1. {ಹತ್ತು ಮಂದಿ ಕನ್ನಿಕೆಯರನ್ನು ಕುರಿತ ಸಾಮ್ಯ} PS “ಆ ದಿನಗಳಲ್ಲಿ ಪರಲೋಕರಾಜ್ಯವು ಹೇಗಿರುತ್ತದೆ ಎನ್ನುವುದಕ್ಕೆ ಈ ಸಾಮ್ಯವು ಉದಾಹರಣೆಯಾಗಿದೆ. ಹತ್ತು ಮಂದಿ ಕನ್ನಿಕೆಯರು ತಮ್ಮ ದೀಪಗಳನ್ನು ತೆಗೆದುಕೊಂಡು ಮದುಮಗನನ್ನು ಎದುರುಗೊಳ್ಳಲು ಹೊರಟರು.
|
6. “ಮಧ್ಯರಾತ್ರಿಯಲ್ಲಿ, ‘ಮದುಮಗನು ಬರುತ್ತಿದ್ದಾನೆ! ಬನ್ನಿರಿ, ಆತನನ್ನು ಸಂಧಿಸಿರಿ!’ ಎಂದು ಯಾರೋ ಒಬ್ಬನು ಪ್ರಕಟಿಸಿದನು. PEPS
|
8. ಬುದ್ಧಿಹೀನ ಕನ್ನಿಕೆಯರು ಬುದ್ಧಿವಂತ ಕನ್ನಿಕೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿ. ನಮ್ಮ ದೀಪಾರತಿಗಳಲ್ಲಿದ್ದ ಎಣ್ಣೆಯೆಲ್ಲಾ ಮುಗಿಯಿತು’ ಎಂದರು. PEPS
|
9. “ಬುದ್ಧಿವಂತೆಯರು, ‘ಇಲ್ಲ! ನಮ್ಮಲ್ಲಿರುವ ಎಣ್ಣೆ ನಮಗೇ ಸಾಕಾಗದಿರಬಹುದು. ಅಂಗಡಿಗೆ ಹೋಗಿ ಕೊಂಡುಕೊಳ್ಳಿರಿ’ ಎಂದು ಉತ್ತರಕೊಟ್ಟರು. PEPS
|
10. “ಆದ್ದರಿಂದ ಐದು ಮಂದಿ ಬುದ್ಧಿಹೀನ ಕನ್ನಿಕೆಯರು ಎಣ್ಣೆ ಕೊಂಡುಕೊಳ್ಳುವುದಕ್ಕೆ ಹೋದರು. ಅವರು ಹೋಗುತ್ತಿರುವಾಗ, ಮದುಮಗನು ಬಂದನು. ಸಿದ್ಧವಾಗಿದ್ದ ಕನ್ನಿಕೆಯರು ಮದುಮಗನ ಜೊತೆಯಲ್ಲಿ ಔತಣಕ್ಕೆ ಹೋದರು. ನಂತರ ಬಾಗಿಲು ಮುಚ್ಚಲಾಯಿತು. PEPS
|
12. “ಆದರೆ ಮದುಮಗನು, ‘ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ನೀವು ಯಾರೋ ನನಗೆ ಗೊತ್ತಿಲ್ಲ’ ಎಂದು ಉತ್ತರಕೊಟ್ಟನು. PEPS
|
14. {ಮೂವರು ಸೇವಕರನ್ನು ಕುರಿತ ಸಾಮ್ಯ} (ಲೂಕ 19:11-27) PS “ಪರಲೋಕರಾಜ್ಯವು, ತನ್ನ ಮನೆಯನ್ನು ಬಿಟ್ಟು ಬೇರೆ ಸ್ಥಳವನ್ನು ಸಂದರ್ಶಿಸುವುದಕ್ಕೆ ಪ್ರಯಾಣ ಮಾಡಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ. ಆ ಮನುಷ್ಯನು ತಾನು ಹೊರಡುವುದಕ್ಕೆ ಮುಂಚೆ ತನ್ನ ಸೇವಕರೊಂದಿಗೆ ಮಾತನಾಡಿ, ತನ್ನ ಆಸ್ತಿಯನ್ನು ನೋಡಿಕೊಳ್ಳಲು ಅವರಿಗೆ ಹೇಳಿದನು.
|
15. ಅವನು ಆ ಸೇವಕರ ಸಾಮರ್ಥ್ಯಕ್ಕನುಸಾರವಾಗಿ ಎಷ್ಟೆಷ್ಟು ಜವಾಬ್ದಾರಿಕೆಯನ್ನು ಕೊಡಬೇಕೆಂಬುದನ್ನು ನಿರ್ಧರಿಸಿದನು. ಅವನು ಒಬ್ಬ ಸೇವಕನಿಗೆ ಐದು ತಲಾಂತು *ತಲಾಂತು ಒಂದು ತಲಾಂತು ಅಂದರೆ 30,000 ದಿನಾರಿ. ಒಂದು ದಿನಾರಿ ಅಂದರೆ ಒಬ್ಬನ ಒಂದು ದಿನದ ಸಂಬಳ. ಮತ್ತೊಬ್ಬನಿಗೆ ಎರಡು ತಲಾಂತು ಕೊಟ್ಟನು. ಮೂರನೇ ಸೇವಕನಿಗೆ ಒಂದು ತಲಾಂತು ಕೊಟ್ಟನು. ಬಳಿಕ ಅವನು ಬೇರೆ ಸ್ಥಳಕ್ಕೆ ಹೊರಟುಹೋದನು.
|
16. ಐದು ತಲಾಂತು ತೆಗೆದುಕೊಂಡ ಸೇವಕನು ತಕ್ಷಣವೇ ಹೋಗಿ ಆ ಹಣವನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಸಂಪಾದಿಸಿದನು.
|
19. “ಬಹುಕಾಲದ ನಂತರ ಯಜಮಾನನು ಮನೆಗೆ ಬಂದನು. ತಾನು ಕೊಟ್ಟಿದ್ದ ಹಣದ ಕುರಿತಾಗಿ ಅವನು ಸೇವಕರನ್ನು ವಿಚಾರಿಸಿ ಲೆಕ್ಕ ಕೇಳಿದನು.
|
20. ಐದು ತಲಾಂತು ಪಡೆದ ಸೇವಕನು ಇನ್ನೂ ಐದು ತಲಾಂತನ್ನು ತನ್ನ ಯಜಮಾನನ ಬಳಿಗೆ ತಂದು, ‘ಧಣಿಯೇ, ನೀನು ನನ್ನಲ್ಲಿ ಭರವಸೆಯಿಟ್ಟು ಐದು ತಲಾಂತನ್ನು ಕೊಟ್ಟೆ. ನಾನು ಅದನ್ನು ವಿನಿಯೋಗಿಸಿ ಇನ್ನೂ ಐದು ತಲಾಂತು ಸಂಪಾದಿಸಿದ್ದೇನೆ’ ಎಂದನು. PEPS
|
21. “ಯಜಮಾನನು, ‘ನೀನು ನಂಬಿಗಸ್ತನಾದ ಒಳ್ಳೆಯ ಸೇವಕ. ಆ ಸ್ವಲ್ಪ ಹಣವನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿದೆ. ಆದ್ದರಿಂದ ನಾನು ನಿನಗೆ ಇದಕ್ಕಿಂತಲೂ ದೊಡ್ಡ ಕೆಲಸವನ್ನು ಕೊಡುತ್ತೇನೆ. ಬಂದು ನನ್ನ ಸೌಭಾಗ್ಯದಲ್ಲಿ ಸೇರು’ ಎಂದು ಉತ್ತರಕೊಟ್ಟನು. PEPS
|
22. “ಆಮೇಲೆ ಎರಡು ತಲಾಂತು ಹೊಂದಿದ್ದ ಸೇವಕನು ಯಜಮಾನನ ಬಳಿಗೆ ಬಂದು, ‘ಧಣಿಯೇ, ನೀನು ನನಗೆ ಎರಡು ತಲಾಂತು ಕೊಟ್ಟೆ. ನಾನು ಆ ಹಣವನ್ನು ಉಪಯೋಗಿಸಿ ಇನ್ನೂ ಎರಡು ತಲಾಂತು ಸಂಪಾದಿಸಿರುವೆ’ ಅಂದನು. PEPS
|
23. “ಯಜಮಾನನು, ‘ನೀನು ನಂಬಿಗಸ್ತನಾದ ಒಳ್ಳೆಯ ಸೇವಕ. ನೀನು ಆ ಸ್ವಲ್ಪ ಹಣವನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿದೆ. ಆದ್ದರಿಂದ ನಾನು ನಿನಗೆ ಇದಕ್ಕಿಂತಲೂ ದೊಡ್ಡ ಕೆಲಸವನ್ನು ಕೊಡುತ್ತೇನೆ. ಬಂದು, ನನ್ನ ಸೌಭಾಗ್ಯದಲ್ಲಿ ಸೇರು’ ಎಂದು ಉತ್ತರಕೊಟ್ಟನು. PEPS
|
24. “ಬಳಿಕ ಒಂದು ತಲಾಂತು ಹೊಂದಿದ್ದ ಸೇವಕನು ಯಜಮಾನನ ಬಳಿಗೆ ಬಂದು, ‘ಧಣಿಯೇ, ನೀನು ಬಹಳ ಕಠಿಣ ಮನುಷ್ಯನು ಎಂದು ನಾನು ಬಲ್ಲೆ. ನೀನು ನೆಡದ ಕಡೆಯಲ್ಲಿ ರಾಶಿ ಮಾಡಿಕೊಳ್ಳುವವನು ಮತ್ತು ಬೀಜ ಬಿತ್ತದ ಕಡೆಯಲ್ಲಿ ಕೊಯ್ಯುವವನು.
|
25. ಆದ್ದರಿಂದ ನಾನು ಹೆದರಿಕೊಂಡು ನಿನ್ನ ಹಣವನ್ನು ಭೂಮಿಯಲ್ಲಿ ಅಡಗಿಸಿಟ್ಟೆನು. ನೀನು ನನಗೆ ಕೊಟ್ಟ ಹಣ ಇಲ್ಲಿದೆ, ತೆಗೆದುಕೊ’ ಅಂದನು. PEPS
|
26. “ಅದಕ್ಕೆ ಯಜಮಾನನು, ‘ನೀನು ಸೋಮಾರಿಯಾದ ಕೆಟ್ಟ ಸೇವಕ! ನಾನು ನೆಡದ ಕಡೆಯಲ್ಲಿ ರಾಶಿ ಮಾಡಿಕೊಳ್ಳುವವನೆಂದು ಮತ್ತು ಬೀಜ ಬಿತ್ತದ ಕಡೆಯಲ್ಲಿ ಕೊಯ್ಯುವವನೆಂದು ನಿನಗೆ ಗೊತ್ತಿತ್ತೇ?
|
27. ಹಾಗಿದ್ದರೆ ನೀನು ನನ್ನ ಹಣವನ್ನು ಬಡ್ಡಿಗೆ ಕೊಡಬೇಕಿತ್ತು. ಆಗ ನಾನು ಅಸಲಿನೊಡನೆ ಬಡ್ಡಿಯನ್ನೂ ಪಡೆದುಕೊಳ್ಳುತ್ತಿದ್ದೆನು’ ಎಂದು ಉತ್ತರಕೊಟ್ಟನು. PEPS
|
28. “ಬಳಿಕ ಯಜಮಾನನು ತನ್ನ ಬೇರೆ ಸೇವಕರಿಗೆ, ‘ಅವನ ಒಂದು ತಲಾಂತನ್ನು ತೆಗೆದುಕೊಂಡು ಐದು ತಲಾಂತು ಹೊಂದಿರುವ ಸೇವಕನಿಗೆ ಕೊಡಿರಿ.
|
29. ತನ್ನಲ್ಲಿರುವುದನ್ನು ವಿನಿಯೋಗಿಸುವ ಪ್ರತಿಯೊಬ್ಬನಿಗೂ ಹೆಚ್ಚಾಗಿ ಕೊಡಲ್ಪಡುವುದು, ಆದರೆ ತನ್ನಲ್ಲಿರುವುದನ್ನು ವಿನಿಯೋಗಿಸದಿರುವ ವ್ಯಕ್ತಿಯಿಂದ ಇದ್ದದ್ದನ್ನೂ ಕಸಿದುಕೊಳ್ಳಲಾಗುವುದು’ ಎಂದು ಹೇಳಿದನು.
|
30. ಬಳಿಕ ಆ ಯಜಮಾನನು, ‘ಕೆಲಸಕ್ಕೆ ಬಾರದ ಆ ಸೇವಕನನ್ನು, ಜನರು ಗೋಳಾಡುತ್ತಾ ಬಾಧೆಯಿಂದ ತಮ್ಮ ಹಲ್ಲುಗಳನ್ನು ಕಡಿಯುತ್ತಿರುವ ಕಗ್ಗತ್ತಲೆಯ ಸ್ಥಳಕ್ಕೆ ದಬ್ಬಿರಿ’ ಎಂದು ಆಜ್ಞಾಪಿಸಿದನು. PS
|
31. {ಸರ್ವರಿಗೂ ಮನುಷ್ಯಕುಮಾರನು ನೀಡುವ ತೀರ್ಪು} PS “ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಮತ್ತೆ ಬರುವಾಗ ರಾಜನಾಗಿ ಮಹಾಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಾನೆ.
|
32. ಭೂಲೋಕದ ಜನರೆಲ್ಲರೂ ಆತನ ಮುಂದೆ ಒಟ್ಟುಗೂಡುತ್ತಾರೆ. ಕುರುಬನು ಕುರಿಗಳನ್ನು ಆಡುಗಳಿಂದ ಪ್ರತ್ಯೇಕಿಸಿದಂತೆ ಆತನು ಅವರನ್ನು ಬೇರ್ಪಡಿಸುವನು;
|
34. “ಆಗ ರಾಜನು ತನ್ನ ಬಲಗಡೆಯಲ್ಲಿರುವ ಜನರಿಗೆ, ‘ಬನ್ನಿರಿ, ನನ್ನ ತಂದೆ ನಿಮಗೆ ಮಹಾ ಆಶೀರ್ವಾದಗಳನ್ನು ಕೊಟ್ಟಿದ್ದಾನೆ. ಬನ್ನಿರಿ, ದೇವರು ನಿಮಗೆ ವಾಗ್ದಾನ ಮಾಡಿದ ರಾಜ್ಯವನ್ನು ಪಡೆದುಕೊಳ್ಳಿರಿ. ಆ ರಾಜ್ಯವು ಲೋಕ ಉಂಟಾದಂದಿನಿಂದ ನಿಮಗಾಗಿ ಸಿದ್ಧಮಾಡಲ್ಪಟ್ಟಿದೆ.
|
35. ನೀವು ಈ ರಾಜ್ಯವನ್ನು ಪಡೆದುಕೊಳ್ಳಿರಿ. ಏಕೆಂದರೆ ನಾನು ಹಸಿದಿದ್ದೆನು. ನೀವು ನನಗೆ ಊಟ ಕೊಟ್ಟಿರಿ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಟ್ಟಿರಿ. ನಾನು ಒಬ್ಬಂಟಿಗನಾಗಿ ಮನೆಯಿಂದ ದೂರದಲ್ಲಿ ಇದ್ದಾಗ, ನೀವು ನನ್ನನ್ನು ನಿಮ್ಮ ಮನೆಯೊಳಗೆ ಸೇರಿಸಿಕೊಂಡಿರಿ.
|
36. ನಾನು ಬಟ್ಟೆಯಿಲ್ಲದವನಾಗಿದ್ದೆನು. ನೀವು ನನಗೆ ಉಡುವುದಕ್ಕೆ ಕೊಟ್ಟಿರಿ. ನಾನು ಕಾಯಿಲೆಯಲ್ಲಿ ಬಿದ್ದಿದ್ದೆನು, ನೀವು ನನಗೆ ಆರೈಕೆ ಮಾಡಿದಿರಿ. ನಾನು ಸೆರೆಯಲ್ಲಿದ್ದೆನು, ನೀವು ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುತ್ತಾನೆ. PEPS
|
37. “ಆಗ ಒಳ್ಳೆಯ ಜನರು, ‘ಪ್ರಭುವೇ, ನೀನು ಹಸಿದಿದ್ದನ್ನು ನೋಡಿ ಯಾವಾಗ ನಿನಗೆ ಆಹಾರ ಕೊಟ್ಟೆವು? ನೀನು ಬಾಯಾರಿದ್ದನ್ನು ನೋಡಿ ಯಾವಾಗ ಕುಡಿಯುವುದಕ್ಕೆ ಕೊಟ್ಟೆವು?
|
38. ನೀನು ಒಬ್ಬಂಟಿಗನಾಗಿ ಮನೆಯಿಂದ ದೂರವಾಗಿ ಇದ್ದದ್ದನ್ನು ನೋಡಿ ಯಾವಾಗ ನಿನ್ನನ್ನು ನಮ್ಮ ಮನೆಗಳೊಳಗೆ ಸೇರಿಸಿಕೊಂಡೆವು? ನಿನಗೆ ಬಟ್ಟೆಯಿಲ್ಲದಿರುವುದನ್ನು ನೋಡಿ ಯಾವಾಗ ಉಡುವುದಕ್ಕೆ ಕೊಟ್ಟೆವು?
|
39. ನೀನು ಕಾಯಿಲೆ ಬಿದ್ದಿದ್ದನ್ನು ಅಥವಾ ಸೆರೆಯಲ್ಲಿ ಇದ್ದದ್ದನ್ನು ನೋಡಿ ಯಾವಾಗ ನಿನ್ನನ್ನು ಆರೈಕೆ ಮಾಡಿದೆವು?’ ಎಂದು ಹೇಳುವರು. PEPS
|
40. “ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗಾಗಿ ಏನೇನು ಮಾಡುತ್ತೀರೋ ಅದೆಲ್ಲವನ್ನು ನನಗೂ ಮಾಡಿದಂತಾಯಿತು’ ಎಂದು ಉತ್ತರಕೊಡುವನು. PEPS
|
41. “ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.
|
43. ನಾನು ಪರದೇಶಿಯಾಗಿದ್ದೆನು, ನೀವು ನನ್ನನ್ನು ನಿಮ್ಮ ಮನೆಯೊಳಕ್ಕೆ ಸೇರಿಸಿಕೊಳ್ಳಲಿಲ್ಲ. ನಾನು ಬಟ್ಟೆಯಿಲ್ಲದವನಾಗಿದ್ದೆನು. ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ. ನಾನು ಕಾಯಿಲೆಯಲ್ಲಿ ಬಿದ್ದಿದ್ದೆನು ಮತ್ತು ಸೆರೆಯಲ್ಲಿದ್ದೆನು, ನೀವು ನನ್ನನ್ನು ನೋಡಿಕೊಳ್ಳಲಿಲ್ಲ’ ಎಂದು ಹೇಳುವನು. PEPS
|
44. “ಅವರು, ‘ಪ್ರಭುವೇ, ನೀನು ಯಾವಾಗ ಹಸಿದಿದ್ದೆ ಮತ್ತು ಬಾಯಾರಿದ್ದೆ? ನೀನು ಯಾವಾಗ ಆಶ್ರಯವಿಲ್ಲದವನಾಗಿದ್ದೆ? ನಿನಗೆ ಯಾವಾಗ ಬಟ್ಟೆಯಿರಲಿಲ್ಲ? ನೀನು ಯಾವಾಗ ಕಾಯಿಲೆ ಬಿದ್ದಿದ್ದೆ ಮತ್ತು ಸೆರೆವಾಸದಲ್ಲಿದ್ದೆ? ಇವೆಲ್ಲವನ್ನು ನಾವು ನೋಡಿಯೂ ನಿನಗೆ ಸಹಾಯ ಮಾಡದೆ ಹೋದದ್ದು ಯಾವಾಗ?’ ಎಂದು ಉತ್ತರಿಸುವರು. PEPS
|
45. “ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗೆ ಏನೇನು ಮಾಡಲಿಲ್ಲವೋ ಅದನ್ನು ನನಗೂ ಮಾಡದಂತಾಯಿತು’ ಎಂದು ಉತ್ತರಕೊಡುವನು. PEPS
|
46. “ಆಗ ಕೆಟ್ಟಜನರು ಅಲ್ಲಿಂದ ಹೊರಟುಹೋಗುವರು. ಅವರಿಗೆ ನಿತ್ಯದಂಡನೆಯಾಗುವುದು. ಒಳ್ಳೆಯ ಜನರಾದರೋ ನಿತ್ಯಜೀವವನ್ನು ಹೊಂದುವರು.” PE
|