5. ಯಾವನಾದರೂ ಆ ವ್ಯಕ್ತಿಯ ಹಾಸಿಗೆಯನ್ನು ಮುಟ್ಟಿದರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
|
6. ಸ್ರಾವವುಳ್ಳವನು ಕುಳಿತುಕೊಳ್ಳುವ ವಸ್ತುವಿನ ಮೇಲೆ ಯಾವನಾದರೂ ಕುಳಿತುಕೊಂಡರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನ ಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
|
7. ಅಲ್ಲದೆ ಸ್ರಾವವುಳ್ಳ ವ್ಯಕ್ತಿಯನ್ನು ಯಾವನಾದರೂ ಮುಟ್ಟಿದರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
|
8. “ಸ್ರಾವವುಳ್ಳ ವ್ಯಕ್ತಿ ಶುದ್ಧವ್ಯಕ್ತಿಯ ಮೇಲೆ ಉಗುಳಿದರೆ, ಶುದ್ಧವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ನೀರಿನಿಂದ ಸ್ನಾನಮಾಡಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
|
10. ಅದ್ದರಿಂದ ಯಾವನಾದರೂ ಸ್ರಾವವುಳ್ಳ ವ್ಯಕ್ತಿಯ ಕೆಳಗಿರುವ ಯಾವದೇ ವಸ್ತುಗಳನ್ನು ಮುಟ್ಟಿದರೂ ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಸ್ರಾವವುಳ್ಳ ವ್ಯಕ್ತಿಯ ಕೆಳಗಿರುವ ವಸ್ತುಗಳನ್ನು ತೆಗೆದುಕೊಂಡುಹೋಗುವ ಯಾವನಾದರೂ ತನ್ನ ಬಟ್ಟೆಗಳನ್ನು ತೊಳೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
|
11. “ಒಂದು ವೇಳೆ ಸ್ರಾವವುಳ್ಳ ಒಬ್ಬನು ತನ್ನ ಕೈಗಳನ್ನು ನೀರಿನಲ್ಲಿ ತೊಳೆಯದೆ ಇನ್ನೊಬ್ಬ ವ್ಯಕ್ತಿಯನ್ನು ಮುಟ್ಟಿದರೆ, ಆಗ ಆ ಇನ್ನೊಬ್ಬ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
|
12. ಸ್ರಾವವುಳ್ಳ ವ್ಯಕ್ತಿ ಮಣ್ಣಿನ ಮಡಿಕೆಯನ್ನು ಮುಟ್ಟಿದರೆ, ಆ ಮಡಿಕೆಯನ್ನು ಒಡೆದುಹಾಕಬೇಕು. ಸ್ರಾವವುಳ್ಳ ವ್ಯಕ್ತಿ ಮರದ ಬಟ್ಟಲನ್ನು ಮುಟ್ಟಿದರೆ, ಆ ವಸ್ತುವನ್ನು ನೀರಿನಲ್ಲಿ ತೊಳೆಯಬೇಕು.
|
13. “ಸ್ರಾವವುಳ್ಳವನ ಸ್ರಾವವು ನಿಂತು ವಾಸಿಯಾದಾಗ, ಅವನು ಶುದ್ಧಮಾಡಿಕೊಳ್ಳುವುದಕ್ಕೆ ಏಳು ದಿನಗಳವರೆಗೆ ಕಾಯಬೇಕು. ಬಳಿಕ ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಹರಿಯುವ ನೀರಿನಲ್ಲಿ ಸ್ನಾನಮಾಡಬೇಕು. ಆಗ ಅವನು ಶುದ್ಧನಾಗುವನು.
|
14. ಎಂಟನೆಯ ದಿನದಲ್ಲಿ ಆ ವ್ಯಕ್ತಿ ತನಗೋಸ್ಕರ ಎರಡು ಬೆಳವಕ್ಕಿಗಳನ್ನು ಅಥವಾ ಎರಡು ಪಾರಿವಾಳದ ಮರಿಗಳನ್ನು ತೆಗೆದುಕೊಳ್ಳಬೇಕು. ಅವನು ದೇವದರ್ಶನ ಗುಡಾರದ ಬಾಗಿಲಿನ ಬಳಿ ಯೆಹೋವನ ಸನ್ನಿಧಿಗೆ ಬರಬೇಕು. ಆ ವ್ಯಕ್ತಿ ಎರಡು ಪಕ್ಷಿಗಳನ್ನು ಯಾಜಕನಿಗೆ ಕೊಡಬೇಕು.
|
15. ಯಾಜಕನು ಈ ಪಕ್ಷಿಗಳಲ್ಲಿ ಒಂದನ್ನು ಪಾಪಪರಿಹಾರಕ ಯಜ್ಞವಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಅರ್ಪಿಸುವನು. ಹೀಗೆ ಯಾಜಕನು ಅವನ ಅಶುದ್ಧವಾದ ಸ್ರಾವಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು.
|
16. “ಒಬ್ಬನಿಗೆ ವೀರ್ಯಸ್ಖಲನವಾದರೆ, ಅವನು ನೀರಿನಲ್ಲಿ ಸರ್ವಾಂಗ ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
|
17. ಯಾವ ಬಟ್ಟೆಯ ಮೇಲಾಗಲಿ ತೊಗಲಿನ ವೇಲಾಗಲಿ ವೀರ್ಯವು ಬಿದ್ದರೆ, ಆ ಬಟ್ಟೆ ಅಥವಾ ತೊಗಲನ್ನು ನೀರಿನಿಂದ ತೊಳೆಯಬೇಕು. ಅದು ಸಾಯಂಕಾಲವರೆಗೆ ಅಶುದ್ಧವಾಗಿರುವುದು.
|
18. ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ, ಆಗ ಅವರಿಬ್ಬರೂ ಸ್ನಾನಮಾಡಬೇಕು. ಅವರು ಸಾಯಂಕಾಲದವರೆಗೆ ಅಶುದ್ಧರಾಗಿರುವರು.
|
19. “ಸ್ತ್ರೀಗೆ ಅವಳ ತಿಂಗಳ ಮುಟ್ಟಿನಿಂದ ಸ್ರಾವವಿದ್ದರೆ, ಅವಳು ಏಳು ದಿನಗಳವರೆಗೆ ಅಶುದ್ಧಳಾಗಿರುವಳು. ಯಾವನಾದರೂ ಆಕೆಯನ್ನು ಮುಟ್ಟಿದರೆ, ಆ ವ್ಯಕ್ತಿಯೂ ಸಾಯಂಕಾಲದವರೆಗೆ ಆಶುದ್ಧನಾಗಿರುವನು.
|
20. ಅಲ್ಲದೆ, ಸ್ತ್ರೀಯು ತನ್ನ ಮುಟ್ಟಿನ ದಿನಗಳಲ್ಲಿ ಯಾವುದರ ಮೇಲೆ ಮಲಗಿದರೂ ಅದು ಅಶುದ್ಧವಾಗಿರುವುದು ಮತ್ತು ಆ ಸಮಯದಲ್ಲಿ ಆಕೆಯು ಯಾವುದರ ಮೇಲೆ ಕುಳಿತುಕೊಂಡರೂ ಅದು ಅಶುದ್ಧವಾಗಿರುವುದು.
|
21. ಯಾವನಾದರೂ ಅವಳ ಹಾಸಿಗೆಯನ್ನು ಮುಟ್ಟಿದರೆ, ಆ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
|
22. ಯಾವನಾದರೂ ಅವಳು ಕುಳಿತುಕೊಂಡಿದ್ದ ಯಾವ ವಸ್ತುವನ್ನಾದರೂ ಮುಟ್ಟಿದರೆ, ಆ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
|
23. ಅವನು ಅವಳ ಹಾಸಿಗೆಯನ್ನಾಗಲಿ ಅಥವಾ ಅವಳು ಕುಳಿತ್ತಿದ್ದ ಸ್ಥಳದಲ್ಲಿ ಇದ್ದ ಯಾವದನ್ನಾದರೂ ಮುಟ್ಟಿದರೆ ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
|
24. “ಪುರುಷನು ಸ್ತ್ರೀಯ ಮುಟ್ಟಿನ ಸಮಯದಲ್ಲಿ ಆಕೆಯೊಡನೆ ಲೈಂಗಿಕ ಸಂಪರ್ಕ ಹೊಂದಿದರೆ, ಆಗ ಅವನು ಏಳು ದಿನಗಳವರೆಗೆ ಅಶುದ್ಧನಾಗಿರುವನು. ಅವನು ಮಲಗಿಕೊಳ್ಳುವ ಪ್ರತಿಯೊಂದು ಹಾಸಿಗೆಯು ಅಶುದ್ಧವಾಗುವುದು.
|
25. “ಸ್ತ್ರೀಗೆ ತನ್ನ ಮುಟ್ಟಿನ ದಿನಗಳ ಹೊರತಾಗಿ ಅನೇಕ ದಿನಗಳವರೆಗೆ ರಕ್ತಸ್ರಾವವಾದರೆ ಅಥವಾ ಮುಟ್ಟಿನ ದಿನಗಳ ನಂತರ ಅವಳಿಗೆ ಸ್ರಾವವಾದರೆ, ಆಕೆಯು ತನ್ನ ಮುಟ್ಟಿನ ದಿನಗಳಲ್ಲಿ ಅಶುದ್ಧಳಾಗಿರುವಂತೆ, ಅಶುದ್ಧಳಾಗಿರುವಳು. ಅವಳಿಗೆ ಸ್ರಾವವಾಗುವ ದಿನಗಳೆಲ್ಲಾ ಅವಳು ಅಶುದ್ಧಳಾಗಿರುವಳು.
|
26. ಆ ಸ್ರಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ, ಅದು ತಿಂಗಳ ಮುಟ್ಟಿನ ಕಾಲದಲ್ಲಿ ಅವಳು ಮಲಗಿರುವ ಹಾಸಿಗೆಯಂತೆಯೇ ಅಶುದ್ಧವಾಗಿರುವುದು. ಅವಳು ಯಾವುದರ ಮೇಲೆ ಕುಳಿತರೂ ಅದು ತಿಂಗಳ ಮುಟ್ಟಿನ ಕಾಲದಲ್ಲಿ ಅವಳು ಕುಳಿತಿದ್ದ ವಸ್ತುವಿನಂತೆಯೇ ಅಶುದ್ಧವಾಗಿರುವುದು.
|
27. ಯಾವನಾದರೂ ಆ ವಸ್ತುಗಳನ್ನು ಮುಟ್ಟಿದರೆ, ಆ ವ್ಯಕ್ತಿ ಅಶುದ್ಧನಾಗಿರುವನು. ಆ ವ್ಯಕ್ತಿಯು ತನ್ನ ಬಟ್ಟೆಗಳನ್ನು ತೊಳೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
|
29. ಬಳಿಕ ಎಂಟನೆಯ ದಿನದಲ್ಲಿ ಸ್ತ್ರೀಯು ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಳ್ಳಬೇಕು. ಅವಳು ಅವುಗಳನ್ನು ದೇವದರ್ಶನಗುಡಾರದ ಬಾಗಿಲಲ್ಲಿ ಯಾಜಕನ ಬಳಿಗೆ ತರಬೇಕು.
|
30. ತರುವಾಯ ಯಾಜಕನು ಒಂದು ಪಕ್ಷಿಯನ್ನು ಪಾಪಪರಿಹಾರಕ ಯಜ್ಞವಾಗಿಯೂ ಇನ್ನೊಂದು ಪಕ್ಷಿಯನ್ನು ಸರ್ವಾಂಗಹೋಮವಾಗಿಯೂ ಅರ್ಪಿಸಬೇಕು. ಹೀಗೆ ಯಾಜಕನು ಅವಳಿಗಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು.
|
31. “ಆದ್ದರಿಂದ ಅಶುದ್ಧತ್ವದ ಕುರಿತು ನೀವು ಇಸ್ರೇಲರನ್ನು ಎಚ್ಚರಿಸಬೇಕು. ನೀವು ಜನರನ್ನು ಎಚ್ಚರಿಸದಿದ್ದರೆ ಅವರು ನನ್ನ ಪವಿತ್ರ ಗುಡಾರವನ್ನು ಅಶುದ್ಧಮಾಡಿ ಸಾವಿಗೀಡಾಗುವರು”
|
32. ಸ್ರಾವವುಳ್ಳ ಜನರು ಅನುಸರಿಸಬೇಕಾದ ನಿಯಮಗಳು ಇವುಗಳೇ. ವೀರ್ಯಸ್ಖಲನದಿಂದ ಅಶುದ್ಧರಾದ ಪುರುಷರು ಅನುಸರಿಸಬೇಕಾದ ನಿಯಮಗಳು ಇವುಗಳೇ.
|
33. ತಮ್ಮ ತಿಂಗಳ ಮುಟ್ಟಿನಿಂದ ಅಶುದ್ಧರಾಗುವ ಸ್ತ್ರೀಯರು, ಸ್ರಾವವಾಗುವ ಗಂಡಸರು ಮತ್ತು ಸ್ತ್ರೀಯರು ಅನುಸರಿಸಬೇಕಾದ ನಿಯಮಗಳು ಇವುಗಳೇ. ಅಶುದ್ಧಳಾದ ಸ್ತ್ರೀಯೊಡನೆ ಮಲಗುವುದರಿಂದ ಅಶುದ್ಧನಾಗುವ ಯಾವನಾದರೂ ಅನುಸರಿಸಬೇಕಾದ ನಿಯಮಗಳು ಇವುಗಳೇ.
|