2. “ಒಬ್ಬ ಮನುಷ್ಯನ ಮೇಲೆ ಊತವಾಗಲಿ ಗುಳ್ಳೆಯಾಗಲಿ ಹೊಳೆಯುವ ಮಚ್ಚೆಯಾಗಲಿ ಉಂಟಾಗಿ ಮಚ್ಚೆಯು ಕುಷ್ಠರೋಗದಂತೆ ಕಂಡುಬಂದರೆ, ಅವನನ್ನು ಯಾಜಕನಾದ ಆರೋನನ ಬಳಿಗೆ ಅಥವಾ ಯಾಜಕರಾದ ಅವರ ಪುತ್ರರಲ್ಲಿ ಒಬ್ಬನ ಬಳಿಗೆ ಕರೆದುಕೊಂಡು ಬರಬೇಕು.
|
3. ಯಾಜಕನು ಅವನ ಚರ್ಮದಲ್ಲಿರುವ ಮಚ್ಚೆಯನ್ನು ನೋಡಬೇಕು. ಮಚ್ಚೆಯಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಮಚ್ಚೆಯು ಅವನ ಚರ್ಮಕ್ಕಿಂತ ತಗ್ಗಾಗಿದ್ದರೆ ಅದು ಕುಷ್ಠರೋಗವಾಗಿದೆ. ಯಾಜಕನು ಅವನನ್ನು ಪರೀಕ್ಷಿಸಿದ ನಂತರ ಆ ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು.
|
4. “ಕೆಲವು ಬಾರಿ ಒಬ್ಬ ವ್ಯಕ್ತಿಯ ಚರ್ಮದ ಮೇಲೆ ಬಿಳಿ ಮಚ್ಚೆ ಇರುತ್ತದೆ. ಆದರೆ ಮಚ್ಚೆಯು ಚರ್ಮಕ್ಕಿಂತ ತಗ್ಗಾಗಿರದಿದ್ದರೆ ಮತ್ತು ಅದರ ರೋಮ ಬೆಳ್ಳಗಾಗಿಲ್ಲದಿದ್ದರೆ ಯಾಜಕನು ಅವನನ್ನು ಬೇರೆ ಜನರಿಂದ ಏಳು ದಿನಗಳವರೆಗೆ ಪ್ರತ್ಯೇಕಿಸಬೇಕು.
|
5. ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸಬೇಕು. ಮಚ್ಚೆಯು ಬದಲಾಗದೆ ಚರ್ಮದ ಮೇಲೆ ಹರಡಲಿಲ್ಲವೆಂದು ಯಾಜಕನು ಕಂಡರೆ, ಯಾಜಕನು ಅವನನ್ನು ಇನ್ನೂ ಏಳು ದಿನಗಳವರೆಗೆ ಇತರ ಜನರಿಂದ ಪ್ರತ್ಯೇಕಿಸಬೇಕು.
|
6. ಏಳು ದಿನಗಳ ನಂತರ ಯಾಜಕನು ಮತ್ತೆ ಅವನನ್ನು ನೋಡಬೇಕು. ಮಚ್ಚೆಯು ಮೊಬ್ಬಾಗಿ ಚರ್ಮದಲ್ಲಿ ಹರಡದೆ ಇದ್ದರೆ, ಆಗ ಯಾಜಕನು ಅವನನ್ನು ಶುದ್ಧನೆಂದು ಪ್ರಕಟಿಸಬೇಕು. ಯಾಕೆಂದರೆ ಮಚ್ಚೆಯು ಕೇವಲ ಗುಳ್ಳೆಯಾಗಿದೆ. ಆ ವ್ಯಕ್ತಿ ತನ್ನ ಬಟ್ಟೆಗಳನ್ನು ಒಗೆದುಕೊಂಡು ತಿರುಗಿ ಶುದ್ಧನಾಗುವನು.
|
8. ಯಾಜಕನು ಪರೀಕ್ಷಿಸಿದಾಗ ಗುಳ್ಳೆಯು ಚರ್ಮದ ಮೇಲೆ ಹರಡಿದ್ದರೆ, ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ಕುಷ್ಠರೋಗವಾಗಿದೆ.
|
10. ಯಾಜಕನು ಆ ವ್ಯಕ್ತಿಯನ್ನು ನೋಡಬೇಕು. ಚರ್ಮದ ಮೇಲೆ ಬೆಳ್ಳಗಾದ ಊತವಿದ್ದರೆ, ರೋಮವು ಬೆಳ್ಳಗಾಗಿದ್ದರೆ ಮತ್ತು ಚರ್ಮವು ಊತದಿಂದ ಹಸಿಯಾಗಿ ಕಂಡರೆ,
|
11. ಅದು ಬಹಳ ಕಾಲದಿಂದ ಅವನ ಚರ್ಮದಲ್ಲಿರುವ ಕುಷ್ಠರೋಗವಾಗಿದೆ. ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು. ಯಾಜಕನು ಅವನನ್ನು ಪರೀಕ್ಷಿಸುವುದಕ್ಕಾಗಿ ಸ್ವಲ್ಪ ಸಮಯದವರೆಗೆ ಜನರಿಂದ ಪ್ರತ್ಯೇಕಿಸುವುದಿಲ್ಲ. ಯಾಕೆಂದರೆ ಆ ವ್ಯಕ್ತಿಯು ಈಗಾಗಲೇ ಅಶುದ್ಧನಾಗಿದ್ದಾನೆ.
|
12. “ಕೆಲವು ಬಾರಿ ಚರ್ಮರೋಗವು ಒಬ್ಬನ ಮೈಯೆಲ್ಲಾ ಹರಡಿಕೊಳ್ಳುವುದು. ಚರ್ಮರೋಗವು ಅವನನ್ನು ತಲೆಯಿಂದ ಅಂಗಾಲಿನವರೆಗೂ ಮುಚ್ಚಿಕೊಳ್ಳುವುದು. ಯಾಜಕನು ಆ ವ್ಯಕ್ತಿಯ ಇಡೀ ದೇಹವನ್ನು ನೋಡಬೇಕು.
|
13. ಚರ್ಮರೋಗವು ಇಡೀ ದೇಹವನ್ನು ವ್ಯಾಪಿಸಿ ಆ ವ್ಯಕ್ತಿಯ ಚರ್ಮವು ಬಿಳಿ ಬಣ್ಣಕ್ಕೆ ತಿರುಗಿರುವುದನ್ನು ಯಾಜಕನು ಕಂಡರೆ, ಆ ವ್ಯಕ್ತಿಯು ಶುದ್ಧನೆಂದು ಯಾಜಕನು ಪ್ರಕಟಿಸಬೇಕು.
|
15. ಯಾಜಕನು ಹಸಿಯಾದ ಚರ್ಮವನ್ನು ನೋಡಿದಾಗ, ಆ ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು. ಹಸಿಯಾದ ಚರ್ಮವು ಶುದ್ಧವಲ್ಲ. ಅದು ಕುಷ್ಠರೋಗವಾಗಿದೆ.
|
17. ಯಾಜಕನು ಅವನನ್ನು ಪರೀಕ್ಷಿಸಬೇಕು. ಮಚ್ಚೆಯು ಬೆಳ್ಳಗಾಗಿದ್ದರೆ, ಯಾಜಕನು ಆ ವ್ಯಕ್ತಿಯನ್ನು ಶುದ್ಧನೆಂದು ಪ್ರಕಟಿಸಬೇಕು. ಆ ವ್ಯಕ್ತಿಯು ಶುದ್ಧನಾಗಿದ್ದಾನೆ.
|
19. ಆದರೆ ಹುಣ್ಣಿದ್ದ ಜಾಗದಲ್ಲಿ ಬೆಳ್ಳಗಾದ ಊತವಿದ್ದರೆ ಅಥವಾ ಕೆಂಪುಬಿಳುಪು ಮಿಶ್ರವಾದ ಹೊಳೆಯುವ ಮಚ್ಚೆಯಿದ್ದರೆ, ಚರ್ಮದ ಈ ಭಾಗವನ್ನು ಯಾಜಕನಿಗೆ ತೋರಿಸಬೇಕು.
|
20. ಯಾಜಕನು ಅದನ್ನು ಪರೀಕ್ಷಿಸಬೇಕು. ಅದು ಚರ್ಮಕ್ಕಿಂತ ತಗ್ಗಾಗಿದ್ದರೆ ಮತ್ತು ಅದರ ಮೇಲಿರುವ ರೋಮವು ಬೆಳ್ಳಗಾಗಿದ್ದರೆ, ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು. ಆ ಕಲೆಯು ಕುಷ್ಠದ ಸೋಂಕಾಗಿದೆ. ಹುಣ್ಣಿನಿಂದ ಕುಷ್ಠ ಬಂದಿದೆ.
|
21. ಆದರೆ ಯಾಜಕನು ಮಚ್ಚೆಯನ್ನು ನೋಡಿದಾಗ ಅದರಲ್ಲಿ ಬಿಳಿರೋಮಗಳು ಇಲ್ಲದಿದ್ದರೆ, ಮಚ್ಚೆಯು ಚರ್ಮಕ್ಕಿಂತ ತಗ್ಗಾಗಿಲ್ಲದೆ ಮೊಬ್ಬಾಗಿ ಹೋಗಿದ್ದರೆ, ಆಗ ಯಾಜಕನು ಆ ವ್ಯಕ್ತಿಯನ್ನು ಏಳು ದಿನಗಳವರೆಗೆ ಪ್ರತ್ಯೇಕಿಸಬೇಕು.
|
23. ಆದರೆ ಹೊಳೆಯುವ ಮಚ್ಚೆಯು ತನ್ನ ಸ್ಥಳದಲ್ಲಿಯೇ ಇದ್ದು ಹರಡದಿದ್ದರೆ, ಆಗ ಅದು ಕೇವಲ ಹುಣ್ಣಿನ ಮಚ್ಚೆಯಾಗಿದೆ. ಯಾಜಕನು ಅವನನ್ನು ಶುದ್ಧನೆಂದು ಪ್ರಕಟಿಸಬೇಕು.
|
26. ಆದರೆ ಯಾಜಕನು ಮಚ್ಚೆಯನ್ನು ನೋಡಲಾಗಿ ಹೊಳೆಯುವ ಮಚ್ಚೆಯಲ್ಲಿ ಬಿಳಿರೋಮವಿಲ್ಲದೆ ಮತ್ತು ಮಚ್ಚೆಯು ಚರ್ಮಕ್ಕಿಂತ ತಗ್ಗಾಗಿಲ್ಲದೆ ಮೊಬ್ಬಾಗಿ ಹೋಗುತ್ತಿದ್ದರೆ, ಯಾಜಕನು ಆ ವ್ಯಕ್ತಿಯನ್ನು ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇರಿಸಬೇಕು.
|
27. ಏಳನೆಯ ದಿನದಲ್ಲಿ ಯಾಜಕನು ಮತ್ತೆ ಆ ವ್ಯಕ್ತಿಯನ್ನು ಪರೀಕ್ಷಿಸಬೇಕು. ಮಚ್ಚೆಯು ಚರ್ಮದ ಮೇಲೆ ಹರಡಿದ್ದರೆ, ಯಾಜಕನು ಆ ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ಕುಷ್ಠರೋಗವಾಗಿದೆ.
|
28. ಆದರೆ ಹೊಳೆಯುವ ಮಚ್ಚೆಯು ಚರ್ಮದ ಮೇಲೆ ಉಂಟಾದ ಊತವಾಗಿದೆ. ಯಾಜಕನು ಆ ವ್ಯಕ್ತಿಯನ್ನು ಶುದ್ಧನೆಂದು ಪ್ರಕಟಿಸಬೇಕು. ಅದು ಕೇವಲ ಸುಟ್ಟಗಾಯದಿಂದ ಉಂಟಾದ ಮಚ್ಚೆಯಾಗಿದೆ.
|
30. ಯಾಜಕನು ಆ ಕಲೆಯನ್ನು ನೋಡಬೇಕು. ಸೋಂಕಿನ ಕಲೆಯು ಚರ್ಮಕ್ಕಿಂತ ತಗ್ಗಾಗಿದ್ದರೆ ಮತ್ತು ಅದರಲ್ಲಿರುವ ರೋಮವು ತೆಳ್ಳಗಾಗಿಯೂ ಹಳದಿಯಾಗಿಯೂ ಇದ್ದರೆ, ಯಾಜಕನು ಆ ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ತಲೆಯ ಅಥವಾ ಗಡ್ಡದ ಕೆಟ್ಟ ಚರ್ಮರೋಗವಾಗಿದೆ.
|
31. ರೋಗವು ಚರ್ಮಕ್ಕಿಂತ ತಗ್ಗಾಗಿಲ್ಲವೆಂದು ಕಂಡುಬಂದರೂ ಅದರಲ್ಲಿ ಕಪ್ಪಾದ ಕೂದಲು ಇಲ್ಲದ್ದಿದ್ದರೆ, ಆಗ ಯಾಜಕನು ಆ ವ್ಯಕ್ತಿಯನ್ನು ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇರಿಸಬೇಕು.
|
32. ಏಳನೆಯ ದಿನದಲ್ಲಿ ಯಾಜಕನು ಸೋಂಕು ತಗಲಿದ ಜಾಗವನ್ನು ಪರೀಕ್ಷಿಸಬೇಕು. ರೋಗವು ಹರಡಿಕೊಳ್ಳದೆ ಇದ್ದರೆ ಮತ್ತು ಅದು ಇರುವ ಕಡೆ ಹಳದಿಬಣ್ಣದ ಕೂದಲು ಬೆಳೆಯುತ್ತಿಲ್ಲವಾಗಿದ್ದರೆ ಮತ್ತು ರೋಗವು ಉಳಿದ ಚರ್ಮಕ್ಕಿಂತ ತಗ್ಗಾಗಿ ತೋರದಿದ್ದರೆ,
|
33. ಆಗ ಆ ವ್ಯಕ್ತಿಯು ಕ್ಷೌರ ಮಾಡಿಸಿಕೊಳ್ಳಬೇಕು. ಆದರೆ ಅವನು ರೋಗ ಇರುವ ಜಾಗದಲ್ಲಿ ಕ್ಷೌರ ಮಾಡಿಸಿಕೊಳ್ಳಬಾರದು. ಯಾಜಕನು ಆ ವ್ಯಕ್ತಿಯನ್ನು ಇನ್ನೂ ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇರಿಸಬೇಕು.
|
34. ಏಳನೆಯ ದಿನದಲ್ಲಿ ಯಾಜಕನು ರೋಗವನ್ನು ಪರೀಕ್ಷಿಸಬೇಕು. ರೋಗವು ಚರ್ಮದಲ್ಲಿ ಹರಡಿಕೊಳ್ಳದಿದ್ದರೆ ಮತ್ತು ಅದು ಚರ್ಮಕ್ಕಿಂತ ತಗ್ಗಾಗಿ ತೋರದಿದ್ದರೆ ಆಗ ಯಾಜಕನು ಆ ವ್ಯಕ್ತಿಯನ್ನು ಶುದ್ಧನೆಂದು ಪ್ರಕಟಿಸಬೇಕು. ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಶುದ್ಧನಾಗುವನು.
|
36. ಯಾಜಕನು ಆ ವ್ಯಕ್ತಿಯನ್ನು ಮತ್ತೆ ಪರೀಕ್ಷಿಸಬೇಕು. ರೋಗವು ಚರ್ಮದಲ್ಲಿ ಹರಡಿಕೊಂಡಿದ್ದರೆ, ಯಾಜಕನು ಹಳದಿ ಬಣ್ಣದ ಕೂದಲು ಇದೆಯೋ ಇಲ್ಲವೋ ಎಂದು ನೋಡಬೇಕಾದ ಅಗತ್ಯವಿಲ್ಲ. ಅವನು ಅಶುದ್ಧನಾಗಿದ್ದಾನೆ.
|
37. ಆದರೆ ರೋಗವು ನಿಂತುಹೋಗಿ, ಕಪ್ಪಾದ ಕೂದಲು ಆ ಜಾಗದಲ್ಲಿ ಬೆಳೆಯುತ್ತಿದ್ದರೆ, ರೋಗವು ವಾಸಿಯಾಗಿದೆ ಎಂದರ್ಥ. ಆ ವ್ಯಕ್ತಿಯು ಶುದ್ಧನಾಗಿದ್ದಾನೆ. ಯಾಜಕನು ಅವನನ್ನು ಶುದ್ಧನೆಂದು ಪ್ರಕಟಿಸಬೇಕು.
|
39. ಯಾಜಕನು ಆ ಕಲೆಗಳನ್ನು ಪರೀಕ್ಷಿಸಬೇಕು. ಆ ವ್ಯಕ್ತಿಯ ಚರ್ಮದ ಮೇಲಿರುವ ಕಲೆಗಳು ಬರೀ ಮೊಬ್ಬಾದ ಬಿಳೀ ಬಣ್ಣದವುಗಳಾಗಿದ್ದರೆ, ಆಗ ರೋಗವು ಕೇವಲ ಚರ್ಮದಲ್ಲಿ ಹುಟ್ಟಿದ ಚಿಬ್ಬಾಗಿದೆ. ಆ ವ್ಯಕ್ತಿಯು ಶುದ್ಧನಾಗಿದ್ದಾನೆ.
|
43. ಯಾಜಕನು ಆ ವ್ಯಕ್ತಿಯನ್ನು ಪರೀಕ್ಷಿಸಬೇಕು. ಸೋಂಕಿನಿಂದ ಉಂಟಾದ ಊತ ಕೆಂಪು ಬಿಳುಪು ಮಿಶ್ರವಾಗಿ ಚರ್ಮದಲ್ಲಿ ಕುಷ್ಠದಂತೆ ತೋರಿದರೆ,
|
44. ಆಗ ಆ ವ್ಯಕ್ತಿಯ ತಲೆಯಲ್ಲಿ ಕುಷ್ಠರೋಗವಿದೆ. ಅವನು ಅಶುದ್ಧನಾಗಿದ್ದಾನೆ. ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು.
|
45. “ಒಬ್ಬನಿಗೆ ಕುಷ್ಠರೋಗವಿದ್ದರೆ, ಅವನು ಬೇರೆ ಜನರಿಗೆ ಎಚ್ಚರಿಕೆ ಕೊಡಬೇಕು. ‘ನಾನು ಅಶುದ್ಧನು, ಅಶುದ್ಧನು’ ಎಂದು ಅವನು ಕೂಗಿಕೊಳ್ಳಬೇಕು. ಆ ವ್ಯಕ್ತಿಯು ತನ್ನ ಬಟ್ಟೆಗಳನ್ನು ಹರಿದುಕೊಂಡಿರಬೇಕು; ತನ್ನ ಕೂದಲನ್ನು ಕೆದರಿಕೊಂಡಿರಬೇಕು; ತನ್ನ ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡಿರಬೇಕು.
|
46. ಆ ವ್ಯಕ್ತಿಯು ತನಗೆ ರೋಗವಿರುವ ಕಾಲವೆಲ್ಲಾ ಅಶುದ್ಧನಾಗಿರುವನು. ಆ ವ್ಯಕ್ತಿಯು ಅಶುದ್ಧನಾಗಿದ್ದಾನೆ. ಅವನು ಒಂಟಿಯಾಗಿ ವಾಸಿಸಬೇಕು. ಅವನ ನಿವಾಸವು ಪಾಳೆಯದ ಹೊರಗೆ ಇರಬೇಕು.
|
49. ಹಸಿರು ಅಥವಾ ಕೆಂಪು ಬಣ್ಣದ ಬೂಷ್ಟು ಬಟ್ಟೆಯ, ಚರ್ಮದ, ನೇಯ್ದ ಮತ್ತು ಹೆಣೆದ ಸಾಮಗ್ರಿಗಳ ಮೇಲೆ ಇದ್ದರೆ, ಆಗ ಅದನ್ನು ಯಾಜಕನಿಗೆ ತೋರಿಸಬೇಕು.
|
53. “ಬೂಷ್ಟು ಬಟ್ಟೆಯ ಮೇಲಾಗಲಿ ಚರ್ಮದ ಮೇಲಾಗಲಿ ನೇಯ್ದ ಅಥವಾ ಹೆಣೆದ ಬಟ್ಟೆಯ ಮೇಲಾಗಲಿ ಹರಡಿಲ್ಲವೆಂದು ಯಾಜಕನು ಕಂಡರೆ, ಅದನ್ನು ತೊಳೆಯಬೇಕು.
|
54. ಯಾಜಕನು ಆ ತೊಗಲನ್ನು ಅಥವಾ ಬಟ್ಟೆಯನ್ನು ತೊಳೆಯಲು ಜನರಿಗೆ ಅಪ್ಪಣೆಕೊಡಬೇಕು. ಬಳಿಕ ಯಾಜಕನು ಆ ಬಟ್ಟೆಯನ್ನು ಇನ್ನೂ ಏಳು ದಿನಗಳವರೆಗೆ ಪ್ರತ್ಯೇಕವಾಗಿರಿಸಬೇಕು.
|
55. ಆ ಸಮಯದನಂತರ ಯಾಜಕನು ಅದನ್ನು ತಿರುಗಿ ಪರೀಕ್ಷಿಸಬೇಕು. ಬೂಷ್ಟು ಇನ್ನೂ ಹಾಗೆಯೇ ಇರುವಂತೆ ಕಂಡರೆ, ಆಗ ಆ ವಸ್ತು ಅಶುದ್ಧವಾಗಿದೆ. ಅದು ಹರಡಲಿಲ್ಲವಾದರೂ ನೀವು ಬಟ್ಟೆಯನ್ನು ಅಥವಾ ತೊಗಲನ್ನು ಸುಟ್ಟುಹಾಕಬೇಕು.
|
56. “ಆದರೆ ಯಾಜಕನು ತೊಗಲನ್ನಾಗಲಿ ಬಟ್ಟೆಯನ್ನಾಗಲಿ ನೋಡಿದಾಗ, ತೊಳೆದನಂತರ ಬೂಷ್ಟು ಮೊಬ್ಬಾಗಿರುವುದನ್ನು ಕಂಡರೆ, ಆಗ ಯಾಜಕನು ಕಲೆ ಇರುವ ಆ ಬಟ್ಟೆಯ ಅಥವಾ ತೊಗಲಿನ ಭಾಗವನ್ನು ಕತ್ತರಿಸಿಹಾಕಬೇಕು. (ಅದು ನೇಯ್ದ ಬಟ್ಟೆಯಾಗಿದ್ದರೂ ಸರಿ, ಹೆಣೆದ ಬಟ್ಟೆಯಾಗಿದ್ದರೂ ಸರಿ.)
|
57. ಆದರೆ ಬೂಷ್ಟು ಆ ತೊಗಲಿನ ಮೇಲೆ ಅಥವಾ ಬಟ್ಟೆಯ ಮೇಲೆ ಮರಳಿ ಬಂದರೆ, ಆಗ ಆ ಬೂಷ್ಟು ಹರಡುತ್ತಿದೆ ಎಂದರ್ಥ. ಆ ತೊಗಲನ್ನು ಅಥವಾ ಆ ಬಟ್ಟೆಯನ್ನು ಸುಟ್ಟುಹಾಕಬೇಕು.
|
58. ಆದರೆ, ತೊಳೆದ ನಂತರ ಬೂಷ್ಟು ತಿರುಗಿ ಬಾರದಿದ್ದರೆ, ಆ ತೊಗಲು ಅಥವಾ ಬಟ್ಟೆ ಶುದ್ಧವಾಗಿದೆ. ಅದು ಹೆಣೆದ ಅಥವಾ ಹೊಲಿದ ಬಟ್ಟೆಯಾಗಿದ್ದರೂ ಶುದ್ಧವಾಗಿದೆ.”
|
59. ಚರ್ಮದ ವಸ್ತುಗಳ ಮೇಲಾಗಲಿ ಬಟ್ಟೆಯ ಮೇಲಾಗಲಿ (ಅದು ಉಣ್ಣೆಯದ್ದಾಗಿರಲಿ ನಾರಿನದ್ದಾಗಿರಲಿ ನೇಯ್ದದ್ದಾಗಿರಲಿ ಅಥವಾ ಹೆಣೆದದ್ದಾಗಿರಲಿ) ಕಂಡು ಬರುವ ಬೂಷ್ಟಿನ ವಿಷಯದಲ್ಲಿ ಅನುಸರಿಸಬೇಕಾದ ನಿಯಮಗಳು ಇವೇ. ಶುದ್ಧವಾದವುಗಳೋ ಅಶುದ್ಧವಾದವುಗಳೋ ಎಂದು ನಿರ್ಧಾರ ಮಾಡಲು ಇದೇ ನಿಯಮಗಳನ್ನು ಅನುಸರಿಸಬೇಕು.
|