1. {ಯೆಹೋವನ ದೂರು} [PS] ಯೆಹೋವನು ಹೇಳುವುದನ್ನು ಕೇಳಿರಿ: [QBR] “ನಿನ್ನ ವ್ಯಾಜ್ಯವನ್ನು ಬೆಟ್ಟಗಳಿಗೆ ತಿಳಿಸು. [QBR2] ಗುಡ್ಡಗಳು ನಿನ್ನ ಕಥೆಯನ್ನು ಕೇಳಲಿ. [QBR]
2. ಯೆಹೋವನಿಗೆ ತನ್ನ ಜನರ ವಿರುದ್ಧವಾಗಿ ವ್ಯಾಜ್ಯವಿದೆ. [QBR2] ಪರ್ವತಗಳೇ, ಭೂಮಿಯ ಅಸ್ತಿವಾರಗಳೇ [QBR] ಯೆಹೋವನ ದೂರುಗಳನ್ನು ಕೇಳಿರಿ. [QBR2] ಇಸ್ರೇಲ್ ತಪ್ಪಿತಸ್ಥನೆಂದು ಆತನು ಧೃಡಪಡಿಸುವನು.”
3. ಯೆಹೋವನು ಹೇಳುವುದೇನೆಂದರೆ, “ನನ್ನ ಜನರೇ, ನಾನು ಮಾಡಿದ್ದೇನು ತಿಳಿಸಿರಿ. [QBR2] ನಿಮಗೆ ವಿರೋಧವಾಗಿ ನಾನು ಏನಾದರೂ ಮಾಡಿದ್ದೇನೋ? [QBR2] ನಿಮಗೆ ಜೀವಿಸಲು ಕಷ್ಟವಾಗುವಂತೆ ಮಾಡಿದ್ದೇನೋ? [QBR]
4. ನಾನು ಮಾಡಿದ್ದನ್ನು ನಿಮಗೆ ಹೇಳುತ್ತೇನೆ, [QBR2] ನಾನು ನಿಮ್ಮ ಬಳಿಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ಕಳುಹಿಸಿದೆನು. [QBR] ನಾನು ಈಜಿಪ್ಟ್ ದೇಶದಿಂದ ನಿಮ್ಮನ್ನು ಕರೆತಂದೆನು. [QBR2] ಗುಲಾಮತನದಿಂದ ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದೆನು. [QBR]
5. ನನ್ನ ಜನರೇ, ಮೋವಾಬ್ಯರ ಅರಸನಾದ ಬಾಲಾಕನ ದುಷ್ಟ ಯೋಜನೆಯನ್ನು ನೆನಪುಮಾಡಿರಿ. [QBR2] ಬೆಯೋರನ ಮಗನಾದ ಬಿಳಾಮನು ಬಾಲಾಕನಿಗೆ ಏನು ಹೇಳಿದನೆಂದು ಜ್ಞಾಪಕಮಾಡಿರಿ. [QBR] ಶಿಟ್ಟೀಮಿನಿಂದ ಗಿಲ್ಗಾಲಿನ ತನಕ ನಡೆದ ಘಟನೆಗಳನ್ನು ನಿಮ್ಮ ನೆನಪಿಗೆ ತಂದುಕೊಳ್ಳಿರಿ. [QBR2] ಅವೆಲ್ಲವನ್ನು ನೀವು ನೆನಪುಮಾಡಿದರೆ ಯೆಹೋವನು ನೀತಿವಂತನು ಎಂದು ನಿಮಗೆ ಗೊತ್ತಾಗುವದು.” ನಮ್ಮಿಂದ ದೇವರು ಏನನ್ನು ಅಪೇಕ್ಷಿಸುತ್ತಾನೆ?
6. ನಾನು ದೇವರಾದ ಯೆಹೋವನನ್ನು ಸಂಧಿಸಲು ಬರುವಾಗ ಏನನ್ನು ತೆಗೆದುಕೊಂಡು ಬರಲಿ? [QBR2] ಪರಲೋಕದ ದೇವರಿಗೆ ನಾನು ಅಡ್ಡಬಿದ್ದು ಆರಾಧಿಸುವಾಗ ಏನು ಮಾಡಲಿ? [QBR] ನಾನು ಕರ್ತನ ಬಳಿಗೆ ಬರುವಾಗ ಸರ್ವಾಂಗಹೋಮದೊಡನೆ [QBR2] ಒಂದು ವರ್ಷದ ಕರುವನ್ನು ತೆಗೆದುಕೊಂಡು ಬರಲೋ? [QBR]
7. ದೇವರಾದ ಯೆಹೋವನು ಒಂದು ಸಾವಿರ ಟಗರು, [QBR2] ಹತ್ತುಸಾವಿರ ಎಣ್ಣೆಯ ಹೊಳೆಗಳಲ್ಲಿ ಸಂತೋಷಿಸುವನೋ? [QBR] ನಾನು ಮಾಡಿದ ತಪ್ಪಿನ ಪರಿಹಾರಕ್ಕಾಗಿ ನನ್ನ ಚೊಚ್ಚಲ ಮಗನನ್ನು ಸಮರ್ಪಿಸಲೋ? [QBR2] ನನ್ನ ಶರೀರದಿಂದ ಬಂದ ಮಗನನ್ನು ನನ್ನ ಪಾಪಗಳಿಗಾಗಿ ಸಮರ್ಪಿಸಲೋ?
8. ಮನುಷ್ಯನೇ, ಒಳ್ಳೆಯದು ಏನೆಂದು ಯೆಹೋವನು ನಿನಗೆ ತಿಳಿಸಿದ್ದಾನೆ. [QBR2] ಯೆಹೋವನು ನಿನ್ನಿಂದ ಅಪೇಕ್ಷಿಸುವದೇನೆಂದರೆ, [QBR] ಇತರರಿಗೆ ನೀನು ಅನ್ಯಾಯ ಮಾಡದಿರು. [QBR2] ದಯೆ ಮತ್ತು ನಂಬಿಗಸ್ತಿಕೆಗಳನ್ನು ಪ್ರೀತಿಸು. [QBR2] ದೀನತೆಯಿಂದ ನಿನ್ನ ದೇವರಿಗೆ ವಿಧೇಯನಾಗಿರು. ಇಸ್ರೇಲರು ಏನನ್ನು ಮಾಡುತ್ತಿದ್ದರು?
9. ಯೆಹೋವನ ಸ್ವರವು ಪಟ್ಟಣದಲ್ಲಿ ಗಟ್ಟಿಯಾಗಿ ಕೇಳಿಸುತ್ತದೆ. [QBR] “ಬುದ್ಧಿವಂತನು ಯೆಹೋವನ ನಾಮವನ್ನು ಗೌರವಿಸುವನು. [QBR2] ಆದ್ದರಿಂದ ಶಿಕ್ಷೆಯ ಬೆತ್ತದ ಕಡೆಗೆ ಲಕ್ಷ್ಯವಿಡು. ಆ ಬೆತ್ತವನ್ನು ಹಿಡುಕೊಂಡವನನ್ನೂ ಗೌರವಿಸು. [QBR]
10. ಕದ್ದುಕೊಂಡ ಭಂಡಾರಗಳನ್ನು ದುಷ್ಟರು [QBR2] ಇನ್ನೂ ಗುಪ್ತವಾಗಿಡುವರೋ? [QBR] ಕೆಟ್ಟ ಜನರು ತಮ್ಮ ಚಿಕ್ಕ ಅಳತೆಯಿಂದ [QBR2] ಜನರನ್ನು ಇನ್ನೂ ಮೋಸಪಡಿಸುವರೋ? [QBR2] ಹೌದು, ಅವೆಲ್ಲವೂ ನಡಿಯುತ್ತಲಿದೆ. [QBR]
11. ಕೆಲವರು ಮೋಸದ ಅಳತೆ ಪ್ರಮಾಣಗಳಿಂದ ಜನರನ್ನು ಮೋಸಗೊಳಿಸುತ್ತಾರೆ. [QBR2] ನಾನು ಅವರನ್ನು ಕ್ಷಮಿಸಬೇಕೋ? [QBR]
12. ಪಟ್ಟಣದ ಧನಿಕರು ಕ್ರೂರವಾದ ಮತ್ತು ದುಷ್ಟತ್ವದ ಕೃತ್ಯಗಳನ್ನು ಇನ್ನೂ ಮಾಡುತ್ತಿದ್ದಾರೆ. [QBR2] ಆ ಪಟ್ಟಣದಲ್ಲಿರುವ ಜನರು ಇನ್ನೂ ಸುಳ್ಳು ಹೇಳುತ್ತಾರೆ. [QBR2] ಹೌದು, ಆ ಜನರು ತಮ್ಮ ಸುಳ್ಳನ್ನು ಪ್ರದರ್ಶಿಸುತ್ತಾರೆ. [QBR]
13. ಆದ್ದರಿಂದ ನಾನು ನಿಮ್ಮನ್ನು ಶಿಕ್ಷಿಸಲು ಪ್ರಾರಂಭಿಸಿದೆನು. [QBR2] ನಿಮ್ಮ ಪಾಪಗಳ ದೆಸೆಯಿಂದ ನಿಮ್ಮನ್ನು ನಾಶಮಾಡುವೆನು. [QBR]
14. ನೀವು ತಿನ್ನುವಿರಿ ಆದರೆ ನಿಮ್ಮ ಹೊಟ್ಟೆ ತುಂಬದು. [QBR2] ನೀವು ಹೊಟ್ಟೆಗಿಲ್ಲದವರಂತೆ ಹಸಿವಿನಿಂದಲೇ ಇರುವಿರಿ. [QBR] ನೀವು ಜನರನ್ನು ಸುರಕ್ಷಿತ ಸ್ಥಳಕ್ಕೆ ತರಲು ಪ್ರಯತ್ನಿಸುವಿರಿ. [QBR2] ಆದರೆ ನೀವು ರಕ್ಷಿಸಿದ ಜನರನ್ನು ಖಡ್ಗಧಾರಿಗಳು ಕೊಂದುಬಿಡುವರು. ಜನರು ನಿಮ್ಮನ್ನು ಹಿಡಿಯುವರು. [QBR]
15. ನೀವು ಬೀಜ ಬಿತ್ತುವಿರಿ, [QBR2] ಆದರೆ ಪೈರು ಕೊಯ್ಯುವುದಿಲ್ಲ. [QBR] ಆಲೀವ್ ಕಾಯಿಗಳನ್ನು ಗಾಣದಲ್ಲಿ ಹಾಕಿ ಎಣ್ಣೆ ತೆಗೆಯುವಿರಿ. [QBR2] ಆದರೆ ನಿಮಗೆ ಎಣ್ಣೆಯೇ ಸಿಗುವದಿಲ್ಲ. [QBR] ನೀವು ದ್ರಾಕ್ಷಿಹಣ್ಣುಗಳನ್ನು ತೊಟ್ಟಿಯಲ್ಲಿ ಹಾಕಿ ತುಳಿಯುವಿರಿ, [QBR2] ಆದರೆ ಕುಡಿಯಲು ದ್ರಾಕ್ಷಾರಸವೇ ಸಿಗುವದಿಲ್ಲ. [QBR]
16. ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. [QBR2] ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. [QBR] ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. [QBR2] ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. [QBR] ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. [QBR2] ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.” [PE]