ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ನ್ಯಾಯಸ್ಥಾಪಕರು
1. {ಅಬೀಮೆಲೆಕನು ಅರಸನಾದನು} [PS] ಅಬೀಮೆಲೆಕನು ಯೆರುಬ್ಬಾಳನ (ಗಿದ್ಯೋನನ) ಮಗನು. ಅಬೀಮೆಲೆಕನು ಶೆಕೆಮಿನಲ್ಲಿದ್ದ ತನ್ನ ಸೋದರ ಮಾವಂದಿರಲ್ಲಿಗೆ ಹೋದನು. ಅವನು ತನ್ನ ಸೋದರ ಮಾವಂದಿರಿಗೂ ತನ್ನ ತಾಯಿಯ ಕುಟುಂಬದವರೆಲ್ಲರಿಗೂ ಮತ್ತು
2. ಶೆಕೆಮಿನ ಹಿರಿಯರಿಗೆ, “ ‘ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳುವುದು ಒಳ್ಳೆಯದೋ ಅಥವಾ ನಾನೊಬ್ಬನೇ ನಿಮ್ಮನ್ನು ಆಳುವುದು ಒಳ್ಳೆಯದೋ’ ಎಂಬ ಪ್ರಶ್ನೆಯನ್ನು ಕೇಳಿದ್ದಲ್ಲದೆ ನಾನು ನಿಮ್ಮ ರಕ್ತಸಂಬಂಧಿ ಎಂಬುದನ್ನು ನೆನಪಿಡಿ” ಎಂದು ಹೇಳಿದನು. [PE][PS]
3. ಅಬೀಮೆಲೆಕನ ಸೋದರ ಮಾವಂದಿರು ಶೆಕೆಮಿನ ಹಿರಿಯರ ಜೊತೆ ಮಾತನಾಡಿ ಅವರಿಗೆ ಆ ಪ್ರಶ್ನೆಯನ್ನು ಕೇಳಿದರು. ಶೆಕೆಮಿನ ಹಿರಿಯರು ಅಬೀಮೆಲೆಕನ ಪಕ್ಷವಹಿಸಲು ನಿರ್ಧರಿಸಿದರು. ಆ ಹಿರಿಯರು, “ಎಷ್ಟೇ ಆದರೂ ಅವನು ನಮ್ಮ ಸಹೋದರ” ಎಂದರು.
4. ಶೆಕೆಮಿನ ಹಿರಿಯರು ಅಬೀಮೆಲೆಕನಿಗೆ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ಕೊಟ್ಟರು. ಆ ಬೆಳ್ಳಿಯು ಬಾಳ್‌ಬೆರೀತನ ಗುಡಿಗೆ ಸೇರಿತ್ತು. ಕೆಲವು ಗಂಡಸರನ್ನು ಕೂಲಿಗೆ ತೆಗೆದುಕೊಳ್ಳಲು ಅವನು ಈ ಬೆಳ್ಳಿಯನ್ನು ಬಳಸಿಕೊಂಡನು. ಈ ಗಂಡಸರು ಅಯೋಗ್ಯರೂ ದುಷ್ಟರೂ ಆಗಿದ್ದರು. ಅವರು ಅಬೀಮೆಲೆಕನ ಹಿಂಬಾಲಕರಾಗಿದ್ದರು. [PE][PS]
5. ಅಬೀಮೆಲೆಕನು ಒಫ್ರದಲ್ಲಿದ್ದ ತನ್ನ ತಂದೆಯ ಮನೆಗೆ ಹೋದನು. ಅಬೀಮೆಲೆಕನು ತನ್ನ ಸಹೋದರರ ಕೊಲೆ ಮಾಡಿದನು. ಅಬೀಮೆಲೆಕನು ತನ್ನ ತಂದೆಯಾದ ಯೆರುಬ್ಬಾಳನ ಎಪ್ಪತ್ತು ಮಕ್ಕಳನ್ನು ಕೊಂದನು. ಅವನು ಅವರೆಲ್ಲರನ್ನು ಏಕಕಾಲದಲ್ಲಿ ಕೊಂದನು. ಆದರೆ ಯೆರುಬ್ಬಾಳನ ಕಿರಿಯ ಮಗನು ಅಡಗಿಕೊಂಡಿದ್ದು ತಪ್ಪಿಸಿಕೊಂಡನು. ಆ ಕಿರಿಯ ಮಗನ ಹೆಸರು ಯೋತಾವು. [PE][PS]
6. ತರುವಾಯ ಶೆಕೆಮಿನ ಎಲ್ಲ ಹಿರಿಯರೂ ಮಿಲ್ಲೋ ಕೋಟೆಯವರೂ ಒಂದೆಡೆ ಬಂದರು. ಅವರೆಲ್ಲರೂ ಶೆಕೆಮಿನಲ್ಲಿದ್ದ ಜ್ಞಾಪಕಸ್ತಂಭದ ಬಳಿ ಇರುವ ದೊಡ್ಡ ಮರದ ಕೆಳಗೆ ಸೇರಿ ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿದರು. [PS]
7. {ಯೋತಾವುನ ಕಥೆ} [PS] ಶೆಕೆಮಿನ ಹಿರಿಯರು ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ ಸಮಾಚಾರವನ್ನು ಯೋತಾವುನು ಕೇಳಿದನು. ಕೂಡಲೇ ಅವನು ಹೋಗಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತುಕೊಂಡನು. ಯೋತಾವುನು ಜನರಿಗೆ ಈ ಕಥೆಯನ್ನು ಕೂಗಿಕೂಗಿ ಹೇಳಿದನು: “ಶೆಕೆಮಿನ ಹಿರಿಯರೇ, ನನ್ನ ಮಾತನ್ನು ಕೇಳಿರಿ; ಆಗ ಯೆಹೋವನು ನಿಮ್ಮ ಮಾತನ್ನು ಕೇಳುವನು.
8. “ಒಮ್ಮೆ ಮರಗಳು ತಮ್ಮನ್ನು ಆಳುವುದಕ್ಕೆ ಒಬ್ಬ ಅರಸನನ್ನು ಆರಿಸಬೇಕೆಂದು ನಿರ್ಧರಿಸಿದವು. ಆ ಮರಗಳು ಆಲಿವ್ ಮರಕ್ಕೆ, ‘ನೀನು ನಮ್ಮ ಅರಸನಾಗಿ ಆಳು’ ಎಂದು ಕೇಳಿಕೊಂಡವು.
9. “ಆದರೆ ಆಲಿವ್ ಮರವು, ‘ಜನರು ಮತ್ತು ದೇವತೆಗಳು ನನ್ನ ಎಣ್ಣೆಗಾಗಿ ನನ್ನನ್ನು ತುಂಬ ಹೊಗಳುತ್ತಾರೆ; ಬೇರೆ ಮರಗಳ ಮೇಲೆ ಆಳುವುದಕ್ಕಾಗಿ ನಾನು ಎಣ್ಣೆ ಮಾಡುವುದನ್ನು ಬಿಡಬೇಕೇ?’ ಎಂದು ಕೇಳಿತು.
10. “ಆಗ ಆ ಮರಗಳು ಅಂಜೂರದ ಮರದ ಬಳಿಗೆ ಹೋಗಿ, ‘ನೀನು ಬಂದು ನಮ್ಮ ಅರಸನಾಗು’ ಎಂದು ಕೇಳಿದವು.
11. “ಆದರೆ ಅಂಜೂರದ ಮರವು, ‘ನಾನು ಕೇವಲ ಬೇರೆ ಮರಗಳ ಮೇಲೆ ಆಳ್ವಿಕೆ ಮಾಡುವುದಕ್ಕಾಗಿ ಉತ್ತಮವಾದ ಮತ್ತು ರುಚಿಕರವಾದ ಹಣ್ಣುಗಳು ಫಲಿಸುವುದನ್ನು ನಿಲ್ಲಿಸಬೇಕೇ?’ ಎಂದು ಕೇಳಿತು.
12. “ಅನಂತರ ಅವು ದ್ರಾಕ್ಷಾಲತೆಯ ಬಳಿಗೆ ಹೋಗಿ, ‘ನೀನು ಬಂದು ನಮ್ಮ ಅರಸನಾಗು’ ಎಂದವು.
13. “ಆದರೆ ದ್ರಾಕ್ಷಾಲತೆಯು, ‘ನನ್ನ ರಸವು ಎಲ್ಲ ಜನರಿಗೂ ಮತ್ತು ರಾಜರುಗಳಿಗೂ ಸಂತೋಷವನ್ನು ಉಂಟುಮಾಡುತ್ತದೆ. ಕೇವಲ ಬೇರೆ ಮರಗಳ ಮೇಲೆ ಅಧಿಕಾರ ನಡೆಸುವುದಕ್ಕಾಗಿ ನಾನು ನನ್ನ ರಸ ಕೊಡುವುದನ್ನು ನಿಲ್ಲಿಸಬೇಕೇ?’ ಎಂದು ಕೇಳಿತು.
14. “ಕೊನೆಗೆ ಎಲ್ಲ ಮರಗಳು ಮುಳ್ಳುಪೊದೆಗೆ, ‘ನೀನು ಬಂದು ನಮ್ಮ ಅರಸನಾಗು’ ಎಂದು ಕೇಳಿದವು.
15. “ಆ ಮುಳ್ಳುಪೊದೆಯು, ‘ನೀವು ನಿಜವಾಗಿಯೂ ನನ್ನನ್ನು ನಿಮ್ಮ ಅರಸನನ್ನಾಗಿ ಮಾಡಬೇಕೆಂದು ಇಚ್ಛೆಪಟ್ಟರೆ, ನೀವು ಬಂದು ನನ್ನ ನೆರಳಿನಲ್ಲಿ ಆಶ್ರಯಪಡೆಯಿರಿ; ನೀವು ಹೀಗೆ ಮಾಡಲು ಒಪ್ಪದಿದ್ದರೆ ನನ್ನಿಂದ ಬೆಂಕಿ ಹೊರಡಲಿ. ಆ ಬೆಂಕಿಯು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡಲಿ’ ಎಂದಿತು. [PS]
16. “ನೀವು ಅಬೀಮೆಲೆಕನನ್ನು ಅರಸನನ್ನಾಗಿ ಮಾಡುವಾಗ ಪ್ರಾಮಾಣಿಕರಾಗಿದ್ದರೆ, ಅವನ ಸಂಗಡ ಸಂತೋಷದಿಂದಿರಿ. ನೀವು ಯೆರುಬ್ಬಾಳ ಮತ್ತು ಅವನ ಕುಟುಂಬದವರೊಡನೆ ನ್ಯಾಯದಿಂದ ನಡೆದುಕೊಂಡಿದ್ದರೆ ಒಳ್ಳೆಯದೇ ಸರಿ. ನೀವು ಯೆರುಬ್ಬಾಳನಿಗೋಸ್ಕರ ಏನು ಮಾಡಬೇಕಿತ್ತೋ ಅದನ್ನು ಮಾಡಿದ್ದರೆ ಒಳ್ಳೆಯದು.
17. ಆದರೆ ನಿಮಗೆ ನಮ್ಮ ತಂದೆಯು ಏನು ಮಾಡಿದನೆಂಬುದನ್ನು ಯೋಚಿಸಿರಿ. ನಮ್ಮ ತಂದೆಯು ನಿಮಗೋಸ್ಕರ ಯುದ್ಧ ಮಾಡಿದನು. ಅವನು ಮಿದ್ಯಾನ್ಯರಿಂದ ನಿಮ್ಮನ್ನು ರಕ್ಷಿಸಲು ತನ್ನ ಜೀವವನ್ನು ಅಪಾಯಕ್ಕೆ ಒಡ್ಡಿದನು.
18. ಆದರೆ ನೀವು ಈಗ ನಮ್ಮ ತಂದೆಯ ಕುಟುಂಬದವರನ್ನು ವಿರೋಧಿಸುತ್ತಿದ್ದೀರಿ. ನೀವು ನಮ್ಮ ತಂದೆಯ ಎಪ್ಪತ್ತು ಮಕ್ಕಳನ್ನು ಏಕಕಾಲದಲ್ಲಿ ಕೊಲೆಮಾಡಿದ್ದೀರಿ. ನೀವು ಅಬೀಮೆಲೆಕನನ್ನು ಶೆಕೆಮಿನ ಅರಸನನ್ನಾಗಿ ಮಾಡಿದ್ದೀರಿ. ಅವನು ನಿಮ್ಮ ರಕ್ತ ಸಂಬಂಧಿ ಎಂಬ ಕಾರಣದಿಂದ ಅವನನ್ನು ಅರಸನನ್ನಾಗಿ ಮಾಡಿದ್ದೀರಿ. ಆದರೆ ಅವನು ಕೇವಲ ನಮ್ಮ ತಂದೆಯ ದಾಸಿ ಪುತ್ರ.
19. ನೀವು ಇಂದು ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ ಧರ್ಮವೂ ಆಗಿದ್ದರೆ ನೀವು ಅಬೀಮೆಲೆಕನನ್ನು ನಿಮ್ಮ ಅರಸನೆಂದು ಒಪ್ಪಿ ಸಂತೋಷದಿಂದ ಇದ್ದುಬಿಡಿ. ಅವನೂ ನಿಮ್ಮ ಜೊತೆ ಸಂತೋಷದಿಂದ ಇರಲಿ.
20. ಆದರೆ ನೀವು ಮಾಡಿದ್ದು ಸರಿಯಾಗಿರದ ಪಕ್ಷದಲ್ಲಿ ಶೆಕೆಮಿನ ಹಿರಿಯರಾದ ನಿಮ್ಮನ್ನೂ ಮಿಲ್ಲೋ ಕೋಟೆಯವರನ್ನೂ ಅಬೀಮೆಲೆಕನು ನಾಶಮಾಡಲಿ. ಅಬೀಮೆಲೆಕನು ಕೂಡ ನಾಶಹೊಂದಲಿ” ಎಂದನು. [PE][PS]
21. ಇದನ್ನೆಲ್ಲಾ ಹೇಳಿ ಯೋತಾವುನು ಬೇರ ಎಂಬ ನಗರಕ್ಕೆ ಓಡಿಹೋದನು. ಯೋತಾವುನು ತನ್ನ ಸಹೋದರನಾದ ಅಬೀಮೆಲೆಕನಿಗೆ ಹೆದರಿ ಅದೇ ನಗರದಲ್ಲಿ ಉಳಿದುಕೊಂಡನು. [PS]
22. {ಶೆಕೆಮಿನ ಜನರ ವಿರುದ್ಧ ಅಬೀಮೆಲೆಕನ ಯುದ್ಧ} [PS] ಅಬೀಮೆಲೆಕನು ಇಸ್ರೇಲರನ್ನು ಮೂರು ವರ್ಷ ಆಳಿದನು.
23. (23-24) ಅಬೀಮೆಲೆಕನು ಯೆರುಬ್ಬಾಳನ ಎಪ್ಪತ್ತು ಮಕ್ಕಳನ್ನು ಕೊಂದಿದ್ದನು. ಅವರು ಅವನ ಸ್ವಂತ ಸಹೋದರರಾಗಿದ್ದರು. ಶೆಕೆಮಿನ ಹಿರಿಯರು ಈ ದುಷ್ಕೃತ್ಯದಲ್ಲಿ ಅವನಿಗೆ ಬೆಂಬಲ ಕೊಟ್ಟಿದ್ದರು. ಆದ್ದರಿಂದ ಯೆಹೋವನು ಅಬೀಮೆಲೆಕನ ಮತ್ತು ಶೆಕೆಮಿನ ಹಿರಿಯರ ಮಧ್ಯೆ ಮನಸ್ತಾಪ ಹುಟ್ಟುವಂತೆ ಮಾಡಿದನು. ಶೆಕೆಮಿನ ಹಿರಿಯರು ಅಬೀಮೆಲೆಕನಿಗೆ ಕಷ್ಟ ಕೊಡಲು ಯೋಚಿಸುತ್ತಿದ್ದರು.
24.
25. ಶೆಕೆಮಿನ ಹಿರಿಯರಿಗೆ ಅಬೀಮೆಲೆಕನ ಮೇಲಿದ್ದ ಅಭಿಮಾನ ಇಲ್ಲವಾಯಿತು. ಅವರು ಅಲ್ಲಿ ಸಂಚರಿಸುವ ಜನರ ಮೇಲೆ ಧಾಳಿ ಮಾಡಿ ಲೂಟಿಮಾಡಲು ಬೆಟ್ಟಗಳ ಮೇಲೆ ಜನರನ್ನು ಇಟ್ಟರು. ಅಬೀಮೆಲೆಕನಿಗೆ ಈ ಧಾಳಿಗಳ ವಿಷಯ ತಿಳಿದುಬಂತು. [PE][PS]
26. ಎಬೆದನ ಮಗನಾದ ಗಾಳನೆಂಬವನು ತನ್ನ ಸಹೋದರರ ಸಮೇತ ಶೆಕೆಮಿಗೆ ಬಂದನು. ಶೆಕೆಮಿನ ಹಿರಿಯರು ಗಾಳನನ್ನು ನಂಬಿ ಅವನನ್ನು ಅನುಸರಿಸಲು ನಿರ್ಧರಿಸಿದರು. [PE][PS]
27. ಶೆಕೆಮಿನ ಜನರು ದ್ರಾಕ್ಷಿಯನ್ನು ಕೊಯಿದುಕೊಂಡು ಬರಲು ತಮ್ಮ ಹೊಲಗಳಿಗೆ ಹೋದರು. ಆ ದ್ರಾಕ್ಷಿಯನ್ನು ಹಿಂಡಿ ದ್ರಾಕ್ಷಾರಸ ಮಾಡಿದರು. ಆಮೇಲೆ ತಮ್ಮ ದೇವರ ಮಂದಿರದಲ್ಲಿ ಒಂದು ಉತ್ಸವನ್ನು ಮಾಡಿದರು. ಆ ಜನರು ತಿಂದು ಕುಡಿದು, ಅಬೀಮೆಲೆಕನ ಬಗ್ಗೆ ಕೆಟ್ಟ ಮಾತುಗಳನ್ನು ಆಡಿದರು. [PE][PS]
28. ಆಗ ಎಬೆದನ ಮಗನಾದ ಗಾಳನು, “ನಾವು ಶೆಕೆಮಿನ ಜನರು. ನಾವು ಅಬೀಮೆಲೆಕನ ಆಜ್ಞೆಗಳನ್ನು ಏಕೆ ಪಾಲಿಸಬೇಕು? ಅವನು ತನ್ನನ್ನು ಯಾರೆಂದು ತಿಳಿದುಕೊಂಡಿದ್ದಾನೆ? ಅಬೀಮೆಲೆಕನು ಯೆರುಬ್ಬಾಳನ ಮಕ್ಕಳಲ್ಲಿ ಒಬ್ಬನು. ಅದು ಸರಿಯಲ್ಲವೇ? ಅಬೀಮೆಲೆಕನು ಜೆಬುಲನನ್ನು ತನ್ನ ಪುರಾಧಿಕಾರಿಯನ್ನಾಗಿ ನೇಮಿಸಿರುವುದೂ ನಿಜವಲ್ಲವೇ? ನಾವು ಅಬೀಮೆಲೆಕನ ಆಜ್ಞೆ ಪಾಲಿಸುವುದು ಬೇಡ. ನಾವು ನಮ್ಮ ಜನರಾದ ಹಮೋರನ ಸಂತತಿಯವರ ಆಜ್ಞೆಯನ್ನೇ ಪಾಲಿಸೋಣ. (ಹಮೋರನು ಶೆಕೆಮನ ತಂದೆ.)
29. ನೀವು ನನಗೆ ಈ ಜನರ ಅಧಿಕಾರಿಯನ್ನಾಗಿ ಮಾಡಿದರೆ, ನಾನು ಅಬೀಮೆಲೆಕನನ್ನು ನಾಶಮಾಡುತ್ತೇನೆ. ನಾನು ಅವನಿಗೆ, ‘ನಿನ್ನ ಸೈನ್ಯವನ್ನು ಸಿದ್ಧಪಡಿಸಿಕೊಂಡು ಯುದ್ಧಕ್ಕೆ ಬಾ’ ಎಂದು ಕರೆಯುತ್ತೇನೆ” ಎಂದನು. [PE][PS]
30. ಜೆಬುಲನು ಶೆಕೆಮ್ ನಗರದ ಪುರಾಧಿಕಾರಿಯಾಗಿದ್ದನು. ಎಬೆದನ ಮಗನಾದ ಗಾಳನ ಮಾತುಗಳನ್ನು ಜೆಬುಲನು ಕೇಳಿ ಬಹಳ ಕೋಪಗೊಂಡನು.
31. ಜೆಬುಲನು ಅರೂಮ ನಗರದಲ್ಲಿದ್ದ [*ಅರೂಮ ನಗರ ಅಥವಾ “ತೊರಮಾ” ಅಬೀಮೆಲೆಕನು ಅರಸ ನಾಗಿದ್ದ ನಗರ. ಶೆಕೆಮಿನ ದಕ್ಷಿಣಕ್ಕೆ 8 ಮೈಲಿ ಮೇಲೆ ಇದ್ದಿರಬಹುದು.] ಅಬೀಮೆಲೆಕನ ಬಳಿಗೆ ದೂತರನ್ನು ಕಳುಹಿಸಿದನು. ಅವನು ಕಳುಹಿಸಿದ ಸಂದೇಶ ಹೀಗಿದೆ: “ಎಬೆದನ ಮಗನಾದ ಗಾಳನು ಮತ್ತು ಅವನ ಸಹೋದರರು ಶೆಕೆಮ್ ನಗರಕ್ಕೆ ಬಂದಿದ್ದಾರೆ. ಅವರು ನಿನಗೆ ತೊಂದರೆಯನ್ನು ಉಂಟುಮಾಡುತ್ತಿದ್ದಾರೆ. ಗಾಳನು ಇಡೀ ನಗರವನ್ನು ನಿನ್ನ ವಿರುದ್ಧ ಎತ್ತಿಕಟ್ಟುತ್ತಿದ್ದಾನೆ.
32. ಅದಕ್ಕಾಗಿ ನೀನು ಮತ್ತು ನಿನ್ನ ಜನರು ಈ ರಾತ್ರಿ ಬಂದು ನಗರದ ಹೊರಗಡೆ ಹೊಲಗಳಲ್ಲಿ ಅಡಗಿಕೊಂಡಿರಬೇಕು.
33. ಬೆಳಗಾಗಿ ಸೂರ್ಯನು ಮೇಲೇರಿದ ತರುವಾಯ ನಗರದ ಮೇಲೆ ಧಾಳಿಮಾಡಬೇಕು. ಗಾಳ ಮತ್ತು ಅವನ ಜನರು ನಿನ್ನ ಸಂಗಡ ಯುದ್ಧ ಮಾಡುವುದಕ್ಕೆ ನಗರದಿಂದ ಹೊರಗೆ ಬರುತ್ತಾರೆ. ಅವರು ಹೊರಗೆ ಬಂದಾಗ ನಿನಗೆ ತೋರಿದಂತೆ ಅವರಿಗೆ ಮಾಡು.” [PS]
34. ಅಬೀಮೆಲೆಕ ಮತ್ತು ಅವನ ಸೈನಿಕರು ರಾತ್ರಿಯಲ್ಲಿ ಎದ್ದು ನಗರಕ್ಕೆ ಹೋದರು. ಆ ಸೈನಿಕರು ತಮ್ಮನ್ನು ನಾಲ್ಕು ಗುಂಪುಗಳನ್ನಾಗಿ ಮಾಡಿಕೊಂಡು ಶೆಕೆಮ್ ನಗರದ ಹತ್ತಿರ ಅಡಗಿಕೊಂಡರು.
35. ಎಬೆದನ ಮಗನಾದ ಗಾಳನು ಹೊರಗೆ ಹೋಗಿ ಶೆಕೆಮ್ ನಗರದ ಪ್ರವೇಶದ್ವಾರದಲ್ಲಿ ನಿಂತಿದ್ದನು. ಗಾಳನು ಅಲ್ಲಿ ನಿಂತಿದ್ದಾಗ ಅಬೀಮೆಲೆಕ ಮತ್ತು ಅವನ ಸೈನಿಕರು ತಾವು ಅಡಗಿದ್ದ ಸ್ಥಳಗಳನ್ನು ಬಿಟ್ಟು ಹೊರಗೆ ಬಂದರು. [PE][PS]
36. ಗಾಳನು ಸೈನಿಕರನ್ನು ನೋಡಿದನು. ಗಾಳನು ಜೆಬುಲನಿಗೆ, “ಅಲ್ಲಿ ನೋಡು, ಬೆಟ್ಟ ಇಳಿದು ಜನರು ಬರುತ್ತಿದ್ದಾರೆ” ಎಂದನು. [PE][PS] ಆದರೆ ಜೆಬುಲನು, “ನೀನು ಕೇವಲ ಬೆಟ್ಟದ ನೆರಳನ್ನು ನೋಡುತ್ತಿರುವೆ; ನೆರಳು ಜನರಂತೆ ಕಾಣಿಸುತ್ತಿದೆ” ಎಂದನು. [PE][PS]
37. ಆದರೆ ಪುನಃ ಗಾಳನು, “ಅಲ್ಲಿ ನೋಡು! ಕೆಲವು ಜನರು ಭೂಮಿಯ ಮಧ್ಯದಿಂದ ಬರುತ್ತಿದ್ದಾರೆ. ಅಲ್ಲಿ ಆ ಮಾಟಗಾರರ ಮರದ ಹತ್ತಿರ ಒಂದು ತಲೆಯನ್ನು ನೋಡಿದೆ” ಎಂದನು.
38. ಆಗ ಜೆಬುಲನು ಗಾಳನಿಗೆ, “ನೀನು ಈಗೇಕೆ ಬಡಾಯಿ ಕೊಚ್ಚುತ್ತಾ ಇಲ್ಲ? ‘ಅಬೀಮೆಲೆಕನು ಯಾರು? ನಾವು ಅವನ ಆಜ್ಞೆಯನ್ನು ಏಕೆ ಪಾಲಿಸಬೇಕು?’ ಎಂದು ನೀನು ಕೇಳಿದೆ. ನೀನು ಈ ಜನರನ್ನು ತಮಾಷೆಮಾಡಿದೆ. ಈಗ ಹೊರಗೆ ಹೋಗಿ ಅವರೊಂದಿಗೆ ಯುದ್ಧಮಾಡು” ಅಂದನು. [PE][PS]
39. ಅಬೀಮೆಲೆಕನೊಂದಿಗೆ ಯುದ್ಧಮಾಡಲು ಗಾಳನು ಶೆಕೆಮಿನ ಹಿರಿಯರನ್ನು ನಗರದ ಹೊರಗಡೆ ಕರೆದುಕೊಂಡು ಹೋದನು.
40. ಅಬೀಮೆಲೆಕನು ಮತ್ತು ಅವನ ಜನರು ಗಾಳ ಮತ್ತು ಅವನ ಜನರನ್ನು ಬೆನ್ನಟ್ಟಿದರು. ಗಾಳನ ಜನರು ಹಿಂದಿರುಗಿ ಶೆಕೆಮ್ ನಗರದ ದ್ವಾರದ ಕಡೆಗೆ ಓಡಿದರು. ದ್ವಾರಕ್ಕೆ ಮುಟ್ಟುವ ಮೊದಲೇ ಗಾಳನ ಹಲವಾರು ಜನ ಹತರಾದರು. [PE][PS]
41. ಅನಂತರ ಅಬೀಮೆಲೆಕನು ಅರೂಮ ನಗರಕ್ಕೆ ಹಿಂದಿರುಗಿದನು. ಜೆಬುಲನು ಗಾಳನನ್ನು ಮತ್ತು ಅವನ ಸಹೋದರರನ್ನು ಶೆಕೆಮ್ ನಗರದಿಂದ ಓಡಿಸಿಬಿಟ್ಟನು. [PE][PS]
42. ಮರುದಿನ ಶೆಕೆಮಿನ ಜನರು ಹೊಲಗಳಲ್ಲಿ ಕೆಲಸ ಮಾಡಲು ಹೋದರು. ಅಬೀಮೆಲೆಕನಿಗೆ ಅದು ಗೊತ್ತಾಯಿತು.
43. ಅಬೀಮೆಲೆಕನು ತನ್ನ ಸೈನ್ಯವನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಅವನು ಶೆಕೆಮಿನ ಜನರ ಮೇಲೆ ಹಠಾತ್ತನೆ ಧಾಳಿ ಮಾಡಬಯಸಿದ್ದನು. ಆದ್ದರಿಂದ ಅವನು ತನ್ನ ಜನರನ್ನು ಹೊಲಗಳಲ್ಲಿ ಅಡಗಿಸಿಟ್ಟನು. ನಗರದಿಂದ ಜನರು ಹೊರಗೆ ಬರುವುದನ್ನು ನೋಡಿದ ತಕ್ಷಣ ಅವನು ನೆಗೆದೆದ್ದು ಅವರ ಮೇಲೆ ಧಾಳಿಮಾಡಿದನು.
44. ಅಬೀಮೆಲೆಕ ಮತ್ತು ಅವನ ಗುಂಪಿನವರು ಓಡಿಕೊಂಡು ಶೆಕೆಮ್ ನಗರದ ಬಾಗಿಲಿನ ಹತ್ತಿರ ಒಂದು ಸ್ಥಳಕ್ಕೆ ಬಂದರು. ಉಳಿದ ಎರಡು ಗುಂಪಿನವರು ಹೊಲಗಳಲ್ಲಿದ್ದ ಜನರ ಕಡೆಗೆ ಓಡಿಹೋಗಿ ಅವರನ್ನು ಕೊಂದುಹಾಕಿದರು.
45. ಆ ಇಡೀ ದಿವಸ ಅಬೀಮೆಲೆಕ ಮತ್ತು ಅವನ ಜನರು ಶೆಕೆಮಿನ ಜನರೊಂದಿಗೆ ಯುದ್ಧ ಮಾಡಿದರು. ಅಬೀಮೆಲೆಕ ಮತ್ತು ಅವನ ಜನರು ಶೆಕೆಮ್ ನಗರವನ್ನು ಸ್ವಾಧೀನಪಡಿಸಿಕೊಂಡರು; ಆ ನಗರದ ಜನರನ್ನು ಕೊಂದುಹಾಕಿದರು. ಅಬೀಮೆಲೆಕನು ಊರನ್ನು ಕೆಡವಿ ಹಾಕಿ ಉಪ್ಪನ್ನು ಚೆಲ್ಲಿದನು. [PE][PS]
46. ಶೆಕೆಮಿನ ಬುರುಜಿನ ಮೇಲೆ ಕೆಲವು ಜನರು ವಾಸಮಾಡುತ್ತಿದ್ದರು. ಶೆಕೆಮಿನಲ್ಲಿ ನಡೆದ ಘಟನೆಯ ಬಗ್ಗೆ ಕೇಳಿ ಅವರು ಏಲ್‌ಬೆರೀತ್ ದೇವರಗುಡಿಯ ಅತಿ ಸುರಕ್ಷಿತವಾದ ಕೋಣೆಯಲ್ಲಿ ಒಟ್ಟುಗೂಡಿದರು. [PE][PS]
47. ಶೆಕೆಮ್ ಬುರುಜಿನ ಎಲ್ಲ ಹಿರಿಯರು ಒಟ್ಟಿಗೆ ಸೇರಿದ್ದಾರೆ ಎಂಬ ಸಂಗತಿಯನ್ನು ಅಬೀಮೆಲೆಕನು ಕೇಳಿದನು.
48. ಆದ್ದರಿಂದ ಅಬೀಮೆಲೆಕ ಮತ್ತು ಅವನ ಜನರು ಚಲ್ಮೋನ್ ಬೆಟ್ಟವನ್ನು ಹತ್ತಿಹೋದರು. ಅಬೀಮೆಲೆಕನು ಒಂದು ಕೊಡಲಿಯನ್ನು ತೆಗೆದುಕೊಂಡು ಕೆಲವು ಕೊಂಬೆಗಳನ್ನು ಕಡಿದನು. ಅವನು ಆ ಕೊಂಬೆಗಳನ್ನು ಹೊತ್ತುಕೊಂಡು ಹೊರಟನು. ಅಬೀಮೆಲೆಕನು ತನ್ನ ಸಂಗಡಿಗರಿಗೆ, “ನಾನು ಮಾಡಿದಂತೆಯೇ ನೀವು ಬೇಗನೆ ಮಾಡಿರಿ” ಎಂದನು.
49. ಆದ್ದರಿಂದ ಅವರೆಲ್ಲರೂ ಕೊಂಬೆಗಳನ್ನು ಕಡಿದುಕೊಂಡು ಅವನನ್ನು ಹಿಂಬಾಲಿಸಿದರು. ಅವರು ಏಲ್‌ಬೆರೀತ್ ದೇವರಗುಡಿಯ ಅತೀ ಸುರಕ್ಷಿತವಾದ ಕೋಣೆಯ ಸುತ್ತಲೂ ಆ ಕೊಂಬೆಗಳನ್ನು ಇಟ್ಟರು. ತರುವಾಯ ಆ ಕೊಂಬೆಗಳಿಗೆ ಬೆಂಕಿ ಹಚ್ಚಿ ಆ ಕೋಣೆಯಲ್ಲಿದ್ದ ಎಲ್ಲರನ್ನು ಸುಟ್ಟುಬಿಟ್ಟರು. ಶೆಕೆಮಿನ ಬುರುಜಿನಲ್ಲಿದ್ದ ಒಂದು ಸಾವಿರ ಗಂಡಸರು ಮತ್ತು ಹೆಂಗಸರು ಸತ್ತುಹೋದರು. [PS]
50. {ಅಬೀಮೆಲೆಕನ ಮರಣ} [PS] ಅನಂತರ ಅಬೀಮೆಲೆಕನು ಮತ್ತು ಅವನ ಜನರು ತೇಬೇಚ ನಗರಕ್ಕೆ ಹೋಗಿ ಅದನ್ನು ಸ್ವಾಧೀನಪಡಿಸಿಕೊಂಡರು.
51. ಆದರೆ ಆ ನಗರದ ಒಳಭಾಗದಲ್ಲಿ ಒಂದು ಭದ್ರವಾದ ಗೋಪುರವಿತ್ತು. ಆ ನಗರದ ಎಲ್ಲ ಹಿರಿಯರು ಮತ್ತು ಉಳಿದ ಗಂಡಸರು ಮತ್ತು ಹೆಂಗಸರು ಅಲ್ಲಿಗೆ ಓಡಿಹೋದರು. ಅವರು ಗೋಪುರದೊಳಗೆ ಹೋಗಿ ಒಳಗಿನಿಂದ ಬೀಗ ಹಾಕಿಕೊಂಡರು; ಬಳಿಕ ಗೋಪುರದ ಮಾಳಿಗೆಯ ಮೇಲೆ ಹತ್ತಿದರು.
52. ಅಬೀಮೆಲೆಕನು ಮತ್ತು ಅವನ ಜನರು ಅದರ ಮೇಲೆ ಧಾಳಿಮಾಡಲು ಗೋಪುರದ ಬಳಿ ಬಂದರು. ಅಬೀಮೆಲೆಕನು ಆ ಗೋಪುರದ ಬಾಗಿಲಿನವರೆಗೆ ಹೋದನು. ಅವನು ಆ ಗೋಪುರವನ್ನು ಸುಡಬೇಕೆಂದಿದ್ದನು.
53. ಆದರೆ ಅಬೀಮೆಲೆಕನು ಆ ಗೋಪುರದ ಬಾಗಿಲಿನ ಹತ್ತಿರ ನಿಂತಿದ್ದಾಗ ಮಾಳಿಗೆಯ ಮೇಲಿದ್ದ ಒಬ್ಬ ಸ್ತ್ರೀಯು ಅವನ ತಲೆಯ ಮೇಲೆ ಒಂದು ಬೀಸುವ ಕಲ್ಲನ್ನು ಹಾಕಿದಳು. ಆ ಬೀಸುವ ಕಲ್ಲು ಅಬೀಮೆಲೆಕನ ತಲೆಬುರುಡೆಯನ್ನು ಒಡೆಯಿತು.
54. ಕೂಡಲೆ ಅಬೀಮೆಲೆಕನು ತನ್ನ ಆಯುಧವಾಹಕನಿಗೆ, “ನಿನ್ನ ಖಡ್ಗವನ್ನು ಹೊರತೆಗೆದು ನನ್ನನ್ನು ಕೊಂದುಬಿಡು. ‘ಒಬ್ಬ ಹೆಂಗಸು ಅಬೀಮೆಲೆಕನನ್ನು ಕೊಂದಳು’ ಎಂದು ಜನರು ಹೇಳಬಾರದು. ಅದಕ್ಕಾಗಿ ನೀನು ನನ್ನನ್ನು ಕೊಲ್ಲಬೇಕೆಂದು ನನ್ನ ಇಚ್ಛೆ” ಎಂದನು. ಆದ್ದರಿಂದ ಆ ಸೇವಕನು ಅಬೀಮೆಲೆಕನನ್ನು ತನ್ನ ಕತ್ತಿಯಿಂದ ಇರಿದನು; ಅಬೀಮೆಲೆಕನು ಸತ್ತನು.
55. ಅಬೀಮೆಲೆಕನು ಸತ್ತಿದ್ದನ್ನು ಇಸ್ರೇಲರು ನೋಡಿದರು. ಆದ್ದರಿಂದ ಅವರೆಲ್ಲರೂ ತಮ್ಮತಮ್ಮ ಸ್ಥಳಗಳಿಗೆ ಹಿಂದಿರುಗಿದರು. [PE][PS]
56. ಅಬೀಮೆಲೆಕನು ತನ್ನ ತಂದೆಗೆ ವಿರೋಧವಾಗಿ ಮಾಡಿದ್ದ ಎಲ್ಲ ದುಷ್ಕೃತ್ಯಗಳಿಗಾಗಿ ಅಂದರೆ ತನ್ನ ಎಪ್ಪತ್ತು ಮಂದಿ ಸಹೋದರರನ್ನು ಕೊಂದು ಹಾಕಿದ್ದರಿಂದ ದೇವರು ಅವನನ್ನು ಹೀಗೆ ದಂಡಿಸಿದನು.
57. ದೇವರು ಶೆಕೆಮ್ ನಗರದ ಜನರನ್ನೂ ಸಹ ಅವರು ಮಾಡಿದ ದುಷ್ಕೃತ್ಯಗಳಿಗಾಗಿ ದಂಡಿಸಿದನು. ಹೀಗೆ ಯೆರುಬ್ಬಾಳನ (ಗಿದ್ಯೋನ) ಕಿರಿಯ ಮಗನಾದ ಯೋತಾವುನು ನುಡಿದಂತೆಯೇ ಆಯಿತು. [PE]

ಟಿಪ್ಪಣಿಗಳು

No Verse Added

ಒಟ್ಟು 21 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 9 / 21
1 2 3 4 5 6 7 8 9 10 11 12 13 14 15 16 17
ನ್ಯಾಯಸ್ಥಾಪಕರು 9:43
ಅಬೀಮೆಲೆಕನು ಅರಸನಾದನು 1 ಅಬೀಮೆಲೆಕನು ಯೆರುಬ್ಬಾಳನ (ಗಿದ್ಯೋನನ) ಮಗನು. ಅಬೀಮೆಲೆಕನು ಶೆಕೆಮಿನಲ್ಲಿದ್ದ ತನ್ನ ಸೋದರ ಮಾವಂದಿರಲ್ಲಿಗೆ ಹೋದನು. ಅವನು ತನ್ನ ಸೋದರ ಮಾವಂದಿರಿಗೂ ತನ್ನ ತಾಯಿಯ ಕುಟುಂಬದವರೆಲ್ಲರಿಗೂ ಮತ್ತು 2 ಶೆಕೆಮಿನ ಹಿರಿಯರಿಗೆ, “ ‘ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳುವುದು ಒಳ್ಳೆಯದೋ ಅಥವಾ ನಾನೊಬ್ಬನೇ ನಿಮ್ಮನ್ನು ಆಳುವುದು ಒಳ್ಳೆಯದೋ’ ಎಂಬ ಪ್ರಶ್ನೆಯನ್ನು ಕೇಳಿದ್ದಲ್ಲದೆ ನಾನು ನಿಮ್ಮ ರಕ್ತಸಂಬಂಧಿ ಎಂಬುದನ್ನು ನೆನಪಿಡಿ” ಎಂದು ಹೇಳಿದನು. 3 ಅಬೀಮೆಲೆಕನ ಸೋದರ ಮಾವಂದಿರು ಶೆಕೆಮಿನ ಹಿರಿಯರ ಜೊತೆ ಮಾತನಾಡಿ ಅವರಿಗೆ ಆ ಪ್ರಶ್ನೆಯನ್ನು ಕೇಳಿದರು. ಶೆಕೆಮಿನ ಹಿರಿಯರು ಅಬೀಮೆಲೆಕನ ಪಕ್ಷವಹಿಸಲು ನಿರ್ಧರಿಸಿದರು. ಆ ಹಿರಿಯರು, “ಎಷ್ಟೇ ಆದರೂ ಅವನು ನಮ್ಮ ಸಹೋದರ” ಎಂದರು. 4 ಶೆಕೆಮಿನ ಹಿರಿಯರು ಅಬೀಮೆಲೆಕನಿಗೆ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ಕೊಟ್ಟರು. ಆ ಬೆಳ್ಳಿಯು ಬಾಳ್‌ಬೆರೀತನ ಗುಡಿಗೆ ಸೇರಿತ್ತು. ಕೆಲವು ಗಂಡಸರನ್ನು ಕೂಲಿಗೆ ತೆಗೆದುಕೊಳ್ಳಲು ಅವನು ಈ ಬೆಳ್ಳಿಯನ್ನು ಬಳಸಿಕೊಂಡನು. ಈ ಗಂಡಸರು ಅಯೋಗ್ಯರೂ ದುಷ್ಟರೂ ಆಗಿದ್ದರು. ಅವರು ಅಬೀಮೆಲೆಕನ ಹಿಂಬಾಲಕರಾಗಿದ್ದರು. 5 ಅಬೀಮೆಲೆಕನು ಒಫ್ರದಲ್ಲಿದ್ದ ತನ್ನ ತಂದೆಯ ಮನೆಗೆ ಹೋದನು. ಅಬೀಮೆಲೆಕನು ತನ್ನ ಸಹೋದರರ ಕೊಲೆ ಮಾಡಿದನು. ಅಬೀಮೆಲೆಕನು ತನ್ನ ತಂದೆಯಾದ ಯೆರುಬ್ಬಾಳನ ಎಪ್ಪತ್ತು ಮಕ್ಕಳನ್ನು ಕೊಂದನು. ಅವನು ಅವರೆಲ್ಲರನ್ನು ಏಕಕಾಲದಲ್ಲಿ ಕೊಂದನು. ಆದರೆ ಯೆರುಬ್ಬಾಳನ ಕಿರಿಯ ಮಗನು ಅಡಗಿಕೊಂಡಿದ್ದು ತಪ್ಪಿಸಿಕೊಂಡನು. ಆ ಕಿರಿಯ ಮಗನ ಹೆಸರು ಯೋತಾವು. 6 ತರುವಾಯ ಶೆಕೆಮಿನ ಎಲ್ಲ ಹಿರಿಯರೂ ಮಿಲ್ಲೋ ಕೋಟೆಯವರೂ ಒಂದೆಡೆ ಬಂದರು. ಅವರೆಲ್ಲರೂ ಶೆಕೆಮಿನಲ್ಲಿದ್ದ ಜ್ಞಾಪಕಸ್ತಂಭದ ಬಳಿ ಇರುವ ದೊಡ್ಡ ಮರದ ಕೆಳಗೆ ಸೇರಿ ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿದರು. ಯೋತಾವುನ ಕಥೆ 7 ಶೆಕೆಮಿನ ಹಿರಿಯರು ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ ಸಮಾಚಾರವನ್ನು ಯೋತಾವುನು ಕೇಳಿದನು. ಕೂಡಲೇ ಅವನು ಹೋಗಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತುಕೊಂಡನು. ಯೋತಾವುನು ಜನರಿಗೆ ಈ ಕಥೆಯನ್ನು ಕೂಗಿಕೂಗಿ ಹೇಳಿದನು: “ಶೆಕೆಮಿನ ಹಿರಿಯರೇ, ನನ್ನ ಮಾತನ್ನು ಕೇಳಿರಿ; ಆಗ ಯೆಹೋವನು ನಿಮ್ಮ ಮಾತನ್ನು ಕೇಳುವನು. 8 “ಒಮ್ಮೆ ಮರಗಳು ತಮ್ಮನ್ನು ಆಳುವುದಕ್ಕೆ ಒಬ್ಬ ಅರಸನನ್ನು ಆರಿಸಬೇಕೆಂದು ನಿರ್ಧರಿಸಿದವು. ಆ ಮರಗಳು ಆಲಿವ್ ಮರಕ್ಕೆ, ‘ನೀನು ನಮ್ಮ ಅರಸನಾಗಿ ಆಳು’ ಎಂದು ಕೇಳಿಕೊಂಡವು. 9 “ಆದರೆ ಆಲಿವ್ ಮರವು, ‘ಜನರು ಮತ್ತು ದೇವತೆಗಳು ನನ್ನ ಎಣ್ಣೆಗಾಗಿ ನನ್ನನ್ನು ತುಂಬ ಹೊಗಳುತ್ತಾರೆ; ಬೇರೆ ಮರಗಳ ಮೇಲೆ ಆಳುವುದಕ್ಕಾಗಿ ನಾನು ಎಣ್ಣೆ ಮಾಡುವುದನ್ನು ಬಿಡಬೇಕೇ?’ ಎಂದು ಕೇಳಿತು. 10 “ಆಗ ಆ ಮರಗಳು ಅಂಜೂರದ ಮರದ ಬಳಿಗೆ ಹೋಗಿ, ‘ನೀನು ಬಂದು ನಮ್ಮ ಅರಸನಾಗು’ ಎಂದು ಕೇಳಿದವು. 11 “ಆದರೆ ಅಂಜೂರದ ಮರವು, ‘ನಾನು ಕೇವಲ ಬೇರೆ ಮರಗಳ ಮೇಲೆ ಆಳ್ವಿಕೆ ಮಾಡುವುದಕ್ಕಾಗಿ ಉತ್ತಮವಾದ ಮತ್ತು ರುಚಿಕರವಾದ ಹಣ್ಣುಗಳು ಫಲಿಸುವುದನ್ನು ನಿಲ್ಲಿಸಬೇಕೇ?’ ಎಂದು ಕೇಳಿತು. 12 “ಅನಂತರ ಅವು ದ್ರಾಕ್ಷಾಲತೆಯ ಬಳಿಗೆ ಹೋಗಿ, ‘ನೀನು ಬಂದು ನಮ್ಮ ಅರಸನಾಗು’ ಎಂದವು. 13 “ಆದರೆ ದ್ರಾಕ್ಷಾಲತೆಯು, ‘ನನ್ನ ರಸವು ಎಲ್ಲ ಜನರಿಗೂ ಮತ್ತು ರಾಜರುಗಳಿಗೂ ಸಂತೋಷವನ್ನು ಉಂಟುಮಾಡುತ್ತದೆ. ಕೇವಲ ಬೇರೆ ಮರಗಳ ಮೇಲೆ ಅಧಿಕಾರ ನಡೆಸುವುದಕ್ಕಾಗಿ ನಾನು ನನ್ನ ರಸ ಕೊಡುವುದನ್ನು ನಿಲ್ಲಿಸಬೇಕೇ?’ ಎಂದು ಕೇಳಿತು. 14 “ಕೊನೆಗೆ ಎಲ್ಲ ಮರಗಳು ಮುಳ್ಳುಪೊದೆಗೆ, ‘ನೀನು ಬಂದು ನಮ್ಮ ಅರಸನಾಗು’ ಎಂದು ಕೇಳಿದವು. 15 “ಆ ಮುಳ್ಳುಪೊದೆಯು, ‘ನೀವು ನಿಜವಾಗಿಯೂ ನನ್ನನ್ನು ನಿಮ್ಮ ಅರಸನನ್ನಾಗಿ ಮಾಡಬೇಕೆಂದು ಇಚ್ಛೆಪಟ್ಟರೆ, ನೀವು ಬಂದು ನನ್ನ ನೆರಳಿನಲ್ಲಿ ಆಶ್ರಯಪಡೆಯಿರಿ; ನೀವು ಹೀಗೆ ಮಾಡಲು ಒಪ್ಪದಿದ್ದರೆ ನನ್ನಿಂದ ಬೆಂಕಿ ಹೊರಡಲಿ. ಆ ಬೆಂಕಿಯು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡಲಿ’ ಎಂದಿತು. 16 “ನೀವು ಅಬೀಮೆಲೆಕನನ್ನು ಅರಸನನ್ನಾಗಿ ಮಾಡುವಾಗ ಪ್ರಾಮಾಣಿಕರಾಗಿದ್ದರೆ, ಅವನ ಸಂಗಡ ಸಂತೋಷದಿಂದಿರಿ. ನೀವು ಯೆರುಬ್ಬಾಳ ಮತ್ತು ಅವನ ಕುಟುಂಬದವರೊಡನೆ ನ್ಯಾಯದಿಂದ ನಡೆದುಕೊಂಡಿದ್ದರೆ ಒಳ್ಳೆಯದೇ ಸರಿ. ನೀವು ಯೆರುಬ್ಬಾಳನಿಗೋಸ್ಕರ ಏನು ಮಾಡಬೇಕಿತ್ತೋ ಅದನ್ನು ಮಾಡಿದ್ದರೆ ಒಳ್ಳೆಯದು. 17 ಆದರೆ ನಿಮಗೆ ನಮ್ಮ ತಂದೆಯು ಏನು ಮಾಡಿದನೆಂಬುದನ್ನು ಯೋಚಿಸಿರಿ. ನಮ್ಮ ತಂದೆಯು ನಿಮಗೋಸ್ಕರ ಯುದ್ಧ ಮಾಡಿದನು. ಅವನು ಮಿದ್ಯಾನ್ಯರಿಂದ ನಿಮ್ಮನ್ನು ರಕ್ಷಿಸಲು ತನ್ನ ಜೀವವನ್ನು ಅಪಾಯಕ್ಕೆ ಒಡ್ಡಿದನು. 18 ಆದರೆ ನೀವು ಈಗ ನಮ್ಮ ತಂದೆಯ ಕುಟುಂಬದವರನ್ನು ವಿರೋಧಿಸುತ್ತಿದ್ದೀರಿ. ನೀವು ನಮ್ಮ ತಂದೆಯ ಎಪ್ಪತ್ತು ಮಕ್ಕಳನ್ನು ಏಕಕಾಲದಲ್ಲಿ ಕೊಲೆಮಾಡಿದ್ದೀರಿ. ನೀವು ಅಬೀಮೆಲೆಕನನ್ನು ಶೆಕೆಮಿನ ಅರಸನನ್ನಾಗಿ ಮಾಡಿದ್ದೀರಿ. ಅವನು ನಿಮ್ಮ ರಕ್ತ ಸಂಬಂಧಿ ಎಂಬ ಕಾರಣದಿಂದ ಅವನನ್ನು ಅರಸನನ್ನಾಗಿ ಮಾಡಿದ್ದೀರಿ. ಆದರೆ ಅವನು ಕೇವಲ ನಮ್ಮ ತಂದೆಯ ದಾಸಿ ಪುತ್ರ. 19 ನೀವು ಇಂದು ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ ಧರ್ಮವೂ ಆಗಿದ್ದರೆ ನೀವು ಅಬೀಮೆಲೆಕನನ್ನು ನಿಮ್ಮ ಅರಸನೆಂದು ಒಪ್ಪಿ ಸಂತೋಷದಿಂದ ಇದ್ದುಬಿಡಿ. ಅವನೂ ನಿಮ್ಮ ಜೊತೆ ಸಂತೋಷದಿಂದ ಇರಲಿ. 20 ಆದರೆ ನೀವು ಮಾಡಿದ್ದು ಸರಿಯಾಗಿರದ ಪಕ್ಷದಲ್ಲಿ ಶೆಕೆಮಿನ ಹಿರಿಯರಾದ ನಿಮ್ಮನ್ನೂ ಮಿಲ್ಲೋ ಕೋಟೆಯವರನ್ನೂ ಅಬೀಮೆಲೆಕನು ನಾಶಮಾಡಲಿ. ಅಬೀಮೆಲೆಕನು ಕೂಡ ನಾಶಹೊಂದಲಿ” ಎಂದನು. 21 ಇದನ್ನೆಲ್ಲಾ ಹೇಳಿ ಯೋತಾವುನು ಬೇರ ಎಂಬ ನಗರಕ್ಕೆ ಓಡಿಹೋದನು. ಯೋತಾವುನು ತನ್ನ ಸಹೋದರನಾದ ಅಬೀಮೆಲೆಕನಿಗೆ ಹೆದರಿ ಅದೇ ನಗರದಲ್ಲಿ ಉಳಿದುಕೊಂಡನು. ಶೆಕೆಮಿನ ಜನರ ವಿರುದ್ಧ ಅಬೀಮೆಲೆಕನ ಯುದ್ಧ 22 ಅಬೀಮೆಲೆಕನು ಇಸ್ರೇಲರನ್ನು ಮೂರು ವರ್ಷ ಆಳಿದನು. 23 (23-24) ಅಬೀಮೆಲೆಕನು ಯೆರುಬ್ಬಾಳನ ಎಪ್ಪತ್ತು ಮಕ್ಕಳನ್ನು ಕೊಂದಿದ್ದನು. ಅವರು ಅವನ ಸ್ವಂತ ಸಹೋದರರಾಗಿದ್ದರು. ಶೆಕೆಮಿನ ಹಿರಿಯರು ಈ ದುಷ್ಕೃತ್ಯದಲ್ಲಿ ಅವನಿಗೆ ಬೆಂಬಲ ಕೊಟ್ಟಿದ್ದರು. ಆದ್ದರಿಂದ ಯೆಹೋವನು ಅಬೀಮೆಲೆಕನ ಮತ್ತು ಶೆಕೆಮಿನ ಹಿರಿಯರ ಮಧ್ಯೆ ಮನಸ್ತಾಪ ಹುಟ್ಟುವಂತೆ ಮಾಡಿದನು. ಶೆಕೆಮಿನ ಹಿರಿಯರು ಅಬೀಮೆಲೆಕನಿಗೆ ಕಷ್ಟ ಕೊಡಲು ಯೋಚಿಸುತ್ತಿದ್ದರು. 24 25 ಶೆಕೆಮಿನ ಹಿರಿಯರಿಗೆ ಅಬೀಮೆಲೆಕನ ಮೇಲಿದ್ದ ಅಭಿಮಾನ ಇಲ್ಲವಾಯಿತು. ಅವರು ಅಲ್ಲಿ ಸಂಚರಿಸುವ ಜನರ ಮೇಲೆ ಧಾಳಿ ಮಾಡಿ ಲೂಟಿಮಾಡಲು ಬೆಟ್ಟಗಳ ಮೇಲೆ ಜನರನ್ನು ಇಟ್ಟರು. ಅಬೀಮೆಲೆಕನಿಗೆ ಈ ಧಾಳಿಗಳ ವಿಷಯ ತಿಳಿದುಬಂತು. 26 ಎಬೆದನ ಮಗನಾದ ಗಾಳನೆಂಬವನು ತನ್ನ ಸಹೋದರರ ಸಮೇತ ಶೆಕೆಮಿಗೆ ಬಂದನು. ಶೆಕೆಮಿನ ಹಿರಿಯರು ಗಾಳನನ್ನು ನಂಬಿ ಅವನನ್ನು ಅನುಸರಿಸಲು ನಿರ್ಧರಿಸಿದರು. 27 ಶೆಕೆಮಿನ ಜನರು ದ್ರಾಕ್ಷಿಯನ್ನು ಕೊಯಿದುಕೊಂಡು ಬರಲು ತಮ್ಮ ಹೊಲಗಳಿಗೆ ಹೋದರು. ಆ ದ್ರಾಕ್ಷಿಯನ್ನು ಹಿಂಡಿ ದ್ರಾಕ್ಷಾರಸ ಮಾಡಿದರು. ಆಮೇಲೆ ತಮ್ಮ ದೇವರ ಮಂದಿರದಲ್ಲಿ ಒಂದು ಉತ್ಸವನ್ನು ಮಾಡಿದರು. ಆ ಜನರು ತಿಂದು ಕುಡಿದು, ಅಬೀಮೆಲೆಕನ ಬಗ್ಗೆ ಕೆಟ್ಟ ಮಾತುಗಳನ್ನು ಆಡಿದರು. 28 ಆಗ ಎಬೆದನ ಮಗನಾದ ಗಾಳನು, “ನಾವು ಶೆಕೆಮಿನ ಜನರು. ನಾವು ಅಬೀಮೆಲೆಕನ ಆಜ್ಞೆಗಳನ್ನು ಏಕೆ ಪಾಲಿಸಬೇಕು? ಅವನು ತನ್ನನ್ನು ಯಾರೆಂದು ತಿಳಿದುಕೊಂಡಿದ್ದಾನೆ? ಅಬೀಮೆಲೆಕನು ಯೆರುಬ್ಬಾಳನ ಮಕ್ಕಳಲ್ಲಿ ಒಬ್ಬನು. ಅದು ಸರಿಯಲ್ಲವೇ? ಅಬೀಮೆಲೆಕನು ಜೆಬುಲನನ್ನು ತನ್ನ ಪುರಾಧಿಕಾರಿಯನ್ನಾಗಿ ನೇಮಿಸಿರುವುದೂ ನಿಜವಲ್ಲವೇ? ನಾವು ಅಬೀಮೆಲೆಕನ ಆಜ್ಞೆ ಪಾಲಿಸುವುದು ಬೇಡ. ನಾವು ನಮ್ಮ ಜನರಾದ ಹಮೋರನ ಸಂತತಿಯವರ ಆಜ್ಞೆಯನ್ನೇ ಪಾಲಿಸೋಣ. (ಹಮೋರನು ಶೆಕೆಮನ ತಂದೆ.) 29 ನೀವು ನನಗೆ ಈ ಜನರ ಅಧಿಕಾರಿಯನ್ನಾಗಿ ಮಾಡಿದರೆ, ನಾನು ಅಬೀಮೆಲೆಕನನ್ನು ನಾಶಮಾಡುತ್ತೇನೆ. ನಾನು ಅವನಿಗೆ, ‘ನಿನ್ನ ಸೈನ್ಯವನ್ನು ಸಿದ್ಧಪಡಿಸಿಕೊಂಡು ಯುದ್ಧಕ್ಕೆ ಬಾ’ ಎಂದು ಕರೆಯುತ್ತೇನೆ” ಎಂದನು. 30 ಜೆಬುಲನು ಶೆಕೆಮ್ ನಗರದ ಪುರಾಧಿಕಾರಿಯಾಗಿದ್ದನು. ಎಬೆದನ ಮಗನಾದ ಗಾಳನ ಮಾತುಗಳನ್ನು ಜೆಬುಲನು ಕೇಳಿ ಬಹಳ ಕೋಪಗೊಂಡನು. 31 ಜೆಬುಲನು ಅರೂಮ ನಗರದಲ್ಲಿದ್ದ *ಅರೂಮ ನಗರ ಅಥವಾ “ತೊರಮಾ” ಅಬೀಮೆಲೆಕನು ಅರಸ ನಾಗಿದ್ದ ನಗರ. ಶೆಕೆಮಿನ ದಕ್ಷಿಣಕ್ಕೆ 8 ಮೈಲಿ ಮೇಲೆ ಇದ್ದಿರಬಹುದು. ಅಬೀಮೆಲೆಕನ ಬಳಿಗೆ ದೂತರನ್ನು ಕಳುಹಿಸಿದನು. ಅವನು ಕಳುಹಿಸಿದ ಸಂದೇಶ ಹೀಗಿದೆ: “ಎಬೆದನ ಮಗನಾದ ಗಾಳನು ಮತ್ತು ಅವನ ಸಹೋದರರು ಶೆಕೆಮ್ ನಗರಕ್ಕೆ ಬಂದಿದ್ದಾರೆ. ಅವರು ನಿನಗೆ ತೊಂದರೆಯನ್ನು ಉಂಟುಮಾಡುತ್ತಿದ್ದಾರೆ. ಗಾಳನು ಇಡೀ ನಗರವನ್ನು ನಿನ್ನ ವಿರುದ್ಧ ಎತ್ತಿಕಟ್ಟುತ್ತಿದ್ದಾನೆ. 32 ಅದಕ್ಕಾಗಿ ನೀನು ಮತ್ತು ನಿನ್ನ ಜನರು ಈ ರಾತ್ರಿ ಬಂದು ನಗರದ ಹೊರಗಡೆ ಹೊಲಗಳಲ್ಲಿ ಅಡಗಿಕೊಂಡಿರಬೇಕು. 33 ಬೆಳಗಾಗಿ ಸೂರ್ಯನು ಮೇಲೇರಿದ ತರುವಾಯ ನಗರದ ಮೇಲೆ ಧಾಳಿಮಾಡಬೇಕು. ಗಾಳ ಮತ್ತು ಅವನ ಜನರು ನಿನ್ನ ಸಂಗಡ ಯುದ್ಧ ಮಾಡುವುದಕ್ಕೆ ನಗರದಿಂದ ಹೊರಗೆ ಬರುತ್ತಾರೆ. ಅವರು ಹೊರಗೆ ಬಂದಾಗ ನಿನಗೆ ತೋರಿದಂತೆ ಅವರಿಗೆ ಮಾಡು.” 34 ಅಬೀಮೆಲೆಕ ಮತ್ತು ಅವನ ಸೈನಿಕರು ರಾತ್ರಿಯಲ್ಲಿ ಎದ್ದು ನಗರಕ್ಕೆ ಹೋದರು. ಆ ಸೈನಿಕರು ತಮ್ಮನ್ನು ನಾಲ್ಕು ಗುಂಪುಗಳನ್ನಾಗಿ ಮಾಡಿಕೊಂಡು ಶೆಕೆಮ್ ನಗರದ ಹತ್ತಿರ ಅಡಗಿಕೊಂಡರು. 35 ಎಬೆದನ ಮಗನಾದ ಗಾಳನು ಹೊರಗೆ ಹೋಗಿ ಶೆಕೆಮ್ ನಗರದ ಪ್ರವೇಶದ್ವಾರದಲ್ಲಿ ನಿಂತಿದ್ದನು. ಗಾಳನು ಅಲ್ಲಿ ನಿಂತಿದ್ದಾಗ ಅಬೀಮೆಲೆಕ ಮತ್ತು ಅವನ ಸೈನಿಕರು ತಾವು ಅಡಗಿದ್ದ ಸ್ಥಳಗಳನ್ನು ಬಿಟ್ಟು ಹೊರಗೆ ಬಂದರು. 36 ಗಾಳನು ಸೈನಿಕರನ್ನು ನೋಡಿದನು. ಗಾಳನು ಜೆಬುಲನಿಗೆ, “ಅಲ್ಲಿ ನೋಡು, ಬೆಟ್ಟ ಇಳಿದು ಜನರು ಬರುತ್ತಿದ್ದಾರೆ” ಎಂದನು. ಆದರೆ ಜೆಬುಲನು, “ನೀನು ಕೇವಲ ಬೆಟ್ಟದ ನೆರಳನ್ನು ನೋಡುತ್ತಿರುವೆ; ನೆರಳು ಜನರಂತೆ ಕಾಣಿಸುತ್ತಿದೆ” ಎಂದನು. 37 ಆದರೆ ಪುನಃ ಗಾಳನು, “ಅಲ್ಲಿ ನೋಡು! ಕೆಲವು ಜನರು ಭೂಮಿಯ ಮಧ್ಯದಿಂದ ಬರುತ್ತಿದ್ದಾರೆ. ಅಲ್ಲಿ ಆ ಮಾಟಗಾರರ ಮರದ ಹತ್ತಿರ ಒಂದು ತಲೆಯನ್ನು ನೋಡಿದೆ” ಎಂದನು. 38 ಆಗ ಜೆಬುಲನು ಗಾಳನಿಗೆ, “ನೀನು ಈಗೇಕೆ ಬಡಾಯಿ ಕೊಚ್ಚುತ್ತಾ ಇಲ್ಲ? ‘ಅಬೀಮೆಲೆಕನು ಯಾರು? ನಾವು ಅವನ ಆಜ್ಞೆಯನ್ನು ಏಕೆ ಪಾಲಿಸಬೇಕು?’ ಎಂದು ನೀನು ಕೇಳಿದೆ. ನೀನು ಈ ಜನರನ್ನು ತಮಾಷೆಮಾಡಿದೆ. ಈಗ ಹೊರಗೆ ಹೋಗಿ ಅವರೊಂದಿಗೆ ಯುದ್ಧಮಾಡು” ಅಂದನು. 39 ಅಬೀಮೆಲೆಕನೊಂದಿಗೆ ಯುದ್ಧಮಾಡಲು ಗಾಳನು ಶೆಕೆಮಿನ ಹಿರಿಯರನ್ನು ನಗರದ ಹೊರಗಡೆ ಕರೆದುಕೊಂಡು ಹೋದನು. 40 ಅಬೀಮೆಲೆಕನು ಮತ್ತು ಅವನ ಜನರು ಗಾಳ ಮತ್ತು ಅವನ ಜನರನ್ನು ಬೆನ್ನಟ್ಟಿದರು. ಗಾಳನ ಜನರು ಹಿಂದಿರುಗಿ ಶೆಕೆಮ್ ನಗರದ ದ್ವಾರದ ಕಡೆಗೆ ಓಡಿದರು. ದ್ವಾರಕ್ಕೆ ಮುಟ್ಟುವ ಮೊದಲೇ ಗಾಳನ ಹಲವಾರು ಜನ ಹತರಾದರು. 41 ಅನಂತರ ಅಬೀಮೆಲೆಕನು ಅರೂಮ ನಗರಕ್ಕೆ ಹಿಂದಿರುಗಿದನು. ಜೆಬುಲನು ಗಾಳನನ್ನು ಮತ್ತು ಅವನ ಸಹೋದರರನ್ನು ಶೆಕೆಮ್ ನಗರದಿಂದ ಓಡಿಸಿಬಿಟ್ಟನು. 42 ಮರುದಿನ ಶೆಕೆಮಿನ ಜನರು ಹೊಲಗಳಲ್ಲಿ ಕೆಲಸ ಮಾಡಲು ಹೋದರು. ಅಬೀಮೆಲೆಕನಿಗೆ ಅದು ಗೊತ್ತಾಯಿತು. 43 ಅಬೀಮೆಲೆಕನು ತನ್ನ ಸೈನ್ಯವನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಅವನು ಶೆಕೆಮಿನ ಜನರ ಮೇಲೆ ಹಠಾತ್ತನೆ ಧಾಳಿ ಮಾಡಬಯಸಿದ್ದನು. ಆದ್ದರಿಂದ ಅವನು ತನ್ನ ಜನರನ್ನು ಹೊಲಗಳಲ್ಲಿ ಅಡಗಿಸಿಟ್ಟನು. ನಗರದಿಂದ ಜನರು ಹೊರಗೆ ಬರುವುದನ್ನು ನೋಡಿದ ತಕ್ಷಣ ಅವನು ನೆಗೆದೆದ್ದು ಅವರ ಮೇಲೆ ಧಾಳಿಮಾಡಿದನು. 44 ಅಬೀಮೆಲೆಕ ಮತ್ತು ಅವನ ಗುಂಪಿನವರು ಓಡಿಕೊಂಡು ಶೆಕೆಮ್ ನಗರದ ಬಾಗಿಲಿನ ಹತ್ತಿರ ಒಂದು ಸ್ಥಳಕ್ಕೆ ಬಂದರು. ಉಳಿದ ಎರಡು ಗುಂಪಿನವರು ಹೊಲಗಳಲ್ಲಿದ್ದ ಜನರ ಕಡೆಗೆ ಓಡಿಹೋಗಿ ಅವರನ್ನು ಕೊಂದುಹಾಕಿದರು. 45 ಆ ಇಡೀ ದಿವಸ ಅಬೀಮೆಲೆಕ ಮತ್ತು ಅವನ ಜನರು ಶೆಕೆಮಿನ ಜನರೊಂದಿಗೆ ಯುದ್ಧ ಮಾಡಿದರು. ಅಬೀಮೆಲೆಕ ಮತ್ತು ಅವನ ಜನರು ಶೆಕೆಮ್ ನಗರವನ್ನು ಸ್ವಾಧೀನಪಡಿಸಿಕೊಂಡರು; ಆ ನಗರದ ಜನರನ್ನು ಕೊಂದುಹಾಕಿದರು. ಅಬೀಮೆಲೆಕನು ಊರನ್ನು ಕೆಡವಿ ಹಾಕಿ ಉಪ್ಪನ್ನು ಚೆಲ್ಲಿದನು. 46 ಶೆಕೆಮಿನ ಬುರುಜಿನ ಮೇಲೆ ಕೆಲವು ಜನರು ವಾಸಮಾಡುತ್ತಿದ್ದರು. ಶೆಕೆಮಿನಲ್ಲಿ ನಡೆದ ಘಟನೆಯ ಬಗ್ಗೆ ಕೇಳಿ ಅವರು ಏಲ್‌ಬೆರೀತ್ ದೇವರಗುಡಿಯ ಅತಿ ಸುರಕ್ಷಿತವಾದ ಕೋಣೆಯಲ್ಲಿ ಒಟ್ಟುಗೂಡಿದರು. 47 ಶೆಕೆಮ್ ಬುರುಜಿನ ಎಲ್ಲ ಹಿರಿಯರು ಒಟ್ಟಿಗೆ ಸೇರಿದ್ದಾರೆ ಎಂಬ ಸಂಗತಿಯನ್ನು ಅಬೀಮೆಲೆಕನು ಕೇಳಿದನು. 48 ಆದ್ದರಿಂದ ಅಬೀಮೆಲೆಕ ಮತ್ತು ಅವನ ಜನರು ಚಲ್ಮೋನ್ ಬೆಟ್ಟವನ್ನು ಹತ್ತಿಹೋದರು. ಅಬೀಮೆಲೆಕನು ಒಂದು ಕೊಡಲಿಯನ್ನು ತೆಗೆದುಕೊಂಡು ಕೆಲವು ಕೊಂಬೆಗಳನ್ನು ಕಡಿದನು. ಅವನು ಆ ಕೊಂಬೆಗಳನ್ನು ಹೊತ್ತುಕೊಂಡು ಹೊರಟನು. ಅಬೀಮೆಲೆಕನು ತನ್ನ ಸಂಗಡಿಗರಿಗೆ, “ನಾನು ಮಾಡಿದಂತೆಯೇ ನೀವು ಬೇಗನೆ ಮಾಡಿರಿ” ಎಂದನು. 49 ಆದ್ದರಿಂದ ಅವರೆಲ್ಲರೂ ಕೊಂಬೆಗಳನ್ನು ಕಡಿದುಕೊಂಡು ಅವನನ್ನು ಹಿಂಬಾಲಿಸಿದರು. ಅವರು ಏಲ್‌ಬೆರೀತ್ ದೇವರಗುಡಿಯ ಅತೀ ಸುರಕ್ಷಿತವಾದ ಕೋಣೆಯ ಸುತ್ತಲೂ ಆ ಕೊಂಬೆಗಳನ್ನು ಇಟ್ಟರು. ತರುವಾಯ ಆ ಕೊಂಬೆಗಳಿಗೆ ಬೆಂಕಿ ಹಚ್ಚಿ ಆ ಕೋಣೆಯಲ್ಲಿದ್ದ ಎಲ್ಲರನ್ನು ಸುಟ್ಟುಬಿಟ್ಟರು. ಶೆಕೆಮಿನ ಬುರುಜಿನಲ್ಲಿದ್ದ ಒಂದು ಸಾವಿರ ಗಂಡಸರು ಮತ್ತು ಹೆಂಗಸರು ಸತ್ತುಹೋದರು. ಅಬೀಮೆಲೆಕನ ಮರಣ 50 ಅನಂತರ ಅಬೀಮೆಲೆಕನು ಮತ್ತು ಅವನ ಜನರು ತೇಬೇಚ ನಗರಕ್ಕೆ ಹೋಗಿ ಅದನ್ನು ಸ್ವಾಧೀನಪಡಿಸಿಕೊಂಡರು. 51 ಆದರೆ ಆ ನಗರದ ಒಳಭಾಗದಲ್ಲಿ ಒಂದು ಭದ್ರವಾದ ಗೋಪುರವಿತ್ತು. ಆ ನಗರದ ಎಲ್ಲ ಹಿರಿಯರು ಮತ್ತು ಉಳಿದ ಗಂಡಸರು ಮತ್ತು ಹೆಂಗಸರು ಅಲ್ಲಿಗೆ ಓಡಿಹೋದರು. ಅವರು ಗೋಪುರದೊಳಗೆ ಹೋಗಿ ಒಳಗಿನಿಂದ ಬೀಗ ಹಾಕಿಕೊಂಡರು; ಬಳಿಕ ಗೋಪುರದ ಮಾಳಿಗೆಯ ಮೇಲೆ ಹತ್ತಿದರು. 52 ಅಬೀಮೆಲೆಕನು ಮತ್ತು ಅವನ ಜನರು ಅದರ ಮೇಲೆ ಧಾಳಿಮಾಡಲು ಗೋಪುರದ ಬಳಿ ಬಂದರು. ಅಬೀಮೆಲೆಕನು ಆ ಗೋಪುರದ ಬಾಗಿಲಿನವರೆಗೆ ಹೋದನು. ಅವನು ಆ ಗೋಪುರವನ್ನು ಸುಡಬೇಕೆಂದಿದ್ದನು. 53 ಆದರೆ ಅಬೀಮೆಲೆಕನು ಆ ಗೋಪುರದ ಬಾಗಿಲಿನ ಹತ್ತಿರ ನಿಂತಿದ್ದಾಗ ಮಾಳಿಗೆಯ ಮೇಲಿದ್ದ ಒಬ್ಬ ಸ್ತ್ರೀಯು ಅವನ ತಲೆಯ ಮೇಲೆ ಒಂದು ಬೀಸುವ ಕಲ್ಲನ್ನು ಹಾಕಿದಳು. ಆ ಬೀಸುವ ಕಲ್ಲು ಅಬೀಮೆಲೆಕನ ತಲೆಬುರುಡೆಯನ್ನು ಒಡೆಯಿತು. 54 ಕೂಡಲೆ ಅಬೀಮೆಲೆಕನು ತನ್ನ ಆಯುಧವಾಹಕನಿಗೆ, “ನಿನ್ನ ಖಡ್ಗವನ್ನು ಹೊರತೆಗೆದು ನನ್ನನ್ನು ಕೊಂದುಬಿಡು. ‘ಒಬ್ಬ ಹೆಂಗಸು ಅಬೀಮೆಲೆಕನನ್ನು ಕೊಂದಳು’ ಎಂದು ಜನರು ಹೇಳಬಾರದು. ಅದಕ್ಕಾಗಿ ನೀನು ನನ್ನನ್ನು ಕೊಲ್ಲಬೇಕೆಂದು ನನ್ನ ಇಚ್ಛೆ” ಎಂದನು. ಆದ್ದರಿಂದ ಆ ಸೇವಕನು ಅಬೀಮೆಲೆಕನನ್ನು ತನ್ನ ಕತ್ತಿಯಿಂದ ಇರಿದನು; ಅಬೀಮೆಲೆಕನು ಸತ್ತನು. 55 ಅಬೀಮೆಲೆಕನು ಸತ್ತಿದ್ದನ್ನು ಇಸ್ರೇಲರು ನೋಡಿದರು. ಆದ್ದರಿಂದ ಅವರೆಲ್ಲರೂ ತಮ್ಮತಮ್ಮ ಸ್ಥಳಗಳಿಗೆ ಹಿಂದಿರುಗಿದರು. 56 ಅಬೀಮೆಲೆಕನು ತನ್ನ ತಂದೆಗೆ ವಿರೋಧವಾಗಿ ಮಾಡಿದ್ದ ಎಲ್ಲ ದುಷ್ಕೃತ್ಯಗಳಿಗಾಗಿ ಅಂದರೆ ತನ್ನ ಎಪ್ಪತ್ತು ಮಂದಿ ಸಹೋದರರನ್ನು ಕೊಂದು ಹಾಕಿದ್ದರಿಂದ ದೇವರು ಅವನನ್ನು ಹೀಗೆ ದಂಡಿಸಿದನು. 57 ದೇವರು ಶೆಕೆಮ್ ನಗರದ ಜನರನ್ನೂ ಸಹ ಅವರು ಮಾಡಿದ ದುಷ್ಕೃತ್ಯಗಳಿಗಾಗಿ ದಂಡಿಸಿದನು. ಹೀಗೆ ಯೆರುಬ್ಬಾಳನ (ಗಿದ್ಯೋನ) ಕಿರಿಯ ಮಗನಾದ ಯೋತಾವುನು ನುಡಿದಂತೆಯೇ ಆಯಿತು.
ಒಟ್ಟು 21 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 9 / 21
1 2 3 4 5 6 7 8 9 10 11 12 13 14 15 16 17
Common Bible Languages
West Indian Languages
×

Alert

×

kannada Letters Keypad References