2. “ಇಸ್ರೇಲರಿಗೆ ಹೀಗೆ ಹೇಳು: ಒಬ್ಬ ಸ್ತ್ರೀಯು ಬಸುರಾಗಿ ಗಂಡುಮಗುವನ್ನು ಹೆತ್ತರೆ, ಅವಳು ಏಳು ದಿನಗಳವರೆಗೆ ಅಶುದ್ಧಳಾಗಿರುವಳು. ಅವಳ ತಿಂಗಳ ಮುಟ್ಟಿನಿಂದ ಅಶುದ್ಧಳಾಗುವಂತೆಯೇ ಅಶುದ್ಧಳಾಗಿರುವಳು.
|
4. ಆಮೇಲೆ ಅವಳು ತನ್ನ ರಕ್ತಸ್ರಾವದಿಂದ ಶುದ್ಧಳಾಗಲು ಮೂವತ್ತುಮೂರು ದಿನಗಳು ಹಿಡಿಯುವುದು. ಆಕೆ ಪರಿಶುದ್ಧವಾದ ಯಾವುದನ್ನೂ ಮುಟ್ಟಬಾರದು. ಆಕೆಯ ಶುದ್ಧೀಕರಣ ಪೂರ್ತಿಯಾಗುವವರೆಗೆ ಆಕೆ ಪವಿತ್ರಸ್ಥಳವನ್ನು ಪ್ರವೇಶಿಸಬಾರದು.
|
5. ಆದರೆ ಸ್ತ್ರೀಯು ಹೆಣ್ಣುಮಗುವಿಗೆ ಜನ್ಮವಿತ್ತರೆ, ಅವಳು ಆಕೆಯ ತಿಂಗಳ ಮುಟ್ಟಿನಿಂದ ಅಶುದ್ಧಳಾಗುವಂತೆ ಎರಡು ವಾರಗಳವರೆಗೆ ಅಶುದ್ಧಳಾಗಿರುವಳು. ಆಕೆಯು ರಕ್ತಸ್ರಾವದಿಂದ ಶುದ್ಧಳಾಗಲು ಅರವತ್ತಾರು ದಿನಗಳು ಹಿಡಿಯುವವು.
|
6. “ಶುದ್ಧೀಕರಣ ಸಮಯ ಪೂರ್ತಿಯಾದ ನಂತರ ಹೆಣ್ಣುಮಗುವಿನ ಅಥವಾ ಗಂಡುಮಗುವಿನ ತಾಯಿಯು ವಿಶೇಷ ಯಜ್ಞಗಳನ್ನು ದೇವದರ್ಶನಗುಡಾರದ ಬಾಗಿಲ ಬಳಿಗೆ ತಂದು ಅವುಗಳನ್ನು ಯಾಜಕನಿಗೆ ಕೊಡಬೇಕು. ಆಕೆಯು ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಕುರಿಮರಿಯನ್ನೂ ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಬೆಳವಕ್ಕಿಯನ್ನಾಗಲಿ ಅಥವಾ ಪಾರಿವಾಳದ ಮರಿಯನ್ನಾಗಲಿ ತರಬೇಕು.
|