2. ನೀವು ಬೇರೆಯವರಿಗೆ ತೀರ್ಪು ಮಾಡಿದರೆ, ಅದೇ ಪ್ರಕಾರ ನಿಮಗೂ ತೀರ್ಪಾಗುವುದು. ನೀವು ಬೇರೆಯವರನ್ನು ಕ್ಷಮಿಸಿದರೆ ನಿಮಗೂ ಕ್ಷಮೆ ದೊರೆಯುವುದು.
|
3. “ನಿನ್ನ ಸ್ವಂತ ಕಣ್ಣಿನಲ್ಲಿ ಇರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಏಕೆ ನೋಡುವೆ?
|
4. ನಿನ್ನ ಕಣ್ಣಿನಲ್ಲಿರುವ ಅಣುವನ್ನು ನಾನು ಹೊರಗೆ ತೆಗೆಯಲೇ? ಎಂದು ನಿನ್ನ ಸಹೋದರನಿಗೆ ಹೇಳುವುದೇಕೆ? ಮೊದಲು ನಿನ್ನ ಕಣ್ಣನ್ನು ನೋಡಿಕೊ! ನಿನ್ನ ಕಣ್ಣಿನಲ್ಲಿ ತೊಲೆ ಇನ್ನೂ ಇದೆ.
|
5. ನೀನು ಕಪಟಿ! ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಹೊರಗೆ ತೆಗೆದುಬಿಡು. ಆಗ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಹೊರತೆಗೆಯಲು ನಿನಗೆ ಸ್ಪಷ್ಟವಾಗಿ ಕಾಣುವುದು.
|
6. “ಪರಿಶುದ್ಧವಾದ ವಸ್ತುಗಳನ್ನು ನಾಯಿಗಳಿಗೆ ಹಾಕಬೇಡಿ. ಅವು ಹಿಂದಕ್ಕೆ ತಿರುಗಿ ನಿಮ್ಮನ್ನು ಕಚ್ಚುತ್ತವೆ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಎಸೆಯಬೇಡಿ. ಅವು ಮುತ್ತುಗಳನ್ನು ತುಳಿದುಹಾಕುತ್ತವೆ.
|
7. “ಬೇಡಿಕೊಳ್ಳಿರಿ, ಆಗ ದೇವರು ನಿಮಗೆ ಕೊಡುತ್ತಾನೆ. ಹುಡುಕಿರಿ, ಆಗ ನೀವು ಕಂಡುಕೊಳ್ಳುವಿರಿ. ಬಾಗಿಲು ತಟ್ಟಿರಿ, ಆಗ ಅದು ನಿಮಗೆ ತೆರೆಯುವುದು.
|
8. ಹೌದು, ಕೇಳುತ್ತಲೇ ಇರುವವನು ಪಡೆದುಕೊಳ್ಳುತ್ತಾನೆ, ಹುಡುಕುತ್ತಲೇ ಇರುವವನು ಕಂಡುಕೊಳ್ಳುತ್ತಾನೆ, ತಟ್ಟುತ್ತಲೇ ಇರುವವನಿಗೆ ಬಾಗಿಲು ತೆರೆಯುತ್ತದೆ.
|
11. ನೀವು ದೇವರಂತೆ ಒಳ್ಳೆಯವರಲ್ಲ, ಕೆಟ್ಟವರು. ಆದರೂ ನಿಮ್ಮ ಮಕ್ಕಳಿಗೆ ಒಳ್ಳೆಯ ವಸ್ತುಗಳನ್ನು ಕೊಡಬೇಕೆಂಬುದು ನಿಮಗೆ ತಿಳಿದಿದೆ. ಹೀಗಿರಲಾಗಿ ಪರಲೋಕದ ನಿಮ್ಮ ತಂದೆಯು ಸಹ ತನ್ನನ್ನು ಕೇಳುವವರಿಗೆ ಒಳ್ಳೆಯ ವಸ್ತುಗಳನ್ನು ನಿಶ್ಚಯವಾಗಿಯೂ ಕೊಡುತ್ತಾನೆ.
|
12. “ನಿಮಗೆ ಬೇರೆಯವರು ಏನನ್ನು ಮಾಡಬೇಕೆಂದು ನೀವು ಆಶಿಸುತ್ತೀರೋ ಅಂಥವುಗಳನ್ನೇ ನೀವು ಅವರಿಗೆ ಮಾಡಿರಿ. ಇದು ಮೋಶೆಯ ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ಬೋಧನೆಯ ಸಾರಾಂಶ.
|
13. “ಇಕ್ಕಟ್ಟಾದ ಬಾಗಿಲಿನ ಮೂಲಕ ಪರಲೋಕ ರಾಜ್ಯವನ್ನು ಪ್ರವೇಶಿಸಿರಿ. ನರಕಕ್ಕೆ ಹೋಗುವ ದಾರಿ ದೊಡ್ಡದು, ಬಾಗಿಲು ಬಹಳ ವಿಶಾಲ. ಅನೇಕ ಜನರು ಆ ಬಾಗಿಲಲ್ಲಿ ಪ್ರವೇಶಿಸುತ್ತಾರೆ.
|
15. “ಸುಳ್ಳುಪ್ರವಾದಿಗಳ ಬಗ್ಗೆ ಎಚ್ಚರವಾಗಿರಿ. ಅವರು ಕುರಿಗಳ ಹಾಗೆ ಕಾಣಿಸಿಕೊಂಡು ನಿಮ್ಮ ಬಳಿಗೆ ಬರುತ್ತಾರೆ. ಆದರೆ ಅವರು ತೋಳಗಳಂತೆ ನಿಜವಾಗಿಯೂ ಅಪಾಯಕಾರಿಗಳಾಗಿದ್ದಾರೆ.
|
16. ಅವರ ಕ್ರಿಯೆಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳಿನ ಪೊದೆಗಳಲ್ಲಿ ದ್ರಾಕ್ಷಿಯು ಹೇಗೆ ದೊರೆಯುವುದಿಲ್ಲವೋ ಅದೇ ರೀತಿ ಒಳ್ಳೆಯವುಗಳು ಕೆಟ್ಟ ಜನಗಳಿಂದ ಬರುವುದಿಲ್ಲ. ಅಂಜೂರವು ಮುಳ್ಳುಗಿಡಗಳಲ್ಲಿ ದೊರೆಯುವುದಿಲ್ಲ.
|
21. “‘ನಾನು ಪ್ರಭುವಿನವನು’ ಎಂದು ಹೇಳಿದ ಮಾತ್ರಕ್ಕೆ ಮನುಷ್ಯನು ಪರಲೋಕರಾಜ್ಯಕ್ಕೆ ಪ್ರವೇಶಿಸಲು ಸಾಧ್ಯವಿಲ್ಲ. ಪರಲೋಕದಲ್ಲಿರುವ ನನ್ನ ತಂದೆಯ ಇಷ್ಟದಂತೆ ಮಾಡುವವರೇ ಪರಲೋಕರಾಜ್ಯಕ್ಕೆ ಪ್ರವೇಶಿಸುವರು.
|
22. ಕೊನೆಯ ದಿನಗಳಲ್ಲಿ ಅನೇಕರು ನನಗೆ, ‘ನೀನೇ ನಮ್ಮ ಪ್ರಭು! ನಿನ್ನ ವಿಷಯವಾಗಿ ನಾವು ಬೋಧಿಸಿದೆವು. ನಿನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸಿದೆವು ಮತ್ತು ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆವು’ ಎಂದು ಹೇಳುವರು.
|
23. ಆದರೆ ನಾನು ಅವರಿಗೆ, ‘ಅಧರ್ಮಿಗಳೇ, ನನ್ನಿಂದ ತೊಲಗಿರಿ. ನೀವು ಯಾರೋ ನನಗೆ ತಿಳಿಯದು’ ಎಂದು ಸ್ಪಷ್ಟವಾಗಿ ಹೇಳಿಬಿಡುವೆನು.
|
24. “ನನ್ನ ಈ ಮಾತುಗಳನ್ನು ಕೇಳಿ ಅವುಗಳಿಗೆ ವಿಧೇಯನಾಗಿರುವ ಪ್ರತಿಯೊಬ್ಬನೂ ತನ್ನ ಮನೆಯನ್ನು ಬಂಡೆಯ ಮೇಲೆ ಕಟ್ಟಿದ ಬುದ್ಧಿವಂತನಿಗೆ ಹೋಲಿಕೆಯಾಗಿದ್ದಾನೆ.
|
25. ಬಿರುಸಾದ ಮಳೆಯು ಸುರಿದು ನೀರು ಮೇಲಕ್ಕೆ ಏರುತ್ತದೆ. ಗಾಳಿ ಬೀಸಿ ಆ ಮನೆಗೆ ಬಡಿಯುತ್ತದೆ. ಆದರೆ ಆ ಮನೆಯನ್ನು ಬಂಡೆಯ ಮೇಲೆ ಕಟ್ಟಿದ್ದರಿಂದ ಅದು ಬೀಳಲಿಲ್ಲ.
|
26. “ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಿಗೆ ವಿಧೇಯನಾಗದವನು ಬುದ್ಧಿಹೀನನಾಗಿದ್ದಾನೆ. ಆ ಬುದ್ಧಿಹೀನನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದನು.
|