1. {ಕೊಡುವುದರ ಕುರಿತು ಯೇಸುವಿನ ಉಪದೇಶ} PS “ಎಚ್ಚರವಾಗಿರಿ! ನೀವು ಒಳ್ಳೆಯ ಕಾರ್ಯಗಳನ್ನು ಜನರ ಮುಂದೆ ಮಾಡಬೇಡಿ. ಜನರು ನೋಡಲೆಂದು ನೀವು ಅವುಗಳನ್ನು ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರೆಯುವುದಿಲ್ಲ. PEPS
|
2. “ನೀವು ಬಡಜನರಿಗೆ ಮಾಡುವ ದಾನವನ್ನು ಪ್ರಕಟಿಸಬೇಡಿ. ನೀವು ಕಪಟಿಗಳಂತೆ ಮಾಡಕೂಡದು. ತಾವು ಮಾಡುವ ದಾನವನ್ನು ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ಕಪಟಿಗಳು ಸಭಾಮಂದಿರಗಳಲ್ಲಿ ಮತ್ತು ಬೀದಿಗಳಲ್ಲಿ ತುತ್ತೂರಿ ಊದಿಸುತ್ತಾರೆ. ಜನರಿಂದ ಗೌರವ ಪಡೆಯಬೇಕೆಂಬುದೇ ಅವರ ಉದ್ದೇಶ.
|
4. ನೀವು ದಾನವನ್ನು ರಹಸ್ಯವಾಗಿ ಕೊಡಬೇಕು. ರಹಸ್ಯದಲ್ಲಿ ನಡೆಯುವ ಕಾರ್ಯಗಳನ್ನು ನೋಡಬಲ್ಲ ನಿಮ್ಮ ತಂದೆ ನಿಮಗೆ ಪ್ರತಿಫಲ ಕೊಡುವನು. PEPS
|
5. {ಪ್ರಾರ್ಥನೆಯ ಕುರಿತು ಯೇಸುವಿನ ಉಪದೇಶ} (ಲೂಕ 11:2-4) PS “ನೀವು ಪ್ರಾರ್ಥಿಸುವಾಗ ಕಪಟಿಗಳ ಹಾಗೆ ಪ್ರಾರ್ಥಿಸಬೇಡಿ. ಕಪಟಿಗಳು ಸಭಾಮಂದಿರಗಳಲ್ಲಿ ಮತ್ತು ಬೀದಿಯ ಮೂಲೆಗಳಲ್ಲಿ ನಿಂತುಕೊಂಡು ಗಟ್ಟಿಯಾಗಿ ಪ್ರಾರ್ಥಿಸಲು ಇಷ್ಟಪಡುತ್ತಾರೆ. ತಾವು ಪ್ರಾರ್ಥಿಸುವುದನ್ನು ಜನರು ನೋಡಬೇಕೆಂಬುದೇ ಅವರ ಬಯಕೆ. ಅವರು ಆಗಲೇ ಅದರ ಪೂರ್ಣ ಪ್ರತಿಫಲವನ್ನು ಹೊಂದಿಕೊಂಡಾಯಿತೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
|
6. ನೀವು ಪ್ರಾರ್ಥನೆ ಮಾಡಬೇಕಾದರೆ, ನಿಮ್ಮ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ನಿಮಗೆ ಕಾಣದಿರುವ ನಿಮ್ಮ ತಂದೆಗೆ ಪ್ರಾರ್ಥಿಸಿ. ರಹಸ್ಯದಲ್ಲಿ ನಡೆಯುವ ಕಾರ್ಯಗಳನ್ನು ನೋಡಬಲ್ಲ ನಿಮ್ಮ ತಂದೆಯು ನಿಮಗೆ ಪ್ರತಿಫಲವನ್ನು ಕೊಡುವನು. PEPS
|
7. “ನೀವು ಪ್ರಾರ್ಥಿಸುವಾಗ ದೇವರನ್ನು ತಿಳಿದಿಲ್ಲದ ಜನರಂತೆ ಪ್ರಾರ್ಥಿಸಬೇಡಿ. ಅವರು ಅರ್ಥವಿಲ್ಲದ ಸಂಗತಿಗಳನ್ನು ಹೇಳುತ್ತಲೇ ಇರುತ್ತಾರೆ. ಆ ರೀತಿ ಪ್ರಾರ್ಥಿಸಬೇಡಿ. ತಾವು ಅನೇಕ ವಿಷಯಗಳನ್ನು ಹೇಳುವುದರಿಂದ ದೇವರು ತಮ್ಮ ಪ್ರಾರ್ಥನೆಯನ್ನು ಕೇಳುತ್ತಾನೆಂಬುದು ಅವರ ಆಲೋಚನೆ.
|
14. ಹೌದು, ಬೇರೆಯವರು ನಿಮಗೆ ಮಾಡಿದ ತಪ್ಪುಗಳನ್ನು ನೀವು ಕ್ಷಮಿಸಿದರೆ, ಪರಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ತಪ್ಪುಗಳನ್ನು ಕ್ಷಮಿಸುತ್ತಾನೆ.
|
15. ಆದರೆ ಜನರು ನಿಮಗೆ ಮಾಡಿದ ತಪ್ಪುಗಳನ್ನು ನೀವು ಕ್ಷಮಿಸದಿದ್ದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ. PS
|
16. {ಉಪವಾಸದ ಕುರಿತು ಯೇಸುವಿನ ಉಪದೇಶ} PS “ನೀವು ಉಪವಾಸ ಮಾಡುವಾಗ ನಿಮ್ಮ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿ. ಕಪಟಿಗಳು ಹಾಗೆ ಮಾಡುತ್ತಾರೆ. ಆದರೆ ನೀವು ಕಪಟಿಗಳಂತಿರಬೇಡಿ. ತಾವು ಉಪವಾಸ ಮಾಡುತ್ತಿರುವುದಾಗಿ ಜನರಿಗೆ ತೋರ್ಪಡಿಸಿಕೊಳ್ಳಲು ಅವರು ತಮ್ಮ ಮುಖಗಳನ್ನು ವಿಕಾರಮಾಡಿಕೊಳ್ಳುತ್ತಾರೆ. ಆ ಕಪಟಿಗಳು ತಮಗೆ ಬರತಕ್ಕ ಪ್ರತಿಫಲವನ್ನು ಸಂಪೂರ್ಣವಾಗಿ ಹೊಂದಾಯಿತೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
|
18. ಆಗ ನೀವು ಉಪವಾಸ ಮಾಡುತ್ತಿದ್ದೀರೆಂದು ಜನರಿಗೆ ಗೊತ್ತಾಗುವುದಿಲ್ಲ. ಆದರೆ ನಿಮಗೆ ಅಗೋಚರವಾಗಿರುವ ನಿಮ್ಮ ತಂದೆಯು ನಿಮ್ಮನ್ನು ನೋಡುತ್ತಾನೆ. ರಹಸ್ಯದಲ್ಲಿ ನಡೆಯುವ ಸಂಗತಿಗಳನ್ನು ನೋಡಬಲ್ಲ ನಿಮ್ಮ ತಂದೆಯು ನಿಮಗೆ ಪ್ರತಿಫಲವನ್ನು ಕೊಡುತ್ತಾನೆ. PEPS
|
19. {ಹಣಕ್ಕಿಂತ ದೇವರೇ ಬಹು ಮುಖ್ಯ} (ಲೂಕ 12:33-34; 11:34-36; 16:13) PS “ನಿಮಗೋಸ್ಕರ ಈ ಭೂಮಿಯ ಮೇಲೆ ಭಂಡಾರಗಳನ್ನು ಮಾಡಿಕೊಳ್ಳಬೇಡಿ. ಅವು ಕಿಲುಬುಹತ್ತಿ ಹಾಳಾಗುತ್ತವೆ. ಕಳ್ಳರು ನಿಮ್ಮ ಮನೆಯೊಳಗೆ ಕನ್ನಕೊರೆದು ನಿಮ್ಮಲ್ಲಿರುವುದನ್ನು ಕದಿಯಬಲ್ಲರು.
|
20. ಆದ್ದರಿಂದ ನಿಮ್ಮ ಭಂಡಾರಗಳನ್ನು ಪರಲೋಕದಲ್ಲಿ ಮಾಡಿಟ್ಟುಕೊಳ್ಳಿ. ಅಲ್ಲಿ ಅವುಗಳಿಗೆ ನುಸಿ ಹಿಡಿಯುವುದಿಲ್ಲ. ಕಿಲುಬುಹತ್ತುವುದಿಲ್ಲ, ಕಳ್ಳರು ಕನ್ನಕೊರೆದು ಕದಿಯುವುದಿಲ್ಲ.
|
23. ಆದರೆ ನಿನ್ನ ಕಣ್ಣು ಕೆಟ್ಟಿದ್ದರೆ, ನಿನ್ನ ಶರೀರವೆಲ್ಲ ಕತ್ತಲೆಯಿಂದ (ಪಾಪದಿಂದ) ತುಂಬಿರುವುದು. ನಿನ್ನಲ್ಲಿರುವ ಒಂದೇ ಬೆಳಕು ನಿಜವಾಗಿಯೂ ಕತ್ತಲಾದರೆ, ಆಗ ನೀನು ಕಗ್ಗತ್ತಲಲ್ಲಿರುವೆ. PEPS
|
24. “ಯಾವನೂ ಇಬ್ಬರು ಯಜಮಾನರಿಗೆ ಒಂದೇ ಸಮಯದಲ್ಲಿ ಸೇವೆ ಮಾಡಲಾರನು. ಅವನು ಒಬ್ಬ ಯಜಮಾನನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುತ್ತಾನೆ ಅಥವಾ ಒಬ್ಬ ಯಜಮಾನನನ್ನು ಹಿಂಬಾಲಿಸಿ ಮತ್ತೊಬ್ಬನನ್ನು ತಾತ್ಸಾರ ಮಾಡುತ್ತಾನೆ. ಆದ್ದರಿಂದ ನೀನು ದೇವರಿಗೆ ಮತ್ತು ಹಣಕ್ಕೆ ಒಂದೇ ಸಮಯದಲ್ಲಿ ಸೇವೆ ಮಾಡಲಾರೆ. PEPS
|
25. {ದೇವರ ರಾಜ್ಯಕ್ಕೆ ಪ್ರಥಮ ಸ್ಥಾನ} (ಲೂಕ 12:22-34) PS “ಆದ್ದರಿಂದ ನಿಮ್ಮ ಪ್ರಾಣಧಾರಣೆಗೆ ಬೇಕಾದ ಆಹಾರಕ್ಕಾಗಲಿ ದೇಹಕ್ಕೆ ಬೇಕಾದ ಬಟ್ಟೆಗಾಗಲಿ ನೀವು ಚಿಂತಿಸಬಾರದು. ಪ್ರಾಣವು ಆಹಾರಕ್ಕಿಂತಲೂ ದೇಹವು ಬಟ್ಟೆಗಿಂತಲೂ ಬಹಳ ಮುಖ್ಯವಾದದ್ದೆಂದು ನಾನು ನಿಮಗೆ ಹೇಳುತ್ತೇನೆ.
|
26. ಪಕ್ಷಿಗಳ ಕಡೆಗೆ ನೋಡಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ ಇಲ್ಲವೇ ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ. ಆದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳಿಗೆ ಆಹಾರವನ್ನು ನೀಡುತ್ತಾನೆ. ನೀವು ಆ ಪಕ್ಷಿಗಳಿಗಿಂತ ಎಷ್ಟೋ ಅಮೂಲ್ಯರೆಂಬುದು ನಿಮಗೆ ಗೊತ್ತಿದೆ.
|
28. “ಬಟ್ಟೆಗಾಗಿ ಚಿಂತಿಸುವುದೇಕೆ? ಹೊಲದಲ್ಲಿರುವ ಹೂವುಗಳನ್ನು ನೋಡಿ. ಅವು ಬೆಳೆಯುವ ಬಗೆಯನ್ನು ಗಮನಿಸಿ. ಅವು ದುಡಿಯುವುದಿಲ್ಲ ಅಥವಾ ತಮಗಾಗಿ ಬಟ್ಟೆಗಳನ್ನು ನೇಯುವುದಿಲ್ಲ.
|
29. ಆದರೆ ನಾನು ನಿಮಗೆ ಹೇಳುವುದೇನೆಂದರೆ, ಸೊಲೊಮೋನನು ತನ್ನ ವೈಭವದಿಂದ ಇದ್ದಾಗಲೂ ಈ ಹೂವುಗಳಲ್ಲಿ ಒಂದಕ್ಕಿರುವಷ್ಟು ಸೌಂದರ್ಯವುಳ್ಳ ಬಟ್ಟೆಗಳನ್ನು ಧರಿಸಲಿಲ್ಲ.
|
30. ಬಯಲಿನಲ್ಲಿರುವ ಹುಲ್ಲಿಗೂ ದೇವರು ಹಾಗೆ ಹೊದಿಸುತ್ತಾನೆ. ಹುಲ್ಲಾದರೋ ಈ ಹೊತ್ತು ಇದ್ದು ನಾಳೆ ಬೆಂಕಿಯ ಪಾಲಾಗುತ್ತದೆ. ಆದ್ದರಿಂದ ದೇವರು ನಿಮಗೆ ಎಷ್ಟೋ ಹೆಚ್ಚಾಗಿ ತೊಡಿಸುತ್ತಾನೆಂದು ನಿಮಗೆ ಗೊತ್ತಿದೆ. ಅಲ್ಪವಿಶ್ವಾಸಿಗಳಾಗಿರಬೇಡಿ! PEPS
|
32. ದೇವರನ್ನು ತಿಳಿಯದ ಜನರೆಲ್ಲರೂ ಇವುಗಳನ್ನು ಪಡೆಯಲು ಪ್ರಯತ್ನಿಸುತ್ತಾರೆ. ಚಿಂತಿಸಬೇಡಿರಿ, ಏಕೆಂದರೆ ಈ ವಸ್ತುಗಳು ನಿಮಗೆ ಅಗತ್ಯವೆಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆ.
|
33. ಆದ್ದರಿಂದ ನೀವು ದೇವರ ರಾಜ್ಯಕ್ಕಾಗಿ ಮತ್ತು ಆತನ ಚಿತ್ತಕ್ಕನುಸಾರವಾಗಿ ಕಾರ್ಯಗಳನ್ನು ಮಾಡಲು ಬಹಳ ತವಕಪಡಬೇಕು. ಆಗ ನಿಮಗೆ ಅಗತ್ಯವಾದ ಉಳಿದವುಗಳನ್ನು ಸಹ ಕೊಡಲಾಗುವುದು.
|
34. ಆದ್ದರಿಂದ ನಾಳೆಗಾಗಿ ಚಿಂತಿಸಬೇಡಿ. ಪ್ರತಿದಿನವು ತನ್ನದೇ ಆದ ಎಷ್ಟೋ ಕಷ್ಟಗಳನ್ನು ಹೊಂದಿರುತ್ತದೆ. ನಾಳೆಯು ಸಹ ತನ್ನದೇ ಆದ ಚಿಂತೆಗಳನ್ನು ಹೊಂದಿದೆ. PE
|