1. ಯೇಸು ತನ್ನ ಶಿಷ್ಯರಿಗೆ ಇಂತೆಂದನು: “ಒಂದಾನೊಂದು ಕಾಲದಲ್ಲಿ ಒಬ್ಬ ಐಶ್ವರ್ಯವಂತನಿದ್ದನು. ಈ ಐಶ್ವರ್ಯವಂತನು ತನ್ನ ವ್ಯಾಪಾರವನ್ನು ನೋಡಿಕೊಳ್ಳಲು ಒಬ್ಬ ಮೇಲ್ವಿಚಾರಕನನ್ನು ನೇಮಿಸಿದನು. ಸ್ವಲ್ಪಕಾಲದ ನಂತರ, ಆ ಮೇಲ್ವಿಚಾರಕನು ತನಗೆ ಮೋಸಮಾಡುತ್ತಿದ್ದಾನೆಂಬುದು ಐಶ್ವರ್ಯವಂತನಿಗೆ ತಿಳಿಯಿತು.
|
2. ಆದ್ದರಿಂದ ಅವನು ಆ ಮೇಲ್ವಿಚಾರಕನನ್ನು ಕರೆದು, ನಿನ್ನ ಬಗ್ಗೆ ನನಗೆ ದೂರುಗಳು ಬಂದಿವೆ. ನನ್ನ ಹಣವನ್ನು ನೀನು ಯಾವುದಕ್ಕಾಗಿ ಖರ್ಚು ಮಾಡಿರುವೆ? ನನಗೆ ವರದಿ ಒಪ್ಪಿಸು. ಇನ್ನು ಮೇಲೆ ನನ್ನ ವ್ಯಾಪಾರಕ್ಕೆ ನೀನು ಮೇಲ್ವಿಚಾರಕನಾಗಿರಲು ಸಾಧ್ಯವಿಲ್ಲ’ ಎಂದು ಹೇಳಿದನು.
|
3. ಆಗ, ಆ ಮೇಲ್ವಿಚಾರಕನು ತನ್ನೊಳಗೆ, ಈಗ ನಾನೇನು ಮಾಡಲಿ? ನನ್ನ ಯಜಮಾನನು ನನ್ನನ್ನು ಈ ಕೆಲಸದಿಂದ ತೆಗೆದುಬಿಡುತ್ತಾನೆ! ಗುಂಡಿಗಳನ್ನು ಅಗಿಯುವುದಕ್ಕೂ ನನಗೆ ಬಲವಿಲ್ಲ. ಭಿಕ್ಷೆ ಬೇಡುವುದಕ್ಕೂ ನನಗೆ ನಾಚಿಕೆ.
|
4. ಈಗ ನಾನೇನು ಮಾಡಬೇಕೆಂಬುದು ನನಗೆ ಗೊತ್ತಿದೆ! ನಾನು ಕೆಲಸವನ್ನು ಕಳೆದುಕೊಂಡ ಮೇಲೆ ಬೇರೆ ಜನರು ನನ್ನನ್ನು ತಮ್ಮ ಮನೆಗಳಿಗೆ ಸೇರಿಸಿಕೊಳ್ಳುವಂಥ ಕಾರ್ಯವೊಂದನ್ನು ನಾನು ಈಗ ಮಾಡುವೆ’ ಅಂದುಕೊಂಡನು.
|
5. ಆಮೇಲೆ ಆ ಮೇಲ್ವಿಚಾರಕನು, ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನು ಕರೆದನು. ಅವನು ಮೊದಲನೆಯವನಿಗೆ, ನೀನು ನನ್ನ ಯಜಮಾನನಿಗೆ ಎಷ್ಟು ಸಾಲ ಕೊಡಬೇಕು?’ ಎಂದು ಕೇಳಿದನು.
|
6. ಅದಕ್ಕೆ ಮೊದಲನೆಯ ವ್ಯಕ್ತಿ, ನಾನು ಎಂಟುಸಾವಿರ ಕಿಲೋಗ್ರಾಂ ಆಲಿವ್ ಎಣ್ಣೆ ಕೊಡಬೇಕು’ ಎಂದು ಉತ್ತರಿಸಿದನು. ಮೇಲ್ವಿಚಾರಕನು ಅವನಿಗೆ, ನಿನ್ನ ಲೆಕ್ಕಪತ್ರ ಇಲ್ಲಿದೆ. ಕುಳಿತುಕೊಂಡು ಬೇಗನೆ ಅದನ್ನು ಕಡಿಮೆಮಾಡಿ ನಾಲ್ಕುಸಾವಿರ ಎಂದು ಬರೆ’ ಅಂದನು.
|
7. ಬಳಿಕ ಆ ಮೇಲ್ವಿಚಾರಕನು ಎರಡನೆಯವನಿಗೆ, ನೀನು ನನ್ನ ಯಜಮಾನನಿಗೆ ಎಷ್ಟು ಕೊಡಬೇಕಾಗಿದೆ’ ಎಂದು ಕೇಳಿದನು. ಎರಡನೆಯವನು, ನಾನು ಅವನಿಗೆ ಅರವತ್ತುಸಾವಿರ ಕಿಲೋಗ್ರಾಂ ಗೋಧಿ ಕೊಡಬೇಕು؆ ಎಂದು ಉತ್ತರಿಸಿದನು. ಆಗ ಆ ಮೇಲ್ವಿಚಾರಕನು ಅವನಿಗೆ, ನಿನ್ನ ಲೆಕ್ಕಪತ್ರ ಇಲ್ಲಿದೆ. ನೀನು ಅದನ್ನು ಕಡಿಮೆ ಮಾಡು. ಐವತ್ತುಸಾವಿರ ಎಂದು ಬರೆ’ ಅಂದನು.
|
8. ಬಳಿಕ ಯಜಮಾನನು ಮೋಸಗಾರನಾದ ಮೇಲ್ವಿಚಾರಕನಿಗೆ, ನೀನು ಜಾಣತನ ಮಾಡಿದೆ’ ಎಂದು ಹೇಳಿದನು. ಹೌದು, ಲೌಕಿಕ ಜನರು ತಮ್ಮ ಜನರೊಡನೆ ವ್ಯಾಪಾರದಲ್ಲಿ ದೈವಿಕ ಜನರಿಗಿಂತಲೂ ಜಾಣರಾಗಿದ್ದಾರೆ.
|
9. "ಈ ಲೋಕದಲ್ಲಿ ನೀವು ಹೊಂದಿರುವಂಥವುಗಳಿಂದ ದೇವರಿಗೆ ಸ್ನೇಹಿತರನ್ನು ಮಾಡಿಕೊಡಿರಿ. ನೀವು ಹೀಗೆ ಮಾಡಿದರೆ, ಈ ಲೋಕದವುಗಳು ನಿಮ್ಮ ಕೈಬಿಟ್ಟು ಹೋದಾಗ ನಿಮ್ಮನ್ನು ಶಾಶ್ವತದ ಮನೆಗೆ ಸ್ವೀಕರಿಸಿಕೊಳ್ಳಲಾಗುವುದು.
|
10. ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾಗಿರುವವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿರುವನು. ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವವನು ಬಹಳವಾದದ್ದರಲ್ಲಿಯೂ ಅನ್ಯಾಯಗಾರನಾಗಿರುವನು.
|
11. ಲೌಕಿಕ ಐಶ್ವರ್ಯಗಳಲ್ಲಿ ನೀವು ನಂಬಿಗಸ್ತರಾಗಿಲ್ಲದಿದ್ದರೆ ಪರಲೋಕದ ಐಶ್ವರ್ಯಗಳಲ್ಲಿಯೂ ನೀವು ನಂಬಿಗಸ್ತರಾಗಿರುವುದಿಲ್ಲ.
|
12. ಮತ್ತೊಬ್ಬನ ಸ್ವತ್ತುಗಳಲ್ಲಿ ನೀವು ನಂಬಿಗಸ್ತರಾಗಿಲ್ಲದಿದ್ದರೆ ನಿಮ್ಮ ಸ್ವಂತ ಸ್ವತ್ತುಗಳನ್ನೇ ನಿಮಗೆ ಯಾರೂ ಕೊಡುವುದಿಲ್ಲ.
|
13. "ಯಾವ ಸೇವಕನೂ ಒಂದೇ ಸಮಯದಲ್ಲಿ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಇನ್ನೊಬ್ಬನನ್ನು ಪ್ರೀತಿಸುವನು ಅಥವಾ ಒಬ್ಬನಿಗೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುವನು. ನೀವು ಒಂದೇ ಸಮಯದಲ್ಲಿ ದೇವರ ಮತ್ತು ಹಣದ ಸೇವೆಮಾಡಲಾರಿರಿ.”
|
14. ಫರಿಸಾಯರು ಈ ಎಲ್ಲಾ ಸಂಗತಿಗಳನ್ನು ಕೇಳುತ್ತಿದ್ದರು. ಫರಿಸಾಯರೆಲ್ಲರು ಹಣದಾಸೆ ಉಳ್ಳವರಾಗಿದ್ದರಿಂದ ಅವರು ಯೇಸುವನ್ನು ಟೀಕಿಸಿದರು.
|
15. ಯೇಸು ಫರಿಸಾಯರಿಗೆ ಇಂತೆಂದನು, "ನೀವು ಜನರ ಮುಂದೆ ನಿಮ್ಮನ್ನು ಒಳ್ಳೆಯವರೆಂದು ತೋರಿಸಿಕೊಳ್ಳುತ್ತೀರಿ. ಆದರೆ ನಿಜವಾಗಿಯೂ ನಿಮ್ಮ ಹೃದಯದಲ್ಲಿರುವುದು ದೇವರಿಗೆ ಗೊತ್ತು. ಜನರ ದೃಷ್ಟಿಯಲ್ಲಿ ಅಮೂಲ್ಯವಾದುವುಗಳು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿವೆ.
|
16. "ಜನರು ಮೋಶೆಯ ಧರ್ಮಶಾಸ್ತ್ರಕ್ಕೂ ಪ್ರವಾದಿಗಳ ಗ್ರಂಥಗಳಿಗೂ ಅನುಸಾರವಾಗಿ ಜೀವಿಸಬೇಕೆಂಬುದು ದೇವರ ಅಪೇಕ್ಷೆಯಾಗಿತ್ತು. ಸ್ನಾನಿಕ ಯೋಹಾನನು ಬಂದ ಕಾಲದಿಂದ ದೇವರ ರಾಜ್ಯದ ಸುವಾರ್ತೆಯು ತಿಳಿಸಲ್ಪಡುತ್ತಿದೆ. ಅನೇಕ ಜನರು ದೇವರ ರಾಜ್ಯದೊಳಗೆ ಹೋಗಲು ಬಹಳ ಪ್ರಯಾಸಪಡುತ್ತಿದ್ದಾರೆ.
|
18. "ತನ್ನ ಪತ್ನಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಆಗುವವನು ವ್ಯಭಿಚಾರ ಮಾಡಿದವನಾಗುತ್ತಾನೆ. ವಿವಾಹ ವಿಚ್ಛೇದನ ಹೊಂದಿದ ಸ್ತ್ರೀಯನ್ನು ಮದುವೆ ಆಗುವವನು ಸಹ ವ್ಯಭಿಚಾರ ಮಾಡಿದವನಾಗುತ್ತಾನೆ.”
|
19. ಯೇಸು ಇಂತೆಂದನು: ‘ಒಬ್ಬ ಐಶ್ವರ್ಯವಂತನಿದ್ದನು. ಅವನು ಯಾವಾಗಲೂ ಉತ್ತಮವಾದ ಉಡುಪುಗಳನ್ನು ಧರಿಸುತ್ತಿದ್ದನು. ಅವನು ಬಹಳ ಐಶ್ವರ್ಯವಂತನಾಗಿದ್ದುದರಿಂದ ಪ್ರತಿದಿನವೂ ವೈಭವದೊಡನೆ ಊಟಮಾಡುತ್ತಾ ಸಂತೋಷಪಡುತ್ತಿದ್ದನು.
|
20. ಅಲ್ಲಿ ಲಾಜರನೆಂಬ ಒಬ್ಬ ಬಡಮನುಷ್ಯನೂ ಇದ್ದನು. ಅವನ ಮೈತುಂಬ ಹುಣ್ಣುಗಳಿದ್ದವು. ಅವನು ಐಶ್ವರ್ಯವಂತನ ಮನೆಯ ಹೊರಬಾಗಿಲ ಬಳಿ ಬಿದ್ದುಕೊಂಡಿರುತ್ತಿದ್ದನು.
|
21. ಐಶ್ವರ್ಯವಂತನು ಊಟ ಮಾಡಿದ ಮೇಲೆ ಹೊರಗೆಸೆದ ಎಂಜಲನ್ನು ತಿನ್ನುವುದಕ್ಕಾಗಿ ಅಲ್ಲಿ ಬಿದ್ದುಕೊಂಡಿರುತ್ತಿದ್ದನು. ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.
|
22. ಸ್ವಲ್ಪ ಸಮಯದ ನಂತರ ಲಾಜರನು ಸತ್ತನು. ದೇವದೂತರು ಲಾಜರನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಒಂದು ದಿನ ಐಶ್ವರ್ಯವಂತನೂ ಸತ್ತನು. ಅವನಿಗೆ ಸಮಾಧಿ ಮಾಡಲಾಯಿತು.
|
24. ತಂದೆಯಾದ ಅಬ್ರಹಾಮನೇ, ನನ್ನ ಮೇಲೆ ಕರುಣೆತೋರು! ಲಾಜರನನ್ನು ನನ್ನ ಬಳಿಗೆ ಕಳುಹಿಸು. ಅವನು ತನ್ನ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ನಾನು ಈ ಬೆಂಕಿಯಲ್ಲಿ ಯಾತನೆಪಡುತ್ತಿದ್ದೇನೆ!؆ ಎಂದು ಬೇಡಿಕೊಂಡನು.
|
25. ಅದಕ್ಕೆ ಅಬ್ರಹಾಮನು, ‘ಕಂದಾ, ನಿನ್ನ ಜೀವಮಾನದ ದಿನಗಳು ನಿನಗೆ ನೆನಪಿಲ್ಲವೇ? ಅಲ್ಲಿ ನಿನಗೆ ಎಲ್ಲ ಬಗೆಯ ಸುಖವಿತ್ತು. ಆದರೆ ಲಾಜರಿನಿಗಾದರೊ ಕಷ್ಟಗಳೇ ತುಂಬಿಕೊಂಡಿದ್ದವು. ಆದ್ದರಿಂದ ಈಗ ಅವನು ಸುಖಪಡುತ್ತಿದ್ದಾನೆ, ನೀನು ಸಂಕಟಪಡುತ್ತಿರುವೆ.
|
26. ಮಾತ್ರವಲ್ಲದೆ ನಿನಗೂ ನಮಗೂ ಮಧ್ಯೆ ದೊಡ್ಡ ಡೊಂಗುರವಿದೆ. ಅಲ್ಲಿಗೆ ಬಂದು ನಿನಗೆ ಸಹಾಯ ಮಾಡಲು ಯಾರಿಗೂ ಸಾಧ್ಯವಿಲ್ಲ. ಅಲ್ಲದೆ ಯಾರು ಅಲ್ಲಿಂದ ಇಲ್ಲಿಗೆ ಬರಲು ಸಾಧ್ಯವಿಲ್ಲ’ ಎಂದು ಹೇಳಿದನು.
|
28. ನನಗೆ ಐದು ಮಂದಿ ಸಹೋದರರಿದ್ದಾರೆ. ಅವರು ಈ ಯಾತನೆಯ ಸ್ಥಳಕ್ಕೆ ಬಾರದಂತೆ ಲಾಜರನು ಅವರನ್ನು ಎಚ್ಚರಿಸಲಿ’ ಎಂದು ಹೇಳಿದನು.
|
29. ಅದಕ್ಕೆ ಅಬ್ರಹಾಮನು, ಮೋಶೆಯ ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥಗಳು ಅವರಲ್ಲಿ ಇವೆ. ಅವರು ಅವುಗಳನ್ನು ಓದಿ ಕಲಿತುಕೊಳ್ಳಲಿ’ ಅಂದನು.
|
30. ಅದಕ್ಕೆ ಐಶ್ವರ್ಯವಂತನು, ತಂದೆಯಾದ ಅಬ್ರಹಾಮನೇ, ಹಾಗೆನ್ನಬೇಡ! ಯಾರಾದರೊಬ್ಬರು ಸತ್ತವರೊಳಗಿಂದ ಎದ್ದುಹೋದರೆ, ಅವರು ತಮ್ಮ ಹೃದಯಗಳನ್ನೂ ಜೀವಿತಗಳನ್ನೂ ಮಾರ್ಪಡಿಸಿಕೊಳ್ಳುವರು’ ಎಂದು ಹೇಳಿದನು.
|
31. ಅದಕ್ಕೆ ಅಬ್ರಹಾಮನು ಅವನಿಗೆ, ಇಲ್ಲ! ನಿನ್ನ ಸಹೋದರರು ಮೋಶೆಯ ಮತ್ತು ಪ್ರವಾದಿಗಳ ನುಡಿಗಳನ್ನು ಕೇಳವುದಿಲ್ಲವಾದರೆ, ಸತ್ತವರೊಳಗಿಂದ ಜೀವಿತನಾಗಿ ಎದ್ದುಬಂದವನ ಮಾತನ್ನೂ ಅವರು ಕೇಳುವುದಿಲ್ಲ؆” ಎಂದು ಹೇಳಿದನು.
|