1. {ಯೇಸುವಿಗೆ ಸೈತಾನನಿಂದಾದ ಶೋಧನೆ} (ಮತ್ತಾಯ 4:1-11; ಮಾರ್ಕ 1:12-13) PS ಯೇಸುವು ಜೋರ್ಡನ್ ನದಿಯಿಂದ ಹಿಂತಿರುಗಿದನು. ಆತನು ಪವಿತ್ರಾತ್ಮಭರಿತನಾಗಿದ್ದನು. ಪವಿತ್ರಾತ್ಮನು ಯೇಸುವನ್ನು ಅಡವಿಗೆ ನಡಿಸಿದನು.
|
2. ಅಲ್ಲಿ ಸೈತಾನನು ಆತನನ್ನು ನಲವತ್ತು ದಿನಗಳವರೆಗೆ ಶೋಧಿಸಿದನು. ಆ ದಿನಗಳಲ್ಲಿ ಯೇಸು ಏನನ್ನೂ ತಿನ್ನಲಿಲ್ಲ. ತರುವಾಯ, ಯೇಸುವಿಗೆ ಬಹಳ ಹಸಿವೆಯಾಯಿತು. PEPS
|
4. ಅದಕ್ಕೆ ಯೇಸು, “ ‘ಮನುಷ್ಯನು ರೊಟ್ಟಿ ತಿಂದ ಮಾತ್ರಕ್ಕೆ ಬದುಕುವುದಿಲ್ಲ.’ ಧರ್ಮೋಪದೇಶ. 8:3 ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಉತ್ತರಕೊಟ್ಟನು. PS
|
6. “ಈ ರಾಜ್ಯಗಳೆಲ್ಲವನ್ನೂ ಇವುಗಳ ಸರ್ವಾಧಿಕಾರವನ್ನೂ ವೈಭವವನ್ನೂ ನಿನಗೆ ಕೊಡುತ್ತೇನೆ. ಇವುಗಳೆಲ್ಲಾ ನನ್ನ ಅಧೀನದಲ್ಲಿವೆ. ನಾನು ಯಾರಿಗೆ ಬೇಕಾದರೂ ಇವುಗಳನ್ನು ಕೊಡಬಲ್ಲೆ.
|
8. ಅದಕ್ಕೆ ಯೇಸು, “ ‘ನಿನ್ನ ಪ್ರಭುವಾದ ದೇವರೊಬ್ಬನನ್ನೇ ಆರಾಧಿಸಬೇಕು,
ಆತನೊಬ್ಬನಿಗೇ ಸೇವೆಮಾಡಬೇಕು’ ಧರ್ಮೋಪದೇಶ. 6:13 ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದಿದೆ!” ಎಂದನು. PS |
9. ಬಳಿಕ ಸೈತಾನನು ಯೇಸುವನ್ನು ಜೆರುಸಲೇಮಿಗೆ ಕರೆದೊಯ್ದು, ದೇವಾಲಯದ ಬಹು ಎತ್ತರವಾದ ಸ್ಥಳದಲ್ಲಿ ನಿಲ್ಲಿಸಿ, “ನೀನು ದೇವರ ಮಗನಾಗಿದ್ದರೆ, ಕೆಳಕ್ಕೆ ಧುಮುಕು!
|
11. ‘ನಿನ್ನ ಪಾದವು ಕಲ್ಲಿಗೆ ತಗಲೀತೆಂದು
ಅವರು ತಮ್ಮ ಕೈಗಳಿಂದ ನಿನ್ನನ್ನು ಎತ್ತಿಕೊಳ್ಳುವರು’ ಕೀರ್ತನೆ. 91:12 ಎಂಬುದಾಗಿ ಶಾಸ್ತ್ರದಲ್ಲಿ ಬರೆದಿದೆ” ಎಂದನು. PS |
12. ಅದಕ್ಕೆ ಯೇಸು, “ ‘ನಿನ್ನ ಪ್ರಭುವಾದ ದೇವರನ್ನು ಪರೀಕ್ಷಿಸಬಾರದು’ ಧರ್ಮೋಪದೇಶ. 6:16 ಎಂಬುದಾಗಿಯೂ ಬರೆದಿದೆ” ಎಂದು ಉತ್ತರಿಸಿದನು.
|
14. {ಜನರಿಗೆ ಯೇಸುವಿನ ಉಪದೇಶ} (ಮತ್ತಾಯ 4:12-17; ಮಾರ್ಕ 1:14-15) PS ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ಗಲಿಲಾಯಕ್ಕೆ ಹಿಂತಿರುಗಿ ಹೋದನು. ಯೇಸುವಿನ ಸುದ್ದಿಯು ಗಲಿಲಾಯದ ಸುತ್ತಮುತ್ತಲಿರುವ ಪ್ರದೇಶದಲ್ಲೆಲ್ಲಾ ಹಬ್ಬಿತು.
|
16. {ಯೇಸು ಸ್ವಂತ ನಾಡಿಗೆ ಬಂದದ್ದು} (ಮತ್ತಾಯ 13:53-58; ಮಾರ್ಕ 6:1-6) PS ಯೇಸು ತಾನು ಬೆಳೆದ ನಜರೇತ್ ಎಂಬ ಊರಿಗೆ ಪ್ರಯಾಣ ಮಾಡಿದನು. ವಾಡಿಕೆಯ ಪ್ರಕಾರ, ಆತನು ಸಬ್ಬತ್ದಿನದಲ್ಲಿ ಸಭಾಮಂದಿರಕ್ಕೆ ಹೋದನು. ಯೇಸು ಓದುವುದಕ್ಕಾಗಿ ಎದ್ದುನಿಂತನು.
|
17. ಪ್ರವಾದಿಯಾದ ಯೆಶಾಯನ ಗ್ರಂಥವನ್ನು ಆತನಿಗೆ ಓದಲು ಕೊಡಲಾಗಿತ್ತು. ಯೇಸು ಆ ಪುಸ್ತಕವನ್ನು ತೆರೆದು ಈ ಭಾಗವನ್ನು ಓದಿದನು:
|
18. “ಪ್ರಭುವಿನ (ದೇವರ) ಆತ್ಮವು ನನ್ನಲ್ಲಿ ಇದೆ.
ಬಡಜನರಿಗೆ ಶುಭಸಂದೇಶವನ್ನು ತಿಳಿಸಲು ದೇವರು ನನ್ನನ್ನು ಅಭಿಷೇಕಿಸಿದ್ದಾನೆ. ಪಾಪಕ್ಕೆ ಸೆರೆಯಾಳುಗಳಾಗಿರುವ ಜನರಿಗೆ ‘ನೀವು ಬಿಡುಗಡೆಯಾಗಿದ್ದೀರಿ’ ಎಂತಲೂ ಕುರುಡರಿಗೆ, ‘ನಿಮಗೆ ಮತ್ತೆ ಕಣ್ಣು ಕಾಣಿಸುವುದು’ ಎಂತಲೂ ತಿಳಿಸುವುದಕ್ಕೆ ದೇವರು ನನ್ನನ್ನು ಕಳುಹಿಸಿದ್ದಾನೆ. ದಬ್ಬಾಳಿಕೆಗೆ ಗುರಿಯಾದವರನ್ನು ಬಿಡಿಸುವುದಕ್ಕೂ |
20. ಈ ಭಾಗವನ್ನು ಓದಿದ ನಂತರ ಯೇಸು ಆ ಪುಸ್ತಕವನ್ನು ಮುಚ್ಚಿ ಸಭಾಮಂದಿರದ ಸೇವಕನ ಕೈಗೆ ಕೊಟ್ಟು ಕುಳಿತುಕೊಂಡನು. ಸಭಾಮಂದಿರದಲ್ಲಿದ್ದ ಪ್ರತಿಯೊಬ್ಬರು ಯೇಸುವನ್ನೇ ದೃಷ್ಟಿಸಿ ನೋಡುತ್ತಿದ್ದರು.
|
21. ಆಗ ಯೇಸು, ಅವರಿಗೆ, “ನಾನು ಇದೀಗ ಓದಿದ ಮಾತುಗಳನ್ನು ನೀವು ಕೇಳುತ್ತಿದ್ದಾಗಲೇ ಅವು ನಿಜವಾಗಿ ನೆರವೇರಿದವು!” ಎಂದು ಹೇಳಿದನು. PEPS
|
22. ಜನರೆಲ್ಲರೂ ಯೇಸುವನ್ನು ಹೊಗಳತೊಡಗಿದರು. ಅವರು ಆತನ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಈ ರೀತಿ ಮಾತಾಡಲು ಹೇಗೆ ಸಾಧ್ಯ? ಇವನು ಯೋಸೇಫನ ಮಗನಲ್ಲವೇ?” ಎಂದು ಮಾತಾಡಿಕೊಂಡರು. PEPS
|
23. ಯೇಸು ಅವರಿಗೆ, “ನೀವಂತೂ ‘ವೈದ್ಯನೇ, ನಿನ್ನನ್ನೇ ವಾಸಿಮಾಡಿಕೊ’ ಎಂಬ ಗಾದೆಯನ್ನು ನನಗೆ ಹೇಳುತ್ತೀರಿ ಎಂಬುದು ನನಗೆ ಗೊತ್ತು. ‘ನೀನು ಕಪೆರ್ನೌಮಿನಲ್ಲಿ ಮಾಡಿದ ಕೆಲವು ಕಾರ್ಯಗಳ ಬಗ್ಗೆ ನಾವು ಕೇಳಿದ್ದೇವೆ. ಅದೇ ಕಾರ್ಯಗಳನ್ನು ನಿನ್ನ ಸ್ವಂತ ಊರಿನಲ್ಲಿ ಮಾಡು!’ ” ಎಂದು ಹೇಳಬೇಕೆಂದಿದ್ದೀರಿ.
|
25. “ನಾನು ಹೇಳುವುದು ಸತ್ಯ. ಎಲೀಯನ ಕಾಲದಲ್ಲಿ ಮೂರುವರೆ ವರ್ಷಗಳವರೆಗೆ ಇಸ್ರೇಲ್ ದೇಶದಲ್ಲಿ ಮಳೆ ಬೀಳಲಿಲ್ಲ. ದೇಶದ ಯಾವ ಕಡೆಯಲ್ಲಿಯೂ ಆಹಾರವಿರಲಿಲ್ಲ. ಆ ಸಮಯದಲ್ಲಿ ಇಸ್ರೇಲಿನಲ್ಲಿ ಅನೇಕ ವಿಧವೆಯರು ಇದ್ದರು.
|
26. ಆದರೆ ಎಲೀಯನನ್ನು ಬೇರೆ ಯಾವ ವಿಧವೆಯರ ಬಳಿಗೂ ಕಳುಹಿಸದೆ ಸಿದೋನ್ ದೇಶಕ್ಕೆ ಸೇರಿದ ಸರೆಪ್ತ ಊರಿನ ಒಬ್ಬ ವಿಧವೆಯ ಬಳಿಗೆ ಮಾತ್ರ ಕಳುಹಿಸಲಾಯಿತು. PEPS
|
27. “ಪ್ರವಾದಿಯಾದ ಎಲೀಷನ ಕಾಲದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರೇಲಿನಲ್ಲಿ ವಾಸಿಸುತ್ತಿದ್ದರು. ಆದರೆ ಅವರಲ್ಲಿ ಯಾರಿಗೂ ವಾಸಿಯಾಗದೆ ಸಿರಿಯ ದೇಶದ ನಾಮಾನನೊಬ್ಬನಿಗೇ ವಾಸಿಯಾಯಿತು” ಎಂದು ಹೇಳಿದನು. PEPS
|
29. ಯೇಸುವನ್ನು ಪಟ್ಟಣದಿಂದ ಹೊರಗಟ್ಟಿದರು. ಆ ಪಟ್ಟಣವು ಒಂದು ಗುಡ್ಡದ ಮೇಲಿತ್ತು. ಅವರು ಯೇಸುವನ್ನು ಗುಡ್ಡದ ಅಂಚಿಗೆ ಕರೆದುಕೊಂಡು ಬಂದು ಕೆಳಕ್ಕೆ ತಳ್ಳಿಬಿಡಬೇಕೆಂದಿದ್ದರು.
|
31. {ದೆವ್ವದಿಂದ ಪೀಡಿತನಾಗಿದ್ದವನಿಗೆ ಬಿಡುಗಡೆ} (ಮಾರ್ಕ 1:21-28) PS ಯೇಸು ಗಲಿಲಾಯದ ಕಪೆರ್ನೌಮ್ ಎಂಬ ಊರಿಗೆ ಹೋದನು. ಸಬ್ಬತ್ದಿನದಂದು ಯೇಸು ಜನರಿಗೆ ಉಪದೇಶಿಸಿದನು.
|
34. “ನಜರೇತಿನ ಯೇಸುವೇ! ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡಲು ಇಲ್ಲಿಗೆ ಬಂದಿರುವೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಕಳುಹಿಸಲ್ಪಟ್ಟ ಪರಿಶುದ್ಧನು!” ಎಂದು ಕೂಗಿದನು.
|
35. ಆದರೆ ಯೇಸು ಆ ದೆವ್ವಕ್ಕೆ, “ಸುಮ್ಮನಿರು! ಇವನನ್ನು ಬಿಟ್ಟು ಹೊರಗೆ ಬಾ!” ಎಂದು ಆಜ್ಞಾಪಿಸಿದನು. ದೆವ್ವವು ಅವನನ್ನು ಜನರೆಲ್ಲರ ಎದುರಿನಲ್ಲಿಯೇ ಕೆಡವಿ ಯಾವ ಕೇಡೂ ಮಾಡದೆ ಬಿಟ್ಟು ಹೋಯಿತು. PEPS
|
36. ಜನರೆಲ್ಲರೂ ಬೆರಗಾಗಿ, “ಎಂಥಾ ಮಾತುಗಳಿವು! ಆತನು ಅಧಿಕಾರದಿಂದಲೂ ಶಕ್ತಿಯಿಂದಲೂ ದೆವ್ವಗಳಿಗೆ ಆಜ್ಞಾಪಿಸಲು, ಅವು ಬಿಟ್ಟುಹೋಗುತ್ತವೆಯಲ್ಲಾ” ಎಂದು ಮಾತಾಡಿಕೊಂಡರು.
|
38. {ಯೇಸುವಿನಿಂದ ಗುಣಹೊಂದಿದ ಸ್ತ್ರೀ} (ಮತ್ತಾಯ 8:14-17; ಮಾರ್ಕ 1:29-34) PS ಯೇಸು ಸಭಾಮಂದಿರದಿಂದ ಹೊರಟು ಸೀಮೋನನ *ಸೀಮೋನ ಸೀಮೋನನ ಇನ್ನೊಂದು ಹೆಸರು ಪೇತ್ರ. ಮನೆಗೆ ಹೋದನು. ಸೀಮೋನನ ಅತ್ತೆ ಬಹಳ ಜ್ವರದಿಂದ ನರಳುತ್ತಿದ್ದಳು. ಆಕೆಗೆ ಸಹಾಯ ಮಾಡಬೇಕೆಂದು ಅಲ್ಲಿದ್ದವರು ಆತನನ್ನು ಬೇಡಿಕೊಂಡರು.
|
39. ಯೇಸು ಆಕೆಯ ಬಳಿ ನಿಂತು, ಆಕೆಯನ್ನು ಬಿಟ್ಟುಹೋಗುವಂತೆ ಜ್ವರಕ್ಕೆ ಆಜ್ಞಾಪಿಸಿದನು. ಆ ಕೂಡಲೇ ಆಕೆಗೆ ಗುಣವಾಯಿತು. ಆಕೆ ಎದ್ದು ಅವರನ್ನು ಉಪಚರಿಸಿದಳು. PS
|
40. {ಅನೇಕರಿಗೆ ಆರೋಗ್ಯದಾನ} PS ಸೂರ್ಯನು ಮುಳುಗಿದ ಮೇಲೆ, ಅಸ್ವಸ್ಥರಾದ ತಮ್ಮ ಸ್ನೇಹಿತರನ್ನು ಜನರು ಯೇಸುವಿನ ಬಳಿಗೆ ಕರೆದುಕೊಂಡು ಬಂದರು. ಅವರಿಗೆ ಅನೇಕ ತರಹದ ಕಾಯಿಲೆಗಳಿದ್ದವು. ಪ್ರತಿಯೊಬ್ಬ ರೋಗಿಯ ಮೇಲೂ ಯೇಸು ತನ್ನ ಕೈಯನ್ನಿಟ್ಟು ಗುಣಪಡಿಸಿದನು.
|
41. ಅನೇಕ ಜನರೊಳಗಿಂದ ದೆವ್ವಗಳು, “ನೀನು ದೇವಕುಮಾರ” ಎಂದು ಆರ್ಭಟಿಸುತ್ತಾ ಬಿಟ್ಟುಹೋದವು. ಆದರೆ ಯೇಸು ಆ ದೆವ್ವಗಳಿಗೆ, “ಮಾತಾಡಕೂಡದೆಂದು” ಬಲವಾಗಿ ಆಜ್ಞಾಪಿಸಿದನು. ಯೇಸುವೇ “ಕ್ರಿಸ್ತ”ನೆಂದು ದೆವ್ವಗಳಿಗೆ ತಿಳಿದಿತ್ತು. PEPS
|
42. {ಇತರ ಊರುಗಳಿಗೆ ಯೇಸುವಿನ ಸಂದರ್ಶನ} (ಮಾರ್ಕ 1:35-39) PS ಮರುದಿನ ಯೇಸು ನಿರ್ಜನ ಸ್ಥಳಕ್ಕೆ ಹೋದನು. ಜನರು ಯೇಸುವಿಗಾಗಿ ಹುಡುಕುತ್ತಾ ಅಲ್ಲಿಗೆ ಬಂದು, ತಮ್ಮನ್ನು ಬಿಟ್ಟುಹೋಗದಂತೆ ಆತನನ್ನು ತಡೆಯಲು ಪ್ರಯತ್ನಿಸಿದರು.
|
43. ಆದರೆ ಯೇಸು ಅವರಿಗೆ, “ನಾನು ಬೇರೆ ಊರುಗಳವರಿಗೂ ಸಹ ದೇವರ ರಾಜ್ಯದ ಸುವಾರ್ತೆಯನ್ನು ತಿಳಿಸಬೇಕು. ಇದಕ್ಕಾಗಿಯೇ ನನ್ನನ್ನು ಕಳುಹಿಸಲಾಗಿದೆ” ಎಂದು ಹೇಳಿದನು. PEPS
|