1. ಲೇವಿ ಕುಲಾಧಿಪತಿಗಳು ಮಾತಾಡುವುದಕ್ಕಾಗಿ ಯಾಜಕನಾದ ಎಲ್ಲಾಜಾರನ, ನೂನನ ಮಗನಾದ ಯೆಹೋಶುವನ ಮತ್ತು ಇಸ್ರೇಲಿನ ಬೇರೆ ಕುಲಾಧಿಪತಿಗಳ ಬಳಿಗೆ ಹೋದರು.
|
2. ಇದು ಕಾನಾನ್ ದೇಶದ ಶೀಲೋವಿನಲ್ಲಿ ನಡೆಯಿತು. ಲೇವಿ ಕುಲಾಧಿಪತಿಗಳು ಅವರಿಗೆ, “ಯೆಹೋವನು ಮೋಶೆಗೆ ಆಜ್ಞಾಪಿಸಿರುವಂತೆ ನೀವು ನಮಗೆ ವಾಸಮಾಡುವುದಕ್ಕೆ ಪಟ್ಟಣಗಳನ್ನೂ ನಮ್ಮ ಪಶುಗಳು ಮೇಯುವುದಕ್ಕಾಗಿ ಹೊಲಗಳನ್ನೂ ಕೊಡಬೇಕು” ಎಂದು ಹೇಳಿದರು.
|
3. ಇಸ್ರೇಲರು ಯೆಹೋವನ ಈ ಆಜ್ಞೆಯನ್ನು ಪಾಲಿಸಿದರು. ಅವರು ಲೇವಿಯರಿಗೆ ಈ ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಅವುಗಳ ಸುತ್ತಮುತ್ತಲಿನ ಭೂಮಿಯನ್ನು ಕೊಟ್ಟರು:
|
4. ಕೆಹಾತ್ಯರ ಒಂದು ಭಾಗಕ್ಕೆ ಯೆಹೂದ, ಸಿಮೆಯೋನ್ ಮತ್ತು ಬೆನ್ಯಾಮೀನ್ ಕುಲಗಳ ಭೂಭಾಗದಿಂದ ಹದಿಮೂರು ಪಟ್ಟಣಗಳನ್ನು ಕೊಡಲಾಯಿತು, ಕೆಹಾತ್ಯರು ಲೇವಿಕುಲದವನೂ ಯಾಜಕನೂ ಆದ ಆರೋನನ ಸಂತತಿಯವರಾಗಿದ್ದರು.
|
5. ಉಳಿದೆಲ್ಲ ಕೆಹಾತ್ಯರಿಗೆ ಎಫ್ರಾಯೀಮ್, ದಾನ್ ಮತ್ತು ಮನಸ್ಸೆಯ ಅರ್ಧಕುಲದ ಪ್ರದೇಶಗಳಿಂದ ಹತ್ತು ಪಟ್ಟಣಗಳನ್ನು ಕೊಡಲಾಯಿತು.
|
6. ಗೇರ್ಷೋನ್ಯ ಗೋತ್ರದವರಿಗೆ ಹದಿಮೂರು ಪಟ್ಟಣಗಳನ್ನು ಕೊಡಲಾಯಿತು. ಈ ಪಟ್ಟಣಗಳು ಇಸ್ಸಾಕಾರ್, ಆಶೇರ್, ನಫ್ತಾಲಿ ಮತ್ತು ಬಾಷಾನಿನಲ್ಲಿರುವ ಮನಸ್ಸೆಯ ಅರ್ಧಕುಲದವರಿಗೆ ಸೇರಿದ ಪ್ರದೇಶಗಳಲ್ಲಿದ್ದವು.
|
7. ಮೆರಾರೀ ಗೋತ್ರದವರಿಗೆ ಹನ್ನೆರಡು ಪಟ್ಟಣಗಳನ್ನು ಕೊಡಲಾಯಿತು. ಈ ಹನ್ನೆರಡು ಪಟ್ಟಣಗಳು ರೂಬೇನ್, ಗಾದ್ ಮತ್ತು ಜೆಬುಲೂನ್ ಕುಲಗಳಿಗೆ ಸೇರಿದ ಪ್ರದೇಶಗಳಲ್ಲಿದ್ದವು.
|
8. ಹೀಗೆ ಇಸ್ರೇಲರು ಲೇವಿಯರಿಗೆ ಈ ಪಟ್ಟಣಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳನ್ನು ಕೊಟ್ಟರು; ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಯನ್ನು ಪಾಲಿಸಿದರು.
|
11. ಅವರಿಗೆ ಹೆಬ್ರೋನ್ ಎಂಬ ಕಿರ್ಯತರ್ಬನಗರ (ಇದಕ್ಕೆ ಅನಾಕನ ತಂದೆಯಾದ ಅರ್ಬನ ಹೆಸರಿಡಲಾಗಿತ್ತು.) ಮತ್ತು ಅವರ ಪಶುಗಳಿಗಾಗಿ ಆ ನಗರದ ಹತ್ತಿರದ ಸ್ವಲ್ಪ ಭೂಮಿಯನ್ನು ಕೊಡಲಾಯಿತು.
|
12. ಆದರೆ ಕಿರ್ಯತರ್ಬ ನಗರದ ಸುತ್ತಮುತ್ತಲಿನ ಸಣ್ಣಸಣ್ಣ ಊರುಗಳು ಮತ್ತು ಅವುಗಳಿಗೆ ಸೇರಿದ ಭೂಮಿಯು ಯೆಫುನ್ನೆಯ ಮಗನಾದ ಕಾಲೇಬನಿಗೆ ಸೇರಿತ್ತು.
|
13. ಆದ್ದರಿಂದ ಆರೋನನ ಸಂತತಿಯವರಿಗೆ ಆಶ್ರಯನಗರವಾದ ಹೆಬ್ರೋನ್ ನಗರವನ್ನು ಕೊಡಲಾಯಿತು. ಆರೋನನ ಸಂತತಿಯವರಿಗೆ ಅವರು ಲಿಬ್ನಾ,
|
16. ಆಯಿನ್, ಯುಟ್ಟಾ ಮತ್ತು ಬೇತ್ಷೆಮೆಷ್ ಎಂಬ ಪಟ್ಟಣಗಳನ್ನು ಸಹ ಕೊಟ್ಟರು. ಅವರ ಪಶುಗಳಿಗಾಗಿ ಪಟ್ಟಣಗಳ ಸಮೀಪದಲ್ಲಿದ್ದ ಭೂಮಿಯನ್ನು ಸಹ ಕೊಟ್ಟರು. ಈ ಎರಡು ಗುಂಪುಗಳಿಗೆ ಅವರು ಒಂಭತ್ತು ಪಟ್ಟಣಗಳನ್ನು ಕೊಟ್ಟರು.
|
17. ಬೆನ್ಯಾಮೀನ್ ಕುಲದವರಿಗೆ ಸೇರಿದ ನಗರಗಳನ್ನು ಸಹ ಆರೋನನ ಸಂತತಿಯವರಿಗೆ ಕೊಡಲಾಯಿತು. ಅವು ಯಾವುವೆಂದರೆ: ಗಿಬ್ಯೋನ್, ಗೆಬ,
|
18. ಅನಾತೋತ್ ಮತ್ತು ಅಲ್ಮೋನ್. ಈ ನಾಲ್ಕು ಪಟ್ಟಣಗಳನ್ನೂ ಅವರ ಪಶುಗಳಿಗಾಗಿ ಆ ಪಟ್ಟಣಗಳ ಸಮೀಪದಲ್ಲಿದ್ದ ಸ್ವಲ್ಪ ಭೂಮಿಯನ್ನೂ ಅವರಿಗೆ ಕೊಡಲಾಯಿತು.
|
19. ಒಟ್ಟಿನಲ್ಲಿ ಆರೋನನ ಸಂತತಿಯವರಾದ ಎಲ್ಲಾ ಯಾಜಕರಿಗೆ ಅವರು ಹದಿಮೂರು ಪಟ್ಟಣಗಳನ್ನು ಕೊಟ್ಟರು. ಅವರ ಪಶುಗಳಿಗಾಗಿ ಪಟ್ಟಣದ ಸಮೀಪದಲ್ಲಿದ್ದ ಸ್ವಲ್ಪ ಭೂಮಿಯನ್ನು ಅವರಿಗೆ ಕೊಡಲಾಯಿತು.
|
20. ಕೆಹಾತ್ಯರ ಕುಟುಂಬಕ್ಕೆ ಸೇರಿದ ಇತರ ಜನರಿಗೆ ಎಫ್ರಾಯೀಮ್ ಕುಲದವರ ಪ್ರದೇಶದಿಂದ ಕೆಲವು ಪಟ್ಟಣಗಳನ್ನು ಕೊಡಲಾಯಿತು. ಅವರು ಪಡೆದ ಪಟ್ಟಣಗಳು ಇವು:
|
22. ಕಿಬ್ಚೈಮ್ ಮತ್ತು ಬೇತ್ಹೋರೋನ್. ಒಟ್ಟಿನಲ್ಲಿ ಎಫ್ರಾಯೀಮರು ಅವರಿಗೆ ನಾಲ್ಕು ಪಟ್ಟಣಗಳನ್ನೂ ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನೂ ಕೊಟ್ಟರು.
|
24. ಅಯ್ಯಾಲೋನ್ ಮತ್ತು ಗತ್ರಿಮ್ಮೋನ್ ಎಂಬ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
|
25. ಮನಸ್ಸೆಕುಲದ ಅರ್ಧಜನರು ಅವರಿಗೆ ತಾನಾಕ್ ಮತ್ತು ಗತ್ರಿಮ್ಮೋನ್ ಎಂಬ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ಮನಸ್ಸೆಕುಲದ ಅರ್ಧಜನರು ಅವರಿಗೆ ಎರಡು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
|
26. ಕೆಹಾತ್ಯ ಕುಟುಂಬದ ಉಳಿದ ಜನರು ಒಟ್ಟಿನಲ್ಲಿ ಹತ್ತು ಪಟ್ಟಣಗಳನ್ನು ಮತ್ತು ತಮ್ಮ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪಭೂಮಿಯನ್ನು ಪಡೆದರು.
|
27. ಲೇವಿಯ ಸಂತತಿಯವರಾದ ಗೇರ್ಷೋನ್ಯರಿಗೆ ಈ ಊರುಗಳನ್ನು ಕೊಡಲಾಯಿತು: ಮನಸ್ಸೆಕುಲದ ಅರ್ಧಜನರು ಅವರಿಗೆ ಬಾಷಾನಿನಲ್ಲಿದ್ದ ಆಶ್ರಯನಗರವಾದ ಗೋಲಾನ್ ನಗರವನ್ನು ಕೊಟ್ಟರು. ಮನಸ್ಸೆಯವರು ಬೆಯೆಷ್ಟೆರಾವನ್ನು ಸಹ ಅವರಿಗೆ ಕೊಟ್ಟರು. ಒಟ್ಟಿನಲ್ಲಿ ಈ ಮನಸ್ಸೆಕುಲದ ಅರ್ಧಜನರು ಎರಡು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
|
29. ಯರ್ಮೂತ್, ಏಂಗನ್ನೀಮ್ ಎಂಬ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ಇಸ್ಸಾಕಾರ್ ಕುಲದವರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
|
31. ಹೆಲ್ಕಾತ್, ರೆಹೋಬ್ಗಳನ್ನು ಕೊಟ್ಟರು. ಒಟ್ಟಿನಲ್ಲಿ ಆಶೇರರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
|
32. ನಫ್ತಾಲಿ ಕುಲದವರು ಗಲಿಲಾಯದ ಆಶ್ರಯನಗರವಾದ ಕೆದೆಷ್, ಹಮ್ಮೋತ್ದೋರ್, ಕರ್ತಾನ್ ಎಂಬವುಗಳನ್ನು ಕೊಟ್ಟರು. ಒಟ್ಟಿನಲ್ಲಿ ನಫ್ತಾಲಿಯರು ಮೂರು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
|
33. ಒಟ್ಟಿನಲ್ಲಿ ಗೇರ್ಷೋನ್ಯರಿಗೆ ಹದಿಮೂರು ಪಟ್ಟಣಗಳು ಮತ್ತು ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯು ಸಿಕ್ಕಿತು.
|
34. ಲೇವಿಯರ ಮತ್ತೊಂದು ಗೋತ್ರವು ಮೆರಾರೀ ಎಂಬುದು. ಆ ಗೋತ್ರಕ್ಕೆ ದೊರೆತ ಪಟ್ಟಣಗಳು ಇಂತಿವೆ: ಜೆಬುಲೂನ್ ಕುಲದವರು ಅವರಿಗೆ ಚೂಕ್ನೀಮ್, ಕರ್ತಾ,
|
35. ದಿಮ್ನಾ, ನಹಲಾಲ್ಗಳನ್ನು ಕೊಟ್ಟರು. ಒಟ್ಟಿನಲ್ಲಿ ಜೆಬುಲೂನ್ಯರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
|
37. ಕೆದೇಮೋತ್, ಮೇಫಾಗತ್ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ರೂಬೇನ್ಯರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
|
39. ಹೆಷ್ಬೋನ್, ಯಗ್ಜೇರ್ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ಗಾದ್ಯರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
|
41. ಹೀಗೆ ಲೇವಿಯರು ಒಟ್ಟಿನಲ್ಲಿ ನಲವತ್ತೆಂಟು ಪಟ್ಟಣಗಳನ್ನು ಮತ್ತು ತಮ್ಮ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಪಡೆದರು. ಈ ಎಲ್ಲ ಪಟ್ಟಣಗಳು ಬೇರೆ ಕುಲದವರ ಪ್ರದೇಶಗಳಲ್ಲಿದ್ದವು.
|
43. ಹೀಗೆ ಯೆಹೋವನು ಇಸ್ರೇಲರಿಗೆ ಮಾಡಿದ ತನ್ನ ವಾಗ್ದಾನವನ್ನು ಪೂರ್ಣಗೊಳಿಸಿದನು. ಆತನು ಅವರಿಗೆ ವಾಗ್ದಾನ ಮಾಡಿದ ದೇಶವನ್ನು ಕೊಟ್ಟನು. ಅವರು ಅದನ್ನು ಹಂಚಿಕೊಂಡು ವಾಸವಾಗಿದ್ದರು.
|
44. ಯೆಹೋವನು ಅವರ ಪೂರ್ವಿಕರಿಗೆ ಪ್ರಮಾಣ ಮಾಡಿದಂತೆ ಅವರ ಪ್ರದೇಶದಲ್ಲೆಲ್ಲಾ ಶಾಂತಿ ನೆಲೆಸುವಂತೆ ಮಾಡಿದನು. ಅವರ ಯಾವ ಶತ್ರುಗಳೂ ಅವರನ್ನು ಸೋಲಿಸಲಿಲ್ಲ. ಇಸ್ರೇಲರು ತಮ್ಮ ಎಲ್ಲ ಶತ್ರುಗಳನ್ನು ಸೋಲಿಸುವಂತೆ ಯೆಹೋವನು ಮಾಡಿದನು.
|
45. ಯೆಹೋವನು ಇಸ್ರೇಲರಿಗೆ ಮಾಡಿದ ಪ್ರತಿಯೊಂದು ವಾಗ್ದಾನವನ್ನು ನೆರವೇರಿಸಿದನು. ಆತನು ಕಾರ್ಯರೂಪಕ್ಕೆ ತರದ ವಾಗ್ದನವೇ ಉಳಿಯಲಿಲ್ಲ. ಪ್ರತಿಯೊಂದು ವಾಗ್ದಾನವೂ ನೆರವೇರಿತು.
|