1. {ಯೇಸುವಿನ ಜೀವನದ ಬಗ್ಗೆ ಲೂಕನ ಬರಹ} PS ಸನ್ಮಾನ್ಯ ಥೆಯೊಫಿಲನೇ, PEPS ನಮ್ಮ ಮಧ್ಯದಲ್ಲಿ ಸಂಭವಿಸಿದ ಸಂಗತಿಗಳ ಚರಿತ್ರೆಯನ್ನು ತಿಳಿಸುವುದಕ್ಕೆ ಅನೇಕರು ಪ್ರಯತ್ನಿಸಿದ್ದಾರೆ.
|
2. ಪ್ರಾರಂಭದಿಂದಲೂ ಆ ಸಂಗತಿಗಳನ್ನು ಕಣ್ಣಾರೆ ಕಂಡು ದೇವರ ಸಂದೇಶವನ್ನು ಸಾರಿದವರಿಂದ ನಾವು ಕೇಳಿದ ಸಂಗತಿಗಳನ್ನೇ ಅವರು ಬರೆದಿದ್ದಾರೆ.
|
3. ಪ್ರತಿಯೊಂದು ಸಂಗತಿಯನ್ನು ಪ್ರಾರಂಭದಿಂದ ನಾನೇ ಶ್ರದ್ಧೆವಹಿಸಿ ಅಧ್ಯಯನ ಮಾಡಿರುವುದರಿಂದ ಅವೆಲ್ಲವನ್ನೂ ನಿನಗೆ ಕ್ರಮಬದ್ಧವಾಗಿ ತಿಳಿಸಲು ಪುಸ್ತಕ ರೂಪದಲ್ಲಿ ಬರೆದಿದ್ದೇನೆ.
|
5. {ಜಕರೀಯ ಮತ್ತು ಎಲಿಜಬೇತ್} PS ಹೆರೋದನು *ಹೆರೋದ ಜುದೇಯವನ್ನು ಆಳಿದ 1ನೇ ಹೆರೋದನು ಕ್ರಿ.ಪೂ. 40-4. ಜುದೇಯವನ್ನು ಆಳುತ್ತಿದ್ದ ಕಾಲದಲ್ಲಿ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಜಕರೀಯನು ಅಬೀಯನ ವರ್ಗಕ್ಕೆ †ಅಬೀಯನ ವರ್ಗ ಯೆಹೂದ್ಯಯಾಜಕರು 24 ವರ್ಗಗಳಾಗಿ ವಿಂಗಡಿಸಲ್ಪಟ್ಟಿದ್ದರು. ನೋಡಿರಿ: 1 ಪೂ.ಕಾ.ವೃ. 24. ಸೇರಿದವನು. ಜಕರೀಯನ ಹೆಂಡತಿ ಆರೋನನ ಕುಟುಂಬದವಳು. ಆಕೆಯ ಹೆಸರು ಎಲಿಜಬೇತ್.
|
6. ಜಕರೀಯನು ಮತ್ತು ಎಲಿಜಬೇತಳು ನಿಜವಾಗಿಯೂ ದೇವರ ದೃಷ್ಟಿಯಲ್ಲಿ ಒಳ್ಳೆಯವರಾಗಿದ್ದರು. ಪ್ರಭುವಿನ (ದೇವರ) ಆಜ್ಞೆಗಳನ್ನೆಲ್ಲಾ ಕೈಕೊಂಡು ನಡೆಯುತ್ತಿದ್ದ ಅವರು, ಅದೇರೀತಿ ಬಾಳಲು ಇತರರಿಗೂ ಉಪದೇಶಿಸುತ್ತಿದ್ದರು. ಅವರು ತಪ್ಪಿಲ್ಲದವರಾಗಿದ್ದರು.
|
9. ಯಾಜಕರು ಧೂಪವನು ಅರ್ಪಿಸುವುದಕ್ಕಾಗಿ ತಮ್ಮ ಸಂಪ್ರದಾಯದ ಪ್ರಕಾರ ಚೀಟಿಹಾಕಿ ಒಬ್ಬ ಯಾಜಕನನ್ನು ಆರಿಸುತ್ತಿದ್ದರು. ಈ ಸಲ ಅದು ಜಕರೀಯನ ಪಾಲಿಗೆ ಬಂದಿತು. ಆದ್ದರಿಂದ ಜಕರೀಯನು ಧೂಪ ಅರ್ಪಿಸುವುದಕ್ಕಾಗಿ ಪ್ರಭುವಿನ ಆಲಯದೊಳಗೆ ಹೋದನು.
|
13. ಆದರೆ ದೇವದೂತನು ಅವನಿಗೆ, “ಜಕರೀಯನೇ, ಹೆದರಬೇಡ. ನಿನ್ನ ಪ್ರಾರ್ಥನೆ ದೇವರಿಗೆ ಕೇಳಿಸಿತು. ನಿನ್ನ ಹೆಂಡತಿಯಾದ ಎಲಿಜಬೇತಳು ಒಂದು ಗಂಡುಮಗುವನ್ನು ಹೆರುವಳು. ನೀನು ಅವನಿಗೆ ಯೋಹಾನ ಎಂದು ಹೆಸರಿಡಬೇಕು.
|
15. ಪ್ರಭುವಿನ ದೃಷ್ಟಿಯಲ್ಲಿ ಯೋಹಾನನು ಮಹಾಪುರುಷನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿಯುವುದಿಲ್ಲ. ಯೋಹಾನನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು. ‡ಪವಿತ್ರಾತ್ಮ ದೇವರ ಆತ್ಮನೆಂತಲೂ ಕ್ರಿಸ್ತನ ಆತ್ಮನೆಂತಲೂ ಸಂತೈಸುವವನೆಂತಲೂ ಕರೆಯಲ್ಪಟ್ಟಿದ್ದಾನೆ. ಆತನು ದೇವರೊಂದಿಗೆ ಮತ್ತು ಕ್ರಿಸ್ತನೊಂದಿಗೆ ಸೇರಿ, ಲೋಕದ ಜನರ ಮಧ್ಯದಲ್ಲಿ ದೇವರ ಕಾರ್ಯವನ್ನು ಮಾಡುತ್ತಾನೆ. PEPS
|
17. ಅವನು ಪ್ರಭುವಿಗೆ ಮುಂದೂತನಾಗಿ ಹೋಗುವನು. ಅವನು ಎಲೀಯನ §ಎಲೀಯ ಸುಮಾರು ಕ್ರಿ.ಪೂ. 850ರಲ್ಲಿ ಜೀವಿಸಿದ್ದ ಪ್ರವಾದಿ. ಗುಣಶಕ್ತಿಗಳಿಂದ ಕೂಡಿದವನಾಗಿರುವನು; ತಂದೆ ಮತ್ತು ಮಕ್ಕಳ ನಡುವೆ ಸಮಾಧಾನವನ್ನು ಉಂಟುಮಾಡುವನು; ಅವಿಧೇಯರಾದ ಅನೇಕರನ್ನು ನೀತಿವಂತರ ಜ್ಞಾನದ ಕಡೆಗೆ ನಡೆಸುವನು; ಜನರನ್ನು ಪ್ರಭುವಿನ ಆಗಮನಕ್ಕೆ ಸಿದ್ಧಪಡಿಸುವನು” ಎಂದು ಹೇಳಿದನು. PEPS
|
18. ಜಕರೀಯನು ದೇವದೂತನಿಗೆ, “ನೀನು ಹೇಳುತ್ತಿರುವುದು ಸತ್ಯವೆಂಬುದಕ್ಕೆ ಆಧಾರವೇನು? ನಾನು ಮುದುಕನಾಗಿದ್ದೇನೆ ಮತ್ತು ನನ್ನ ಹೆಂಡತಿ ಸಹ ಮುಪ್ಪಿನವಳಾಗಿದ್ದಾಳೆ” ಎಂದು ಹೇಳಿದನು. PEPS
|
19. ದೇವದೂತನು, “ನನ್ನ ಹೆಸರು ಗಬ್ರಿಯೇಲ. ನಾನು ದೇವರ ಸನ್ನಿಧಿಯಲ್ಲಿ ನಿಂತುಕೊಂಡಿರುವವನು. ನಿನಗೆ ಈ ಶುಭಸಮಾಚಾರವನ್ನು ತಿಳಿಸಲು ದೇವರು ನನ್ನನ್ನು ಕಳುಹಿಸಿದ್ದಾನೆ.
|
20. ಈಗ ಕೇಳು! ಈ ಸಂಗತಿಗಳು ನೆರವೇರುವ ತನಕ ನೀನು ಮೂಕನಾಗಿರುವೆ. ಏಕೆಂದರೆ ನೀನು ನನ್ನ ಮಾತನ್ನು ನಂಬಲಿಲ್ಲ. ಆದರೆ ನಾನು ಹೇಳಿದ ಈ ಸಂಗತಿಗಳು ಖಂಡಿತವಾಗಿ ನೆರವೇರುತ್ತವೆ” ಎಂದು ಹೇಳಿದನು. PEPS
|
21. ಜನರು ಜಕರೀಯನಿಗಾಗಿ ಎದುರುನೋಡುತ್ತಾ ದೇವಾಲಯದೊಳಗೆ ಅವನು ಇಷ್ಟುಹೊತ್ತು ಇರಲು ಕಾರಣವೇನಿರಬಹುದೆಂದು ಆಶ್ಚರ್ಯಚಕಿತರಾದರು.
|
22. ಬಳಿಕ ಜಕರೀಯನು ಹೊರಗೆ ಬಂದಾಗ, ಅವನಿಗೆ ಅವರೊಡನೆ ಮಾತಾಡಲಾಗಲಿಲ್ಲ. ಆದ್ದರಿಂದ ಅವನಿಗೆ ದೇವಾಲಯದಲ್ಲಿ ದರ್ಶನವಾಗಿರಬೇಕೆಂದು ಅವರು ತಿಳಿದುಕೊಂಡರು. ಅಂದಿನಿಂದ ಅವನು ಮಾತಾಡಲಾಗದೆ ಕೇವಲ ಸನ್ನೆಗಳ ಮೂಲಕ ತಿಳಿಸುತ್ತಿದ್ದನು.
|
24. ಆ ಬಳಿಕ, ಜಕರೀಯನ ಹೆಂಡತಿಯಾದ ಎಲಿಜಬೇತಳು ಗರ್ಭಿಣಿಯಾದಳು. ಆದ್ದರಿಂದ ಆಕೆ ಐದು ತಿಂಗಳವರೆಗೆ ತನ್ನ ಮನೆಯಿಂದ ಹೊರಗೆ ಹೋಗಲಿಲ್ಲ.
|
25. ಎಲಿಜಬೇತಳು, “ನೋಡಿ, ಪ್ರಭುವು ನನಗೋಸ್ಕರ ಎಂಥಾ ಕಾರ್ಯಮಾಡಿದ್ದಾನೆ! ನನ್ನ ಜನರ ನಡುವೆ ನನಗಿದ್ದ ಅವಮಾನವನ್ನು ಪ್ರಭುವು ತೊಲಗಿಸಿದ್ದಾನೆ” ಎಂದು ಹೇಳಿದಳು. PS
|
26. {ಕನ್ಯೆ ಮರಿಯಳು} PS (26-27) ಎಲಿಜಬೇತಳು ಆರು ತಿಂಗಳ ಗರ್ಭಿಣಿಯಾಗಿದ್ದಾಗ, ದೇವರು ತನ್ನ ದೂತನಾದ ಗಬ್ರಿಯೇಲನನ್ನು ಗಲಿಲೇಯ ಪ್ರಾಂತ್ಯದ ನಜರೇತ್ ಎಂಬ ಊರಿನಲ್ಲಿ ವಾಸಿಸುತ್ತಿದ್ದ ಒಬ್ಬ ಕನ್ಯೆಯ ಬಳಿಗೆ ಕಳುಹಿಸಿದನು. ಆಕೆಗೆ ದಾವೀದನ ಮನೆತನದ ಯೋಸೇಫನೊಂದಿಗೆ ನಿಶ್ಚಿತಾರ್ಥವಾಗಿತ್ತು. ಆಕೆಯ ಹೆಸರು ಮರಿಯಳು.
|
28. ದೇವದೂತನು ಆಕೆಯ ಬಳಿಗೆ ಬಂದು, “ದೇವರಾಶೀರ್ವಾದ ಹೊಂದಿದವಳೇ, ನಿನಗೆ ಶುಭವಾಗಲಿ! ಪ್ರಭುವು ನಿನ್ನೊಡನೆ ಇದ್ದಾನೆ” ಎಂದು ಹೇಳಿದನು. PEPS
|
32. ಆತನು ಮಹಾಪುರುಷನಾಗುವನು. ಜನರು ಆತನನ್ನು ಮಹೋನ್ನತನ (ದೇವರ) ಮಗನೆಂದು ಕರೆಯುವರು. ಪ್ರಭುವಾದ ದೇವರು ಆತನಿಗೆ ಆತನ ಪೂರ್ವಿಕನಾದ ದಾವೀದನ ಅಧಿಕಾರವನ್ನು ಕೊಡುವನು.
|
35. ದೇವದೂತನು ಮರಿಯಳಿಗೆ, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸುವುದು. ಈ ಕಾರಣದಿಂದ ನಿನ್ನಲ್ಲಿ ಹುಟ್ಟುವ ಈ ಪವಿತ್ರಮಗುವು ‘ದೇವರ ಮಗ’ ಎನಿಸಿಕೊಳ್ಳುವನು.
|
36. ಇದಲ್ಲದೆ, ನಿನ್ನ ಬಂಧುವಾದ ಎಲಿಜಬೇತಳು ಗರ್ಭಿಣಿಯಾಗಿದ್ದಾಳೆ. ಆಕೆಯು ಬಹಳ ಮುಪ್ಪಿನವಳಾಗಿದ್ದರೂ ಆಕೆಗೊಬ್ಬ ಮಗ ಹುಟ್ಟುವನು. ಜನರಿಂದ ಬಂಜೆ ಎನಿಸಿಕೊಂಡಿದ್ದ ಆಕೆ ಈಗ ಆರು ತಿಂಗಳ ಗರ್ಭಿಣಿಯಾಗಿದ್ದಾಳೆ.
|
41. ಎಲಿಜಬೇತಳು ಮರಿಯಳ ವಂದನೆಯನ್ನು ಕೇಳಿದಾಗ, ಆಕೆಯ ಗರ್ಭದಲ್ಲಿದ್ದ ಮಗು ನಲಿದಾಡಿತು. ಆಗ ಎಲಿಜಬೇತಳು ಪವಿತ್ರಾತ್ಮಭರಿತಳಾಗಿ PEPS
|
42. ಹರ್ಷೋದ್ಗಾರದಿಂದ ಹೀಗೆಂದಳು: “ದೇವರು ನಿನ್ನನ್ನು (ಮರಿಯ) ಬೇರೆಲ್ಲಾ ಸ್ತ್ರೀಯರಿಗಿಂತ ಹೆಚ್ಚಾಗಿ ಆಶೀರ್ವದಿಸಿದ್ದಾನೆ. ನಿನ್ನಲ್ಲಿ ಜನಿಸಲಿರುವ ಮಗುವನ್ನು ದೇವರು ಆಶೀರ್ವದಿಸಿದ್ದಾನೆ.
|
58. ಪ್ರಭುವು ಆಕೆಗೆ ತೋರಿದ ಮಹಾಕರುಣೆಯು ಆಕೆಯ ನೆರೆಹೊರೆಯವರಿಗೆ ಮತ್ತು ಬಂಧುಗಳಿಗೆ ತಿಳಿಯಿತು. ಅವರು ಆಕೆಯ ವಿಷಯದಲ್ಲಿ ಸಂತೋಷಪಟ್ಟರು. PEPS
|
59. ಮಗುವಿಗೆ ಎಂಟು ದಿನವಾದಾಗ ಅವರು ಸುನ್ನತಿ ಮಾಡಿಸುವುದಕ್ಕಾಗಿ ಬಂದರು. ಅವರು ಆ ಮಗುವಿಗೆ “ಜಕರೀಯ” ಎಂಬ ಹೆಸರು ಇಡಬೇಕೆಂದಿದ್ದರು. ಏಕೆಂದರೆ ಅದು ಮಗುವಿನ ತಂದೆಯ ಹೆಸರಾಗಿತ್ತು.
|
63. ಆಗ ಜಕರೀಯನು ಸನ್ನೆಮಾಡಿ, ಒಂದು ಹಲಗೆಯನ್ನು ತರಿಸಿಕೊಂಡು, “ಈತನ ಹೆಸರು ಯೋಹಾನ” ಎಂದು ಬರೆದನು. ಜನರೆಲ್ಲರಿಗೂ ಆಶ್ಚರ್ಯವಾಯಿತು.
|
65. ಇದನ್ನು ಕೇಳಿ ನೆರೆಹೊರೆಯವರಿಗೆಲ್ಲಾ ಭಯವಾಯಿತು. ಜುದೇಯದ ಗುಡ್ಡಪ್ರದೇಶದಲ್ಲೆಲ್ಲಾ ಈ ಸಂಗತಿಗಳ ಬಗ್ಗೆ ಜನರು ಮಾತನಾಡತೊಡಗಿದರು.
|
66. ಈ ಸಂಗತಿಗಳನ್ನು ಕೇಳಿದ ಜನರೆಲ್ಲರು ಆಶ್ಚರ್ಯಪಟ್ಟು “ಈ ಮಗು (ಯೋಹಾನ) ಬೆಳೆದು ದೊಡ್ಡವನಾದ ಮೇಲೆ ಎಂಥ ವ್ಯಕ್ತಿಯಾಗುವನೋ?” ಎಂದು ಯೋಚಿಸತೊಡಗಿದರು. ಏಕೆಂದರೆ ಪ್ರಭುವು ಈ ಮಗುವಿನ ಸಂಗಡವಿದ್ದನು. PS
|
74. (74-75) ಏಕೆಂದರೆ ನಮ್ಮ ಜೀವಮಾನವೆಲ್ಲಾ ನಾವು ಆತನ ಸನ್ನಿಧಿಯಲ್ಲಿ ನೀತಿವಂತರೂ ಪರಿಶುದ್ಧರೂ ಆಗಿದ್ದು
ಭಯವಿಲ್ಲದೆ ಆತನ ಸೇವೆ ಮಾಡಬೇಕೆಂಬುದೇ ಆತನ ಉದ್ದೇಶವಾಗಿತ್ತು. |
76. “ಮಗುವೇ, ನೀನು ಮಹೋನ್ನತನ ಪ್ರವಾದಿ ಎನಿಸಿಕೊಳ್ಳುವೆ.
ಪ್ರಭುವಿನ ಮುಂದೆ ಹೋಗಿ ಆತನ ಬರುವಿಕೆಗಾಗಿ ಜನರನ್ನು ಸಿದ್ಧಮಾಡುವೆ. |
79. ಅಂಧಕಾರದಲ್ಲಿ ಜೀವಿಸುತ್ತಾ ಮರಣಭಯದಲ್ಲಿರುವ ಜನರಿಗೆ ದೇವರು ಸಹಾಯ ಮಾಡುವನು.
ಆತನು ನಮ್ಮನ್ನು ಸಮಾಧಾನದ ಮಾರ್ಗದಲ್ಲಿ ನಡೆಸುವನು.” PS |
80. ಆ ಮಗುವು (ಯೋಹಾನನು) ಬೆಳೆದು ದೊಡ್ಡವನಾಗಿ ಆತ್ಮದಲ್ಲಿ ಬಲವುಳ್ಳವನಾದನು. ಇಸ್ರೇಲರಿಗೆ ತನ್ನ ಉಪದೇಶವನ್ನು ಆರಂಭಿಸುವ ತನಕ ಯೋಹಾನನು ಅಡವಿಯಲ್ಲಿ ವಾಸವಾಗಿದ್ದನು. PE
|