2. ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಯೇಸುವಿನ ಬಳಿಗೆ ತಂದರು. ಅವನು ತನ್ನ ಹಾಸಿಗೆಯ ಮೇಲೆ ಮಲಗಿದ್ದನು. ಯೇಸು ಈ ಜನರಲ್ಲಿದ್ದ ದೊಡ್ಡ ನಂಬಿಕೆಯನ್ನು ಕಂಡು ಪಾರ್ಶ್ವವಾಯು ರೋಗಿಗೆ, “ಯುವಕನೇ, ಸಂತೋಷಪಡು. ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.
|
4. ಅವರು ಹೀಗೆ ಆಲೋಚಿಸುತ್ತಿರುವುದು ಯೇಸುವಿಗೆ ತಿಳಿದಿತ್ತು. ಆತನು ಅವರಿಗೆ, “ನೀವು ಏಕೆ ದುರಾಲೋಚನೆ ಮಾಡುತ್ತಿದ್ದೀರಿ?
|
5. ಯಾವುದು ಸುಲಭ? ಈ ಪಾರ್ಶ್ವವಾಯು ರೋಗಿಗೆ, ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ’ ಎಂದು ಹೇಳುವುದೇ ಅಥವಾ ‘ಮೇಲಕ್ಕೆದ್ದು ನಡೆ’ ಎಂದು ಹೇಳುವುದೇ?
|
6. ಆದರೆ ಮನುಷ್ಯಕುಮಾರನಿಗೆ ಪಾಪಗಳನ್ನು ಕ್ಷಮಿಸಲು ಭೂಲೋಕದಲ್ಲಿ ಅಧಿಕಾರವಿದೆ ಎಂಬುದನ್ನು ನಾನು ನಿಮಗೆ ನಿರೂಪಿಸುತ್ತೇನೆ” ಎಂದನು. ನಂತರ ಯೇಸು ಪಾರ್ಶ್ವವಾಯು ರೋಗಿಗೆ, “ಎದ್ದುನಿಲ್ಲು, ನಿನ್ನ ಹಾಸಿಗೆಯನ್ನು ತೆಗೆದುಕೊಂಡು ಮನೆಗೆ ಹೋಗು” ಎಂದನು.
|
8. ಜನರು ಇದನ್ನು ನೋಡಿ ಆಶ್ಚರ್ಯಚಕಿತರಾದರು. ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟಿದ್ದಕ್ಕಾಗಿ ಜನರು ದೇವರನ್ನು ಕೊಂಡಾಡಿದರು.
|
10. ಯೇಸು ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತುಕೊಂಡನು. ಅನೇಕ ಮಂದಿ ಸುಂಕವಸೂಲಿಗಾರರು ಮತ್ತು ಕೆಟ್ಟ ಜನರು ಸಹ ಯೇಸುವಿನ ಸಂಗಡ ಮತ್ತು ಆತನ ಹಿಂಬಾಲಕರ ಸಂಗಡ ಊಟಕ್ಕೆ ಕುಳಿತುಕೊಂಡರು.
|
11. ಇದನ್ನು ಕಂಡ ಫರಿಸಾಯರು ಯೇಸುವಿನ ಶಿಷ್ಯರಿಗೆ, “ನಿಮ್ಮ ಬೋಧಕನು ಸುಂಕವಸೂಲಿಗಾರರೊಂದಿಗೆ ಮತ್ತು ಕೆಟ್ಟ ಜನರೊಂದಿಗೆ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.
|
12. ಫರಿಸಾಯರು ಹೇಳಿದ್ದನ್ನು ಕೇಳಿಸಿಕೊಂಡ ಯೇಸು ಅವರಿಗೆ, “ಆರೋಗ್ಯವುಳ್ಳ ಜನರಿಗೆ ವೈದ್ಯನ ಅವಶ್ಯಕತೆಯಿಲ್ಲ. ಕಾಯಿಲೆಯ ಜನರಿಗೆ ವೈದ್ಯನು ಅವಶ್ಯ.
|
13. ನೀವು ಹೋಗಿ, ‘ನನಗೆ ಯಜ್ಞಬೇಡ, ದಯೆಬೇಕು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು.
|
14. ನಂತರ ಯೋಹಾನನ ಶಿಷ್ಯರು ಯೇಸುವಿನ ಬಳಿಗೆ ಬಂದರು. ಅವರು ಯೇಸುವಿಗೆ, “ನಾವು ಮತ್ತು ಫರಿಸಾಯರು ಆಗಾಗ್ಗೆ ಉಪವಾಸ ಮಾಡುತ್ತೇವೆ. ಆದರೆ ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ?” ಎಂದು ಕೇಳಿದರು.
|
15. ಯೇಸು, “ಮದುವೆ ಸಮಯದಲ್ಲಿ ಮದುಮಗನ ಸಂಗಡವಿರುವ ಅವನ ಸ್ನೇಹಿತರು ದುಃಖಪಡುವುದಿಲ್ಲ. ಆದರೆ ಮದುಮಗನು ಅವರನ್ನು ಬಿಟ್ಟುಹೋಗುವ ಸಮಯ ಬರುತ್ತದೆ. ಆಗ ಅವರು ದುಃಖಪಡುತ್ತಾರೆ ಮತ್ತು ಉಪವಾಸ ಮಾಡುತ್ತಾರೆ.
|
16. “ಒಬ್ಬನು ಹರಿದುಹೋದ ಹಳೆ ಮೇಲಂಗಿಗೆ ಹೊಸ ಬಟ್ಟೆಯ ತುಂಡನ್ನು ತೇಪೆಹಾಕಿ ಹೊಲಿಯುವುದಿಲ್ಲ. ಒಂದು ವೇಳೆ ಹೊಲಿದರೆ, ಆ ತೇಪೆಯು ಹಿಂಜಿಕೊಂಡು ಮೇಲಂಗಿಯಿಂದ ಕಿತ್ತುಬರುವುದು. ಆಗ ಆ ಮೇಲಂಗಿಯು ಮತ್ತಷ್ಟು ಹರಿದು ಹೋಗುವುದು.
|
17. ಇದಲ್ಲದೆ ಜನರು ಹೊಸ ದ್ರಾಕ್ಷಾರಸವನ್ನು ಹಳೆ ದ್ರಾಕ್ಷಾರಸದ ಬುದ್ದಲಿಗಳಲ್ಲಿ ಹಾಕುವುದಿಲ್ಲ; ಏಕೆಂದರೆ ಹಳೆ ಬುದ್ದಲಿಗಳು ಒಡೆದು ಹೋಗುತ್ತವೆ; ಮತ್ತು ದ್ರಾಕ್ಷಾರಸವು ಚೆಲ್ಲಿ ಹೋಗುತ್ತದೆ. ಆದ್ದರಿಂದ ಜನರು ಯಾವಾಗಲೂ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುವರು. ಆಗ ಎರಡೂ ಉಳಿಯುತ್ತವೆ” ಅಂದನು.
|
18. ಯೇಸು ಈ ಸಂಗತಿಗಳನ್ನು ಹೇಳುತ್ತಿರುವಾಗ ಸಭಾಮಂದಿರದ ಅಧಿಕಾರಿಯೊಬ್ಬನು ಆತನ ಬಳಿಗೆ ಬಂದು ಆತನಿಗೆ ಬಾಗಿ ನಮಸ್ಕರಿಸಿ, “ನನ್ನ ಮಗಳು ಈಗ ತಾನೇ ಸತ್ತುಹೋದಳು. ನೀನು ಬಂದು ಅವಳನ್ನು ಮುಟ್ಟಿದರೆ ಅವಳು ಮತ್ತೆ ಜೀವಂತಳಾಗುವಳು” ಎಂದು ಹೇಳಿದನು.
|
20. ಹನ್ನೆರಡು ವರ್ಷಗಳಿಂದ ರಕ್ತಸ್ರಾವ ಕಾಯಿಲೆ ಹೊಂದಿದ್ದ ಒಬ್ಬ ಹೆಂಗಸು ಅಲ್ಲಿದ್ದಳು. ಆ ಹೆಂಗಸು ಯೇಸುವಿನ ಹಿಂದೆಯೇ ಬಂದು ಆತನ ಮೇಲಂಗಿಯ ತುದಿಯನ್ನು ಮುಟ್ಟಿದಳು.
|
22. ಯೇಸು ಹಿಂತಿರುಗಿ ಆ ಹೆಂಗಸನ್ನು ನೋಡಿ, “ಮಗಳೇ, ಸಂತೋಷಪಡು! ನಿನ್ನ ನಂಬಿಕೆಯಿಂದಲೇ ಗುಣವಾಯಿತು” ಎಂದು ಹೇಳಿದನು. ಆಗ ಅವಳು ಗುಣಮುಖಳಾದಳು.
|
23. ಬಳಿಕ ಯೇಸು ಅಧಿಕಾರಿಯೊಡನೆ ಮುಂದೆ ಸಾಗಿ ಅವನ ಮನೆಯೊಳಕ್ಕೆ ಹೋದನು. ಶವಸಂಸ್ಕಾರಕ್ಕಾಗಿ ಬಂದಿದ್ದ ವಾದ್ಯವೃಂದದವರಿಗೂ ಗೋಳಾಡುತ್ತಿದ್ದವರಿಗೂ ಯೇಸು,
|
24. “ದೂರ ಹೋಗಿರಿ, ಹುಡುಗಿ ಸತ್ತಿಲ್ಲ. ಅವಳು ನಿದ್ದೆ ಮಾಡುತ್ತಿದ್ದಾಳೆ” ಅಂದನು. ಆದರೆ ಅವರು ಯೇಸುವನ್ನು ಅಪಹಾಸ್ಯ ಮಾಡಿದರು.
|
25. ಜನರನ್ನು ಮನೆಯ ಹೊರಗೆ ಕಳುಹಿಸಿದ ಮೇಲೆ ಯೇಸು ಹುಡುಗಿಯ ಕೋಣೆಯ ಒಳಗೆ ಹೋದನು. ಯೇಸು ಹುಡುಗಿಯ ಕೈಯನ್ನು ಹಿಡಿದಾಗ ಆ ಹುಡುಗಿಯು ಎದ್ದುನಿಂತಳು.
|
27. ಯೇಸು ಅಲ್ಲಿಂದ ಹೊರಡುತ್ತಿರುವಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸಿದರು. ಅವರು “ದಾವೀದನ ಕುಮಾರನೇ, ನಮಗೆ ದಯೆ ತೋರು” ಎಂದು ಗಟ್ಟಿಯಾಗಿ ಕೂಗಿದರು.
|
28. ಯೇಸು ಮನೆಯೊಳಗೆ ಹೋದನು. ಕುರುಡರೂ ಆತನ ಸಂಗಡ ಹೋದರು. ಯೇಸು ಅವರಿಗೆ, “ನಾನು ನಿಮ್ಮನ್ನು ಗುಣಪಡಿಸಬಲ್ಲೆನೆಂದು ನೀವು ನಂಬುತ್ತೀರೋ?” ಎಂದು ಕೇಳಿದನು. ಕುರುಡರು, “ಹೌದು ಪ್ರಭುವೇ, ನಾವು ನಂಬುತ್ತೇವೆ” ಎಂದು ಉತ್ತರಕೊಟ್ಟರು.
|
32. ಅವರಿಬ್ಬರು ಹೋಗುತ್ತಿರುವಾಗ ಕೆಲವರು ಬೇರೊಬ್ಬನನ್ನು ಯೇಸುವಿನ ಬಳಿಗೆ ತಂದರು. ಅವನಲ್ಲಿ ದೆವ್ವವಿದ್ದುದರಿಂದ ಅವನು ಮೂಕನಾಗಿದ್ದನು.
|
33. ಯೇಸು ಆ ದೆವ್ವಕ್ಕೆ ಅವನನ್ನು ಬಿಟ್ಟು ಹೋಗುವಂತೆ ಆಜ್ಞಾಪಿಸಿದನು. ಅವನು ಮಾತನಾಡತೊಡಗಿದನು. ಇದನ್ನು ಕಂಡ ಜನರು ಆಶ್ಚರ್ಯಚಕಿತರಾಗಿ, “ಇಸ್ರೇಲಿನಲ್ಲಿ ಇಂಥ ಕಾರ್ಯವನ್ನು ನೋಡಿಯೇ ಇಲ್ಲ” ಅಂದರು.
|
35. ಯೇಸು ಊರುಗಳಲ್ಲೆಲ್ಲಾ ಮತ್ತು ಹಳ್ಳಿಗಳಲ್ಲೆಲ್ಲಾ ಸಂಚಾರ ಮಾಡಿದನು. ಯೇಸು ಅವರ ಸಭಾಮಂದಿರಗಳಲ್ಲಿ ಉಪದೇಶಿಸಿ ಪರಲೋಕರಾಜ್ಯದ ವಿಷಯವಾಗಿ ಶುಭವಾರ್ತೆಯನ್ನು ಹೇಳಿದನು. ಎಲ್ಲಾ ತರದ ರೋಗಗಳನ್ನು ಬೇನೆಗಳನ್ನು ವಾಸಿಮಾಡಿದನು.
|
36. ನೋವಿನಿಂದ ನರಳುತ್ತಿದ್ದ ಮತ್ತು ಅಸಹಾಯಕರಾಗಿದ್ದ ಅನೇಕ ಜನರನ್ನು ಯೇಸು ನೋಡಿ ದುಃಖಪಟ್ಟನು. ಕುರುಬನಿಲ್ಲದ ಕುರಿಗಳಂತೆ ಅವರಿದ್ದರು.
|
38. ಬೆಳೆಯ ಯಜಮಾನ ದೇವರೇ. ಆದ್ದರಿಂದ ಹೆಚ್ಚು ಕೆಲಸಗಾರರನ್ನು ಸುಗ್ಗಿಗಾಗಿ ಕಳುಹಿಸಿ ಕೊಡುವಂತೆ ಆತನಿಗೆ ಪ್ರಾರ್ಥನೆ ಮಾಡಿರಿ” ಎಂದು ಹೇಳಿದನು.
|