೂ ನನಗಿಂತ ಮೊದಲೇ ಮತ್ತೊಬ್ಬನು ಇಳಿದುಬಿಡುತ್ತಾನೆ” ಎಂದು ಹೇಳಿದನು.
|
9. ಆ ಕ್ಷಣವೇ ಆ ಮನುಷ್ಯನು ಗುಣಹೊಂದಿ, ತನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆದನು. ಇದೆಲ್ಲಾ ನಡೆದದ್ದು ಸಬ್ಬತ್ದಿನದಲ್ಲಿ.
|
10. ಆದ್ದರಿಂದ ಯೆಹೂದ್ಯರು ಗುಣಹೊಂದಿದ ಆ ವ್ಯಕ್ತಿಗೆ, “ಇಂದು ಸಬ್ಬತ್ದಿನ. ನೀನು ಸಬ್ಬತ್ದಿನದಲ್ಲಿ ಹಾಸಿಗೆಯನ್ನು ಹೊತ್ತುಕೊಂಡು ಹೋಗುವುದು ನಮ್ಮ ಧರ್ಮಶಾಸ್ತ್ರಕ್ಕೆ ವಿರುದ್ಧವಾದದ್ದು” ಎಂದರು.
|
11. ಅದಕ್ಕೆ ಅವನು, “ನನ್ನನ್ನು ಗುಣಪಡಿಸಿದವನೇ, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ؆ ಎಂದು ಹೇಳಿದನು” ಎಂಬುದಾಗಿ ಉತ್ತರಿಸಿದನು.
|
13. ಆದರೆ ಗುಣಹೊಂದಿದ್ದ ವ್ಯಕ್ತಿಗೆ ತನ್ನನ್ನು ಗುಣಪಡಿಸಿದವನು ಯಾರೆಂಬುದು ಗೊತ್ತಿರಲಿಲ್ಲ. ಆ ಸ್ಥಳದಲ್ಲಿ ಅನೇಕ ಜನರಿದ್ದರು. ಯೇಸು ಆ ಸ್ಥಳದಿಂದ ನುಸುಳಿಕೊಂಡು ಹೊರಟು ಹೋದನು.
|
14. ಅನಂತರ ಯೇಸು ಆ ಮನುಷ್ಯನನ್ನು ದೇವಾಲಯದಲ್ಲಿ ಕಂಡು ಅವನಿಗೆ, “ನೋಡು, ಈಗ ನೀನು ಗುಣಹೊಂದಿರುವೆ. ಆದರೆ ಪಾಪ ಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ಹೆಚ್ಚಿನ ಕೇಡು ನಿನಗೆ ಸಂಭವಿಸಬಹುದು!” ಎಂದು ಹೇಳಿದನು.
|
16. ಯೇಸು ಈ ಕಾರ್ಯಗಳನ್ನು ಸಬ್ಬತ್ದಿನದಲ್ಲಿ ಮಾಡುತ್ತಿದ್ದನು. ಈ ಕಾರಣದಿಂದಾಗಿ ಯೆಹೂದ್ಯರು ಯೇಸುವನ್ನು ಹಿಂಸಿಸತೊಡಗಿದರು.
|
17. ಆದರೆ ಯೇಸು ಅವರಿಗೆ, “ನನ್ನ ತಂದೆಯು ತನ್ನ ಕಾರ್ಯವನ್ನು ಎಂದಿಗೂ ನಿಲ್ಲಿಸುವುದಿಲ್ಲ. ಆದ್ದರಿಂದ ನಾನು ಸಹ ಕಾರ್ಯನಿರತನಾಗಿದ್ದೇನೆ” ಎಂದು ತನ್ನನ್ನು ಪ್ರತಿಪಾದಿಸಿಕೊಂಡನು.
|
18. ಯೇಸು ಸಬ್ಬತ್ತನ್ನು ಉಲ್ಲಂಘಿಸಿದ್ದಲ್ಲದೆ ದೇವರನ್ನು ತನ್ನ ತಂದೆಯೆಂದು ಹೇಳಿಕೊಂಡು ತನ್ನನ್ನು ದೇವರಿಗೆ ಸರಿಸಮಾನನನ್ನಾಗಿ ಮಾಡಿಕೊಳ್ಳುತ್ತಿದ್ದಾನೆಂದು ಯೆಹೂದ್ಯರು ಆತನನ್ನು ಕೊಲ್ಲಲು ಮತ್ತಷ್ಟು ಪ್ರಯತ್ನಿಸಿದರು.
|
19. ಅದಕ್ಕೆ ಉತ್ತರವಾಗಿ ಆತನು ಇಂತೆಂದನು: “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಮಗನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು; ತಂದೆಯು ಮಾಡುವುದನ್ನು ಕಂಡು ತಾನೂ ಹಾಗೆಯೇ ಮಾಡುತ್ತಾನೆ. ತಂದೆಯು ಮಾಡುವ ಕಾರ್ಯಗಳನ್ನೇ ಮಗನೂ ಮಾಡುತ್ತಾನೆ.
|
20. ತಂದೆಯು ಮಗನನ್ನು ಪ್ರೀತಿಸುವನು ಮತ್ತು ತಾನು ಮಾಡುವ ಎಲ್ಲಾ ಕಾರ್ಯಗಳನ್ನು ಮಗನಿಗೆ ತೋರಿಸುವನು. ಆದರೆ ಇದಕ್ಕಿಂತಲೂ ಹೆಚ್ಚಿನ ಕಾರ್ಯಗಳನ್ನು ತಂದೆಯು ಮಗನಿಗೆ ತೋರಿಸುವನು. ಆಗ ನೀವೆಲ್ಲರೂ ಆಶ್ಚರ್ಯಚಕಿತರಾಗುವಿರಿ.
|
21. ತಂದೆಯು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವಕೊಡುತ್ತಾನೆ. ಅದೇ ರೀತಿಯಲ್ಲಿ ಮಗನು ತಾನು ಬಯಸಿದವರಿಗೆ ಜೀವವನ್ನು ಕೊಡುತ್ತಾನೆ.
|
22. ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವುದಿಲ್ಲ. ಆದರೆ ತಂದೆಯು ತೀರ್ಪು ಮಾಡುವ ಅಧಿಕಾರವನ್ನೆಲ್ಲಾ ಮಗನಿಗೆ ಕೊಟ್ಟಿದ್ದಾನೆ.
|
23. ಜನರು ತಂದೆಯನ್ನು ಗೌರವಿಸುವಂತೆ ಮಗನನ್ನು ಗೌರವಿಸಬೇಕೆಂದು ದೇವರು ಹೀಗೆ ಮಾಡಿದನು. ಮಗನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿರುವ ತಂದೆಯನ್ನೂ ಸನ್ಮಾನಿಸದವನಾಗಿದ್ದಾನೆ.
|
24. ”ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನ ಮಾತನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನಿಗೆ ಅಪರಾಧಿಯೆಂಬ ತೀರ್ಪಾಗುವುದಿಲ್ಲ. ಅವನು ಈಗಾಗಲೇ ಮರಣವನ್ನು ದಾಟಿ ಜೀವಕ್ಕೆ ಪ್ರವೇಶಿಸಿದ್ದಾನೆ.
|
25. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸತ್ತುಹೋದವರು ದೇವರ ಮಗನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಅದು ಈಗಲೇ ಬಂದಿದೆ. ಕೇಳಿ ಸ್ವೀಕರಿಸಿಕೊಳ್ಳುವವರು ಜೀವವನ್ನು ಹೊಂದುವರು.
|
27. ಮತ್ತು ಎಲ್ಲಾ ಜನರಿಗೆ ತೀರ್ಪುಮಾಡುವ ಅಧಿಕಾರವನ್ನು ತಂದೆಯು ಮಗನಿಗೂ ಕೊಟ್ಟಿದ್ದಾನೆ. ಏಕೆಂದರೆ ಆ ಮಗನು ಮನುಷ್ಯಕುಮಾರನಾಗಿದ್ದಾನೆ.
|
29. ಆಗ ಅವರು ತಮ್ಮ ಸಮಾಧಿಗಳಿಂದ ಎದ್ದುಬರುವರು. ಜೀವನದಲ್ಲಿ ಒಳ್ಳೆಯದನ್ನು ಮಾಡಿದ ಜನರು ಪುನರುತ್ಥಾನಗೊಂಡು ನಿತ್ಯಜೀವವನ್ನು ಹೊಂದಿಕೊಳ್ಳುವರು. ಆದರೆ ಕೆಟ್ಟದ್ದನ್ನು ಮಾಡಿದವರಿಗೆ ತೀರ್ಪಿಗಾಗಿ ಪುನರುತ್ಥಾನವಾಗುವುದು.
|
30. ”ನಾನು ಒಬ್ಬಂಟಿಗನಾಗಿ ಏನೂ ಮಾಡಲಾರೆನು. ನಾನು ಕೇಳಿದ್ದಕ್ಕನುಸಾರವಾಗಿ ತೀರ್ಪು ಮಾಡುತ್ತೇನೆ. ಆದ್ದರಿಂದ ನನ್ನ ತೀರ್ಪುಸರಿಯಾದದ್ದು. ಏಕೆಂದರೆ, ನಾನು ನನ್ನನ್ನು ಮೆಚ್ಚಿಸಲು ಪ್ರಯತ್ನಿಸದೆ ನನ್ನ ತಂದೆಯನ್ನು ಮೆಚ್ಚಿಸಲು ಪ್ರಯತ್ನಿಸುತ್ತೇನೆ.
|
32. ಆದರೆ ನನ್ನ ವಿಷಯವಾಗಿ ಜನರಿಗೆ ಹೇಳುವ ಮತ್ತೊಬ್ಬ ವ್ಯಕ್ತಿಯಿದ್ದಾನೆ. ನನ್ನ ಬಗ್ಗೆ ಅವನು ಹೇಳುವ ಸಂಗತಿಗಳು ಸತ್ಯವಾಗಿವೆಯೆಂದು ನನಗೆ ಗೊತ್ತಿದೆ.
|
34. ಆದರೆ ನನ್ನ ಬಗ್ಗೆ ಜನರಿಗೆ ತಿಳಿಸುವುದಕ್ಕಾಗಿ ನನಗೆ ಮನುಷ್ಯನೊಬ್ಬನ ಅಗತ್ಯವಿಲ್ಲ. ಆದರೆ ನಿಮಗೆ ರಕ್ಷಣೆಯಾಗಬೇಕೆಂದು ನಾನು ಈ ಸಂಗತಿಗಳನ್ನು ಹೇಳುತ್ತಿದ್ದೇನೆ.
|
35. ಯೋಹಾನನು ಉರಿಯುವ ದೀಪದಂತೆ ಬೆಳಕನ್ನು ಕೊಟ್ಟನು, ಮತ್ತು ನೀವು ಅವನ ಬೆಳಕನ್ನು ಸ್ವಲ್ಪಕಾಲ ಸಂತೋಷದಿಂದ ಅನುಭವಿಸಿದಿರಿ.
|
36. ”ಆದರೆ ನನ್ನ ಬಗ್ಗೆ ನನ್ನಲ್ಲಿ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿಗಳಿವೆ. ನಾನು ಮಾಡುವ ಕಾರ್ಯಗಳೇ ನನ್ನ ಸಾಕ್ಷಿಗಳಾಗಿವೆ. ತಂದೆಯು ನನಗೆ ಕೊಟ್ಟಿರುವ ಈ ಕಾರ್ಯಗಳೇ, ತಂದೆಯು ನನ್ನನ್ನು ಕಳುಹಿಸಿ ಕೊಟ್ಟಿದ್ದಾನೆ ಎಂಬುದನ್ನು ತೋರಿಸುತ್ತವೆ.
|
37. ಅಲ್ಲದೆ ನನ್ನನ್ನು ಕಳುಹಿಸಿದ ತಂದೆಯು ನನ್ನ ಬಗ್ಗೆ ತಾನೇ ಸಾಕ್ಷಿ ಕೊಟ್ಟಿದ್ದಾನೆ. ಆದರೆ ನೀವು ಆತನ ಧ್ವನಿಯನ್ನು ಎಂದೂ ಕೇಳಿಲ್ಲ. ಆತನು ಹೇಗಿದ್ದಾನೆ ಎಂಬುದನ್ನು ನೀವು ಎಂದೂ ಕಂಡಿಲ್ಲ.
|
39. ”ನೀವು ಪವಿತ್ರ ಗ್ರಂಥವನ್ನು ಜಾಗ್ರತೆಯಿಂದ ಅಧ್ಯಯನ ಮಾಡುತ್ತೀರಿ. ಆ ಪವಿತ್ರ ಗ್ರಂಥವು ನಿಮಗೆ ನಿತ್ಯಜೀವವನ್ನು ಕೊಡುತ್ತದೆ ಎಂಬುದು ನಿಮ್ಮ ಆಲೋಚನೆ. ಅದೇ ಪವಿತ್ರ ಗ್ರಂಥವು ನನ್ನ ಬಗ್ಗೆ ತಿಳಿಸುತ್ತದೆ!
|
43. ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ. ನಾನು ಆತನಿಗೋಸ್ಕರ ಮಾತಾಡುತ್ತೇನೆ. ಆದರೆ ನೀವು ನನ್ನನ್ನು ಸ್ವೀಕರಿಸಿಕೊಳ್ಳುವುದಿಲ್ಲ. ಮತ್ತೊಬ್ಬನು ಬಂದು ತನಗೋಸ್ಕರವಾಗಿ ಮಾತಾಡಿದರೆ ನೀವು ಅವನನ್ನು ಸ್ವೀಕರಿಸಿಕೊಳ್ಳುತ್ತೀರಿ.
|
44. ನೀವು ಪರಸ್ಪರ ಸನ್ಮಾನವನ್ನು ಬಯಸುತ್ತೀರಿ. ಆದರೆ ಒಬ್ಬನೇ ದೇವರಿಂದ ಬರುವ ಸನ್ಮಾನವನ್ನು ಪಡೆದುಕೊಳ್ಳಲು ನೀವೆಂದೂ ಪ್ರಯತ್ನಿಸುವುದಿಲ್ಲ. ಹೀಗಿರಲು ನೀವು ಹೇಗೆ ನಂಬಬಲ್ಲಿರಿ?
|
45. ನಾನು ತಂದೆಯ ಮುಂದೆ ನಿಂತುಕೊಂಡು ನಿಮ್ಮನ್ನು ತಪ್ಪಿತಸ್ಥರೆಂಬುದಾಗಿ ಹೇಳುತ್ತೇನೆಂದು ಯೋಚಿಸಬೇಡಿರಿ. ನಿಮ್ಮನ್ನು ರಕ್ಷಿಸುತ್ತಾನೆಂದು ನೀವು ನಿರೀಕ್ಷಿಸಿಕೊಂಡಿರುವ ಮೋಶೆಯೇ ನಿಮ್ಮ ಮೇಲೆ ದೂರು ಹೇಳುವನು.
|
46. ನೀವು ಮೋಶೆಯನ್ನು ನಿಜವಾಗಿಯೂ ನಂಬಿದ್ದರೆ, ನನ್ನನ್ನೂ ನಂಬುತ್ತಿದ್ದಿರಿ. ಯಾಕೆಂದರೆ ಅವನು ನನ್ನ ವಿಷಯವಾಗಿ ಬರೆದಿದ್ದಾನೆ.
|