2. ಇಸ್ರೇಲರು ಯುದ್ಧ ಸನ್ನದ್ಧರಾಗುತ್ತಿದ್ದಾರೆ; ಜನರು ಸ್ವಇಚ್ಛೆಯಿಂದ ಯುದ್ಧಕ್ಕೆ ಹೋಗಲು ಒಪ್ಪಿದ್ದಾರೆ; ಯೆಹೋವನಿಗೆ ಸ್ತೋತ್ರವಾಗಲಿ!
|
3. ಅರಸರೇ ಕೇಳಿರಿ, ಆಳುವವರೇ ಗಮನಿಸಿರಿ! ನಾನು ಹಾಡುವೆನು; ನಾನು ಯೆಹೋವನನ್ನು ಕೀರ್ತಿಸುವೆನು. ಇಸ್ರೇಲಿನ ದೇವರಾದ ಯೆಹೋವನಿಗೆ ನಾನು ಗಾನ ಮಾಡುವೆನು.
|
4. ಯೆಹೋವನೇ, ನೀನು ಹಿಂದೆ ಸೆಯೀರಿನ ಪ್ರದೇಶದಿಂದ ಬಂದೆ. ನೀನು ಎದೋಮ್ಯರ ಪ್ರದೇಶದಿಂದ ನಡೆದುಕೊಂಡು ಹೋದೆ. ನೀನು ನಡೆಯುವಾಗ ಭೂಮಿ ನಡುಗಿತು; ಆಕಾಶ ಹನಿಗರೆಯಿತು. ಮೇಘಮಂಡಲವು ಮಳೆಗರೆಯಿತು.
|
6. ಅನಾತನ ಮಗನಾದ ಶಮ್ಗರನ ಕಾಲದಲ್ಲಿಯೂ ಯಾಯೇಲಳ ದಿನಗಳಲ್ಲಿಯೂ ಮುಖ್ಯಮಾರ್ಗಗಳು ಬರಿದಾಗಿದ್ದವು. ವ್ಯಾಪಾರಿಗಳು6 ಮತ್ತು ಪ್ರಯಾಣಿಕರು ಸೀಳುದಾರಿಯಿಂದ ಹೋಗುತ್ತಿದ್ದರು.
|
7. ದೆಬೋರಳೇ, ನೀನು ಬರುವವರೆಗೆ, ನೀನು ಇಸ್ರೇಲರಿಗೆ ತಾಯಿಯಾಗಿ ಬರುವವರೆಗೆ, ಶೂರರೇ ಇರಲಿಲ್ಲ. ಇಸ್ರೇಲಿನಲ್ಲಿ ವೀರರೇ ಇರಲಿಲ್ಲ.
|
8. ಅವರು ಹೊಸ ದೇವರುಗಳನ್ನು ಆರಿಸಿಕೊಂಡರು; ಅದಕ್ಕಾಗಿ ಅವರು ತಮ್ಮ ಪಟ್ಟಣ ದ್ವಾರಗಳಲ್ಲಿ ಯುದ್ಧ ಮಾಡಬೇಕಾಯಿತು. ಇಸ್ರೇಲರ ನಲವತ್ತು ಸಾವಿರ ಸೈನಿಕರಲ್ಲಿ ಒಬ್ಬನಿಗೂ ಗುರಾಣಿ ಬರ್ಜಿಗಳಿರಲಿಲ್ಲ.
|
9. “ನನ್ನ ಹೃದಯವು ಇಸ್ರೇಲಿನ ಸೇನಾಧಿಪತಿಗಳ ಸಂಗಡವಿದೆ. ಈ ಸೇನಾಧಿಪತಿಗಳು ಇಸ್ರೇಲಿಗಾಗಿ ಯುದ್ಧಮಾಡಲು ಸ್ವಇಚ್ಛೆಯಿಂದ ಬಂದರು. ಯೆಹೋವನಿಗೆ ಸ್ತೋತ್ರವಾಗಲಿ.
|
10. ಬಿಳಿಯ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ರತ್ನಗಂಬಳಿಯ ಮೇಲೆ ಕುಳಿತುಕೊಳ್ಳುವವರೇ, ಮಾರ್ಗಗಳ ಮೇಲೆ ಹೋಗುವ ಪ್ರಯಾಣಿಕರೇ, ಗಮನಿಸಿರಿ!
|
11. ತಾಳ ಝಲ್ಲರಿಗಳ ಧ್ವನಿಯನ್ನು ಕೇಳಿರಿ; ಬಾವಿಗಳ ಹತ್ತಿರ ನೆರೆದ ಜನಸಮೂಹದ ಧ್ವನಿಯನ್ನು ಕೇಳಿರಿ; ಅಲ್ಲಿ ಅವು ಯೆಹೋವನ ವಿಜಯದ ಬಗ್ಗೆ ಹೇಳುತ್ತವೆ. ಯೆಹೋವನ ಜನರು ಪಟ್ಟಣ ದ್ವಾರದಲ್ಲಿ ಯುದ್ಧಕ್ಕೆ ಹೋದಾಗ ಇಸ್ರೇಲಿನಲ್ಲಿ ಅವರ ವಿಜಯದ ಬಗ್ಗೆ ಹೇಳುತ್ತವೆ.
|
12. ಏಳು, ಏಳು ದೆಬೋರಳೇ! ಏಳು, ಎದ್ದೇಳು, ಒಂದು ಗೀತೆಯನ್ನು ಹಾಡು! ಬಾರಾಕನೇ, ಏಳು! ಅಬೀನೋವಮನ ಮಗನೇ, ಹೋಗು; ನಿನ್ನ ಶತ್ರುಗಳನ್ನು ಸೆರೆ ಹಿಡಿದುಕೋ!
|
14. ಅಮಾಲೇಕ್ ಪರ್ವತ ಪ್ರದೇಶದಲ್ಲಿ ವಾಸಮಾಡುತ್ತಿದ್ದ ಎಫ್ರಾಯೀಮ್ಯರು ಬಂದರು; ನಿನ್ನನ್ನೂ ನಿನ್ನ ಜನರನ್ನೂ ಅನುಸರಿಸುತ್ತಿದ್ದ ಬೆನ್ಯಾಮೀನ್ಯರೂ ಬಂದರು; ಮಾಕೀರನ ಕುಲದಿಂದ ನಾಯಕರು ಬಂದರು; ಜೆಬುಲೂನ್ ಕುಲದಿಂದ ನಾಯಕರು ಕಂಚಿನ ದೊಣ್ಣೆಗಳೊಡನೆ ಬಂದರು.
|
15. ಇಸ್ಸಾಕಾರ್ ಕುಲದ ನಾಯಕರು ದೆಬೋರಳ ಜೊತೆಯಲ್ಲಿದ್ದರು. ಇಸ್ಸಾಕಾರ್ ಕುಲದವರು ಬಾರಾಕನಿಗೆ ನಂಬಿಗಸ್ತರಾಗಿದ್ದರು. ಅವರು ಕಾಲು ನಡಿಗೆಯಿಂದ ಕಣಿವೆಗೆ ಬಂದರು. ರೂಬೇನ್ಯರೇ, ನಿಮ್ಮ ಸೈನ್ಯದಲ್ಲಿ ತುಂಬ ಶೂರರಿದ್ದಾರೆ.
|
16. ಹೀಗಿರಲು ನೀನು ಕುರಿಯ ಹಟ್ಟಿಗಳ ಗೋಡೆಗೆ ಒರಗಿಕೊಂಡು ಕುಳಿತಿರುವುದೇಕೆ? ರೂಬೇನ್ಯರ ಶೂರ ಸೈನಿಕರು ಯುದ್ಧದ ಬಗ್ಗೆ ಬಹಳವಾಗಿ ಯೋಚಿಸಿದರು, ಆದರೆ ಕುರಿಗಳಿಗಾಗಿ ಬಾರಿಸುವ ಸಂಗೀತವನ್ನು ಕೇಳುತ್ತಾ ಮನೆಯಲ್ಲಿ ಇದ್ದುಬಿಟ್ಟರು.
|
17. “ಗಿಲ್ಯಾದಿನ ಜನರು ಜೋರ್ಡನ್ ನದಿಯ ಆಚೆಯ ದಡದಲ್ಲಿದ್ದ ತಮ್ಮ ಶಿಬಿರಗಳಲ್ಲಿ ಇದ್ದುಬಿಟ್ಟರು.7 ದಾನ್ ಕುಲದವರೇ, ನೀವೇಕೆ ನಿಮ್ಮ ಹಡಗುಗಳಲ್ಲಿಯೇ ಉಳಿದುಬಿಟ್ಟಿರಿ? ಆಶೇರ್ ಕುಲದವರು ಸಮುದ್ರತೀರದಲ್ಲಿ ಉಳಿದರು; ಅವರು ಸುರಕ್ಷಿತವಾದ ರೇವುಗಳಲ್ಲಿ ಬೀಡುಬಿಟ್ಟರು.
|
19. ಕಾನಾನ್ಯ ಅರಸರು ಬಂದು ಯುದ್ಧಮಾಡಿದರು; ಅವರು ಮೆಗಿದ್ದೋ ಪ್ರವಾಹಗಳ ಬಳಿಯಲ್ಲಿರುವ ತಾನಾಕದಲ್ಲಿ ಹೋರಾಡಿದರು. ಆದರೆ ಅವರು ಯಾವ ಸಂಪತ್ತನ್ನು ತೆಗೆದುಕೊಂಡು ಹೋಗಲಿಲ್ಲ!
|
21. ಪೂರ್ವಕಾಲದಿಂದ ಪ್ರಸಿದ್ಧವಾದ ಕೀಷೋನ್ ನದಿಯು ಸೀಸೆರನ ಜನರನ್ನು ಕೊಚ್ಚಿಕೊಂಡು ಹೋಯಿತು. ನನ್ನ ಆತ್ಮವೇ, ಧೈರ್ಯದಿಂದ ಮುನ್ನುಗ್ಗು!
|
23. “ಮೇರೋಜ್ ಊರಿಗೆ ಶಾಪಹಾಕಿರಿ; ಅಲ್ಲಿಯ ಜನರಿಗೆ ಶಾಪಹಾಕಿರಿ; ಏಕೆಂದರೆ ಅವರು ಯೆಹೋವನ ಸಹಾಯಕ್ಕೆ ತಮ್ಮ ಸೈನ್ಯದೊಂದಿಗೆ ಬರಲಿಲ್ಲ” ಎಂದನು ಯೆಹೋವನ ದೂತನು.
|
25. ಸೀಸೆರನು ನೀರು ಕೇಳಿದನು; ಯಾಯೇಲಳು ಅವನಿಗೆ ಹಾಲು ಕೊಟ್ಟಳು. ಅರಸನಿಗೆ ಯೋಗ್ಯವಾದ ಬಟ್ಟಲಲ್ಲಿ ಅವಳು ಅವನಿಗೆ ಕೆನೆಯನ್ನು ತಂದಳು.
|
26. ನಂತರ ಯಾಯೇಲಳು ಕೈಚಾಚಿ ಗುಡಾರದ ಗೂಟವನ್ನು ತೆಗೆದುಕೊಂಡಳು. ಅವಳು ಬಲಗೈಯನ್ನು ಚಾಚಿ ದೊಡ್ಡ ಕೊಡತಿಯನ್ನು ತೆಗೆದುಕೊಂಡಳು, ಆ ಕೊಡತಿಯಿಂದ ಸೀಸೆರನ ತಲೆಯನ್ನು ಬಿರುಸಾಗಿ ಒಡೆದು ಬಿಟ್ಟಳು; ಅವನ ಕಣತಲೆಗೆ ತಿವಿದು ಬಡಿದಳು.
|
27. ಅವನು ಯಾಯೇಲಳ ಪಾದಗಳ ಬಳಿಯಲ್ಲಿ ಬಗ್ಗಿಕೊಂಡು ಉರುಳಿ ಬಿದ್ದನು; ಅವನು ಅವಳ ಪಾದಗಳ ಬಳಿಯಲ್ಲಿ ಕುಸಿದು ಬಿದ್ದನು. ಸೀಸೆರನು ಕುಸಿದು ಬಿದ್ದಲ್ಲಿಯೇ ಸತ್ತನು.
|
28. ಸೀಸೆರನ ತಾಯಿ ಕಿಟಿಕಿಯ ಮೂಲಕ ನೋಡಿದಳು; ಆಕೆಯು ತೆರೆಯ ಮೂಲಕ ನೋಡಿ ಕೂಗಿದಳು. ‘ಸೀಸೆರನ ರಥಾಗಮನಕ್ಕೆ ಇಷ್ಟು ತಡವೇಕೆ? ಅವನ ರಥದ ಕುದುರೆಗಳ ಧ್ವನಿ ಬರಲು ಇಷ್ಟು ತಡವೇಕೆ?’ ಅಂದಳು.
|
30. ‘ಖಂಡಿತವಾಗಿ ಅವರು ಗೆದ್ದಿದ್ದಾರೆ, ತಾವು ಸೋಲಿಸಿದ ಜನರಿಂದ ವಸ್ತುಗಳನ್ನು ಪಡೆಯುತ್ತಿದ್ದಾರೆ! ಆ ವಸ್ತುಗಳನ್ನು ತಮ್ಮಲ್ಲಿಯೇ ಹಂಚಿಕೊಳ್ಳುತ್ತಿದ್ದಾರೆ! ಪ್ರತಿಯೊಬ್ಬ ಸೈನಿಕನು ಒಬ್ಬಿಬ್ಬರು ಹುಡುಗಿಯರನ್ನು ತೆಗೆದುಕೊಳ್ಳುತ್ತಿರಬೇಕು. ಸೀಸೆರನು ವರ್ಣರಂಜಿತ ಬಟ್ಟೆಯನ್ನು ತೆಗೆದುಕೊಳ್ಳುತ್ತಿರಬಹುದು. ಹೌದು! ವಿಜಯಿ ಸೀಸೆರನು ಧರಿಸಲು ಬಣ್ಣಬಣ್ಣದ ಒಂದು ಬಟ್ಟೆಯನ್ನು ತೆಗೆದುಕೊಳ್ಳುತ್ತಿರಬಹುದು; ಅಥವಾ ಎರಡು ಬಟ್ಟೆಗಳನ್ನು ತೆಗೆದುಕೊಳ್ಳುತ್ತಿರಬಹುದು.’
|
31. ಯೆಹೋವನೇ, ನಿನ್ನ ವೈರಿಗಳೆಲ್ಲಾ ಹೀಗೇ ಸಾಯಲಿ; ಆದರೆ ನಿನ್ನನ್ನು ಪ್ರೀತಿಸುವವರೆಲ್ಲರೂ ಬಲವಾಗಿದ್ದು ಉದಯಿಸುವ ಸೂರ್ಯನಂತೆ ಬೆಳಗಲಿ! ನಲವತ್ತು ವರುಷಗಳವರೆಗೆ ದೇಶದಲ್ಲಿ ಶಾಂತಿ ನೆಲೆಸಿತ್ತು.
|