2. ಅನೇಕ ಜನರು ಯೇಸುವನ್ನು ಹಿಂಬಾಲಿಸಿದರು. ಏಕೆಂದರೆ ಯೇಸು ರೋಗಿಗಳನ್ನು ಗುಣಪಡಿಸುವುದರ ಮೂಲಕ ತನ್ನ ಅಧಿಕಾರವನ್ನು ತೋರಿಸಿದ್ದನು. ಅವರೆಲ್ಲರೂ ಅದನ್ನು ನೋಡಿದ್ದರು.
|
5. ಯೇಸು ಕಣ್ಣೆತ್ತಿ ನೋಡಿದಾಗ, ತನ್ನ ಬಳಿಗೆ ಬರುತ್ತಿದ್ದ ಜನಸಮೂಹವನ್ನು ಕಂಡು ಫಿಲಿಪ್ಪನಿಗೆ, “ಈ ಜನರಿಗೆಲ್ಲಾ ಸಾಕಾಗುವಷ್ಟು ರೊಟ್ಟಿಯನ್ನು ನಾವು ಎಲ್ಲಿ ಕೊಂಡುಕೊಳ್ಳೋಣ?” ಎಂದು ಕೇಳಿದನು.
|
6. (ಫಿಲಿಪ್ಪನನ್ನು ಪರೀಕ್ಷಿಸುವುದಕ್ಕಾಗಿ ಆತನು ಈ ಪ್ರಶ್ನೆಯನ್ನು ಕೇಳಿದನು. ತಾನು ಮಾಡಲಿದ್ದ ಕಾರ್ಯ ಯೇಸುವಿಗೆ ಮೊದಲೇ ತಿಳಿದಿತ್ತು.)
|
7. ಫಿಲಿಪ್ಪನು, “ಇಲ್ಲಿರುವ ಪ್ರತಿಯೊಬ್ಬರಿಗೆ ರೊಟ್ಟಿಯ ಒಂದು ತುಂಡನ್ನು ಕೊಡಬೇಕಾದರೆ, ಇನ್ನೂರು ದಿನಾರಿ ನಾಣ್ಯಗಳಾದರೂ ಬೇಕು” ಎಂದು ಉತ್ತರಕೊಟ್ಟನು.
|
9. ಅಂದ್ರೆಯನು, “ಇಲ್ಲಿರುವ ಒಬ್ಬ ಹುಡಗನ ಬಳಿ ಜವೆಗೋದಿಯ ಐದು ರೊಟ್ಟಿಗಳಿವೆ ಮತ್ತು ಎರಡು ಚಿಕ್ಕ ಮೀನುಗಳಿವೆ. ಆದರೆ ಅವು ಈ ಜನಸಮೂಹಕ್ಕೆ ಸಾಕಾಗುವುದಿಲ್ಲ” ಎಂದು ಹೇಳಿದನು.
|
10. ಯೇಸು, “ಜನರಿಗೆ ಕುಳಿತುಕೊಳ್ಳಲು ಹೇಳಿರಿ” ಎಂದು ತಿಳಿಸಿದನು. ಆ ಸ್ಥಳದಲ್ಲಿ ಹುಲ್ಲು ಹುಲುಸಾಗಿ ಬೆಳೆದಿತ್ತು. ಅಲ್ಲಿ ಕುಳಿತುಕೊಂಡವರಲ್ಲಿ ಸುಮಾರು ಐದುಸಾವಿರ ಮಂದಿ ಗಂಡಸರಿದ್ದರು.
|
11. ಬಳಿಕ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ಅವುಗಳಿಗಾಗಿ ದೇವರಿಗೆ ಸ್ತೋತ್ರಸಲ್ಲಿಸಿ, ಕುಳಿತುಕೊಂಡಿದ್ದ ಜನರಿಗೆ ಕೊಟ್ಟನು. ಆತನು ಮೀನುಗಳನ್ನು ಕೊಡುವಾಗಲೂ ಅದೇರೀತಿ ಮಾಡಿದನು. ಎಲ್ಲರೂ ತಮಗೆ ಬೇಕಾದಷ್ಟು ತಿಂದರು.
|
12. ಅವರೆಲ್ಲರೂ ಊಟ ಮಾಡಿ ತೃಪ್ತರಾದ ಮೇಲೆ ಯೇಸು ತನ್ನ ಶಿಷ್ಯರಿಗೆ, “ಉಳಿದುಹೋದ ರೊಟ್ಟಿ ಮತ್ತು ಮೀನುಗಳ ತುಂಡುಗಳನ್ನು ಒಟ್ಟುಗೂಡಿಸಿರಿ. ಯಾವುದನ್ನೂ ಹಾಳುಮಾಡಬೇಡಿ” ಎಂದು ಹೇಳಿದನು.
|
13. ಆದ್ದರಿಂದ ಶಿಷ್ಯರು ಉಳಿದುಹೋಗಿದ್ದ ತುಂಡುಗಳನ್ನು ಒಟ್ಟುಗೂಡಿಸಿದರು. ಜನರು ತಿನ್ನಲು ಆರಂಭಿಸಿದಾಗ ಕೇವಲ ಐದು ಜವೆಗೋದಿಯ ರೊಟ್ಟಿಗಳಿದ್ದವು. ಆದರೆ ಶಿಷ್ಯರು ಉಳಿದುಹೋದ ಆಹಾರದ ತುಂಡುಗಳನ್ನು ಒಟ್ಟುಗೂಡಿಸಿದಾಗ ಹನ್ನೆರಡು ದೊಡ್ಡ ಬುಟ್ಟಿಗಳು ತುಂಬಿಹೋದವು.
|
14. ಯೇಸು ಮಾಡಿದ ಈ ಸೂಚಕಕಾರ್ಯವನ್ನು ಕಂಡ ಜನರು, “ಈ ಲೋಕಕ್ಕೆ ಬರಲಿರುವ ಪ್ರವಾದಿ ನಿಜವಾಗಿಯೂ ಈತನೇ ಇರಬೇಕು” ಎಂದು ಹೇಳತೊಡಗಿದರು.
|
15. ತನ್ನನ್ನು ಬಲವಂತದಿಂದ ರಾಜನನ್ನಾಗಿ ಮಾಡಲು ಜನರು ಯೋಚಿಸುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅಲ್ಲಿಂದ ತಾನೊಬ್ಬನೇ ಬೆಟ್ಟಕ್ಕೆ ಮತ್ತೆ ಹೋದನು.
|
17. ಆಗಲೇ ಕತ್ತಲಾಗಿತ್ತು. ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ. ಆದ್ದರಿಂದ ಶಿಷ್ಯರು ದೋಣಿಯನ್ನು ಹತ್ತಿ ಸರೋವರದ ಆಚೆಯ ಕಡೆಯಿದ್ದ ಕಪೆರ್ನೌಮಿಗೆ ಹೊರಟರು.
|
19. ಅವರು ಹುಟ್ಟು ಹಾಕುತ್ತಾ ಸುಮಾರು ಮೂರು ಅಥವಾ ನಾಲ್ಕು ಮೈಲಿಗಳವರೆಗೆ ದೋಣಿಯನ್ನು ನಡೆಸಿದ ನಂತರ ಯೇಸುವನ್ನು ಕಂಡರು. ಆತನು ನೀರಿನ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುತ್ತಿರುವುದನ್ನು ಕಂಡು ಅವರಿಗೆ ಭಯವಾಯಿತು.
|
21. ಆಗ ಅವರು ಯೇಸುವನ್ನು ದೋಣಿಯೊಳಗೆ ಬರಮಾಡಿಕೊಳ್ಳಬೇಕೆಂದಿದ್ದರು. ಅಷ್ಟರಲ್ಲೇ, ಅವರು ಹೋಗಬೇಕೆಂದಿದ್ದ ಸ್ಥಳದ ದಡಕ್ಕೆ ದೋಣಿಯು ತಲುಪಿತು.
|
22. ಮರುದಿನವಾಯಿತು. ಕೆಲವು ಜನರು ಸರೋವರದ ಮತ್ತೊಂದು ಕಡೆಯಲ್ಲಿ ಉಳಿದುಕೊಂಡಿದ್ದರು. ಯೇಸು ತನ್ನ ಶಿಷ್ಯರೊಂದಿಗೆ ದೋಣಿಯಲ್ಲಿ ಹೋಗಲಿಲ್ಲ ಎಂಬುದು ಈ ಜನರಿಗೆ ತಿಳಿದಿತ್ತು. ಯೇಸುವಿನ ಶಿಷ್ಯರು ಮಾತ್ರ ದೋಣಿಯಲ್ಲಿ ಹೋದರೆಂಬುದೂ ಮತ್ತು ಅದೊಂದು ದೋಣಿ ಮಾತ್ರ ಅಲ್ಲಿತ್ತೆಂಬುದೂ ಅವರಿಗೆ ಗೊತ್ತಿತ್ತು.
|
23. ಆದರೆ ಅಷ್ಟರಲ್ಲಿಯೇ, ಕೆಲವು ದೋಣಿಗಳು ತಿಬೇರಿಯಾದಿಂದ ಬಂದವು. ಅವರು ಊಟ ಮಾಡಿದ ಸ್ಥಳಕ್ಕೆ ಸಮೀಪದ ದಡದಲ್ಲಿಯೇ ಆ ದೋಣಿಗಳು ನಿಂತುಕೊಂಡವು. ಪ್ರಭುವು (ಯೇಸು) ಸ್ತೋತ್ರ ಮಾಡಿದ ಮೇಲೆ ಅವರು ರೊಟ್ಟಿಯನ್ನು ಆ ಸ್ಥಳದಲ್ಲೇ ತಿಂದಿದ್ದರು.
|
24. ಯೇಸು ಮತ್ತು ಆತನ ಶಿಷ್ಯರು ಅಲ್ಲಿಲ್ಲದಿರುವುದನ್ನು ಜನರು ಕಂಡು ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಹೋದರು. ಅವರು ಯೇಸುವನ್ನು ಕಂಡುಕೊಳ್ಳಬೇಕೆಂದಿದ್ದರು.
|
25. ಜನರು ಯೇಸುವನ್ನು ಸರೋವರದ ಆಚೆಯ ದಡದಲ್ಲಿ ಕಂಡುಕೊಂಡರು. ಅವರು ಆತನಿಗೆ, “ಗುರುವೇ, ನೀನು ಇಲ್ಲಿಗೆ ಯಾವಾಗ ಬಂದೆ?” ಎಂದು ಕೇಳಿದರು.
|
26. ಯೇಸು, “ನೀವು ನನ್ನನ್ನು ಏಕೆ ಹುಡುಕುತ್ತಿದ್ದೀರಿ? ನನ್ನ ಅಧಿಕಾರವನ್ನು ನಿರೂಪಿಸುವ ನನ್ನ ಅದ್ಭುತಕಾರ್ಯಗಳನ್ನು ಕಂಡು ನೀವು ನನ್ನನ್ನು ಹುಡುಕುತ್ತಿದ್ದೀರೋ? ಇಲ್ಲ! ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ರೊಟ್ಟಿಯನ್ನು ತೃಪ್ತಿಯಾಗುವಷ್ಟು ತಿಂದಕಾರಣ ನನ್ನನ್ನು ಹುಡುಕುತ್ತಿದ್ದೀರಿ.
|
27. ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.
|
29. ಯೇಸು, “ದೇವರು ಕಳುಹಿಸಿದಾತನನ್ನು ನೀವು ನಂಬಬೇಕು. ಈ ಕಾರ್ಯವನ್ನೇ ದೇವರು ನಿಮ್ಮಿಂದ ಅಪೇಕ್ಷಿಸುತ್ತಾನೆ” ಎಂದು ಉತ್ತರಕೊಟ್ಟನು.
|
30. ಆದ್ದರಿಂದ ಜನರು, “ದೇವರಿಂದ ಕಳುಹಿಸಲ್ಪಟ್ಟಾತನು ನೀನೇ ಎಂಬುದನ್ನು ನಿರೂಪಿಸುವುದಕ್ಕಾಗಿ ನೀನು ಯಾವ ಸೂಚಕಕಾರ್ಯವನ್ನು ಮಾಡುವೆ?
|
31. ನಮ್ಮ ಪಿತೃಗಳು ತಮಗೆ ದೇವರು ಮರುಭೂಮಿಯಲ್ಲಿ ಕೊಟ್ಟ ಮನ್ನವನ್ನು (ಆಹಾರವನ್ನು) ತಿಂದರು. ದೇವರು ಅವರಿಗೆ ತಿನ್ನಲು ಪರಲೋಕದಿಂದ ರೊಟ್ಟಿಯನ್ನು ಕೊಟ್ಟನು ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ؆” ಎಂದು ಹೇಳಿದರು.
|
32. ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮ ಜನರಿಗೆ ಪರಲೋಕದಿಂದ ರೊಟ್ಟಿಯನ್ನು ಕೊಟ್ಟವನು ಮೋಶೆಯಲ್ಲ. ಆದರೆ ನನ್ನ ತಂದೆಯು ನಿಮಗೆ ಪರಲೋಕದಿಂದ ನಿಜವಾದ ರೊಟ್ಟಿಯನ್ನು ಕೊಡುವನು.
|
33. ದೇವರ ರೊಟ್ಟಿ ಯಾವುದು? ಪರಲೋಕದಿಂದ ಇಳಿದುಬಂದು ಈ ಲೋಕಕ್ಕಾಗಿ ಜೀವವನ್ನು ಕೊಡುವಾತನೇ ದೇವರು ಕೊಡುವ ರೊಟ್ಟಿ” ಎಂದು ಹೇಳಿದನು.
|
35. ಅದಕ್ಕೆ ಯೇಸು, “ನಾನೇ ಜೀವಕೊಡುವ ರೊಟ್ಟಿ. ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗದು. ನನ್ನಲ್ಲಿ ನಂಬಿಕೆ ಇಡುವವನಿಗೆ ಎಂದಿಗೂ ಬಾಯಾರಿಕೆಯಾಗದು.
|
37. ತಂದೆಯು ನನ್ನ ಜನರನ್ನು ನನಗೆ ಕೊಡುತ್ತಾನೆ. ಆ ಜನರಲ್ಲಿ ಪ್ರತಿಯೊಬ್ಬರೂ ನನ್ನ ಬಳಿಗೆ ಬರುತ್ತಾರೆ. ನನ್ನಲ್ಲಿಗೆ ಬರುವ ಪ್ರತಿಯೊಬ್ಬರನ್ನೂ ನಾನು ಖಂಡಿತವಾಗಿ ಸ್ವೀಕರಿಸಿಕೊಳ್ಳುವೆನು, ಅವರನ್ನೆಂದಿಗೂ ತಳ್ಳಿಬಿಡುವುದಿಲ್ಲ.
|
38. ನಾನು ಪರಲೋಕದಿಂದ ಇಳಿದು ಬಂದದ್ದು ದೇವರ ಚಿತ್ತಕ್ಕನುಸಾರವಾಗಿ ಮಾಡುವುದಕ್ಕಾಗಿಯೇ ಹೊರತು ನನ್ನ ಚಿತ್ತಕ್ಕನುಸಾರವಾಗಿಯಲ್ಲ.
|
39. ದೇವರು ನನಗೆ ಕೊಟ್ಟಿರುವ ಯಾವ ವ್ಯಕ್ತಿಯನ್ನೂ ನಾನು ಕಳೆದುಕೊಳ್ಳಕೂಡದು. ಅಲ್ಲದೆ ಅಂತಿಮ ದಿನದಂದು ನಾನು ಆ ಜನರನ್ನು ಜೀವಂತವಾಗಿ ಎಬ್ಬಿಸಬೇಕು. ನನ್ನನ್ನು ಕಳುಹಿಸಿದಾತನು ಆ ಕಾರ್ಯವನ್ನೇ ನನ್ನಿಂದ ಅಪೇಕ್ಷಿಸುತ್ತಾನೆ.
|
40. ಮಗನನ್ನು ನೋಡಿ ಆತನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಹೊಂದಿದ್ದಾನೆ. ಅಂತಿಮ ದಿನದಂದು ನಾನು ಆ ವ್ಯಕ್ತಿಯನ್ನು ಜೀವಂತವಾಗಿ ಎಬ್ಬಿಸುವೆನು. ನನ್ನ ತಂದೆಯು ಬಯಸುವುದು ಇದನ್ನೇ” ಎಂದನು.
|
41. ಯೆಹೂದ್ಯರು ಯೇಸುವಿನ ಬಗ್ಗೆ ಗುಣಗುಟ್ಟಿದರು. “ಪರಲೋಕದಿಂದ ಇಳಿದುಬರುವ ರೊಟ್ಟಿಯೇ ನಾನು” ಎಂದು ಆತನು ಹೇಳಿದ್ದರಿಂದ ಅವರು ಆಕ್ಷೇಪಿಸಿದರು.
|
42. ಯೆಹೂದ್ಯರು, “ಇವನು ಯೇಸು. ಇವನ ತಂದೆತಾಯಿಗಳನ್ನು ನಾವು ಬಲ್ಲೆವು. ಇವನು ಕೇವಲ ಯೋಸೇಫನ ಮಗನು. ನಾನು ಪರಲೋಕದಿಂದ ಇಳಿದುಬಂದೆನು؆ ಎಂದು ಇವನು ಹೇಳುವುದಕ್ಕೆ ಹೇಗೆ ಸಾಧ್ಯ?” ಎಂದರು.
|
44. ತಂದೆಯೇ ನನ್ನನ್ನು ಕಳುಹಿಸಿದನು ಮತ್ತು ತಂದೆಯೇ ನನ್ನ ಬಳಿಗೆ ಜನರನ್ನು ಕರೆತರುವನು. ಅಂತಿಮ ದಿನದಂದು ನಾನು ಆ ಜನರನ್ನು ಜೀವಂತವಾಗಿ ಎಬ್ಬಿಸುವೆನು. ತಂದೆಯು ನನ್ನ ಬಳಿಗೆ ಕರೆದುಕೊಂಡು ಬರದ ಹೊರತು ಯಾವನೂ ನನ್ನ ಬಳಿಗೆ ಬರಲಾರನು.
|
45. ”ದೇವರು ಎಲ್ಲಾ ಜನರಿಗೆ ಉಪದೇಶಿಸುವನು؆ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಜನರು ತಂದೆಗೆ ಕಿವಿಗೊಟ್ಟು ಆತನಿಂದ ಕಲಿತು ಕೊಳ್ಳುವರು. ಆ ಜನರು ನನ್ನ ಬಳಿಗೆ ಬರುವರು.
|
46. ತಂದೆಯಿಂದ ಬಂದಿರುವಾತನು ಮಾತ್ರ ತಂದೆಯನ್ನು ನೋಡಿದವನಾಗಿದ್ದಾನೆ. ಬೇರೆ ಯಾವ ವ್ಯಕ್ತಿಯೂ ತಂದೆಯನ್ನು ಎಂದೂ ನೋಡಿಲ್ಲ.
|
49. ನಿಮ್ಮ ಪಿತೃಗಳು ತಮಗೆ ದೇವರು ಮರುಭೂಮಿಯಲ್ಲಿ ಕೊಟ್ಟ ಮನ್ನವನ್ನು ತಿಂದರು. ಆದರೆ ಎಲ್ಲಾ ಜನರಂತೆ ಅವರೂ ಸತ್ತುಹೋದರು.
|
51. ಪರಲೋಕದಿಂದ ಇಳಿದುಬಂದ ಜೀವವುಳ್ಳ ರೊಟ್ಟಿ ನಾನೇ. ಈ ರೊಟ್ಟಿಯನ್ನು ತಿನ್ನುವವನು ಶಾಶ್ವತವಾಗಿ ಜೀವಿಸುವನು. ಈ ರೊಟ್ಟಿಯೇ ನನ್ನ ದೇಹ. ಈ ಲೋಕದಲ್ಲಿರುವ ಜನರು ಜೀವವನ್ನು ಹೊಂದಿಕೊಳ್ಳಲೆಂದು ನಾನು ನನ್ನ ದೇಹವನ್ನೇ ಕೊಡುತ್ತೇನೆ” ಎಂದು ಉತ್ತರಕೊಟ್ಟನು.
|
52. ಆಗ ಯೆಹೂದ್ಯರು, “ಈ ಮನುಷ್ಯನು ತನ್ನ ದೇಹವನ್ನು ನಮಗೆ ತಿನ್ನಲು ಹೇಗೆ ಕೊಡಲಾದೀತು?” ಎಂದು ತಮ್ಮ ತಮ್ಮೊಳಗೆ ವಾಗ್ವಾದ ಮಾಡತೊಡಗಿದರು.
|
53. ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಮನುಷ್ಯಕುಮಾರನ ದೇಹವನ್ನು ತಿನ್ನಲೇಬೇಕು. ಆತನ ರಕ್ತವನ್ನು ಕುಡಿಯಲೇಬೇಕು. ನೀವು ಹೀಗೆ ಮಾಡದಿದ್ದರೆ, ನಿಮ್ಮಲ್ಲಿ ನಿಜವಾದ ಜೀವ ಇರುವುದಿಲ್ಲ.
|
54. ನನ್ನ ದೇಹವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅಂತಿಮ ದಿನದಂದು ನಾನು ಆ ವ್ಯಕ್ತಿಯನ್ನು ಜೀವಂತವಾಗಿ ಎಬ್ಬಿಸುವೆನು.
|
57. ತಂದೆಯೇ ನನ್ನನ್ನು ಕಳುಹಿಸಿದನು. ತಂದೆಯು ಜೀವ ಸ್ವರೂಪನಾಗಿದ್ದಾನೆ. ನಾನು ತಂದೆಯಿಂದಲೇ ಜೀವಿಸುತ್ತೇನೆ. ಆದ್ದರಿಂದ ನನ್ನನ್ನು ತಿನ್ನುವವನು ನನ್ನಿಂದಲೇ ಜೀವಿಸುವನು.
|
58. ನಮ್ಮ ಪಿತೃಗಳು ತಿಂದ ರೊಟ್ಟಿಯಂತಲ್ಲ ನಾನು. ಅವರು ಆ ರೊಟ್ಟಿಯನ್ನು ತಿಂದರೂ ಎಲ್ಲಾ ಜನರಂತೆ ಸತ್ತು ಹೋದರು. ನಾನು ಪರಲೋಕದಿಂದ ಇಳಿದುಬಂದ ರೊಟ್ಟಿ. ಈ ರೊಟ್ಟಿಯನ್ನು ತಿನ್ನುವವನು ಸದಾಕಾಲ ಜೀವಿಸುವನು,” ಎಂದು ಹೇಳಿದನು.
|
60. ಇದನ್ನು ಕೇಳಿದ ಆತನ ಶಿಷ್ಯರಲ್ಲಿ ಅನೇಕರು, “ಈ ಉಪದೇಶವು ಕಠಿಣವಾಗಿದೆ. ಇದನ್ನು ಯಾರು ಗ್ರಹಿಸಿಕೊಳ್ಳಬಲ್ಲರು?” ಎಂದರು.
|
63. ಒಬ್ಬನಿಗೆ ಜೀವವನ್ನು ಕೊಡುವಂಥದ್ದು ದೈಹಿಕ ಸಂಗತಿಗಳಲ್ಲ. ಜೀವವನ್ನು ಕೊಡುವಂಥದ್ದು ದೇವರಾತ್ಮ. ನಾನು ನಿಮಗೆ ಹೇಳಿದ ಸಂಗತಿಗಳು ಆತ್ಮಿಕ ಸಂಗತಿಗಳಾಗಿವೆ. ಆದ್ದರಿಂದ ಈ ಸಂಗತಿಗಳೇ ಜೀವವನ್ನು ಕೊಡುತ್ತವೆ.
|
64. ಆದರೆ ನಿಮ್ಮಲ್ಲಿ ಕೆಲವರು ನಂಬುವುದಿಲ್ಲ” ಎಂದು ಹೇಳಿದನು. (ತನ್ನನ್ನು ಯಾರೂ ನಂಬಿಲ್ಲವೆಂದು ಯೇಸುವಿಗೆ ತಿಳಿದಿತ್ತು. ಆತನಿಗೆ ಅದು ಮೊದಲಿನಿಂದಲೂ ತಿಳಿದಿತ್ತು. ತನಗೆ ಯಾವ ವ್ಯಕ್ತಿ ದ್ರೋಹ ಮಾಡುತ್ತಾನೆ ಎಂಬುದೂ ಆತನಿಗೆ ಗೊತ್ತಿತ್ತು.)
|
65. ಯೇಸು, “ತಂದೆಯ ಅನುಮತಿ ಇಲ್ಲದೆ ಯಾವನೂ ನನ್ನ ಬಳಿಗೆ ಬರಲಾರನು ಎಂದು ನಾನು ನಿಮಗೆ ಹೇಳಿದ್ದಕ್ಕೆ ಅದೇ ಕಾರಣ” ಎಂದನು.
|
66. ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ ಆತನ ಹಿಂಬಾಲಕರಲ್ಲಿ ಅನೇಕರು ಆತನನ್ನು ತೊರೆದುಬಿಟ್ಟರು. ಅವರು ಆತನನ್ನು ಹಿಂಬಾಲಿಸಲಿಲ್ಲ.
|
69. ನಾವು ನಿನ್ನಲ್ಲಿ ನಂಬಿಕೆ ಇಡುತ್ತೇವೆ. ನೀನು ದೇವರಿಂದ ಬಂದ ಪರಿಶುದ್ಧನೆಂದು ನಮಗೆ ಗೊತ್ತಿದೆ” ಎಂದು ಉತ್ತರಕೊಟ್ಟನು.
|
70. ಬಳಿಕ ಯೇಸು, “ನಾನು ಆರಿಸಿಕೊಂಡ ಹನ್ನೆರಡು ಮಂದಿ ನೀವೇ. ಆದರೆ ನಿಮ್ಮಲ್ಲಿರುವ ಒಬ್ಬನು ಸೈತಾನನ ಮಗನಾಗಿದ್ದಾನೆ” ಎಂದು ಉತ್ತರಕೊಟ್ಟನು.
|
71. ಯೇಸು ಸಿಮೋನನ ಮಗನಾದ ಇಸ್ಕರಿಯೋತ ಯೂದನ ಬಗ್ಗೆ ಮಾತಾಡುತ್ತಿದ್ದನು. ಯೂದನು ಹನ್ನೆರಡು ಮಂದಿ ಅಪೊಸ್ತಲರಲ್ಲಿ ಒಬ್ಬನಾಗಿದ್ದನು. ಆದರೆ ಮುಂದೆ ಯೇಸುವಿಗೆ ದ್ರೋಹ ಮಾಡಿದ ವ್ಯಕ್ತಿ ಇವನೇ.
|