2. “ಆರೋನನನ್ನೂ ಅವನ ಪುತ್ರರನ್ನೂ ಕರೆದುಕೊಂಡು ಅವರೊಂದಿಗೆ ಯಾಜಕ ವಸ್ತ್ರಗಳನ್ನೂ ಅಭಿಷೇಕ ತೈಲವನ್ನೂ ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯಿಂದ ತುಂಬಿರುವ ಪುಟ್ಟಿಯನ್ನೂ ತೆಗೆದುಕೊಂಡು ಬಾ.
|
7. ನಿಲುವಂಗಿಯನ್ನು ಆರೋನನಿಗೆ ತೊಡಿಸಿದನು; ನಡುಕಟ್ಟನ್ನು ಕಟ್ಟಿದನು; ಮೇಲಂಗಿಯನ್ನು ತೊಡಿಸಿದನು. ಏಫೋದನ್ನು ಹಾಕಿಸಿ ಕವಚದ ಮೇಲಿನ ವಿಶೇಷವಾದ ನಡುಕಟ್ಟನ್ನು ಕಟ್ಟಿದನು; ಎದೆಕವಚವನ್ನು ಬಿಗಿದನು.
|
9. ಅವನ ತಲೆಗೆ ಮುಂಡಾಸವನ್ನು ಇಟ್ಟನು; ಮುಂಡಾಸದ ಮುಂಭಾಗದಲ್ಲಿ ಚಿನ್ನದ ಪಟ್ಟಿಯನ್ನು ಕಟ್ಟಿದನು. ಈ ಚಿನ್ನದ ಪಟ್ಟಿಯು ಪವಿತ್ರಕಿರೀಟವಾಗಿದೆ. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು.
|
10. ತರುವಾಯ ಮೋಶೆಯು ಅಭಿಷೇಕತೈಲವನ್ನು ತೆಗೆದುಕೊಂಡು ಪವಿತ್ರಗುಡಾರದ ಮೇಲೆ ಮತ್ತು ಅದರಲ್ಲಿರುವ ಎಲ್ಲಾ ವಸ್ತುಗಳ ಮೇಲೆ ಚಿಮಿಕಿಸಿದನು. ಈ ರೀತಿಯಾಗಿ ಮೋಶೆಯು ಅವುಗಳನ್ನು ಪವಿತ್ರಗೊಳಿಸಿದನು.
|
11. ಮೋಶೆಯು ಅಭಿಷೇಕತೈಲದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ವೇದಿಕೆಯ ಮೇಲೆ ಏಳು ಸಲ ಚಿಮಿಕಿಸಿದನು. ಮೋಶೆಯು ತೈಲವನ್ನು ವೇದಿಕೆಯ ಮೇಲೆ, ಅದರ ಎಲ್ಲಾ ಉಪಕರಣಗಳ ಮೇಲೆ ಚಿಮಿಕಿಸಿದನು. ಮೋಶೆಯು ತೈಲವನ್ನು ಗಂಗಾಳ ಮತ್ತು ಅದರ ಪೀಠದ ಮೇಲೂ ಚಿಮಿಕಿಸಿದನು. ಈ ರೀತಿಯಾಗಿ ಮೋಶೆಯು ಅವುಗಳನ್ನು ಪವಿತ್ರಗೊಳಿಸಿದನು.
|
13. ಬಳಿಕ ಮೋಶೆಯು ಆರೋನನ ಪುತ್ರರನ್ನು ಕರೆದುಕೊಂಡು ಬಂದು ಅವರಿಗೆ ನಿಲುವಂಗಿಗಳನ್ನು ತೊಡಿಸಿ ನಡುಕಟ್ಟನ್ನು ಕಟ್ಟಿದನು. ಬಳಿಕ ಅವರ ತಲೆಗಳಿಗೆ ಮುಂಡಾಸಗಳನ್ನು ಇಟ್ಟನು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು.
|
14. ತರುವಾಯ ಮೋಶೆಯು ಪಾಪಪರಿಹಾರಕ್ಕಾಗಿ ಯಜ್ಞದ ಹೋರಿಯನ್ನು ತಂದನು. ಆರೋನನು ಮತ್ತು ಅವನ ಪುತ್ರರು ಆ ಪಾಪಪರಿಹಾರಕ ಯಜ್ಞದ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
|
15. ಬಳಿಕ ಮೋಶೆಯು ಹೋರಿಯನ್ನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ವೇದಿಕೆಯ ಎಲ್ಲಾ ಮೂಲೆಗಳಿಗೆ ರಕ್ತವನ್ನು ಹಚ್ಚಿದನು. ಹೀಗೆ ಮೋಶೆಯು ವೇದಿಕೆಯನ್ನು ಯಜ್ಞಗಳಿಗಾಗಿ ಶುದ್ಧಗೊಳಿಸಿ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿದನು; ಜನರನ್ನು ಶುದ್ಧಿಮಾಡುವ ಯಜ್ಞಗಳನ್ನು ಸಮರ್ಪಿಸುವುದಕ್ಕಾಗಿ ವೇದಿಕೆಯನ್ನು ಪ್ರತಿಷ್ಠೆಗೊಳಿಸಿದನು.
|
16. ಮೋಶೆಯು ಹೋರಿಯ ಒಳಗಿನ ಭಾಗಗಳ ಕೊಬ್ಬನ್ನೂ ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಮತ್ತು ಅವುಗಳನ್ನು ಆವರಿಸಿರುವ ಕೊಬ್ಬನ್ನೂ ತೆಗೆದುಕೊಂಡು ಅವುಗಳನ್ನು ವೇದಿಕೆಯ ಮೇಲೆ ಹೋಮಮಾಡಿದನು.
|
17. ಹೋರಿಯ ಚರ್ಮ, ಅದರ ಮಾಂಸ ಮತ್ತು ಅದರ ಶರೀರದ ಕಲ್ಮಶವನ್ನು ಅವನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಬೆಂಕಿಯಿಂದ ಸುಟ್ಟುಹಾಕಿದನು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು.
|
18. ಬಳಿಕ ಮೋಶೆಯು ಸರ್ವಾಂಗಹೋಮದ ಟಗರನ್ನು ತಂದನು. ಆರೋನನು ಮತ್ತು ಅವನ ಪುತ್ರರು ತಮ್ಮ ಕೈಗಳನ್ನು ಟಗರಿನ ತಲೆಯ ಮೇಲೆ ಇಟ್ಟರು.
|
22. ಬಳಿಕ ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಯಾಜಕರನ್ನಾಗಿ ನೇಮಿಸುವುದಕ್ಕೆ ವಧಿಸಬೇಕಾದ ಎರಡನೆಯ ಟಗರನ್ನು ತಂದನು. ಆರೋನನೂ ಅವನ ಪುತ್ರರೂ ತಮ್ಮ ಕೈಗಳನ್ನು ಟಗರಿನ ತಲೆಯ ಮೇಲೆ ಇಟ್ಟರು.
|
23. ಆಗ ಮೋಶೆ ಟಗರನ್ನು ವಧಿಸಿ ಅದರ ಸ್ವಲ್ಪ ರಕ್ತವನ್ನು ಆರೋನನ ಬಲಕಿಗಿಯ ತುದಿಗೂ ಅವನ ಬಲಗೈಯ ಹೆಬ್ಬೆರಳಿಗೂ ಅವನ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿದನು.
|
24. ಬಳಿಕ ಮೋಶೆಯು ಆರೋನನ ಪುತ್ರರನ್ನು ವೇದಿಕೆಯ ಸಮೀಪಕ್ಕೆ ಕರೆಸಿ ಸ್ವಲ್ಪ ರಕ್ತವನ್ನು ಅವರ ಬಲಗಿವಿಗಳ ತುದಿಗೂ ಅವರ ಬಲಗೈಗಳ ಹೆಬ್ಬೆರಳಿಗೂ ಮತ್ತು ಅವರ ಬಲಗಾಲುಗಳ ಹೆಬ್ಬೆಟ್ಟಿಗೂ ಹಚ್ಚಿದನು; ರಕ್ತವನ್ನು ವೇದಿಕೆಯ ಸುತ್ತಲೂ ಚಿಮಿಕಿಸಿದನು;
|
25. ಕೊಬ್ಬನ್ನು ಅಂದರೆ ಬಾಲದ ಮೇಲಿರುವ ಕೊಬ್ಬನ್ನೂ ಒಳಗಿನ ಭಾಗಗಳ ಮೇಲಿರುವ ಕೊಬ್ಬೆಲ್ಲವನ್ನೂ ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ಮತ್ತು ಬಲತೊಡೆಯನ್ನೂ ತೆಗೆದುಕೊಂಡನು.
|
26. ಪ್ರತಿದಿನ ಯೆಹೋವನ ಸನ್ನಿಧಿಯಲ್ಲಿ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯು ಇಡಲ್ಪಡುತ್ತಿತ್ತು. ಮೋಶೆಯು ರೊಟ್ಟಿಯಲ್ಲಿ ಒಂದು ತುಂಡನ್ನೂ ಎಣ್ಣೆ ಬೆರಸಿದ ರೊಟ್ಟಿಯಲ್ಲಿ ಒಂದು ತುಂಡನ್ನೂ ಹುಳಿಯಿಲ್ಲದ ಒಂದು ಕಡುಬನ್ನೂ ತೆಗೆದುಕೊಂಡನು. ಮೋಶೆಯು ಆ ರೊಟ್ಟಿಯ ತುಂಡುಗಳನ್ನು ಕೊಬ್ಬಿನ ಮತ್ತು ಟಗರಿನ ಬಲತೊಡೆಯ ಮೇಲೆ ಇಟ್ಟನು.
|
27. ಬಳಿಕ ಮೋಶೆಯು ಅವೆಲ್ಲವುಗಳನ್ನು ಆರೋನನ ಮತ್ತು ಅವನ ಪುತ್ರರ ಕೈಗಳಲ್ಲಿ ಇಟ್ಟನು. ಮೋಶೆಯು ತುಂಡುಗಳನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿದನು.
|
28. ಬಳಿಕ ಮೋಶೆಯು ಆರೋನನ ಮತ್ತು ಅವನ ಪುತ್ರರ ಕೈಗಳಲ್ಲಿರುವ ಈ ವಸ್ತುಗಳನ್ನು ತೆಗೆದುಕೊಂಡನು. ಮೋಶೆಯು ಅವುಗಳನ್ನು ವೇದಿಕೆಯಲ್ಲಿ ಸರ್ವಾಂಗಹೋಮದ ಮೇಲಿಟ್ಟು ಅವುಗಳನ್ನು ಹೋಮಮಾಡಿದನು. ಅದು ಆರೋನನನ್ನೂ ಅವನ ಪುತ್ರರನ್ನೂ ಯಾಜಕರನ್ನಾಗಿ ನೇಮಿಸುವ ಸಮರ್ಪಣೆಯಾಗಿತ್ತು. ಹೋಮವಾಗಿ ಅರ್ಪಿಸಲ್ಪಟ್ಟ ಈ ಯಜ್ಞವು ಯೆಹೋವನಿಗೆ ಸುಗಂಧಕರವಾಗಿದೆ.
|
29. ಮೋಶೆಯು ಎದೆಯ ಭಾಗವನ್ನು ತೆಗೆದುಕೊಂಡು ಯೆಹೋವನ ಮುಂದೆ ನೈವೇದ್ಯವಾಗಿ ನಿವಾಳಿಸಿದನು. ಅದು ಯಾಜಕರನ್ನು ನೇಮಿಸುವುದಕ್ಕಾಗಿ ಅರ್ಪಿಸಲ್ಪಟ್ಟ ಟಗರಿನಲ್ಲಿ ಮೋಶೆಯ ಪಾಲಾಗಿತ್ತು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು.
|
30. ಮೋಶೆಯು ಸ್ವಲ್ಪ ಅಭಿಷೇಕತೈಲವನ್ನು ಮತ್ತು ವೇದಿಕೆಯ ಮೇಲಿದ್ದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮೇಲೆ ಮತ್ತು ಅವನ ಯಾಜಕವಸ್ತ್ರದ ಮೇಲೆ ಚಿಮಿಕಿಸಿದನು; ಆರೋನನ ಜೊತೆ ಇದ್ದ ಅವನ ಪುತ್ರರ ಮೇಲೆ ಮತ್ತು ಅವರ ಬಟ್ಟೆಗಳ ಮೇಲೆ ಚಿಮಿಕಿಸಿದನು. ಹೀಗೆ ಮೋಶೆಯು ಆರೋನನನ್ನೂ ಅವನ ಯಾಜಕವಸ್ತ್ರವನ್ನೂ ಅವನ ಪುತ್ರರನ್ನೂ ಅವರ ಯಾಜಕ ವಸ್ತ್ರಗಳನ್ನೂ ಪವಿತ್ರಗೊಳಿಸಿದನು.
|
31. ತರುವಾಯ ಮೋಶೆಯು ಆರೋನನಿಗೂ ಅವನ ಪುತ್ರರಿಗೂ ಹೀಗೆ ಹೇಳಿದನು: “ನೀವು ಮಾಂಸವನ್ನು ದೇವದರ್ಶನಗುಡಾರದ ಬಾಗಿಲಲ್ಲಿ ಬೇಯಿಸಿ ತಿನ್ನಬೇಕು. ಪ್ರತಿಷ್ಠೆಕಾಣಿಕೆಯ ಬುಟ್ಟಿಯಲ್ಲಿರುವ ರೊಟ್ಟಿಯೊಡನೆ ಅದನ್ನು ಅಲ್ಲಿ ತಿನ್ನಿರಿ. ಮಾಂಸವನ್ನೂ ರೊಟ್ಟಿಯನ್ನೂ ಆ ಸ್ಥಳದಲ್ಲಿ ತಿನ್ನಿರಿ. ನಾನು ಹೇಳುವ ಹಾಗೆ ಇದನ್ನು ಮಾಡಿರಿ.
|
33. ಯಾಜಕರಾಗಿ ಪ್ರತಿಷ್ಠಿಸುವ ಆಚಾರವಿಧಿಯು ಏಳು ದಿನಗಳವರೆಗೆ ಇರುವುದು. ಆ ಸಮಯ ಮುಗಿಯುವವರೆಗೆ ನೀವು ದೇವದರ್ಶನಗುಡಾರದ ಬಾಗಿಲನ್ನು ಬಿಟ್ಟು ಹೋಗಬಾರದು.
|
35. ನೀವು ಏಳು ದಿನಗಳು ಹಗಲುರಾತ್ರಿ ದೇವದರ್ಶನಗುಡಾರದ ಬಾಗಿಲಿನಲ್ಲಿ ಇರಬೇಕು. ನೀವು ಯೆಹೋವನ ಆಜ್ಞೆಗಳಿಗೆ ವಿಧೇಯರಾಗದಿದ್ದರೆ ಸಾಯುವಿರಿ! ಯೆಹೋವನು ಆ ಆಜ್ಞೆಗಳನ್ನು ನನಗೆ ಕೊಟ್ಟನು.”
|