1. ಯೇಸು ತನ್ನ ಶಿಷ್ಯರಿಗೆ, “ಜನರನ್ನು ಪಾಪಕ್ಕೆ ನಡೆಸುವಂಥ ಸಂಗತಿಗಳು ಖಂಡಿತವಾಗಿ ಬರುತ್ತವೆ. ಆದರೆ ಅವುಗಳನ್ನು ಬರಮಾಡುವವನ ಗತಿಯನ್ನು ಏನು ಹೇಳಲಿ!
|
2. ಬಲಹೀನರಾದ ಇವರನ್ನು ಪಾಪಕ್ಕೆ ನಡೆಸುವವನು ತನ್ನ ಕುತ್ತಿಗೆಗೆ ಒಂದು ದೊಡ್ಡ ಕಲ್ಲನ್ನು ಕಟ್ಟಿಕೊಂಡು ನೀರಿನಲ್ಲಿ ಮುಳುಗುವುದೇ ಉತ್ತಮ.
|
3. ಆದ್ದರಿಂದ ಎಚ್ಚರಿಕೆಯಾಗಿರಿ! “ನಿನ್ನ ಸಹೋದರನು ಪಾಪಮಾಡಿದರೆ, ಅವನನ್ನು ಖಂಡಿಸು. ಒಂದುವೇಳೆ ಅವನೇನಾದರೂ ತನ್ನ ತಪ್ಪಿಗಾಗಿ ಪಶ್ಚಾತ್ತಾಪಪಟ್ಟರೆ ಅವನನ್ನು ಕ್ಷಮಿಸು.
|
4. ನಿನ್ನ ಸಹೋದರನು ನಿನಗೆ ಒಂದು ದಿನದಲ್ಲಿ ಏಳು ಸಲ ತಪ್ಪುಮಾಡಿ, ಪ್ರತಿಸಲವೂ, ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ, ನೀನು ಅವನನ್ನು ಕ್ಷಮಿಸಬೇಕು” ಎಂದು ಹೇಳಿದನು.
|
6. ಪ್ರಭುವು ಅವರಿಗೆ ಇಂತೆಂದನು: “ನಿಮ್ಮ ನಂಬಿಕೆ ಸಾಸಿವೆ ಕಾಳಷ್ಟು ದೊಡ್ಡದಾಗಿದ್ದರೆ, ನೀವು ಈ ಅತ್ತಿಮರಕ್ಕೆ, ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!؆ ಎಂದು ಹೇಳಿದರೂ ಅದು ನಿಮಗೆ ವಿಧೇಯವಾಗುತ್ತದೆ.
|
7. ”ನಿಮ್ಮಲ್ಲಿ ಒಬ್ಬನಿಗೆ ಹೊಲದಲ್ಲಿ ಕೆಲಸ ಮಾಡುವಂಥ ಒಬ್ಬ ಸೇವಕನಿದ್ದಾನೆಂದು ಭಾವಿಸಿಕೊಳ್ಳೋಣ. ಆ ಸೇವಕನು ಭೂಮಿಯನ್ನು ಉಳುತ್ತಿರುತ್ತಾನೆ ಅಥವಾ ಕುರಿಗಳನ್ನು ಮೇಯಿಸುತ್ತಿರುತ್ತಾನೆ. ಆ ಸೇವಕನು ಹೊಲದಲ್ಲಿ ಕೆಲಸ ಮುಗಿಸಿ ಮನೆಗೆ ಬಂದಾಗ ನೀನು ಅವನಿಗೆ ಏನು ಹೇಳುವೆ? ಒಳಗೆ ಬಾ! ಊಟಕ್ಕೆ ಕುಳಿತುಕೊ’ ಎಂದು ಹೇಳುವಿಯೋ?
|
8. ಇಲ್ಲ! ನೀನು ಅವನಿಗೆ, ನನಗೋಸ್ಕರ ಅಡಿಗೆ ಮಾಡು. ಬಳಿಕ ಶುಭ್ರವಾದ ಬಟ್ಟೆಯನ್ನು ಧರಿಸಿಕೊಂಡು ಬಂದು ನನಗೆ ಊಟಬಡಿಸು. ನಾನು ತಿಂದು ಕುಡಿದ ಮೇಲೆ ನೀನು ಊಟಮಾಡು’ ಎಂದು ಹೇಳುವೆಯಷ್ಟೇ.
|
9. ಆ ಸೇವಕನು ತನ್ನ ಕೆಲಸ ಮಾಡಿದ್ದಕ್ಕಾಗಿ ನೀನೇನೂ ಅವನಿಗೆ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸಬೇಕಾಗಿಲ್ಲ. ಸೇವಕನಿರುವುದು ಯಜಮಾನನು ಹೇಳಿದ್ದನ್ನು ಮಾಡುವುದಕ್ಕಾಗಿಯಷ್ಟೇ.
|
10. ಇದೇ ನಿಯಮ ನಿಮಗೂ ಅನ್ವಯಿಸುತ್ತದೆ. ನಿಮಗೆ ನೇಮಿಸಿದ ಕೆಲಸಗಳನ್ನು ನೀವು ಮಾಡಿ ಪೂರೈಸಿದಾಗ, ನಾವು ಆಳುಗಳು, ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ’ ಎಂದು ಹೇಳಬೇಕು.”
|
12. ಅಲ್ಲಿ ಆತನು ಒಂದು ಗ್ರಾಮಕ್ಕೆ ಬಂದನು. ಅಲ್ಲಿ ಹತ್ತು ಜನರು ಆತನನ್ನು ಭೇಟಿಯಾದರು. ಅವರು ಯೇಸುವಿನ ಸಮೀಪಕ್ಕೆ ಬರಲಿಲ್ಲ. ಏಕೆಂದರೆ ಅವರೆಲ್ಲರೂ ಕುಷ್ಠರೋಗಿಗಳಾಗಿದ್ದರು.
|
14. ಯೇಸು ಅವರನ್ನು ನೋಡಿ, “ಹೋಗಿ, ನಿಮ್ಮನ್ನು ಯಾಜಕರಿಗೆ ತೋರಿಸಿಕೊಳ್ಳಿರಿ” ಎಂದು ಹೇಳಿದನು. ಅವರು ಯಾಜಕರ ಬಳಿಗೆ ಹೋಗುತ್ತಿದ್ದಾಗ ಅವರಿಗೆ ವಾಸಿಯಾಯಿತು.
|
15. ಅವರಲ್ಲಿ ಒಬ್ಬನು ತನಗೆ ಗುಣವಾದುದ್ದನ್ನು ಕಂಡು ಯೇಸುವಿನ ಬಳಿಗೆ ಹಿಂತಿರುಗಿ ಬಂದು ಗಟ್ಟಿಯಾದ ಧ್ವನಿಯಿಂದ ದೇವರನ್ನು ಕೊಂಡಾಡಿದನು.
|
20. ಫರಿಸಾಯರಲ್ಲಿ ಕೆಲವರು ಯೇಸುವನ್ನು, “ದೇವರ ರಾಜ್ಯವು ಯಾವಾಗ ಬರುವುದು?” ಎಂದು ಕೇಳಿದರು. ಯೇಸು ಅವರಿಗೆ, “ದೇವರ ರಾಜ್ಯವು ಬರುತ್ತಿದೆ, ಆದರೆ ನಿಮ್ಮ ಕಣ್ಣುಗಳಿಗೆ ಕಾಣಿಸುವಂತೆ ಅದು ಬರುವುದಿಲ್ಲ.
|
21. ”ಇಗೋ, ದೇವರ ರಾಜ್ಯವು ಇಲ್ಲಿದೆ’! ಅಗೋ ಅಲ್ಲಿದೆ؆! ಎಂದು ಜನರು ಹೇಳುವಂತಿಲ್ಲ. ದೇವರ ರಾಜ್ಯವು ನಿಮ್ಮೊಳಗೇ ಇದೆ” ಎಂದು ಉತ್ತರಿಸಿದನು.
|
22. ಬಳಿಕ ಯೇಸು ತನ್ನ ಶಿಷ್ಯರಿಗೆ, “ಮನುಷ್ಯಕುಮಾರನ ದಿನಗಳಲ್ಲೊಂದನ್ನು ನೀವು ನೋಡಬೇಕೆಂದು ಬಹಳವಾಗಿ ಆಶಿಸುವ ಕಾಲವು ಬರುವುದು, ಆದರೆ ನೀವು ಅದನ್ನು ನೋಡಲಾಗುವುದಿಲ್ಲ.
|
23. ಜನರು ನಿಮಗೆ, ಅಗೋ, ಅಲ್ಲಿದ್ದಾನೆ, ಇಗೋ, ಇಲ್ಲಿದ್ದಾನೆ!’ ಎಂದು ಹೇಳುವರು. ನೀವು ಇದ್ದಲ್ಲಿಯೇ ಇರಿ. ಅವರನ್ನು ಹಿಂಬಾಲಿಸಿ ಹೋಗಿ ಹುಡುಕಬೇಡಿ.
|
24. ”ಮನುಷ್ಯಕುಮಾರನು ಬಂದಾಗ ನಿಮಗೇ ಗೊತ್ತಾಗುವುದು. ಆಕಾಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ಹೊಳೆಯುವ ಮಿಂಚಿನಂತೆ ಆತನು ಬರುವನು.
|
27. ನೋಹನ ಕಾಲದಲ್ಲಿ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆ ಮಾಡಿಕೊಳ್ಳುತ್ತಾ ಮಾಡಿಕೊಡುತ್ತಾ ಇದ್ದರು. ನೋಹನು ನಾವೆಯನ್ನು ಪ್ರವೇಶಿಸಿದ ದಿನದಲ್ಲಿಯೂ ಅವರು ಹಾಗೆಯೇ ಮಾಡುತ್ತಿದ್ದರು. ಆಗ ಜಲಪ್ರಳಯ ಬಂದು ಎಲ್ಲಾ ಜನರನ್ನು ನಾಶಮಾಡಿತು.
|
28. ಲೋಟನ ಕಾಲದಲ್ಲಿ ದೇವರು ಸೊದೋಮನ್ನು ನಾಶಮಾಡಿದಾಗ ಲೋಕದ ಸ್ಥಿತಿಯು ಹೇಗಿತ್ತೋ ಅದೇರೀತಿಯಲ್ಲಿ ಮುಂದೆಯೂ ಇರುವುದು. ಆ ಜನರು ತಿನ್ನುತ್ತಾ, ಕುಡಿಯುತ್ತಾ, ಕೊಂಡುಕೊಳ್ಳುತ್ತಾ, ಮಾರಾಟ ಮಾಡುತ್ತಾ, ಬೀಜ ಬಿತ್ತುತ್ತಾ ಮತ್ತು ತಮಗಾಗಿ ಮನೆಗಳನ್ನು ಕಟ್ಟಿಸಿಕೊಳ್ಳುತ್ತಾ ಇದ್ದರು.
|
29. ಲೋಟನು ಆ ಪಟ್ಟಣವನ್ನು ಬಿಟ್ಟು ಹೊರಟ ದಿನದಲ್ಲಿಯೂ ಜನರು ಹಾಗೆಯೇ ಮಾಡುತ್ತಿದ್ದರು. ಆಗ ಆಕಾಶದಿಂದ ಬೆಂಕಿಯ ಸುರಿಮಳೆಯಾಗಿ ಅವರೆಲ್ಲರನ್ನೂ ನಾಶಮಾಡಿತು.
|
31. ”ಆ ದಿನದಲ್ಲಿ, ಮಾಳಿಗೆಯ ಮೇಲಿರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳಲು ಹೋಗದಿರಲಿ. ಹೊಲದಲ್ಲಿರುವವನು ತನ್ನ ಮನೆಗೆ ಮರಳಿ ಹೋಗದಿರಲಿ.
|
33. ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಪ್ರಯತ್ನಿಸುವವನು ಅದನ್ನು ಕಳೆದುಕೊಳ್ಳುವನು. ಆದರೆ ತನ್ನ ಪ್ರಾಣವನ್ನು ಕೊಡುವವನು ಅದನ್ನು ಉಳಿಸಿಕೊಳ್ಳುವನು.
|
34. ನಾನು ತಿರುಗಿ ಬರುವಾಗ ಒಂದೇ ಕೋಣೆಯಲ್ಲಿ ಇಬ್ಬರು ಮಲಗಿದ್ದರೂ ಅವರಲ್ಲಿ ಒಬ್ಬನನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬನನ್ನು ಬಿಡಲಾಗುವುದು.
|
35. ಇಬ್ಬರು ಸ್ತ್ರೀಯರು ಒಟ್ಟಿಗೆ ಕೆಲಸಮಾಡುತ್ತಿದ್ದರೂ ಅವರಲ್ಲಿ ಒಬ್ಬಳನ್ನು ತೆಗೆದುಕೊಳ್ಳಲಾಗುವುದು, ಇನ್ನೊಬ್ಬಳನ್ನು ಬಿಡಲಾಗುವುದು.”
|
37. ಶಿಷ್ಯರು ಯೇಸುವಿಗೆ, “ಪ್ರಭುವೇ, ಇದೆಲ್ಲಾ ಎಲ್ಲಿ ಸಂಭವಿಸುವುದು?” ಎಂದು ಕೇಳಿದರು. ಯೇಸು ಅವರಿಗೆ, “ಹದ್ದುಗಳು ಎಲ್ಲಿ ಕೂಡಿಬಂದಿರುತ್ತವೆಯೋ ಅಲ್ಲಿ ಹೆಣವಿದ್ದೇ ಇರುತ್ತದೆಯೆಂದು ಜನರು ತಿಳಿದುಕೊಳ್ಳುತ್ತಾರೆ” ಎಂದು ಉತ್ತರಿಸಿದನು.
|