1. {ಯೇಸುವಿನ ಪುನರುತ್ಥಾನ} (ಮತ್ತಾಯ 28:1-10; ಮಾರ್ಕ 16:1-8; ಯೋಹಾನ 20:1-10) PS ಭಾನುವಾರ ಮುಂಜಾನೆ ಇನ್ನೂ ಮೊಬ್ಬಿರುವಾಗ ಯೇಸುವಿನ ದೇಹವನ್ನಿಟ್ಟ ಸಮಾಧಿಯ ಬಳಿಗೆ ಆ ಸ್ತ್ರೀಯರು ತಾವು ಸಿದ್ಧಮಾಡಿದ ಪರಿಮಳದ್ರವ್ಯಗಳನ್ನು ತೆಗೆದುಕೊಂಡು ಬಂದರು.
|
4. ಸ್ತ್ರೀಯರಿಗೆ ಇದು ಅರ್ಥವಾಗದೆ ಆಶ್ಚರ್ಯಪಡುತ್ತಿರಲು, ಹೊಳೆಯುವ ಉಡುಪುಗಳನ್ನು ಧರಿಸಿಕೊಂಡಿದ್ದ ಇಬ್ಬರು (ದೇವದೂತರು) ಅವರ ಬಳಿಯಲ್ಲಿ ನಿಂತರು.
|
5. ಆ ಸ್ತ್ರೀಯರು ಬಹಳವಾಗಿ ಹೆದರಿ ತಮ್ಮ ಮುಖಗಳನ್ನು ನೆಲದ ಕಡೆಗೆ ಬಗ್ಗಿಸಿಕೊಂಡು ನಿಂತರು. ಆ ಮನುಷ್ಯರು, “ಬದುಕಿರುವ ವ್ಯಕ್ತಿಯನ್ನು ಇಲ್ಲಿ ಹುಡುಕುವುದೇಕೆ? ಇದು ಸತ್ತ ಜನರನ್ನು ಇಡುವ ಸ್ಥಳ!
|
7. ಮನುಷ್ಯಕುಮಾರನು ಕೆಡುಕರ ವಶಕ್ಕೆ ಒಪ್ಪಿಸಲ್ಪಟ್ಟು; ಶಿಲುಬೆಯ ಮೇಲೆ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದುಬರುವನು ಎಂದು ಯೇಸು ತಿಳಿಸಲಿಲ್ಲವೇ!” ಎಂದು ಹೇಳಿದರು.
|
9. ಆ ಸ್ತ್ರೀಯರು ಸಮಾಧಿಯಿಂದ ಹೊರಟು ಹನ್ನೊಂದು ಮಂದಿ ಅಪೊಸ್ತಲರ ಮತ್ತು ಇತರ ಹಿಂಬಾಲಕರ ಬಳಿಗೆ ಹೋದರು. ಆ ಸ್ತ್ರೀಯರು ಸಮಾಧಿಯ ಬಳಿ ನಡೆದ ಸಂಗತಿಗಳನ್ನೆಲ್ಲಾ ಅವರಿಗೆ ಹೇಳಿದರು.
|
10. ಈ ಸ್ತ್ರೀಯರು ಯಾರೆಂದರೆ: ಮಗ್ದಲದ ಮರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಮತ್ತು ಬೇರೆ ಕೆಲವು ಸ್ತ್ರೀಯರು. ನಡೆದ ಪ್ರತಿಯೊಂದನ್ನೂ ಈ ಸ್ತ್ರೀಯರು ಅಪೊಸ್ತಲರಿಗೆ ತಿಳಿಸಿದರು.
|
12. ಆದರೆ ಪೇತ್ರನು ಎದ್ದು ಇದು ನಿಜವೇ ಎಂದು ನೋಡಲು ಸಮಾಧಿಗೆ ಓಡಿಹೋದನು. ಅವನು ಒಳಗೆ ಹೋಗಿ ಬಗ್ಗಿ ನೋಡಿದಾಗ ಯೇಸುವಿನ ದೇಹಕ್ಕೆ ಸುತ್ತಿದ್ದ ಬಟ್ಟೆಯನ್ನು ಮಾತ್ರ ನೋಡಿದನು. ಕೇವಲ ಬಟ್ಟೆಯು ಅಲ್ಲಿ ಬಿದ್ದಿತ್ತು. ನಡೆದ ಈ ಸಂಗತಿಯ ಬಗ್ಗೆ ಪೇತ್ರನು ಆಶ್ಚರ್ಯಪಡುತ್ತಾ ಹೊರಟುಹೋದನು. PEPS
|
13. {ಎಮ್ಮಾಹುವಿನ ದಾರಿಯಲ್ಲಿ} (ಮಾರ್ಕ 16:12-13) PS ಅದೇ ದಿನ ಯೇಸುವಿನ ಶಿಷ್ಯರಲ್ಲಿ ಇಬ್ಬರು ಎಮ್ಮಾಹು ಎಂಬ ಪಟ್ಟಣಕ್ಕೆ ಹೋಗುತ್ತಿದ್ದರು. ಅದು ಜೆರುಸಲೇಮಿನಿಂದ ಏಳು ಮೈಲಿ ದೂರದಲ್ಲಿತ್ತು.
|
17. ಯೇಸು ಅವರಿಗೆ, “ನೀವು ಯಾವ ಸಂಗತಿಗಳ ಬಗ್ಗೆ ಮಾತಾಡುತ್ತಿದ್ದೀರಿ?” ಎಂದು ಕೇಳಿದನು. PEPS ಅವರಿಬ್ಬರು ಅಲ್ಲೇ ನಿಂತರು. ಅವರ ಮುಖಗಳು ಬಹಳ ದುಃಖದಿಂದ ತುಂಬಿಹೋಗಿದ್ದವು.
|
18. ಅವರಲ್ಲಿ ಕ್ಲೆಯೋಫನೆಂಬುವನು, “ಇತ್ತೀಚೆಗೆ ಜೆರುಸಲೇಮಿನಲ್ಲಿ ನಡೆದ ಸಂಗತಿಯನ್ನು ತಿಳಿಯದಿರುವ ವ್ಯಕ್ತಿ ಎಂದರೆ ನೀನೊಬ್ಬನೇ ಇರಬೇಕು” ಎಂದು ಉತ್ತರಿಸಿದನು. PEPS
|
19. ಯೇಸು ಅವರಿಗೆ, “ನೀವು ಯಾವುದರ ಬಗ್ಗೆ ಮಾತಾಡುತ್ತಿದ್ದೀರಿ?” ಎಂದು ಕೇಳಿದನು. PEPS ಅವರು ಆತನಿಗೆ, “ನಜರೇತಿನ ಯೇಸುವಿನ ಬಗ್ಗೆ. ಆತನು ದೇವರ ಮತ್ತು ಮನುಷ್ಯರ ದೃಷ್ಟಿಯಲ್ಲಿ ಮಹಾಪ್ರವಾದಿಯಾಗಿದ್ದನು. ಆತನು ಅನೇಕ ಸಂಗತಿಗಳನ್ನು ಹೇಳಿದನು ಮತ್ತು ಅದ್ಭುತಕಾರ್ಯಗಳನ್ನು ಮಾಡಿದನು.
|
21. ಯೇಸುವೇ ಇಸ್ರೇಲ್ ಜನರನ್ನು (ಯೆಹೂದ್ಯರನ್ನು) ಬಿಡಿಸುತ್ತಾನೆಂದು ನಾವು ನಿರೀಕ್ಷಿಸಿಕೊಂಡಿದ್ದೆವು. ಆದರೆ ಇದೆಲ್ಲಾ ನಡೆದುಹೋಯಿತು. PEPS “ಈಗ ಮತ್ತೊಂದು ಸಂಗತಿಯಾಗಿದೆ. ಈಗಾಗಲೇ ಆತನು ಸತ್ತು ಮೂರು ದಿನಗಳಾದವು.
|
22. ಇಂದು ನಮ್ಮ ಕೆಲವು ಸ್ತ್ರೀಯರು ಆಶ್ಚರ್ಯಕರವಾದ ಸಂಗತಿಗಳನ್ನು ಹೇಳಿದರು. ಮುಂಜಾನೆ ಬೆಳಗಾಗುವಾಗ, ಯೇಸುವಿನ ದೇಹವನ್ನು ಇಟ್ಟಿದ್ದ ಸಮಾಧಿಯ ಬಳಿಗೆ ಆ ಸ್ತ್ರೀಯರು ಹೋಗಿದ್ದರು.
|
23. ಆದರೆ ಅವರು ಆತನ ದೇಹವನ್ನು ಅಲ್ಲಿ ಕಾಣಲಿಲ್ಲ. ಆ ಸ್ತ್ರೀಯರು ಹಿಂತಿರುಗಿ ಬಂದು ತಮಗೆ ದೇವದೂತರಿಬ್ಬರ ದರ್ಶನವಾಯಿತೆಂದೂ ಯೇಸು ಬದುಕಿದ್ದಾನೆಂದೂ ತಮಗೆ ಇದನ್ನು ದೇವದೂತರೇ ತಿಳಿಸಿದರೆಂದೂ ನಮಗೆ ಹೇಳಿದರು.
|
24. ಆದ್ದರಿಂದ ನಮ್ಮ ಗುಂಪಿನಲ್ಲಿದ್ದ ಕೆಲವರು ಸಹ ಸಮಾಧಿಯ ಬಳಿಗೆ ಹೋದರು. ಸ್ತ್ರೀಯರು ಹೇಳಿದ ಹಾಗೆಯೇ ಸಮಾಧಿಯು ಬರಿದಾಗಿತ್ತು. ನಾವು ಸುತ್ತಮುತ್ತ ನೋಡಿದೆವು. ಆದರೆ ನಮ್ಮಲ್ಲಿ ಯಾರಿಗೂ ಆತನು (ಯೇಸು) ಕಾಣಲಿಲ್ಲ” ಎಂದು ಹೇಳಿದರು. PEPS
|
25. ಆಗ ಯೇಸು ಅವರಿಗೆ, “ನೀವು ಬುದ್ಧಿಹೀನರು ಮತ್ತು ಸತ್ಯವನ್ನು ಗ್ರಹಿಸುವುದರಲ್ಲಿ ಮಂದಗತಿಗಳು! ಪ್ರವಾದಿಗಳು ಹೇಳಿದ ಪ್ರತಿಯೊಂದನ್ನೂ ನೀವು ನಂಬಬೇಕು.
|
26. ಕ್ರಿಸ್ತನು ತನ್ನ ಮಹಿಮೆಯನ್ನು ಪ್ರವೇಶಿಸುವ ಮೊದಲು ಇಂಥ ಶ್ರಮೆಗಳನ್ನು ಅನುಭವಿಸಬೇಕು ಎಂದು ಪ್ರವಾದಿಗಳು ಹೇಳಿದ್ದಾರೆ” ಅಂದನು.
|
27. ಬಳಿಕ ಯೇಸು ತನ್ನ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರತಿಯೊಂದನ್ನೂ ವಿವರಿಸತೊಡಗಿದನು. ಯೇಸುವು ಮೋಶೆಯ ಗ್ರಂಥಗಳಿಂದ ಪ್ರಾರಂಭಿಸಿ ಪ್ರವಾದಿಗಳು ತನ್ನ ಬಗ್ಗೆ ಹೇಳಿದ ವಿಷಯಗಳ ಕುರಿತು ವಿವರಿಸಿದನು. PEPS
|
29. ಆದರೆ ಅವರು ಆತನಿಗೆ, “ಈಗ ಹೊತ್ತಾಯಿತು, ರಾತ್ರಿಯಾಗುತ್ತಾ ಬಂದಿದೆ. ನಮ್ಮೊಂದಿಗೆ ಇರು” ಎಂದು ಬೇಡಿಕೊಂಡರು. ಆದ್ದರಿಂದ ಆತನು ಅವರೊಂದಿಗಿರಲು ಊರೊಳಗೆ ಹೋದನು. PEPS
|
30. ಯೇಸು ಅವರ ಸಂಗಡ ಕುಳಿತುಕೊಂಡು ಸ್ವಲ್ಪ ರೊಟ್ಟಿಯನ್ನು ತೆಗೆದುಕೊಂಡನು. ಆತನು ಆಹಾರಕ್ಕಾಗಿ ದೇವರಿಗೆ ಸೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟನು.
|
32. ಅವರಿಬ್ಬರು, “ಯೇಸು ದಾರಿಯಲ್ಲಿ ನಮ್ಮ ಸಂಗಡ ಮಾತಾಡಿದಾಗ ನಮ್ಮಲ್ಲಿ ಬೆಂಕಿ ಉರಿದಂತಾಯಿತಲ್ಲವೇ? ಪವಿತ್ರ ಗ್ರಂಥದ ನಿಜ ಅರ್ಥವನ್ನು ಆತನು ವಿವರಿಸಿದಾಗ, ಬಹಳ ರೋಮಾಂಚಕಾರಿಯಾಗಿರಲಿಲ್ಲವೇ?” ಎಂದು ಮಾತಾಡಿಕೊಂಡರು. PEPS
|
33. ಆ ಕೂಡಲೇ ಅವರಿಬ್ಬರೂ ಎದ್ದು ಜೆರುಸಲೇಮಿಗೆ ಹಿಂತಿರುಗಿ ಹೋದರು. ಜೆರುಲೇಮಿನಲ್ಲಿ ಯೇಸುವಿನ ಶಿಷ್ಯರು ಒಟ್ಟಾಗಿ ಸೇರಿಬಂದಿದ್ದರು. ಹನ್ನೊಂದು ಮಂದಿ ಅಪೊಸ್ತಲರು ಮತ್ತು ಅವರ ಸಂಗಡ ಇದ್ದ ಆ ಜನರು,
|
34. “ಪ್ರಭುವು (ಯೇಸು) ಸತ್ತವರೊಳಗಿಂದ ನಿಜವಾಗಿ ಎದ್ದಿದ್ದಾನೆ! ಆತನು ಸೀಮೋನನಿಗೆ (ಪೇತ್ರ) ಕಾಣಿಸಿಕೊಂಡನು” ಎಂದು ಹೇಳಿದರು. PEPS
|
35. ಆಗ ಆ ಇಬ್ಬರು ದಾರಿಯಲ್ಲಿ ನಡೆದ ಸಂಗತಿಗಳನ್ನು ತಿಳಿಸಿದರು. ಆತನು ರೊಟ್ಟಿ ಮುರಿದಾಗ ತಾವು ಆತನನ್ನು ಗುರುತಿಸಿದ್ದಾಗಿ ಅವರು ಹೇಳಿದರು. (ಮತ್ತಾಯ 28:16-20; ಮಾರ್ಕ 16:14-18; ಯೋಹಾನ 20:19-23; ಅಪೊ. ಕಾರ್ಯ. 1:6-8) PEPS
|
36. {ಯೇಸು ತನ್ನ ಶಿಷ್ಯರಿಗೆ ಕಾಣಿಸಿಕೊಂಡನು} PS ಅವರಿಬ್ಬರೂ ಈ ಸಂಗತಿಗಳನ್ನು ಹೇಳುತ್ತಿದ್ದಾಗ, ಯೇಸುವು ಶಿಷ್ಯರ ಗುಂಪಿನ ಮಧ್ಯದಲ್ಲಿ ನಿಂತುಕೊಂಡು ಅವರಿಗೆ, “ನಿಮಗೆ ಶಾಂತಿಯಾಗಲಿ” ಅಂದನು. PEPS
|
39. ನನ್ನ ಕೈಗಳನ್ನು ಮತ್ತು ಪಾದಗಳನ್ನು ನೋಡಿರಿ. ನಾನೇ ಅಲ್ಲವೇ! ನನ್ನನ್ನು ಮುಟ್ಟಿರಿ. ನನ್ನ ಈ ಜೀವಂತ ದೇಹವನ್ನು ನೀವೇ ನೋಡಿರಿ. ಭೂತಕ್ಕೆ ಈ ರೀತಿಯ ದೇಹವಿರುವುದಿಲ್ಲ” ಅಂದನು. PEPS
|
41. ಶಿಷ್ಯರು ಅತ್ಯಾಶ್ಚರ್ಯಗೊಂಡರು ಮತ್ತು ಯೇಸುವನ್ನು ಜೀವಂತವಾಗಿ ಕಂಡು ಅತ್ಯಂತ ಸಂತೋಷಪಟ್ಟರು. ಆದರೆ ಅವರಿಗಿನ್ನೂ ನಂಬಲಾಗಲಿಲ್ಲ. ಯೇಸು ಅವರಿಗೆ, “ನಿಮ್ಮಲ್ಲಿ ಆಹಾರವೇನಾದರೂ ಇದೆಯೋ?” ಎಂದು ಕೇಳಿದನು.
|
44. ಯೇಸು ಅವರಿಗೆ, “ನಾನು ಮೊದಲು ನಿಮ್ಮ ಸಂಗಡ ಇದ್ದುದನ್ನು ಜ್ಞಾಪಕಮಾಡಿಕೊಳ್ಳಿರಿ. ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿ ಪ್ರವಾದಿಗಳ ಗ್ರಂಥಗಳಲ್ಲಿ, ಕೀರ್ತನೆಗಳಲ್ಲಿ ಬರೆದಿರುವ ಪ್ರತಿಯೊಂದು ಸಂಗತಿಯೂ ನೆರವೇರಬೇಕಾಗಿದೆ ಎಂದು ನಾನು ಹೇಳಿದೆನು” ಅಂದನು. PEPS
|
45. ಬಳಿಕ ಯೇಸು ಪವಿತ್ರ ಗ್ರಂಥವನ್ನು ತನ್ನ ಶಿಷ್ಯರಿಗೆ ವಿವರಿಸಿದನು. ತನ್ನ ಬಗ್ಗೆ ಬರೆದಿರುವ ಸಂಗತಿಗಳನ್ನು ಅರ್ಥಮಾಡಿಕೊಳ್ಳಲು ಅವರಿಗೆ ಸಹಾಯ ಮಾಡಿದನು.
|
46. ಬಳಿಕ ಯೇಸು ಅವರಿಗೆ, “ಕ್ರಿಸ್ತನು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಸತ್ತವರೊಳಗಿಂದ ಎದ್ದುಬರುವನು ಎಂದು ಬರೆಯಲ್ಪಟ್ಟಿದೆ.
|
47. (47-48) ಈ ಸಂಗತಿಗಳು ನೆರವೇರುವುದನ್ನು ನೀವು ನೋಡಿದಿರಿ. ನೀವೇ ಇದಕ್ಕೆ ಸಾಕ್ಷಿಗಳು. ನೀವು ಜನರ ಬಳಿಗೆ ಹೋಗಿ, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವವರಿಗೆ ಪಾಪಕ್ಷಮೆಯಾಗುತ್ತದೆ ಎಂದು ತಿಳಿಸಿರಿ. ನೀವು ಈ ಸುವಾರ್ತೆಯನ್ನು ಜೆರುಸಲೇಮಿನಲ್ಲಿ ಪ್ರಾರಂಭಿಸಿ ಲೋಕದ ಜನರೆಲ್ಲರಿಗೂ ನನ್ನ ಹೆಸರಿನಲ್ಲಿ ತಿಳಿಸಬೇಕು.
|
49. ಕೇಳಿರಿ! ನನ್ನ ತಂದೆ ನಿಮಗೆ ವಾಗ್ದಾನ ಮಾಡಿದ್ದನ್ನು ನಾನು ನಿಮಗೆ ಕಳುಹಿಸಿಕೊಡುತ್ತೇನೆ. ಆದರೆ ನೀವು ಪರಲೋಕದಿಂದ ಆ ಶಕ್ತಿಯನ್ನು ಪಡೆಯುವ ತನಕ ಜೆರುಸಲೇಮಿನಲ್ಲೇ ಕಾದುಕೊಂಡಿರಿ” ಅಂದನು. (ಮಾರ್ಕ 16:19-20; ಅಪೊ. ಕಾರ್ಯ. 1:9-11) PEPS
|
50. {ಯೇಸುವಿನ ಪರಲೋಕಾರೋಹಣ} PS ಯೇಸು ತನ್ನ ಶಿಷ್ಯರನ್ನು ಜೆರುಸಲೇಮಿನ ಹೊರಗೆ ಬೆಥಾನಿಯದ ಸಮೀಪಕ್ಕೆ ಕರೆದುಕೊಂಡು ಹೋದನು. ಯೇಸು ತನ್ನ ಕೈಗಳನ್ನು ಎತ್ತಿ ಶಿಷ್ಯರನ್ನು ಆಶೀರ್ವದಿಸಿದನು.
|
52. ಶಿಷ್ಯರು ಅಲ್ಲಿ ಆತನನ್ನು ಆರಾಧಿಸಿದರು. ಬಳಿಕ ಅವರು ಪಟ್ಟಣಕ್ಕೆ ಹಿಂತಿರುಗಿ ಹೋದರು. ಅವರು ಬಹಳ ಸಂತೋಷಗೊಂಡಿದ್ದರು.
|