1. {ಜೆರುಸಲೇಮಿನಿಂದ ಧರ್ಮಶಾಸ್ತ್ರ ಬರುವದು} [PS] ಅಂತ್ಯದ ದಿವಸಗಳಲ್ಲಿ ಯೆಹೋವನ ಆಲಯದ ಪರ್ವತವು [QBR2] ಎಲ್ಲಾ ಪರ್ವತಗಳಿಗಿಂತಲೂ ಅತ್ಯುನ್ನತವಾಗಿರುವುದು. [QBR] ಅದು ಬೆಟ್ಟಗಳಿಗಿಂತಲೂ ಉನ್ನತವಾಗಿರುವದು. [QBR2] ಅಲ್ಲಿಗೆ ಜನರು ಗುಂಪುಗುಂಪಾಗಿ ಹೋಗುವರು. [QBR]
2. ಅನೇಕ ದೇಶಗಳಿಂದ ಜನರು ಅಲ್ಲಿಗೆ ಹೋಗುವರು. [QBR2] “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ, [QBR2] ಯಾಕೋಬನ ದೇವರ ಆಲಯಕ್ಕೆ ನಾವು ಹೋಗೋಣ. [QBR] ಆಗ ದೇವರು ನಮಗೆ ಜೀವಿತದ ಮಾರ್ಗವನ್ನು ಕಲಿಸುವನು. [QBR2] ಮತ್ತು ನಾವು ಆತನನ್ನು ಅನುಸರಿಸುವೆವು” ಎಂದು ಹೇಳುವರು. ದೇವರ ಉಪದೇಶವು, ಆತನ ಸಂದೇಶವು ಚೀಯೋನ್ ಬೆಟ್ಟದಲ್ಲಿರುವ [QBR2] ಜೆರುಸಲೇಮಿನಲ್ಲಿ ಪ್ರಾರಂಭವಾಗಿ ಪ್ರಪಂಚದಲ್ಲೆಲ್ಲಾ ಹಬ್ಬುತ್ತದೆ. [QBR]
3. ಆಗ ಪ್ರಪಂಚದ ಎಲ್ಲಾ ಜನಾಂಗಗಳಿಗೆ ಯೆಹೋವನೇ ನ್ಯಾಯಾಧೀಶನು. [QBR2] ದೂರದೇಶದಲ್ಲಿರುವ ಅನೇಕ ಜನರ ಜಗಳಗಳನ್ನು ಆತನು ನಿಲ್ಲಿಸುವನು. [QBR] ಆ ಜನರು ಯುದ್ಧದ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು. [QBR2] ತಮ್ಮ ಖಡ್ಗಗಳಿಂದ ನೇಗಿಲ ಗುಳಗಳನ್ನು ತಯಾರಿಸುವರು. [QBR2] ಭರ್ಜಿಗಳಿಂದ ಕುಡುಗೋಲುಗಳನ್ನು ತಯಾರಿಸುವರು. [QBR] ಜನರೊಳಗೆ ಪರಸ್ಪರ ಯುದ್ಧ ಮಾಡುವದನ್ನು ನಿಲ್ಲಿಸುವರು. [QBR2] ಯುದ್ಧಕ್ಕೆ ತರಬೇತಿ ಎಂದಿಗೂ ಮಾಡರು. [QBR]
4. ಪ್ರತಿಯೊಬ್ಬನೂ ತನ್ನ ದ್ರಾಕ್ಷಾಲತೆಯ ನೆರಳಿನಲ್ಲಿ ಕುಳಿತುಕೊಳ್ಳುವನು. [QBR2] ಅವರು ಅಂಜೂರದ ಮರದಡಿಯಲ್ಲಿ ವಿಶ್ರಾಂತಿಯಲ್ಲಿರುವರು. [QBR] ಯಾರೂ ಅವರನ್ನು ಭಯಗೊಳಿಸುವದಿಲ್ಲ. [QBR2] ಯಾಕೆಂದರೆ ಸರ್ವಶಕ್ತನಾದ ಯೆಹೋವನು ಹೀಗೆ ಆಗುವದೆಂದು ಹೇಳಿದ್ದಾನೆ.
5. ಬೇರೆ ದೇಶಗಳವರು ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತಾರೆ. [QBR2] ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರನ್ನು ನಿತ್ಯಕಾಲಕ್ಕೂ ಸ್ಮರಿಸುವೆವು.
6. {ರಾಜ್ಯವು ತಿರುಗಿ ತರಲ್ಪಡುವದು} [PS] ಯೆಹೋವನು ಹೇಳುವುದೇನೆಂದರೆ, [QBR2] “ಜೆರುಸಲೇಮು ಗಾಯಗೊಂಡು ಕುಂಟಾಗಿದೆ; [QBR] ತಳ್ಳಲ್ಪಟ್ಟಿದೆ; ಗಾಯಗೊಂಡು ಶಿಕ್ಷಿಸಲ್ಪಟ್ಟಿದೆ. [QBR2] ಆದರೆ ನಾನು ಆಕೆಯನ್ನು ನನ್ನ ಬಳಿಗೆ ಬರಮಾಡುವೆನು.
7. “ಆ ‘ಕುಂಟು’ ನಗರದ ಜನರೇ ಅಳಿದುಳಿದ ಜನರಾಗುವರು. [QBR2] ಆ ಪಟ್ಟಣದ ಜನರನ್ನು ಬಲವಂತದಿಂದ ಓಡಿಸಲಾಯಿತು. [QBR2] ಆದರೆ ನಾನು ಅವರನ್ನು ಬಲಶಾಲಿಯಾದ ಜನಾಂಗವನ್ನಾಗಿ ಮಾಡುವೆನು.” [QBR] ಯೆಹೋವನು ಅವರ ಅರಸನಾಗುವನು. [QBR2] ಆತನು ಚೀಯೋನ್ ಪರ್ವತದಿಂದ ನಿತ್ಯಕಾಲಕ್ಕೂ ಆಳುವನು. [QBR]
8. ಹಿಂಡುಗಳ ಗೋಪುರವೇ, [QBR2] ನಿನ್ನ ಸಮಯವು ಬರುವದು. [QBR] ಚೀಯೋನಿನ ಒಫೆಲ್ ಗುಡ್ಡವೇ, [QBR2] ನಿನಗೆ ತಿರುಗಿ ಅಧಿಕಾರ ದೊರಕುವುದು. [QBR] ಹೌದು, ಮೊದಲಿನಂತೆಯೇ [QBR2] ಜೆರುಸಲೇಮಿನಲ್ಲೇ ರಾಜ್ಯವಿರುವುದು. ಬಾಬಿಲೋನಿಗೆ ಇಸ್ರೇಲರು ಯಾಕೆ ಹೋಗಬೇಕು?
9. ಯಾಕೆ ನೀನು ಗಟ್ಟಿಯಾಗಿ ಅರಚಿಕೊಳ್ಳುವೆ? [QBR2] ನೀನು ನಿನ್ನ ನಾಯಕನನ್ನು ಕಳೆದುಕೊಂಡೆಯಾ? [QBR] ನಿನ್ನ ರಾಜನು ನಿನ್ನನ್ನು ಬಿಟ್ಟುಹೋದನೋ? [QBR2] ಈ ಕಾರಣದಿಂದ ನೀನು ಪ್ರಸವವೇದನೆಯನ್ನು ಅನುಭವಿಸುವ ಸ್ತ್ರೀಯಂತೆ ಶ್ರಮೆಯನ್ನು ಅನುಭವಿಸುತ್ತಿರುವೆಯೋ? [QBR]
10. ಚೀಯೋನ್ ಕುಮಾರಿಯೇ, ಪ್ರಸವವೇದನೆಯಲ್ಲಿರುವ ಸ್ತ್ರೀಯಂತೆ [QBR2] ನೀನು ನೋವನ್ನು ಅನುಭವಿಸು. [QBR] ನೀನು ಜೆರುಸಲೇಮ್ ಪಟ್ಟಣದಿಂದ [QBR2] ಹೊರಗೆ ಹೋಗಿ ಹೊಲದಲ್ಲಿ ವಾಸಿಸುವೆ. [QBR] ನಾನು ಹೇಳುವುದೇನೆಂದರೆ, ನೀನು ಬಾಬಿಲೋನಿಗೆ ಹೋಗುವೆ, [QBR2] ಆದರೆ ಅಲ್ಲಿ ನೀನು ರಕ್ಷಿಸಲ್ಪಡುವೆ. [QBR] ಯೆಹೋವನು ಅಲ್ಲಿಗೆ ಬಂದು ನಿನ್ನನ್ನು ರಕ್ಷಿಸುವನು. [QBR2] ನಿನ್ನ ವೈರಿಗಳಿಂದ ನಿನ್ನನ್ನು ಬಿಡುಗಡೆ ಮಾಡುವನು.
11. {ಯೆಹೋವನು ಜನಾಂಗಗಳನ್ನು ನಾಶಮಾಡುವನು} [PS] ಎಷ್ಟೋ ಜನಾಂಗಗಳು ನಿನ್ನ ವಿರುದ್ಧ ಯುದ್ಧಕ್ಕೆ ಬಂದಿವೆ. [QBR2] “ಅಲ್ಲಿ ನೋಡಿ, ಚೀಯೋನ್, ಬನ್ನಿ ಆಕ್ರಮಣ ಮಾಡೋಣ” ಎಂದು ಹೇಳುವರು.
12. ಅವರು ತಮ್ಮ ಯೋಜನೆಯನ್ನು ಹಾಕುತ್ತಾರೆ. [QBR2] ಆದರೆ ಯೆಹೋವನ ಯೋಜನೆಯೇನೆಂದು ಅವರು ಅರಿಯರು. [QBR] ಯೆಹೋವನು ತನ್ನ ಜನರನ್ನು ಒಂದು ವಿಶೇಷ ಉದ್ದೇಶಕ್ಕಾಗಿ ಇಲ್ಲಿಗೆ ತಂದಿದ್ದಾನೆ. [QBR2] ಆ ಜನರು ಕಣಕ್ಕೆ ಹಾಕಿದ ಸಿವುಡುಗಳಂತೆ ನಜ್ಜುಗುಜ್ಜಾಗುವರು.
13. {ಇಸ್ರೇಲ್ ಜಯಗೊಂಡು ಇತರ ಜನಾಂಗಗಳನ್ನು ನಾಶಮಾಡುವದು} [PS] “ಚೀಯೋನ್ ಕುಮಾರಿಯೇ ಎದ್ದೇಳು, ಆ ಜನರನ್ನು ಪುಡಿಮಾಡು! [QBR2] ನಾನು ನಿನ್ನನ್ನು ಬಲಶಾಲಿಯನ್ನಾಗಿ ಮಾಡುವೆನು. [QBR] ಕಬ್ಬಿಣದ ಕೊಂಬುಗಳಿರುವಂತೆ, ತಾಮ್ರದ ಗೊರಸುಗಳಿರುವಂತೆ ನಿನ್ನನ್ನು ಮಾಡುವೆನು. [QBR2] ಎಷ್ಟೋ ಜನರನ್ನು ನೀನು ತುಂಡುತುಂಡು ಮಾಡುವೆ. [QBR] ಅವರ ಐಶ್ವರ್ಯವನ್ನು ನೀನು ಯೆಹೋವನಿಗೆ ಕೊಡುವೆ. [QBR2] ಅವರ ನಿಕ್ಷೇಪಗಳನ್ನು ಇಡೀ ಭೂಮಿಗೆ ಒಡೆಯನಾಗಿರುವ ಯೆಹೋವನಿಗೆ ಅರ್ಪಿಸುವಿ.” [PE]