1. ಒಂದಾನೊಂದು ಸಬ್ಬತ್ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದುಹೋಗುತ್ತಿದ್ದನು. ಆತನ ಶಿಷ್ಯರು ತೆನೆಗಳನ್ನು ಕಿತ್ತು, ಕೈಗಳಲ್ಲಿ ಹೊಸಕಿ ಕಾಳನ್ನು ತಿಂದರು.
|
2. ಕೆಲವು ಫರಿಸಾಯರು, “ನೀವು ಸಬ್ಬತ್ದಿನದಲ್ಲಿ ಹೀಗೆ ಮಾಡುವುದು ಮೋಶೆಯ ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆ” ಎಂದು ಹೇಳಿದರು.
|
4. ದಾವೀದನು ದೇವರ ಮಂದಿರದೊಳಕ್ಕೆ ಹೋಗಿ, ದೇವರಿಗೆ ಸಮರ್ಪಿಸಿದ್ದ ರೊಟ್ಟಿಯನ್ನು ತೆಗೆದುಕೊಂಡು ತಿಂದನು. ತನ್ನ ಜೊತೆ ಇದ್ದ ಜನರಿಗೂ ಸ್ವಲ್ಪ ಕೊಟ್ಟನು. ಇದು ಮೋಶೆಯ ಧರ್ಮಶಾಸ್ತ್ರಕ್ಕೆ ವಿರುದ್ಧ. ಯಾಜಕರು ಮಾತ್ರವೇ ಈ ರೊಟ್ಟಿಯನ್ನು ತಿನ್ನಬಹುದು ಎಂದು ಧರ್ಮಶಾಸ್ತ್ರ ಹೇಳುತ್ತದೆ” ಎಂದು ಉತ್ತರಿಸಿ,
|
6. ಮತ್ತೊಂದು ಸಬ್ಬತ್ದಿನದಲ್ಲಿ ಯೇಸು ಸಭಾಮಂದಿರಕ್ಕೆ ಹೋಗಿ ಜನರಿಗೆ ಉಪದೇಶಿಸಿದನು. ಬಲಗೈ ಬತ್ತಿಹೋಗಿದ್ದ ಒಬ್ಬ ಮನುಷ್ಯನು ಅಲ್ಲಿದ್ದನು.
|
7. ಯೇಸು ಅವನನ್ನು ವಾಸಿಮಾಡಿದರೆ, ಆತನ ಮೇಲೆ ತಪ್ಪು ಹೊರಿಸಬಹುದೆಂದು ಧರ್ಮೋಪದೇಶಕರು ಮತ್ತು ಫರಿಸಾಯರು ಹೊಂಚುಹಾಕಿ ನೋಡುತ್ತಿದ್ದರು.
|
8. ಆದರೆ ಅವರ ಆಲೋಚನೆಯು ಯೇಸುವಿಗೆ ತಿಳಿದಿತ್ತು. ಯೇಸುವು ಕೈಬತ್ತಿಹೋಗಿದ್ದ ಮನುಷ್ಯನಿಗೆ, “ಬಂದು ಇಲ್ಲಿ ನಿಂತುಕೊ”ಎಂದು ಹೇಳಿದನು. ಅವನು ಎದ್ದುಬಂದು ನಿಂತನು.
|
9. ಆಗ ಯೇಸು ಅವರಿಗೆ, “ಸಬ್ಬತ್ದಿನದಲ್ಲಿ ಯಾವ ಕಾರ್ಯವನ್ನು ಮಾಡುವುದು ಸರಿ? ಒಳ್ಳೆಯ ಕಾರ್ಯವನ್ನೇ ಅಥವಾ ಕೆಟ್ಟಕಾರ್ಯವನ್ನೇ? ಜೀವವನ್ನು ಉಳಿಸುವುದೇ? ಅಥವಾ ನಾಶ ಮಾಡುವುದೇ?” ಎಂದು ಕೇಳಿದನು.
|
10. ಯೇಸು ಸುತ್ತಲೂ ನಿಂತಿದ್ದ ಅವರೆಲ್ಲರನ್ನು ನೋಡಿ, ಆ ಮನುಷ್ಯನಿಗೆ, “ನಿನ್ನ ಕೈಯನ್ನು ನನಗೆ ತೋರಿಸು” ಎಂದನು. ಅವನು ತನ್ನ ಕೈಯನ್ನು ಚಾಚಿದನು. ಆ ಕೂಡಲೇ ಅವನ ಕೈ ವಾಸಿಯಾಯಿತು.
|
11. ಫರಿಸಾಯರು ಮತ್ತು ಧರ್ಮೋಪದೇಶಕರು ಬಹಳವಾಗಿ ಕೋಪಗೊಂಡರು. ಅವರು, “ನಾವು ಯೇಸುವಿಗೆ ಏನು ಮಾಡೋಣ?” ಎಂದು ತಮ್ಮತಮ್ಮೊಳಗೆ ಸಂಚುಮಾಡಿದರು.
|
12. ಆ ಸಮಯದಲ್ಲಿ ಯೇಸು ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟಕ್ಕೆ ಹೋದನು. ದೇವರಲ್ಲಿ ಪ್ರಾರ್ಥಿಸುತ್ತಾ ರಾತ್ರಿಯೆಲ್ಲಾ ಅಲ್ಲೇ ಇದ್ದನು.
|
13. ಮರುದಿನ ಬೆಳಿಗ್ಗೆ, ಯೇಸು ತನ್ನ ಶಿಷ್ಯರನ್ನು ಕರೆದನು. ಅವರಲ್ಲಿ ಹನ್ನೆರಡು ಮಂದಿಯನ್ನು ಆತನು ಆರಿಸಿಕೊಂಡನು. ಯೇಸು ಈ ಹನ್ನೆರಡು ಜನರಿಗೆ, “ಅಪೊಸ್ತಲರು” ಎಂದು ಹೆಸರಿಟ್ಟನು.
|
14. ಅವರು ಯಾರೆಂದರೆ: ಸೀಮೋನ (ಯೇಸು ಅವನಿಗೆ ಪೇತ್ರನೆಂದು ಹೆಸರಿಟ್ಟನು.) ಮತ್ತು ಪೇತ್ರನ ಸಹೋದರನಾದ ಅಂದ್ರೆಯ, ಯಾಕೋಬ ಮತ್ತು ಯೋಹಾನ, ಫಿಲಿಪ್ಪ ಮತ್ತು ಬಾರ್ತೊಲೊಮಾಯ,
|
17. ಯೇಸು ಮತ್ತು ಅಪೊಸ್ತಲರು ಬೆಟ್ಟದಿಂದಿಳಿದು ಸಮತಟ್ಟಾದ ಸ್ಥಳಕ್ಕೆ ಬಂದರು. ಆತನ ಹಿಂಬಾಲಕರ ಒಂದು ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮಿನಿಂದಲೂ ಜನಸಮೂಹವು ಅಲ್ಲಿಗೆ ಬಂದಿತ್ತು.
|
18. ಅವರೆಲ್ಲರು ಯೇಸುವಿನ ಉಪದೇಶವನ್ನು ಕೇಳುವುದಕ್ಕೂ ಆತನಿಂದ ವಾಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. ದೆವ್ವಗಳಿಂದ ಪೀಡಿತರಾಗಿದ್ದ ಜನರನ್ನು ಯೇಸು ವಾಸಿಮಾಡಿದನು.
|
19. ಜನರೆಲ್ಲರೂ ಯೇಸುವನ್ನು ಮುಟ್ಟುವುದಕ್ಕೆ ಪ್ರಯತ್ನಿಸಿದರು, ಏಕೆಂದರೆ ಆತನಿಂದ ಶಕ್ತಿಯು ಹರಿದುಬಂದು ಎಲ್ಲರನ್ನೂ ಗುಣಪಡಿಸುತ್ತಿತ್ತು!
|
22. ”ನೀವು ಮನುಷ್ಯಕುಮಾರನಿಗೆ ಸೇರಿದವರಾಗಿರುವುದರಿಂದ ಜನರು ನಿಮ್ಮನ್ನು ದ್ವೇಷಿಸಿದರೆ, ತುಚ್ಛೀಕರಿಸಿದರೆ, ಅವಮಾನ ಮಾಡಿದರೆ, ನಿಮ್ಮನ್ನು ಕೆಟ್ಟವರೆಂದು ಹೇಳಿದರೆ ನೀವು ಧನ್ಯರು.
|
23. ಆ ಸಮಯದಲ್ಲಿ ಆನಂದಪಡಿರಿ. ಏಕೆಂದರೆ ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು. ಈ ಜನರು ನಿಮಗೆ ಮಾಡಿದಂತೆಯೇ ಅವರ ಪಿತೃಗಳು ಪ್ರವಾದಿಗಳಿಗೆ ಮಾಡಿದರು.
|
25. ಈಗ ಹೊಟ್ಟೆ ತುಂಬಿರುವ ಜನರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಹಸಿಯುವಿರಿ. ನಗುವ ಜನರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದುಃಖಪಡುವಿರಿ ಮತ್ತು ಅಳುವಿರಿ.
|
26. ”ಜನರಿಂದ ಯಾವಾಗಲೂ ಹೊಗಳಿಸಿಕೊಳ್ಳುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರ ಪಿತೃಗಳು ಸುಳ್ಳು ಪ್ರವಾದಿಗಳನ್ನು ಯಾವಾಗಲೂ ಹೊಗಳುತ್ತಿದ್ದರು.
|
27. ”ನನ್ನ ಮಾತುಗಳನ್ನು ಆಲಿಸುತ್ತಿರುವ ನಿಮಗೆ ನಾನು ಹೇಳುವುದೇನಂದರೆ: ನಿಮ್ಮ ವೈರಿಗಳನ್ನು ಪ್ರೀತಿಸಿರಿ. ನಿಮ್ಮನ್ನು ದ್ವೇಷಿಸುವವರಿಗೆ ಒಳ್ಳೆಯದನ್ನು ಮಾಡಿರಿ.
|
29. ಒಬ್ಬನು ನಿಮ್ಮ ಕೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನು ಒಡ್ಡಿರಿ. ಒಬ್ಬನು ನಿಮ್ಮ ಮೇಲಂಗಿಯನು ಕೇಳಿದರೆ, ಅವನಿಗೆ ನಿಮ್ಮ ಒಳಂಗಿಯನ್ನೂ ಕೊಡಿ.
|
30. ನಿಮ್ಮನ್ನು ಬೇಡುವ ಪ್ರತಿಯೊಬ್ಬನಿಗೆ ಕೊಡಿ. ಒಬ್ಬನು ನಿಮ್ಮಿಂದ ಏನಾದರೂ ತೆಗೆದುಕೊಂಡಾಗ ಅದನ್ನು ಹಿಂದಕ್ಕೆ ಕೊಡೆಂದು ಕೇಳಬೇಡಿ.
|
32. ನಿಮ್ಮನ್ನು ಪ್ರೀತಿಸುವ ಜನರನ್ನೇ ನೀವು ಪ್ರೀತಿಸಿದರೆ, ನಿಮಗೆ ಹೊಗಳಿಕೆ ಏಕೆ ಬರಬೇಕು? ಇಲ್ಲ! ತಮ್ಮನ್ನು ಪ್ರೀತಿಸುವವರನ್ನು ಪಾಪಿಷ್ಠರು ಸಹ ಪ್ರೀತಿಸುತ್ತಾರೆ!
|
33. ನಿಮಗೆ ಒಳ್ಳೆಯದನ್ನು ಮಾಡುವವರಿಗೇ ನೀವು ಒಳ್ಳೆಯದನ್ನು ಮಾಡಿದರೆ, ಅದರಿಂದ ನಿಮಗೆ ಹೊಗಳಿಕೆ ಬರುವುದೇ? ಪಾಪಿಷ್ಠರು ಸಹ ಹಾಗೆಯೇ ಮಾಡುತ್ತಾರೆ!
|
34. ನೀವು ಯಾರಿಗಾದರೂ ಸಾಲಕೊಟ್ಟು, ಅದನ್ನು ಪೂರ್ತಿಯಾಗಿ ಮತ್ತೆ ಅವರಿಂದ ತೆಗೆದುಕೊಂಡರೆ ಅದರಿಂದ ನಿಮಗೆ ಹೊಗಳಿಕೆ ಬರುವುದೇ? ಪಾಪಿಷ್ಠರು ಸಹ ಹಾಗೆಯೇ ಸಾಲಕೊಟ್ಟು ಮತ್ತೆ ಅದನ್ನು ಪೂರ್ತಿಯಾಗಿ ಮರಳಿ ಪಡೆಯುತ್ತಾರೆ!
|
35. ಆದ್ದರಿಂದ ನಿಮ್ಮ ವೈರಿಗಳನ್ನು ಪ್ರೀತಿಸಿರಿ. ಅವರಿಗೆ ಒಳ್ಳೆಯದನ್ನು ಮಾಡಿರಿ. ನೀವು ಅವರಿಗೆ ಸಾಲ ಕೊಡುವಾಗ ಮತ್ತೆ ಅವರಿಂದ ಪಡೆಯಬಹುದೆಂಬ ನಿರೀಕ್ಷೆಯಿಲ್ಲದೆ ಕೊಡಿರಿ. ಆಗ ನಿಮಗೆ ದೊಡ್ಡ ಪ್ರತಿಫಲವಿರುವುದು. ನೀವು ಮಹೋನ್ನತನಾದ ದೇವರ ಮಕ್ಕಳಾಗುವಿರಿ. ಏಕೆಂದರೆ ದೇವರು ಪಾಪಿಷ್ಠರಿಗೂ ಕೃತಜ್ಞತೆಯಿಲ್ಲದವರಿಗೂ ಒಳ್ಳೆಯವನಾಗಿದ್ದಾನೆ.
|
37. ”ಬೇರೆಯವರಿಗೆ ತೀರ್ಪು ಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ. ಬೇರೆಯವರನ್ನು ಅಪರಾಧಿಗಳೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ. ಇತರರನ್ನು ಕ್ಷಮಿಸಿರಿ, ಆಗ ನಿಮಗೂ ಕ್ಷಮಾಪಣೆ ಆಗುವುದು.
|
38. ಇತರರಿಗೆ ಕೊಡಿರಿ, ಆಗ ನಿಮಗೂ ದೊರೆಯುವುದು. ಪಾತ್ರೆಯಲ್ಲಿ ಅದುಮಿ, ಅಲ್ಲಾಡಿಸಿ ಹೊರಚೆಲ್ಲುವಂತೆ ಅಳೆದು ನಿಮ್ಮ ಸೆರಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು.”
|
39. ಯೇಸು ಅವರಿಗೆ ಈ ಸಾಮ್ಯವನ್ನೂ ಹೇಳಿದನು: “ಒಬ್ಬ ಕುರುಡನು ಇನ್ನೊಬ್ಬ ಕುರುಡನನ್ನು ನಡಿಸುವುದಕ್ಕಾದೀತೇ? ಇಲ್ಲ! ಅವರಿಬ್ಬರೂ ಗುಂಡಿಯಲ್ಲಿ ಬೀಳುವರು.
|
42. ನೀನು ಅವನಿಗೆ, ಸಹೋದರನೇ, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆಯುತ್ತೇನೆ؆ ಎಂದು ನೀನು ಹೇಗೆ ಹೇಳಬಲ್ಲೆ? ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯೇ ನಿನಗೆ ಕಾಣಿಸದು! ನೀನು ಕಪಟಿ. ಮೊದಲು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ತೆಗೆದುಹಾಕು. ಆಗ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ತೆಗೆಯಲು ನಿನಗೆ ಸ್ಪಷ್ಟವಾಗಿ ಕಾಣಿಸುವುದು.
|
44. ”ಪ್ರತಿಯೊಂದು ಮರವನ್ನು ಅದರ ಫಲದಿಂದಲೇ ಗುರುತಿಸಲಾಗುವುದು. ಜನರು ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನಾಗಲಿ ಪೊದೆಗಳಲ್ಲಿ ದ್ರಾಕ್ಷಿ ಹಣ್ಣುಗಳನ್ನಾಗಲಿ ಪಡೆಯುವುದಿಲ್ಲ!
|
45. ಒಳ್ಳೆಯವನ ಹೃದಯದಲ್ಲಿ ಒಳ್ಳೆಯವು ಇರುತ್ತವೆ. ಆದ್ದರಿಂದ ಅವನ ಹೃದಯದೊಳಗಿಂದ ಒಳ್ಳೆಯವು ಹೊರಬರುತ್ತವೆ. ಆದರೆ ಕೆಟ್ಟವನ ಹೃದಯದಲ್ಲಿ ಕೆಟ್ಟವು ಇರುತ್ತವೆ. ಆದ್ದರಿಂದ ಅವನ ಹೃದಯದೊಳಗಿಂದ ಕೆಟ್ಟವು ಹೊರಬರುತ್ತವೆ. ಹೃದಯದಲ್ಲಿ ತುಂಬಿರುವುದೇ ಬಾಯಲ್ಲಿ ಬರುವುದು.
|
47. ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ, ಅವುಗಳಿಗೆ ವಿಧೇಯನಾಗುವ ಪ್ರತಿಯೊಬ್ಬನು ಮನೆಯನ್ನು ಕಟ್ಟುವ ವ್ಯಕ್ತಿಯಂತಿರುವನು.
|
48. ಅವನು ಆಳವಾದ ಅಸ್ತಿವಾರ ಹಾಕಿ, ಬಲವಾದ ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟುತ್ತಾನೆ. ಪ್ರವಾಹವು ಏರಿಬಂದು ಆ ಮನೆಗೆ ಅಪ್ಪಳಿಸಿದರೂ ಆ ಮನೆಯನ್ನು ಕದಲಿಸಲಾರದು; ಏಕೆಂದರೆ ಆ ಮನೆಯು ಬಲವಾಗಿ ಕಟ್ಟಲ್ಪಟ್ಟಿದೆ.
|
49. ಅದೇ ರೀತಿಯಲ್ಲಿ, ನನ್ನ ಮಾತುಗಳನ್ನು ಕೇಳಿಯೂ ಅವುಗಳಿಗೆ ವಿಧೇಯನಾಗದ ವ್ಯಕ್ತಿಯು ಅಸ್ತಿವಾರವಿಲ್ಲದೆ ನೆಲದಮೇಲೆ ಮನೆ ಕಟ್ಟಿದ ಮನುಷ್ಯನಂತಿರುವನು. ಪ್ರವಾಹ ಬಂದಾಗ, ಮನೆಯು ಬೇಗನೆ ಕುಸಿದು ಹೋಗಿ ಸಂಪೂರ್ಣವಾಗಿ ನಾಶವಾಗುತ್ತದೆ.”
|