1. {ಯೇಸುವನ್ನು ಕೊಲ್ಲಲು ಯೆಹೂದ್ಯನಾಯಕರ ಸಂಚು} PS ಯೆಹೂದ್ಯರ ಹುಳಿಯಿಲ್ಲದ ರೊಟ್ಟಿಯ ಹಬ್ಬ ಅಂದರೆ ಪಸ್ಕಹಬ್ಬವು ಹತ್ತಿರವಾಗಿತ್ತು.
|
2. ಮಹಾಯಾಜಕರು ಮತ್ತು ಧರ್ಮೋಪದೇಶಕರು ಯೇಸುವನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸುತ್ತಾ ಜನರ ಭಯದಿಂದ ತಕ್ಕ ಮಾರ್ಗವನ್ನು ಹುಡುಕತೊಡಗಿದರು. PS
|
3. {ಯೇಸುವಿನ ವಿರುದ್ಧ ಯೂದನು ಮಾಡಿದ ಸಂಚು} PS ಯೇಸುವಿನ ಹನ್ನೆರಡು ಅಪೊಸ್ತಲರಲ್ಲಿ ಇಸ್ಕರಿಯೋತ ಯೂದನು ಒಬ್ಬನಾಗಿದ್ದನು. ಸೈತಾನನು ಇವನೊಳಗೆ ಪ್ರವೇಶಿಸಿ ಕೆಟ್ಟಕಾರ್ಯವೊಂದನ್ನು ಮಾಡುವಂತೆ ಪ್ರೇರೇಪಿಸಿದನು.
|
4. ಯೂದನು ಮಹಾಯಾಜಕರ ಮತ್ತು ದೇವಾಲಯವನ್ನು ಕಾಯುತ್ತಿದ್ದ ಕೆಲವು ಸೈನಿಕರ ಬಳಿಗೆ ಹೋಗಿ, ಯೇಸುವನ್ನು ಹಿಡಿದುಕೊಡುವುದರ ಬಗ್ಗೆ ಅವರೊಂದಿಗೆ ಮಾತಾಡಿದನು.
|
6. ಯೂದನು ಅದಕ್ಕೆ ಒಪ್ಪಿದನು. ಬಳಿಕ ಯೇಸುವನ್ನು ಅವರಿಗೆ ಹಿಡಿದುಕೊಡಲು ಉತ್ತಮವಾದ ಸಮಯಕ್ಕಾಗಿ ಕಾಯತೊಡಗಿದನು. ತನ್ನ ಈ ಕಾರ್ಯವನ್ನು ಯಾರಿಗೂ ತಿಳಿಯದಂಥ ಸಮಯದಲ್ಲಿ ಮಾಡಬೇಕೆಂಬುದು ಅವನ ಬಯಕೆಯಾಗಿತ್ತು. PEPS
|
7. {ಪಸ್ಕದ ಊಟಕ್ಕೆ ಸಿದ್ಧತೆ} (ಮತ್ತಾಯ 26:17-25; ಮಾರ್ಕ 14:12-21; ಯೋಹಾನ 13:21-30) PS ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿನ ಬಂತು. ಯೆಹೂದ್ಯರು ಪಸ್ಕದ ಕುರಿಮರಿಗಳನ್ನು ಕೊಯ್ಯುವ ದಿನ ಅದಾಗಿತ್ತು.
|
10. ಯೇಸು ಅವರಿಗೆ, “ಕೇಳಿರಿ! ನೀವು ಪಟ್ಟಣದೊಳಗೆ (ಜೆರುಸಲೇಮಿಗೆ) ಹೋದನಂತರ, ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನನ್ನು ನೋಡುವಿರಿ. ಅವನನ್ನೇ ಹಿಂಬಾಲಿಸಿರಿ. ಅವನು ಒಂದು ಮನೆಯೊಳಗೆ ಹೋಗುವನು. ನೀವು ಅವನೊಂದಿಗೆ ಹೋಗಿರಿ.
|
11. ಆ ಮನೆಯ ಯಜಮಾನನಿಗೆ, ‘ಗುರುವು ತನ್ನ ಶಿಷ್ಯರೊಂದಿಗೆ ಯಾವ ಕೋಣೆಯಲ್ಲಿ ಪಸ್ಕದ ಊಟವನ್ನು ಮಾಡಬೇಕೆಂಬುದನ್ನು ದಯಮಾಡಿ ತೋರಿಸು’ ಎಂದು ಹೇಳಿರಿ.
|
12. ಆಗ ಮನೆಯ ಯಜಮಾನನು ಮೇಲಂತಸ್ತಿನಲ್ಲಿ ಒಂದು ದೊಡ್ಡ ಕೋಣೆಯನ್ನು ತೋರಿಸುವನು. ಈ ಕೋಣೆಯು ನಿಮಗಾಗಿ ಸಿದ್ಧವಾಗಿರುವುದು. ಪಸ್ಕದ ಊಟವನ್ನು ಅಲ್ಲಿ ಸಿದ್ಧಮಾಡಿರಿ” ಅಂದನು. PEPS
|
13. ಆದ್ದರಿಂದ ಪೇತ್ರ ಮತ್ತು ಯೋಹಾನ ಹೊರಟರು. ಯೇಸು ಹೇಳಿದ ಹಾಗೆ ಪ್ರತಿಯೊಂದೂ ನಡೆಯಿತು. ಅವರು ಪಸ್ಕದ ಊಟವನ್ನು ಅಲ್ಲಿ ಸಿದ್ಧಮಾಡಿದರು. (ಮತ್ತಾಯ 26:26-30; ಮಾರ್ಕ 14:22-26; 1 ಕೊರಿಂಥ, 11:23-25) PEPS
|
14. {ಪ್ರಭುವಿನ ರಾತ್ರಿ ಭೋಜನ} PS ಪಸ್ಕದ ಊಟಮಾಡುವ ಸಮಯ ಬಂತು. ಯೇಸು ಮತ್ತು ಅಪೊಸ್ತಲರು ಮೇಜಿನ ಸುತ್ತಲೂ ಊಟಕ್ಕೆ ಕುಳಿತುಕೊಂಡರು.
|
16. ಇದರ ನಿಜವಾದ ಅರ್ಥವು ದೇವರ ರಾಜ್ಯದಲ್ಲಿ ನೆರವೇರುವ ತನಕ, ನಾನೆಂದಿಗೂ ಇನ್ನೊಂದು ಪಸ್ಕದ ಊಟವನ್ನು ಮಾಡುವುದೇ ಇಲ್ಲ” ಅಂದನು. PEPS
|
17. ಬಳಿಕ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು ಅದಕ್ಕಾಗಿ ದೇವರಿಗೆ ಸ್ತೋತ್ರ ಮಾಡಿದನು. ಬಳಿಕ ಆತನು, “ಈ ಪಾತ್ರೆಯಲ್ಲಿರುವ ದ್ರಾಕ್ಷಾರಸವನ್ನು ನೀವೆಲ್ಲರೂ ಹಂಚಿಕೊಳ್ಳಿರಿ.
|
19. ಆಮೇಲೆ ಯೇಸು ಸ್ವಲ್ಪ ರೊಟ್ಟಿಯನ್ನು ತೆಗೆದುಕೊಂಡನು. ಆತನು ರೊಟ್ಟಿಗಾಗಿ ದೇವರಿಗೆ ಸ್ತೋತ್ರಮಾಡಿ ಅದನ್ನು ಮುರಿದು ಅಪೊಸ್ತಲರಿಗೆ ಕೊಟ್ಟನು. ಬಳಿಕ ಯೇಸು, “ನಾನು ನಿಮಗೋಸ್ಕರ ಕೊಡುತ್ತಿರುವ ನನ್ನ ದೇಹವಿದು. ನನ್ನನ್ನು ನೆನಸಿಕೊಳ್ಳುವುದಕ್ಕಾಗಿ ಹೀಗೆ ಮಾಡಿರಿ” ಅಂದನು.
|
20. ಅದೇ ರೀತಿಯಾಗಿ, ಊಟವಾದ ನಂತರ, ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, “ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಯನ್ನು ಇದು ಸೂಚಿಸುತ್ತದೆ. ನಾನು ನಿಮಗಾಗಿ ಕೊಡುತ್ತಿರುವ ರಕ್ತದಿಂದ ಈ ಹೊಸ ಒಡಂಬಡಿಕೆ ಪ್ರಾರಂಭವಾಗುತ್ತದೆ” ಅಂದನು. ಯೇಸುವಿಗೆ ಯಾರು ವಿರೋಧಿಗಳಾಗುವರು? PS
|
22. ಮನುಷ್ಯಕುಮಾರನು ದೇವರ ಯೋಜನೆಗನುಸಾರವಾಗಿ ಮರಣಹೊಂದುವನು. ಆದರೆ ಮನುಷ್ಯಕುಮಾರನನ್ನು ಕೊಲ್ಲುವುದಕ್ಕೆ ಒಪ್ಪಿಸಿಕೊಡುವ ವ್ಯಕ್ತಿಗೆ ಬಹಳ ಕೇಡಾಗುವುದು” ಎಂದು ಹೇಳಿದನು. PEPS
|
25. ಆಗ ಯೇಸು ಅವರಿಗೆ, “ಈ ಲೋಕದ ಅರಸರು ತಮ್ಮ ಜನರ ಮೇಲೆ ದೊರೆತನ ಮಾಡುತ್ತಾರೆ. ಜನರ ಮೇಲೆ ಅಧಿಕಾರ ಹೊಂದಿರುವವರನ್ನು ಧರ್ಮಿಷ್ಠರೆಂದು ಕರೆಯುತ್ತಾರೆ.
|
27. ಶ್ರೇಷ್ಠನಾದವನು ಯಾರು? ಊಟಕ್ಕೆ ಕುಳಿತವನೋ? ಅಥವಾ ಅವನಿಗೆ ಸೇವೆ ಮಾಡುವವನೋ? ಊಟಕ್ಕೆ ಕುಳಿತಿರುವವನೇ ಶ್ರೇಷ್ಠನೆಂದು ನೀವು ಭಾವಿಸುತ್ತೀರೋ? ಆದರೆ ನಾನು ನಿಮ್ಮಲ್ಲಿ ಸೇವಕನಂತಿದ್ದೇನೆ! PEPS
|
30. ನನ್ನ ರಾಜ್ಯದಲ್ಲಿ ನೀವು ನನ್ನ ಸಂಗಡ ಊಟಮಾಡುವಿರಿ ಮತ್ತು ಕುಡಿಯುವಿರಿ. ನೀವು ಸಿಂಹಾಸನಗಳಲ್ಲಿ ಕುಳಿತುಕೊಂಡು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ. ನಿಮ್ಮ ನಂಬಿಕೆಯನ್ನು ಕಳೆದುಕೊಳ್ಳಬೇಡಿರಿ! (ಮತ್ತಾಯ 26:31-35; ಮಾರ್ಕ 14:27-31; ಯೋಹಾನ 13:36-38) PEPS
|
31. “ಒಬ್ಬ ರೈತನು ತನ್ನ ಗೋಧಿಯನ್ನು ತೂರುವಂತೆ ಸೈತಾನನು ನಿಮ್ಮನ್ನು ಶೋಧಿಸಲು ಕೇಳಿಕೊಂಡನು. ಸೀಮೋನನೇ, ಸೀಮೋನನೇ (ಪೇತ್ರ)
|
32. ನಿನ್ನ ನಂಬಿಕೆಯು ಕುಂದಿಹೋಗಬಾರದೆಂದು ನಾನು ಪ್ರಾರ್ಥಿಸಿದೆನು! ನೀನು ಪರಿವರ್ತನೆಗೊಂಡ ನಂತರ ನಿನ್ನ ಸಹೋದರರನ್ನು ಬಲಪಡಿಸು” ಎಂದು ಹೇಳಿದನು. PEPS
|
33. ಅದಕ್ಕೆ ಪೇತ್ರನು ಯೇಸುವಿಗೆ, “ಪ್ರಭುವೇ, ನಿನ್ನ ಸಂಗಡ ಸೆರೆಮನೆಗೆ ಹೋಗುವುದಕ್ಕೂ ಸಾಯುವುದಕ್ಕೂ ನಾನು ಸಿದ್ಧನಾಗಿದ್ದೇನೆ” ಎಂದು ಹೇಳಿದನು. PEPS
|
34. ಅದಕ್ಕೆ ಯೇಸು, “ಪೇತ್ರನೇ, ನಾಳೆ ಬೆಳಿಗ್ಗೆ ಕೋಳಿ ಕೂಗುವ ಮೊದಲು ನನ್ನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವೆ!” ಅಂದನು. PS
|
35. {ಕಷ್ಟವನ್ನು ಎದುರಿಸಲು ಸಿದ್ಧರಾಗಿರಿ} PS ಬಳಿಕ ಯೇಸು ಅಪೊಸ್ತಲರಿಗೆ, “ಜನರಿಗೆ ಬೋಧಿಸುವುದಕ್ಕೆ ನಾನು ನಿಮ್ಮನ್ನು ಹಣವಿಲ್ಲದೆ, ಚೀಲವಿಲ್ಲದೆ ಮತ್ತು ಪಾದರಕ್ಷೆಗಳಿಲ್ಲದೆ ಕಳುಹಿಸಿದೆನು. ಆದರೆ ನಿಮಗೆ ಏನಾದರೂ ಕೊರತೆ ಆಯಿತೇ?” ಎಂದು ಕೇಳಿದನು. PEPS ಅಪೊಸ್ತಲರು, “ಇಲ್ಲ” ಅಂದರು. PEPS
|
36. ಯೇಸು ಅವರಿಗೆ, “ಆದರೆ ಈಗ ನಿಮ್ಮಲ್ಲಿ ಹಣವಾಗಲಿ ಚೀಲವಾಗಲಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿರಿ. ನಿಮ್ಮಲ್ಲಿ ಖಡ್ಗವಿಲ್ಲದಿದ್ದರೆ, ನಿಮ್ಮ ಮೇಲಂಗಿಯನ್ನು ಮಾರಿ ಒಂದು ಖಡ್ಗವನ್ನು ಕೊಂಡುಕೊಳ್ಳಿರಿ.
|
37. ‘ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’ ಯೆಶಾಯ 53:12 ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ನನ್ನ ಬಗ್ಗೆ ಬರೆಯಲ್ಪಟ್ಟಿರುವ ಈ ಮಾತು ನೆರವೇರಬೇಕಾಗಿದೆ ಮತ್ತು ಈಗ ನೆರವೇರುತ್ತಿದೆ” ಎಂದು ಹೇಳಿದನು. PEPS
|
39. {ಅಪೊಸ್ತಲರ ಪ್ರಾರ್ಥನೆಯ ಅಗತ್ಯತೆ} (ಮತ್ತಾಯ 26:36-46; ಮಾರ್ಕ 14:32-42) PS ಯೇಸು ಪಟ್ಟಣದಿಂದ (ಜೆರುಸಲೇಮ್) ಆಲಿವ್ ಮರಗಳ ಗುಡ್ಡಕ್ಕೆ ಹೋದನು.
|
40. ಆತನ ಶಿಷ್ಯರೂ ಆತನೊಡನೆ ಹೋದರು. (ಯೇಸು ಆಗಾಗ್ಗೆ ಅಲ್ಲಿಗೆ ಹೋಗುತ್ತಿದ್ದನು.) ಯೇಸು ತನ್ನ ಶಿಷ್ಯರಿಗೆ, “ನೀವು ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು. PEPS
|
42. “ತಂದೆಯೇ, ನಿನಗೆ ಇಷ್ಟವಿದ್ದರೆ, ಈ ಶ್ರಮೆಯ ಪಾತ್ರೆಯನ್ನು ನನ್ನಿಂದ ತೊಲಗಿಸು. ಆದರೆ ನನ್ನ ಇಷ್ಟದಂತಾಗದೆ ನಿನ್ನ ಇಷ್ಟದಂತೆಯೇ ಮಾಡು” ಎಂದು ಪ್ರಾರ್ಥಿಸಿದನು.
|
43. ಆಗ ಪರಲೋಕದಿಂದ ಒಬ್ಬ ದೇವದೂತನು ಕಾಣಿಸಿಕೊಂಡನು. ಯೇಸುವನ್ನು ಬಲಪಡಿಸುವುದಕ್ಕಾಗಿ ಈ ದೇವದೂತನನ್ನು ಕಳುಹಿಸಲಾಗಿತ್ತು.
|
44. ಯೇಸುವಿಗೆ ತುಂಬಾ ವೇದನೆಯಿತ್ತು. ಆತನು ಪ್ರಾರ್ಥನೆಯಲ್ಲಿ ಕಷ್ಟಪಟ್ಟು ಹೋರಾಡಿದನು. ಆತನ ಮುಖದಲ್ಲಿ ಬೆವರು ರಕ್ತದೋಪಾದಿಯಲ್ಲಿ ತೊಟ್ಟಿಕ್ಕತೊಡಗಿತು.
|
45. ಯೇಸು ಪ್ರಾರ್ಥಿಸಿದ ಮೇಲೆ ತನ್ನ ಶಿಷ್ಯರ ಬಳಿ ಹೋದನು. ಅವರು ನಿದ್ರೆ ಮಾಡುತ್ತಿದ್ದರು. (ಅವರು ದುಃಖದಿಂದ ಆಯಾಸಗೊಂಡಿದ್ದರು.)
|
46. ಯೇಸು ಅವರಿಗೆ, “ನೀವು ಏಕೆ ನಿದ್ರಿಸುತ್ತಿದ್ದೀರಿ? ಎದ್ದೇಳಿರಿ! ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು. PEPS
|
47. {ಯೇಸುವಿನ ಬಂಧನ} (ಮತ್ತಾಯ 26:47-56; ಮಾರ್ಕ 14:43-50; ಯೋಹಾನ 18:3-11) PS ಯೇಸು ಮಾತಾಡುತ್ತಿದ್ದಾಗ, ಜನರ ಒಂದು ಗುಂಪು ಅಲ್ಲಿಗೆ ಬಂದಿತು. ಹನ್ನೆರಡು ಅಪೊಸ್ತಲರಲ್ಲಿ ಒಬ್ಬನು ಆ ಗುಂಪಿಗೆ ಮುಂದಾಳಾಗಿದ್ದನು. ಅವನೇ ಯೂದನು. ಅವನು ಯೇಸುವಿಗೆ ಮುದ್ದಿಡುವಷ್ಟು ಹತ್ತಿರ ಬಂದನು. PEPS
|
49. ಯೇಸುವಿನ ಶಿಷ್ಯರು ಸಹ ಅಲ್ಲಿ ನಿಂತಿದ್ದರು. ಅಲ್ಲಿ ನಡೆಯುತ್ತಿದ್ದುದನ್ನು ಅವರು ನೋಡುತ್ತಿದ್ದರು. ಶಿಷ್ಯರು ಯೇಸುವಿಗೆ, “ಪ್ರಭುವೇ, ನಾವು ನಮ್ಮ ಖಡ್ಗಗಳನ್ನು ಉಪಯೋಗಿಸೋಣವೇ?” ಎಂದು ಕೇಳಿದರು.
|
52. ಯೇಸುವನ್ನು ಬಂಧಿಸಲು ಅಲ್ಲಿಗೆ ಮಹಾಯಾಜಕರು, ಹಿರಿಯ ಯೆಹೂದ್ಯನಾಯಕರು ಮತ್ತು ಯೆಹೂದ್ಯ ಸಿಪಾಯಿಗಳು ಬಂದಿದ್ದರು. ಯೇಸು ಅವರಿಗೆ, “ಖಡ್ಗಗಳನ್ನೂ ದೊಣ್ಣೆಗಳನ್ನೂ ಹಿಡಿದುಕೊಂಡು ಇಲ್ಲಿಗೆ ಬಂದದ್ದೇಕೆ? ನಾನು ಅಪರಾಧಿಯೆಂದು ನೀವು ಭಾವಿಸುತ್ತೀರೋ?
|
53. ಪ್ರತಿದಿನ ನಿಮ್ಮ ಸಂಗಡ ದೇವಾಲಯದಲ್ಲಿದ್ದೆನು. ನೀವು ನನ್ನನ್ನು ಅಲ್ಲಿ ಏಕೆ ಬಂಧಿಸಲಿಲ್ಲ? ಆದರೆ ಇದು ನಿಮ್ಮ ಸಮಯ. ಇದು ಅಂಧಕಾರದ (ಪಾಪ) ದೊರೆತನ” ಎಂದು ಹೇಳಿದನು. (ಮತ್ತಾಯ 26:57-58, 69-75; ಮಾರ್ಕ 14:53-54, 66-72; ಯೋಹಾನ 18:12-18, 25-27) PEPS
|
54. {ಪೇತ್ರನ ವಿಶ್ವಾಸದ್ರೋಹ} PS ಅವರು ಯೇಸುವನ್ನು ಬಂಧಿಸಿ ಪ್ರಧಾನಯಾಜಕನ ಮನೆಯೊಳಗೆ ಕರೆದುಕೊಂಡು ಬಂದರು. ಪೇತ್ರನು ಅವರನ್ನು ಹಿಂಬಾಲಿಸಿದನು. ಆದರೆ ಅವನು ಯೇಸುವಿನ ಹತ್ತಿರ ಬರಲಿಲ್ಲ.
|
55. ಸೈನಿಕರು ಅಂಗಳದ ಮಧ್ಯದಲ್ಲಿ ಬೆಂಕಿಯನ್ನು ಹೊತ್ತಿಸಿ ಒಟ್ಟಾಗಿ ಕುಳಿತುಕೊಂಡರು. ಪೇತ್ರನೂ ಅವರ ಜೊತೆ ಕುಳಿತುಕೊಂಡನು.
|
56. ಪೇತ್ರನು ಅಲ್ಲಿ ಕುಳಿತಿರುವುದನ್ನು ಒಬ್ಬ ಸೇವಕಿ ನೋಡಿದಳು. ಬೆಂಕಿಯ ಬೆಳಕಿನಿಂದ ಆಕೆಯು ಪೇತ್ರನನ್ನು ಗುರುತಿಸಿದಳು. ಅವಳು ಪೇತ್ರನ ಮುಖವನ್ನೇ ಲಕ್ಷ್ಯವಿಟ್ಟು ನೋಡಿ, “ಈ ಮನುಷ್ಯನು ಆತನ (ಯೇಸು) ಸಂಗಡ ಇದ್ದವನು” ಅಂದಳು. PEPS
|
58. ಸ್ವಲ್ಪ ಸಮಯದ ನಂತರ ಇನ್ನೊಬ್ಬ ವ್ಯಕ್ತಿ ಪೇತ್ರನನ್ನು ನೋಡಿ, “ನೀನು ಯೇಸುವನ್ನು ಹಿಂಬಾಲಿಸುತ್ತಿದ್ದ ಜನರಲ್ಲಿ ಒಬ್ಬನಾಗಿದ್ದೆ!” ಎಂದು ಹೇಳಿದನು. PEPS ಆದರೆ ಪೇತ್ರನು, “ನಾನು ಆತನ ಹಿಂಬಾಲಕರಲ್ಲಿ ಒಬ್ಬನಲ್ಲ” ಅಂದನು. PEPS
|
59. ಸುಮಾರು ಒಂದು ತಾಸಿನ ನಂತರ ಇನ್ನೊಬ್ಬನು, “ಅದು ನಿಜ! ಈ ಮನುಷ್ಯನು ಆತನೊಡನೆ ಇದ್ದವನು. ಇವನು ಗಲಿಲಾಯದವನು!” ಎಂದು ದೃಢವಾಗಿ ಹೇಳಿದನು. PEPS
|
60. ಆಗ ಪೇತ್ರನು, “ನೀನು ಏನು ಹೇಳುತ್ತಿದ್ದೀಯೋ ನನಗೆ ಗೊತ್ತಿಲ್ಲ” ಅಂದನು. PEPS ಪೇತ್ರನು ಇನ್ನೂ ಮಾತಾಡುತ್ತಿದ್ದಾಗ ಕೋಳಿ ಕೂಗಿತು.
|
61. ಆಗ ಪ್ರಭುವು (ಯೇಸು) ಹಿಂತಿರುಗಿ ಪೇತ್ರನನ್ನು ದೃಷ್ಟಿಸಿ ನೋಡಿದನು. “ಮುಂಜಾನೆ ಕೋಳಿ ಕೂಗುವುದಕ್ಕಿಂತ ಮೊದಲು ನೀನು ನನ್ನನ್ನು ಅರಿಯೆನೆಂಬುದಾಗಿ ಮೂರು ಸಲ ಹೇಳುವೆ” ಎಂದು ಪ್ರಭುವು ಹೇಳಿದ ಮಾತನ್ನು ಪೇತ್ರನು ಆಗ ಜ್ಞಾಪಿಸಿಕೊಂಡನು.
|
63. {ಯೇಸುವಿಗೆ ಜನರು ಮಾಡಿದ ಅಪಹಾಸ್ಯ} (ಮತ್ತಾಯ 26:67-68; ಮಾರ್ಕ 14:65) PS (63-64) ಕೆಲವು ಜನರು ಯೇಸುವನ್ನು ಹಿಡಿದುಕೊಂಡಿದ್ದರು. ಅವರು ಯೇಸುವಿನ ಮುಖಕ್ಕೆ ಮುಸುಕು ಹಾಕಿ, ಆತನನ್ನು ಹೊಡೆದು, “ನಿನ್ನನ್ನು ಹೊಡೆದವರ್ಯಾರು? ನಮಗೆ ಪ್ರವಾದನೆ ಹೇಳು” ಎಂದು ಗೇಲಿಮಾಡಿದರು.
|
66. {ಯೆಹೂದ್ಯನಾಯಕರ ಮುಂದೆ ಯೇಸು} (ಮತ್ತಾಯ 26:59-66; ಮಾರ್ಕ 14:55-64; ಯೋಹಾನ 18:19-24) PS ಮರುದಿನ ಮುಂಜಾನೆ ಹಿರಿಯ ಜನನಾಯಕರು, ಮಹಾಯಾಜಕರು ಮತ್ತು ಧರ್ಮೋಪದೇಶಕರು ಒಟ್ಟಾಗಿ ಸೇರಿಬಂದರು. ಅವರು ಯೇಸುವನ್ನು ನ್ಯಾಯಾಲಯಕ್ಕೆ ಕರೆದೊಯ್ದು,
|
67. “ನೀನು ಕ್ರಿಸ್ತನಾಗಿದ್ದರೆ ನಮಗೆ ಹೇಳು” ಎಂದು ಹೇಳಿದರು. PEPS ಯೇಸು ಅವರಿಗೆ, “ನಾನು ಕ್ರಿಸ್ತನೆಂದು ಹೇಳಿದರೂ ನೀವು ನನ್ನನ್ನು ನಂಬುವುದಿಲ್ಲ.
|
70. ಅವರೆಲ್ಲರೂ, “ಹಾಗಾದರೆ ನೀನು ದೇವರ ಕುಮಾರನೋ?” ಎಂದು ಕೇಳಿದರು. ಯೇಸು ಅವರಿಗೆ, “ನಾನು ಆತನೇ ಎಂದು ನೀವೇ ಹೇಳುತ್ತಿದ್ದೀರಿ” ಎಂದನು. PEPS
|