2. ಪ್ರವಾದಿಯಾದ ಯೆಶಾಯನು ತನ್ನ ಪ್ರವಾದನೆಯ ಗ್ರಂಥದಲ್ಲಿ ಹೀಗೆ ಬರೆದಿದ್ದಾನೆ. “ಇಗೋ! ನಾನು ನನ್ನ ಸಂದೇಶಕನನ್ನು ನಿನ್ನ ಮುಂದೆ ಕಳುಹಿಸುತ್ತೇನೆ.
ಅವನು ನಿನಗಾಗಿ ಮಾರ್ಗವನ್ನು ಸಿದ್ಧಪಡಿಸುತ್ತಾನೆ.” ಮಲಾಕಿ 3:1 |
3. “ ‘ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಗೊಳಿಸಿರಿ,
ಆತನ ದಾರಿಯನ್ನು ಸುಗಮಗೊಳಿಸಿರಿ’ ಎಂದು ಒಬ್ಬ ವ್ಯಕ್ತಿಯು ಅಡವಿಯಲ್ಲಿ ಕೂಗುತ್ತಿದ್ದಾನೆ.” ಯೆಶಾಯ 40:3 PS |
4. ಅಂತೆಯೇ ಸ್ನಾನಿಕ ಯೋಹಾನನು ಬಂದು, ಅಡವಿಯಲ್ಲಿ ಜನರಿಗೆ, “ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಿರಿ. ಆಗ ನಿಮಗೆ ಪಾಪಕ್ಷಮೆ ಆಗುವುದು” ಎಂದು ಉಪದೇಶಿಸುತ್ತಿದ್ದನು ಮತ್ತು ದೀಕ್ಷಾಸ್ನಾನ ಕೊಡುತ್ತಾ ಇದ್ದನು.
|
5. ಜುದೇಯ ಮತ್ತು ಜೆರುಸಲೇಮಿನ ಜನರೆಲ್ಲರೂ ಯೋಹಾನನ ಬಳಿಗೆ ಬಂದು ತಮ್ಮ ಪಾಪಗಳನ್ನು ಅರಿಕೆಮಾಡಿಕೊಂಡರು. ಆಗ ಯೋಹಾನನು ಅವರಿಗೆ ಜೋರ್ಡನ್ ನದಿಯಲ್ಲಿ ದೀಕ್ಷಾಸ್ನಾನ ಕೊಟ್ಟನು. PEPS
|
6. ಯೋಹಾನನು ಒಂಟೆಯ ತುಪ್ಪಟದಿಂದ ಮಾಡಿದ ಹೊದಿಕೆಯನ್ನು ಹೊದ್ದುಕೊಂಡು ಸೊಂಟಕ್ಕೆ ತೊಗಲಿನ ನಡುಪಟ್ಟಿಯನ್ನು ಕಟ್ಟಿಕೊಳ್ಳುತ್ತಿದ್ದನು. ಅವನು ಮಿಡತೆಗಳನ್ನು ಮತ್ತು ಕಾಡುಜೇನನ್ನು ತಿನ್ನುತ್ತಿದ್ದನು. PEPS
|
7. ಯೋಹಾನನು ಜನರಿಗೆ, “ನನ್ನ ತರುವಾಯ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ನಾನು ಮೊಣಕಾಲೂರಿ, ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ಯೋಗ್ಯನಲ್ಲ.
|
8. ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ, ಆದರೆ ಆತನು ನಿಮಗೆ ಪವಿತ್ರಾತ್ಮನಲ್ಲಿ ದೀಕ್ಷಾಸ್ನಾನ ಮಾಡಿಸುತ್ತಾನೆ” ಎಂದು ಬೋಧಿಸಿದನು. PEPS
|
9. {ಯೇಸುವಿಗೆ ದೀಕ್ಷಾಸ್ನಾನ} (ಮತ್ತಾಯ 3:13-17; ಲೂಕ 3:21-22) PS ಆ ದಿನಗಳಲ್ಲಿ ಯೇಸು ಗಲಿಲಾಯದ ನಜರೇತಿನಿಂದ ಯೋಹಾನನಿದ್ದ ಸ್ಥಳಕ್ಕೆ ಬಂದನು. ಯೋಹಾನನು ಯೇಸುವಿಗೆ ಜೋರ್ಡನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿದನು.
|
10. ಯೇಸು ನೀರಿನಿಂದ ಮೇಲಕ್ಕೆ ಬರುತ್ತಿದ್ದಾಗ, ಆಕಾಶವು ತೆರೆಯಂತೆ ಹರಿದುಹೋಯಿತು; ಮತ್ತು ಪವಿತ್ರಾತ್ಮನು ತನ್ನ ಮೇಲೆ ಪಾರಿವಾಳದ ರೂಪದಲ್ಲಿ ಇಳಿದುಬರುತ್ತಿರುವುದನ್ನು ಕಂಡನು.
|
11. ಆಗ ಪರಲೋಕದಿಂದ ಧ್ವನಿಯೊಂದು ಹೊರಟು, “ನೀನೇ ನನ್ನ ಪ್ರಿಯ ಮಗನು. ನಾನು ನಿನ್ನನ್ನು ಮೆಚ್ಚಿಕೊಂಡಿದ್ದೇನೆ” ಎಂದು ಹೇಳಿತು. PEPS
|
13. ಯೇಸು ಅಲ್ಲಿ ನಲವತ್ತು ದಿನಗಳ ಕಾಲ ಕಾಡುಮೃಗಗಳೊಂದಿಗಿದ್ದು ಸೈತಾನನಿಂದ ಪರಿಶೋಧಿಸಲ್ಪಟ್ಟನು. ಬಳಿಕ ದೇವದೂತರು ಬಂದು ಯೇಸುವಿಗೆ ಉಪಚಾರ ಮಾಡಿದರು. PEPS
|
14. {ಗಲಿಲಾಯದಲ್ಲಿ ಯೇಸುವಿನ ಸೇವೆಯ ಆರಂಭ} (ಮತ್ತಾಯ 4:12-17; ಲೂಕ 4:14-15) PS ಯೋಹಾನನನ್ನು ಸೆರೆಮನೆಗೆ ಹಾಕಿದ ಮೇಲೆ, ಯೇಸು ಗಲಿಲಾಯಕ್ಕೆ ಹೋಗಿ ಜನರಿಗೆ,
|
15. “ಕಾಲ ಪರಿಪೂರ್ಣವಾಯಿತು. ದೇವರ ರಾಜ್ಯ ಸಮೀಪಿಸಿತು. ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಸುವಾರ್ತೆಯನ್ನು ನಂಬಿರಿ” ಎಂಬ ದೇವರ ಸುವಾರ್ತೆಯನ್ನು ಉಪದೇಶಿಸಿದನು. PEPS
|
16. {ಯೇಸುವಿನ ಪ್ರಥಮ ಶಿಷ್ಯರು} (ಮತ್ತಾಯ 4:18-22; ಲೂಕ 5:1-11) PS ಯೇಸು ಗಲಿಲಾಯ ಸರೋವರದ ಬಳಿ ನಡೆದುಹೋಗುತ್ತಿದ್ದಾಗ ಸೀಮೋನನನ್ನು ಮತ್ತು ಸೀಮೋನನ ಸಹೋದರನಾದ ಅಂದ್ರೆಯನನ್ನು ಕಂಡನು. ಇವರಿಬ್ಬರೂ ಬೆಸ್ತರಾಗಿದ್ದರು. ಇವರು ಮೀನುಗಳನ್ನು ಹಿಡಿಯಲು ಸರೋವರದೊಳಕ್ಕೆ ಬಲೆಯನ್ನು ಬೀಸುತ್ತಿದ್ದರು.
|
17. ಯೇಸು, “ಬನ್ನಿರಿ, ನನ್ನನ್ನು ಹಿಂಬಾಲಿಸಿರಿ, ನಾನು ನಿಮ್ಮನ್ನು ಬೇರೆ ವಿಧದ ಬೆಸ್ತರನ್ನಾಗಿ ಮಾಡುವೆನು. ಇನ್ನು ಮೇಲೆ ನೀವು ಒಂದುಗೂಡಿಸುವುದು ಜನರನ್ನೇ, ಮೀನುಗಳನ್ನಲ್ಲ” ಎಂದು ಅವರಿಗೆ ಹೇಳಿದನು.
|
19. ಯೇಸು ಗಲಿಲಾಯ ಸರೋವರದ ಬಳಿಯಲ್ಲಿ ಇನ್ನೂ ತಿರುಗಾಡುತ್ತಲೇ ಇದ್ದಾಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೆಂಬ ಇಬ್ಬರು ಸಹೋದರರನ್ನು ಕಂಡನು. ಅವರು ಮೀನುಗಳನ್ನು ಹಿಡಿಯಲು ಬಲೆಯನ್ನು ಸಿದ್ಧಪಡಿಸುತ್ತಾ ತಮ್ಮ ದೋಣಿಯಲ್ಲಿದ್ದರು.
|
20. ಅವರ ತಂದೆಯಾದ ಜೆಬೆದಾಯನೂ ಅವನ ಕೆಲಸಗಾರರೂ ಸಹೋದರರೊಂದಿಗೆ ದೋಣಿಯಲ್ಲಿದ್ದರು. ಯೇಸು ಅವರನ್ನು ಕರೆದನು. ಕೂಡಲೇ ಅವರು ತಮ್ಮ ತಂದೆಯನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು. PEPS
|
21. {ದೆವ್ವದಿಂದ ಪೀಡಿತನಾಗಿದ್ದವನಿಗೆ ವಿಮೋಚನೆ} (ಲೂಕ 4:31-37) PS ಯೇಸು ಮತ್ತು ಆತನ ಶಿಷ್ಯರು ಕಪೆರ್ನೌಮಿಗೆ ಹೋದರು. ಸಬ್ಬತ್ದಿನದಂದು ಯೇಸು ಸಭಾಮಂದಿರಕ್ಕೆ ಹೋಗಿ ಜನರಿಗೆ ಉಪದೇಶಮಾಡಿದನು.
|
22. ಯೇಸುವಿನ ಉಪದೇಶವನ್ನು ಕೇಳಿ ಅಲ್ಲಿದ್ದ ಜನರು ಆಶ್ಚರ್ಯಗೊಂಡರು. ಆತನು ಅವರ ಧರ್ಮೋಪದೇಶಕರಂತೆ ಉಪದೇಶಮಾಡದೆ, ಅಧಿಕಾರವುಳ್ಳವನಂತೆ ಉಪದೇಶ ಮಾಡಿದನು.
|
24. “ನಜರೇತಿನ ಯೇಸುವೇ! ನಮ್ಮಿಂದ ನಿನಗೆ ಏನಾಗಬೇಕಾಗಿದೆ? ನಮ್ಮನ್ನು ನಾಶಗೊಳಿಸಲು ಬಂದಿರುವೆಯಾ? ನೀನು ದೇವರಿಂದ ಬಂದ ಪರಿಶುದ್ಧನೆಂದು ನನಗೆ ಗೊತ್ತಿದೆ!” ಎಂದು ಕೂಗಿಕೊಂಡನು. PEPS
|
27. ಜನರೆಲ್ಲರೂ ದಿಗ್ಭ್ರಮೆಗೊಂಡು, “ಇದೇನು? ಹೊಸದೊಂದನ್ನು ಈತನು ಅಧಿಕಾರದಿಂದ ಉಪದೇಶಿಸುತ್ತಿದ್ದಾನೆ! ಈತನ ಆಜ್ಞೆಗೆ ದೆವ್ವಗಳೂ ವಿಧೇಯವಾಗುತ್ತಿವೆ” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.
|
29. {ಅನೇಕರಿಗೆ ಸ್ವಸ್ಥತೆ} (ಮತ್ತಾಯ 8:14-17; ಲೂಕ 4:38-41) PS ಯೇಸು ಮತ್ತು ಆತನ ಶಿಷ್ಯರು ಸಭಾಮಂದಿರದಿಂದ ಹೊರಟು ಯಾಕೋಬ ಮತ್ತು ಯೋಹಾನರ ಸಂಗಡ ಸೀಮೋನ ಮತ್ತು ಅಂದ್ರೆಯರ ಮನೆಗೆ ಹೋದರು.
|
31. ಆದ್ದರಿಂದ ಯೇಸು ಅವಳ ಹಾಸಿಗೆಯ ಬಳಿ ಹೋಗಿ ಆಕೆಯ ಕೈಗಳನ್ನು ಹಿಡಿದುಕೊಂಡು, ಮೇಲೇಳಲು ಸಹಾಯ ಮಾಡಿದನು. ಕೂಡಲೇ ಅವಳಿಗೆ ಗುಣವಾಯಿತು. ಆಕೆ ಎದ್ದು ಅವರಿಗೆ ಉಪಚಾರ ಮಾಡಿದಳು. PEPS
|
34. ಯೇಸು ನಾನಾ ಬಗೆಯ ರೋಗಗಳಿಂದ ನರಳುತ್ತಿದ್ದ ಅನೇಕ ಜನರನ್ನು ಗುಣಪಡಿಸಿದನು; ದೆವ್ವಗಳಿಂದ ಪೀಡಿತರಾಗಿದ್ದ ಅನೇಕರನ್ನು ಬಿಡಿಸಿದನು. ಆದರೆ ಆ ದೆವ್ವಗಳಿಗೆ ಮಾತನಾಡಲು ಆತನು ಅವಕಾಶ ಕೊಡಲಿಲ್ಲ; ಏಕೆಂದರೆ ಯೇಸು ಯಾರೆಂಬುದು ದೆವ್ವಗಳಿಗೆ ಗೊತ್ತಿತ್ತು. PEPS
|
35. {ಸುವಾರ್ತೆ ಸಾರಲು ಯೇಸುವಿನ ಸಿದ್ಧತೆ} (ಲೂಕ 4:42-44) PS ಮರುದಿನ ಮುಂಜಾನೆ, ಇನ್ನೂ ಕತ್ತಲೆ ಇರುವಾಗಲೇ ಯೇಸು ಎದ್ದು ಪ್ರಾರ್ಥಿಸುವುದಕ್ಕಾಗಿ ಏಕಾಂತವಾದ ಸ್ಥಳಕ್ಕೆ ಹೋದನು.
|
38. ಯೇಸು, “ಇಲ್ಲಿಗೆ ಸಮೀಪದಲ್ಲಿರುವ ಊರುಗಳಿಗೆ ನಾವು ಹೋಗೋಣ. ಆ ಸ್ಥಳಗಳಲ್ಲಿಯೂ ನಾನು ಉಪದೇಶಿಸಬೇಕು. ಅದಕ್ಕಾಗಿಯೇ ನಾನು ಇಲ್ಲಿಗೆ ಬಂದೆನು” ಎಂದು ಹೇಳಿದನು.
|
39. ಹೀಗೆ ಯೇಸು ಗಲಿಲಾಯದ ಎಲ್ಲಾ ಕಡೆಗೆ ಪ್ರವಾಸಮಾಡಿ ಸಭಾಮಂದಿರಗಳಲ್ಲಿ ಉಪದೇಶಿಸಿದನು; ದೆವ್ವಗಳಿಂದ ಪೀಡಿತರಾಗಿದ್ದವರನ್ನು ಬಿಡಿಸಿದನು. PEPS
|
40. {ಕುಷ್ಠರೋಗಿಗೆ ಸ್ವಸ್ಥತೆ} (ಮತ್ತಾಯ 8:1-4; ಲೂಕ 5:12-16) PS ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಮೊಣಕಾಲೂರಿ ಆತನಿಗೆ, “ನೀನು ಇಷ್ಟಪಟ್ಟರೆ, ನನ್ನನ್ನು ಗುಣಪಡಿಸಬಲ್ಲೆ” ಎಂದು ಬೇಡಿಕೊಂಡನು. PEPS
|
41. ಯೇಸು ಅವನಿಗಾಗಿ ದುಃಖಪಟ್ಟು ಅವನನ್ನು ಮುಟ್ಟಿ, “ನಿನ್ನನ್ನು ಗುಣಪಡಿಸಲು ನನಗೆ ಇಷ್ಟವಿದೆ. ನಿನಗೆ ಗುಣವಾಗಲಿ” ಎಂದು ಹೇಳಿದನು.
|
43. (43-44) ಯೇಸು ಅವನಿಗೆ, “ನಾನು ನಿನ್ನನ್ನು ಗುಣಪಡಿಸಿದೆನೆಂದು ಯಾರಿಗೂ ಹೇಳದೆ, ನೇರವಾಗಿ ಯಾಜಕನ ಬಳಿಗೆ ಹೋಗಿ ಮೈ ತೋರಿಸು. ನೀನು ಗುಣಹೊಂದಿರುವುದರಿಂದ ಮೋಶೆಯ ಆಜ್ಞಾನುಸಾರವಾಗಿ ದೇವರಿಗೆ ಕಾಣಿಕೆಯನ್ನು ಅರ್ಪಿಸು. ನಿನಗೆ ಗುಣವಾಯಿತು ಎಂಬುದಕ್ಕೆ ಇದು ಜನರಿಗೆ ಸಾಕ್ಷಿಯಾಗಿರುವುದು” ಎಂದು ಎಚ್ಚರಿಕೆ ನೀಡಿ ಕಳುಹಿಸಿಬಿಟ್ಟನು.
|
45. ಅವನು ಅಲ್ಲಿಂದ ಹೋಗಿ ಯೇಸುವೇ ತನ್ನನ್ನು ಗುಣಪಡಿಸಿದನೆಂದು ಜನರೆಲ್ಲರಿಗೆ ತಿಳಿಸಿದನು. ಈ ಸುದ್ದಿಯು ಎಲ್ಲೆಡೆ ಹರಡಿದ್ದರಿಂದ ಆತನು ಬಹಿರಂಗವಾಗಿ ಊರೊಳಗೆ ಹೋಗಲು ಸಾಧ್ಯವಾಗದೆ ಏಕಾಂತವಾದ ಸ್ಥಳಗಳಲ್ಲಿ ವಾಸಿಸಬೇಕಾಯಿತು. ಆದರೂ ಎಲ್ಲಾ ಕಡೆಗಳಿಂದ ಜನರು ಯೇಸುವಿದ್ದಲ್ಲಿಗೆ ಬರುತ್ತಿದ್ದರು. PE
|