ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಯೋನ
1. {ಯೋನನ ಪ್ರಾರ್ಥನೆ} [PS] ಯೋನನು ಮೀನಿನ ಹೊಟ್ಟೆಯೊಳಗಿದ್ದಾಗ ದೇವರಾದ ಯೆಹೋವನಿಗೆ ಪ್ರಾರ್ಥಿಸಿ ಹೀಗೆಂದನು:
2. “ನಾನು ದೊಡ್ಡ ಆಪತ್ತಿನಲ್ಲಿದ್ದೆನು. [QBR2] ಸಹಾಯಕ್ಕಾಗಿ ನಾನು ಯೆಹೋವನಿಗೆ ಮೊರೆಯಿಟ್ಟೆನು. [QBR2] ಆತನು ನನಗೆ ಉತ್ತರ ದಯಪಾಲಿಸಿದನು. [QBR] ನಾನು ಆಳವಾದ ಸಮಾಧಿಯೊಳಗಿದ್ದೆನು. [QBR2] ನಾನು ನಿನಗೆ ಮೊರೆಯಿಟ್ಟಾಗ, [QBR2] ಯೆಹೋವನೇ, ನೀನು ನನ್ನ ಸ್ವರವನ್ನು ಕೇಳಿದೆ.
3. “ನೀನು ನನ್ನನ್ನು ಸಮುದ್ರಕ್ಕೆ ಎಸೆದೆ. [QBR2] ನಿನ್ನ ಬಲವಾದ ತೆರೆಗಳು ನನ್ನ ಮೇಲೆ ಅಪ್ಪಳಿಸಿದವು. [QBR] ನಾನು ನೀರಿನ ಆಳವಾದ ಸ್ಥಳಕ್ಕೆ ಮುಳುಗಿಹೋದೆ. [QBR2] ನಾನು ಸಮುದ್ರದ ನೀರಿನಿಂದ ಆವರಿಸಲ್ಪಟ್ಟೆನು. [QBR]
4. ಆಗ ನಾನು, ‘ನಾನು ನಿನ್ನ ಕಣ್ಣೆದುರಿನಿಂದ ಹೊರದೂಡಲ್ಪಟ್ಟಿದ್ದೇನೆ’ ಅಂದುಕೊಂಡೆನು. [QBR2] ಆದರೂ ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ನೋಡುವೆನು.
5. “ಸಮುದ್ರದ ನೀರು ನನ್ನನ್ನು ಮುಚ್ಚಿಬಿಟ್ಟಿತು. [QBR2] ನೀರು ನನ್ನ ಬಾಯಿಯನ್ನು ಮುಚ್ಚಿತು. [QBR2] ಆಗ ನನಗೆ ಉಸಿರಾಡಲಾಗಲಿಲ್ಲ. [QBR] ನಾನು ಮುಳುಗುತ್ತಾ ಮುಳುಗುತ್ತಾ ಸಮುದ್ರದ ಆಳಕ್ಕೆ ಹೋದೆನು. [QBR2] ಸಮುದ್ರ ಪಾಚಿಗಳು ನನ್ನ ತಲೆಯನ್ನು ಸುತ್ತುಹಾಕಿದವು. [QBR]
6. ನಾನು ಸಮುದ್ರದ ತಳದಲ್ಲಿದ್ದೆನು. [QBR2] ಅಲ್ಲಿಂದ ಪರ್ವತಗಳು ಉಗಮವಾಗುತ್ತವೆ. [QBR] ‘ನಾನು ಈ ಸೆರೆಮನೆಯಲ್ಲಿ ಎಂದೆಂದಿಗೂ ಬಂಧಿತನಾದೆನು’ ಎಂದು ನೆನಸಿದೆನು. [QBR2] ಆದರೆ ನನ್ನ ದೇವರಾದ ಯೆಹೋವನು ಸಮಾಧಿಯಿಂದ ನನ್ನನ್ನು ಹೊರತಂದನು. [QBR] ಯೆಹೋವನೇ ನೀನು ಪುನಃ ನನಗೆ ಜೀವ ಕೊಟ್ಟೆ.
7. “ನನ್ನ ಆತ್ಮಕ್ಕೆ ಯಾವ ನಿರೀಕ್ಷೆಯೂ ಇರಲಿಲ್ಲ. [QBR2] ಆಗ ನಾನು ಯೆಹೋವನನ್ನು ಸ್ಮರಿಸಿದೆನು. [QBR] ಯೆಹೋವನೇ, ನಾನು ನಿನಗೆ ಪ್ರಾರ್ಥಿಸಿದೆನು. [QBR2] ನೀನು ನಿನ್ನ ಪವಿತ್ರ ಆಲಯದಿಂದ ನನ್ನ ಪ್ರಾರ್ಥನೆಯನ್ನು ಕೇಳಿದೆ.
8. “ಕೆಲವು ಜನರು ಪ್ರಯೋಜನವಿಲ್ಲದ ವಿಗ್ರಹಗಳನ್ನು ಪೂಜಿಸುತ್ತಾರೆ. [QBR2] ಆದರೆ ಆ ವಿಗ್ರಹಗಳು ಅವರಿಗೆ ಸಹಾಯ ಮಾಡುವುದಿಲ್ಲ. [QBR]
9. ರಕ್ಷಣೆಯು ಯೆಹೋವನಿಂದಲೇ ಉಂಟಾಗುವದು. [QBR2] ಯೆಹೋವನೇ, ನಾನು ನಿನಗೆ ಯಜ್ಞವನ್ನರ್ಪಿಸುವೆನು. [QBR] ನಾನು ನಿನ್ನನ್ನು ಕೊಂಡಾಡಿ ಸ್ತೋತ್ರಸಲ್ಲಿಸುವೆನು. [QBR2] ನಾನು ನಿನಗೆ ವಿಶೇಷವಾದ ಹರಕೆಗಳನ್ನು ಮಾಡುವೆನು. [QBR] ನಾನು ಕೊಟ್ಟ ವಚನಗಳನ್ನು ಪಾಲಿಸುವೆನು.” [PS]
10. ಆಗ ಯೆಹೋವನು ಆ ಮೀನಿಗೆ ಆಜ್ಞಾಪಿಸಲು ಆ ಮೀನು ಯೋನನನ್ನು ಒಣನೆಲದಲ್ಲಿ ತನ್ನ ಹೊಟ್ಟೆಯೊಳಗಿಂದ ಕಾರಿಬಿಟ್ಟಿತು. [PE]
ಒಟ್ಟು 4 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 2 / 4
1 2 3 4
ಯೋನನ ಪ್ರಾರ್ಥನೆ 1 ಯೋನನು ಮೀನಿನ ಹೊಟ್ಟೆಯೊಳಗಿದ್ದಾಗ ದೇವರಾದ ಯೆಹೋವನಿಗೆ ಪ್ರಾರ್ಥಿಸಿ ಹೀಗೆಂದನು: 2 “ನಾನು ದೊಡ್ಡ ಆಪತ್ತಿನಲ್ಲಿದ್ದೆನು. ಸಹಾಯಕ್ಕಾಗಿ ನಾನು ಯೆಹೋವನಿಗೆ ಮೊರೆಯಿಟ್ಟೆನು. ಆತನು ನನಗೆ ಉತ್ತರ ದಯಪಾಲಿಸಿದನು.
ನಾನು ಆಳವಾದ ಸಮಾಧಿಯೊಳಗಿದ್ದೆನು. ನಾನು ನಿನಗೆ ಮೊರೆಯಿಟ್ಟಾಗ, ಯೆಹೋವನೇ, ನೀನು ನನ್ನ ಸ್ವರವನ್ನು ಕೇಳಿದೆ.
3 “ನೀನು ನನ್ನನ್ನು ಸಮುದ್ರಕ್ಕೆ ಎಸೆದೆ. ನಿನ್ನ ಬಲವಾದ ತೆರೆಗಳು ನನ್ನ ಮೇಲೆ ಅಪ್ಪಳಿಸಿದವು.
ನಾನು ನೀರಿನ ಆಳವಾದ ಸ್ಥಳಕ್ಕೆ ಮುಳುಗಿಹೋದೆ. ನಾನು ಸಮುದ್ರದ ನೀರಿನಿಂದ ಆವರಿಸಲ್ಪಟ್ಟೆನು.
4 ಆಗ ನಾನು, ‘ನಾನು ನಿನ್ನ ಕಣ್ಣೆದುರಿನಿಂದ ಹೊರದೂಡಲ್ಪಟ್ಟಿದ್ದೇನೆ’ ಅಂದುಕೊಂಡೆನು. ಆದರೂ ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ನೋಡುವೆನು. 5 “ಸಮುದ್ರದ ನೀರು ನನ್ನನ್ನು ಮುಚ್ಚಿಬಿಟ್ಟಿತು. ನೀರು ನನ್ನ ಬಾಯಿಯನ್ನು ಮುಚ್ಚಿತು. ಆಗ ನನಗೆ ಉಸಿರಾಡಲಾಗಲಿಲ್ಲ.
ನಾನು ಮುಳುಗುತ್ತಾ ಮುಳುಗುತ್ತಾ ಸಮುದ್ರದ ಆಳಕ್ಕೆ ಹೋದೆನು. ಸಮುದ್ರ ಪಾಚಿಗಳು ನನ್ನ ತಲೆಯನ್ನು ಸುತ್ತುಹಾಕಿದವು.
6 ನಾನು ಸಮುದ್ರದ ತಳದಲ್ಲಿದ್ದೆನು. ಅಲ್ಲಿಂದ ಪರ್ವತಗಳು ಉಗಮವಾಗುತ್ತವೆ.
‘ನಾನು ಈ ಸೆರೆಮನೆಯಲ್ಲಿ ಎಂದೆಂದಿಗೂ ಬಂಧಿತನಾದೆನು’ ಎಂದು ನೆನಸಿದೆನು. ಆದರೆ ನನ್ನ ದೇವರಾದ ಯೆಹೋವನು ಸಮಾಧಿಯಿಂದ ನನ್ನನ್ನು ಹೊರತಂದನು.
ಯೆಹೋವನೇ ನೀನು ಪುನಃ ನನಗೆ ಜೀವ ಕೊಟ್ಟೆ.
7 “ನನ್ನ ಆತ್ಮಕ್ಕೆ ಯಾವ ನಿರೀಕ್ಷೆಯೂ ಇರಲಿಲ್ಲ. ಆಗ ನಾನು ಯೆಹೋವನನ್ನು ಸ್ಮರಿಸಿದೆನು.
ಯೆಹೋವನೇ, ನಾನು ನಿನಗೆ ಪ್ರಾರ್ಥಿಸಿದೆನು. ನೀನು ನಿನ್ನ ಪವಿತ್ರ ಆಲಯದಿಂದ ನನ್ನ ಪ್ರಾರ್ಥನೆಯನ್ನು ಕೇಳಿದೆ.
8 “ಕೆಲವು ಜನರು ಪ್ರಯೋಜನವಿಲ್ಲದ ವಿಗ್ರಹಗಳನ್ನು ಪೂಜಿಸುತ್ತಾರೆ. ಆದರೆ ಆ ವಿಗ್ರಹಗಳು ಅವರಿಗೆ ಸಹಾಯ ಮಾಡುವುದಿಲ್ಲ.
9 ರಕ್ಷಣೆಯು ಯೆಹೋವನಿಂದಲೇ ಉಂಟಾಗುವದು. ಯೆಹೋವನೇ, ನಾನು ನಿನಗೆ ಯಜ್ಞವನ್ನರ್ಪಿಸುವೆನು.
ನಾನು ನಿನ್ನನ್ನು ಕೊಂಡಾಡಿ ಸ್ತೋತ್ರಸಲ್ಲಿಸುವೆನು. ನಾನು ನಿನಗೆ ವಿಶೇಷವಾದ ಹರಕೆಗಳನ್ನು ಮಾಡುವೆನು.
ನಾನು ಕೊಟ್ಟ ವಚನಗಳನ್ನು ಪಾಲಿಸುವೆನು.”
10 ಆಗ ಯೆಹೋವನು ಆ ಮೀನಿಗೆ ಆಜ್ಞಾಪಿಸಲು ಆ ಮೀನು ಯೋನನನ್ನು ಒಣನೆಲದಲ್ಲಿ ತನ್ನ ಹೊಟ್ಟೆಯೊಳಗಿಂದ ಕಾರಿಬಿಟ್ಟಿತು.
ಒಟ್ಟು 4 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 2 / 4
1 2 3 4
×

Alert

×

Kannada Letters Keypad References