ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯಾಜಕಕಾಂಡ
1. ಯಜ್ಞಗಳು ಮತ್ತು ಕಾಣಿಕೆಗಳು ಯೆಹೋವನು ಮೋಶೆಯನ್ನು ಕರೆದು ದೇವದರ್ಶನಗುಡಾರದೊಳಗಿಂದ ಅವನ ಸಂಗಡ ಮಾತಾಡಿದನು. ಯೆಹೋವನು ಹೀಗೆ ಹೇಳಿದನು:
2. “ಇಸ್ರೇಲರಿಗೆ ನೀನು ಹೇಳಬೇಕಾದದ್ದೇನೆಂದರೆ, ‘ನೀವು ಯೆಹೋವನಿಗೆ ಯಜ್ಞವನ್ನು ಕಾಣಿಕೆಯಾಗಿ ಅರ್ಪಿಸುವುದಾದರೆ ನೀವು ಸಾಕಿದ ಪಶುಗಳನ್ನೇ ಅರ್ಪಿಸಬೇಕು. ಅದು ದನವಾಗಲಿ ಕುರಿಯಾಗಲಿ ಆಡಾಗಲಿ ಆಗಿರಬಹುದು.
3. “ಒಬ್ಬನು ತನ್ನ ದನಗಳಲ್ಲಿ ಒಂದನ್ನು ಸರ್ವಾಂಗಹೋಮವಾಗಿ ಅರ್ಪಿಸಬಯಸಿದರೆ ಆ ಪಶುವು ಯಾವ ದೋಷವಿಲ್ಲದ ಹೋರಿಯಾಗಿರಬೇಕು. ಅವನು ಆ ಪಶುವನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಆಗ ಯೆಹೋವನು ಆ ಸಮರ್ಪಣೆಯನ್ನು ಮೆಚ್ಚಿಕೊಳ್ಳುವನು.
4. ಅವನು ತನ್ನ ಕೈಯನ್ನು ಪ್ರಾಣಿಯ ತಲೆಯ ಮೇಲಿಡಬೇಕು. ಆ ವ್ಯಕ್ತಿಯ ದೋಷಪರಿಹಾರಕ್ಕಾಗಿ ಯೆಹೋವನು ಆ ಸರ್ವಾಂಗಹೋಮವನ್ನು ಸ್ವೀಕರಿಸುವನು.
5. “ಅವನು ಹೋರಿಯನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ರಕ್ತವನ್ನು ದೇವದರ್ಶನಗುಡಾರದ ಬಾಗಿಲಿನ ಹತ್ತಿರವಿರುವ ಯಜ್ಞವೇದಿಕೆಯ ಬಳಿಗೆ ತರಬೇಕು; ರಕ್ತವನ್ನು ಸುತ್ತಲೂ ಯಜ್ಞವೇದಿಕೆಯ ಮೇಲೆ ಚಿಮಿಕಿಸಬೇಕು.
6. ಯಾಜಕನು ಆ ಪಶುವಿನ ಚರ್ಮವನ್ನು ಸುಲಿದು, ಪಶುವನ್ನು ತುಂಡುತುಂಡುಗಳಾಗಿ ಕಡಿಯಬೇಕು.
7. ಯಾಜಕರಾದ ಆರೋನನ ಪುತ್ರರು ವೇದಿಕೆಯ ಮೇಲೆ ಬೆಂಕಿಯನ್ನಿಟ್ಟು ಅದರ ಮೇಲೆ ಕಟ್ಟಿಗೆಯನ್ನು ಇಡಬೇಕು.
8. ಆರೋನನ ವಂಶದವರಾದ ಯಾಜಕರು ವೇದಿಕೆಯ ಮೇಲೆ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಪಶುವಿನ ತುಂಡುಗಳನ್ನೂ ತಲೆ ಮತ್ತು ಕೊಬ್ಬನ್ನೂ ಇಡಬೇಕು.
9. ಯಾಜಕನು ಪಶುವಿನ ಕಾಲುಗಳನ್ನು ಮತ್ತು ಒಳಗಿನ ಭಾಗಗಳನ್ನು ನೀರಿನಿಂದ ತೊಳೆದು ಈ ಎಲ್ಲಾ ಭಾಗಗಳನ್ನು ವೇದಿಕೆಯ ಮೇಲೆ ಹೋಮಮಾಡಬೇಕು. ಈ ಸರ್ವಾಂಗಹೋಮದ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.
10. “ಒಬ್ಬನು ಕುರಿಯನ್ನಾಗಲಿ ಆಡನ್ನಾಗಲಿ ಸರ್ವಾಂಗಹೋಮವಾಗಿ ಅರ್ಪಿಸುವಾಗ, ಆ ಪ್ರಾಣಿಯು ಯಾವ ದೋಷವಿಲ್ಲದ ಗಂಡಾಗಿರಬೇಕು.
11. ಅವನು ಯೆಹೋವನ ಸನ್ನಿಧಿಯಲ್ಲಿ ಅಂದರೆ ವೇದಿಕೆಯ ಉತ್ತರ ಭಾಗದಲ್ಲಿ ಪಶುವನ್ನು ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ರಕ್ತವನ್ನು ವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು.
12. ಬಳಿಕ ಯಾಜಕನು ಆ ಪಶುವನ್ನು ತುಂಡುತುಂಡುಗಳಾಗಿ ಕತ್ತರಿಸಬೇಕು. ಯಾಜಕನು ವೇದಿಕೆಯ ಮೇಲೆ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ತುಂಡುಗಳನ್ನೂ ತಲೆ ಮತ್ತು ಕೊಬ್ಬನ್ನೂ ಇಡಬೇಕು.
13. ಯಾಜಕನು ಪಶುವಿನ ಕಾಲುಗಳನ್ನೂ ಒಳಗಿನ ಭಾಗಗಳನ್ನೂ ನೀರಿನಿಂದ ತೊಳೆಯಬೇಕು. ಬಳಿಕ ಯಾಜಕನು ಪಶುವಿನ ಈ ಎಲ್ಲಾ ಭಾಗಗಳನ್ನೂ ವೇದಿಕೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಸಮರ್ಪಿಸಲ್ಪಟ್ಟ ಸರ್ವಾಂಗಹೋಮವಾಗಿರುತ್ತದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.
14. “ಒಬ್ಬನು ಪಕ್ಷಿಯನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಾಗ ಆ ಪಕ್ಷಿಯು ಬೆಳೆವಕ್ಕಿಯಾಗಲಿ ಪಾರಿವಾಳದ ಮರಿಯಾಗಲಿ ಆಗಿರಬೇಕು.
15. ಯಾಜಕನು ಕಾಣಿಕೆಯನ್ನು ವೇದಿಕೆಯ ಬಳಿಗೆ ತರಬೇಕು. ಯಾಜಕನು ಪಕ್ಷಿಯ ಕುತ್ತಿಗೆಯನ್ನು ಮುರಿದು ವೇದಿಕೆಯ ಮೇಲೆ ಹೋಮಮಾಡಬೇಕು. ಪಕ್ಷಿಯ ರಕ್ತವು ವೇದಿಕೆಯ ಪಾರ್ಶ್ವದಲ್ಲಿ ಹಿಂಡಲ್ಪಡಬೇಕು.
16. ಯಾಜಕನು ಪಕ್ಷಿಯ ಕರುಳುಗಳನ್ನು ಮತ್ತು ಗರಿಗಳನ್ನು ತೆಗೆದು ಅವುಗಳನ್ನು ವೇದಿಕೆಯ ಪೂರ್ವದಿಕ್ಕಿನಲ್ಲಿ ಬಿಸಾಡಬೇಕು. ಈ ಸ್ಥಳವು ವೇದಿಕೆಯಿಂದ ತೆಗೆದ ಬೂದಿಯನ್ನು ಹಾಕುವ ಸ್ಥಳವಾಗಿದೆ.
17. ತರುವಾಯ ಯಾಜಕನು ಪಕ್ಷಿಯ ರೆಕ್ಕೆಗಳನ್ನು ಕಿತ್ತುಹಾಕಬೇಕು. ಆದರೆ ಅವನು ಪಕ್ಷಿಯನ್ನು ಎರಡು ಭಾಗಗಳಾಗಿ ವಿಭಾಗಿಸಬಾರದು. ಯಾಜಕನು ಪಕ್ಷಿಯನ್ನು ವೇದಿಕೆಯ ಮೇಲೆ ಬೆಂಕಿಯಲ್ಲಿರುವ ಕಟ್ಟಿಗೆಗಳ ಮೇಲಿಟ್ಟು ಹೋಮಮಾಡಬೇಕು. ಇದು ಅಗ್ನಿಯ ಮೂಲಕ ಸಮರ್ಪಣೆಯಾದ ಸರ್ವಾಂಗಹೋಮವಾಗಿದೆ. ಅದರ ಸುವಾಸನೆ ಯೆಹೋವನಿಗೆ ಪ್ರಿಯವಾಗಿದೆ.

Notes

No Verse Added

Total 27 Chapters, Current Chapter 1 of Total Chapters 27
ಯಾಜಕಕಾಂಡ 1:35
1. ಯಜ್ಞಗಳು ಮತ್ತು ಕಾಣಿಕೆಗಳು ಯೆಹೋವನು ಮೋಶೆಯನ್ನು ಕರೆದು ದೇವದರ್ಶನಗುಡಾರದೊಳಗಿಂದ ಅವನ ಸಂಗಡ ಮಾತಾಡಿದನು. ಯೆಹೋವನು ಹೀಗೆ ಹೇಳಿದನು:
2. “ಇಸ್ರೇಲರಿಗೆ ನೀನು ಹೇಳಬೇಕಾದದ್ದೇನೆಂದರೆ, ‘ನೀವು ಯೆಹೋವನಿಗೆ ಯಜ್ಞವನ್ನು ಕಾಣಿಕೆಯಾಗಿ ಅರ್ಪಿಸುವುದಾದರೆ ನೀವು ಸಾಕಿದ ಪಶುಗಳನ್ನೇ ಅರ್ಪಿಸಬೇಕು. ಅದು ದನವಾಗಲಿ ಕುರಿಯಾಗಲಿ ಆಡಾಗಲಿ ಆಗಿರಬಹುದು.
3. “ಒಬ್ಬನು ತನ್ನ ದನಗಳಲ್ಲಿ ಒಂದನ್ನು ಸರ್ವಾಂಗಹೋಮವಾಗಿ ಅರ್ಪಿಸಬಯಸಿದರೆ ಪಶುವು ಯಾವ ದೋಷವಿಲ್ಲದ ಹೋರಿಯಾಗಿರಬೇಕು. ಅವನು ಪಶುವನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಆಗ ಯೆಹೋವನು ಸಮರ್ಪಣೆಯನ್ನು ಮೆಚ್ಚಿಕೊಳ್ಳುವನು.
4. ಅವನು ತನ್ನ ಕೈಯನ್ನು ಪ್ರಾಣಿಯ ತಲೆಯ ಮೇಲಿಡಬೇಕು. ವ್ಯಕ್ತಿಯ ದೋಷಪರಿಹಾರಕ್ಕಾಗಿ ಯೆಹೋವನು ಸರ್ವಾಂಗಹೋಮವನ್ನು ಸ್ವೀಕರಿಸುವನು.
5. “ಅವನು ಹೋರಿಯನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ರಕ್ತವನ್ನು ದೇವದರ್ಶನಗುಡಾರದ ಬಾಗಿಲಿನ ಹತ್ತಿರವಿರುವ ಯಜ್ಞವೇದಿಕೆಯ ಬಳಿಗೆ ತರಬೇಕು; ರಕ್ತವನ್ನು ಸುತ್ತಲೂ ಯಜ್ಞವೇದಿಕೆಯ ಮೇಲೆ ಚಿಮಿಕಿಸಬೇಕು.
6. ಯಾಜಕನು ಪಶುವಿನ ಚರ್ಮವನ್ನು ಸುಲಿದು, ಪಶುವನ್ನು ತುಂಡುತುಂಡುಗಳಾಗಿ ಕಡಿಯಬೇಕು.
7. ಯಾಜಕರಾದ ಆರೋನನ ಪುತ್ರರು ವೇದಿಕೆಯ ಮೇಲೆ ಬೆಂಕಿಯನ್ನಿಟ್ಟು ಅದರ ಮೇಲೆ ಕಟ್ಟಿಗೆಯನ್ನು ಇಡಬೇಕು.
8. ಆರೋನನ ವಂಶದವರಾದ ಯಾಜಕರು ವೇದಿಕೆಯ ಮೇಲೆ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಪಶುವಿನ ತುಂಡುಗಳನ್ನೂ ತಲೆ ಮತ್ತು ಕೊಬ್ಬನ್ನೂ ಇಡಬೇಕು.
9. ಯಾಜಕನು ಪಶುವಿನ ಕಾಲುಗಳನ್ನು ಮತ್ತು ಒಳಗಿನ ಭಾಗಗಳನ್ನು ನೀರಿನಿಂದ ತೊಳೆದು ಎಲ್ಲಾ ಭಾಗಗಳನ್ನು ವೇದಿಕೆಯ ಮೇಲೆ ಹೋಮಮಾಡಬೇಕು. ಸರ್ವಾಂಗಹೋಮದ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.
10. “ಒಬ್ಬನು ಕುರಿಯನ್ನಾಗಲಿ ಆಡನ್ನಾಗಲಿ ಸರ್ವಾಂಗಹೋಮವಾಗಿ ಅರ್ಪಿಸುವಾಗ, ಪ್ರಾಣಿಯು ಯಾವ ದೋಷವಿಲ್ಲದ ಗಂಡಾಗಿರಬೇಕು.
11. ಅವನು ಯೆಹೋವನ ಸನ್ನಿಧಿಯಲ್ಲಿ ಅಂದರೆ ವೇದಿಕೆಯ ಉತ್ತರ ಭಾಗದಲ್ಲಿ ಪಶುವನ್ನು ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ರಕ್ತವನ್ನು ವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು.
12. ಬಳಿಕ ಯಾಜಕನು ಪಶುವನ್ನು ತುಂಡುತುಂಡುಗಳಾಗಿ ಕತ್ತರಿಸಬೇಕು. ಯಾಜಕನು ವೇದಿಕೆಯ ಮೇಲೆ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ತುಂಡುಗಳನ್ನೂ ತಲೆ ಮತ್ತು ಕೊಬ್ಬನ್ನೂ ಇಡಬೇಕು.
13. ಯಾಜಕನು ಪಶುವಿನ ಕಾಲುಗಳನ್ನೂ ಒಳಗಿನ ಭಾಗಗಳನ್ನೂ ನೀರಿನಿಂದ ತೊಳೆಯಬೇಕು. ಬಳಿಕ ಯಾಜಕನು ಪಶುವಿನ ಎಲ್ಲಾ ಭಾಗಗಳನ್ನೂ ವೇದಿಕೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಸಮರ್ಪಿಸಲ್ಪಟ್ಟ ಸರ್ವಾಂಗಹೋಮವಾಗಿರುತ್ತದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.
14. “ಒಬ್ಬನು ಪಕ್ಷಿಯನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಾಗ ಪಕ್ಷಿಯು ಬೆಳೆವಕ್ಕಿಯಾಗಲಿ ಪಾರಿವಾಳದ ಮರಿಯಾಗಲಿ ಆಗಿರಬೇಕು.
15. ಯಾಜಕನು ಕಾಣಿಕೆಯನ್ನು ವೇದಿಕೆಯ ಬಳಿಗೆ ತರಬೇಕು. ಯಾಜಕನು ಪಕ್ಷಿಯ ಕುತ್ತಿಗೆಯನ್ನು ಮುರಿದು ವೇದಿಕೆಯ ಮೇಲೆ ಹೋಮಮಾಡಬೇಕು. ಪಕ್ಷಿಯ ರಕ್ತವು ವೇದಿಕೆಯ ಪಾರ್ಶ್ವದಲ್ಲಿ ಹಿಂಡಲ್ಪಡಬೇಕು.
16. ಯಾಜಕನು ಪಕ್ಷಿಯ ಕರುಳುಗಳನ್ನು ಮತ್ತು ಗರಿಗಳನ್ನು ತೆಗೆದು ಅವುಗಳನ್ನು ವೇದಿಕೆಯ ಪೂರ್ವದಿಕ್ಕಿನಲ್ಲಿ ಬಿಸಾಡಬೇಕು. ಸ್ಥಳವು ವೇದಿಕೆಯಿಂದ ತೆಗೆದ ಬೂದಿಯನ್ನು ಹಾಕುವ ಸ್ಥಳವಾಗಿದೆ.
17. ತರುವಾಯ ಯಾಜಕನು ಪಕ್ಷಿಯ ರೆಕ್ಕೆಗಳನ್ನು ಕಿತ್ತುಹಾಕಬೇಕು. ಆದರೆ ಅವನು ಪಕ್ಷಿಯನ್ನು ಎರಡು ಭಾಗಗಳಾಗಿ ವಿಭಾಗಿಸಬಾರದು. ಯಾಜಕನು ಪಕ್ಷಿಯನ್ನು ವೇದಿಕೆಯ ಮೇಲೆ ಬೆಂಕಿಯಲ್ಲಿರುವ ಕಟ್ಟಿಗೆಗಳ ಮೇಲಿಟ್ಟು ಹೋಮಮಾಡಬೇಕು. ಇದು ಅಗ್ನಿಯ ಮೂಲಕ ಸಮರ್ಪಣೆಯಾದ ಸರ್ವಾಂಗಹೋಮವಾಗಿದೆ. ಅದರ ಸುವಾಸನೆ ಯೆಹೋವನಿಗೆ ಪ್ರಿಯವಾಗಿದೆ.
Total 27 Chapters, Current Chapter 1 of Total Chapters 27
×

Alert

×

kannada Letters Keypad References