1. {ಕೈಬತ್ತಿದವನಿಗೆ ಸ್ವಸ್ಥತೆ} (ಮತ್ತಾಯ 12:9-14; ಲೂಕ 6:6-11) PS ಮತ್ತೊಂದು ದಿನದಲ್ಲಿ, ಯೇಸು ಸಭಾಮಂದಿರದೊಳಕ್ಕೆ ಹೋದನು. ಅಲ್ಲಿ ಕೈಬತ್ತಿದ್ದ ಒಬ್ಬ ಮನುಷ್ಯನಿದ್ದನು.
|
2. ಅಲ್ಲಿದ್ದ ಕೆಲವು ಯೆಹೂದ್ಯರು, ಯೇಸುವನ್ನು ದೂಷಿಸುವುದಕ್ಕಾಗಿ ಆತನಲ್ಲಿ ಏನಾದರೂ ತಪ್ಪನ್ನು ಕಂಡುಹಿಡಿಯಲು ಎದುರು ನೋಡುತ್ತಿದ್ದರು. ಸಬ್ಬತ್ದಿನದಂದು ಆ ಮನುಷ್ಯನನ್ನು ಯೇಸು ಗುಣಪಡಿಸಬಹುದೆಂದು ಅವರು ಆತನ ಸಮೀಪದಲ್ಲಿಯೇ ಇದ್ದರು.
|
4. ನಂತರ ಯೇಸು ಜನರಿಗೆ, “ಸಬ್ಬತ್ದಿನದಂದು ಯಾವ ಕಾರ್ಯಗಳನ್ನು ಮಾಡಬೇಕು? ಒಳ್ಳೆಯ ಕಾರ್ಯವನ್ನೇ? ಕೆಟ್ಟಕಾರ್ಯವನ್ನೇ? ಒಂದು ಜೀವವನ್ನು ರಕ್ಷಿಸಬೇಕೇ? ಅಥವಾ ನಾಶಪಡಿಸಬೇಕೇ?” ಎಂದು ಕೇಳಿದನು. ಆಗ ಅವರು ಏನೂ ಉತ್ತರ ಕೊಡಲಾರದೆ ಮೌನವಾಗಿದ್ದರು. PEPS
|
5. ಯೇಸು ಕೋಪಗೊಂಡು ಜನರ ಕಡೆಗೆ ನೋಡಿದನು. ಅವರ ಮೊಂಡುತನವನ್ನು ಕಂಡು ಆತನಿಗೆ ದುಃಖವಾಯಿತು. ಯೇಸು ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಿದನು. ಅವನು ತನ್ನ ಕೈಯನ್ನು ಯೇಸುವಿನತ್ತ ಚಾಚಿದನು. ಕೂಡಲೇ ಅವನ ಕೈ ವಾಸಿಯಾಯಿತು.
|
7. {ಯೇಸುವನ್ನು ಹಿಂಬಾಲಿಸಿದ ಜನಸಮೂಹ} PS ಯೇಸು ತನ್ನ ಶಿಷ್ಯರೊಂದಿಗೆ ಸರೋವರಕ್ಕೆ ಹೊರಟುಹೋದನು. ಗಲಿಲಾಯದ ಅನೇಕ ಜನರು ಆತನನ್ನು ಹಿಂಬಾಲಿಸಿದರು.
|
8. ಅನೇಕಾನೇಕ ಜನರು ಜುದೇಯದಿಂದ, ಜೆರುಸಲೇಮಿನಿಂದ, ಇದೂಮಾಯದಿಂದ, ಜೋರ್ಡನ್ ನದಿಯ ಆಚೆಗಿರುವ ಪ್ರದೇಶದಿಂದ ಮತ್ತು ಟೈರ್, ಸೀದೋನ್ಗಳ ಸುತ್ತಲಿನ ಪ್ರದೇಶಗಳಿಂದ ಬಂದರು. ಯೇಸುವು ಮಾಡುತ್ತಿದ್ದ ಕಾರ್ಯಗಳ ಬಗ್ಗೆ ಅವರು ಕೇಳಿ ಬಂದಿದ್ದರು. PEPS
|
9. ಯೇಸು ಈ ಜನಸಮೂಹವನ್ನು ನೋಡಿ ಅವರು ತನ್ನ ಮೈಮೇಲೆ ಬಿದ್ದು ನೂಕಬಹುದೆಂದು ತನಗಾಗಿ ಒಂದು ಚಿಕ್ಕ ದೋಣಿಯನ್ನು ತಂದು ಅದನ್ನು ಸಿದ್ದಪಡಿಸುವಂತೆ ತನ್ನ ಶಿಷ್ಯರಿಗೆ ಹೇಳಿದನು.
|
10. ಯೇಸು ಅನೇಕ ಜನರನ್ನು ಗುಣಪಡಿಸಿದನು. ಆದ್ದರಿಂದ ಕಾಯಿಲೆಯಾಗಿದ್ದ ಜನರೆಲ್ಲರೂ ಆತನನ್ನು ಮುಟ್ಟುವುದಕ್ಕಾಗಿ ಆತನ ಮೇಲೆ ಬೀಳುತ್ತಿದ್ದರು. ದೆವ್ವಗಳಿಂದ ಪೀಡಿತರಾಗಿದ್ದ ಕೆಲವು ಜನರು ಅಲ್ಲಿದ್ದರು.
|
11. ದೆವ್ವಗಳು ಯೇಸುವನ್ನು ನೋಡಿ, ಆತನ ಮುಂದೆ ಅಡ್ಡಬಿದ್ದು ನಮಸ್ಕರಿಸಿ, “ನೀನು ದೇವಕುಮಾರ” ಎಂದು ಜೋರಾಗಿ ಕೂಗುತ್ತಿದ್ದವು.
|
13. {ಹನ್ನೆರಡು ಮಂದಿ ಅಪೊಸ್ತಲರ ಆಯ್ಕೆ} (ಮತ್ತಾಯ 10:1-4; ಲೂಕ 6:12-16) PS ನಂತರ ಯೇಸು ಒಂದು ಬೆಟ್ಟದ ಮೇಲಕ್ಕೆ ಹೋದನು. ಯೇಸು ಕೆಲವು ಜನರಿಗೆ ತನ್ನೊಂದಿಗೆ ಬರಲು ಹೇಳಿದನು. ಯೇಸು ಅಪೇಕ್ಷಿಸಿದ ಜನರು ಇವರೇ. ಈ ಜನರು ಯೇಸುವಿನೊಂದಿಗೆ ಮೇಲಕ್ಕೆ ಹೋದರು.
|
14. ಆತನು ಅವರಲ್ಲಿ ಹನ್ನೆರಡು ಮಂದಿಯನ್ನು ತನ್ನ ಅಪೊಸ್ತಲರನ್ನಾಗಿ ಆರಿಸಿಕೊಂಡನು. ಈ ಹನ್ನೆರಡು ಮಂದಿ ತನ್ನೊಂದಿಗಿರಬೇಕೆಂಬುದು ಮತ್ತು ಉಪದೇಶ ಮಾಡುವುದಕ್ಕಾಗಿ ಅವರನ್ನು ಬೇರೆ ಸ್ಥಳಗಳಿಗೆ ಕಳುಹಿಸಬೇಕೆಂಬುದು
|
15. ಅಲ್ಲದೆ ದೆವ್ವಗಳಿಂದ ಪೀಡಿತರಾಗಿರುವ ಜನರನ್ನು ಅವುಗಳಿಂದ ಬಿಡಿಸುವುದಕ್ಕೆ ಅವರಿಗೆ ಅಧಿಕಾರ ಕೊಡಬೇಕೆಂಬುದು ಆತನ ಅಪೇಕ್ಷೆಯಾಗಿತ್ತು.
|
17. ಜಿಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನ (ಯೇಸು ಅವರಿಗೆ ಬೊವನೆರ್ಗೆಸ್ ಎಂಬ ಹೆಸರನ್ನಿತ್ತನು. ಈ ಹೆಸರಿಗೆ “ಸಿಡಿಲಿನ ಜನರು” ಎಂದರ್ಥ.)
|
20. {ಯೇಸುವಿಗೆ ದೆವ್ವಹಿಡಿದಿದೆ ಎಂಬ ಆರೋಪ} (ಮತ್ತಾಯ 12:22-32; ಲೂಕ 11:14-23; 12:10) PS ನಂತರ ಯೇಸು ಮನೆಗೆ ಹೋದನು. ಮತ್ತೆ ಅನೇಕ ಜನರು ಅಲ್ಲಿಗೆ ಸೇರಿಬಂದರು. ಆದ್ದರಿಂದ ಯೇಸು ಮತ್ತು ಅವನ ಶಿಷ್ಯರಿಗೆ ಊಟಮಾಡಲೂ ಸಾಧ್ಯವಾಗಲಿಲ್ಲ.
|
21. ಯೇಸುವಿನ ಕುಟುಂಬದವರಿಗೆ ಈ ವಿಷಯಗಳೆಲ್ಲ ತಿಳಿದವು. ಯೇಸುವಿಗೆ ಹುಚ್ಚು ಹಿಡಿದಿದೆಯೆಂದು ಕೆಲವರು ಹೇಳಿದ್ದರಿಂದ ಆತನ ಕುಟುಂಬದವರು ಆತನನ್ನು ಕರೆದೊಯ್ಯಲು ಅಲ್ಲಿಗೆ ಬಂದರು. PEPS
|
22. ಜೆರುಸಲೇಮಿನ ಧರ್ಮೋಪದೇಶಕರು, “ಇವನೊಳಗೆ ದೆವ್ವಗಳ ಒಡೆಯನಾದ ಬೆಲ್ಜೆಬೂಲನು ವಾಸಿಸುತ್ತಿದ್ದಾನೆ. ದೆವ್ವಗಳಿಂದ ಪೀಡಿತರಾಗಿರುವವರನ್ನು ಇವನು ಬಿಡಿಸುವುದು ದೆವ್ವಗಳ ಒಡೆಯನ ಸಹಾಯದಿಂದಲೇ” ಎಂದು ಹೇಳಿದರು. PEPS
|
23. ಆದ್ದರಿಂದ ಯೇಸು ಜನರನ್ನು ಒಟ್ಟಿಗೆ ಕರೆದು, ಅವರಿಗೆ ಸಾಮ್ಯಗಳ ಮೂಲಕ ಬೋಧಿಸಿ, “ಸೈತಾನನು ತನ್ನ ದೆವ್ವಗಳನ್ನು ಜನರಿಂದ ಬಲವಂತವಾಗಿ ಹೊರಡಿಸುವುದಿಲ್ಲ.
|
26. ಸೈತಾನನು ತನ್ನ ವಿರುದ್ಧವಾಗಿಯೂ ತನ್ನ ಜನರ ವಿರುದ್ಧವಾಗಿಯೂ ತಾನೇ ಹೋರಾಟ ಮಾಡಿದರೆ ಅವನು ಅಂತ್ಯಗೊಳ್ಳುತ್ತಾನೆ. PEPS
|
27. “ಒಬ್ಬ ವ್ಯಕ್ತಿಯು ಬಲಾಢ್ಯನ ಮನೆಗೆ ಪ್ರವೇಶಿಸಿ ಅವನ ವಸ್ತುಗಳನ್ನು ಕದಿಯಲು ಇಚ್ಛಿಸಿದರೆ, ಮೊದಲು ಅವನು ಬಲಾಢ್ಯನನ್ನು ಕಟ್ಟಿಹಾಕಬೇಕು. ಆಗ ಅವನು ಬಲಾಢ್ಯನ ಮನೆಯಿಂದ ವಸ್ತುಗಳನ್ನು ಕದಿಯಲು ಸಾಧ್ಯವಾಗುವುದು. PEPS
|
28. “ನಾನು ನಿಮಗೆ ಸತ್ಯವನ್ನು ಹೇಳುತ್ತಿದ್ದೇನೆ, ಜನರು ಮಾಡುವ ಎಲ್ಲಾ ಪಾಪಗಳಿಗೂ ದೇವದೂಷಣೆಗಳಿಗೂ ಕ್ಷಮೆ ದೊರೆಯಲು ಸಾಧ್ಯ.
|
31. {ಯೇಸುವಿನ ಶಿಷ್ಯರೇ ಆತನ ನಿಜ ಕುಟುಂಬದವರು} (ಮತ್ತಾಯ 12:46-50; ಲೂಕ 8:19-21) PS ನಂತರ ಯೇಸುವಿನ ತಾಯಿ ಮತ್ತು ಆತನ ಸಹೋದರರು ಅಲ್ಲಿಗೆ ಬಂದರು. ಅವರು ಹೊರಗೆ ನಿಂತುಕೊಂಡು ಯೇಸುವಿಗೆ ಬರಬೇಕೆಂದು ಒಬ್ಬನ ಮೂಲಕ ಹೇಳಿ ಕಳುಹಿಸಿದರು.
|
32. ಅನೇಕ ಜನರು ಯೇಸುವಿನ ಸುತ್ತಲೂ ಕುಳಿತಿದ್ದರು. ಅವನು ಯೇಸುವಿಗೆ, “ನಿನ್ನ ತಾಯಿ ಮತ್ತು ಸಹೋದರರು ನಿನಗಾಗಿ ಹೊರಗಡೆ ಕಾಯುತ್ತಿದ್ದಾರೆ” ಎಂದು ಹೇಳಿದನು. PEPS
|