1. ಫರಿಸಾಯರು ಮತ್ತು ಸದ್ದುಕಾಯರು ಯೇಸುವಿನ ಬಳಿಗೆ ಬಂದರು. ಅವರು ಯೇಸುವನ್ನು ಪರೀಕ್ಷಿಸಲು, “ನೀನು ದೇವರಿಂದ ಬಂದವನೆಂಬುದನ್ನು ನಿರೂಪಿಸಲು ಒಂದು ಅದ್ಭುತಕಾರ್ಯವನ್ನು ಮಾಡಿ ತೋರಿಸು” ಎಂದು ಕೇಳಿದರು.
|
2. ಯೇಸು, “ಸೂರ್ಯನು ಮುಳುಗುವಾಗ ಹವಾಮಾನ ಹೇಗಿರುತ್ತದೆ ಎಂಬುದು ನಿಮಗೆ ತಿಳಿದಿದೆ. ಆಕಾಶವು ಕೆಂಪಾಗಿದ್ದರೆ, ನಮಗೆ ಒಳ್ಳೆಯ ಹವಾಮಾನವಿರುತ್ತದೆ ಎಂದು ಹೇಳುತ್ತೀರಿ.
|
3. ಬೆಳಿಗ್ಗೆ ಸೂರ್ಯೋದಯವನ್ನು ಗಮನಿಸುತ್ತೀರಿ. ಆಕಾಶವು ಕಪ್ಪಾಗಿದ್ದರೆ ಅಥವಾ ಕೆಂಪಾಗಿದ್ದರೆ, ಈ ದಿನ ಮಳೆ ಬರುತ್ತದೆ ಎಂದು ಹೇಳುತ್ತೀರಿ. ಇವುಗಳು ಹವಾಮಾನದ ಗುರುತುಗಳಾಗಿವೆ. ನೀವು ಈ ಗುರುತುಗಳನ್ನು ಕಂಡು ಅವುಗಳ ಅರ್ಥವನ್ನು ತಿಳಿದುಕೊಳ್ಳುತ್ತೀರಿ. ಅದೇ ರೀತಿಯಲ್ಲಿ ಈಗ ನೀವು ನೋಡುತ್ತಿರುವ ಇಂದಿನ ಸಂಗತಿಗಳು ಸಹ ಗುರುತುಗಳಾಗಿವೆ. ಆದರೆ ನಿಮಗೆ ಈ ಗುರುತುಗಳ ಅರ್ಥವು ಗೊತ್ತಿಲ್ಲ.
|
4. ಕೆಟ್ಟವರಾದ ಮತ್ತು ಪಾಪಿಗಳಾದ ಜನರು ಸೂಚನೆಗಾಗಿ ಒಂದು ಅದ್ಭುತಕಾರ್ಯವನ್ನು ಅಪೇಕ್ಷಿಸುತ್ತಾರೆ. ಅವರಿಗೆ ಯೋನನಲ್ಲಾದ ಸೂಚಕಕಾರ್ಯವೊಂದೇ ಹೊರತು ಬೇರೆ ಯಾವ ಸೂಚಕಕಾರ್ಯವೂ ದೊರೆಯುವುದಿಲ್ಲ” ಎಂದು ಉತ್ತರಕೊಟ್ಟನು. ಬಳಿಕ ಯೇಸು ಆ ಸ್ಥಳವನ್ನು ಬಿಟ್ಟು ಹೊರಟು ಹೋದನು.
|
7. ಶಿಷ್ಯರು ಇದರ ಅರ್ಥವನ್ನು ಚರ್ಚಿಸಿದರು. ಅವರು, “ನಾವು ರೊಟ್ಟಿ ತರಲು ಮರೆತುಬಿಟ್ಟದ್ದಕ್ಕಾಗಿ ಯೇಸು ಹೀಗೆ ಹೇಳಿರಬಹುದೆ?” ಎಂದು ಮಾತಾಡಿಕೊಂಡರು.
|
8. ಶಿಷ್ಯರು ಈ ವಿಷಯವನ್ನು ಚರ್ಚಿಸುತ್ತಿರುವುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಯೇಸು ಅವರಿಗೆ, “ರೊಟ್ಟಿ ಇಲ್ಲವಲ್ಲಾ ಎಂಬ ವಿಷಯದಲ್ಲಿ ನೀವು ಮಾತಾಡಿಕೊಳ್ಳುತ್ತಿರುವುದೇಕೆ? ಅಲ್ಪ ವಿಶ್ವಾಸಿಗಳೇ,
|
9. ನೀವಿನ್ನೂ ಅರ್ಥಮಾಡಿಕೊಳ್ಳಲಿಲ್ಲವೇ? ಐದು ರೊಟ್ಟಿಗಳಿಂದ ಐದು ಸಾವಿರ ಜನರಿಗೆ ಊಟ ಮಾಡಿಸಿದ್ದು ನಿಮಗೆ ನೆನಪಿಲ್ಲವೇ? ಜನರು ಊಟ ಮಾಡಿದ ಮೇಲೆ ನೀವು ಅನೇಕ ಬುಟ್ಟಿಗಳಲ್ಲಿ ರೊಟ್ಟಿಗಳನ್ನು ತುಂಬಿಸಿದ್ದು ನಿಮಗೆ ನೆನಪಿಲ್ಲವೇ?
|
10. ಏಳು ರೊಟ್ಟಿಗಳ ತುಂಡುಗಳನ್ನು ನಾಲ್ಕು ಸಾವಿರ ಜನರಿಗೆ ಊಟ ಮಾಡಿಸಿದ್ದು ನಿಮಗೆ ನೆನಪಿಲ್ಲವೇ? ಜನರು ತಿಂದು ಮುಗಿಸಿದ ಮೇಲೆ ನೀವು ಅನೇಕ ಬುಟ್ಟಿಗಳಲ್ಲಿ ರೊಟ್ಟಿಗಳನ್ನು ತುಂಬಿಸಿದ್ದು ನಿಮಗೆ ನೆನಪಿಲ್ಲವೇ?
|
11. ಆದ್ದರಿಂದ ನಾನು ನಿಮಗೆ ಹೇಳಿದ್ದು ರೊಟ್ಟಿಯ ಕುರಿತಲ್ಲ. ನೀವು ಇದನ್ನು ಅರ್ಥ ಮಾಡಿಕೊಳ್ಳುವುದಿಲ್ಲವೇಕೆ? ಫರಿಸಾಯರು ಮತ್ತು ಸದ್ದುಕಾಯರ ಹುಳಿಗೆ (ಕೆಟ್ಟ ಪ್ರಭಾವಕ್ಕೆ) ಒಳಗಾಗದಂತೆ ನೀವು ಎಚ್ಚರಿಕೆಯಿಂದಿರಬೇಕೆಂದು ನಾನು ನಿಮ್ಮನ್ನು ಎಚ್ಚರಿಸಿದೆನು” ಅಂದನು.
|
12. ಆಗ ಶಿಷ್ಯರು ಯೇಸು ಹೇಳಿದ್ದನ್ನು ಅರ್ಥಮಾಡಿಕೊಂಡರು. ಆತನು ಅವರಿಗೆ ರೊಟ್ಟಿಯಲ್ಲಿ ಬೆರೆಸಿದ್ದ ಹುಳಿಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಲಿಲ್ಲ. ಫರಿಸಾಯರು ಮತ್ತು ಸದ್ದುಕಾಯರ ಬೋಧನೆಯ ಪ್ರಭಾವಕ್ಕೆ ಒಳಗಾಗದಂತೆ ಎಚ್ಚರಿಕೆಯಾಗಿರಬೇಕೆಂದು ಹೇಳಿದ್ದನು.
|
13. ಯೇಸು ಫಿಲಿಪ್ಪನ ಸೆಜರೇಯ ಎಂಬ ಪ್ರಾಂತ್ಯಕ್ಕೆ ಹೋದನು. ಯೇಸು ತನ್ನ ಶಿಷ್ಯರಿಗೆ, “ಮನುಷ್ಯಕುಮಾರನಾದ ನನ್ನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದನು.
|
14. ಶಿಷ್ಯರು, “ಕೆಲವರು ‘ಸ್ನಾನಿಕ ಯೋಹಾನ’ನೆಂದು ಹೇಳುತ್ತಾರೆ. ಇನ್ನು ಕೆಲವರು ‘ಎಲೀಯ’ನೆಂದು ಹೇಳುತ್ತಾರೆ. ಮತ್ತೆ ಕೆಲವರು ‘ಯೆರೆಮೀಯ’ನೆಂದು ಇಲ್ಲವೆ ‘ಪ್ರವಾದಿಗಳಲ್ಲಿ ಒಬ್ಬನೆಂದು ಹೇಳುತ್ತಾರೆ”‘ ಎಂದು ಉತ್ತರಕೊಟ್ಟರು.
|
17. ಯೇಸು, “ಯೋನನ ಮಗನಾದ ಸೀಮೋನನೇ ನೀನು ಧನ್ಯನು. ಅದನ್ನು ನಿನಗೆ ತಿಳಿಸಿಕೊಟ್ಟವನು ಯಾವ ಮನುಷ್ಯನೂ ಅಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ನಿನಗೆ ತಿಳಿಸಿಕೊಟ್ಟನು.
|
18. ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ನೀನೇ ಪೇತ್ರ. ನಾನು ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುತ್ತೇನೆ. ಪಾತಾಳಲೋಕದ ಬಲವು ನನ್ನ ಸಭೆಯನ್ನು ಸೋಲಿಸಲಾರದು.
|
19. ಪರಲೋಕರಾಜ್ಯದ ಬೀಗದ ಕೈಗಳನ್ನು ನಾನು ನಿನಗೆ ಕೊಡುತ್ತೇನೆ. ನೀನು ಭೂಲೋಕದಲ್ಲಿ ನೀಡುವ ನ್ಯಾಯತೀರ್ಪು ದೇವರ ನ್ಯಾಯತೀರ್ಪಾಗಿರುತ್ತದೆ. ನೀನು ಭೂಲೋಕದಲ್ಲಿ ನೀಡುವ ಕ್ಷಮೆಯು ದೇವರ ಕ್ಷಮೆಯಾಗಿರುತ್ತದೆ” ಎಂದು ಉತ್ತರಿಸಿದನು.
|
21. ಆ ಸಮಯದಲ್ಲಿ ಯೇಸು ತಾನು ಜೆರುಸಲೇಮಿಗೆ ಹೋಗಬೇಕೆಂದು ಮತ್ತು ಅಲ್ಲಿ ಯೆಹೂದ್ಯರ ಹಿರಿಯ ನಾಯಕರಿಂದಲೂ ಮಹಾಯಾಜಕರಿಂದಲೂ ಮತ್ತು ಧರ್ಮೋಪದೇಶಕರಿಂದಲೂ ತಾನು ಅನೇಕ ಕಷ್ಟಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಸತ್ತವರೊಳಗಿಂದ ಜೀವಂತವಾಗಿ ಎದ್ದು ಬರಬೇಕಾಗಿದೆ ಎಂದು ತನ್ನ ಶಿಷ್ಯರಿಗೆ ವಿವರಿಸಿ ಹೇಳಿದನು.
|
22. ಆಗ ಪೇತ್ರನು ಯೇಸುವನ್ನು ಸ್ವಲ್ಪ ದೂರದಲ್ಲಿ ಕರೆದೊಯ್ದು, “ದೇವರು ನಿನ್ನನ್ನು ಕಾಪಾಡಲಿ ನಿನಗೆಂದಿಗೂ ಹಾಗೆ ಸಂಭವಿಸದಿರಲಿ!” ಎಂದು ಪ್ರತಿಭಟಿಸಿದನು.
|
23. ಆಗ ಯೇಸು ಪೇತ್ರನಿಗೆ, “ಸೈತಾನನೇ, ಇಲ್ಲಿಂದ ತೊಲಗು! ನೀನು ನನಗೆ ಅಡ್ಡಿಯಾಗಿರುವೆ! ನಿನ್ನ ಯೋಚನೆ ಮನುಷ್ಯರ ಯೋಚನೆಯೇ ಹೊರತು ದೇವರದಲ್ಲ” ಎಂದು ಹೇಳಿದನು.
|
24. ಬಳಿಕ ಯೇಸು ತನ್ನ ಶಿಷ್ಯರಿಗೆ, “ನನ್ನನ್ನು ಹಿಂಬಾಲಿಸಲು ಅಪೇಕ್ಷಿಸುವವನು ತನಗೆ ಇಷ್ಟವಾದದ್ದನ್ನು ತ್ಯಜಿಸಬೇಕು. ಅವನು ತನಗೆ ಕೊಟ್ಟಿರುವ ಶಿಲುಬೆಯನ್ನು (ಸಂಕಟ) ಸ್ವೀಕರಿಸಿಕೊಂಡು ನನ್ನನ್ನು ಹಿಂಬಾಲಿಸಬೇಕು.
|
25. ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ನನಗಾಗಿ ತನ್ನ ಪ್ರಾಣವನ್ನು ಕೊಡುವ ಪ್ರತಿಯೊಬ್ಬನೂ ಅದನ್ನು ಉಳಿಸಿಕೊಳ್ಳುವನು.
|
26. ಒಬ್ಬನು ಪ್ರಪಂಚವನ್ನೆಲ್ಲಾ ಗಳಿಸಿಕೊಂಡು ತನ್ನ ಆತ್ಮವನ್ನೇ ಕಳೆದುಕೊಂಡರೆ ಅದರಿಂದ ಅವನಿಗೇನು ಪ್ರಯೋಜನ? ಮನುಷ್ಯನು ತನ್ನ ಆತ್ಮವನ್ನು ಕೊಂಡುಕೊಳ್ಳಲು ಏನನ್ನು ತಾನೇ ಕೊಡಬಲ್ಲನು?
|
27. ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ಮತ್ತು ತನ್ನ ದೂತರೊಡನೆ ಮರಳಿ ಬಂದು ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು.
|
28. ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ಈಗ ಇಲ್ಲಿ ನಿಂತಿರುವ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದೊಡನೆ ಬರುವುದನ್ನು ನೋಡುವ ತನಕ ಸಾಯುವುದಿಲ್ಲ” ಎಂದು ಹೇಳಿದನು.
|